Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ಕೃಷ್ಣೆ ಮುನಿಸಿಕೊಂಡಿದ್ದು, ತನ್ನೊಡಲನ್ನು ತುಂಬಿಕೊಂಡು ಉಕ್ಕಿ ಹರಿಯುತ್ತಿದ್ದಾಳೆ. ಮಹಾರಾಷ್ಟ್ರದ ಮಹಾಬಳೇಶ್ವರ, ಕೊಂಕಣ ಹಾಗೂ ಸಹ್ಯಾದ್ರಿ ಶ್ರೇಣಿಯ ಘಟ್ಟ ಪ್ರದೇಶದಲ್ಲಿ ಕಳೆದ 4-5 ದಿನಗಳಿಂದ ಕುಂಭದ್ರೋಣ ಮಳೆ ಸುರಿಯುತ್ತಿರುವುದರಿಂದ ಮಹಾರಾಷ್ಟ್ರದ ಕೊಯ್ತಾ ಜಲಾಶಯ ಭರ್ತಿಗೆ ಕೆಲವೇ ಅಡಿ ಬಾಕಿ ಉಳಿದಿರುವುದರಿಂದ ಕೃಷ್ಣಾ ನದಿಗೆ ಪ್ರವಾಹ ಬಂದು ಈಗಾಗಲೇ ಉಗಾರ-ಕುಡಚಿ ಮಾರ್ಗದ ಸೇತುವೆ ಮೇಲೆ ನೀರು ಬಂದು ಸಾರಿಗೆ ಸಂಚಾರ ಸಂಪೂರ್ಣ ಕಡಿತಗೊಂಡಿದೆ. ಈ ಭಾಗದಲ್ಲಿ ಮೇ ತಿಂಗಳಲ್ಲಿ ಅವಧಿಗೆ ಮುನ್ನ ಮಳೆ ಸುರಿದಿರುವುದರಿಂದ ರೈತಾಪಿ ವರ್ಗದಲ್ಲಿ ಖುಷಿ ಮುಗಿಲ ಮುಟ್ಟಿತ್ತು. ಆದರೆ, ಈಗ ಕಳೆದ ಒಂದು ತಿಂಗಳಿನಿಂದ ಕೇವಲ ತುಂತುರು ಮಳೆ ಬರುತ್ತಿದೆಯಾದರೂ ಕೂಡ ಮಹಾರಾಷ್ಟ್ರದಲ್ಲಿ ಕಳೆದು ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ. ಇದರಿಂದ ಈ ಭಾಗದಲ್ಲಿ ಕೃತಕ ಪ್ರವಾಹ ಬಂದು ನದಿತೀರದ ತಗ್ಗು ಪ್ರದೇಶ ಜಲಾವೃತಗೊಂಡು ಬೆಳೆಗಳಲ್ಲಿ ನೀರು ಹೊಕ್ಕುತ್ತಿದೆ. ಕೄಷ್ಣಾ ನದಿಗೆ ಮತ್ತೆ ಜೀವಕಳೆ ಬಂದಿದೆ. ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಂಘದ ಸರ್ವೋತೋಮುಖ ಅಭಿವೃದ್ಧಿಯಲ್ಲಿ ಸದಸ್ಯರು, ಠೇವುದಾರರು, ನಿರ್ದೇಶಕ ಮಂಡಳಿ ಸೇರಿದಂತೆ ಗ್ರಾಹಕರ ಪಾತ್ರ ಬಹು ಮುಖ್ಯವಾಗಿದೆ ಎಂದು ಸಮೃದ್ಧಿ ಸಹಕಾರ ಸಂಘದ ಅಧ್ಯಕ್ಷೆ ಸಂಗೀತಾ ನಾಯಿಕ್ ಹೇಳಿದರು.ಪಟ್ಟಣದ ಕಲ್ಮೇಶ್ವರ ಮಂಗಲ ಭವನದಲ್ಲಿ ಗುರುವಾರ ಜರುಗಿದ ಸಮೃದ್ಧಿ ಸಹಕಾರ ಸಂಘದ ೪ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಪ್ರಗತಿಗೆ ಕಳೆದ ೩ ವರ್ಷಗಳಿಂದ ನೀಡುತ್ತಿರುವ ಸದಸ್ಯರ ಸಹಕಾರ ಶ್ಲಾಘನೀಯ ಎಂದರು.ಸಂಘದ ಉಪಾಧ್ಯಕ್ಷ ರಿಯಾಜ್ ಯಲಗಾರ ಮಾತನಾಡಿ, ಒಟ್ಟು ೯೦೨ ಸದಸ್ಯ ಬಲದ ಸಂಘವು ೧೦.೨೪ ಲಕ್ಷ ಶೇರು ಬಂಡವಾಳದೊಂದಿಗೆ ಕಾರ್ಯಾರಂಭ ಮಾಡಿ ಈಗ ೯೩.೪೬ ಲಕ್ಷ ಶೇರು ಬಂಡವಾಳದೊಂದಿಗೆ ಸುಮಾರು ೭.೮೦ ಕೋಟಿ ದುಡಿಯುವ ಬಂಡವಾಳ ಹೊಂದಿದೆ. ೨೦೨೪-೨೫ನೇ ಸಾಲಿನಲ್ಲಿ ೩೬.೧೬ ಕೋಟಿ ವ್ಯವಹಾರ ನಡೆಸಿ ೩೦.೧೭ ಲಕ್ಷ ರೂ.ಗಳ ನಿವ್ವಳ ಆದಾಯ ಗಳಿಸಿದೆ. ಮುಂಬರುವ ವರ್ಷಗಳಲ್ಲಿ ಠೇವುಗಳನ್ನು ರೂ. ೧೦ ಕೋಟಿಗೆ ಹೆಚ್ಚಿಸಿಕೊಳ್ಳುವುದು. ಶೇರು ಬಂಡವಾಳವನ್ನು ರೂ. ೧.೫೦ ಕೋಟಿಗಳಿಗೆ ಹೆಚ್ಚಿಸಿಕೊಳ್ಳುವುದು. ಹಾಗೂ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಮುಳಸಾವಳಗಿ, ಕೊಂಡಗೂಳಿ, ಕೋರವಾರ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಸಿಇಓ ರಿಷಿ ಆನಂದ ಭೇಟಿ ನೀಡಿ ಜೆಜೆಎಮ್ ಹಾಗೂ ಅಂಗನವಾಡಿಗಳನ್ನು ಪರಿಶೀಲಿಸಿದರು.ತಾಲ್ಲೂಕಿನ ಮುಳಸಾವಳಗಿ ಪಂಚಾಯಿತಿ ವ್ಯಾಪ್ತಿಯ ಪಡಗಾನೂರ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ ಸಿಇಓ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆಮನೆಗೂ ನೀರಿನ ಸಂಪರ್ಕ ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಕುರಿತು ಪರಿಶೀಲನೆ ಕೈಗೊಂಡು ಜೆಜೆಎಂ ನಳ ಸಂಪರ್ಕಕ್ಕೆ ಮೋಟರ್ ಅಳವಡಿಕೆ ಮಾಡದಂತೆ ಸೂಚಿಸಿದರು.ಪ್ರತಿಮನೆಗೂ ಶುದ್ಧ ಹಾಗೂ ಕುಡಿಯಲು ಯೋಗ್ಯವಾದ ನೀರನ್ನು ಒದಗಿಸಬೇಕು. ಗ್ರಾಮಸ್ಥರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಎಇಇ ಅವರಿಗೆ ಸೂಚಿಸಿದರು.ನಂತರ ಅಂಗನವಾಡಿ ಕೇಂದ್ರದ ಬಗ್ಗೆ ಗ್ರಾಮಸ್ಥರಿಗೆ ತಿಳಿ ಹೇಳಿ ಪೌಷ್ಟಿಕ ಆಹಾರ ನೀಡುವಂತೆ ತಿಳಿಸಿದರು.ನಂತರ ಕೊಂಡಗೂಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜಲಜೀವನ್ ಮಿಷನ್ ನಳಸಂಪರ್ಕದ ಬಗ್ಗೆ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದರು. ಒಂದನೇ ವಾರ್ಡನಲ್ಲಿ ಹಲವು ತಿಂಗಳುಗಳು ಕಳೆದರೂ ಸಹ ನೀರಿನ ಸಂಪರ್ಕ ಒದಗಿಸಿಲ್ಲ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರೊಬ್ಬರ ದೂರಿಗೆ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸತ್ತಾಗ ಆಸ್ತಿ, ದುಡ್ಡು ನಮ್ಮೊಂದಿಗೆ ಬರುವುದಿಲ್ಲ. ಬಂಧು-ಬಾಂಧವರು ಸ್ಮಶಾನದವರೆಗೆ ಮಾತ್ರ ಬರುತ್ತಾರೆ. ಆದರೆ, ಬದುಕಿದ್ದಾಗ ಮಾಡಿದ ದಾನ, ಧರ್ಮ, ಪರೋಪಕಾರದ ಪುಣ್ಯ ಮಾತ್ರ ನಾವು ಸತ್ತಾಗ ನಮ್ಮೊ ೦ದಿಗೆ ಬರುತ್ತವೆ ಎಂದು ಓಲೆಮಠದ ಆನಂದ ದೇವರು ಹೇಳಿದರು.ಶ್ರಾವಣ ಮಾಸದ ನಿಮಿತ್ತ ಓಲೆಮಠದ ಆಶ್ರಯದಲ್ಲಿ ದಿನಕ್ಕೊಂದು ಓಣಿಯಲ್ಲಿ ನಡೆಯುತ್ತಿರುವ ವಚನ ಶ್ರಾವಣ ಅಂಗವಾಗಿ ಸಿದ್ಧರಾಮೇಶ್ವರ ಕಾಲೊನಿಯ ಗಣಪತಿಗುಡಿ ಆವರಣದಲ್ಲಿ ಮಂಗಳವಾರ ಸಂಜೆ ನಡೆದ 5ನೇ ದಿನದ ಕಾರ್ಯಕ್ರಮದಲ್ಲಿ ಅವರು ಸಾವಿಗೆ ಸಂಗಡವಾರು ಇಲ್ಲ ಎಂಬ ಶರಣ ಮೋಳಗಿ ಮಾರಯ್ಯನವರ ವಚನ ಕುರಿತು ಆಶೀರ್ವಚನ ನೀಡಿದರು.ನಿನ್ನಿಂದಲೆ ಎಲ್ಲ ಸಂಪಾದನೆ ಸಾಧ್ಯವಾಗಿದೆ ಎಂದು ಗಂಡ ತನ್ನ ಹೆಂಡತಿಗೆ ಆಗಾಗ ಹೇಳುತ್ತಿರಬೇಕು. ನಿನ್ನ ಪರಿಶ್ರಮದ ಫಲವಾಗಿ ಗಳಿಕೆ ಸಾಧ್ಯವಾಗುತ್ತಿದೆ ಎಂದು ಹೆಂಡತಿ ತನ್ನ ಗಂಡನಿಗೆ ಹೇಳುತ್ತಿರಬೇಕು. ನಮ್ಮ ನಂತರ ನಾವು ಗಳಿಸಿದ ಎಲ್ಲ ಸಂಪತ್ತಿಗೆ ನೀವೆ ವಾರಸುದಾರರು ಎಂದು ತಂದೆ-ತಾಯಿಗಳು ತಮ್ಮ ಮಕ್ಕಳಿಗೆ ಹೇಳುತ್ತಿರಬೇಕು. ಭಗವಂತ ಎಲ್ಲವೂ ನಿನ್ನ ಆಶೀರ್ವಾದ. ನನ್ನದು ಏನೂ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ೨೨ನೇ ಅವಧಿಗೆ ೨೦೨೫-ಜನವರಿ, ಫೆಬ್ರವರಿ ತಿಂಗಳಲ್ಲಿ ಜರುಗಿದ ಮಹಾಪೌರ ಹಾಗೂ ಉಪ ಮಹಾಪೌರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಆ.೭ರಂದು ಮಧ್ಯಾಹ್ನ ೧ ಗಂಟೆಗೆ ಸಭೆ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಎತ್ತಿನಬಂಡಿ ಓಟ ಕ್ರೀಡೆಯನ್ನು ಆಯೋಜಿಸಲಾಗುತ್ತಿದ್ದು, ಎತ್ತಿನಬಂಡಿ ಓಟ ಕ್ರೀಡೆಯಲ್ಲಿ ಆಸಕ್ತ ಹೊಂದಿರುವ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಎತ್ತಿನಬಂಡೆ ಕ್ರೀಡೆಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ೨೦೨೫-೨೬ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುತ್ತಾರೆ. ಎತ್ತಿನ ಬಂಡೆ ಕ್ರೀಡೆಗೆ ಪ್ರೊತ್ಸಾಹ ಹಾಗೂ ಉತ್ತೇಜನ ನೀಡಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸುವ ೧೫ ಸಂಘ-ಸಂಸ್ಥೆಗಳಿಗೆ ತಲಾ ೨ ಲಕ್ಷ ರೂ.ಗಳನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆಯ್ಕೆ ಮಾಢುವ ಸಂಘ-ಸಂಸ್ಥೆಗಳಿಗೆ ಅನುದಾನ ಒದಗಿಸಲಾಗುತ್ತದೆ.ಜಿಲ್ಲೆಯಲ್ಲಿಯು ಸಹ ಜಿಲ್ಲಾಧಿಕಾರಿಗಳ ಮೂಲಕ ಸಂಘ-ಸಂಸ್ಥೆಗಳನ್ನು ಆಯ್ಕೆ ಮಾಡಲು ಆಸಕ್ತ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ದಿನಾಂಕ : ೫-೮-೨೦೨೫ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ; ೦೮೩೫೨-೨೫೧೦೮೫ ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Sಜಾನಪದ ಸಾಹಿತಿ ಮಧುರಚೆನ್ನರ ೧೨೨ನೇ ಜನ್ಮ ಆಚರಣೆಯಲ್ಲಿ ಎಸಿ ಅನುರಾಧ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಮಧುರಚೆನ್ನರ ೧೨೨ನೇ ಜನ್ಮ ದಿನಾಚರಣೆಯನ್ನು ಜು.೩೧ರ ಗುರುವಾರ ಹಲಸಂಗಿ ಗ್ರಾಮದ ಶ್ರೀ ಅರವಿಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಹಲಸಂಗಿಯ ಎಸ್.ಎ.ವಿ.ವಿ. ಸಂಘದ ಅಧ್ಯಕ್ಷರಾದ ಅರವಿಂದ ಮನಮಿ ಉದ್ಘಾಟಿಸಿದರು.ಅರವಿಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಬಿ. ತಿಕೋಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಇಂಡಿ ವಿಭಾಗದ ಉಪ ವಿಭಾಗಾಧಿಕಾರಿಗಳಾದ ಶ್ರೀಮತಿ ಅನುರಾಧಾ ವಸ್ತ್ರದ ಮಾತನಾಡಿ, ಸಂವಿಧಾನ ನಮಗೆಲ್ಲ ಸಮನಾದ ಅವಕಾಶ ಕೊಟ್ಟಿದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳಿಸಿಕೊಳ್ಳಿ ಕನ್ನಡ ಸಾಹಿತ್ಯದಲ್ಲಿ ಅದ್ಭುತ ಜನಪದ ಕಾವ್ಯಗಳಿವೆ ಜನಪದ ಸಾಹಿತ್ಯವು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಇರುವುದರಿಂದ ಜನಪ್ರೀಯವಾಗಿವೆ ಎಂದು ಹೇಳಿದರು.ಡಾ.ಸಂಗಮೇಶ ಮೇತ್ರಿ ಮಾತನಾಡಿ, ಮಧುರಚೆನ್ನರು ಒಬ್ಬರು ಅನುಭವಿ ಕವಿ ಸ್ವತಂತ್ರ‍್ಯ ಪೂರ್ವ ಹಲಸಂಗಿ ಗೆಳೆಯರ ಬಳಗ ಸಾಮಾಜಿಕ ರಾಷ್ಟ್ರದ…
ವಿಜಯಪುರ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನ ಮಂತ್ರಿಗಳ ಸ್ವನಿಧಿ, ಮಾತೃವಂಧನ, ಡೇನಲ್ಮ್ ಹಾಗೂ ಸರ್ಕಾರದ ಇತರೆ ಯೋಜನೆಗಳ ಲಾಭ ಪಡೆದ ಫಲಾನುಭವಿಗಳ ಸಮಗ್ರವಾದ ನಿಖರ ಮಾಹಿತಿಯನ್ನು ಮುಂದಿನ ಸಭೆಯೊಳಗಾಗಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಯುವನಿಧಿ ಯೊಜನೆಯಡಿ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಅಂತಿಮ ವರ್ಷದಲ್ಲಿ ಪಧವಿ ಹಾಗೂ ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳ ಪಟ್ಟಿಯನ್ನು ಪಡೆದು ಎಲ್ಲ ಅರ್ಹ ಫಲಾನುಭವಿಗಳಿಗೆ ಯುವನಿಧಿ ಯೋಜನೆ ಲಾಭ ದೊರಕಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಯೋಜನೆಗಳ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಅಮೃತ್ ಯೋಜನೆಯಡಿ ಮಹಿಳಾ ಸ್ವ ಸಹಾಯ ಸಂಘಗಳು ವಿವಿಧ ವೃತ್ತಿಪರ ಚಟುವಟಿಕೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರತಿಯೊಂದು ಗುಂಪಿಗೆ ಒಂದು…
ವಿಜಯಪುರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಸಿಇಓ ಭೇಟಿ | ಜಲಜೀವನ ಮಿಷನ್ ಕಾಮಗಾರಿಗಳ ಪರಿಶೀಲಿಸಿದ ಸಿಇಓ ರಿಷಿ ಆನಂದ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಪೂರ್ವದಲ್ಲಿ ಓವರ್ ಹೆಡ್ ಟ್ಯಾಂಕ್ ನ್ನು ಸ್ವಚ್ಛಗೊಳಿಸಿ, ಕ್ಲೋರಿನೇಷನ್ ಮಾಡಿ, ನೀರಿನ ಗುಣಮಟ್ಟವನ್ನು ಪರೀಕ್ಷಿಸಬೇಕು. ಗ್ರಾಮಗಳಲ್ಲಿರುವ ಹಳೆಯ ಸಂಪರ್ಕಗಳನ್ನು ಕಡ್ಡಾಯವಾಗಿ ತೆರವುಗೊಳಿಸಿ ಜಲ ಜೀವನ್ ಮಿಷನ್ ಯೋಜನೆಯಡಿ ನೀಡಲಾದ ಹೊಸ ನಳ ಸಂಪರ್ಕಗಳ ಮೂಲಕ ನೀರನ್ನು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಅವರು ಸೂಚಿಸಿದರು.ವಿಜಯಪುರ ತಾಲೂಕಿನ ಐನಾಪುರ, ಐನಾಪುರ ಎಲ್ ಟಿ, ಬುರಣಾಪುರ, ಮದಭಾವಿ, ಕುಮಟಗಿ, ಕಗ್ಗೋಡ, ಕಗ್ಗೋಡ ಎಲ್‌ಟಿ, ದೇವರ ಹಿಪ್ಪರಗಿ ತಾಲೂಕಿನಪಡಗಾನೂರ, ಪಡಗಾನೂರ ಎಲ್ ಟಿ, ಕೊಂಡಗೂಳಿ, ಹಂಚಲಿ ಮತ್ತು ಕೋರವಾರ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡ ಪ್ರತಿ ಮನೆಗಳ ಕಾಮಗಾರಿಗಳ ಕುರಿತು ಸ್ಥಳ ಪರಿಶೀಲನೆ ನಡೆಸಿದ ಅವರು ಜಲಮಿಷನ್ ಯೋಜನೆಯಡಿ…
ಭೀಮೆಯ ಒಡಲಿಗೆ ಮತ್ತೆ ಒಂದು ಲಕ್ಷ ಕ್ಯೂಸೆಕ್ಸ್ ನೀರು ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ ಮಾಳಿರೇವತಗಾಂವ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಜನಿ ಜಲಾಶಯದಿಂದ ಮಂಗಳವಾರದಂದು ಮಧ್ಯಾಹ್ನ ಒಂದು ಲಕ್ಷ ಕ್ಯೂಸೆಕ್ಸ್ ನೀರನ್ನು ಭೀಮಾ ನದಿಗೆ ನೀರು ಹರಿಬಿಟ್ಟಿರುವುದರಿಂದ ಚಡಚಣ ತಾಲೂಕಿನಲ್ಲಿ ಭೀಮಾ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ.ಇದರಿಂದಾಗಿ ಉಮರಜ, ಉಮರಾಣಿ, ಶಿರನಾಳ, ಹಿಂಗಣಿ, ಧೂಳಖೇಡ ಮುಂತಾದ ಗ್ರಾಮಗಳ ಬಳಿ ಇರುವ ಬ್ರಿಜ್ ಕಮ್ ಬಾಂದಾರಗಳು ಜಲಾವೃತಗೊಂಡಿವೆ. ಇದರಿಂದಾಗಿ ಕರ್ನಾಟಕ ಮಹಾರಾಷ್ಟ್ರ ಸಂಪರ್ಕ ಕಲ್ಪಿಸುವ ಉಮರಜ, ಉಮರಾಣಿ, ಹಿಂಗಣಿ, ಶಿರನಾಳ ಕೆಲವು ಹಳ್ಳಿಗಳ ಸಂಪರ್ಕ ಕಳೆದುಕೊಂಡಿವೆ.ಭೀಮಾ ನದಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ನದಿ ತೀರದಲ್ಲಿ ವಾಸವಾಗಿರುವ ಜನರಿಗೆ ಸುರಕ್ಷಿತ ತಾಣಗಳತ್ತ ತೆರಳಲು ಈಗಾಗಲೇ ಸೂಚಿಸಲಾಗಿದೆ. ಭೀಮಾ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಮುಂಜಾಗೃತಾ ಕ್ರಮವಾಗಿ ನದಿ ತೀರದ ಗ್ರಾಮಗಳಲ್ಲಿ ಡಂಗುರ ಸಾರಿ, ಸುರಕ್ಷಿತ ತಾಣಗಳಿಗೆ ಜನರು ತಮ್ಮ ಸಾಮಾನು ಹಾಗೂ ಜಾನುವಾರಗಳೊಂದಿಗೆ ತೆರಳಲು ಸೂಚಿಸಲಾಗಿದೆ ಎಂದು ಚಡಚಣ…
