Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ತಾರಾಪೂರ ಗ್ರಾಮವು ಭೀಮಾ ನದಿಯ ದಂಡದಲ್ಲಿರುವ ಈ ತಾರಾಪೂರ ಗ್ರಾಮವು ಕಾಶಿಯ ಕಡಿಯ ಬಾಗಿಲ ಎಂದು ಹೆಸರುವಾಸಿಯಾಗಿರುವ ಈ ತಾರಾಪೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ತಾರಕೇಶ್ವರ ದೇವಸ್ಥಾನ ಅವರಣದಲ್ಲಿ ಸಮಸ್ತ ತಾರಾಪುರ ಗ್ರಾಮದ ಮಹಿಳೆಯರು ಮಕ್ಕಳು ಯಾವುದೇ ಜಾತಿ ಭೇದವಿಲ್ಲದೆ ಕರೆ ಕಟ್ಟುವ ಪದ್ಧತಿ ಹಿಂದಿನಿಂದ ಬಂದ ಸಂಪ್ರದಾಯವನ್ನು ಇನ್ನು ನಮ್ಮ ಹಳ್ಳಿಗಳಲ್ಲಿ ಉಳಿಸಿಕೊಂಡು ಬಂದಿದ್ದಾರೆ.ನಮ್ಮ ಉತ್ತರ ಕರ್ನಾಟಕದ ಸಿವಿ ಸಿವಿ ಊಟವಾದ ಚಜ್ಜೆ ರೊಟ್ಟಿ ಪುಂಡಿ ಪಲ್ಲೆ ಬದನೆಕಾಯಿ ಪಲ್ಲೆ ಶೃಂಗಾದ ಚಟ್ನಿ ಶೇಂಗಾ ಹೋಳಿಗಿ ಹಾಗೂ ನಾನು ತರದ ಸಿಹಿ ತಿನಿಸುಗಳನ್ನು ಸಿವಿದ ನಂತರ ಮಹಿಳರಿಂದ ಸರಬಿ ಆಟ ಆಡಿದರು.ಐದು ಜನ ಮುತ್ತೈದೆಯರು ಐದು ಕಳಸವನ್ನು ಭೀಮಾ ನದಿಯಲ್ಲಿ ತುಂಬಿಕೊಂಡು ಬಂದು ನಂತರ ಸಂಪ್ರದಾಯ ಪ್ರಕಾರ ಪೂಜ ಪುನಸ್ಕಾರವನ್ನು ಮಾಡಿ ಎಲ್ಲಾ ಮಹಿಳೆಯರು ಕೂಡಿಕೊಂಡು ಕರೆ ಕಟ್ಟಿ ಹೊಡೆದು ಸಾಮೂಹಿಕವಾಗಿ ಮಳೆ ಬೆಳೆ ಚೆನ್ನಾಗಿ ಬರಲಿ ಎಂದು ದೇವರಲ್ಲಿ…

Read More

ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಕಟ್ಟುನಿಟ್ಟಿನ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅತಿವೃಷ್ಟಿ-ಪ್ರವಾಹದಿಂದ ಉಂಟಾಗುವ ಮನೆ ಹಾನಿ, ಜನ-ಜಾನುವಾರುಗಳ ಹಾನಿಗೆ ನಿಗದಿತ ಅವಧಿಯಲ್ಲಿ ತುರ್ತಾಗಿ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಮಂಗವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಅತಿವೃಷ್ಟಿ ಪ್ರವಾಹದಿಂದ ಹಾನಿಗೀಡಾದ ಮನೆಗಳಿಗೆ ೭೨ ಗಂಟೆಯೊಳಗೆ ಹಾಗೂ ಜಾನುವಾರು ಹಾನಿಗೆ ೪೨ ಗಂಟೆಯೊಳಗೆ ಪರಿಹಾರ ಒದಗಿಸಲು ಕ್ರಮ ವಹಿಸಬೇಕು. ತುರ್ತು ಪರಿಸ್ಥಿತಿಯಲ್ಲಿ ತುರ್ತಾಗಿ ನೀಡುವ ಪರಿಹಾರವಾಗುವುದರಿಂದ ಈ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಪ್ರಕರಣಗಳನ್ನು ಬಾಕಿ ಉಳಿಸಿಕೊಳ್ಳದೇ, ಪ್ರಕರಣಗಳನ್ನು ಇತ್ಯರ್ಥಪಡಿಸಿ, ತುರ್ತಾಗಿ ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಜಿಲ್ಲೆಯಲ್ಲಿ ಅತಿವೃಷ್ಟಿ-ಪ್ರವಾಹಕ್ಕೊಳಪಡುವ ಪ್ರದೇಶಗಳ ಮಾಹಿತಿಯನ್ನು ಅಧಿಕಾರಿಗಳು ಮುಂಚಿತವಾಗಿ ಹೊಂದಿರಬೇಕು. ಯಾವ ನದಿಯಿಂದ ಎಷ್ಟು ಪ್ರಮಾಣದ ನೀರು ಬಂದಲ್ಲಿ ಹಳ್ಳಿಗಳು ಬಾಧಿತವಾಗಲಿವೆ ಎಂಬುದನ್ನು ತಿಳಿದುಕೊಂಡಿರಬೇಕು. ಸಂಪೂರ್ಣ ಮಾಹಿತಿ ಅರಿತುಕೊಂಡಲ್ಲಿ…

Read More

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಧೀಶರಾದ ಸಚಿನ್ ಕೌಶಿಕ್ ಸಲಹೆ ಉದಯರಶ್ಮಿ ದಿನಪತ್ರಿಕೆ ಮುದ್ದೆಬಿಹಾಳ: ಮಾನವ ಕಳ್ಳ ಸಾಗಣೆ ತಡೆಯುವದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಕಂಡು ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲು ಪ್ರತಿಯೊಬ್ಬ ಸಾರ್ವಜನಿಕರು ಮುಂದಾಗಬೇಕು ಎಂದು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಧೀಶರಾದ ಸಚಿನ್ ಕೌಶಿಕ್ ಅವರು ಹೇಳಿದರು.ಪಟ್ಟಣದ ನ್ಯಾಯಾಲಯದಲ್ಲಿ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಾನವ ಜೀವನವು ಖರೀದಿ ಅಥವಾ ಮಾರಾಟ ಮಾಡುವ ವಸ್ತುವಲ್ಲ. ಹಣದ ಭಿಕ್ಷೆಗೆ, ಲಾಭದ ಮೋಹಕ್ಕೆ ಅನೇಕರು ಮಕ್ಕಳನ್ನು, ಮಹಿಳೆಯರನ್ನು, ಪುರುಷರನ್ನು ಮೋಸದಿಂದ ಕಳ್ಳಸಾಗಣೆ ಮಾಡುತ್ತಿದ್ದಾರೆ. ಈ ದುಷ್ಕೃತ್ಯಕ್ಕೆ ಯಾರೂ ಬಲಿಯಾಗಬಾರದು. ಇಂತಹ ಅಪರಾಧಗಳನ್ನು ಮಟ್ಟಹಾಕಲು ಸರ್ಕಾರಕ್ಕೆ ಮತ್ತು ಪೊಲೀಸರಿಗೆ ಜನಸಹಕಾರ ಅತ್ಯವಶ್ಯ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆಗಾಗಿ ಶನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‌ಸೈಟ್ ನಲ್ಲಿ ಸೆಪ್ಟೆಂಬರ್ ೩೦ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ಹಾಗೂ ೮೦೫೦೭೭೦೦೦೫ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದ್ರಾಕ್ಷಿ ಬೆಳೆಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದ್ದು, ಬೆಳೆ ಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ ಕಾರ್ಡ ಪ್ರತಿ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕಗಳಲ್ಲಿ, ಗ್ರಾಮ ಒನ್ ಕೇಂದ್ರ ಅಥವಾ ಸಿಎಸ್ ಸಿ ಸೆಂಟರ್ ಗಳಲ್ಲಿ ವಿಮಾ ಯೋಜನೆಯಡಿ ನೊಂದಾಯಿಸಿಕೊಳ್ಳಬಹುದು.ಮುಂಗಾರು ಹಂಗಾಮಿನಲ್ಲಿ ದ್ರಾಕ್ಷಿ ಬೆಳೆಯ ವಿಮಾ ನೋಂದಣಿಗೆ ಆಗಸ್ಟ್ ೧೬ ಕೊನೆಯ ದಿನವಾಗಿದೆ.ರೈತರು ಪಾವತಿಸಬೇಕಾದ ವಿಮಾ ಮೊತ್ತ ಪ್ರತಿ ಹೆಕ್ಟರ್ ಗೆ ೧೪,೦೦೦ರೂ. ಗಳಾಗಿದೆ.ಹೆಚ್ಚಿನ ಮಾಹಿತಿಗಾಗಿ ತಮ್ಮವ್ಯಾಪ್ತಿಯ ತಾಲೂಕಿನ ತೋಟಗಾರಿಕೆ ಇಲಾಖೆ, ಅಗ್ರಿಕಲ್ಚರ ಇನ್ಸುರೆನಸ್ ಕಂಪನಿ (ಎಐಸಿ) ವಿಮಾ ಸಂಸ್ಥೆಯ ಪ್ರತಿನಿಧಿ ರಾಮನಗೌಡ ಬಿರಾದಾರ ಮೊ. ೮೩೧೦೯೩೯೭೫೩, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ: ೯೫೩೫೧೮೫೯೯೯, ಇಂಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ: ೯೦೦೮೪೦೪೦೪೧, ಸಿಂದಗಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ. ಕೆ ಅವರು ಬುಧವಾರ ಭೇಟಿ ನೀಡಿ, ತಾಲೂಕಾ ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ ಪ್ರಕರಣಗಳ ಕಡತ, ಆಧಾರ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ ಪ್ರಗತಿ ಮಾಹಿತಿ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭೂಸುರಕ್ಷಾ ಯೋಜನೆಯ ಪ್ರಗತಿ ಸಾಧಿಸಬೇಕು. ದಾಖಲೆಗಳನ್ನು ಸಮರ್ಪಕವಾಗಿ ದಾಖಲೀಕರಣಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.ಮುದ್ದೇಬಿಹಾಳ ಪುರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿ, ಸಾರ್ವಜನಿಕ ಸಂಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮುದ್ದೇಬಿಹಾಳ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು.ಅಗತ್ಯ ಮೂಲಭೂತ ಸೌಲಭ್ಯ ಖಚಿತಪಡಿಸಿಕೊಳ್ಳಬೇಕು. ತಾಲೂಕಾಸ್ಪತ್ರೆಗೆ…

Read More

ಎರಡನೇ ಹೆಚ್ಚುವರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಪ್ರಭಾರ ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ರಮೇಶ ಅಪ್ಪಾಸಾಹೇಬ ಮಹಾಜನ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾನವ ಕಳ್ಳ ಸಾಗಾಣಿಕೆ ಸಮಾಜಕ್ಕೆ ಅಂಟಿದ ಕಳಂಕವಾಗಿದ್ದು, ಇದನ್ನು ತಡೆಗಟ್ಟಲು ಎಲ್ಲರೂ ಕೈಜೋಡಿಸಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಎರಡನೇ ಹೆಚ್ಚುವರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಪ್ರಭಾರ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ರಮೇಶ ಅಪ್ಪಾಸಾಹೇಬ ಮಹಾಜನ ಹೇಳಿದರು.ನಗರದ ರುಡ್‌ಸೆಟ್ ಸಂಸ್ಥೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಯಪುರ ನಗರ-ಗ್ರಾಮೀಣದ ಶಿಶು ಅಭಿವೃದ್ಧಿ ಯೋಜನೆ ಇವರ ಸಹಯೋಗದಲ್ಲಿ ಬುಧವಾರ ನಡೆದ ಮಾನವ ಕಳ್ಳ ಸಾಗಾಣಿಕೆ…

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ಹೊರ ತರುವ ಪತ್ರಕರ್ತ ವಿಶೇಷ ಸಂಚಿಕೆಯನ್ನು ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು.ರಾಜ್ಯ ಸಂಘದ ಚಟುವಟಿಕೆ, ತುಮಕೂರಿನಲ್ಲಿ ನಡೆದ ರಾಜ್ಯ ಸಮ್ಮೇಳನದ ಮಾಹಿತಿ, ಕೊಪ್ಪಳದಲ್ಲಿ ನಡೆದ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ, ಮಲೆ ಮಹದೇಶ್ವರದಲ್ಲಿ ನಡೆದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರ ಅಭಿನಂದನಾ ಸಮಾರಂಭ, ಕ್ರೀಡಾ ಚಟುವಟಿಕೆ, ಮನೆಯಂಗಳದಲ್ಲಿ ಹಿರಿಯ ಪತ್ರಕರ್ತರಿಗೆ ನಮನ, ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಮಗ್ರ ಮಾಹಿತಿಯನ್ನು ಈ ಸಂಚಿಕೆ ಒಳಗೊಂಡಿದೆ ಎಂದು ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.ಜು.1ರಂದು ನಡೆದ ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ ನೀಡಿದ್ದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.ಇದೇ ಸಂದರ್ಭದಲ್ಲಿ ಕೆಯುಡಬ್ಲೂಜೆ ರಾಜ್ಯ ಖಜಾಂಚಿ ವಾಸುದೇವ ಹೊಳ್ಳ…

Read More

ಮಕ್ಕಳ ಉಜ್ವಲ ಭವಿಷ್ಯ ಸಾಕಾರಕ್ಕೆ ಅಧಿಕಾರಿಗಳು ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಡಿಸಿ ಡಾ.ಆನಂದ ಕೆ. ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯ ಜಿಲ್ಲೆಯಲ್ಲಿರುವ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಅವರ ಜೀವನ ಸುಂದರಗೊಳಿಸಿಕೊಳ್ಳಲು ಸರ್ಕಾರ ಒದಗಿಸಿರುವ ಸೌಲಭ್ಯಗಳು ಸಮರ್ಪಕವಾಗಿ ದೊರಕುತ್ತಿರುವ ಕುರಿತು ಅಧಿಕಾರಿಗಳು ಸ್ವಯಂಪ್ರೇರಿತವಾಗಿ ವಾರಕ್ಕೊಂದು ಸಲ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇದು ಸ್ವಯಂ ಪ್ರೇರಿತ ಕಾರ್ಯವಾಗಿದೆ. ಸಾಮಾಜಿಕ ಜವಾಬ್ದಾರಿಯೊಂದಿಗೆ ಅಧಿಕಾರಿಗಳು ಮೇಲಿಂದ ಮೇಲೆ ಹಾಸ್ಟೇಲ್‌ಗಳಿಗೆ ಭೇಟಿ ನೀಡಬೇಕು. ಅಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯ, ಮಕ್ಕಳ ಜ್ಞಾನಾರ್ಜನೆ, ಕಲಿಕಾ ಸಂದರ್ಭದಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳು ವಿಷಯಗಳ ಮನನ ಮುಂತಾದ ವಿಷಯಗಳ ಪರಿಹಾರ ಒದಗಿಸುವ ನಿಟ್ಟಿನಲ್ಲಿ ವಾರದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ರಾಕ್ಷಿಯ ನಾಡೆಂದು ಪ್ರಸಿದ್ಧಿಗೊಂಡಂತ ವಿಜಯಪುರ ಜಿಲ್ಲೆ , ಸುಮಾರು 35,000 ಎಕರೆ ದ್ರಾಕ್ಷಿಯನ್ನು ಹೊಂದಿದ್ದು ಕಳೆದ ಹತ್ತು ವರ್ಷದ ನಂತರ ಮೊದಲ ಬರಿ ಒಳ್ಳೆಯ ಬೆಲೆ ನಿಗದಿತವಾಗಿದ್ದು ಸಂತಸ ತಂದಿದೆ. ಆದರೆ ಕೆಲವೊಂದು ಹೇಳಿಕೆಗಳ ಪ್ರಕಾರ ನೇಪಾಲ್ ಮೂಲವಾಗಿ ಚೈನಾದಿಂದ ವಣ ದ್ರಾಕ್ಷಿಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ ಅಂತ ಸಂದೇಹ ನಮ್ಮ ರೈತರು ನನ್ನ ಮುಂದೆ ಹೇಳಿದ್ದು ಇಂದು ಸಂಪೂರ್ಣ ಸುಳ್ಳು ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.ಬುಧವಾರ ಈ ಕುರಿತು ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದ ಅವರು, ನಾನು ನಿನ್ನೆ ದಿನ ಸದನದ ವಿರಾಮ ವೇಳೆಯಲ್ಲಿ ನಮ್ಮ External Affair Minister ಆದಂತಹ ಜಯಶಂಕರ್ ಅವರನ್ನ ಭೇಟಿಯಾಗಿ ಈ ಬಗ್ಗೆ ಚರ್ಚಿಸಿದೆ. ಅವರು ಈ ಬಗ್ಗೆ Minister of Industry and Supply ಪಿಯುಶ್ ಗೊಯಲ್ ಹತ್ತಿರ ಮಾತನಾಡಿ ಅಂತ ಅವರು ನಿರ್ಧಾರ್ಶನದ ಪ್ರಕಾರ ಅದೇರೀತಿ ಈ ಬಗ್ಗೆ ಚರ್ಚಿಸಿದೆ.. ಇದರ ಬಗ್ಗೆ ತನಿಖೆ ನಡೆಸಿದಾಗ ಯಾವುದೇ ರೀತಿಯ…

Read More