Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದೇವರಹಿಪ್ಪರಗಿ ಹಾಗೂ ಕಲಕೇರಿ ವಲಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನುಕೂಲ ಮಾಡಿಕೊಡುವ ದೃಷ್ಠಿಯಿಂದ ಅಗಷ್ಟ ೨ ರಂದು ಗುರುಸ್ಪಂದನ ಕಾರ್ಯಕ್ರಮ ಆಯೋಜಿಸಿದ್ದು ಶಿಕ್ಷಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಬಿ.ಯಡ್ರಾಮಿ ಹೇಳಿದರು.ಪಟ್ಟಣದ ಶಾಸಕರ ಮಾದರಿ ಗಂಡುಮಕ್ಕಳ ಶಾಲೆಯಲ್ಲಿ ಸೋಮವಾರ ಜರುಗಿದ ಗುರುಸ್ಪಂದನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದÀರು, ಶಿಕ್ಷಕರು ತಮ್ಮ ಸೇವಾಪುಸ್ತಕಗಳನ್ನು ಅವಲೋಕಿಸುವ ಮೂಲಕ ಏನಾದರು ಸಮಸ್ಯೆಗಳಿದ್ದರೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು ಎಂದರು.ಪ್ರಾಥಮಿಕ ಶಾಲಾ ಶಿಕ್ಷಕರಸಂಘದ ಜಿಲ್ಲಾ ಗೌರವಾಧ್ಯಕ್ಷ ಜಿ.ಎಸ್.ಬೇವನೂರ ಮಾತನಾಡಿ, ತಾಲ್ಲೂಕಿನ ಶಿಕ್ಷಕರ ಸಂಘದಿಂದ ನಮ್ಮ ಅವಧಿಯಲ್ಲಿ ಎರಡನೇಯ ಬಾರಿಗೆ ಗುರುಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶಿಕ್ಷಕರು ತಮ್ಮೇಲ್ಲ ಕುಂದುಕೊರತೆಗಳನ್ನು ನೀಗಿಸಿಕೊಳ್ಳುವ ಸದಾವಕಾಶ ಕಲ್ಪಿಸಿಲಾಗಿದೆ ಎಂದರು.ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರಸಂಘದ ಅಧ್ಯಕ್ಷ ಎ.ಎಚ್.ವಾಲಿಕಾರ ಮಾತನಾಡಿ, ಶಿಕ್ಷಕರ ವಾರ್ಷಿಕ ಬಡ್ತಿ ಹಾಗೂ ಶೈಕ್ಷಣಿಕ ವಿದ್ಯಾರ್ಹತೆಯನ್ನು ನಮೂದಿಸಲಾಗುವುದು. ಒಟ್ಟಾರೆಯಾಗಿ ಕಚೇರಿಗಳಿಗೆ ಶಿಕ್ಷಕರ ಅಲೆದಾಟವನ್ನು ತಪ್ಪಿಸಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಶಿಕ್ಷಕರೆಲ್ಲರೂ ತಪ್ಪದೇ ಆಗಮಿಸಲು ತಿಳಿಸಿದರು.ಶಿಕ್ಷಕರಾದ ಶಿವಾನಂದ ಕೋಟಿನ್,…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಡಗಾನೂರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಇಂದು(ಬುಧವಾರ) ಉದ್ಘಾಟನೆಗೊಳ್ಳಲಿದೆ.ತಾಲ್ಲೂಕಿನ ಪಡಗಾನೂರ ಗ್ರಾಮದಲ್ಲಿ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ ೧೧ ಘಂಟೆಗೆ ಕಟ್ಟಡದ ಆವರಣದಲ್ಲಿ ಆರಂಭಗೊಳ್ಳಲಿದೆ. ಕರ್ನಾಟಕ ಸರ್ಕಾರದ ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶಿವಾನಂದ ಪಾಟೀಲ ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಜ್ಯೋತಿ ಬೆಳಗಿಸಲಿದ್ದು, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ.ಕಡಗಂಚಿಯ ವೀರಭದ್ರಶ್ರೀಗಳು ಸಾನಿಧ್ಯ ವಹಿಸಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಸ್ಥಳೀಯ ವಿ.ಪ್ರಾ.ಗ್ರಾ.ಕೃ.ಸ.ಸಂಘದ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಸೋಮೇಶ್ವರ ದೇವಸ್ಥಾನ ಸಂಸ್ಥೆಯ ಅಧ್ಯಕ್ಷ ಅಯ್ಯಪ್ಪಯ್ಯ ಹಿರೇಮಠ, ಮುಳಸಾವಳಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ಆಕಳವಾಡಿ, ಉಪಾಧ್ಯಕ್ಷೆ ಕಸ್ತೂರಿಬಾಯಿ ಹೊಸಟ್ಟಿ, ವ್ಹಿಡಿಸಿಸಿ ಬ್ಯಾಂಕ್ ನಿರ್ದೇಶಕರು, ಸಹಕಾರ ಸಂಘಗಳ ಉಪನಿಬಂಧಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಆಡಳಿತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬ ಈ ನಾಗರ ಪಂಚಮಿ ಹಬ್ಬವಾಗಿದೆ. ಈ ದಿನದಂದು ಕುಟುಂಬ ಸದಸ್ಯರೆಲ್ಲರೂ ಅದರಲ್ಲೂ ಮಹಿಳೆಯರು ಹಾಗೂ ಮಕ್ಕಳು ಹೊಸ ಬಟ್ಟೆ ಧರಿಸಿ ಈ ಹಬ್ಬ ಆಚರಣೆಗೆ ಸಿದ್ದರಾಗಿದ್ದರು.ಪಟ್ಟಣ ಸೇರಿದಂತೆ ಪ್ರತಿ ಗ್ರಾಮಗಳಲ್ಲಿ ಮಹಿಳೆಯರು ಕುಟುಂಬ ಸದಸ್ಯರ ಹಾಗೂ ಸಹೋದರರ ಆರೋಗ್ಯ ಹಾಗೂ ಯಶಸ್ಸಿಗಾಗಿ ನಾಗದೇವತೆಯನ್ನು ಪೂಜಿಸಿ ಪ್ರಾರ್ಥಿಸಿದರು. ಕಲ್ಲಿನಿಂದ ಕೆತ್ತಿದ ನಾಗದೇವತೆಗೆ ಕಡುಬು ನೈವಿಧ್ಯ ಅರ್ಪಿಸಿ ಕೊಬ್ಬರಿಯಲ್ಲಿ ಹಾಲು ಹಾಗೂ ತುಪ್ಪವನ್ನಿಟ್ಟು ನಾಗದೇವತೆಗೆ ಅರ್ಪಿಸಿದರು.ಪ್ರತಿ ಮನೆಗಳಲ್ಲೂ ಸುತ್ತಮುತ್ತಲಿನ ಕುಟುಂಬ ಸದಸ್ಯರನ್ನು ಕರೆಯಿಸಿ ಹಿಟ್ಟಿನಿಂದ ಮಾಡಿದ ನಾಗದೇವತೆಗೆ ಹಾಲೆರೆದು ಪೂಜಿಸಿದರು. ಹಬ್ಬಕ್ಕಾಗಿ ಮಾಡಿದ ವಿವಿಧ ಖಾಧ್ಯಗಳನ್ನು ಸುತ್ತ ಮುತ್ತಲಿನ ಕುಟುಂಬಸ್ಥರಿಗೆ ನೀಡಿದರು.ಪ್ರತಿ ಹಳ್ಳಿಗಳಲ್ಲಿ ವಿವಿಧ ಸ್ಪರ್ಧೆಗಳ ಏರ್ಪಡಿಸಿ ಯುವಕರು ಮನರಂಜಿಸಿದರು. ಜೋಕಾಲಿ ಆಡುವ ಮೂಲಕ ಮಹಿಳೆಯರು ಸಂತಸದಿಂದ ಹಬ್ಬ ಆಚರಿಸಿದರು.

Read More

ವಿಜಯಪುರದ ಎನ್.ಜಿ.ಓ ಕಾಲನಿಯಲ್ಲಿ ಸುಮಂಗಲೆಯರು ನಾಗದೇವತೆಗೆ ಹಾಲು ಎರೆದು ಪೂಜೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶಿಷ್ಟ ಹಬ್ಬಗಳ ನಾಡು ನಮ್ಮದು. ನಮ್ಮ ಸಂಸ್ಕೃತಿ, ಐತಿಹ್ಯ ಮತ್ತು ಭವ್ಯ ಪರಂಪರೆಯನ್ನು ಹಬ್ಬಗಳ ಆಚರಣೆ ಮೂಲಕ ಪ್ರತಿಬಿಂಬಿಸುತ್ತದೆ. ಅದರಲ್ಲಿ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇಯ ದಿನದಂದು ಈ ನಾಗರ ಪಂಚಮಿ ಹಬ್ಬವನ್ನು ಮಹಿಳೆಯರು ನಾಗ ದೇವರ ವಿಗ್ರಹಗಳಿಗೆ ಹಾಲು, ಹಣ್ಣು ಮತ್ತು ನೈವೇದ್ಯವನ್ನು ಅರ್ಪಿಸಿ ಭಕ್ತಿ-ಭಾವದಿಂದ ಪೂಜಿಸುತ್ತಾರೆ ಎಂದು ಶ್ರೀಮತಿ ಕಸ್ತೂರಿ ಸಾವಳಗಿ ಅವರು ಅಭಿಪ್ರಾಯಪಟ್ಟರು.ಅವರು ನಗರದ ಅಥಣಿ ರಸ್ತೆಯಲ್ಲಿರುವ ಎನ್.ಜಿ.ಓ ಕಾಲನಿಯಲ್ಲಿರುವ ಜೈ ಆಂಜನೇಯ ದೇವಸ್ಥಾನದಲ್ಲಿ ಜರುಗಿದ ನಾಗದೇವತೆಗೆ ಹಾಲು ಎರೆದು ಪೂಜೆ ಸಲ್ಲಿಸಿ ಆಚರಿಸಿದ ನಾಗರ ಪಂಚಮಿ ಹಬ್ಬದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಹಿಂದೂಗಳು ಹಬ್ಬದ ಆಚರಣೆಯ ಮೂಲಕ ಪ್ರಕೃತಿಯ ಆರಾಧಕರಾಗಿ, ಪ್ರಕೃತಿಯ ಜೀವಿಯಾದ ಹಾವು (ನಾಗರ ಹಾವು) ರಕ್ಷಣೆ ಮತ್ತು ಗೌರವಿಸುವ ಸಂಕೇತದೊಂದಿಗೆ ನಾಗ ದೇವತೆಯನ್ನು ಆರಾಧಿಸಲಾಗುತ್ತದೆ. ಜೀವನದಲ್ಲಿ ಸರ್ಪ ದೋಷ ಮುಕ್ತಿಹೊಂದಲು ಮತ್ತು ಆರೋಗ್ಯ ಭಾಗ್ಯ, ಸಮೃದ್ಧಿ, ಸುಖ-ಶಾಂತಿ…

Read More

ವಿಜಯಪುರದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಪೂರ್ವಭಾವಿ ಸಭೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಗಸ್ಟ್ ೧೫ ರಂದು ಜರಗುವ ಸ್ವಾತಂತ್ರ‍್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ್.ಕೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸ್ವಾತಂತ್ರ‍್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮವನ್ನು ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಅಂದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಶಿಸ್ತಿನ ಪಥಸಂಚಲನ, ಗೌರವ ವಂದನೆ, ಜಿಲ್ಲೆಯ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.ಆಂಬುಲೆನ್ಸ್ ಸಹಿತ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ವೇದಿಕೆ ನಿರ್ಮಾಣ ಮತ್ತು ನಿರ್ವಹಣೆ, ವೇದಿಕೆ ಅಲಂಕಾರ,ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ ಹಾಗೂ ವಿತರಣೆ, ಭದ್ರತೆ, ಕ್ರೀಡಾಂಗಣದ ಸ್ವಚ್ಛತೆ ಸೇರಿದಂತೆ…

ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಹಾಜರಿರುವಂತೆ ಜಿಲ್ಲಾಧಿಕಾರಿ ಡಾ. ಆನಂದ.ಕೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್ ಅವರು ಆಗಸ್ಟ್ ಮಾಹೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದು, ಅಧಿಕಾರಿಗಳು ತಮ್ಮ ಇಲಾಖೆಯ ಸಮಗ್ರ ಪೂರಕ ಮಾಹಿತಿಯೊಂದಿಗೆ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಡಾ.ಆನಂದ್.ಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳು ಆಗಸ್ಟ್ ೮ ರಿಂದ ೧೧ರವರೆಗೆ ಪ್ರವಾಸ ಕೈಗೊಂಡು ವಿವಿಧ ಅಧಿಕಾರಿಗಳೊಂದಿಗೆ ಸಭೆ, ವಿವಿಧ ಕಚೇರಿ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಸಡೆಸಲಿದ್ದು, ಲೋಕಾಯುಕ್ತರ ಸಭೆಗೆ ಅಧಿಕಾರಿಗಳು ತಮ್ಮ ಇಲಾಖೆಯ ಕಡತ ವಿಲೇವಾರಿ ಹಾಗೂ ಬಾಕಿ ಇರುವ ಪ್ರಕರಣಗಳ ಸಮಗ್ರ ಮಾಹಿತಿಯೊಂದಿಗೆ ಉಪಸ್ಥಿತರಿರಬೇಕು ಎಂದು ಸೂಚಿಸಿದರು.ಎಲ್ಲಾ ಕಚೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ದಿನಚರಿ ವಹಿ ಬರೆಯುವುದನ್ನು ರೂಢಿಸಿಕೊಳ್ಳಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಕಚೇರಿಗಳಿಗೆ ಅನಿರೀಕ್ಷಿತ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ರುಕುಂಪೂರ ರಸ್ತೆ ತೆರವು ಹಾಗೂ ವಿವಿದ ಸಮುದಾಯಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹೋರಾಟಕ್ಕೆ ಮಂಗಳವಾರ ಪಟ್ಟಣದ ವಾಹನ ಚಾಲಕರು ಬೆಂಬಲಿಸಿ ಧರಣಿಯಲ್ಲಿ ಪಾಲ್ಗೊಂಡರು.ವಾಹನ ಚಾಲಕ ಸುಬಾಸ ಗೋಳಸಾರ ಮಾತನಾಡಿ, ಪಟ್ಟಣದ ಒಳತಿಗಾಗಿ ಹಮ್ಮಿಕೊಂಡಿರುವ ಈ ಹೋರಾಟಕ್ಕೆ ವಾಹನ ಚಾಲಕರು ಇಂದು ವೃತ್ತಿಯನ್ನು ಬಂದ ಮಾಡಿ ಬೆಂಬಲಿಸಿದ್ದೆವೆ. ಆಲಮೇಲ ಪಟ್ಟಣದ ಒಳತಿಗಾಗಿ ಯಾವುದೆ ಹೋರಾಟ ಹಮ್ಮಿಕೊಂಡರು ಅದಕ್ಕೆ ನಮ್ಮ ವಾಹಾನ ಚಾಲಕರ ಸಂಘದಿಂದ ಬೆಂಬ ನೀಡುವದಾಗಿ ಹೇಳಿದರು.ಹೋರಾಟದ ನೇತೃತ್ವ ವಹಿಸಿದ ಹರಿಶ ಎಂಟಮಾನ, ಶಿವು ಮೇಲಿಮನಿ, ಶಶಿ ನಾಯ್ಕೋಡಿ, ವಾಹನ ಚಾಲಕರಾದ ಸುಬಾಸ ಗೋಳಸಾರ, ರಮೇಶ ಗುರಕಾರ, ಅಬ್ದುಲ್ ಯಾದಗಿರಿ, ಶ್ರೀಶೈಲ ಬಮ್ಮನಹಳ್ಳಿ, ಪಿಂಟು ಕರೆ, ವಿಶ್ವನಾಥ ಬಾಳಿ, ಈರಣ್ಣ ಕನ್ನೂಳ್ಳಿ, ಸಂದೀಪ ಮಾನೆ, ಸಂಜು ಕಾಳೆ, ಸಂದೀಪ ಆಲಮೇಲಕರ, ಸಂತೋಷ ಗುರಕಾರ, ಹಸನ್ ಶೇಖ್, ಬಾಬು ತಾಳಿಕೋಟಿ, ಪ್ರಕಾಶ ಬ್ಯಾಕೋಡ ಮುಂತಾದವರು ಇದ್ದರು.

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ. ೦೫ರ ಉಪ ಚುನಾವಣೆಗೆ ಸಂಬಂಧಿಸಿದಂತೆ ವೇಳಾ ಪಟ್ಟಿಯನ್ನು ನಿಗದಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವೇಳಾಪಟ್ಟಿಯಂತೆ ನಾಮ ಪತ್ರಗಳನ್ನು ಸಲ್ಲಿಸಲು ಆಗಸ್ಟ್ ೫ ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಆಗಸ್ಟ್ ೦೬ ರಂದು ನಡೆಸಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ ೦೮ ಕೊನೆಯ ದಿನಾಂಕವಾಗಿದ್ದು, ಅವಶ್ಯವಿದ್ದಲ್ಲಿ ಆಗಸ್ಟ್ ೧೭ರ ಬೆಳಿಗ್ಗೆ ೦೭ ರಿಂದ ಸಂಜೆ ೦೫ ಗಂಟೆಯವರೆಗೆ ಮತದಾನ ನಡೆಯಲಿದೆ. ಆಗಸ್ಟ್ ೨೦ ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತ ದಿನವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More