Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಆಲಮೇಲ: ರುಕುಂಪೂರ ರಸ್ತೆ ತೆರವು ಹಾಗೂ ವಿವಿದ ಸಮುದಾಯಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹೋರಾಟಕ್ಕೆ ಮಂಗಳವಾರ ಪಟ್ಟಣದ ವಾಹನ ಚಾಲಕರು ಬೆಂಬಲಿಸಿ ಧರಣಿಯಲ್ಲಿ ಪಾಲ್ಗೊಂಡರು.ವಾಹನ ಚಾಲಕ ಸುಬಾಸ ಗೋಳಸಾರ ಮಾತನಾಡಿ, ಪಟ್ಟಣದ ಒಳತಿಗಾಗಿ ಹಮ್ಮಿಕೊಂಡಿರುವ ಈ ಹೋರಾಟಕ್ಕೆ ವಾಹನ ಚಾಲಕರು ಇಂದು ವೃತ್ತಿಯನ್ನು ಬಂದ ಮಾಡಿ ಬೆಂಬಲಿಸಿದ್ದೆವೆ. ಆಲಮೇಲ ಪಟ್ಟಣದ ಒಳತಿಗಾಗಿ ಯಾವುದೆ ಹೋರಾಟ ಹಮ್ಮಿಕೊಂಡರು ಅದಕ್ಕೆ ನಮ್ಮ ವಾಹಾನ ಚಾಲಕರ ಸಂಘದಿಂದ ಬೆಂಬ ನೀಡುವದಾಗಿ ಹೇಳಿದರು.ಹೋರಾಟದ ನೇತೃತ್ವ ವಹಿಸಿದ ಹರಿಶ ಎಂಟಮಾನ, ಶಿವು ಮೇಲಿಮನಿ, ಶಶಿ ನಾಯ್ಕೋಡಿ, ವಾಹನ ಚಾಲಕರಾದ ಸುಬಾಸ ಗೋಳಸಾರ, ರಮೇಶ ಗುರಕಾರ, ಅಬ್ದುಲ್ ಯಾದಗಿರಿ, ಶ್ರೀಶೈಲ ಬಮ್ಮನಹಳ್ಳಿ, ಪಿಂಟು ಕರೆ, ವಿಶ್ವನಾಥ ಬಾಳಿ, ಈರಣ್ಣ ಕನ್ನೂಳ್ಳಿ, ಸಂದೀಪ ಮಾನೆ, ಸಂಜು ಕಾಳೆ, ಸಂದೀಪ ಆಲಮೇಲಕರ, ಸಂತೋಷ ಗುರಕಾರ, ಹಸನ್ ಶೇಖ್, ಬಾಬು ತಾಳಿಕೋಟಿ, ಪ್ರಕಾಶ ಬ್ಯಾಕೋಡ ಮುಂತಾದವರು ಇದ್ದರು.

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ. ೦೫ರ ಉಪ ಚುನಾವಣೆಗೆ ಸಂಬಂಧಿಸಿದಂತೆ ವೇಳಾ ಪಟ್ಟಿಯನ್ನು ನಿಗದಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವೇಳಾಪಟ್ಟಿಯಂತೆ ನಾಮ ಪತ್ರಗಳನ್ನು ಸಲ್ಲಿಸಲು ಆಗಸ್ಟ್ ೫ ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಆಗಸ್ಟ್ ೦೬ ರಂದು ನಡೆಸಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ ೦೮ ಕೊನೆಯ ದಿನಾಂಕವಾಗಿದ್ದು, ಅವಶ್ಯವಿದ್ದಲ್ಲಿ ಆಗಸ್ಟ್ ೧೭ರ ಬೆಳಿಗ್ಗೆ ೦೭ ರಿಂದ ಸಂಜೆ ೦೫ ಗಂಟೆಯವರೆಗೆ ಮತದಾನ ನಡೆಯಲಿದೆ. ಆಗಸ್ಟ್ ೨೦ ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತ ದಿನವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇವರ ಮೂಲಕ ತಿಕೋಟಾದ ಬಿ.ಎಲ್.ಡಿ.ಈ ಸಂಸ್ಥೆಯ ಶ್ರೀ ಎ.ಬಿ.ಜತ್ತಿ ಪ.ಪೂ. ಕಾಲೇಜು ಆವರಣದಲ್ಲಿ ನಡೆದ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ತಿಕೋಟಾ ತಹಶೀಲ್ದಾರ ಸುರೇಶ ಚವಲರ್ ಅವರು ಉದ್ಘಾಟಿಸಿ ಮಾತನಾಡಿ, ಯುವಕರಲ್ಲಿ ಅಡಗಿರುವ ಕಲಾ ಪ್ರತಿಭೆಯ ಅನಾವರಣಕ್ಕೆ ಈ ಕಾರ್ಯಕ್ರಮ ಅತ್ಯಂತ ಸೂಕ್ತವಾಗಿದೆ. ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಸೂಪ್ತ ಪ್ರತಿಭೆ ಬೆಳಕಿಗೆ ಬರಲು ಪೂರಕವಾಗಿ ಇಂತಹ ಕಾರ್ಯಕ್ರಮಗಳು ಇಂದಿನ ಅಗತ್ಯಗಳಲ್ಲಿ ಬಹುಮುಖ್ಯವಾಗಿದೆ. ಸಾಂಸ್ಕೃತಿಕವಾಗಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಅವರಲ್ಲಿನ ಸೃಜನಾತ್ಮಕ ಕಲೆಗೆ ಪ್ರೋತ್ಸಾಹ ದೊರೆತು ಕಲಾ ಪ್ರೌಢಿಮೆ ಮತ್ತಷ್ಟು ಗಟ್ಟಿಗೊಳ್ಳುತ್ತದೆ ಎಂದು ಅವರು ಹೇಳಿದರು. ನಾಡಿನ ಕಲೆ ಸಂಸ್ಕೃತಿಯನ್ನು ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಿಕೋಟಾದ ಶ್ರೀ ಎ.ಬಿ. ಜತ್ತಿಪ.ಪೂ. ಕಾಲೇಜಿನ ಪ್ರಾಚಾರ್ಯರಾದ ಸಿ.ಬಿ.ಪಾಟೀಲ ಇವರು ಶಾಲಾ ಕಾಲೇಜುಗಳಲ್ಲಿ…
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಯಡಿ ಬೆಳೆಗಳಿಗೆ ಮುಂಗಾರು ಹಂಗಾಮಿ ಬೆಳೆ ವಿಮೆಗೆ ಓರಿಯಂಟಲ್ ಜನರಲ್ ಇನ್ಸುರೆನ್ಸ್ ಕಂಪನಿಗೆ ಹಂಚಿಕೆಯಾಗಿದ್ದು, ರೈತರು ವಿಮೆ ಕಂತು ಭರ್ತಿ ಮಾಡಬಹುದಾಗಿದೆ.ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳಾದ ಮಳೆ ಆಶ್ರಿತ ಹಾಗೂ ನೀರಾವರಿ ಆಶ್ರಿತ ತೊಗರಿ, ಮಳೆ ಆಶ್ರಿತ ಸಜ್ಜೆ ಹಾಗೂ ನೀರಾವರಿ ಮುಸುಕಿನ ಜೋಳ ಬೆಳೆ ಹಾಗೂ ಹೋಬಳಿ ಮಟ್ಟದ ಬೆಳೆ ನೀರಾವರಿ ಆಶ್ರಿತ ಶೇಂಗಾ ಸೇರಿದಂತೆ ಇತರ ಬೆಳೆ ವಿಮೆಗೆ ಕಂತು ತುಂಬಲು ಜುಲೈ ೩೧ ಕೊನೆಯ ದಿನವಾಗಿದೆ.ಮಳೆ ಆಶ್ರಿತ ಹತ್ತಿ ಬೆಳೆ, ನೀರಾವರಿ ಆಶ್ರಿತ ಈರುಳ್ಳಿ ಹಾಗೂ ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ಕಂತು ತುಂಬಲು ಆಗಸ್ಟ್ ೧೬ ಕೊನೆಯ ದಿನವಾಗಿದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ಕೃಷಿ ಇಲಾಖೆಯ ಕಚೇರಿ ಹಾಗೂ ಓರಿಯಂಟಲ್ ಜನರಲ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯ ಕುಮಟಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ , ನಿ ಹಾಗೂ ಕಗ್ಗೋಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘನಿ, ಸಹಕಾರ ಸಂಘಗಳು ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸದೇ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ೧೯೫೯ರ ಅಡಿಯಲ್ಲಿ ಸಮಾಪನೆಗೊಳಿಸಲು ಕ್ರಮವಹಿಸಲು ಅವಕಾಶವಿದೆ.ಸಂಘದ ಸದಸ್ಯರು, ಆಡಳಿತ ಮಂಡಳಿಯವರು ಕಾರ್ಯನಿರ್ವಹಿಸದೇ ಸ್ಥಗಿತಗೊಂಡ ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ತಮ್ಮ ಆಕ್ಷೇಪಣೆಗಳು ಇದ್ದಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರು ವಿಜಯಪುರ ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ ಈ ಪ್ರಕಟಣೆ ಹೊರಡಿಸಿದ ೧೫ ದಿನಗಳ ಒಳಗಾಗಿ ಸಲ್ಲಿಸಬೇಕು. ತಪ್ಪಿದಲ್ಲಿ ನೋಂದಣಿ ರದ್ಧತಿಗಾಗಿ ಕ್ರಮ ತೆಗೆದುಕೊಳ್ಳಲಾಗುವುದೆಂದು ವಿಜಯಪುರದ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಲ್ಹಾರ, ತಿಕೋಟಾ ಹಾಗೂ ವಿಜಯಪುರ ತಾಲೂಕುಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ ಮಿಷನ್ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿ.ಪಂ. ಸಿಇಓ ರಿಷಿ ಆನಂದ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಜುಲೈ ೨೮ ರಂದು ಕೊಲ್ಹಾರ ತಾಲೂಕಿನ ತೆಲಗಿ, ರೋಣಿಹಾಳ ಮತ್ತು ಮುಳವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಲಗಿ ಎಲ್ ಟಿ, ಚೀರಲದಿನ್ನಿ ರೋಣಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೋಣಿಹಾಳ, ಕುಪಕಡ್ಡಿ ಗ್ರಾಮಕ್ಕೆ ಹಾಗೂ ಮುಳವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಳವಾಡ ಸ್ಟೇಶನ್ ಮುಳವಾಡ ಗ್ರಾಮ, ತಿಕೋಟಾ ತಾಲೂಕಿನ ಬರಟಗಿ ಎಲ್.ಟಿ ಹಾಗೂ ವಿಜಯಪುರ ತಾಲೂಕಿನ ತಿಡಗುಂದಿ, ಡೊಮ್ಮನಾಳ, ಮತ್ತು ಡೊಮ್ಮನಾಳ,ಎಲ್ ಟಿ-೧ ಮತ್ತು ಡೊಮ್ಮನಾಳ ಎಲ್ ಟಿ-೨ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಕೈಗೊಂಡ ಪ್ರತಿ ಗ್ರಾಮಗಳಿಗೆ ಪ್ರತಿ ಮನೆ -…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಮಾದಿಗರ ಸಂಘಟನೆಗಳ ಒಕ್ಕೂಟದ ವತಿಯಿಂದ ಅಗಸ್ಟ ೧ರಂದು ಒಳ ಮೀಸಲಾತಿಗಾಗಿ ಹೋರಾಟ ಮಾಡಲು ನಗರದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಮಾದಿಗರ ಸಂಘಟಣೆಗಳ ಒಕ್ಕೂಟ ಜಿಲ್ಲಾಧ್ಯಕ್ಷ ಶ್ರೀಶೈಲ ರತ್ನಾಕರ ಮಾತನಾಡಿ, ನಿವೃತ್ತ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ಹಾಗೂ ಜೆ.ಸಿ ಮಾಧುಸ್ವಾಮಿ ವರದಿಯಂತೆ ಪರಿಗಣಿಸಲು ಅಗಷ್ಟ ೧೫ ರ ಒಳಗೆ ಪರೀಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೋಳಿಸಬೇಕು ಇಲ್ಲದಿದ್ದರೆ ರಾಜ್ಯವ್ಯಾಪ್ತಿ ಗಂಭೀರ ಸ್ವರೂಪದ ಹೊರಾಟ ನಡೆಸಲಾಗುವುದು. ರಾಜ್ಯದಲ್ಲಿ ಪರೀಶಿಷ್ಟ ಜಾತಿಗೆ ಇರುವ ಶೇ%೧೫ ರಷ್ಟು ಮೀಸಲಾತಿಯಲ್ಲಿ ಮಾದರ, ಸಮಗಾರ, ಡೋರ, ಮಚಗಾರ, ಸಮುದಾಯದವರಿಗೆ ಶೇ%೬ ರಷ್ಟು ಒಳ ಮೀಸಲಾತಿ ನೀಡುವಂತೆ ಆಯೋಗ ಶಿಫಾರಸು ಮಾಡಿದೆ, ಆದರೆ ಸದ್ಯದ ಸರ್ಕಾರದಲ್ಲಿ ಇರುವು ಕೇಲವರು ಒಳಮೀಸಲಾತಿ ಜಾರಿಯಾಗಲು ಅಡಿಪಡಿಸುತ್ತಿದ್ದಾರೆ. ಹಿಂತವರ ಮಾತಿಗೆ ಮುಖ್ಯಮಂತ್ರಿಗಳು ಕಿವಿ ಕೊಡಬಾರದು. ಒಳ ಮೀಸಲಾತಿಗಾಗಿ ಸುಮಾರು ೪೦ ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಅಗಸ್ಟ ೧೫ ರ ಒಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದರೆ ಅಗಸ್ಟ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನಪದ ಸಾಹಿತ್ಯ ನಮ್ಮ ಸಂಸ್ಕೃತಿಯ ಪ್ರತೀಕ. ನಮ್ಮೆಲ್ಲರ ಜೀವನಾಡಿಯಾಗಿರುವ ಜಾನಪದ ಸಾಹಿತ್ಯ ಇಂದು ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇಯಾದ ವಿಶಿಷ್ಟ ಛಾಪನ್ನು ಮೂಡಿಸುವ ಮೂಲಕ ಮಾತೃ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದ ಕೀರ್ತಿ ಜನಪದ ಸಾಹಿತ್ಯಕ್ಕೆ ಸಲ್ಲುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಭಿಪ್ರಾಯಪಟ್ಟರು. ವಿಜಯಪುರ ನಗರದ ಬಸವನ ಬಾಗೇವಾಡಿ ರಸ್ತೆಯಲ್ಲಿರುವ ರೇಣುಕಾ ನಗರ ಹಾಗೂ ಕೃಷಿ ನಗರದ ಬಡಾವಣೆಯಲ್ಲಿ ಮಂಗಳವಾರ ಸಂಜೆ ಶ್ರೀ ಮಲ್ಲಿಕಾರ್ಜುನ ದೇವಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಸಾಂಸ್ಕೃತಿಕ ಸಂಜೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಲ್ಲಿಕಾರ್ಜುನ ಸೇವಾ ಸಮಿತಿ ಇವರ ಸಹಯೋಗದಲ್ಲಿ ಜರುಗಿದ “ಜನಪದ ವೈಭವ” ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಪದ ಸಾಹಿತ್ಯ ನಮ್ಮೆಲ್ಲರ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಇಂತಹ ಸಾಹಿತ್ಯದ ಮೂಲಕ ಮಕ್ಕಳಲ್ಲಿ ಆಚಾರ-ವಿಚಾರ, ಸಂಸ್ಕೃತಿ, ಸಂಸ್ಕಾರಗಳನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.ಅಧ್ಯಕ್ಷತೆ ವಹಿಸಿದ್ದ ಸಿಂದಗಿಯ ಹಿರಿಯ ಜಾನಪದ ವಿದ್ವಾಂಸ…