Author: editor.udayarashmi@gmail.com

ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ? | ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ. ಈ ವಿಚಾರದಲ್ಲಿ ನನಗೆ ಏನೂ ಕಷ್ಟವಾಗದಿದ್ದರೂ, ನಿಮಗೆ ಏಕೆ (ಮಾಧ್ಯಮಗಳು) ಕಷ್ಟವಾಗುತ್ತಿದೆ ಎಂದು ಮರುಪ್ರಶ್ನಿಸಿದರು.ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಕರೆದಿಲ್ಲ ಎಂದಾಗ, “ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕೃಷಿ ವಿಶ್ವವಿದ್ಯಾಲಯದಲ್ಲಿ ಮತ್ತು ಕೃಷಿ ಇಲಾಖೆಯಲ್ಲಿ ರೈತರ ಏಳಿಗೆಗೆ ಪೂರಕವಾಗಿ ಕೆಲಸ ಮಾಡಿದ ಸರಕಾರಿ ಕೃಷಿ ಅಧಿಕಾರಿ ಡಾ.ಆರ್.ಬಿ.ಬೆಳ್ಳಿಯವರ ಸೇವೆ ವರ್ಣತಾತೀತ ಎಂದು ಬೀದರದ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಿವೃತ್ತಗೊಂಡ ಡಾ. ಬೆಳ್ಳಿಯವರಿಗೆ ಸನ್ಮಾನ ಸಮಾರಂಭ ಮತ್ತು ಕುರಿ ಮತ್ತು ಆಡು ತರಬೇತಿ ಕಾರ್ಯಕ್ರಮದಲ್ಲಿ ಡಾ. ಬೆಳ್ಳಿಯವರ ಸನ್ಮಾನ ಕುರಿತು ಮಾತನಾಡಿದರು.ಕೃಷಿ ಉಪ ನಿರ್ದೇಶಕ ಚಂದ್ರಕಾಂತ ಪವಾರ ಮಾತನಾಡಿ ಬೆಳ್ಳಿಯವರದು ರೈತರೊಂದಿಗೆ ಒಳ್ಳೆಯ ಒಡನಾಟ, ರೈತರಿಗೆ ಮಾಹಿತಿ ನೀಡಿ ಬೆಳೆ ಬೆಳೆಸುವಲ್ಲಿ ಹೆಚ್ಚಿನ ಉತ್ಪಾದನೆ ಮಾಡಿಸುವಲ್ಲಿ ಬೆಳ್ಳಿ ಕಾರ್ಯ ಶ್ಲಾಘನೀಯ. ಬೆಳ್ಳಿಯವರು ತಮ್ಮ ಮನೆಯಲ್ಲಿ ಹೆಚ್ಚು ರೈತರು ಬಂದರೆ ಅದಕ್ಕೆಂದೆ ಒಂದು ಸಭಾ ಭವನ ನಿರ್ಮಿಸಿ ಅಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುವದು ಅವರು ರೈತರ ಕಾಳಜಿ ತೋರಿಸುತ್ತದೆ ಎಂದರು.ಸನ್ಮಾನಿತ ಡಾ. ಆರ್.ಬಿ.ಬೆಳ್ಳಿ, ಕೃಷಿ ವಿವಿ ವಿದ್ಯಾರ್ಥಿ ಮಲ್ಲಿಕಾರ್ಜುನ, ಶ್ರೀಶೈಲ ಆಳೂರ, ಚಂದ್ರಶೇಖರ ಪಾಸೋಡಿ, ಎಸ್.ಟಿ.ಪಾಟೀಲ, ಮುತ್ತುಗೌಡ ಪಾಟೀಲ, ಕೃಷಿ ವಿಜ್ಞಾನ ಕೇಂದ್ರದ ಡಾ.…

Read More

ಸಿಂದಗಿಯಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಉದ್ಘಾಟಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯ ಸರ್ಕಾರ ೫ಗ್ಯಾರಂಟಿಗಳ ನಡುವೆ ರಾಜ್ಯವನ್ನು ಅತ್ಯಂತ ಸಮಗ್ರವಾಗಿ ಮುಂದುವರೆಸಿಕೊಂಡು ಹೋಗುತ್ತಿದೆ. ಕಾಂಗ್ರೆಸ್ ಸರಕಾರ ಕ್ಷೇತ್ರದ ಅಭಿವೃದ್ಧಿಗೆ ಶಾಸಕರಿಗೆ ರೂ.೫೦ಕೋಟಿ ಅನುದಾನವನ್ನು ನೀಡುತ್ತಿದ್ದಾರೆ. ಮತ್ತು ಅರಣ್ಯ ಇಲಾಖೆಯಿಂದ ಪ್ರತಿ ಶಾಸಕರಿಗೆ ರೂ.೦೧ಕೋಟಿ ಅನುದಾನವನ್ನು ಬಿಡುಗಡೆ ಮಾಡಿದ್ದೇವೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.ಸಿಂದಗಿ ಪಟ್ಟಣದ ಹೊನ್ನಪ್ಪಗೌಡ ಲೇಔಟ್‌ನಲ್ಲಿ ನಿರ್ಮಾಣಗೊಂಡ ಕರ್ನಾಟಕ ಅರಣ್ಯ ಇಲಾಖೆ, ವಿಜಯಪುರ ಹಾಗೂ ಸಿಂದಗಿ ಪ್ರಾದೇಶಿಕ ಅರಣ್ಯ ವಲಯ ವತಿಯಿಂದ ಹಮ್ಮಿಕೊಂಡ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿ ವಿಕೋಪ, ಹವಾಮಾನ ವೈಪರಿತ್ಯ ಜಗತ್ತಿನ ಜನರಿಗೆ ಕಾಡುವ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಜನ ತತ್ತರಿಸಿ ಹೋಗಿದ್ದಾರೆ. ಬದುಕು ಅಸ್ಥಿರವಾಗುತ್ತಿದೆ. ಬೀಗಿದೆ ಬರುವಂತಹ ಸ್ಥಿತಿಗೆ ಬರುವ ನಿರ್ಮಾಣವಾಗಿದೆ. ಇದಕ್ಕೆಲ್ಲ ಮೂಲ ಕಾರಣ ಪ್ರಕೃತಿ ನಾಶವೇ ವಿನಃ ಬೇರೆ ಯಾವುದು ಅಲ್ಲ ಎಂದು ವಿಷಾದವ್ಯಕ್ತಪಡಿಸಿದರು.ಕರೋನ ಸಂದರ್ಭದಲ್ಲಿ ಆಮ್ಲಜನಕದ ಕೊರತೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಧಾರವಾಡ ಚೇತನ ಪೌಂಡೇಶನ್ ಹಮ್ಮಿಕೊಂಡ ವಿಜಯಪುರ ನುಡಿ ಸಡಗರ ಕಾರ್ಯಕ್ರಮದಲ್ಲಿ ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಕಾಲೇಜಿನ ಉಪನ್ಯಾಸಕಿ ಹೇಮಾ ಹಿರೇಮಠ ಅವರಿಗೆ ಕಂಚ್ಯಾಣಿ ಶರಣಪ್ಪ ಸ್ಮರಣಿಯ ಶಿಕ್ಷಕರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು.ಈ ವೇಳೆ ಸಮ್ಮೇಳನಾಧ್ಯಕ್ಷ, ಕಸಾಪ ಜಿಲ್ಲಾ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಸಾಹಿತಿ ಪಂಡಿತ ಅವಜಿ, ಬಸವರಾಜ ಕುಂಬಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಶೇಷವಾಗಿ ಹೆಣ್ಣು ಮಕ್ಕಳು ಅತೀ ಸಡಗರ ಸಂಭ್ರಮದಿಂದ ಆಚರಿಸುವ ಹಬ್ಬ ಅದು ನಾಗರ ಪಂಚಮಿ ಹಬ್ಬ. ಈ ಹಬ್ಬಕ್ಕೆ ಮದುವೆಯಾದ ಹೆಣ್ಣು ಮಕ್ಕಳನ್ನು ತವರಿಗೆ ಕರೆದುಕೊಂಡು ಬರುವ ಪದ್ಧತಿ ಉತ್ತರ ಕರ್ನಾಟಕದಲ್ಲಿ ಇಂದಿಗೂ ಪ್ರಚಲಿತದಲ್ಲಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಾಗರ ಪಂಚಮಿ ದೊಡ್ಡ ಹಬ್ಬವೆಂದೇ ಹೇಳಬಹುದು.ಶ್ರಾವಣ ಮಾಸದ ಮೊದಲನೆ ಹಬ್ಬವಾದ ನಾಗರ ಪಂಚಮಿಯನ್ನು ಚಡಚಣ ತಾಲ್ಲೂಕಿನಾದ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.ಬೆಳ್ಳಂಬೆಳಗ್ಗೆ ಮಹಿಳೆಯರು ಮನೆ ಮುಂದೆ ರಂಗೋಲಿ ಹಾಕುವ ಮೂಲಕ ಶ್ರಾವಣ ಮಾಸದ ಮೊದಲ ಹಬ್ಬವಾದ ಪಂಚಮಿಯನ್ನು ಸಂಭ್ರಮದಿಂದ ಸ್ವಾಗತಿಸಿದರು.ಚಡಚಣ ಪಟ್ಟಣದ ಬಸವೇಶ್ವರ ನಗರದ ಮುತ್ತೈದೆಯರು ಮಕ್ಕಳೊಂದಿಗೆ ಸೇರಿ ಹೊಸ ಬಟ್ಟೆ ತೊಟ್ಟು, ಕಲ್ಲು ನಾಗರ ಕಟ್ಟೆಗಳಿಗೆ ತೆರಳಿ ಕುಟುಂಬದ ಎಲ್ಲರಿಗೂ ಒಳ್ಳೆಯದಾಗಲೆಂದು ಬೇಡಿಕೊಳ್ಳುತ್ತಾ ದೇವರಿಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು.ಗೃಹಿಣಿಯರು ಅತ್ಯಂತ ಸಂಭ್ರಮದಿಂದ ತಮ್ಮ ಅಕ್ಕಪಕ್ಕದ ಮನೆಗಳಿಗೆ ಹಾಗೂ‌ ಬಂಧು ಮಿತ್ರರ ಮನೆಗಳಿಗೆ ತೆರಳಿ‌ ತಾವು ತಯಾರಿಸಿದ ಎಲ್ಲ ವಿಧದ ಖಾದ್ಯಗಳನ್ನ ಒಳಗೊಂಡ ಬುತ್ತಿಯನ್ನು ಹಂಚಿ ಬಂದರು.ಹೀಗೆ ಒಬ್ಬರಿಗೊಬ್ಬರು ಮನೆಗಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ನಾಡಿನಲ್ಲಿ ಶ್ರಾವಣ ಮಾಸದ ಆರಂಭವಾಗುತ್ತಿದ್ದಂತೆ ಪಟ್ಟಣ ಸೇರಿದಂತೆ ತಾಲೂಕಿನಲ್ಲಿರುವ ಎಲ್ಲ ದೇವಸ್ಥಾನಗಳಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ, ರುದ್ರಾಭಿಷೇಕ,ದೇವರಿಗೆ ಭಕ್ತರು ಹರಕೆ ಸಲ್ಲಿಸುವುದು, ಪುರಾಣ-ಪ್ರವಚನ ಆರಂಭ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರಾವಣ ಮಾಸದ ಮೊದಲ ದಿನವಾದ ಸೋಮವಾರ ಆರಂಭವಾದವು.ಎಲ್ಲ ಮಾಸಗಳಲ್ಲಿ ಶ್ರಾವಣ ಮಾಸ ಹಿಂದುಗಳಿಗೆ ಪವಿತ್ರ ಮಾಸವಾಗಿದೆ. ಈ ಮಾಸದಲ್ಲಿ ಜನರು ಉಪವಾಸ ವ್ರತ ಮಾಡುವದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸಹಜ. ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಆರಂಭವಾಗುತ್ತವೆ. ಈ ಮಾಸದಲ್ಲಿ ನಾಗರಪಂಚಮಿ ಮೊದಲ ಬರುವ ಹಬ್ಬವಾಗಿದೆ. ನಂತರ ವರಮಹಾಲಕ್ಷ್ಮೀ ಪೂಜೆ, ಕೃಷ್ಣ ಜನ್ಮಾಷ್ಟಮಿ, ನೂಲ ಹುಣ್ಣಿಮೆಯಂದು ರಕ್ಷಾ ಬಂಧನ ಹಬ್ಬ, ರಾಘವೇಂದ್ರ ಸ್ವಾಮೀಜಿಗಳ ಆರಾಧನೆ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಶ್ರಾವಣ ಮಾಸದಲ್ಲಿನ ಪ್ರತಿ ಶುಕ್ರವಾರ ಸುಮಂಗಲೆಯರು ಲಕ್ಷ್ಮೀ ಪೂಜೆ ಮಾಡುವುದು ವಿಶೇಷ.ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ದೇವರಿಗೂ ಸಹ ಪ್ರತಿ ಶ್ರಾವಣ ಮಾಸದಲ್ಲಿ ಒಂದು ತಿಂಗಳ ಕಾಲ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ನಿಡಗುಂದಿ ತಾಲೂಕಿನ ಬ್ಯಾಲ್ಯಾಳ ಗ್ರಾಮಸ್ಥರು ಕಲುಷಿತ ನೀರು ಸೇವಿಸಿ ಅಸ್ತವ್ಯಸ್ಥಗೊಂಡು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಾದ ಜನರ ಆರೋಗ್ಯವನ್ನು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.ಪಟ್ಟಣದ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಆಸ್ಪತೆಗೆ ದಾಖಲಾದ ಹತ್ತು ಜನರ ಆರೋಗ್ಯವನ್ನು ವಿಚಾರಿಸಿದರು. ನಂತರ ವೈದ್ಯಾಧಿಕಾರಿಗಳಿಗೆ ಸೂಕ್ತವಾದ ಚಿಕಿತ್ಸೆ ನೀಡಬೇಕೆಂದರು.ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಾಬೀರ ಪಟೇಲ ಅವರು, ಬ್ಯಾಲ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಗ್ರಾಮಸ್ಥರು ವಾಂತಿ, ಭೇದಿಯಿಂದ ಬಳಲುತ್ತಿದ್ದಾರೆ. ಶನಿವಾರದಿಂದಲೇ ನಮ್ಮ ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಿದ್ದಾರೆ. ಆಸ್ಪತ್ರೆಗೆ ಬರುವ ಎಲ್ಲರಿಗೂ ಸೂಕ್ತವಾದ ಚಿಕಿತ್ಸೆ ನೀಡಿ ಉಪಚರಿಸಲಾಗುತ್ತಿದೆ. ಈಗಾಗಲೇ ಕೆಲವರು ಆರಾಮವಾಗಿ ಮನೆಗೆ ತೆರಳಿದ್ದಾರೆ. ಈಗ ಮಕ್ಕಳು ಸೇರಿದಂತೆ ಹತ್ತು ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕೆಲವರು ಇಟಗಿ ಗ್ರಾಮದಲ್ಲಿರುವ ಆರೋಗ್ಯ ಕೇಂದ್ರದಲ್ಲಿಯೂ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಕವಿತಾ ದೊಡಮನಿ, ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಡಾ.ಅಪ್ಪಾಸಾಬ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಮಂಗಳವಾರ ನಾಗರ ಪಂಚಮಿ ಹಬ್ಬವನ್ನು ಜನರು ಶ್ರದ್ದಾ ಭಕ್ತಿಯಿಂದ ಸಂಭ್ರಮದಿಂದ ಆಚರಿಸಿದರು.ಸೋಮವಾರ ಮನೆಯಲ್ಲಿ ಮನೆಯ ಎಲ್ಲ ಸದಸ್ಯರ ಹೆಸರು ಹೇಳುವ ಮೂಲಕ ನಾಗದೇವರಿಗೆ ಹಾಲು ಎರೆಯುವ ಮೂಲಕ ಒಳಗಡೆ ಹಾಲು ಎರೆಯುವ ಹಬ್ಬವನ್ನು ಆಚರಿಸಿದ್ದರು. ಇಂದು ಮನೆಯ ಹೊರಗೆ ಹಾಲು ಎರೆಯುವ ಹಬ್ಬವಿರುವದರಿಂದಾಗಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಬಸವ ತೀರ್ಥ ಬಳಿಯಿರುವ ಅರಳಿ ಮರ ಹಾಗೂ ಬನ್ನಿಮರದ ಕೆಳಗೆ ಇರುವ ನಾಗದೇವನಿಗೆ, ಮಹಾರಾಜ ಮಠದ ಹತ್ತಿರವಿರುವ ನಾಗದೇವತೆ, ವೀರಭದ್ರೇಶ್ವರ ನಗರದಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನದಲ್ಲಿರುವ ನಾಗದೇವತೆ ಮೂರ್ತಿಗೆ ಸೇರಿದಂತೆ ವಿವಿಧ ದೇವಸ್ಥಾನದಲ್ಲಿರುವ ಕಲ್ಲುನಾಗದೇವರಿಗೆ ಸುಮಂಗಲೆಯರು ತಮ್ಮ ಮಕ್ಕಳೊಂದಿಗೆ ಸೇರಿ ನಾಗದೇವನಿಗೆ ಹಾಲೆರೆದು ಪೂಜೆ ಸಲ್ಲಿಸಿದರು.ನಾಗದೇವತೆ ಇರುವ ದೇವಸ್ಥಾನಗಳ ಕಡೆಗೆ ಸುಮಂಗಲೆಯರು ತೆರಳಿ ಪಂಚಮಿ ಹಬ್ಬದಂಗವಾಗಿ ತಯಾರಿಸಿದ ವಿವಿಧ ಬಗೆಯ ಸಿಹಿ ತಿಂಡಿಗಳು, ಖಾದ್ಯಗಳು ದೇವರಿಗೆ ನೈವೇದ್ಯ ಅರ್ಪಿಸಿ ಭಕ್ತಿ ಮೆರೆದರು. ಪಂಚಮಿ ಹಬ್ಬದಂಗವಾಗಿ ಮಹಿಳೆಯರು ಮಕ್ಕಳು ಹೊಸ ಬಟ್ಟೆ ಧರಿಸಿ ಮನೆಗಳಲ್ಲಿ ಕಟ್ಟಿರುವ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಹಬ್ಬಗಳು ಮನುಷ್ಯನ ಪ್ರಗತಿಗೆ ಪೂರಕವಾಗಿದ್ದರೂ ಕೆಲವು ಆಚರಣೆಗಳು ಮೂಢನಂಬಿಕೆಗೆ ಪ್ರಚೋದನೆ ನೀಡುತ್ತಿವೆ. ಇದನ್ನು ಹೋಗಲಾಡಿಸಲು ಬಸವ ಪಂಚಮಿಯಂದು ಹಾಲನ್ನು ರೋಗಿಗಳಿಗೆ ವಿತರಿಸುವ ಮೂಲಕ ಬಸವ ಪಂಚಮಿಯನ್ನಾಗಿ ಆಚರಿಸಲಾಗುತ್ತಿದೆ ಎಂದು ಅಥಣಿಯ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಹೇಳಿದರು.ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯು ಬಸವ ಪಂಚಮಿ ಹಬ್ಬದಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಬಡ ರೋಗಿಗಳಿಗೆ ಹಾಲು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹುತ್ತಕ್ಕೆ ಹಾಲು ಸುರಿದು ಅವೈಜ್ಞಾನಿಕವಾಗಿ ಆಚರಣೆಗೆ ಜನರು ಮುಂದಾಗುತ್ತಾರೆ. ಇದರಿಂದ ಅಪಾರ ಪ್ರಮಾಣ ಹಾಲು ವ್ಯರ್ಥವಾಗುತ್ತಿದೆ. ನಮ್ಮ ರಾಜ್ಯವೊಂದರಲ್ಲೇ ಪ್ರತಿ ವರ್ಷ ಅಪೌಷ್ಟಿಕತೆಯಿಂದ ಸಾವಿರಾರು ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಹಾಲನ್ನು ವ್ಯರ್ಥ ಮಾಡುವ ಬದಲಿಗೆ ಮಕ್ಕಳಿಗೆ ಮತ್ತು ಬಡವರಿಗೆ ಕೊಟ್ಟರೆ ಅದು ಅಮೃತವಾಗುತ್ತದೆ. ಈ ಕುರಿತು ಜನರು ಚಿಂತಿಸಬೇಕು ಎಂದರು.ಬಡ ಮಕ್ಕಳು, ಅನಾಥರು ಹಾಗೂ ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಈ ಹಾಲು ಹಂಚುವ ಮೂಲಕ ರಾಷ್ಟ್ರೀಯ ಬಸವಸೈನ್ಯ ಅರ್ಥಪೂರ್ಣವಾಗಿ ಹಬ್ಬ ಆಚರಿಸುತ್ತಿರುವುದು ಬದಲಾವಣೆಯ ಸಂಕೇತವಾಗಿದೆ. ಎಲ್ಲರೂ ಮೂಢನಂಬಿಕೆಯಿಂದ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸಮಾಜವನ್ನು ವೈಚಾರಿಕ ಪ್ರಜ್ಞೆಯೊಂದಿಗೆ ಮಾದರಿ ಸಮಾಜ ರೂಪಿಸಲು ಬಸವಾದಿ ಶರಣರು ಪ್ರಯತ್ನ ನಡೆಸಿದ್ದರು. ವಿಶ್ವಗುರು ಬಸವೇಶ್ವರರ ಲಿಂಗೈಕ್ಯರಾದ ಪುಣ್ಯದಿನವಾದ ಇಂದು ನಾಗಪಂಚಮಿ ದಿನದಂದು ಕಲ್ಲು ನಾಗದೇವರಿಗೆ ಹಾಲು ಎರೆಯದೇ ಪೌಷ್ಟಿಕ ಆಹಾರವಾದ ಹಾಲನ್ನು ಮಕ್ಕಳಿಗೆ ಕುಡಿಯಲು ಕೊಡುವ ಮೂಲಕ ಶರಣರ ವೈಚಾರಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳವಂತಾಗಬೇಕೆಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ನಂದೀಶ್ವರ ರಂಗಮಂದಿರದಲ್ಲಿ ಬಸವೇಶ್ವರ ಸೇವಾ ಸಮಿತಿ, ಬಸವೇಶ್ವರ ಜಾತ್ರಾ ಉತ್ಸವ ಸಮಿತಿಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಬಸವೇಶ್ವರ ದೇವಾಲಯ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಗೆ ಹಾಲು ವಿತರಿಸಿ ಮಾತನಾಡಿದ ಅವರು, ಪೌಷ್ಟಿಕ ಆಹಾರವಾಗಿರುವ ಹಾಲನ್ನು ಕಲ್ಲು ಮಣ್ಣಿನ ಮೇಲೆ ಸುರಿಯುವುದು ಸಲ್ಲದು. ಬಸವ ಪಂಚಮಿ ಆಚರಿಸುವ ಮೂಲಕ ಕಲ್ಲು-ಮಣ್ಣನ್ನು ದೇವರೆಂದು ತಿಳಿದು ಅದರ ಮೇಲೆ ಹಾಲು ಸುರಿದು ಹಾಳು ಮಾಡುವ ಮೌಢ್ಯನಂಬಿಕೆ ಹೋಗಲಾಡಿಸುವಂತಾಗಬೇಕು. ಮೌಢ್ಯ-ಕಂದಾಚಾರಗಳನ್ನು ಬಿಡಬೇಕು. ಮಾನವೀಯ ಮೌಲ್ಯದ ಆಚರಣೆಗಳನ್ನು ಅಳವಡಿಸಿಕೊಳ್ಳುವಂತಾಗಬೇಕೆಂದರು.ಅಥಣಿ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಮಾತನಾಡಿ, ನಾಡಿನಲ್ಲಿ ಶುದ್ಧ…

Read More