Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಾಲದ ಹಣಕ್ಕೆ ನೀಡಿದ್ದ ಚೆಕ್, ಬೌನ್ಸ್ ಆದ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ಘೋಷಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ರಾಮಮೂರ್ತಿ ಎನ್ ಅವರು ಮಹತ್ವದ ತೀರ್ಪು ನೀಡಿದ್ದಾರೆ.ತಾಳಿಕೋಟೆ ನಿವಾಸಿ ರವಿಚಂದ್ರ ಬಿರಾದಾರ ಅವರ ಪರವಾಗಿ ಎನ್.ಜಿ.ಕುಲಕರ್ಣಿ ವಕೀಲರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ಸಂಗಮೇಶ್ ಅಲಿಯಾಸ್ ಸಂಗು ದೇಸಾಯಿ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿತು.ದೂರಿನ ಪ್ರಕಾರ, ಆರೋಪಿ ೨೦೧೮ರಲ್ಲಿ ₹೨ ಲಕ್ಷ ಕೈ ಸಾಲ ಪಡೆದು, ಅದರ ಮರುಪಾವತಿಗಾಗಿ ನೀಡಿದ್ದ ಚೆಕ್ ಬ್ಯಾಂಕ್‌ನಲ್ಲಿ “ಈuಟಿಜs Iಟಿsuಜಿಜಿiಛಿieಟಿಣ” ಕಾರಣದಿಂದ ಅಮಾನ್ಯಗೊಂಡಿತ್ತು. ಬಳಿಕ ಕಾನೂನು ನೋಟಿಸ್ ನೀಡಿದರೂ ಹಣ ಪಾವತಿಸದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಅಂತಿಮವಾಗಿ, ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆಯ ಕಲಂ ೧೩೮ರಡಿ ಆರೋಪಿಯನ್ನು ದೋಷಿ ಎಂದು ಘೋಷಿಸಿದ ನ್ಯಾಯಾಲಯ, ₹೨,೧೦,೦೦೦ ದಂಡ ವಿಧಿಸಿದೆ. ಅದರಲ್ಲಿ ₹೫,೦೦೦ ಸರ್ಕಾರಕ್ಕೆ ದಂಡವಾಗಿ ಹಾಗೂ ಉಳಿದ ₹೨,೦೫,೦೦೦ನ್ನು ದೂರುದಾರರಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದೆ. ದಂಡ ಪಾವತಿಸಲು ವಿಫಲವಾದರೆ…

Read More

ವಿಜಯಪುರ ನಗರದ ಕೋಟೆಗೋಡೆ ಸುತ್ತಮುತ್ತ ಮಳೆ ನೀರು ಹರಿವಿಗೆ ಅಡೆತಡೆ ತೆರವು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶಿವಾಜಿ ಸರ್ಕಲ್‌ನಿಂದ ಲಿಂಗದಗುಡಿ ರಸ್ತೆ ಹಾಗೂ ಗಚ್ಚಿನ ಕಟ್ಟಿ ಕಾಲೋನಿಗೆ ಹೊಂದಿಕೊಂಡಿರುವ ಕೋಟೆಗೋಡೆ ಸುತ್ತಲೂ ಮಳೆ ನೀರು ಸರಾಗವಾಗಿ ಹರಿದು ಹೋಗಲು ಮತ್ತು ಪ್ರವಾಹ ಉಂಟಾಗದಂತೆ ತಡೆಯಲು ಬೃಹತ್ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ನಿರ್ಧರಿಸಲಾಗಿದೆ ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಗಂಗಾಧರ ಸಂಬಣ್ಣಿ ತಿಳಿಸಿದರು.ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಪಾಲಿಕೆ ಆಯುಕ್ತರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು ಎಂದು ತಿಳಿಸಿದ ಅವರು, ಕೋಟೆಗಳ ಸುತ್ತಮುತ್ತಲೂ ಬೆಳೆದಿರುವ ಕಂಟಿ ಬೇಲಿ ಹಾಗೂ ಗಿಡ-ಗಂಟಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಉಭಯ ಅಧಿಕಾರಿಗಳು ತೀರ್ಮಾನಿಸಿದರು.ಜೊತೆಗೆ ಕೋಟೆ ಕಂದಕದ ಸುತ್ತಮುತ್ತ ಹೂಳೆತ್ತಿ, ನೀರಿನ ಹರಿವಿಗೆ ಅನುಕೂಲವಾಗುವಂತೆ ಅಗಲೀಕರಣಗೊಳಿಸಲು ನಿರ್ಧರಿಸಿದರು.ನೀರು ಸುಗಮವಾಗಿ ಹರಿಯಲು ತಡೆಗೋಡೆ ನಿರ್ಮಾಣ ಮತ್ತು ಮಾರ್ಗ ಮಧ್ಯೆದಲ್ಲಿರುವ ಅಡೆತಡೆಗಳನ್ನು ತೆರವುಗೊಳಿಸಲು ಸಭೆ ನಿರ್ಧರಿಸಿತು.ಶಾಶ್ವತ ಪರಿಹಾರ:ಈ ಕಾಮಗಾರಿಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪರಿಷ್ಕರಿಸಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ)ಗಳು ಮನೆ-ಮನೆ ಭೇಟಿ, ಪರಿಶೀಲನೆ ಪ್ರಕ್ರಿಯೆ ಆ.೧೭ ರವರೆಗೆ ನಡೆಯಲಿದೆ. ಆ.೧೭ರಂದು ಮತಗಟ್ಟೆಗಳ ಪುನಾರಚನೆ ಹಾಗೂ ಸರಿಹೊಂದಿಸುವ ಕಾರ್ಯ ನಡೆಯಲಿದೆ. ಕರಡು ಮತದಾರರ ಪಟ್ಟಿಯನ್ನು ಆ.೨೪ ರಂದು ಪ್ರಕಟಿಸುವಂತೆ ಆಯೋಗ ಸೂಚಿಸಿದೆ. ಆಗಸ್ಟ್ ೨೮ ರಿಂದ ಸೆಪ್ಟೆಂಬರ್ ೨೩ರ ಅವಧಿಯವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಆಗಸ್ಟ್ ೨೪ ರಿಂದ ಅಕ್ಟೊಬರ್ ೨೨ರವರೆಗೆ ನೋಟಿಸ್ ಹಂತ ಮತ್ತು ಆಕ್ಷೇಪಣೆಗಳ ವಿಲೇವಾರಿ ಮಾಡಲು ಸೂಚಿಸಿದೆ. ಅಕ್ಟೋಬರ್ ೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದೆಂದು ಆಯೋಗ ಸೂಚಿಸಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Read More

ಜನಪ್ರತಿನಿಧಿಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳ ಧಿವ್ಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಕಲಬುರ್ಗಿ: ಒಂದು ಕಡೆ ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಬಗ್ಗೆ ಸರ್ಕಾರ, ಮತ್ತು ಜನಪ್ರತಿನಿಧಿಗಳು ದೊಡ್ಡ ದೊಡ್ಡ ಘೋಷಣೆಗಳನ್ನು ಮಾಡುತ್ತಿದ್ದರೆ, ಮತ್ತೊಂದೆಡೆ, ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಡಕೋಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಕಳೆದ ಎರಡು ದಶಕದ ಹೊಸ್ತಿಲಲ್ಲಿ 19 ವರ್ಷಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲೆಯಲ್ಲೇ ಶಿಕ್ಷಣ ನೀಡುತ್ತಿರುವುದು ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ,10 ವರ್ಷಗಳಿಂದ ಧೂಳು ತಿನ್ನುತ್ತಿರುವ ಕಂಪ್ಯೂಟರ್‌ಗಳು ಬೆಳಕು ಕಾಣದೆ ನರಳುತ್ತಿವೆ,ಈ ಕ್ಷೇತ್ರವನ್ನು ಪ್ರತಿನಿಧಿಸಿರುವ ಡಾ. ಅಜಯ್ ಧರ್ಮಸಿಂಗ್ ಅವರು ಮೂರು ಬಾರಿ ಶಾಸಕರಾಗಿ, ಕೆಕೆಆರ್‌ಡಿಬಿ ಅಧ್ಯಕ್ಷರಾಗಿ ಹಾಗೂ ಇದೀಗ ಸಚಿವರಾಗಿದ್ದರೂ, ತಮ್ಮದೇ ಕ್ಷೇತ್ರದ ಈ ಸರ್ಕಾರಿ ಶಾಲೆಗೆ ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.ಶಾಲೆಗೆ ಸುಮಾರು 10 ವರ್ಷಗಳ ಹಿಂದೆ ಕಂಪ್ಯೂಟರ್‌ಗಳನ್ನು ನೀಡಲಾಗಿತ್ತು. ಆದರೆ ವಿದ್ಯುತ್ ಸಂಪರ್ಕವೇ ಇಲ್ಲದ ಕಾರಣ ಅವು ಇಂದಿಗೂ ಬಳಕೆಯಾಗದೆ…

Read More

ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: 8 ಆಗಸ್ಟ್ 2026 ರಂದು ಹೆಚ್ ಡಿ ಕೋಟೆ ಮತ್ತು ಸರಗೂರು ತಾಲೂಕು ಮಾದಾರ ಮಹಾಸಭಾ ತಾಲೂಕು ಘಟಕಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸರಗೂರು ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಾಲೂಕು ಮಹಾಸಭಾದ ಅಧ್ಯಕ್ಷರಾದ ಪರಶಿವಮೂರ್ತಿ ಮನವಿ ಮಾಡಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಶಿವಮೂರ್ತಿ, ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ, ಹೆಚ್ ಡಿ ಕೋಟೆ ಕ್ಷೇತ್ರ ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ, ಮಾಜಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮಾಸ್ತಮ್ಮ ದೇವಸ್ಥಾನದಿಂದ ವೇದಿಕೆ ಕಾರ್ಯಕ್ರಮದವರೆಗೆ ಸಾಗಲಿರುವ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮಾಜಿ ಸಚಿವ ಕೋಟೆ ಎಂ. ಶಿವಣ್ಣ,…

Read More

ಪರ್ಯಾಯ ವ್ಯವಸ್ಥೆಗೆ ಬೀದಿಬದಿ ವ್ಯಾಪಾರಿಗಳ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ಸುಪ್ರೀಕೋರ್ಟ್ ಆದೇಶವನ್ನು ನಾವು ಉಲ್ಲಂಘಿಸಿಲ್ಲ. ಫುಟ್ಪಾತ್ ತೆರವಿಗೆ ನಾವು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬಡವರಿಗೊಂದು, ಉಳ್ಳವರಿಗೊಂದು ಆದೇಶ ತರಬೇಡಿ. ತಾಲೂಕಿನ ಹ್ಯಾಂಡ್ ಪೋಸ್ಟ್ ಸರ್ಕಲ್ ಬಳಿ ಪ್ರಭಾವಿಗಳು ೩೪ ಕುಂಟೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ವಾಣಿಜ್ಯ ಚಟುವಟಿಕೆ ನಡೆಸುತ್ತಿದ್ದಾರೆ. ಮೊದಲು ಅದನ್ನು ತೆರವು ಮಾಡಿಸಿ, ಆ ಜಾಗದಲ್ಲಿ ನಮಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಿ ಎಂದು ಒತ್ತಾಯಿಸಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.ತಾಲೂಕಿನ ಹ್ಯಾಂಡ್ ಪೋಸ್ಟ್ ಸರ್ಕಲ್ ಮುಂಭಾಗ ಶ್ರೀ ಚಿಕ್ಕದೇವಮ್ಮ ಬೀದಿಬದಿ ವ್ಯಾಪಾರಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಜಮಾಯಿಸಿದ ಬೀದಿಬದಿ ವ್ಯಾಪಾರಿಗಳು, ರಸ್ತೆ ಬದಿ ಯಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದೆವು. ಅದನ್ನೇ ನಂಬಿಕೊಂಡು ಫೈನಾನ್ಸ್ ಕಂಪನಿಗಳಿಂದ ಸಾಲ ತೆಗೆದುಕೊಂಡು ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಕುಟುಂಬ ನಿರ್ವಣೆ ಮಾಡುತ್ತಿದ್ದೆವು. ಆದರೆ ಇದೀಗ ಏಕಾಏಕಿ ಫುಟ್ಪಾತ್ ತೆರವು ಮಾಡಿರುವುದರಿಂದ ನಮಗೆ ದಿಕ್ಕೇ ತೋಚದಂತಾಗಿದೆ. ಅಂಗಡಿಗಳನ್ನು ತೆರವು…

Read More

ಲೇಖನ- ಶೀತಲ್ ಹೆಗಡೆ.ನಿರ್ವಾಹಕಿ’ನಮ್ಮ ಕಥಾ ಅರಮನೆ’ ಉದಯರಶ್ಮಿ ದಿನಪತ್ರಿಕೆ ಮನುಷ್ಯನ ಜೀವನವನ್ನು ಮುನ್ನಡೆಸುವ ಅತ್ಯಂತ ಪ್ರಭಾವಶಾಲಿ ಪ್ರೇರಣೆಯೇ ಕನಸು. ಕಣ್ಣು ಮುಚ್ಚಿದಾಗ ಕಾಣುವುದು ಕನಸಲ್ಲ, ಬದಲಾಗಿ ಕಣ್ಣು ತೆರೆದ ನಂತರವೂ ನಮ್ಮನ್ನ ನಿದ್ರಿಸದಂತೆ ಮಾಡುವ ಗುರಿಯೇ ನಿಜವಾದ ಕನಸು. ಪ್ರತಿಯೊಬ್ಬ ವ್ಯಕ್ತಿಯ ಹೃದಯದಲ್ಲಿ ಅನೇಕ ಕನಸುಗಳು ಅಡಗಿರುತ್ತವೆ. ಆ ಕನಸುಗಳೇ ಬದುಕಿಗೆ ದಿಕ್ಕು, ಧೈರ್ಯ ಮತ್ತು ಅರ್ಥವನ್ನು ನೀಡುತ್ತವೆ.ಕನಸುಗಳು ಕೇವಲ ಕಲ್ಪನೆಗಳಾಗಿರಬಾರದು. ಅದರಲ್ಲಿ ಪರಿಶ್ರಮ, ಶಿಸ್ತು, ಸಂಯಮ ಮತ್ತು ನಿರಂತರ ಪ್ರಯತ್ನದೊಂದಿಗೆ ಬೆರೆತಾಗ ಮಾತ್ರ ಸಾಧನೆಯ ಮೆಟ್ಟಿಲಾಗುತ್ತದೆ. ಎಷ್ಟೇ ಅಡೆತಡೆಗಳು ಬಂದರೂ ಕನಸಿನ ಮೇಲಿನ ನಂಬಿಕೆ ಕಳೆದುಕೊಳ್ಳದವರು ಅಂತಿಮವಾಗಿ ಯಶಸ್ಸಿನ ಶಿಖರವನ್ನೇರುತ್ತಾರೆ. ಇತಿಹಾಸದಲ್ಲಿರುವ ಎಲ್ಲ ಮಹಾನ್ ವ್ಯಕ್ತಿಗಳೆಲ್ಲರೂ ತಮ್ಮ ಕಾರ್ಯದ ಮೂಲಕ ಕನಸನ್ನು ಸಾಕಾರಗೊಳಿಸಿಕೊಂಡವರೇ. ಪ್ರತಿಯೊಂದೂ ಕನಸಿನ ಹಿಂದೆ ಒಂದು ಹೊಣೆಗಾರಿಕೆ ಇರುತ್ತದೆ. ಸ್ವಂತ ಯಶಸ್ಸಿಗಾಗಿ ಅಲ್ಲ, ಸಮಾಜದ ಒಳಿತಿಗಾಗಿ ಕಂಡ ಕನಸುಗಳು ಇನ್ನಷ್ಟು ಮೌಲ್ಯಯುತವಾಗಿರುತ್ತವೆ. ಒಬ್ಬ ಯುವಕ ತನ್ನ ಕುಟುಂಬದ ಹಿತರಕ್ಷಣೆಗೆ ಕನಸು ಕಾಣಬಹುದು, ಒಬ್ಬ ಶಿಕ್ಷಕ ಉತ್ತಮ ವಿದ್ಯಾರ್ಥಿಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗ್ರಾಮೀಣ ಮಟ್ಟದಿಂದ ತಾಲೂಕು ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ಮತ್ತು ಅರೆಸರ್ಕಾರಿ ಶಾಲೆ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ವರ್ಷ ಜನವರಿ ೨೬ರ ಗಣರಾಜ್ಯೋತ್ಸವ ಹಾಗೂ ಆಗಸ್ಟ್ ೧೫ರ ಸ್ವಾತಂತ್ರ‍್ಯ ದಿನಾಚರಣೆ ವೇಳೆ ವೀರಯೋಧ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರವನ್ನು ಇರಿಸಿ ಗೌರವ ಸಲ್ಲಿಸುವಂತೆ ಅಧಿಕೃತ ಆದೇಶ ಹೊರಡಿಸಬೇಕು ಎಂದು ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ, ಸಿಂದಗಿ ತಾಲ್ಲೂಕು ಘಟಕವು ಸಿಂದಗಿ ತಹಸೀಲ್ದಾರ್ ಕರೆಪ್ಪ ಬೆಳ್ಳಿ ಅವರ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದೆ.ಮನವಿ ಸಲ್ಲಿಸಿ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆಯ ತಾಲೂಕಾಧ್ಯಕ್ಷ ಮಾಳು ಗುಬ್ಬೇವಾಡ ಮಾತನಾಡಿ, ಹಿಂದಿನ ಸರ್ಕಾರವು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮಗಳಲ್ಲಿ ಸಂಗೊಳ್ಳಿ ರಾಯಣ್ಣ ಅವರಿಗೆ ಗೌರವ ಸಲ್ಲಿಸಲು ಆದೇಶ ಹೊರಡಿಸಿತ್ತು. ಅದೇ ಮಾದರಿಯಲ್ಲಿ ಈ ಆದೇಶವನ್ನು ಗ್ರಾಮೀಣ ಮಟ್ಟ, ತಾಲೂಕು ಹಾಗೂ ಜಿಲ್ಲೆಗಳ ಎಲ್ಲ ಸರ್ಕಾರಿ ಮತ್ತು ಅರೆಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಕಚೇರಿಗಳಿಗೂ ವಿಸ್ತರಿಸಬೇಕು ಎಂದು…

Read More

ಸಿಂದಗಿಯಲ್ಲಿ ನಶೆ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರತಿಯೊಬ್ಬರೂ ನಶೆ ಮುಕ್ತ ಜೀವನದ ಸಂಕಲ್ಪ ಕೈಗೊಂಡು, ಇತರರಲ್ಲೂ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಭಾಗಿಯಾಗಬೇಕು. ಮಿಷನ್ ಸ್ಪಂದನ ಹಾಗೂ ನಶೆ ಮುಕ್ತ ಭಾರತ ಅಭಿಯಾನದಡಿ ದೇಶದ ೧೦ಕೋಟಿ ಜನರನ್ನು ವ್ಯಸನಮುಕ್ತರನ್ನಾಗಿಸುವ ಬ್ರಹ್ಮಕುಮಾರಿ ಸಂಸ್ಥೆಯ ಮಹಾ ಸಂಕಲ್ಪ ಶ್ಲಾಘನೀಯವಾಗಿದ್ದು, ಇಂತಹ ಜನಜಾಗೃತಿ ಕಾರ್ಯಕ್ರಮಗಳು ಸಮಾಜದಲ್ಲಿ ಉತ್ತಮ ಬದಲಾವಣೆ ತರಲಿವೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.ಸಿಂದಗಿ ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಪೂಜ್ಯ ದಾದಿ ಪ್ರಕಾಶಮಣಿ ಜೀ ಅವರ ಪವಿತ್ರ ಸ್ಮರಣಾರ್ಥ ಆಯೋಜಿಸಿದ ನಶೆ ಮುಕ್ತ ಭಾರತ ಅಭಿಯಾನದಲ್ಲಿ ವಿಕಸಿತ ಭಾರತದತ್ತ ಒಂದು ಸಬಲವಾದ ಹೆಜ್ಜೆ ೧೦ಕೋಟಿ ನಶೆ ಮುಕ್ತರ ಪ್ರತಿಜ್ಞೆಗಳ ಮಹಾ ಅಭಿಯಾನದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನಶೆ ಮುಕ್ತ ಸಮಾಜವೇ ಆರೋಗ್ಯವಂತ, ಸುಶಿಕ್ಷಿತ ಮತ್ತು ಸಂಸ್ಕಾರಯುತ ರಾಷ್ಟ್ರದ ಭದ್ರ ಅಡಿಪಾಯವಾಗಿದೆ. ಯುವಜನತೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ದುಶ್ಚಟಗಳಿಂದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಎಲ್ಲ ಅಧಿಕಾರಿಗಳು ತಮ್ಮ ಕಛೇರಿಯಲ್ಲಿ ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು ಎಂದು ಸೂಚಿಸಿದರು ಎಂದು ತಾಲೂಕು ದಂಡಾಧಿಕಾರಿ ಕರೇಪ್ಪ ಬೆಳ್ಳಿ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.ಸಿಂದಗಿ ಪಟ್ಟಣದ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆ.೧೫ರಂದು ಆಚರಿಸಲ್ಪಡುವ ಸ್ವಾತಂತ್ರೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆಯಲ್ಲಿ ಎಲ್ಲರೂ ಭಾಗಿಯಾಗಬೇಕು. ಅಂದು ಬೆಳಗ್ಗೆ ೭.೪೫ರೊಳಗೆ ಎಲ್ಲ ಸರ್ಕಾರಿ, ಅರೇ ಸರ್ಕಾರಿ ಕಚೇರಿ ಮತ್ತು ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನಡೆಸಬೇಕು. ಬಳಿಕ ೮ಗಂಟೆಗೆ ತಹಶೀಲ್ದಾರ್ ಕಛೇರಿ ಆವರಣಕ್ಕೆ ಆಗಮಿಸಬೇಕು. ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ ಸರಿಯಾಗಿ ೯ಗಂಟೆಗೆ ಆರಂಭವಾಗುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಆಯಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ಹಂಚಿಕೆಯAತೆ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಕಾರ್ಯಕ್ರಮಕ್ಕೆ ತಾಲೂಕಾಡಳಿತದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.ಇದೇ ಸಂದರ್ಭದಲ್ಲಿ ಇತ್ತೀಚಗೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಿದ…

Read More