Author: editor.udayarashmi@gmail.com

ಲೇಖನ- ರೇವಣಸಿದ್ದ ಬಗಲಿಬೆಂಗಳೂರು ಗ್ರಾಮಾಂತರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಂತು ನಾಗರ ಪಂಚಮಿ ಹಬ್ಬವನ್ನ ಸಡಗರ, ಸಂಭ್ರಮದಿಂದ ಹೆಣ್ಮಕ್ಕಳು ಜೋಕಾಲಿಯಲ್ಲಿ ಜಿಕಿಕೊಂಡು ಆಚರಿಸುವ ಹಬ್ಬವಷ್ಟೆ ಅಲ್ಲದೇ ಇದು ಸಹೋದರತ್ವದ ಬಾಂಧವ್ಯ ಬೆಸೆಯುವಂತಹ ಮಹತ್ವಪೂರ್ಣ ನಾಡಿನ ದೊಡ್ಡ ಹಬ್ಬವಿದಾಗಿದೆ. ಈ ನಾಗರ ಪಂಚಮಿ ಹಬ್ಬ ಸಮಿಪಿಸುತ್ತಿದಂತೆ ಗಂಡನ ಮನೆಯಲ್ಲಿರುವ ಪ್ರತಿ ಹೆಣ್ಮಕ್ಕಳ ಮುಖದಲ್ಲಿ ಎಲ್ಲಿಲ್ಲದ ಸಂತಸ ಕಾಣಬಹುದು. ಏಕೆಂದರೆ ಸಹೋದರನಾದವನು ಸಹೋದರಿಯ ಗಂಡನ ಮನೆಗೆ ಹೋಗಿ ಪಂಚಮಿ ಹಬ್ಬಕ್ಕೆ ಕರೆತರುವದು ಪುರಾತನ ಕಾಲದಿಂದಲ್ಲೂ ವಾಡಿಕೆಯಾಗಿ ಬಂದಿದೆ. ಅದಕ್ಕೆ ಪ್ರತಿ ಹೆಣ್ಮಕ್ಕಳಲ್ಲಿ ಪಂಚಮಿಯ ಸಂಭ್ರಮ ಮನೆ ಮಾಡಿರುತ್ತದೆ.ಈ ದಿನದಂದು ಸಹೋದರಿಯರು ತಮ್ಮ ಸಹೋದರರಿಗೆ ಬೆಳಿಗ್ಗೆ ಎದ್ದೊಡನೆ ಮೈತುಂಬಾ ಎಣ್ಣೆ-ಜೋಳದ ಹಿಟ್ಟು ಹಚ್ಚಿ ಸ್ನಾನ ಮಾಡಿಸುವುದು ಹಿಂದಿನಿಂದ ಬಂದ ವಾಡಿಕೆ. ನಾಡಿನಾದ್ಯಂತ ಮಹಿಳೆಯರು ಹಾಗೂ ಪುಟ್ಟ ಹೆಣ್ಮಕ್ಕಳು ಹೊಸ ಬಟ್ಟೆ ತೊಟ್ಟು…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಬಹುತೇಕ ಎಲ್ಲ ಊರುಗಳ ಮಠಮಾನ್ಯಗಳಲ್ಲಿ ಶ್ರಾವಣ ಮಾಸದಲ್ಲಿ ಪುರಾಣ ಪ್ರವಚನ ಕಾರ್ಯಕ್ರಮಗಳು ನಡೆಯುತ್ತವೆ. ಶ್ರಾವಣ ಮಾಸದಲ್ಲಿಯೇ ಈ ಕಾರ್ಯಕ್ರಮಗಳು ಏಕೆ ನಡೆಯುತ್ತವೆ ಎಂಬುದಕ್ಕೆ ಹಿನ್ನೆಲೆ ಇದೆ.ಬೇಸಿಗೆ ಮುಗಿಯುತ್ತ ಬಂದು ಮುಂಗಾರು ಮಳೆ ಪ್ರಾರಂಭವಾದಾಗ ಮೊದಲ ಮಳೆ ಬೀಳುವ ಹೊತ್ತಿಗೆ ತನ್ನ ಹೊಲವನ್ನು ಹದ ಮಾಡಿಕೊಳ್ಳುವ ರೈತ ಒಂದು ಹದವಾದ ಮಳೆ ಬಿದ್ದೊಡನೆ ತನ್ನ ಹೊಲದಲ್ಲಿ ಬೀಜವನ್ನು ಬಿತ್ತುತ್ತಾನೆ. ಮತ್ತೊಂದೆರಡು ಸಣ್ಣ ಪುಟ್ಟ ಮಳೆಗಳಿಂದ ಆ ಬೀಜಗಳು ಮೊಳಕೆ ಒಡೆದು ಸಣ್ಣ ಕುಡಿಯಾಗಿ ನಂತರ ಸಸಿಯಾಗಿ ಮಾರ್ಪಡುವ ಈ ಸಮಯದಲ್ಲಿ ಆತನಿಗೆ ತನ್ನ ರೈತಾಪಿ ಕೆಲಸಗಳಿಂದ ತುಸು ಮಟ್ಟಿನ ಬಿಡುಗಡೆ. ಪ್ರತಿದಿನ ಮುಂಜಾನೆ ನಿಯಮಿತವಾಗಿ ಹೊಲಕ್ಕೆ ಹೋಗಿ ನಿಧಾನವಾಗಿ ಕುಡಿಯೊಡೆದ ಸಸಿಗಳ ಬೆಳವಣಿಗೆಯನ್ನು ನೋಡಿ ಹರ್ಷಿಸಿ ಮನೆಯಲ್ಲಿರುವ ಜಾನುವಾರುಗಳ ದೈನಂದಿನ ಜವಾಬ್ದಾರಿಯನ್ನು ನಿರ್ವಹಿಸಿದರೆ ಆತನ ಬಹುತೇಕ ಕೆಲಸ ಮುಗಿಯುತ್ತದೆ. ಈ ರೀತಿಯ ತುಸು ವಿರಾಮ ಸಮಯದಲ್ಲಿ ಆತ ಕುಟುಂಬದೊಡನೆ ಒಂದೆರಡು ದಿನಗಳ…

Read More

ಬಸವನ ಬಾಗೇವಾಡಿ ಮತ್ತು ನಿಡಗುಂದಿ ತಾಲೂಕುಗಳ ವಿವಿಧ ಕಾಮಗಾರಿಗಳ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸೋಮವಾರ ಜಿಲ್ಲೆಯ ಬಸವನ ಬಾಗೇವಾಡಿ ಮತ್ತು ನಿಡಗುಂದಿ ತಾಲ್ಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.ಬಸವನ ಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೂರ, ಮಣ್ಣೂರ ಹಾಗೂ ಹಂಗರಗಿ ಹಾಗೂ ನಿಡಗುಂದಿ ತಾಲೂಕಿನ ಚಿಮ್ಮಲಗಿ ಎಲ್ ಟಿ, ಮರಿಮಟ್ಟಿ, ಆಲಮಟ್ಟಿ, ಆಲಮಟ್ಟಿ ವಸ್ತಿ, ಬೇನಾಳ ಆರ್.ಸಿ, ಗುಡದಿನ್ನಿ, ಹುಣಶ್ಯಾಳ್ ಪಿ ಸಿ, ಬೀರಲದಿನ್ನಿ ಹಾಗೂ ಗೊಳಸಂಗಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಸ್ಥಳ ವೀಕ್ಷಣೆ ಮಾಡಿದ ಅವರು, ಮನೆ ಮನೆಗಳಿಗೆ ಅಳವಡಿಸಲಾಗಿರುವ ನಳಗಳ ಸಂಪರ್ಕ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚೆ ಮಾಡಿದರು.ಈ ಸಂದರ್ಭದಲ್ಲಿ ನಿಡಗುಂದಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೆಂಕಟೇಶ ವಂದಾಲ, ಬಸವನ ಬಾಗೇವಾಡಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಕಾಶ ದೇಸಾಯಿ, ಗ್ರಾಮೀಣ ಕುಡಿಯುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ ೦೧ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ,…

Read More

ಸಚಿವ ಶಿವಾನಂದ ಪಾಟೀಲ ನೇತೃತ್ವದ ದ್ರಾಕ್ಷಿ ಬೆಳೆಗಾರರ ಸಭೆ | ಅಪಘಾನಿಸ್ತಾನದ ತಳಿ ಆಮದಿಗೆ ಚಿಂತನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಸಾಯನಿಕ ಬಳಕೆಗೆ ಬದಲಾಗಿ ವಿಷಮುಕ್ತವಾಗಿ ಹಾಗೂ ಯುರೋಪಿಯನ್ ರಾಷ್ಟ್ರಗಳಿಗೆ ಸಾಗಿಸಲು ರಫ್ತು ಗುಣಮಟ್ಟದ ಒಣ ದ್ರಾಕ್ಷಿ ಬೆಳೆಯಲು ಮಾರ್ಗಸೂಚಿ ರೂಪಿಸುವ ಅಗತ್ಯವಿದೆ. ಜೊತೆಗೆ ಅಧಿಕ ಇಳುವರಿ, ವಿಶಿಷ್ಟ ಸ್ವಾದ ಹೊಂದಿರುವ ಅಪಘಾನಿಸ್ತಾನ ರಾಷ್ಟ್ರದ ೫-೬ ದ್ರಾಕ್ಷಿ ತಳಿಗಳನ್ನು ಪರಿಚಯಿಸಲು ಯೋಜಿಸುವ ಕುರಿತು ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ನಡೆದ ದಕ್ಷಿಣ ಭಾರತದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ನಿರ್ಧರಿಸಲಾಯಿತು.ಭಾನುವಾರ ಸಂಜೆ ನಗರದಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ದ್ರಾಕ್ಷಿ ಬೆಳೆಗಾರರ ಸಂಘದ ಪ್ರತಿನಿಧಿಗಳು ಒಣದ್ರಾಕ್ಷಿ ಸುದೀರ್ಘ ಚರ್ಚೆ ನಡೆಸಿದರು.ಸಭೆಯಲ್ಲಿ ಪಾಲ್ಗೊಂಡಿದ್ದ ರಾಷ್ಟ್ರೀಯ ದ್ರಾಕ್ಷಿ ಬೆಳೆಗಾರರ ಮಹಾಮಂಡಳದ ಅಧ್ಯಕ್ಷ ಸೋಪನ್ ಕಾಂಚನ್ ನೇತೃತ್ವದಲ್ಲಿ ಸಚಿವ ಶಿವಾನಂದ ಪಾಟೀಲ ಅವರನ್ನು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೆಬಿಹಾಳ: ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಕರಾದರೆ ಪತ್ರಕರ್ತರು ಇಡೀ ಸಮಾಜಕ್ಕೆ ಶಿಕ್ಷಕರು. ವೈದ್ಯರು ರೋಗಿಗಳಿಗೆ ಮಾತ್ರ ವೈದ್ಯರಾದರೆ ಪತ್ರಕರ್ತರು ಇಡೀ ಸಮಾಜಕ್ಕೆ ವೈದ್ಯರು ಎಂದು ಉಪನ್ಯಾಸಕ ರಾಜನಾರಾಯಣ ನಲವಡೆ ಹೇಳಿದರು.ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಅರಿಹಂತ ಕಾಲೇಜಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರಧಾನ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.ಪತ್ರಿಕೋದ್ಯಮ ಲಾಭದಾಯಕ ಹುದ್ದೆ ಅಲ್ಲ. ಅದೊಂದು ಸಮಾಜಮುಖಿ ಕಾರ್ಯ. ಈ ಹುದ್ದೆಯನ್ನು ಅಲಂಕರಿಸುವವರು ಸಮಾಜದ ಅಂಕು ಡೊಂಕುಗಳನ್ನು, ಓರೆ ಕೋರೆಗಳನ್ನು ತಿದ್ದಲು ಬರಬೇಕೆ ಹೊರತು ಸಂಪಾದನೆಗಾಗಿ ಬರಬಾರದು. ಪತ್ರಕರ್ತರು ಒಂದು ವೇಳೆ ಆಸೆ ಆಮೀಷಗಳಿಗೆ ಒಳಗಾಗಿ ಸತ್ಯವನ್ನು ಮುಚ್ಚಿ ಅಥವಾ ತಿರುಚಿ ಸುದ್ದಿ ಮಾಡಿದರೆ ಅದರಿಂದ ಇಡೀ ಸಮಾಜ ಹಾಳಾಗುತ್ತದೆ ಎಂದರು.ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಸಧ್ಯದ ಬೆಳವಣಿಗೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ಕೂಡ ಪತ್ರಕರ್ತ ಇದು ತಂತ್ರಜ್ಞಾನ ನಮಗೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಯುಕೆಪಿ ಹತ್ತಿರ ವಾರ್ಡ 17 ರ ಸರ್ವೇ ಸಂಖ್ಯೆ 236ರಲ್ಲಿ ಕಟ್ಟಿಸಿರುವ ಮನೆ ತೆರವುಗೊಳಿಸಲು ಲೋಕೊಪಯೋಗಿ ಇಲಾಖೆ ನೀಡಿರುವ ನೋಟೀಸನ್ನು ಹಿಂಪಡೆಯಲು ಆಗ್ರಹಿಸಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ತಹಶೀಲ್ದಾರ್ ಎಸ್.ಎಸ್. ಅರಕೇರಿ ಮೂಲಕ ಮುಖ್ಯಮಂತ್ರಿ ಯವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ ಪಟ್ಟಣದ ಯುಕೆಪಿ ಹತ್ತಿರ 236 ಸರ್ವೇ ಸಂಖ್ಯೆಯ ಸರಕಾರಿ ಜಾಗದಲ್ಲಿ ಸಂತ್ರಸ್ತರಾದ ಬಡ ಕುಡುಂಬದ ದಲಿತ ಸಮೂದಾಯದ 15 ರಿಂದ 20 ಕುಟುಂಬಗಳು 25-30 ವರ್ಷಗಳಿಂದ ವಾಸವಾಗಿದ್ದು ಇಂತಹ ಕುಟುಂಬಗಳಿಗೆ ಪುನರ್ವಸತಿ ಪುನರ್ ನಿರ್ಮಾಣ ಇಲಾಖೆಯಿಂದ ಕೊಲ್ಹಾರ ಪಟ್ಟಣದಲ್ಲಿ ಸಂತ್ರಸ್ತರೆಂದು ಪರಿಗಣಿಸದೆ ನಿವೇಶನ ಹಂಚಿಕೆ ಮಾಡಿರುವುದಿಲ್ಲ.ಆದ್ದರಿಂದ ಅವರು ಸದರಿ ಜಾಗದಲ್ಲಿ ತಮ್ಮ ದಿನನಿತ್ಯದ ಕಾಯಕಮಾಡಿ ಬದಕು ಸಾಗಿಸಲು ಒಂದು ಸೂರು ಕಟ್ಟಿಕೊಂಡಿರುವುದಕ್ಕೂ ಸರ್ಕಾರದ ಲೋಕೋಪಯೋಗಿ ಇಲಾಖೆಯವರು ತೆರವುಗೊಳಿಸಲು ನೋಟೀಸು ನೀಡಿರುವುದು ಯಾವ ನ್ಯಾಯ ಅನೇಕ ವರ್ಷಗಳಿಂದ ಬರದ ನೋಟೀಸಗಳು ಈಗೇಕೆ ಬರುತ್ತೀವೆ. ಒಂದು ವೇಳೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ತೆಲಗಿ, ರೋಣಿಹಾಳ ಮತ್ತು ಮುಳವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಲಗಿ LT, ಚಿರಲದಿನ್ನಿ, ರೋಣಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೋಣಿಹಾಳ, ಕುಪಕಡ್ಡಿ ಗ್ರಾಮಕ್ಕೆ ಹಾಗೂ ಮುಳವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಳವಾಡ ಸ್ಟೇಶನ್, ಮುಳವಾಡ ಗ್ರಾಮಕ್ಕೆ ವಿಜಯಪುರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಸೋಮವಾರ ಪರಿಶೀಲನೆ ಮಾಡಿದರು.ಜಲ ಮಿಷನ್ ಜೀವನ ಯೋಜನೆ ಅಡಿಯಲ್ಲಿ ಕೈಗೊಂಡ ಪ್ರತಿ ಗ್ರಾಮಗಳಿಗೆ ಪ್ರತಿ ಮನೆ – ಮನೆಗಳಿಗೆ ನಳಗಳ ಸಂಪರ್ಕ ಮೂಲಕ ಪ್ರತಿದಿನ ನೀರು ಪೂರೈಕೆ ಆಗುತ್ತಿರುವ ಕುರಿತು ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಈ ಭೇಟಿ ವೇಳೆಯಲ್ಲಿ ಗ್ರಾಮಗಳಲ್ಲಿ ಅನುಷ್ಠಾನಗೊಂಡಿರುವ ಜಲಜೀವನ ಮಿಷನ್ ಯೋಜನೆಯಡಿ ನಮ್ಮ ಜಿಲ್ಲೆಯಲ್ಲಿ ಉತ್ತಮ ಕಾಮಗಾರಿಗಳು ಪೂರ್ಣಗೊಂಡಿದ್ದರಿಂದ ನಿಮ್ಮ ಮನೆ-ಮನೆಗೆ ಬಂದ ಗಂಗೆಯನ್ನು ಗ್ರಾಮಸ್ಥರು ಮಿತವಾಗಿ ಬಳಸಿ, ಸ್ವಚ್ಛತೆ ಕಾಪಾಡುವುದರ ಮೂಲಕ ದಿನನಿತ್ಯ ಉಪಯೋಗಿಸಿಕೊಳ್ಳಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು.…

Read More

ರೈತ-ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಪುತ್ಥಳಿ ಅನಾವರಣ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಚಪ್ಪಲಿ ಹಾಕದೇ ಬದ್ಧತೆಯ ಹೋರಾಟ ನಡೆಸಿದ್ದ ರೈತ-ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಅವರಿಲ್ಲದ ವಿಜಯಪುರ ಜಿಲ್ಲೆಯಲ್ಲಿ ರೈತ-ಕಾರ್ಮಿಕ ಧ್ವನಿ ಕ್ಷೀಣಿಸಿದಂತಾಗಿದೆ. ಹೋರಾಟಕ್ಕೆ ಮತ್ತೊಂದು ಹೆಸರೇ ಭೀಮಶಿ ಕಲಾದಗಿ ಎಂಬಂತಾಗಿದ್ದು ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.ಸೋಮವಾರ ಇಂಡಿ ತಾಲೂಕಿನ ಹಂಜಗಿ ಗ್ರಾಮದ ತೋಟದ ವಸ್ತಿಯಲ್ಲಿ ರೈತ-ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಪುಣ್ಯಸ್ಮರಣೆ ಸಂದರ್ಭದಲ್ಲಿ ಭೀಮಶಿ ಅವರ ಪುತ್ಥಳಿ ಅನಾವರಣ ಮಾಡಿ ಮಾತನಾಡಿದ ಅವರು, ನನ್ನೊಂದಿಗೆ ಸುದೀರ್ಘ ೩೫ ವರ್ಷಗಳ ಒಡನಾಡ ಹೊಂದಿದ್ದ ಭೀಮಶಿ ಕಲಾದಗಿ ಅವರು, ಹಲವು ಸಮಸ್ಯೆಗಳ ಪರಿಹಾರದ ವಿಷಯವಾಗಿ ನನ್ನೊಂದಿಗೆ ಚರ್ಚಿಸುತ್ತಿದ್ದರು. ಜಿಲ್ಲೆಯ ಸಮಗ್ರ ನೀರಾವರಿ ವಿಷಯಗಾಗಿ ಅವರು ಚಪ್ಪಲಿ ಹಾಕದೇ ಬರಿಗಾಲಲ್ಲಿ ನಡೆಯುವ ಶಪಥ ಮಾಡಿದ್ದರು. ನೀರಾವರಿ ಯೋಜನೆ ಅನುಷ್ಠಾನದ ಬಳಿಕ ನಾನೇ ಅವರಿಗೆ ಚಪ್ಪಲಿ ಹಾಕುವ…

Read More

ಯೋಗಪಟು ಬಣಜಿಗೇರ ಗೆ ’ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ | ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಕೌಲಗಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಶಿಕ್ಷಣದಲ್ಲಿ ಭಾರತೀಯತೆ ಅಳವಡಿಸಿ ಕೊಳ್ಳುವುದು ರಾಷ್ಟ್ರದ ಪ್ರಗತಿಗೆ ಅವಶ್ಯಕವಾಗಿದೆ ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಕೌಲಗಿ ಹೇಳಿದರು.ನಗರದಲ್ಲಿ ಪ್ರಧಾನ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತದ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಧಾರವಾಡ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಸಂಸ್ಕೃತ ಅಧ್ಯಾಪಕ ವಿನಾಯಕ್ ಭಟ್ ಶೇಡಿಮನೆ, ವೇದಗಳು ಪ್ರಾಚೀನ ಭಾರತದ ಜ್ಞಾನದ ಮೂಲವಾಗಿದೆ ಎಂದು ಹೇಳಿದರು.ವಿದ್ವಾಂಸ, ನಾಟಕಕಾರ ನಾರಾಯಣ ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಂಸ್ಕೃತಿ ಪರಂಪರೆಯ ಮೌಲ್ಯ ಗಳ ಬಗ್ಗೆ ತಿಳಿಸಿಕೊಟ್ಟರು.ಅಮೃತಾನಂದ ಮಹಾಸ್ವಾಮಿಗಳು ಬಾಲಗಾoವ ಹಾಗೂ ಪ್ರಾಂತ ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷರು ಡಾ.ಬಸವರಾಜ್ ಅನಾಮಿ ಹಾಗೂ ಬಿ ಎಸ್ ಬಾಸಗೊಂಡ ಹಾಗೂ ಶ್ರೀ ಸಿದ್ದೇಶ್ವರ…

Read More