Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಹಾಗೂ ಗ್ರಾಮೀಣ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಪ್ರಕಟಿತ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಗಳನ್ನು ದಿನಾಂಕ : ೦೬-೦೫-೨೦೨೫ರೊಳಗಾಗಿ ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ದ್ವೀತಿಯ ಪಿಯುಸಿ ಪರೀಕ್ಷೆ-೨ಗಳು ಜರುಗುತ್ತಿದ್ದು, ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ನಡೆಸುವ ದೃಷ್ಟಿಯಿಂದ ನಗರದ ಜಿಲ್ಲಾ ಪಂಚಾಯತಿಯ ಸಂಪನ್ಮೂಲ ಕೇಂದ್ರದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರಗಳು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ವೀಕ್ಷಿಸಿದ ಅವರು, ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವ್ಹಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು. ಒಂದು ವೇಳೆ ಸಿಸಿಟಿವ್ಹಿಗಳು ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ನಿಗಾವಹಿಸಬೇಕು. ಪರೀಕ್ಷೆಗಳಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ಕಟ್ಟು-ನಿಟ್ಟಾಗಿ ಮತ್ತು ಶಿಸ್ತಿನಿಂದ ನಡೆಸುವುದು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ, ವಿದ್ಯಾರ್ಥಿಗಳು ಕುಳಿತುಕೊಳ್ಳುವ ಆಸನಗಳ ಮಧ್ಯದಲ್ಲಿ ಹೆಚ್ಚಿನ ಅಂತರ ಕಾಯ್ದುಕೊಳ್ಳಬೇಕು.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ನಾಡಿನಾದ್ಯಂತ ವ್ಯಾಪಕವಾಗಿ ಪ್ರಚುರಪಡಿಸುವ ನಿಟ್ಟಿನಲ್ಲಿ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಯು ಕಲ್ಬುರ್ಗಿ ಜಿಲ್ಲೆಯಿಂದ ಮೋಟರಗಿ ಮಾರ್ಗವಾಗಿ ಏ.೨೫ರಂದು ವಿಜಯಪುರ ಜಿಲ್ಲೆಗೆ ಆಗಮಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ತಿಳಿಸಿದ್ದಾರೆ.ಜಿಲ್ಲೆಗೆ ರಥಯಾತ್ರೆಗೆ ಆಗಮಿಸಲಿರುವ ಹಿನ್ನಲೆಯಲ್ಲಿ ಅಂದು ಬೆಳಿಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ, ನಂತರ ಜಿಲ್ಲಾಡಳಿತ ವತಿಯಿಂದ ಪೂಜಾ ಕಾರ್ಯಕ್ರಮ ನೆರವೇರಿಸಿ, ನಗರದ ವಿವಿಧ ಬೀದಿಗಳಲ್ಲಿ ಸಂಚರಿಸಿ ತಿಕೋಟಾ ಮಾರ್ಗವಾಗಿ ಅಥಣಿ ಮೂಲಕ ಬೆಳಗಾವಿ ಜಿಲ್ಲೆಗೆ ರಥಯಾತ್ರೆಯನ್ನು ಬೀಳ್ಕೊಡಲಾಗುತ್ತಿದ್ದು, ಮೆರವಣಿಗೆಯಲ್ಲಿ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ೬ನೇ ತರಗತಿಯ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಏ.೨೭ರಂದು ಜಿಲ್ಲೆಯ ೧೧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುವ್ಯವಸ್ಥಿತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ಮುಂಜಾಗ್ರತೆಯಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-೨೦೨೩ರ ಕಲಂ ೧೬೩ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಇಂಡಿ, ಸಿಂದಗಿ, ಮುದ್ದೇಬಿಹಾಳ ಹಾಗೂ ಚಡಚಣ ತಾಲೂಕಿನಲ್ಲಿರುವ ೧೧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರರು ಮೊಬೈಲ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಸದರಿ ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.
ಡಾ.ರಾಜ್‌ಕುಮಾರ ೯೭ನೇ ಜನ್ಮದಿನ ಆಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ನಾಡಿನ ಸಂಸ್ಕೃತಿ, ಭವ್ಯ ಪರಂಪರೆ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುವ ಸಾಮಾಜಿಕ ಚಲನಚಿತ್ರಗಳಲ್ಲಿ ನಟಿಸುವ ಮೂಲಕ ತಮ್ಮ ಅಭಿನಯ ಮತ್ತು ವ್ಯಕ್ತಿತ್ವದಿಂದ ನಾಡಿನ ಜನರ ಮನಗಳಲ್ಲಿ ಮನೆ ಮಾಡಿದ ಡಾ.ರಾಜ್‌ಕುಮಾರ್ ಅವರು ಕರ್ನಾಟಕ ಕಂಡ ಮೇರು ವ್ಯಕ್ತಿತ್ವದ ಮಹಾನ್ ನಟರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಡಾ.ರಾಜ್‌ಮಾರ ಅವರ ೯೭ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಡಾ.ರಾಜ್‌ಕುಮಾರ ಅವರು ಓರ್ವ ಗಾಯಕರಾಗಿ, ನಟರಾಗಿ ಕನ್ನಡ ನಾಡು-ನುಡಿ ಚಳುವಳಿಯಲ್ಲಿ ಸಕ್ರೀಯವಾಗಿ ಭಾಗವಹಿಸಿ, ಕನ್ನಡಕ್ಕಾಗಿ ಕೊಡುಗೆ ನೀಡಿದ್ದಾರೆ. ಅವರ ಸರಳತೆ ಅಭಿನಯದ ಮೂಲಕ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಸಮಾಜದ ಎಲ್ಲರ ಮನ ಗೆದ್ದಿರುವ ರಾಜ್‌ಕುಮಾರ ಅವರ ಜನ್ಮ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ (ಹೈಬ್ರಿಡ್ ಮೋಡ್) ಕಾರ್ಯಗಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಹಳ ಮುಂದುವರೆದಿದ್ದೇವೆ ಆದರೆ ಸಮಾಜ ವಿಜ್ಞಾನದ ಹಂತದಿಂದ ಬಹಳ಼ಷ್ಟು ಪ್ರಾಚೀನರಾಗಿದ್ದೇವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಪ್ರೊ.ವೈ.ಎಂ.ಜಯರಾಜ್ ಹೇಳಿದರು.ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎಸ್.ಬಿ.ಕಲಾ ಹಾಗೂ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯುಎಸಿ,ಐಐಸಿ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಹಾಗೂ ಎಲ್ಲ ಸ್ನಾತಕೋತ್ತರ ವಿಭಾಗಗಳ ಸಹಯೋಗಲ್ಲಿ ದಿನಾಂಕ:೨೩-೦೪-೨೦೨೫ ಬುಧವಾರದಂದು ಆಯೋಜಿಸಲಾದ “ಸಂಶೋಧನಾ ಅಭ್ಯಾಸಗಳು: ಸಾಹಿತ್ಯ, ನೀತಿಶಾಸ್ತ್ರ, ಅಂಕಿ ಅಂಶಗಳು ಮತ್ತು ಶೈಕ್ಷಣಿಕದ” ಕುರಿತ ಒಂದು ದಿನದ ರಾಜ್ಯ ಮಟ್ಟದ (ಹೈಬ್ರಿಡ್ ಮೋಡ್) ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.ಈ ವೇಳೆಯಲ್ಲಿ ಕಾರ್ಯಗಾರದಲ್ಲಿ ಒಟ್ಟು ನಾಲ್ಕು ಅಧಿವೇಶನದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ರಾಷ್ಟ್ರೀಯ ಏರೋಸ್ಪೇಸ್‌ನ ಐಸಿಎಎಸ್‌ಟಿಯ ಮಾಜಿ ಮುಖ್ಯಸ್ಥರು, ಡಾ. ಐ. ಆರ್. ಎನ್. ಗೌಡರ್ ‘ಸಾಹಿತ್ಯ ವಿಮರ್ಶೆ ಮತ್ತು ಶೈಕ್ಷಣಿಕ ಸಂಶೋಧನೆಗಾಗಿ ಇ-ಸಂಪನ್ಮೂಲಗಳು’ ಮತ್ತು…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಎನ್.ಎಸ್.ಎಸ್ ಎಂದರೆ ಸೇವಾ ಮನೋಭಾವ, ಶಿಸ್ತು, ಸಮಯ ಪರಿಪಾಲನೆ, ವ್ಯಕ್ತಿತ್ವ ವಿಕಸನ, ಕಾಯಕದ ಮಹತ್ವವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷ ರಹಿಮಾನ್ ಪಟೇಲ್ ಯಲ್ಗೋಡ ಹೇಳಿದರು.ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ಕಾಲೇಜು ಕೆಂಭಾವಿ ಹಾಗೂ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ದೇಶ ನನಗೇನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕೆ ನಾವೇನು ಕೊಡುಗೆ ಕೊಡಬೇಕು ಎಂಬ ಮನೋಭಾವ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದರು.ಮುಖ್ಯ ಅತಿಥಿ ಮಾಜಿ ಸೈನಿಕ ಮಲ್ಲಣ್ಣ ಮೇಟಿ ಮಾತನಾಡಿ, ಭಾವೈಕ್ಯತೆಯ ಭಾರತ ನಿರ್ಮಾಣ ಕಾರ್ಯದಲ್ಲಿ ವಿದ್ಯಾರ್ಥಿಗಳು ಸನ್ನದ್ಧರಾಗಿ ಎಂದವರು ರಾಷ್ಟ್ರೀಯ ಸೇವಾ ಯೋಜನೆಯ ಸದುಪಯೋಗ ಪಡಿಸಿಕೊಂಡು ಸತ್ಪ್ರಜೆಗಳಾಗುವಂತೆ ಕರೆ ನೀಡಿದರು.ಯುವ ನಾಯಕ ಅದಿತ್ಯಗೌಡ ಎಸ್. ಪೋ.ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಸದ್ಗುರು ಸದಾನಂದ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನ ಬೈಸರನ್ ಕಣಿವೆ ಪ್ರದೇಶದಲ್ಲಿ ಉಗ್ರರು ನಡೆಸಿದ ನರಮೇಧವನ್ನು ಖಂಡಿಸಿ ಆಲಮೇಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ಯಾಂಡಲ್ ಮಾರ್ಚ್ ಮೂಲಕ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.ಈ ವೇಳೆ ಕಾಂಗ್ರೆಸ್ ಮುಖಂಡ ರಮೇಶ ಭಂಟನೂರ ಮಾತನಾಡಿ ಭಾರತವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಭೂಲೋಕದ ಸ್ವರ್ಗ ಕಾಶ್ಮೀರ ಕಣಿವೆ ಭಾಗದಲ್ಲಿ ಪದೇ ಪದೇ ಭಯೋತ್ಪಾದಕ ಕೃತ್ಯಗಳು ನಡೆಯುತ್ತಿವೆ. ಇದು ಮತೀಯ ಸಾಮರಸ್ಯ ಕದಡುವ ಹೀನಕೃತ್ಯವಾಗಿದ್ದು , ಸರ್ಕಾರ ಬೇಗನೆ ಉಗ್ರಗಾಮಿಗಳನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾದೀಕ ಸುಂಬಡ ಮಾತನಾಡಿ, 26 ಜನ ಅಮಾಯಕ ಪ್ರವಾಸಿಗರ ಭೀಕರ ಹತ್ಯೆಯ ನೈತಿಕ ಹೊಣೆಹೊತ್ತು ಕೇಂದ್ರ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.ಭದ್ರತಾ ವೈಫಲ್ಯವೇ ಈ ಘಟನೆಗೆ ಕಾರಣವಾಗಿದ್ದು, ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ. ಭಯೋತ್ಪಾದನೆಯೇ ಒಂದು ಧರ್ಮವಾಗಿದ್ದು ಇಡೀ ಜಗತ್ತಿಗೆ ಅಂಟಿದ ಪಿಡುಗಾಗಿದೆ ಎಂದು ಬ್ಲಾಕ್ ಡಾಕ್ಟರ್ಸ್ ಸೆಲ್ ಅಧ್ಯಕ್ಷ ಡಾ.ಸಮೀರ ಹಾದಿಮನಿ…
ಚಿಂತನೆ- ಡಾ.ದಾನಮ್ಮ. ಚ. ಝಳಕಿ ಉದಯರಶ್ಮಿ ದಿನಪತ್ರಿಕೆ ವಚನ ವಿಶ್ಲೇಷಣೆ ಅಕ್ಕಿ ಬೇಳೆ ಬೆಲ್ಲ ಉಪ್ಪು ಮೆಣಸು ಅಡಕೆ ಫಲ ರಸ ದ್ರವ್ಯ ಮುಂತಾದದ್ರವ್ಯಕ್ಕೆ ವ್ರತವೊ ? ಮುಟ್ಟುವ ತಟ್ಟುವ ಸೋಂಕುವ ಚಿತ್ತಕ್ಕೆ ವ್ರತವೊ ?ಇವು ಬಾಹ್ಯದಲ್ಲಿ ಮಾಡುವ ಸೌಕರಿಯವಲ್ಲದೆ ವ್ರತಕ್ಕೆ ಸಲ್ಲ.ವ್ರತವಾವುದೆಂದಡೆತನ್ನಯ ಸ್ವಪ್ನದಲ್ಲಿ ತನಗಲ್ಲದುದ ಕಂಡಡೆ,ತಾ ಮುಟ್ಟದುದ ಮುಟ್ಟಿದಡೆ, ತಾ ಕೊಳ್ಳದುದ ಕೊಂಡಡೆ,ಆ ಸೂಕ್ಷ್ಮತನುವಿನಲ್ಲಿ ಆ ತನುವಂ ಬಿಟ್ಟು ನಿಂದುದು ವ್ರತ.ಸ್ಥೂಲತನುವಿನಲ್ಲಿ ಸರ್ವರ ನಿಂದೆಗೊಡಲಾಗದೆ,ಮಾಡಿಕೊಂಡ ನೇಮಕ್ಕೆ ಕೇಡುಬಂದಲ್ಲಿಆ ಅಂಗಕ್ಕೆ ಓಸರಿಸದೆ ನಿಂದುದು ಆಚಾರ.ಇಂತೀ ಅಂತರಂಗದಲ್ಲಿ ವ್ರತ, ಬಹಿರಂಗದಲ್ಲಿ ಆಚಾರ,ಇಂತೀ ಉಭಯ ಸಿದ್ಭವಾಗಿ ನಡೆವುದೆ ವ್ರತ ಆಚಾರzಇಂತಿವನರಿದು ಮರೆದಲ್ಲಿ, ತಾ ಮಾಡಿಕೊಂಡ ಕುತ್ತಕ್ಕೆ ಹಾಡಿ ಮದ್ದನರೆದಂತೆ,ಜಗಕ್ಕೆ ಭಕ್ತನಾಗಿ ಆತ್ಮಂಗೆ ಅನುಸರಣೆಯಾದಲ್ಲಿ ಆಚಾರವೆ ಪ್ರಾಣವಾದರಾಮೇಶ್ವರಲಿಂಗಕ್ಕೆ ಸಲ್ಲದ ನೇಮ.ಸಮಗ್ರ ವಚನ ಸಂಪುಟ: 5 ವಚನದ ಸಂಖ್ಯೆ: ೪೩೬ ದೇವರು ಮತ್ತು ಭಕ್ತ ಇವರ ನಡುವೆ ನಡೆವ ಭೋಗ ಸ್ಥಿತಿಯ ಕುರಿತು ಅಕ್ಕಮ್ಮ ಈ ವಚನದಲ್ಲಿ ವಿವರಣೆಯನ್ನು ಕೊಡುತ್ತಾರೆ. ದೇವರಿಗೂ ಜಾತಿಯನ್ನು ಅಂಟಿಸಿ, ಜಾತಿ ದೇವರನ್ನಾಗಿ…
ಲೇಖನ – ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನ ಮನಸ್ಥಿತಿ (ಮೂಡ್)ಯಾವಾಗ ಹೇಗೆ ಇರುತ್ತೆ ಅಂತ ನನಗೇ ಗೊತ್ತಿರುವುದಿಲ್ಲ. ಒಮ್ಮೊಮ್ಮೆ ನವೋಲ್ಲಾಸದಿಂದ ಇರುವ ನಾನು ಒಮ್ಮಿಂದೊಮ್ಮೆಲೇ ಎಷ್ಟು ಮಾಡಿದರೂ ಅಷ್ಟೇ ನನ್ನಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎಂದು ಕೈ ಚೆಲ್ಲಿ ಕುಳಿತು ಬಿಡುತ್ತೇನೆ. ನನಗೆ ಇದೇಕೆ ಹೀಗಾಗುತ್ತಿದೆ? ಏನನ್ನೇ ಆಗಲಿ ನಿರಂತರವಾಗಿ ಮಾಡುವ ಅಭ್ಯಾಸ ನನ್ನಲ್ಲಿ ಏಕೆ ಬರುತ್ತಿಲ್ಲ? ಇಂದೇಕೋ ನನ್ನ ಮೂಡ್ ಸರಿಯಿಲ್ಲ. ನನಗೆ ಯಾವ ಕೆಲಸವನ್ನೂ ಮಾಡಲಾಗುತ್ತಿಲ್ಲ. ಎನ್ನುವ ಮಾತುಗಳನ್ನು ಮೇಲಿಂದ ಮೇಲೆ ಹೇಳುತ್ತಿರುತ್ತೇವೆ. ಮನಸ್ಥಿತಿಯನ್ನು ಚೆನ್ನಾಗಿ ಇಟ್ಟುಕೊಳ್ಳಲು ಮಾಡಬೇಕಾದದ್ದಾರೂ ಏನು? ಎಂಬ ಪ್ರಶ್ನೆ ತಲೆಯನ್ನು ಹೊಕ್ಕು ಜೀವ ತಿನ್ನುತ್ತವೆ. ಸರಿಯಾದ ಉತ್ತರ ಮಾತ್ರ ದೊರೆಯುವುದಿಲ್ಲ. ಸದಾ ಮನಸ್ಸು ಗೊಂದಲದ ಗೂಡಾಗಿ ಬಿಡುತ್ತದೆ. ನಾನಂದುಕೊಂಡಂತೆ ಕೆಲಸ ನಿರ್ವಹಿಸಲು, ಇತರರೊಂದಿಗೆ ಚೆನ್ನಾಗಿ ನಡೆದುಕೊಳ್ಳಬೇಕೆಂದರೆ ಎನು ಮಾಡಬೇಕೆಂದು ಹೊಳೆಯುತ್ತಿಲ್ಲ. ಎನ್ನುವ ಗೊಂದಲ ನಮ್ಮಲ್ಲಿ ಬಹುತೇಕ ಜನರಿಗೆ ಇರುತ್ತದೆ. ಮನಸ್ಸಿನ ಶಾಂತಿಗೆ ಯಾವುದೂ ಭಂಗ ತರುವುದಿಲ್ಲ ಎನ್ನುವ ಗಟ್ಟಿ ನಿಲುವು ಹೊಂದಬೇಕಾದರೆ…
