Author: editor.udayarashmi@gmail.com

ಪಹಲ್ಗಾಮ ಘಟನೆ ಖಂಡಿಸಿ ಬಸವನಬಾಗೇವಾಡಿಯಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯಿಂದ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜಮ್ಮು-ಕಾಶ್ಮೀರದ ಪಹಲ್ಗಾಮದಲ್ಲಿ ನಿನ್ನೆ ನಡೆದ ಭಯೋತ್ಪಾದಕರ ದಾಳಿಗೆ ಕೂಡಲೇ ಪ್ರತೀಕಾರವನ್ನು ತೆಗೆದುಕೊಳ್ಳಬೇಕಾದರೆ ಕಾಶ್ಮೀರ ಕಣಿವೆಯಲ್ಲಿ ಅಡಗಿ ಕುಳಿತಿರುವ ಉಗ್ರಗಾಮಿಗಳನ್ನು ನಿರ್ದಾಕ್ಷ್ಯಿಣವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ರಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮ್ಮು ಕಾಶ್ಮೀರದ ಪಹಲ್ಗಾಮದಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯು ಬುಧವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರವಾಸಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ಜಿಹಾದಿಗಳು ಅಮಾಯಕರನ್ನು ಹತ್ಯೆ ಮಾಡಿದ್ದಾರೆ. ಈ ಜಿಹಾದಿ ಶಕ್ತಿಗಳ ಹೆಡೆಮುರಿಕಟ್ಟುವ ಕೆಲಸವನ್ನು ಕೇಂದ್ರ ಸರ್ಕಾರ ಕೂಡಲೇ ಮಾಡಬೇಕು. ಭಯೋತ್ಪಾದಕರನ್ನು ಬೆನ್ನಟ್ಟಿ ಭಾರತೀಯ ಸೇನೆ ಗುಂಡಿಕ್ಕಿ ಕೊಲ್ಲಬೇಕು. ಕಾಶ್ಮೀರವನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಬೇಕು. ಈ ದಾಳಿ ಹಿಂದೆ ಇರುವ ಪಾಕಿಸ್ತಾನದ ಭಯೋತ್ಪಾದನಾ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಲು ಕೇಂದ್ರ ಸರ್ಕಾರ ಕೂಡಲೇ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಏ.೨೪ ರಿಂದ ಮೇ.೦೮ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-೨ ಅನ್ನು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕೇಂದ್ರಗಳ ೨೦೦ ಮೀ.ವ್ಯಾಪ್ತಿಯಲ್ಲಿನ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಬೆಳಿಗ್ಗೆ ೮ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ತೆರೆಯದಂತೆ ಆದೇಶಿಸಿದೆ.ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ,ಆಂಗ್ಲ ಮಾಧ್ಯಮ ಸರ್ಕಾರಿ ಮುಸ್ಲಿಂ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೨೦೨೫-೨೬ನೇ ಸಾಲಿನ ೬ನೇ ತರಗತಿ ಪ್ರವೇಶ ಪರೀಕ್ಷೆಯು ವಿಜಯಪುರ, ಮುದ್ದೇಬಿಹಾಳ, ಸಿಂದಗಿ, ಇಂಡಿ ಹಾಗೂ ಚಡಚಣ ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ ೨೭ರ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೦೧ ಗಂಟೆಯವರೆಗೆ ನಡೆಯಲಿವೆ. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು https://domgok.in/Admission/StudentHallticketವೆಬ್‌ಸೈಟ್ ಮೂಲಕ ಎಸ್‌ಎಟಿಎಸ್ ಐಡಿ ನಮೂದಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ https:// dom.karnataka.gov.in ಹಾಗೂ ವ್ಯಾಟ್ಸ್ಅಪ್ ಸಂಖ್ಯೆ ೮೨೭೭೭೯೯೯೯೦, ಜಿಲ್ಲೆಯ ಸಂಬAಧಿಸಿದ ವಸತಿ ಶಾಲೆಗಳನ್ನು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂ.೦೮೩೫೨೨೯೫೫೨೩ ಹಾಗೂ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಚಿಕ್ಕಪಡಸಲಗಿಯಲ್ಲಿ ಧರ್ಮ ಜಾಗೃತಿ ಸಭೆ | ಅದೃಶ್ಯ ಕಾಡಸಿದ್ಧೇಶ್ವರ ಶ್ರೀ ಸಲಹೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಧರ್ಮ ರಕ್ಷಣೆಗೆ ನಾವು ಎಂಥ ತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎನ್ನುವ ಮನಸ್ಥಿತಿ ಬೆಳೆಸಿಕೊಂಡಾಗ ಮಾತ್ರ ಧರ್ಮ ಉಳಿಯಲು ಸಾಧ್ಯ ಎಂದು ಕೊಲ್ಲಾಪುರ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳು ಹೇಳಿದರು.ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಮಾರುತಿ ದೇವರ ಓಕುಳಿ ಮಹೋತ್ಸವ ನಿಮಿತ್ತ ಗ್ರಾಮದ ಹನುಮಾನ ಮಂದಿರದ ಆವರಣದಲ್ಲಿ ಜೈ ಹನುಮಾನ ಯುವ ಮಿತ್ರ ಮಂಡಳಿ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಧರ್ಮ ಜಾಗೃತಿ ಹಾಗೂ ಭಾರತೀಯ ಸಂಸ್ಕೃತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.ದೇಶಕ್ಕಾಗಿ, ಸನಾತನ ಹಿಂದೂ ಧರ್ಮದ ಉಳಿವಿಗಾಗಿ ಛತ್ರಪತಿ ಶಿವಾಜಿ, ಸಂಭಾಜಿಯಂಥ ಅನೇಕ ಮಹಾರಾಜರು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಅಂಥವರ ತ್ಯಾಗ, ಬಲಿದಾನಗಳಿಂದಲೇ ಇಂದಿಗೂ ಭಾರತೀಯ ಸಂಸ್ಕೃತಿ ಉಳಿದಿದೆ. ನಾವು ಸುರಕ್ಷಿತವಾಗಿ ಬದುಕು ನಡೆಸುತ್ತಿದ್ದೇವೆ. ಅವರು ಉಳಿಸಿಕೊಟ್ಟ ಸನಾತನ ಧರ್ಮ, ಸಂಸ್ಕೃತಿಯನ್ನು ಉಳಿಸಲು ನಾವೂ ಬದ್ಧರಾಗಬೇಕು ಎಂದರು.ಮರೇಗುದ್ದಿಯ ಡಾ.ನಿರುಪಾದೇಶ್ವರ ಶ್ರೀಗಳು ಮಾತನಾಡಿ, ಕಾಶ್ಮೀರದ ಮಂಗಳವಾರ ಧರ್ಮದ…

Read More

ಮಹಾರಾಷ್ಟ್ರದತ್ತ ಮುಖ ಮಾಡುತ್ತಿರುವ ರೈತರು | ಸಾವಳಗಿ ಭಾಗದಲ್ಲಿ ಶೀತಲ ಘಟಕ ಆರಂಭಿಸಬೇಕೆಂಬುದು ರೈತರ ಒತ್ತಾಯ ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ಒಣದ್ರಾಕ್ಷಿ ಸಂಗ್ರಹಣೆಗೆ ಶೀತಲ ಘಟಕಗಳ (ಕೋಲ್ಡ್ ಸ್ಟೋರೇಜ್) ಕೊರತೆ ಇರುವುದರಿಂದ ಬಹುತೇಕ ರೈತರು ಮಹಾರಾಷ್ಟ್ರದತ್ತ ಮುಖ ಮಾಡುತ್ತಿದ್ದಾರೆ. ಈ ಭಾಗದಲ್ಲಿ ವ್ಯಾಪಕ ದ್ರಾಕ್ಷಿ ಬೆಳೆ ಬೆಳೆಯುತ್ತಿದ್ದು, ವಿಜಯಪುರ ಹೊರತುಪಡಿಸಿದರೆ ಸುತ್ತಮುತ್ತ ಯಾವುದೇ ಬೃಹತ್‌ ಶೀತಲ ಘಟಕ ಇಲ್ಲದಿರುವುದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ.ಹವಾಮಾನ ವೈಪರೀತ್ಯ, ಅಕಾಲಿಕ ಮಳೆ ಮಧ್ಯೆ ಒಣ ದ್ರಾಕ್ಷಿ ಸಿದ್ಧಪಡಿಸುವುದು ರೈತರಿಗೆ ಸವಾಲಿನ ಕೆಲಸ. ಒಣ ದ್ರಾಕ್ಷಿ ಶೇಖರಿಸಿಡಲು ಶೀತಲ ಘಟಕಗಳ ಕೊರತೆ ಇರುವುದರಿಂದ ಸರ್ಕಾರ ಜಮಖಂಡಿ ತಾಲ್ಲೂಕಿನ ಸಾವಳಗಿ ಭಾಗದಲ್ಲಿ ಒಂದು ಶೀತಲ ಘಟಕ ಆರಂಭಿಸಬೇಕು ಎಂಬುದು ರೈತರ ಒತ್ತಾಯವಾಗಿದೆ.ಜಮಖಂಡಿ ತಾಲ್ಲೂಕಿನಲ್ಲಿ ಒಟ್ಟು 6,300 ಹೆಕ್ಟೇರ್ ದ್ರಾಕ್ಷಿ ಬೆಳೆಯುವ ರೈತರಿದ್ದಾರೆ, ಅದರಲ್ಲಿ ಶೇ 90ರಷ್ಟು ರೈತರು ಒಣ ದ್ರಾಕ್ಷಿ ತಯಾರಿಸುತ್ತಾರೆ, ಅಂದಾಜು 40 ಸಾವಿರ ಟನ್ ಜಮಖಂಡಿಯಲ್ಲಿ ತಯಾರಾಗುತ್ತದೆ. ಸುತ್ತಮುತ್ತಲಿನಲ್ಲಿ ಖಾಸಗಿಯವರು ಮಾಡಿರುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪುಸ್ತಕಗಳು ಸಂಸ್ಕೃತಿಯ ಜೀವಂತ ವಾಹಕ. ಅವು ಮನುಕುಲದ ಬೆಳವಣಿಗೆಗೆ ಸಹಕಾರಿಯಾಗಿವೆ. ಅವು ಮಾನವನಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ಜತೆಗೆವ್ಯಕ್ತಿಯ ಆರೋಗ್ಯಕರ ವಿಕಸನಕ್ಕೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಬುಧವಾರದಂದು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ‘ವಿಶ್ವ ಪುಸ್ತಕ ದಿನ’ ದ ನಿಮಿತ್ತ ಹಮ್ಮಿಕೊಂಡ ‘ಪುಸ್ತಕ ಬಾಳಿನ ಬೆಳಕು’-ಚಿಂತನ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.ಪುಸ್ತಕಗಳು ವಿದ್ಯಾವಂತ ಸಮಾಜದ ಅವಿಭಾಜ್ಯ ಅಂಗವಾಗಿದ್ದು, ಪುಸ್ತಕಗಳ ಓದಿನಿಂದ ಜೀವನೋತ್ಸಾಹ, ಕ್ರಿಯಾಶೀಲತೆ, ಅಂತಸ್ಸತ್ವಗಳು ಹೆಚ್ಚುತ್ತವೆ. ಇಂದಿನ ಮಕ್ಕಳಲ್ಲಿ ನಾವು ಪುಸ್ತಕ ಓದುವ ಸಂಸ್ಕೃತಿಯ ಬೆಳವಣಿಗೆಗೆ ಅಗತ್ಯ ಪರಿಸರವನ್ನು ರೂಪಿಸಬೇಕು ಎಂದು ಹೇಳಿದರು.ಶಿಕ್ಷಕ ಸಚೀನ ಅವಟಿ ಮಾತನಾಡಿ, ಪುಸ್ತಕ ಓದುವುದರಿಂದ ನಮ್ಮ ಮಾನಸಿಕ ಶಕ್ತಿ ಮತ್ತು ಜ್ಞಾನ ಸುಧಾರಿಸುತ್ತದೆ. ಪುಸ್ತಕ ಓದಿನಿಂದ ಶಬ್ದಕೋಶ, ಏಕಾಗ್ರತೆ ಮತ್ತು ಆಲೋಚನಾ ಕೌಶಲ್ಯ ವೃದ್ಧಿಯಾಗಿ ಮಕ್ಕಳಆತ್ಮವಿಶ್ವಾಸ ಸುಧಾರಿಸುತ್ತದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಮಾತನಾಡಿ, ‘ಪುಸ್ತಕ’ ಎಂದರೆ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಚರಿಸಲ್ಪಡುವ ಅಂಬೇಡ್ಕರ್ ಜಯಂತಿ ಅಂಗವಾಗಿ ೨೦೨೪-೨೫ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ೧೦೦ ಕ್ಕೆ ೧೦೦ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿ.ಯು.ಸಿ ಕನ್ನಡ ಮಾಧ್ಯಮದಲ್ಲಿ ಶೇ೯೫% ಕ್ಕಿಂತ ಹೆಚ್ಚು ಅಂಕ ಗಳಿಸಿದ ತಾಲೂಕಿನ ವಿದ್ಯಾರ್ಥಿಗಳಿಗೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದ್ದು, ಸಾಧನೆ ಮಾಡಿದ ವಿದ್ಯಾರ್ಥಿಗಳು ಎ೨೮ ರ ಒಳಗಾಗಿ ಪರಿಷತ್ತಿನ ಗೌರವ ಕಾರ್ಯದರ್ಶಿ ಸಿದ್ದನಗೌಡ ಬಿಜ್ಜೂರ(೯೭೪೧೬೧೮೨೩೦), ಸಂಘಟನಾ ಕಾರ್ಯದರ್ಶಿ ಹುಸೇನ ಮುಲ್ಲಾ(೯೭೩೧೭೭೨೬೭೭), ಸದಸ್ಯ ಶ್ರೀಶೈಲ ಕತ್ತಿ(೯೬೧೧೨೪೯೩೯೮) ಇವರ ಬಳಿ ವಿವರಗಳನ್ನು ನೀಡುವಂತೆ ಪರಿಷತ್ತಿನ ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಪ್ರಕಟಣೆ ನೀಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸ್ಥಳೀಯ ಮಾತೋಶ್ರೀ ಗಂಗಾ ಶಿಕ್ಷಣ ಸಂಸ್ಥೆ ಹಾಗೂ ಮಾಸ್ಟರ್ಸ್ ಅಕಾಡೆಮಿ ಸಹಯೋಗದಲ್ಲಿನ ಜ್ಞಾನ ಗಂಗೋತ್ರಿ ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಪರೀಕ್ಷೆಯಲ್ಲಿ ಸಾಧನೆಗೈದಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ನಿರಂಜನ ಬೆನಕನವರ ಶೇ.94.60 ಪೂಜಾ ದಾನಗೌಡ ಶೇ.91.17 ಪ್ರವೀಣ ಇಟ್ನಾಳ ಶೇ.88.58 ಹಾಗೂ ರವಿ ವಾಲಿ 88.58 ಅಂಕ ಪಡೆದಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಪನಾಳಕರ, ಪ್ರಾಚಾರ್ಯ ಚಂದ್ರಶೇಖರ ಆಶಿ, ಮಾಸ್ಟರ್ಸ್ ಅಕಾಡೆಮಿ ನಿರ್ದೇಶಕರಾದ ಪ್ರದೀಪ ದೇಶಪಾಂಡೆ, ಶೀತಲ್‌ ಆಸ್ಕಿ, ಯಾಸಿನ್ ಮುಲ್ಲಾ, ರಂಗನಾಯಕ ನಾಯಕ, ಗುರು ಚುಳಚಿಗ್ಯಾರ, ಸಿಬ್ಬಂದಿ ವರ್ಗ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಎಕ್ಸೆಲ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಸಂಸ್ಥೆ ಬಸ್ ಜಮಖಂಡಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್ ಸಮೀಪದ ತಗ್ಗು ಪ್ರದೇಶದಲ್ಲಿ ಮಂಗಳವಾರ ಉರುಳಿ ಬಿದ್ದಿದೆ.ಜಮಖಂಡಿಯಿಂದ ಹಿಪ್ಪರಗಿ ಮಾರ್ಗವಾಗಿ ಅಥಣಿಗೆ ಹೋಗುತ್ತಿದ್ದ ಬಸ್ ಬೆಳಗ್ಗೆ 11.30ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ಸ್ಥಳೀಯರುಬಸ್ ಕಿಟಕಿ ಹಾಗೂ ಹಿಂಬದಿ ಗಾಜುಗಳನ್ನು ಒಡೆದು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಚಾಲಕ, ನಿರ್ವಾಹಕ ಹಾಗೂ ಏಳೆಂಟು ಜನ ಪ್ರಯಾಣಿಕರು ಮಾತ್ರ ಬಸ್‌ ನಲ್ಲಿದ್ದರು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಜಮಖಂಡಿ ಘಟಕ ವ್ಯವಸ್ಥಾಪಕ ಡಿˌ ಬಿˌ ಗಸ್ತಿ “ಉದಯರಶ್ಮಿ” ಪತ್ರಿಕೆಗೆ ತಿಳಿಸಿದ್ದಾರೆ.ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್‌ಐ ಶಾಂತಾ ಹಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Read More

ಲೇಖನ- ಡಾ. ಶಶಿಕಾಂತ ಪಟ್ಟಣ ರಾಮದುರ್ಗ ಉದಯರಶ್ಮಿ ದಿನಪತ್ರಿಕೆ ವ್ಯಕ್ತಿ ತನ್ನ ಜಾತಿ ಶ್ರೇಷ್ಠತೆ ತೊರೆದು ಬ್ರಾಹ್ಮಣ ತೊರೆದು ದಲಿತರಿಗಾಗಿ ಶ್ರಮಿಸಿದ ಅಪ್ರತಿಮ ಸಾಮಾಜಿಕ ಚಳುವಳಿಯ ನಾಯಕರು.29-06-1859 – ರಂಗರಾಯರ ಜನನಅದು 1880 ರ ಆಸುಪಾಸಿನ ದಿನಗಳು, ಸೌತ್ ಕೆನರಾ ಜಿಲ್ಲೆಯ ಅಂದರೆ ಈಗಿನ ದಕ್ಷಿಣ ಕನ್ನಡ ಜಿಲ್ಲೆಯ ಬ್ರಿಟೀಷ್ ನ್ಯಾಯಾಧೀಶರು ಸಿಡಿಮಿಡಿಗೊಂಡಿದ್ದರು. ಕಾರಣ ಆ ನ್ಯಾಯಾಲಯಕ್ಕೆ ಹೊಸತಾಗಿ ಒಬ್ಬ ದಲಿತ ವ್ಯಕ್ತಿ ಬೆಂಚ್ ಕ್ಲರ್ಕ್ ಆಗಿ ನೇಮಕಗೊಂಡಿದ್ದರು. ಅವರ್ಣೀಯನೊಬ್ಬ ಮುಟ್ಟಿದ ಕಡತಗಳನ್ನು ತಾವು ಮುಟ್ಟುವುದಿಲ್ಲ ವೆಂದು ಕಚೇರಿಯಲ್ಲಿದ್ದ ಸವರ್ಣೀಯರು, ಹಾಗೆಯೇ ವಕೀಲರು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸುವ ಮಟ್ಟಿಗೆ ಹೋಗಿದ್ದರು. ಸೆಷನ್ಸ್ ನ್ಯಾಯಾಧೀಶರಿಗೆ ಭಾರತವನ್ನು ಪ್ಲೇಗಿನಂತೆ ಕಾಡುತ್ತಿದ್ದ ಅಸ್ಪೃಷ್ಯತೆಯ ಸಮಸ್ಯೆಯ ಅರಿವಿತ್ತಾದರೂ ಅದು ವಿದ್ಯಾವಂತ ಸಮಾಜದಲ್ಲಿಯೂ ಇಷ್ಟು ಹಾಸುಹೊಕ್ಕಾಗಿರುವುದನ್ನು ನೋಡಿ ರೇಜಿಗೆಯಾಗಿತ್ತು. ಅಂದು ಕೋರ್ಟಿಗೆ ಹಾಜರಾಗಿದ್ದ ಯುವ ವಕೀಲ ಕುದ್ಮಲ್ ರಂಗರಾಯರನ್ನು ಆ ಬ್ರಿಟೀಷ್ ಜಡ್ಜ್ ತರಾಟೆಗೆ ತೆಗೆದುಕೊಂಡಿದ್ದರಂತೆ. ‘ಏನ್ರಿ ಇದು ಮಿ. ರಾವ್, ಅದ್ಯಾವ ಕಾಲದಲ್ಲಿ ಬದುಕುತ್ತಿದೇರಿ ನಿಮ್ಮ ಜಿಲ್ಲೇ…

Read More