Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ಹೌದು ಹಿಂದಿನ ದಿನಗಳ ಮತ್ತು ಇಂದಿನ ದಿನಗಳ ವರ್ತನೆಯನ್ನು ತುಲನೆ ಮಾಡಿದರೆ ಆ ವ್ಯತ್ಯಾಸಗಳು ವೇದ್ಯವಾಗುತ್ತವೆ.ಹೆಣ್ಣುಮಕ್ಕಳು 11 -12 ವರ್ಷಕ್ಕೇನೆ ಋತುಮತಿಯಾಗುವುದು, ಡೆಲಿವರಿ ದಿನಾಂಕಕ್ಕೆ 15- 20 ದಿನಗಳ ಮುಂಚೆಯೇ ಮಗು ಆಗುವುದು, ಮೆನೋಪಾಸ್ ಗೆ 10-12 ವರ್ಷಗಳ ಮುಂಚೆಯೇ ಋತುಸ್ರಾವ(ಮುಟ್ಟು) ನಿಲ್ಲುವುದು, ಇನ್ನು ಹುಡುಗರ ವಿಷಯಕ್ಕೆ ಬಂದರೆ, ಡಿಗ್ರಿಗೆ ಬರಬೇಕಾಗಿದ್ದ ಗಡ್ಡ – ಮೀಸೆ, ಇನ್ನೂ ಹೈಸ್ಕೂಲು ಪಿಯುಸಿಗೇನೆ ಬಂದುಬಿಡುವುದು, 4-5 ವರ್ಷಕ್ಕೇನೇ ಬಿಪಿ, ಶುಗರ್, ಹಾರ್ಟ್ ಅಟ್ಯಾಕ್ ಇವೆಲ್ಲವೂ ಇವಾಗಿನ ಆಹಾರದಿಂದ ಮತ್ತು ಜೀವನ ಕ್ರಮದಿಂದಾದ ಬದಲಾವಣೆಗಳು ಎಂದಿಟ್ಟುಕೊಳ್ಳೋಣ.ಆದರೆ ಮಕ್ಕಳೆಂದರೆ ಮುಗ್ದರು, ಅವರು ದೇವರಿಗೆ ಸಮಾನ, ಅವರು ಸತ್ಯವನ್ನು ಬಿಟ್ಟು ಬೇರೇನನ್ನೂ ಹೇಳುವುದಿಲ್ಲ, ಹೇಳುವುದಕ್ಕೆ ತಿಳಿಯುವುದೂ ಇಲ್ಲ. ಎಂಬುದು ಸಾಮಾನ್ಯ ನಂಬಿಕೆ. ಆದರೆ ಕೆಲವು ಮಕ್ಕಳ ಉದ್ಧಟತನದ ಮಾತುಗಳನ್ನೂ ವರ್ತನೆಗಳನ್ನೂ ನೋಡಿದಾಗ ಆಶ್ಚರ್ಯವಾಗುತ್ತದೆ. ‘ಅರೇ ಹೀಗೂ ಹೇಳಬಹುದೆ? ದೊಡ್ಡವರಾದ ನಾವೇ ಇಷ್ಟು ಹದ್ದುಮೀರಿ ಮಾತನಾಡುವುದಿಲ್ಲವಲ್ಲ’ ಎನಿಸುತ್ತದೆ. ಅದ್ಯಾರಿಂದ ಇವರು ಹೀಗೆ…
ಲೇಖನ- ಡಾ.ಭವ್ಯ ಅಶೋಕ್ ಸಂಪಗಾರ್ಕ್ಷಯ ರೋಗ ವೈದ್ಯಾಧಿಕಾರಿಜಿಲ್ಲಾಸ್ಪತ್ರೆ, ಬೆಳಗಾವಿ ಉದಯರಶ್ಮಿ ದಿನಪತ್ರಿಕೆ ಹೂಗಾರರೆಂದರೆ ಹೂವು-ಪತ್ರೆಗಳ ವ್ಯಾಪಾರ-ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದ ಸಮಾಜವೆಂದು ಅರ್ಥೈಸಿಕೊಳ್ಳಬಹುದು. ಈ ಸಮಾಜದ ಬಗ್ಗೆ ಚಾಲುಕ್ಯ ಮಹಾರಾಜ ಮಂಗಲೇಶನ ಶಾಸನದಲ್ಲಿ ಲಿಖಿತ ವರದಿಗಳಿವೆ. ಹೆಚ್ಚಿನ ಭಾಗ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹರಡಿರುವ ಹೂವಿನ ಮನಸ್ಸಿನವರಾದ ಇವರು ದೇಶದ ವಿವಿಧ ಕ್ಷೇತ್ರಗಳಲ್ಲಿ ದೊಡ್ಡ ಸಾಧನೆಯನ್ನು ಮಾಡಿದ್ದಾರೆ. ಇತಿಹಾಸದ ಪ್ರಕಾರ ‘ಪುಷ್ಪದ ಸೋಮಯ್ಯ’, ‘ಬಾಹೂರು ಬೊಮ್ಮಯ್ಯ’, ‘ಹೂವಿನ ಅಲ್ಲಮ’, ‘ಬಿಲ್ವಪತ್ರೆಯ ವೀರಣ್ಣ’, ‘ಗುಂಡುಕತ್ತರಿಯ ನಾಚಯ್ಯ’ ಮುಂತಾದ ಹೂಗಾರ ಸಮಾಜಕ್ಕೆ ಸೇರಿದ ಪ್ರಮುಖರ ವಿವರಣೆಗಳಿವೆ. ಹರಿಹರ ಮಹಾಕವಿಯ ನಂಬಿಯಣ್ಣನ ರಗಳೆಯಲ್ಲಿ ‘ಪುಷ್ಪದತ್ತ’ನೆಂಬ ಪಾತ್ರವಿದೆ. ಇವನನ್ನು ಹೂಗಾರರ ಮೊದಲ ಪ್ರತಿನಿಧಿಯಾಗಿ ಕಾಣಬಹುದು.ಈ ಸಮಾಜದ ಆದಿಪುರುಷನೆಂದು ಶರಣ ‘ಹೂಗಾರ ಮಾದಯ್ಯ’ನವರನ್ನು ಗೌರವಿಸಲಾಗುತ್ತದೆ.ಭವ್ಯ ಭಾರತ ದೇಶದ ಸಂಸ್ಕೃತಿಯು ಐದು ಸಾವಿರ ವರ್ಷಗಳಿಗಿಂತಲೂ ಹಳೆಯದಾಗಿದೆ. ‘ಜೀವ ಮತ್ತು ಪರಮಾತ್ಮ’, ‘ಸೃಷ್ಟಿ-ಅಂತ್ಯ’ ಮುಂತಾದ ವಿಷಯಗಳ ಕುರಿತು ಇಲ್ಲಿ ನಡೆದಿರುವಷ್ಟು ಆಳವಾದ ಅಧ್ಯಯನ ಪ್ರಪಂಚದ ಮತ್ತೆಲ್ಲಿಯೂ ನಡೆದಿಲ್ಲ. ಇಲ್ಲಿ ಸಾರ್ಥಕ ಬದುಕನ್ನು ನಡೆಸುವ ಕುರಿತು…
ಪ್ರಗತಿಪರ ಯುವ ರೈತನನ್ನು ಸನ್ಮಾನಿಸಿ ಪ್ರೋತ್ಸಾಹಿಸಿದ ಸಚಿವ ಶಿವಾನಂದ ಪಾಟೀಲ | ಕಗ್ಗೋಡ ಪದವೀಧರ ಯುವರೈತ ನವೀನ ಮಂಗಾನವರ ಸಾಧನೆಗೆ ಮೆಚ್ಚುಗೆ *ಉದಯರಶ್ಮಿ ದಿನಪತ್ರಿಕೆ* ವಿಜಯಪುರ: ಜಿಲ್ಲೆಯ ಪದವೀಧರ ಯುವ ಪ್ರಗತಿಪರ ರೈತರೊಬ್ಬರು ಥೈಲ್ಯಾಂಡ್ ಮೂಲದ ಮಾವು ಬೆಳೆದು ಯಶಸ್ಸು ಸಾಧಿಸಿದ್ದಾರೆ. ಹಣ್ಣಿನ ಸ್ವಾದ ಸವಿದ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಪ್ರಗತಿಪರ ಯುವರೈತ ನವೀನ್ ನನ್ನು ಸನ್ಮಾನಿಸಿ ಪ್ರೋತ್ಸಾಹಿಸಿದರು.ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದ ಪದವೀಧರ ಯುವ ಪ್ರಗತಿಪರ ರೈತ ನವೀನ ರಾವುತಪ್ಪ ಮಂಗಾನವರ ಮಂಗಳವಾರ ತಾವು ಬೆಳೆದ ಮಾವಿನೊಂದಿಗೆ ಸಚಿವ ಶಿವಾನಂದ ಪಾಟೀಲ ಅವರ ಭೇಟಿಗೆ ಬಂದಿದ್ದರು.*ವಿಷಮುಕ್ತ ಥೈ ಮಾವು ಬೆಳೆ*ನವೀನ್ ಶಿವಣಗಿ ಗ್ರಾಮದ ತಮ್ಮ 8 ರಲ್ಲಿ 7 ಎಕರೆ ಪ್ರದೇಶದಲ್ಲಿ ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಥೈಲ್ಯಾಂಡ್ ಮೂಲದ ಮಾವು ಬೆಳೆದಿದ್ದಾರೆ. ಈ ಮಾವಿನ ವಿಶೇಷ ಏನೆಂದರೆ ವರ್ಷಪೂರ್ತಿ ಹಣ್ಣು ಬಿಡುತ್ತದೆ ಎಂದು ಸಚಿವರಿಗೆ ವಿವರಿಸಿದರು.2011 ಡಿಸೆಂಬರ್ ತಿಂಗಳಲ್ಲಿ ಥೈಲ್ಯಾಂಡ್…
ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ಹಾವಿನಾಳ ಗ್ರಾಮದ ಶ್ರೀದತ್ತ ಇಂಡಿಯಾ ಸಕ್ಕರೆ ಕಾಖಾನೆಯಲ್ಲಿ ಸೋಮವಾರ ಘಟಸ್ಥಾಪನೆಯ ಮೂಹೂರ್ತದಲ್ಲಿ ಕಾರ್ಖಾನೆಯ ಬಾಯಲರ್ ಅಗ್ನಿ ಪ್ರದೀಪನ ಪೂಜೆ ಮಾಡಲಾಯಿತು.ಬಾಯಲರ್ ಅಗ್ನಿ ಪ್ರದೀಪನವನ್ನು ಶ್ರೀಕೃಷ್ಣ ದೇವಸ್ಥಾನ ಕಮೀಟಿಯ ಅಧ್ಯಕ್ಷ ಶ್ಯಾಮಸುಂದರ್ ಶಾಸ್ತ್ರಿ ಅವರು ಪೂಜೆ ನೆರವೇರಿಸಿದರು.ಕಂಪನಿಯ ಉಪಾಧ್ಯಕ್ಷ ಮೃತ್ಯುಂಜಯ ಶಿಂಧೆ ಮಾತನಾಡಿ, ಇದು ನಮ್ಮ ಕಂಪನಿಯ ನಾಲ್ಕನೆಯ ಕಬ್ಬು ನುರಿಸುವಿಕೆ ಹಂಗಾಮವಿದ್ದು, ಪ್ರಸಕ್ತ ಸಾಲಿನ ಕಬ್ಬು ನುರಿಸುವಿಕೆಯನ್ನು ಅ.೨೦ ರಿಂದ ಪ್ರಾರಂಭಿಸಲಾಗುವುದು. ಆದ್ದರಿಂದ ಈ ಭಾಗದ ರೈತರು ತಾವು ಬೆಳೆದ ಕಬ್ಬನ್ನು ಶ್ರೀದತ್ತ ಇಂಡಿಯಾ ಕಾರ್ಖಾನೆಗೆ ನುರಿಸಲು ಕಳುಹಿಸುವಂತೆ ವಿನಂತಿ ಮಾಡಿದರು.ಕಬ್ಬು ಬೆಳೆಗಾರರ ಕಬ್ಬಿನ ಬಿಲ್, ಕಟಾವು ಸಾಗಾಣಿಕೆಯ ಬಿಲ್ ಸರಕಾರದ ನಿಯಮದ ಪ್ರಕಾರ ಸರಿಯಾದ ವೇಳೆಗೆ ರೈತರಿಗೆ ಪಾವತಿ ಮಾಡಲಾಗುವದೆಂದು ಹೇಳಿದ ಅವರು, ಪ್ರಸಕ್ತ ಸಾಲಿನಲ್ಲಿ ೭ ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಿದ್ದೇವೆ ಎಂದರು..ಈ ಕಾರ್ಯಕ್ರಮದಲ್ಲಿ ಕಂಪನಿಯ ಸಂಚಾಲಕ ಚೇತನ ಧಾರು, ರಾಜ್ಯ ಶಿಕರ್ ಬ್ಯಾಂಕಿನ ಸಂಚಾಲಕ ಅವಿನಾಶ ಮಹಾಗಾವಕರ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜೀವನಾವಶ್ಯಕ ವಸ್ತುಗಳ ಮೇಲೆ ಜಿ.ಎಸ್.ಟಿ. ಕಡಿತಗೊಳಿಸುವ ಮೂಲಕ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಕಡಿಮೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಐತಿಹಾಸಿಕ ನಿರ್ಣಯ ಸ್ವಾಗತಿಸಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಶ್ರೀ ಸಿದ್ದೇಶ್ವರ ದೇವಾಲಯದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.ಇದೇ ವೇಳೆ ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಅನೇಕ ಧುರೀಣರು ಅಲ್ಲಿರುವ ವ್ಯಾಪಾರಸ್ಥರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ಆಲಿಸುವ ಜೊತೆಗೆ ಜಿ.ಎಸ್.ಟಿ ಇಳಿಕೆಯ ಕುರಿತು ಸಂತಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ಪ್ರಧಾನಿ ನರೇಂದ್ರ ಮೋದಿ ಒಬ್ಬ ನೈಜ ಜನನಾಯಕ, ದೇಶದ ಬಡವರು ಜೀವನಾವಶ್ಯಕ ವಸ್ತುಗಳನ್ನು ಖರೀದಿಸಿಲು ತೊಂದರೆ ಎದುರಿಸಬಾರದು ಎಂದು ಅವುಗಳ ಮೇಲೆ ಜಿ.ಎಸ್.ಟಿ. ಕಡಿತಗೊಳಿಸಿದ್ದು ದೇಶದ ಆರ್ಥಿಕ ಇತಿಹಾಸದಲ್ಲಿಯೇ ಚಾರಿತ್ರಿಕ ಕಾರ್ಯಕ್ರಮವಾಗಿದೆ, ಸಬ್ ಕಾ ಸಾಥ್ ಸಬ್ ಕಾ ವಿಕಾಸ ಎನ್ನುವ ಅವರ ಧ್ಯೇಯದಂತೆ ಅನೇಕ ಯೋಜನೆಗಳನ್ನು ಮೋದಿಜಿ ಅನುಷ್ಠಾನಗೊಳಿಸಿದ್ದಾರೆ, ಅವರ ನಾಯಕತ್ವದಲ್ಲಿ ಚುನಾವಣೆ…
ವಿಜಯಪುರ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಅತ್ಯಾಧುನಿಕ ವಾಹನಗಳು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉದ್ಘಾಟನೆಗೆ ಸಜ್ಜಾಗಿರುವ ಇಲ್ಲಿನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿರುವ ಅವರು, ಈ ಅಗ್ನಿಶಾಮಕ ವಾಹನಗಳು ಕಂಪ್ಯೂಟರೀಕೃತವಾಗಿದ್ದು, ಜಾಗತಿಕ ಟೆಂಡರ್ ಅಡಿಯಲ್ಲಿ ಆಸ್ಟ್ರಿಯಾದಿಂದ ಪೂರೈಕೆಯಾಗಿವೆ. ಇವುಗಳ ಬೆಲೆ ಅಂದಾಜು 24 ಕೋಟಿ ರೂಪಾಯಿ. ಇವು ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ. ಈ ಮೂಲಕ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೇಳಿದ್ದ ಮತ್ತೊಂದು ಅಗತ್ಯ ಪೂರೈಸಲಾಗಿದೆ ಎಂದಿದ್ದಾರೆ.ಈ ಅಗ್ನಿಶಾಮಕ ವಾಹನಗಳು ನೆಲದ ಮೇಲಿನ ಬೆಂಕಿಯನ್ನು ನಂದಿಸಿಕೊಂಡು ವೇಗದಿಂದ ಮುನ್ನುಗ್ಗಬಲ್ಲವು. ವಿಜಯಪುರ ವಿಮಾನ ನಿಲ್ದಾಣದ ಮೂಲ ವಿನ್ಯಾಸದಲ್ಲಿ ಈ ಸೌಲಭ್ಯಗಳು ಇರಲಿಲ್ಲ. ಆಮೇಲೆ ಇದರ…
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರಕಾರದಿಂದ ಸಮರ್ಪಕ ಪರಿಹಾರ | ಯೋಜನಾ ಸಂತ್ರಸ್ತರು ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರಕಾರ ಒಪ್ಪಿಗೆ ಸೂತ್ರದಡಿ ಸಮರ್ಪಕ ಪರಿಹಾರ ಘೋಷಣೆ ಮಾಡಿದ್ದು, ಇದರಿಂದ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಿ ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತೀತರ ಜಿಲ್ಲೆಗಳ ಬಾಕಿ ಭೂಮಿಗೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ದೇವರ ಗಣ್ಣೂರಿನಲ್ಲಿ ಕೃಷ್ಣ ಮೇಲ್ದಂಡೆ ಹಂತ-3ರ ಯೋಜನಾ ಸಂತ್ರಸ್ತರಿಗೆ ಯೋಗ್ಯ ದರ ನಿಗದಿ ಪಡಿಸಿದ ಅಂಗವಾಗಿ ಯೋಜನಾ ಸಂತ್ರಸ್ತರು ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಹಿಂದೆ ಬೊಮ್ಮಾಯಿ ನೇತೃತ್ವದ ಸರಕಾರ ಅಧಿಕಾರದಲ್ಲಿದ್ದಾಗ ಭೂಸ್ವಾಧೀನದಡಿ ಭೂಮಿ ಕಳೆದುಕೊಳ್ಳುವ ರೈತರಿಗೆ ಹಕ್ಕಿನಂತೆ ಸಿಗಬೇಕಾದ ಪರಿಹಾರವನ್ನು ಕನ್ಸೆಂಟ್(ಒಪ್ಪಿಗೆ) ಅನ್ವಯ ನೀಡುವುದಾಗಿ ರೈತರನ್ನು ದಾರಿ ತಪ್ಪಿಸಲಾಗಿತ್ತು. ಆದರೇ,…
ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಗಂಭೀರ ಆರೋಪ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಹೆಸರಿನಲ್ಲಿ ಹಿಂದೂ ಧರ್ಮ ಒಡೆಯುವ ಸಂಚು ನಡೆದಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.ಶಾಸಕರು ತಮ್ಮ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮೀಕ್ಷೆಯ ಹೆಸರಿನಲ್ಲಿ ಹಿಂದುಗಳ ಸಂಖ್ಯೆಯನ್ನು ಕಡಿತಗೊಳಿಸುವುದು. ಹಿಂದೂ ಧರ್ಮವನ್ನು ಒಡೆದು, ಸರ್ಕಾರಿ ಸೌಲಭ್ಯಗಳು ದೊರೆಯದಂತೆ ನೋಡಿಕೊಳ್ಳುವ ವ್ಯವಸ್ಥಿತ ಸಂಚು ನಡೆಸುತ್ತಿದೆ. ದೇಶದ ಸಂವಿಧಾನದಲ್ಲಿ ಹಿಂದೂ, ಕ್ರೈಸ್ತ, ಮುಸಲ್ತಾನ, ಸಿಖ್, ಜೈನ, ಬೌದ್ಧ ಹೀಗೆ ಆರು ಜಾತಿಗಳಿಗೆ ಮಾತ್ರ ಮಾನ್ಯತೆ ನೀಡಲಾಗಿದೆ. ಉಳಿದೆಲ್ಲ ಜಾತಿಗಳು, ಉಪಜಾತಿಗಳು ಹಿಂದೂ ಧರ್ಮದ ಅಡಿಯಲ್ಲಿಯೇ ಬರುತ್ತವೆ. ಅದ್ದರಿಂದ ಸಾರ್ವಜನಿಕರು ಜನಗಣತಿ ಸಂದರ್ಭದಲ್ಲಿ ಒಂದನೇ ಕಾಲಂನಲ್ಲಿ ಹಿಂದೂ ಎಂದು ನಮೂದಿಸಬೇಕು, ಎರಡನೇಯ ಕಾಲಂನಲ್ಲಿ ಜಾತಿಯ ಹೆಸರು ಹಾಗೂ ಮೂರನೇಯ ಕಾಲಂನಲ್ಲಿ ಉಪಜಾತಿಯ ಹೆಸರನ್ನು ನೊಂದಾಯಿಸಬೇಕು ಎಂದು ಮನವಿ ಮಾಡಿದರು.ಮುಸ್ಲಿಂ, ಕ್ರೈಸ್ತ, ಬೌದ್ಧ, ಸಿಖ, ಜೈನ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕೇಂದ್ರ ಸರ್ಕಾರ ದಸರಾ ಹಬ್ಬದ ಕೊಡುಗೆಯಾಗಿ 4ರ ಬದಲಿಗೆ 2 ಸ್ತರದ ಜಿಎಸ್‌ಟಿ ಜಾರಿಗೊಳಿಸಿದ್ದು, ನಿತ್ಯ ಬಳಕೆಯ ವಸ್ತುಗಳು, ಔಷಧಿಗಳು ಸೇರಿ 375 ವಸ್ತುಗಳು ಅಗ್ಗದ ದರದಲ್ಲಿ ಜನಸಾಮಾನ್ಯರಿಗೆ ದೊರಕುವಂತೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಸ್ವಾಗತಿಸಿ ಸೋಮವಾರ ಶಾಸಕ ಜಗದೀಶ ಗುಡಗುಂಟಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.ನಗರದ ಹಳೆಯ ತಹಸೀಲ್ದಾರ್ ಕಚೇರಿಯಿಂದ ಹನುಮಾನ್ ಚೌಕ್‌ವರೆಗೆ ಮೆರವಣಿಗೆ ನಡೆಸಿ ಮೋದಿ ಪರ ಘೋಷಣೆ ಕೂಗಿದರು.ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಜಗದೀಶ ಗುಡಗುಂಟಿ, ಕೇಂದ್ರ ಸರ್ಕಾರ ಜನಪರ ಯೋಜನೆ ಜಾರಿಗೆ ತರುವ ಮೂಲಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆ. 140 ಕೋಟಿ ಜನರಿಗೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಒಂದು ದೇಶ ಒಂದು ತೆರಿಗೆ ಯೋಜನೆ ಜಾರಿಗೆ ತರಲಾ ಗಿದೆ. ಉತ್ಪಾದಕರು, ವ್ಯಾಪಾರಸ್ಥರು ಹಾಗೂ ಗ್ರಾಹಕರಿಗೆ ಲಾಭವಾಗಲಿದೆ ಎಂದು ಅಭಿಪ್ರಾಯಪಟ್ಟರು. ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತ ನಾಡಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಸೆಪ್ಟೆಂಬರ 26 ಮತ್ತು 27 ರಂದು ಎರಡು ದಿನಗಳ ಕಾಲ ಉಚಿತ ತಪಾಸಣೆ ಶಿಬಿರ ನಡೆಯಲಿದೆ.ಈ ಶಿಬಿರದಲ್ಲಿ ಸ್ಥೂಲ ಕಾಯ (obesity) ಕುರಿತು ಉಚಿತ ತಪಾಸಣೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದು ಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9343877670 ಅಥವಾ ಆಸ್ಪತ್ರೆಯ ಮೊಬೈಲ್ ಸಂಖ್ಯೆ -9513397413 ಗೆ ಸಂಪರ್ಕಿಸುತೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
