Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸರ್ಕಾರದ ಕಾನೂನು ಇಲಾಖೆ ಅಭಿಮತ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ೨೦೧೬ ಕ್ಕೂ ಪೂರ್ವದಲ್ಲಿ ನೇಮಕಗೊಂಡ ಪ್ರಾಥಮಿಕ ಶಾಲಾ ಶಿಕ್ಷಕರನ್ನು ೨೦೧೭ ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ ೧ ರಿಂದ ೫ ನೇ ವರ್ಗಕ್ಕೆ ಸೀಮಿತಗೊಳಿಸಿ ಪೂರ್ವಾನ್ವಯಗೊಳಿಸುವುದು ಸರಿಯಾದ ಕ್ರಮವಲ್ಲ ಎಂದು ಸರ್ಕಾರದ ಕಾನೂನು ಇಲಾಖೆ ಅಭಿಪ್ರಾಯಪಟ್ಟಿದೆ.ಕಾನೂನು ಇಲಾಖೆಯ ಈ ಅಭಿಪ್ರಾಯ ಕಳೆದ ಏಳು ವರ್ಷಗಳಿಂದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಡೆಸುತಿದ್ದ ಹೋರಾಟಕ್ಕೆ ಶಕ್ತಿ ನೀಡಿದೆ ಎಂದು ಸಂಘದ ಅಧ್ಯಕ್ಷ ಕೆ.ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.ಯಾವುದೇ ನಿಯಮಗಳು ಜಾರಿಗೆ ಬಂದ ದಿನಾಂಕದಿAದ ಅನ್ವಯವಾಗಲಿದ್ದು, ಅದರನ್ವಯ ಪ್ರಸ್ತುತ ಪ್ರಕರಣದಲ್ಲಿ ೨೦೧೭ ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ೨೦೧೬ ಕ್ಕಿಂತ ಮೊದಲು ನೇಮಕಗೊಂಡ ಶಿಕ್ಷಕರುಗಳಿಗೆ ಪೂರ್ವಾನ್ವಯಗೊಳಿಸುವುದು ಸರಿಯಾದ ಕ್ರಮವಲ್ಲ, ಪ್ರತಿಯೊಬ್ಬ ನೌಕರನಿಗೂ ಸದರಿ ನೌಕರನು ನೇಮಕಗೊಂಡ ಸಮಯದಲ್ಲಿ ಜಾರಿಯಲ್ಲಿದ್ದ ನಿಯಮಗಳನ್ನು ಅನ್ವಯಿಸಬೇಕಾಗಿರುತ್ತದೆ ಎಂದು ಕಾನೂನು ಇಲಾಖೆ ಅಭಿಪ್ರಾಯಪಟ್ಟಿದೆ ಎಂದರು.೨೦೧೭ ರ ನೇಮಕಾತಿ ನಿಯಮಾವಳಿಯಂತೆ ಎಲ್ಲಾ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಡಾ ಬಿ ಆರ್ ಅಂಬೇಡ್ಕರ್ ಅವರ ಬದುಕು, ಜೀವನಶೈಲಿ, ಅವರ ಕೊಡುಗೆಗಳು ಎಲ್ಲರಿಗೂ ಸ್ಫೂರ್ತಿ. ಅವರ ಕೊಡುಗೆ ಭಾರತ ಜನತೆಯ ಒಂದು ರೀತಿ ಜೀವನಾಡಿ ಇದ್ದಂತೆ. ಅವರ ಬೃಹತ್ ಮತ್ತು ಸೂಕ್ಷ್ಮ ಕೊಡುಗೆಗಳಿಂದಲೇ ಇಂದು ದೇಶದ ಎಲ್ಲ ಜನತೆಗೆ ಸಮಾನತೆ, ಹಕ್ಕು, ಕರ್ತವ್ಯ, ಪ್ರಗತಿಯ ಕನಸು ಎಲ್ಲವೂ ಸುಲಭ ಹಾಗೂ ಸುಗಮವಾಗಿದೆ ಎಂದು ಅಧ್ಯಕ್ಷತೆ ವಹಿಸಿದ ಕಂದಾಯ ಉಪವಿಭಾಗ ಅಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.ಪಟ್ಟಣದ ಶಿಕ್ಷಣ ಇಲಾಖೆಯ ಗುರುಭವನದಲ್ಲಿ ತಾಲ್ಲೂಕು ಆಡಳಿತವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ 134 ನೇ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪರ್ಚಾಣೆ ನೆರಿವೆರಿಸಿ ತದನಂತರ ಜ್ಯೋತಿ ಬೆಳೆಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಜನ್ಮದಿನ. ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನ. ಅವರನ್ನು ಗೌರವಿಸುವ ಸುದಿನ. ಇಂದಿನ ಪ್ರಜೆಗಳು ಅವರ ಸಂದೇಶಗಳನ್ನು ತಿಳಿದು, ಸದಾ ಅನುಸರಿಸಬೇಕಾಗಿದೆ ಎಂದು ಹೇಳಿದರು.ಪ್ರೌಢಶಾಲೆಯ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅಂಬೇಡ್ಕರ್ ಅವರ ತತ್ವಶಾಸ್ತ್ರ ಇಂದಿಗೂ ಪ್ರಸ್ತುತವಾಗಿದೆ. ಭಾರತದ ಸಾಮಾಜಿಕ-ಸಾಂಸ್ಕೃತಿಕ ವ್ಯವಸ್ಥೆಯನ್ನು ರೂಪಿಸುವಲ್ಲಿ ಬಾಬಾಸಾಹೇಬ್ ಅವರ ಸಕ್ರಿಯ ಪಾತ್ರವಿಲ್ಲದಿದ್ದರೆ, ಹಳೆಯ ಮತ್ತು ಪುರಾತನ ನಂಬಿಕೆಗಳಿಂದ ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟçವಾದ ದೇಶಕ್ಕೆ ಯಾವುದೇ ಪ್ರಗತಿ ಸಾಧಿಸುವುದು ಅಸಾಧ್ಯವಾಗಿತ್ತು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಬಸ್ ನಿಲ್ದಾಣದ ಹತ್ತಿರವಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತಿ ಪ್ರಯುಕ್ತವಾಗಿ ಡಾ.ಅಂಬೇಡ್ಕರ್ ಅವರ ಪುತ್ತಳಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಅವರು ಈ ದೇಶದ ಅಸ್ಮಿತೆ. ಭಾರತದ ಭವ್ಯ ಭವಿಷ್ಯಕ್ಕಾಗಿ ತಮ್ಮ ಇಡೀ ಬದುಕನ್ನ ದೇಶಕ್ಕೆ ಸಮರ್ಪಣೆ ಮಾಡಿದಂತಹ ದೊಡ್ಡ ರತ್ನ. ಸಂವಿಧಾನವನ್ನು ರಚನೆ ಮಾಡುವ ಮೂಲಕ ಸರ್ವ ಸಮುದಾಯಗಳಿಗೂ ನ್ಯಾಯವನ್ನ ನೀಡಿದಂತವರು ಅಂತವರ ಬದುಕು ಮತ್ತು ಅವರ ತತ್ವಗಳು ಇಂದಿಗೂ ನಮಗೆಲ್ಲ ಆದರ್ಶವಾಗಿವೆ ಎಂದರು.ಈ ವೇಳೆ ಸಿಂದಗಿ ಬುದ್ಧ ವಿಹಾರದ ಪೂಜ್ಯಶ್ರೀ ಬಂತೇಜಿ ಸಂಘಪಾಲ್ ಅವರು ಮಾತನಾಡಿ, ಡಾ. ಅಂಬೇಡ್ಕರ್ ಅವರ ಕೊಡುಗೆಯನ್ನು ಈ ದೇಶ ಯಾವತ್ತು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು.ಇದೇ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಸಂಸ್ಥೆಯ ನಿರ್ದೇಶಕ ಪಿ.ಡಿ ಕುಲಕರ್ಣಿ ಶಾಲೆಯ ಮುಖ್ಯ ಗುರುಮಾತೆ ಎಸ್.ಆಯ್.ಅಸ್ಕಿ ಸೇರಿದಂತೆ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು.ಶಿವಯೋಗಿ ಸಿದ್ದರಾಮೇಶ್ವರ ವೃತ್ತಪಟ್ಟಣದ ಜೇವರ್ಗಿ ರಸ್ತೆಯಲ್ಲಿರುವ ಮೋರಟಗಿ ನಾಕಾ ಹತ್ತಿರ ಶಿವಯೋಗಿ ಸಿದ್ದರಾಮೇಶ್ವರ ವೃತ್ತದಲ್ಲಿ ಭೋವಿ ವಡ್ಡರ ಸಮಾಜದ ವತಿಯಿಂದ ಡಾ ಅಂಬೇಡ್ಕರ ೧೩೪ನೇ ಜಯಂತ್ಯೋತ್ಸವ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಿಕ್ಷಕ ಮುತ್ತಪ್ಪ ಪಾತ್ರೋಟಿ, ಭೋವಿ ಸಮಾಜದ ತಾಲೂಕು ಅಧ್ಯಕ್ಷ ಪಂಡಿತ ಯಂಪೂರೆ, ಪ್ರಾಧಿಕಾರ ಸದಸ್ಯ ಅಂಬರೀಶ ಚೌಗಲೆ, ಗ್ಯಾರೆಂಟಿ ಯೋಜನಾ ಸಮಿತಿ ಸದಸ್ಯೆ ಸುನಂದಾ ಯಂಪೂರೆ, ಭೋವಿ ಸಮಾಜದ ಮುಖಂಡರಾದ ಕೊಳ್ಳಪ್ಪ ಚಾಕರೆ, ಭೀಮಾಶಂಕರ ಯಂಪೂರೆ, ದಯಾನಂದ ಗೊಳಸಾರ, ತಿರುಪತಿ ಬಂಡಿವಡ್ಡರ, ಪರಸು ಯಂಪೂರೆ, ರವಿ ಚಾಕರೆ, ರವಿ ಬಂಡಿವಡ್ಡರ, ರವಿ ಕಟಕೆ, ಮಲ್ಲಿಕಾರ್ಜುನ ನಾರಾಯಣಕರ, ಯಲ್ಲಪ್ಪ ವಡ್ಡರ, ಶಿವಾಜಿ…
ಸಿಂದಗಿಯಲ್ಲಿ ಅಂಬೇಡ್ಕರ್ ವಂಶಜ ರಾಜರತ್ನ ಅಂಬೇಡ್ಕರ್ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅಂಬೇಡ್ಕರ್ ವಿಚಾರಧಾರೆ ಪಾಲನೆ ಮಾಡುವವರು ಅವರ ನಿಜವಾದ ಅನುಯಾಯಿಗಳು. ಅವರ ಸಿದ್ದಾಂತವನ್ನು ಅನುಸರಿಸುವ ಮೂಲಕ ಅನುಯಾಯಿಗಳಾಗಬೇಕು. ದಲಿತರು ಯಾರನ್ನೂ ಅವಲಂಭಿಸಬಾರದು ಎಂಬುದು ಅಂಬೇಡ್ಕರ್ ಅವರ ಇಚ್ಚೆಯಾಗಿತ್ತು. ಅದರೀಗ ದಲಿತರು ಹಿತಕಾಯುವ ಸಂವಿಧಾನವನ್ನು ದುರ್ಬಲಗೊಳಿಸಿ, ಸರಕಾರಿ ಸಂಸ್ಥೆಗಳೆಲ್ಲವನ್ನೂ ಹಾನಿ ಮಾಡಲಾಗುತ್ತಿದೆ. ಇದು ಬಾಬಾ ಸಾಹೇಬರಿಗೆ ಮೊದಲೇ ಗೊತ್ತಿತ್ತು. ಹೀಗಾಗಿ ದಲಿತರ ಹಿತಾಸಕ್ತಿ ರಕ್ಷಣೆಗಾಗಿ ಅವರು ಸಂವಿಧಾನವೊಂದನ್ನೇ ಕೊಟ್ಟು ಹೋಗಿಲ್ಲ. ಬುದ್ಧ ಮಾರ್ಗವನ್ನೂ ಬಿಟ್ಟು ಹೋಗಿದ್ದಾರೆ. ಸಂವಿಧಾನ ನಮ್ಮನ್ನು ರಕ್ಷಣೆ ಮಾಡದಿದ್ದರೆ ಇದುವೇ ನಮ್ಮ ರಕ್ಷಣೆಗೆ ಬರಲಿದೆ ಎಂದು ಅಂಬೇಡ್ಕರ್ ವಂಶಜ ರಾಜರತ್ನ ಅಂಬೇಡ್ಕರ್ ಹೇಳಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ, ಸಿಂದಗಿ ಜೈಭೀಮ ನಗರ ಹಾಗೂ ದಲಿತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಭೀಮರಾಯಗೌಡ ಬಿರಾದಾರ ಮಾಗಣಗೇರಿ ಮಹಾವೇದಿಕೆಯಲ್ಲಿ ಹಮ್ಮಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೆಯ ಜಯಂತ್ಯುತ್ಸವ ಮತ್ತು ಬುದ್ಧವಂದನೆ ಹಾಗೂ ಬಹಿರಂಗ ಸಮಾವೇಶ ಸಮಾರಂಭವನ್ನು ಉದ್ಘಾಟಿಸಿ ಅವರು…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಐತಿಹಾಸಿಕ ದಿಗಂಬರೇಶ್ವರ ಸಂಸ್ಥಾನ ಮಠದ ಕಲ್ಲಿನಾಥ ದೇವರ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶನಿವಾರ ಸಂಜೆ ವಿಜ್ರಂಭಣೆಯಿಂದ ಜರುಗಿತು. ಪ್ರತಿ ವರ್ಷ ದವನದ ಹುಣ್ಣಿಮೆಯಂದು ನಡೆಯುವ ದಿಗಂಬರೇಶ್ವರ ಮಠದ ಜಾತ್ರೆ ತಾಲೂಕಿನಲ್ಲಿಯೇ ಅತಿ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ವಿಶೇಷ ಪೂಜೆ, ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಗ್ಗೆಯಿಂದಲೇ ಭಕ್ತರು ಶ್ರೀ ಮಠಕ್ಕೆ ಬಂದು ಹರಕೆ ಹೊತ್ತಿರುವ ಬೇಡಿಕೆಯನ್ನು ತೀರಿಸಿದರು. ಪ್ರತಿ ವರ್ಷ ರಥೋತ್ಸವಕ್ಕೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಡವಳೇಶ್ವರ ಗ್ರಾಮದ ಭಕ್ತರು ತೇರಿನ ಹಗ್ಗವನ್ನು ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಕಲ ವಾದ್ಯ ವೈಭವಗಳೊಂದಿಗೆ ಮೆರವಣಿಗೆ ಮೂಲಕ ಶ್ರೀ ಮಠಕ್ಕೆ ಆಗಮಿಸಿದ ನಂತರ ದಿಗಂಬರೇಶ್ವರ ಮಠದ ಪೀಠಾಧಿಕಾರಿಗಳಾದ ಕಲ್ಲಿನಾಥ ದೇವರು ಮೂರ್ತಿಯೊಂದಿಗೆ ರಥವೇರಿದ ಬಳಿಕವೇ ನೆರೆದಿದ್ದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ದೇವರ ಜಯ ಘೋಷಣೆಗಳು ಕೂಗಿ, ತೇರು ಎಳೆಯಲಾಯಿತು. ಜಿಲ್ಲೆಯ ವಿವಿಧ ತಾಲೂಕು ಗ್ರಾಮಗಳಿಂದ ಭಕ್ತರು,…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸಂವಿಧಾನ ನೀಡಿರುವ ಅವಕಾಶಗಳನ್ನು ನಾವು ನೀವು ಪಡೆದು, ಅಂಬೇಡ್ಕರ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಬದುಕು ಕಟ್ಟಿ ಕೊಳ್ಳೋಣ ಎಂದು ತಹಶೀಲ್ದಾರ ಎಸ್.ಎಸ್. ನಾಯಕಲಮಠ ಹೇಳಿದರು. ಪಟ್ಟಣದ ಸಮುದಾಯ ಭವನದಲ್ಲಿ ತಾಲೂಕು ಆಡಳಿತದಿಂದ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ ಹಾಗೂ ಡಾ.ಬಾಬು ಜಗಜೀವನರಾಂ ರವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳು, ಚಿಂತನೆಗಳು ಸದಾ ನಮ್ಮಗೆಲ್ಲ ಪ್ರೇರಣಾದಾಯಿ ಎಂದರು. ಉಪನ್ಯಾಸಕರಾಗಿ ಶಿಕ್ಷಕ ಎನ್.ಎ. ಬನಸೋಡೆ ಮಾತನಾಡಿ ಇಂದು ಭಾರತದ ಪ್ರತಿಯೊಬ್ಬ ನಾಗರಿಕನೂ ಸಮಾನತೆ ಮತ್ತು ಅವಕಾಶಗಳನ್ನು ಪಡೆಯಲು ಸಂವಿಧಾನ ನೀಡಿದ ಕೊಡುಗೆ ಎಂದು ಹೇಳಿದರು. ಉಪನ್ಯಾಸಕರಾಗಿ ಶಿಕ್ಷಕಿ ರುದ್ರಮ್ಮ ಗಿಡ್ಡಪ್ಪಗೋಳ ಮಾತನಾಡಿ ದೇಶದ ಜನರಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆ ಮತ್ತು ಸಮಾಜದ ಅಂಕುಡೊಂಕು ತಿದ್ದಿ ಉತ್ತಮ ಸಮಾಜದ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಮೊದಲಿಗರು ಅಂಬೇಡ್ಕರರು ಎಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮನು…
ವಿಜಯಪುರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಸಚಿವ ಡಾ. ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವದ ಸರ್ವಶ್ರೇಷ್ಠ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯನಿಗೆ ಕೊಡುಗೆ ನೀಡುವ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಭದ್ರ ಬುನಾದಿ ಹಾಕಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮುಂಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಜೀವನ ಸಾಧನೆ ಸಮಗ್ರ ಚಿತ್ರಣ ಕಟ್ಟಿಕೊಡುವ ಹಾಗೂ ವಿಚಾರ-ಸಂದೇಶಗಳ ಮಾಹಿತಿಯನ್ನುವುಳ್ಳ, ನವೀಕರಣಗೊಂಡ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಯಂತಿ ಕಾರ್ಯಕ್ರಮ ನಡೆಯುತ್ತಿರುವುದು ವಿಶೇಷವಾಗಿದೆ ಎಂದು ಅವರು ಹೇಳಿದರು.ಸಮಾಜದಲ್ಲಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸುಕ್ಷೇತ್ರ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದ ಮಲ್ಲಯ್ಯನ ಕಂಬಿಗಳನ್ನು ಭಕ್ತರು ವಿವಿಧ ವಾಧ್ಯ ಮೇಳಗಳೊಂದಿಗೆ ಸಂಭ್ರಮ, ಸಡಗರದಿಂದ ಭಾನುವಾರ ಬರಮಾಡಿಕೊಂಡರು.ಕಳೆದ ತಿಂಗಳು ಹೋಳಿಹುಣ್ಣಿಮೆ ಮರುದಿನ ಇಲ್ಲಿಂದ ಪಾದಯಾತ್ರಾ ಭಕ್ತರೊಂದಿಗೆ ಕಂಬಿಗಳು ಪಾದಯಾತ್ರೆ ಮೂಲಕ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದವು. ದ್ವಾದಶ ಲಿಂಗಗಳಲ್ಲಿ ಒಂದಾದ ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರದಲ್ಲಿ ಪ್ರತಿ ವರ್ಷ ಯುಗಾದಿ ಹಬ್ಬದಂದು ನಡೆಯುವ ರಥೋತ್ಸವದಲ್ಲಿ ಈ ಭಾಗದ ಜನರು ಭಾಗವಹಿಸಿ ತಮ್ಮ ತಮ್ಮ ಗ್ರಾಮಗಳಿಗೆ ಆಗಮಿಸುತ್ತಾರೆ. ತದ ನಂತರ ಹುಣ್ಣಿಮೆಗೆ ಆಯಾ ಆಯಾ ಗ್ರಾಮಗಳಿಗೆ ಅಂದು ತೆರಳಿದ್ದ ಮಲ್ಲಯ್ಯನ ಕಂಬಿಗಳು ಆಗಮಿಸುವದು ಸಾಮಾನ್ಯ.ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿರುವ ಕಂಬಿ ಕಟ್ಟೆಗೆ ಶನಿವಾರ ರಾತ್ರಿ ಮಲ್ಲಯ್ಯನ ಕಂಬಿಗಳು ಬಂದಿದ್ದವು. ಇಂದು ಬೆಳಗ್ಗೆ ಇಲ್ಲಿನ ಭಕ್ತರು ಕುಂಬಾರರ ಮನೆಗೆ ತೆರಳಿ ಅಲ್ಲಿಂದ ಪೂಜಾ ಸಾಮಗ್ರಿಗಳೊಂದಿಗೆ ಬಸವೇಶ್ವರರ ವಂಶಸ್ಥರಾದ ಕುಲಕರ್ಣಿಯವರ ಮನೆಗೆ, ಗೌಡರ ಮನೆಗೆ ವಿವಿಧ ವಾಧ್ಯ ಮೇಳಗಳೊಂದಿಗೆ ತೆರಳಿ ಅವರನ್ನು ಕರೆದುಕೊಂಡು ಕಂಬಿ ಕಟ್ಟೆಗೆ ಆಗಮಿಸಿದರು. ನಂತರ ಕಂಬಿ ಕಟ್ಟೆಯಲ್ಲಿ ಮಲ್ಲಯ್ಯನ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಡಾ. ಬಿ.ಆರ್.ಅಂಬೇಡ್ಕರ ಅವರು ಎಂದಿಗೂ ದೇಶ ಒಡೆಯುವ, ಸಮಾಜ ಸೀಳುವ ಕೆಲಸ ಮಾಡಲಿಲ್ಲ. ತಮ್ಮ ಅವಿಶ್ರಾಂತ ಹೋರಾಟದ ಫಲವಾಗಿ ಅವರೊಬ್ಬ ಜಾತಿ ನಾಯಕರಾಗದೇ ಇಡೀ ರಾಷ್ಟ್ರದ ನಾಯಕರಾಗಿದ್ದಾರೆ ಎಂದು ಧಾರವಾಡ ಎಲ್ಐಸಿ ಉಪವ್ಯವಸ್ಥಾಪಕ ಪಿ.ಎಸ್.ಮಳಗಿ ಹೇಳಿದರು.ಪಟ್ಟಣದ ಬಸವ ಭವನದಲ್ಲಿ ತಾಲೂಕಾಡಳಿತ ತಾಲೂಕು ಪಂಚಾಯತ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೪ ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಡಾ.ಅಂಬೇಡ್ಕರ ಅವರ ಹೋರಾಟ ಕೇವಲ ಸ್ವಂತದ ಉನ್ನತಿಗಾಗಿರದೇ ಇಡೀ ಒಂದು ಜನವರ್ಗದ ಉನ್ನತಿಗಾಗಿ ಇತ್ತು. ಅವರು ಈ ಶತಮಾನದ ಒಬ್ಬ ಶ್ರೇಷ್ಠ ಮೇಧಾವಿಯೆನಿಸಿಕೊಂಡು ಬುದ್ಧಿಯೋಗಿಯಾಗಿದ್ದಾರೆ ಎಂದರು.ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು.ಅಧ್ಯಕ್ಷತೆಯ ವಹಿಸಿದ್ದ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ, ಡಿಎಸ್ಎಸ್ ಮುಖಂಡರಾದ ಅರವಿಂದ ಸಾಲವಾಡಗಿ, ಅಶೋಕ ಚಲವಾದಿ, ಮಹಾಂತೇಶ ಸಾಸಾಬಾಳ, ಸಂಜೀವ…
