Author: editor.udayarashmi@gmail.com

ಅಮ್ಮ ಫೌಂಡೇಶನ್ ದಿಂದ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವ-೨೦೨೫ | ಸಾಧಕರಿಗೆ ಪ್ರಶಸ್ತಿ ಪ್ರದಾನ | ಪ್ರತಿಭಾ ಪುರಸ್ಕಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವಗುರು ಬಸವಣ್ಣನವರ ಸಿದ್ಧಾಂತದಂತೆ ನಡೆದುಕೊಂಡು ಸಮ ಸಮಾಜ ನಿರ್ಮಾಣ ಮಾಡಬೇಕು ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಸ್ಮರಿಸುವ ಕಾರ್ಯ ಮಾಡಿದ ಅಮ್ಮ ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಹೇಳಿದರು.ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಅಮ್ಮ ಪೌಂಡೇಶನ ದೇವರಹಿಪ್ಪರಗಿ-ವಿಜಯಪುರ ಹಮ್ಮಿಕೊಂಡ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವ-೨೦೨೫ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರನ್ನು ಒಂದು ಜಾತಿಗೆ ಸಿಮಿತಗೊಳಿಸದೆ, ಅವರನ್ನು ವಿಶಾಲತೆಯಿಂದ ಕಾಣಬೇಕು. ಬಸವಣ್ಣ ಮಹಿಳೆಯರಿಗೆ ಘನತೆಯ ಬದುಕು ದೊರಕಿಸಿಕೊಟ್ಟವರು. ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಅಭಿನಂದನೀಯವಾಗಿದೆ. ಇಂಗ್ಲಿಷ್ ಸಂಸ್ಕೃತಿ ಬಳಕೆಯಿಂದ ನಮ್ಮ ಸಂಸ್ಕೃತಿಗೆ ಧಕ್ಕೆಯಾಗುತ್ತಿದ್ದು, ನಾವೆಲ್ಲರೂ ಬಸವ ಸಂಸ್ಕೃತಿಯ ಕಡೆಗೆ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಅಮ್ಮ ಫೌಂಡೇಶನ್ ಸಮಾಜಮುಖಿ ಕಾರ್ಯದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜ್ಞಾನಯೋಗಾಶ್ರಮದಲ್ಲಿ ಜುಲೈ ೧೦ರಂದು ಜರುಗಲಿರುವ ಪರಮಪೂಜ್ಯ ಶ್ರೀ ಮಲ್ಲಿಕಾರ್ಜುನ ಮಹಾಶಿವಯೋಗಿಗಳವರ ಸ್ಮರಣೋತ್ಸವ ಹಾಗೂ ಗುರುಪೂರ್ಣಿಮಾ ಮಹೋತ್ಸವದ ಕಾರ್ಯಕ್ರಮದ ಪ್ರಯುಕ್ತ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ದಿನಾಂಕ:೦೯-೦೭-೨೦೨೫ ರಿಂದ ೧೦-೦೭-೨೦೨೫ರವರೆಗೆ ನಗರದ ವಿವಿಧ ಬಡಾವಣೆ, ಕೇಂದ್ರ ಬಸ್ ನಿಲ್ದಾಣ ಹಾಗೂ ಸೆಟ್‌ಲೈಟ್ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಕಾರ್ಯಚರಣೆ ಮಾಡಲಿವೆ. ಪ್ರಯಾಣಿಕರು ಸದರಿ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗೀಯ ನಿಯಂತ್ರಣಾಧೀಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಯುವ ಜನತೆಯ ಆರೋಗ್ಯಕರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಾಯಕವಾಗುವ ವಾತಾವರಣವನ್ನು ಕಲ್ಪಿಸಲು ಪ್ರಸಕ್ತ ಸಾಲಿನಲ್ಲಿ ಯುವ ಚೈತನ್ಯ ಯೋಜನೆಯಡಿ ರಾಜ್ಯದ ಆಯ್ದ ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದ ಶೇ.೭೦ರಷ್ಟು ಹಾಗೂ ನಗರ ಪ್ರದೇಶದ ಶೇ.೩೦ರಷ್ಟು ಜಿಲ್ಲೆಯಲ್ಲಿ ಸಕ್ರಿಯವಾಗಿರುವ ನಾಲ್ಕು ಯುವ ಸಂಘ ಆಯ್ಕೆ ಮಾಡಲಾಗುತ್ತದೆ. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಣಿಯಾಗಿರುವ ಸಂಘಗಗಳು ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಜುಲೈ ೨೨ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೨೫೧೦೮೫ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ & ಲೋಕಾರ್ಪಣೆ | ಶಾಸಕ ಯಶವಂತರಾಯಗೌಡ ಪಾಟೀಲ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ಮುಖ್ಯಮಂತ್ರಿಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಜುಲೈ ೧೪ರ ಬೆಳಿಗ್ಗೆ ೧೧ ಗಂಟೆಗೆ ಇಂಡಿ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿರುವ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಇಂಡಿ ಮತ್ತು ಚಡಚಣ ತಾಲೂಕಿನ ೧೯ ಕೆರೆ ತುಂಬುವ ಯೋಜನೆ, ಜಲಜೀವನ ಮಿಷನ್ ಕಾಮಗಾರಿಗಳು, ಇಂಡಿ ನಗರದಲ್ಲಿ ನೂತನ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಮಾರುಕಟ್ಟೆ, ಇಂಡಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಇಂಡಿ ನಗರದ ಪ್ರಗತಿ ಕಾಲೋನಿ ಸಿ.ಸಿ.ರಸ್ತೆ, ಇಂಡಿ ಮತಕ್ಷೇತ್ರದ ಹೊರ್ತಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮದ್ಯಪಾನ ಹಾಗೂ ಮಾದಕ ವಸ್ತುಗಳು ಮನಸ್ಸು ಹಾಗೂ ಶರೀರದ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಮಾತನಾಡಿದರು.ಪಟ್ಟಣದ ಕೆನರಾ ಬ್ಯಾಂಕ್ ಕಾಲೋನಿಯಲ್ಲಿ ಸೋಮವಾರ ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ಮಧ್ಯಪಾನ ನಿರ್ಮೂಲನಾ ಮಂಡಳಿ, ಬೆಂಗಳೂರು. ಇವರ ಸಹಯೋಗದಲ್ಲಿ ಜರುಗಿದ ವಿಶ್ವ ಮಾದಕವಸ್ತು ವಿರೋಧಿ ದಿನಾಚರಣೆಯಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿ ಮಾತನಾಡಿದರು.ಮಾದಕ ಪದಾರ್ಥಗಳು ಹಾಗೂ ಮದ್ಯ ಸೇವನೆಯ ವ್ಯಸನ ಅತ್ಯಂತ ಗಂಭೀರವಾಗಿದ್ದು, ಶರೀರದ ಮೇಲೆ ನೇರವಾದ ಪರಿಣಾಮ ಉಂಟು ಮಾಡುತ್ತವೆ ಎಂದರು.ಯೋಜನಾಧಿಕಾರಿ ವಿಶ್ವನಾಥ ಸದಲಗಾ ಅಧ್ಯಕ್ಷತೆ ವಹಿಸಿ ಸಂಕ್ಷಿಪ್ತವಾಗಿ ಮಾತನಾಡಿದರು.ಕಾರ್ಯಕರ್ತೆಯರಾದ ನೀಲಮ್ಮ ಬಿರಾದಾರ, ರೇಣುಕಾ ದಾನಗೊಂಡ, ಕಮಲಾ ಬಾಗೇವಾಡಿ, ಭಾಗೀರಥಿ ದೇಗಿನಾಳ ಮತ್ತು ಮಹಿಳಾ ಸಂಘಟನೆಯ ಸದಸ್ಯನೀಯರು ಭಾಗವಹಿಸಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅನುಭವ ಮಂಟಪವನ್ನು ಪೀರ್ ಶಾ ಬಂಗ್ಲೆಯಾಗಿ ಪರಿವರ್ತಿಸಿದ ಕುರಿತಂತೆ ಹಾಗೂ ಎ.ಎಸ್.ಐ ಸಂರಕ್ಷಿತ ಸ್ಮಾರಕಗಳನ್ನು ವಕ್ಫ್ ಸ್ವಾಧೀನ ಪಡಿಸಿಕೊಂಡಿರುವ ಬಗ್ಗೆ 2024ರ ನವೆಂಬರ್ 11 ರಂದು ಬರೆದಿದ್ದ ಪತ್ರಕ್ಕೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರು ಸಕಾರಾತ್ಮಕವಾಗಿ ಸ್ಪಂದಿಸಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದ್ದಾರೆ.ಬೀದರ್ ಜಿಲ್ಲೆಯಲ್ಲಿರುವ ಜ್ಞಾನಯೋಗಿ ಬಸವೇಶ್ವರ ರವರು 12ನೇ ಶತಮಾನದಲ್ಲಿ ಸ್ಥಾಪಿಸಲಾದ ಅನುಭವ ಮಂಟಪ ವಿಶ್ವದ ಮೊದಲ ಸಂಸತ್ತು ಆಗಿತ್ತು. ಕೆಲ ಪಟ್ಟಭದ್ರರು ಒತ್ತುವರಿ ಮಾಡಿಕೊಂಡು ಅನುಭವ ಮಂಟಪವನ್ನು ಪೀರ್ ಪಾಶಾ ಬಂಗ್ಲೆ ಮಾಡಿಕೊಂಡಿದ್ದಾರೆ. ಇದರಿಂದ ವಿಶ್ವದ ಮೊದಲ ಸಂಸತ್ತಿಗೆ ಚ್ಯುತಿಯಾಗಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದೆ. ಈ ಕುರಿತು ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದಾಗಿ ಆಶ್ವಾಸನೆ ನೀಡಿದ್ದಾರೆ.ಅದೇ ರೀತಿ ವಿಜಯಪುರ ದಲ್ಲಿ ಪ್ರಸ್ತುತ ವಕ್ಫ್ ನಿಯಂತ್ರಣದಲ್ಲಿರುವ ಎ.ಎಸ್.ಐ ಸಂರಕ್ಷಿತ 43 ಸ್ಮಾರಕಗಳ ಮಾಹಿತಿಯನ್ನು ಇಲಾಖೆಯು ಸಂಗ್ರಹಿಸುತ್ತಿದ್ದು,…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಭೀಮರಾಯ ರುದ್ರಗೌಡ ಬಿರಾದಾರ ಸಾ.ಏಳಗಿ ಇವರಿಗೆ ಮಂಗಳೂರು ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕರ್ನಾಟಕ (NITK), ಸುರತ್ಕಲ್, ವತಿಯಿಂದ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.ಸಮೀಪದ ಏಳಗಿ(ಪಿ.ಎಚ್) ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ ಡಾ.ಭೀಮರಾಯ ಬಿರಾದಾರ ಅವರು ಭೌತಶಾಸ್ತ್ರ ವಿಷಯದಲ್ಲಿ ಕಾರ್ಬೋನೆಸಿಯಸ್ ಮಟೀರಿಯಲ್ಸ್ ಮೆಟಲ್ ಆಕ್ಸೈಡ್ ಕ್ಲಸ್ಟರ್‌ ಬೆಸಡ ಎಲೆಕ್ಕ್ಟ್ರೊಡ್ ಮಟೀರಿಯಲ್ಸ್ ಫಾರ್ ಎನರ್ಜಿ ಆಂಡ್ ಸೆನ್ಸಿಂಗ್ ಅಪ್ಲಿಕೇಶನ್ಸ ಎಂಬ ಭೌತಶಾಸ್ತ್ರ ವಿಷಯದ ಸಂಶೋಧನಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಲಭಿಸಿದೆ. ಈ ಪ್ರಬಂಧಕ್ಕೆ ಡಾ. ಪಾರ್ಥ ಪ್ರತಿಮಾದಾಸ್, ಭೌತಶಾಸ್ತ್ರ ಪ್ರಾಧ್ಯಾಪಕರು ಮಾರ್ಗದರ್ಶನ ಮಾಡಿದ್ದಾರೆ.

Read More

*ಉದಯರಶ್ಮಿ ದಿನಪತ್ರಿಕೆ* ವಿಜಯಪುರ: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿಎಸ್ ಆಯುರ್ವೇದ ಮಹಾವಿದ್ಯಾಲಯದ ವಿಶ್ವಚರ್ಮ ಆರೋಗ್ಯ ದಿನದ ಅಂಗವಾಗಿ ಜುಲೈ 11 ಮತ್ತು ಜುಲೈ 12ರಂದು ನಾನಾ ರೀತಿಯ ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಎರಡು ದಿನಗಳ ಈ ಶಿಬಿರದಲ್ಲಿ ಚರ್ಮರೋಗಸ ಲಕ್ಷಣಗಳಾದ(skin deseases) ಮೊಡವೆ, ಭಂಗು, ಇಸುಬು, ಗಜಕರ್ಣ ಮುಂತಾದ ದೀರ್ಘ ಕಾಲೀನ ಸಮಸ್ಯೆಗಳ ಉಚಿತ ತಪಾಸಣೆ ನಡೆಯಲಿದೆ. ಚರ್ಮರೋಗವಸಮಸ್ಯೆ ಇರುವವರು ಈ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9343877670 ಮತ್ತು 9513397413 ಸಂಪರ್ಕಿಸುವಂತೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ‌ ನೀಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಡ್ಡಾಯ ಶಿಕ್ಷಣ ಪ್ರತಿಯೊಬ್ಬ ಮಗುವಿನ ಕಾನೂನುಬದ್ಧ ಹಕ್ಕಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವುದರಿಂದ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯವಾಗಲಿದೆ ಎಂದು ಆರ್ಟ ಆಫ್ ಗಿವಿಂಗ್ ಫೌಂಡೇಶನ್ ರಾಷ್ಟ್ರೀಯ ರಾಯಭಾರಿ ಶಿಫಾ ಜಮಾದಾರ ಹೇಳಿದರು.ಮಂಗಳವಾರ ಗುರುನಾನಕ ನಗರದಲ್ಲಿ ಆರ್ಟ ಆಫ್ ಗಿವಿಂಗ್ ಫೌಂಡೇಶನ್ ಪರವಾಗಿ ಅಸಂಘಟಿತ ಕಾರ್ಮಿಕ ಮಕ್ಕಳಿಗೆ ಶಾಲೆಯಿಂದ ವಂಚಿತರಾದ ಮಕ್ಕಳನ್ನು ಶಾಲೆಗೆ ಸೇರಿಸಿ ಎಂಬ ಜಾಗೃತಿ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಶಾಲಾ ಬ್ಯಾಗನ್ನು ವಿತರಿಸಿ ಮಾತನಾಡುತ್ತಾ ಕಾರ್ಮಿಕರು ಜೀವನೋಪಾಯಕ್ಕೆ ತಮ್ಮ ಮಕ್ಕಳನ್ನೇ ಕಾರ್ಮಿಕರನ್ನಾಗಿ ಬಳಸಿಕೊಳ್ಳುತ್ತಿರುವುದು ಆರ್ಥಿಕ ಸಮಸ್ಯೆಯಿಂದ ಬಾಲಕಾರ್ಮಿಕ ಕೆಲಸಕ್ಕೆ ಕಳುಸುತ್ತಿರುವುದು ಅಪಾಯಕಾರಿಗಿದ್ದು ಬಾಲ ಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಪಿಡುಗಾಗಿದ್ದು ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪತ್ರಿಯೊಬ್ಬ ಪಾಲಕರ ಆದ್ಯ ಕರ್ತವ್ಯವಾಗಿದೆ. ಶಿಕ್ಷಣವು ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವಹಿಸುತ್ತದೆ. ಇದು ವಿದ್ಯಾರ್ಥಿಗಳಿಗೆ ಜ್ಞಾನ, ಕೌಶಲ್ಯಗಳು ಮತ್ತು ಮೌಲ್ಯಗಳನ್ನು ಒದಗಿಸುತ್ತದೆ. ಸಮಾಜದಲ್ಲಿ ಬಾಲಕಾರ್ಮಿಕ ಸಂಖ್ಯೆ ಕಂಡು ಬರುತ್ತಿದೆ.…

Read More

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಆರು ನವಜೋಡಿಗಳು ಉದಯರಶ್ಮಿ ದಿನಪತ್ರಿಕೆ ಚಡಚಣ: ಗುರುಪೂರ್ಣಿಮೆ ಪ್ರಯುಕ್ತ ಚಡಚಣ ತಾಲೂಕಿನ ತದ್ದೇವಾಡಿಯ ಶ್ರೀಗುರು ಚಂದ್ರಶೇಖರ ಸಂಸ್ಥಾನ ಮಠದಲ್ಲಿ ಸರಳ ಸಾಮೂಹಿಕ ವಿವಾಹ ಸೋಮವಾರ ನೆರವೇರಿತು.ಆರು ಜೋಡಿ ನವವಿವಾಹಿತರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.ಶ್ರೀ ಗುರು ಗುರುಪಾದೇಶ್ವರ ಶಿವಾಚಾರ್ಯರು ಹಾಗೂ ಶ್ರೀ ಗುರುಬಾಳೇಶ್ವರ ಶಿವಾಚಾರ್ಯರು, ತದ್ದೇವಾಡಿಯ ಶ್ರೀ ರೇಣುಕ ದೇವರ ಸಾನ್ನಿಧ್ಯದಲ್ಲಿ ಸಾವೀರಾರು ಭಕ್ತರ ಸಮ್ಮುಖದಲ್ಲಿ ಆರು ನವಜೋಡಿಗಳಿಗೆ ಮಾಂಗಲ್ಯಧಾರಣೆ ಮತ್ತು ಅಕ್ಷತೆ ಕಾರ್ಯಕ್ರಮ ನಡೆಯಿತು.ತದ್ದೇವಾಡಿಯ ಶ್ರೀ ರೇಣುಕ ದೇವರು ಮಾತನಾಡಿ, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಆರು ಜೋಡಿ ನವವಿವಾಹಿತರು ಧರ್ಮೋಚಿತವಾಗಿ ವಿವಾಹ ಬದ್ಧರಾಗಿದ್ದು, ದಾಂಪತ್ಯ ಜೀವನಕ್ಕೆ ಸುವರ್ಣಪ್ರಾರಂಭ ಮಾಡಲಿದ್ದಾರೆ, ಇದರಲ್ಲಿ ಭಾಗವಹಿಸಿದ್ದಕ್ಕೆ ಈ ರೀತಿಯ ಸಾಮೂಹಿಕ ವಿವಾಹಗಳು ಪಡಿತರ ದಾರಿದ್ರ್ಯತನ, ದುಡುಕಿನ ವೆಚ್ಚವನ್ನು ತಡೆಯುವಂತೆ ಮಾಡುತ್ತವೆ ಹಾಗೂ ಕುಟುಂಬಗಳ ನಡುವೆ ಒಕ್ಕಟ್ಟನ್ನು ಉತ್ತೇಜಿಸುತ್ತವೆ ಎಂದರು.ಈ ಸಮಾರಂಭದಲ್ಲಿ ಹಳೆ ಪರಂಪರೆ, ಸಂಸ್ಕೃತಿ ಮತ್ತು ಸಮಾಜಸೇವೆಯ ಸಮ್ಮಿಳನ ಕಂಡುಬಂದಿದೆ, ವಿವಾಹಿತರಿಗೆ ಮಠಾಧೀಶರು,ಕುಟುಂಬಸ್ಥರು, ಬಂಧುಬಳಗ, ಮತ್ತು ಗ್ರಾಮಸ್ಥರು ಶುಭಾಶಯಗಳ ಸುರಿಮಳೆ ಸುರಿಸಿದರು.…

Read More