Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ, ತಾಲೂಕ ಪಂಚಾಯತ ಸಹಯೋಗದಲ್ಲಿ ನಡೆದ ವಿಶೇಷ ಚೇತನರಿಗೆ ಶೇ. 5ರಡಿಯಲ್ಲಿ ಯಂತ್ರ ಚಾಲಿತ ತ್ರಿಚಕ್ರ ವಾಹನ ಹಾಗೂ ಹೊಲಿಗೆ, ಬಡಗಿತನ, ಧೋಬಿ ವೃತ್ತಿಯ ಉಪಕರಣಗಳನ್ನು ವಿತರಣೆ ಸಮಾರಂಭ ಜರುಗಬೇಕಾದ ಕಾರ್ಯಕ್ರಮ ಸುಮಾರು 3 ಗಂಟೆಗಳ ಕಾಲ ವಿಳಂಬವಾದ ಹಿನ್ನಲೆಯಲ್ಲಿ ಶಾಸಕರಿಗೆ, ತಾ.ಪಂ.ಅಧಿಕಾರಿಗಳ ವಿರುದ್ಧ ವಿಶೇಷ ಚೇತನರು, ಫಲಾನುಭವಿಗಳು, ಸಾರ್ವಜನಿಕರು ಬೇಸರ ವ್ಯಕ್ತ ಪಡಿಸಿದ ಘಟನೆ ನಡೆಯಿತು.ನಗರದ ತಾಲೂಕ ಪಂಚಾಯತ ಕಾರ್ಯಾಲಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಚೇತನರು, ವಿವಿಧ ಫಲಾನುಭವಿಗಳು ಬೆ. 9 ಗಂಟೆಗೆ ಆಗಮಿಸಿದರು. ಆದರೆ ಕಾರ್ಯಕ್ರಮ 3 ಗಂಟೆಗಳ ಕಾಲ ತಡವಾಗಿರುವ ಕಾರಣ ಚಿಕ್ಕ ಮಕ್ಕಳನ್ನು ತಂದಿರುವ ಮಹಿಳಾ ಫಲಾನುಭವಿಗಳು ಹಾಗೂ ವಿಶೇಷ ಚೇತನರ ಜೊತೆಗೆ ಆಗಮಿಸಿದ ಸಂಬಂಧಿಗಳು, ಸಾರ್ವಜನಿಕರು ಬಂದಿದ್ದು ಎಲ್ಲರೂ ತಾಲೂಕ ಪಂಚಾಯತ ಅಧಿಕಾರಿ ಮತ್ತು ಶಾಸಕರ ವಿರುದ್ಧ ಬೇಸರ ವ್ಯಕ್ತ ಪಡಿಸಿದರು.3 ಗಂಟೆಗಳ ಕಾಲ ತಡವಾಗಿ ಬಂದ ಶಾಸಕ ಜಗದೀಶ ಗುಡಗುಂಟಿ ಕಾರ್ಯಕ್ರಮ ಉದ್ದೇಶಿಸಿ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದಲ್ಲಿ ಮೊಹರಂ ಹಬ್ಬದ ನಿಮಿತ್ಯ ಪ್ರಸಿದ್ಧ ಆಟವಿ ಖತಾಲ ಹಬ್ಬವನ್ನು ಭಕ್ತರು ಶಾಂತಿ ಸೌಹಾರ್ಧತೆಯಿಂದ ಆಚರಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಹೇಳಿದರು.ಅವರು ಪಟ್ಟಣದ ಹುಸೇನ ಬಾದಷಹಾ ದರ್ಗಾದಲ್ಲಿ ಆಟವಿ ಖತಲ ನಿಮಿತ್ಯ ನಡೆದ ಬೃಹತ್ ಸಭೆಯಲ್ಲಿ ಮಾತನಾಡಿದರು.ತಾಲೂಕಿನಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳಲ್ಲಿ ಜನತೆ ಶಾಂತಿ ಹಾಗೂ ಸೌಹಾರ್ಧತೆ ಕಾಪಾಡಿಕೊಂಡು ಬಂದಿದ್ದಾರೆ. ಮೊಹರಂ ಹಬ್ಬವೂ ಕೂಡ ತ್ಯಾಗದ ಪ್ರತೀಕವಾಗಿರುವದರಿಂದ ಸರ್ವ ದರ್ಮಿಯರು ಭಾವೈಕ್ಯತೆಯಿಂದ ಆಚರಿಸುತ್ತಿದ್ದಾರೆ ಎಂದರು.ಜಾವೇದ ಮೋಮಿನ, ಪ್ರಶಾಂತ ಕಾಳೆ, ಷಹನಷಹಾ ಜಹಾಗೀರದಾರ, ಜಟ್ಟೆಪ್ಪ ರವಳಿ, ಪ್ರಕಾಶ ಐರೋಡಗಿ, ತುಕಾರಾಮ ವಾಲಿಕಾರ, ದೇವಸ್ಥಾನ ಸಮಿತಿಯ ಮಕಾನದಾರ ಅರ್ಚಕ ಬಂದುಗಳು ಕುಟುಂಬದವರು ಪಾಲ್ಗೊಂಡಿದ್ದರು.ಇದಕ್ಕೂ ಮುಂಚೆ ಬೆಳಗ್ಗೆ ೪ ಗಂಟೆಗೆ ಭಕ್ತರು ನೈವೆಧ್ಯ ಕ್ಕಾಗಿ ದೇವಸ್ಥಾನಕ್ಕೆ ಬರಲು ಪ್ರಾರಂಭಿಸಿದರು. ಜಿಲ್ಲೆಯ ಬೇರೆ ಜಿಲ್ಲೆ ಸುಮಾರು ೫೦ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ದರ್ಶನ ಪಡೆದರು, ಬಿಜೆಪಿ ಕಾಸುಗೌಡ ಬಿರಾದಾರ, ದಾದಾಗೌಡರ ಮನೆತನದ ಪ್ರಭುಗೌಡ ಪಾಟೀಲ ಸೇರಿದಂತೆ ಅನೇಕ ಗಣ್ಯರು…

Read More

ಮಹಿಳಾ ವಿವಿಯ ನೂತನ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾಸ್ಕರಾಚಾರ್ಯರ ವಿಧಾನದ ಮೂಲಕ ಗಣಿತದ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದಾಗಿದೆ ಎಂದು ಮಹಿಳಾ ವಿವಿಯ ನೂತನ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಣಿತ ಅಧ್ಯಯನ ವಿಭಾಗ ಹಾಗೂ ಭಾಸ್ಕರಾಚಾರ್ಯ ಅಧ್ಯಯನ ಪೀಠದ ಅಡಿಯಲ್ಲಿ ವಿಶ್ವವಿದ್ಯಾನಿಲಯದ ಪ್ರಸಾರಾಂಗದ ವತಿಯಿಂದ ಶುಕ್ರವಾರ ಆಯೋಜಿಸಿದ್ದ “ಗ್ರಂಥಗಳ- ಲೋಕಾರ್ಪಣೆ” ಸಮಾರಂಭದಲ್ಲಿ ಅವರು ಮಾತನಾಡಿದರು.ಸಾಮಾನ್ಯ ಪ್ರಕಟಿತ ಪಠ್ಯಪುಸ್ತಕಗಳ ಕಠಿಣ ಶೈಲಿಯಿಂದ ಹೊರಬಂದು, ವಿದ್ಯಾರ್ಥಿಗಳನ್ನು ಅರ್ಥಗರ್ಭಿತ, ಜ್ಯಾಮಿತೀಯ ಹಾಗೂ ಕಾವ್ಯಾತ್ಮಕ ರೀತಿಯಲ್ಲಿ ಚಿಂತಿಸಲು ಪ್ರೋತ್ಸಾಹಿಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಕಲನಶಾಸ್ತ್ರ, ಬೀಜಗಣಿತ ಮತ್ತು ಸಂಖ್ಯಾ ಸಿದ್ಧಾಂತದ ಪರಿಕಲ್ಪನೆಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದರು.ಇದೇ ಸಂದರ್ಭದಲ್ಲಿ ಹಿಂದೈ ಗಣಿತ ಐತಿಹಾಸಿಕ-ಒಂದು ಮೂಲ ಗ್ರಂಥ ಭಾಗ- II , ಭಾರತದಲ್ಲಿ ಶ್ರೇಣಿ ಗಣಿತ, ಭಾರತೀಯ ಗಣಿತ ಶಾಸ್ತçದ ಚಾರಿತ್ರೆ ಭಾಗ-೧, ಬ್ರಹ್ಮಗುಪ್ತಮ್-೧ ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು.ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಸಚಿವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೊಹರಂ ಹಬ್ಬದ ಅಂಗವಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಮತ್ತು ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಾದ್ಯಂತ ದಿನಾಂಕ:೦೬-೦೭-೨೦೨೫ರ ಬೆಳಿಗ್ಗೆ ೬ ಗಂಟೆಯಿಂದ ದಿನಾಂಕ:೦೭-೦೭-೨೦೨೫ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನಮಂತ್ರಿ ಆವಾಸ (ನಗರ) ಯೋಜನೆ ೨-.೦ ಅಡಿ ವಸತಿ ಸೌಲಭ್ಯಕ್ಕಾಗಿ https://PMAY-HFA(Urban).gov.inಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆನ್‌ಲೈನ್ ಮೂಲಕ ದಿನಾಂಕ : ೧೫-೦೭-೨೦೨೫ರೊಳಗಾಗಿ ಅರ್ಜಿ ಸಲ್ಲಿಸಿ ಅರ್ಜಿಯ ಪ್ರತಿಯನ್ನು ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಬೇಕು. ಈ ಕುರಿಂತೆ ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಅಧಿಕಾರಿ-ಸಿಬ್ಬಂದಿಗಳನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸದುಪಯೋಗಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು & ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತಶ್ರಾಯದಲ್ಲಿ ಮಧ್ಯಸ್ಥಿಕೆ ಅಭಿಯಾನದ ಕುರಿತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮಧ್ಯಸ್ಥಿಕೆಯ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ೦೧ರಿಂದ ಬರುವ ಅಕ್ಟೋಬರ್ ೦೭ರವರೆಗೆ ಮಧ್ಯಸ್ಥಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕಕ್ಷಿದಾರರು ಸದರಿ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.ಮಧ್ಯಸ್ಥಿಕೆ ಅಭಿಯಾನದ ಕುರಿತಾಗಿ ಹೆಚ್ಚಿನ ಮಾಹಿತಿ ಅವಶ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕಾ ಕಾನೂನು ಸೇವೆಗಳ ಸಮಿತಿ, ಇಂಡಿ, ಸಿಂದಗಿ, ಬಸವನಬಾಗೇವಾಡಿ, ಮುದ್ದೇಬಿಹಾಳ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ೨೦೨೫-೨೬ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತ ಬೀದಿನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಿಂದ ೦೩ ಬೀದಿ ನಾಟಕ ಹಾಗೂ ೦೩ ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ ೦೮ ಜನ ಕಲಾವಿದರಿರಬೇಕು. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ್ ಜಾತಿ, ಪರಿಶಿಷ್ಟ್ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ ೦೩ಜನ ಕಲಾವಿದರಿರಬೇಕು. ಇದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ್ ಜಾತಿ, ಪರಿಶಿಷ್ಟ್ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.ಕಲಾ ತಂಡಕ್ಕೆ ಆಯ್ಕೆ ಮಾಡಲು, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೃಷಿ ಇಲಾಖೆಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ೨೦೨೫-೨೬ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತ ಬೀದಿನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಿಂದ ೦೩ ಬೀದಿ ನಾಟಕ ಹಾಗೂ ೦೩ ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ ೦೮ ಜನ ಕಲಾವಿದರಿರಬೇಕು. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ್ ಜಾತಿ, ಪರಿಶಿಷ್ಟ್ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ ೦೩ಜನ ಕಲಾವಿದರಿರಬೇಕು. ಇದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ್ ಜಾತಿ, ಪರಿಶಿಷ್ಟ್ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.ಕಲಾ ತಂಡಕ್ಕೆ ಆಯ್ಕೆ ಮಾಡಲು, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೃಷಿ ಇಲಾಖೆಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜುಲೈ ೧೬ ರಂದು ವಿಜಯಪುರ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಅಂದು ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕ್ಷಕರು (ಮೊ:೯೩೬೪೦೬೨೫೨೮), ಉಪಾಧೀಕ್ಷಕರು (ಮೊ:೯೩೬೪೦೬೨೫೫೭), ಇನ್ಸ್ಪೆಕ್ಟರ್-೧(ಮೊ:೯೩೬೪೦೬೨೬೪೦), ಇನ್ಸ್ಪೆಕ್ಟರ್-೨ (ಮೊ:೯೩೬೪೦೬೨೬೩೯) ಭಾಗವಹಿಸಿ ಸಾರ್ವಜನಿಕರ ದೂರುಗಳನ್ನು ಆಲಿಸಿ, ಸ್ಥಳದಲ್ಲಿ ಕಂಡುಕೊಳ್ಳಬಹುದಾದ ಪ್ರಕರಣಗಳನ್ನು ಸ್ಥಳೀಯ ಅಧಿಕಾರಿಗಳ ಸಹಕಾರದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಲಿದ್ದಾರೆ.ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಸೇರಿದಂತೆ ದೂರುಗಳಿಗಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ೦೮೩೫೨-೨೫೫೩೩೩/೨೫೭೭೮೬/೨೯೫೦೭೪ ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೊಹರಂ ಹಬ್ಬ ಇಸ್ಲಾಂ ಉದರದಲ್ಲಿ ಹುಟ್ಟಿದರೂ ಹಿಂದೂಗಳ ಕರಕಮಲದಲ್ಲಿ ಜೋಪಾನವಾಗಿ ಜೀವಂತವಾಗಿದೆ. ಇಂದು ದೇಶದಲ್ಲಿ ಹಿಂದೂ-ಮುಸ್ಲಿಂ ಅನೋನ್ಯವಾಗಿರಬೇಕಾದರೆ ಈ ಪವಿತ್ರ ಮೊಹರಂ ಹಬ್ಬವೇ ಕಾರಣವಾಗಿದೆ. ತ್ಯಾಗ – ಬಲಿದಾನದ ಜೊತೆಗೆ ಪ್ರೀತಿ ಮತ್ತು ಸ್ನೇಹದ ಕುರುಹಾಗಿ ಮೊಹರಂ ಗಟ್ಟಿಯಾಗಿ ನಿಂತಿದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಎಸ್ ಪಾಟೀಲ (ಪಡಗಾನೂರ) ಅಭಿಪ್ರಾಯಪಟ್ಟರು.ಕನ್ನಡ ಜಾನಪದ ಪರಿಷತ್ ಕೂಡಗಿ ವಲಯ ಘಟಕದ ವತಿಯಿಂದ ಕೊಲ್ಹಾರ ತಾಲೂಕಿನ ಕವಲಗಿ ಗ್ರಾಮದ ಚಾವಡಿಯಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಏರ್ಪಡಿಸಿದ ” ರಿವಾಯತ ಸಂಭ್ರಮ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಭಾರತದ ಹಬ್ಬ- ಉತ್ಸವಗಳು ನಮ್ಮ ಮೂಲ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿವೆ.ಜನಪದ ಕಲಾವಿದರು ಸಾಂಸ್ಕೃತಿಕ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬೆಳೆಸುವ ನಿಟ್ಟಿನಲ್ಲಿ ಸಮಾಜ ಸಹಕಾರ ನೀಡಬೇಕೆಂದು ಮನವಿ ಮಾಡಿದರು.ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಸದಸ್ಯ ಕಲಾವಿದ ಮೌಲಸಾಹೇಬ ಜಹಾಗಿರದಾರ ಮಾತನಾಡಿ, ಮೊಹರಂ ಉತ್ಸವದ…

Read More