Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಹದಿ ಹರೆಯದವರು ಆರೋಗ್ಯದ ಕುರಿತು ಕಾಳಜಿ ವಹಿಸಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರದ ನಿರೀಕ್ಷಣಾಧಿಕಾರಿ ಲವ ಚವ್ಹಾಣ ಹೇಳಿದರು.ತಾಲ್ಲೂಕಿನ ಘೋಣಸಗಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ಸ್ವಸ್ತ ನಾರಿ ಸ್ವಶಕ್ತ ಪರಿವಾರ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಅಭಿಯಾನದ ಅಂಗವಾಗಿ ಎಲ್ಲ ಗರ್ಭಿಣಿ ಮಹಿಳೆಯರಿಗೆ ಹೆರಿಗೆಯ ಸಮಯದಲ್ಲಿ ಆಗುವ ತೊಡಕುಗಳ ಬಗ್ಗೆ ಮತ್ತು ರಕ್ತ ಹೀನತೆ, ರಕ್ತದೊತ್ತಡ ಮಧುಮೇಹ ಕ್ಯಾನ್ಸರ್, ಹದಿಹರೆಯದವರು ಸ್ವ ಕಾಳಜಿ ವಹಿಸಬೇಕು. ಸಮಾಜದಲ್ಲಿ ಮಹಿಳೆಯರು ಆರೋಗ್ಯವಂತ ಮತ್ತು ಸಬಲ ಜೀವನ ನಡೆಸಲು ಸ್ವಚ್ಛತೆಯ ಬಗ್ಗೆ ಜಾಗೃತಿ ತುಂಬಾ ಅವಶ್ಯಕವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಪ್ರಸವ ಪೂರ್ವ ಗರ್ಭಿಣಿ ಆರೈಕೆ ಮತ್ತು ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಅಂಜನಾ ಪವಾರ, ಸಮುದಾಯ ಆರೋಗ್ಯ ಅಧಿಕಾರಿಜಮಾಲುದ್ದೀನ್ ಮುಲ್ಲಾ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮೀಣ ಭಾಗಗಳಲ್ಲಿ ನಡೆಯುವ ಪ್ರತಿಯೊಂದು ಕ್ರೀಢೆಗಳಿಗೆ ಸಾಂಪ್ರದಾಯಿಕ ಹಿನ್ನೆಲೆಯಿದ್ದು ಅದು ರೈತರ ಜನಜೀವನಕ್ಕೆ ಸ್ಪೂರ್ತಿಯಾಗಿದೆ ಎಂದು ಪ್ರಭುಲಿಂಗೇಶ್ವರ ಅಂತರಾಷ್ಟ್ರೀಯ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ವಿದ್ಯಾಧರ ಸವದಿ ಹೇಳಿದರು.ಗ್ರಾಮದ ಆರಾದ್ಯದೇವತೆ ಶ್ರೀ ಎಲ್ಲಮ್ಮಾದೇವಿ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ದಾ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಭೂತಾಯಿಯನ್ನು ನಂಬಿರುವ ರೈತರು ಅದಕ್ಕೆ ಉಳುಮೆ ಮಾಡುವ ಎತ್ತುಗಳಿಗೆ ಬಸವಣ್ಣ ದೇವರೆಂದು ಪೂಜಿಸುತಿದ್ದು ಅವುಗಳ ಸಾಮರ್ಥ್ಯ ಮತ್ತು ಅವುಗಳನ್ನು ಮೇಯಿಸುವ ರೈತರ ಸಾಮರ್ಥ್ಯ ಪರೀಕ್ಷಿಸಲು ತೆರಬಂಡಿ, ಕುದುರೆ ಚಕ್ಕಡಿ ಬಂಡಿ ಓಡಿಸುವ ಸ್ಪರ್ದೆ ಸೇರಿದಂತೆ ಹಲವಾರು ಸ್ಪರ್ದೆಗಳನ್ನು ಹಮ್ಮಿಕೊಂಳ್ಳುವ ಸಾಂಪ್ರದಾಯಿಕ ಹಿನ್ನೆಲೆಯಿದ್ದು ಇಂದಿನ ಆಧುನಿಕ ಯುಗದಲ್ಲಿಯೂ ಗ್ರಾಮೀಣ ಭಾಗಗಳಲ್ಲಿ ಅವು ಜೀವಂತವಾಗಿರುವುದು ನಿದರ್ಶನ ಎಂದರು.ಸಮಾರಂಭದ ಸಾನಿಧ್ಯ ವಹಿಸಿದ ಶ್ರೀ ಜನಾರ್ಧನ ಮಹಾರಾಜರು ಪೂಜಾ ಕಾರ್ಯಕ್ರಮ ನೆರವೇರಿಸಿದರು.ಶ್ರೀ ಎಲ್ಲಮ್ಮದೇವಿ ಸೇವಾ ಸಮೀತಿಯ ಕಳ್ಳೆಪ್ಪ ನಡುವಿನಮನಿ, ತಾ.ಪಂ. ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ಮಹಾಂತೇಶ ಜಾಲಿಕಟ್ಟಿ, ಗ್ರಾ.ಪಂ. ಸದಸ್ಯ ಮಹಾಲಿಂಗ ಮಾಯಣ್ಣವರ,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರಕಾರ, ಜಿಲ್ಲಾಡಳಿತ, ತಾಲೂಕಾಡಳಿತ ಎಲ್ಲರೂ ಸೇರಿ ಸಂತ್ರಸ್ತರಿಗೆ ಶೀಘ್ರದಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದು, ಇದು ಅತೀ ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರುವ ಭರವಸೆ ನಮ್ಮೆಲ್ಲರಿಗಿದ್ದು, ಅದೇ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿ ಶೀಘ್ರ ಪಲಾನುಭವಿಗಳ ಮೊಗದಲ್ಲಿ ನಗು ತರುವ ಕಾರ್ಯ ಮಾಡುತ್ತೇವೆ ಎಂದು ದಸಂಸ ಸಮಿತಿ ಜಿಲ್ಲಾ ಸಂಚಾಲಕ ವಾಯ್.ಸಿ.ಮಯೂರ ಹೇಳಿದರು.ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದೆಲ್ಲವನ್ನು ಸಹಿಸದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಶಾಸಕರ ಪ್ರಯತ್ನಕ್ಕೆ ತಣ್ಣೀರೆರೆಚುವ ಹಾಗೂ ಮುಗ್ಧ ಜನತೆಯ ಹಾದಿ ತಪ್ಪಿಸುವ ಕಾರ್ಯ ಮಾಡುತ್ತಿರುವುದು ವಿಷಾದಕರ. ಇದ್ಯಾವುದಕ್ಕೂ ಕಿವಿಗೊಡದೆ ಮುಂದೆ ಕೈಗೊಳ್ಳಬೇಕಾದ ಕ್ರಮಗಳತ್ತ ನೋಟ ಹರಿಸುವುದುದ ಸೂಕ್ತ ಎಂದು ಕಿವಿಮಾತು ಹೇಳಿದರು.ಈ ವೇಳೆ ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಸುರೇಶ ಪೂಜಾರಿ ಮಾತನಾಡಿ, ಶಾಸಕರು ಸಂತ್ರಸ್ತರಿಗೆ ನಿಯೋಜಿತ ಜಾಗೆಯಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೇ ಮನೆ ಕಟ್ಟಿಕೊಳ್ಳಲು ಸರಕಾರದಿಂದ ಸಿಗುವ ಎಲ್ಲ ರೀತಿಯ ಹಣಕಾಸಿನ ಸಹಾಯ ಅಲ್ಲದೇ…
ವಿಜಯಪುರದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತಿಹಾಸ ಹಾಗೂ ಪುರಾಣ ಪುರುಷರಿಂದ ಗುರುತಿಸಲ್ಪಟ್ಟ ಈ ವಿಶ್ವಕರ್ಮ ಸಮುದಾಯವು ಈ ನಾಡಿನ ಹಾಗೂ ದೇಶದ ಸುಂದರ ಕಲೆಗಳ ನಿರ್ಮಾಣದ ಮೂಲಕ ಮಹತ್ವವಾದ ಕೊಡುಗೆ ಕೊಟ್ಟಿದ್ದಾರೆ ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲಿಯವರೆಗೆ ಕೌಶಲ್ಯ ಆಧಾರಿತ ವೃತ್ತಿಗಳು ಭೂಮಿಯ ಮೇಲೆ ಅಸ್ಥಿತ್ವದಲ್ಲಿರುತ್ತವೆಯೋ ಅಲ್ಲಿಯವರೆಗೆ ವಿಶ್ವಕರ್ಮರು ಅಜರಾಮರಾಗಿತ್ತಾರೆ. ಇವರು ಅತ್ಯಂತ ಹೃದಯವಂತರು. ದೇವಾನುದೇವತೆಗಳ ಮೂರ್ತಿಗಳು, ಆಭರಣಗಳ ತಯಾರಿಕೆಯಲ್ಲಿ ತಮ್ಮ ಅಮೂಲ್ಯವಾದ ಕಲಾ ಕೌಶಲ್ಯದಿಂದ ಗುರುತಿಸಲ್ಪಡುವ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಇಂತಹ ಕಾರ್ಯಕ್ರಗಳಿಗೆ ತಮ್ಮ ಮಕ್ಕಳನ್ನು ಕರೆತಂದು, ದಾರ್ಶನಿಕರ ಸಂದೇಶ ತಿಳಿಸಿಕೊಡಬೇಕು. ವಿಶ್ವಕರ್ಮರ ಆದರ್ಶಗಳು ತಮ್ಮ ಮನೆ ಮನಗಳಲ್ಲಿ ಬೆಳಗಲಿ ಎಂದು ಅವರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಯೋಜನೆ ಅನುಷ್ಠಾನಗಾಗಿ ಸಂತ್ರಸ್ತರಾಗುವ ರೈತರಿಗೆ ಸರ್ಕಾರ ನ್ಯಾಯಸಮ್ಮತ ಪರಿಹಾರ ಘೋಷಿಸಿದೆ. ಇದಕ್ಕಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ ಅವರು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಅಭಿನಂದಿಸಿದರು.ಬುಧವಾರ ಬೆಂಗಳೂರಿನಲ್ಲಿ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಎಸ್.ಆರ್.ಪಾಟೀಲ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತದ ಯೋಜನೆ ಅನುಷ್ಠಾನಕ್ಕೆ ಸರ್ಕಾರ ವಿಶೇಷ ಸಂಪುಟ ಸಭೆ ಕರೆದು ಸುದೀರ್ಘ ಚರ್ಚೆ ನಡೆಸಿದೆ. ಸದರಿ ವಿಶೇಷ ಸಂಪುಟ ಸಭೆಯಲ್ಲಿ ಯೋಜನೆ ಅನುಷ್ಠಾನದಿಂದ ಹಿನ್ನೀರಿನಲ್ಲಿ ಮುಳುಗಡೆಯಿಂದ ಭೂಮಿ ಕಳೆದುಕೊಂಡು ಸಂತ್ರಸ್ತರಾಗುವ ರೈತರಿಗೆ ಪ್ರತಿ ಎಕರೆ ನೀರಾವರಿ ಜಮೀನಿಗೆ 40 ಲಕ್ಷ ರೂ. ಹಾಗೂ ಮಳೆ ಆಶ್ರಿತ ಜಮೀನಿಗೆ 30 ಲಕ್ಷ ರೂ. ಹಾಗೂ ಸಂತ್ರಸ್ತರ ಪುನರ್ವಸತಿಗೆ ಭೂಮಿ ಕಳೆದುಕೊಳ್ಳುವ ರೈತರ ನೀರಾವರಿ 30 ಲಕ್ಷ ರೂ. ಹಾಗೂ ಒಣ ಬೇಸಾಯದ ಜಮೀನಿಗೆ…
ತಿಕೋಟಾ ಬಿ.ಎಲ್.ಡಿ.ಇ ನೂತನ ಕಲಾ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಬಿ.ಎಲ್.ಡಿ.ಇ. ಸಂಸ್ಥೆಯ ನೂತನ ಕಲಾ ಮಹಾವಿದ್ಯಾಲಯದಲ್ಲಿ ಬುಧವಾರ ಕಾಲೇಜಿನ ಎನ್.ಎಸ್.ಎಸ್. ಘಟಕ, ವೈ .ಆರ್. ಸಿ, ಅಲುಮಿನಿ ಹಾಗೂ ಶ್ರೀ ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಕೇಂದ್ರ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ಉದ್ದೇಶಿಸಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ.ಎಸ್.ತೋಳನೂರ ಮಾತನಾಡಿ, ರಕ್ತದಾನದಿಂದ ಒಂದು ಜೀವದ ರಕ್ಷಣೆಯನ್ನು ಮಾಡಿದಂತಾಗುತ್ತದೆ. ಎಲ್ಲ ರೀತಿಯ ದಾನಗಳಲ್ಲಿ ರಕ್ತದಾನ ಬಹಳ ಶ್ರೇಷ್ಠವಾಗಿದೆ. ಇದು ಕೇವಲ ದಾನ ಪರಂಪರೆ ಅಷ್ಟೇ ಅಲ್ಲದೆ ದಾನ ನೀಡುವ ವ್ಯಕ್ತಿಯ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದಲೂ ಬಹಳ ಮಹತ್ವವನ್ನು ಪಡೆದಿದೆ. ಹೀಗಾಗಿ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದು ಅತ್ಯಂತ ಸೂಕ್ತವೆನಿಸಿದೆ ಎಂದರು.ಕಾರ್ಯಕ್ರಮದಲ್ಲಿ ಶ್ರೀ ಬಿ.ಎಂ. ಪಾಟೀಲ ಆಸ್ಪತ್ರೆ, ಮೆಡಿಕಲ್ ಕಾಲೇಜಿನ ವೈದ್ಯರಾದ ಡಾ. ಸತೀಶ ಅರೆಕೇರಿ, ಆರೋಗ್ಯ ಸಿಬ್ಬಂದಿ, ಕಾಲೇಜಿನ ಐ.ಕ್ಯೂ. ಎ.ಸಿ. ಸಂಯೋಜಕ ಪ್ರೊ .ಬಿ. ಎಸ್.ಬೆಳಗಲಿ, ಎನ್.ಎಸ್.ಎಸ್. ಘಟಕದ…
ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ ಆಸ್ಪತ್ರೆ ಬಡವರು ಮತ್ತು ಮಹಿಳೆಯರಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ಬುಧವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಉಚಿತವಾಗಿ ಹೆರಿಗೆ ಸೌಲಭ್ಯ ಒದಗಿಸಲಾಗಿದೆ. ಇದೇ ರೀತಿ ಬಡವರು ಮತ್ತು ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡುವ ಮೂಲಕ ಸರ್ವರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಕಾರ್ಯ ನಿರಂತರವಾಗಿ ಸಾಗಿದೆ ಎಂದು ಅವರು ಹೇಳಿದರು.ಇಂಥ ಅಭಿಯಾನಗಳಿಂದ ಸೌಲಭ್ಯ ವಂಚಿತ ಸಮುದಾಯಗಳಲ್ಲಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹಾಗೂ ಸದೃಢ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಅನುಕೂಲವಾಗುತ್ತದೆ…
ಸರಕಾರಿ ಪ್ರೌಢಶಾಲೆ ಹುನ್ನೂರಿನ 2003-04 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಂದ ಏರ್ಪಡಿಸಿದ್ದ ಗುರುನಮನ ಹಾಗೂ ಸ್ನೇಹ ಸಮ್ಮೇಳನ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಾವು ಯಾವುದೇ ಗುರಿಯನ್ನು ಮುಟ್ಟಬೇಕಾದರೆ ನಮಗೆ ವಿಧ್ಯೆ ಕಲಿಸಿದ ಗುರುಗಳೆ ಕಾರಣ, ನಮ್ಮ ದೇಶ ಗುರುವಿಗೆ ಶ್ರೇಷ್ಠವಾದ ಸ್ಥಾನಮಾನವನ್ನು ನೀಡಿದೆ ಎಂದು ಓಲೆಮಠದ ಶ್ರೀ ಆನಂದ ದೇವರು ಹೇಳಿದರು.ನಗರದ ಮುರಗೋಡ ಕಲ್ಯಾಣ ಮಂಟಪದಲ್ಲಿ ನಡೆದ ಸರಕಾರಿ ಪ್ರೌಢಶಾಲೆ ಹುನ್ನೂರಿನ 2003-04 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಂದ ಏರ್ಪಡಿಸಿದ್ದ ಗುರುನಮನ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಾಧನೆಯೇ ಗುರುಗಳನ್ನು ಸಂತೋಷ ಪಡಿಸುವ ಸಂಗತಿಯಾಗಿದೆ, ವಿದ್ಯಾರ್ಥಿಗಳ ಬದುಕನ್ನು ಕಟ್ಟಿಕೊಡುವ ಶಿಕ್ಷಕರು, ಅವರ ಸಾಧನೆಯಿಂದ ಸಂತೋಷ ಪಡುತ್ತಾರೆ. ಕಠಿಣವಾದ ಕಲ್ಲನ್ನು ಮೂರ್ತಿಕಾರರು ಕೆತ್ತಿ ಸುಂದರವಾದ ವಿಗ್ರಹ ತಯಾರಿಸುವಂತೆ ಗುರುಗಳು ವಿದ್ಯಾರ್ಥಿಗಳ ಜೀವನವನ್ನು ರೂಪಿಸುತ್ತಾರೆ ಎಂದು ಹೇಳಿದರು.ವಿಶೇಷ ಉಪನ್ಯಾಸ ನೀಡಿದ ವಿಶ್ರಾಂತ ನಿರ್ದೇಶಕ ಸಿದ್ದರಾಮ ಮನಹಳ್ಳಿ ಮಾತನಾಡಿ, ಬೀಜ ಮೊಳಕೆ ಒಡೆದು ಹೇಗೆ ದೊಡ್ಡ ಮರ…
ಚಡಚಣ ಪಟ್ಟಣದಲ್ಲಿ ನಡೆದ ಎಸ್‌ಬಿಐ ಬ್ಯಾಂಕ್ ದರೋಡೆ | ರೂ.೨೧ ಕೋಟಿ ಮೌಲ್ಯದ ೨೦ ಕೆ.ಜಿ ಚಿನ್ನಾಭರಣ, ರೂ.೧.೫ ಕೋಟಿ ನಗದು ದೋಚಿದ ಬಂದೂಕು ಧಾರಿ ಗ್ಯಾಂಗ್ | ಎಸ್ಪಿ ಲಕ್ಷಣ ನಿಂಬರಗಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಮಹಾರಾಷ್ಟ್ರದ ರಾಜ್ಯಕ್ಕೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯದ ಕೊನೆಯ ಪಟ್ಟಣ ಮತ್ತು ಭೀಮಾತೀರ ಎಂದು ಕುಖ್ಯಾತಿ ಪಡೆದಿರುವ ಚಡಚಣ ತಾಲೂಕಿನಲ್ಲಿ ರಾಜ್ಯಾದ್ಯಂತ ಬೆಚ್ಚಿ ಬೀಳಿಸುತ್ತಿರುವ ಬ್ಯಾಂಕ್ ದರೋಡೆ ಪ್ರಕರಣಗಳ ಸಾಲಿಗೆ ಇದೀಗ ಚಡಚಣ ಪಟ್ಟಣದ ಎಸ್.ಬಿ.ಐ. ಶಾಖೆ ಕೂಡ ಸೇರ್ಪಡೆಯಾಗಿದೆ.ವಿಜಯಪುರ ಜಿಲ್ಲೆಯ ಮನಗೂಳಿಯ ಬ್ಯಾಂಕ್ ಲೂಟಿ ಮಾಸುವ ಮುನ್ನವೆ ಸಿನಿಮಿಯ ಮಾದರಿಯಲ್ಲಿ ಮಂಗಳವಾರ ಸಂಜೆ ೬.೩೦ರಿಂದ ೭.೩೦ರ ನಡುವೆ ಭೀಮಾತೀರದ ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದ ಧಿಡೀರ್ ದರೋಡೆ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಕುರಿತು ಬುದವಾರ ಎಸ್.ಪಿ ಲಕ್ಷಣ ನಿಂಬರಗಿ ಪತ್ರಿಕಾಗೋಷ್ಟೀಯಲ್ಲಿ ಮಾತನಾಡಿ, ಮಂಗಳವಾರ ಚಡಚಣ ಪಟ್ಟಣದ ಎಸ್.ಬಿ.ಐ.ಬ್ಯಾಂಕ್‌ನಲ್ಲಿ ಸಂಜೆ ೬.೩೦ ರಿಂದ ೭.೩೦ ರ ಸಮಯಕ್ಕೆ ಬ್ಯಾಂಕ್‌ಗೆ ಪ್ರವೇಶಿಸಿದ್ದ…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ರೈಲು ಪ್ರಯಾಣವೆಂದರೆ ಎಲ್ಲರಿಗೂ ಅಚ್ಚುಮೆಚ್ಚು. ಹೆಚ್ಚು ಕುಲುಕಾಟವಿಲ್ಲದ ಸುಖ ನಿದ್ರೆಯ ಪ್ರಯಾಣಕ್ಕೆ ಎಲ್ಲರೂ ಹೆಚ್ಚಾಗಿ ಅವಲಂಬಿಸುವುದು ರೈಲನ್ನೇ. ಭಾರತೀಯ ರೈಲ್ವೆಯಲ್ಲಿ ಇಂದು ಹಲವಾರು ವಿನೂತನ ಆವಿಷ್ಕಾರಗಳು ಬಂದಿದ್ದು, ಅತ್ಯಂತ ವೇಗದ ತೇಜಸ್, ಬುಲೆಟ್ ರೈಲು, ವಿದ್ಯುತ್ ರೈಲು ಮತ್ತು ಐಶಾರಾಮಿ ಗೋಲ್ಡನ್ ರಥ್ ಇತ್ಯಾದಿ ಪ್ರಮುಖವಾದವುಗಳು. ಈ ಸಾಲಿಗೆ ಇದೀಗ ಹೊಸ ಮಾದರಿಯೊಂದು ಸೇರ್ಪಡೆಯಾಗಿದ್ದು, ಅದುವೇ ವಿಸ್ಟಾಡೋಮ್ ರೈಲು.ಸಾಮಾನ್ಯ ರೈಲು ಸಂಪೂರ್ಣ ಕಬ್ಬಿಣದ ಬಾಡಿಯನ್ನು ಹೊಂದಿದ್ದರೆ, ವಿಸ್ಟಾಡೋಮ್ ರೈಲು ಸಂಪೂರ್ಣ ಗಾಜಿನ ಬಾಡಿ ಮತ್ತು ಕವಚವನ್ನು ಹೊಂದಿರುತ್ತದೆ.ರೈಲು ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಭಾರತೀಯ ರೈಲ್ವೆಯು ತನ್ನ ಕೆಲವು ಪ್ರಮುಖ ರೈಲುಗಳಿಗೆ ವಿಸ್ಟಾಡೋಮ್ ಬೋಗಿಗಳನ್ನು ಜೋಡಿಸಿದೆ. ಸಾಮಾನ್ಯವಾಗಿ ರೈಲಿನ ಕಿಟಕಿಯ ಬಳಿ ಕುಳಿತವರಿಗಷ್ಟೇ ರೈಲಿನ ಹೊರಭಾಗದ ಸೌಂದರ್ಯವನ್ನು ಸವಿಯುವ ಅವಕಾಶವಿತ್ತು. ಆದರೆ ವಿಸ್ಟಾಡೋಮ್ ಬೋಗಿಗಳ ಸಂಪೂರ್ಣ ಕವಚವು ಪಾರದರ್ಶಕವಾಗಿದ್ದು, ರೈಲಿನ ಒಳಗೆ ಕುಳಿತುಕೊಂಡು ಪ್ರತಿಯೊಬ್ಬರೂ…
