Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸುವ ಹಾಗೂ ಚಿಂತನಾ ಸಾಮರ್ಥ್ಯವನ್ನು ವೃದ್ಧಿಸುವ ಉದ್ದೇಶದಿಂದ ಚಡಚಣದ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ‘ತಿಂಗಳಿಗೊಂದು ಪುಸ್ತಕ’ ಉಪನ್ಯಾಸ ಮಾಲೆಗೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಜಪಾನಿನ ಜನರ ದೀರ್ಘಾಯುಷ್ಯ, ಸಂತೋಷ ಮತ್ತು ಅರ್ಥಪೂರ್ಣ ಬದುಕಿನ ತತ್ವವನ್ನು ಪ್ರತಿಪಾದಿಸುವ ಪ್ರಸಿದ್ಧ ‘ಇಕಿಗೈ’ ಪುಸ್ತಕದ ಕುರಿತು ವಿದ್ಯಾರ್ಥಿಗಳ ಉಪನ್ಯಾಸ ಹಾಗೂ ಚರ್ಚಾ ಕಾರ್ಯಕ್ರಮವೂ ನಡೆಯಿತು.ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಇಂಗ್ಲಿಷ್ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಹಿರಿಯ ನಿರ್ದೇಶಕ ಬಸವರಾಜ ಯಂಕಂಚಿ, “ಒಳ್ಳೆಯ ಪುಸ್ತಕಗಳು ಮನುಷ್ಯನ ಆಲೋಚನಾ ಶಕ್ತಿಯನ್ನು ವಿಸ್ತರಿಸುವುದರ ಜೊತೆಗೆ ಜೀವನಕ್ಕೆ ಸರಿಯಾದ ದಿಕ್ಕು ತೋರಿಸುವ ಶಕ್ತಿಯನ್ನು ಹೊಂದಿವೆ. ಓದುವ ಹವ್ಯಾಸವು ವ್ಯಕ್ತಿತ್ವ ವಿಕಸನದ ಪ್ರಮುಖ ಅಡಿಪಾಯವಾಗಿದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ. ಕೆ. ಬಿರಾದಾರ್, ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಗಷ್ಟೇ ಸೀಮಿತವಾಗದೆ ಜಾಗತಿಕ ಮಟ್ಟದ ಉತ್ತಮ…

Read More

ಬಿಜೆಪಿ ತಾಲೂಕಾ ಮಂಡಲ ಅಧ್ಯಕ್ಷ ಹಣಮಂತರಾಯಗೌಡ ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಇಂಡಿ: ಸ್ಥಳೀಯ ಶಾಸಕ ಯಶವಂತಗೌಡ ಪಾಟೀಲರು ನಾನು ಬದ್ದತೆಯ ಸಿದ್ದಾಂತದ ರಾಜಕಾರಣಿ ಎಂದು ಹೇಳುತ್ತಾರೆ. ಈಗ ಅತೃಪ್ತರಾಗಿ ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಮತ್ತೆ ಮೂರು ದಿನಗಳಾದ ಮೇಲೆ ರಾಜಿನಾಮೆ ಹಿಂದೆ ಪಡೆದಿದ್ದೇನೆ ಎಂದು ನಾಟಕ ಮಾಡಬಾರದು. ರಾಜಿನಾಮೆಗೆ ಬದ್ದರಾಗಿರಬೇಕು ಎಂದು ಬಿಜೆಪಿ ತಾಲೂಕಾ ಮಂಡಲ ಅಧ್ಯಕ್ಷ ಹಣಮಂತರಾಯಗೌಡ ಪಾಟೀಲರು ಹೇಳಿದರು.ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಭಿವೃದ್ದಿಯಲ್ಲಿ ವಂಚನೆ ಆಗಿದ್ದರೆ ರಾಜಿನಾಮೆ ನೀಡಲಿ ಅಧಿಕಾರ ಬೇಕೆಂದು ರಾಜಿನಾಮೆ ನೀಡಿರುವದು ಅವರಿಗೆ ಶೋಬೆ ತರುವಂಥದ್ದಲ್ಲ. ಈಗಾಗಲೇ ಅವರು ರಾಜಿನಾಮೆ ನೀಡಿದ್ದು ಅದಕ್ಕೆ ಕಾರ್ಯಕರ್ತರ ಮತಕ್ಷೇತ್ರದ ಜನರ ಅಭಿಪ್ರಾಯ ಕೇಳಿಲ್ಲ. ನಾಳೆ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಮತಕ್ಷೇತ್ರದ ಜನರಿಗೆ ತಲೆಬಾಗಿ ರಾಜಿನಾಮೆ ಮರಳಿ ಪಡೆಯುತ್ತೇನೆ ಎಂದು ನಾಟಕವಾಡಬಾರದು ಎಂದರು.ತಾಲೂಕು ಬರದಿಂದ ತತ್ತರಿಸುತ್ತಿದೆ, ಮಳೆ ಸರಿಯಾಗಿ ಆಗಿಲ್ಲ, ಕುಡಿಯುವ ನೀರಿನ ತೊಂದರೆ ಆಗುತ್ತಿದೆ. ಈ ಸಮಯದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕು ಪಂಚಾಯತಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಅನಿಲ ಕೆ ಹಳ್ಳಿ ಅವರು ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮಿತ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮು ಜಿ ಅಗ್ನಿ ಅವರು ನೂತನವಾಗಿ ಆಗಮಿಸಿದ ಅನಿಲ ಕೆ ಹಳ್ಳಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿ, ಶುಭ ಕೋರಿದರು.ನಂತರ ಇಬ್ಬರು ಅಧಿಕಾರಿಗಳಿಗೆ ತಾಲೂಕು ಘಟಕದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಗೌರವಿಸಿ, ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಶ್ರೀಮತಿ ಸಾವಿತ್ರಿ ಗೌರೋಜಿ,ಎರಡು ತಾಲೂಕಿನ ಅಭಿವೃದ್ಧಿ ಅಧಿಕಾರಿಗಳು,ತಾಲೂಕು ಪಂಚಾಯಿತಿ ಸಿಬ್ಬಂದಿಗಳು,ಕಾರ್ಯದರ್ಶಿಗಳು,ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗಣಕಯಂತ್ರ ಸಹಾಯಕರು,ಕರ ವಸೂಲಿಗಾರರು, ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ವಿಬಿ-ಜಿ-ರಾಮ್ ಜಿ ಯೋಜನೆಯ ತಾಲೂಕು ಐಇಸಿ ಸಂಯೋಜಕರಾದ ಶ್ರೀ ಬಸವರಾಜ ಹುಣಸಗಿ,ತಾಂತ್ರೀಕ ಸಂಯೋಜಕ ಪುಂಡಲೀಕ್ ಬಿಸ್ಸೆ , ತಾಲೂಕು ಎಮ್.ಐ.ಎಸ್ ಸಂಯೋಜಕರಾದ ಪೂಜಾ ಆಸಂಗಿಹಾಳ ಸೇರಿದಂತೆ ಇತರರು ಹಾಜರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಮೀನುಗಾರರು ಹಾಗೂ ಮೀನು ಮಾರಾಟಗಾರರಿಗೆ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಮೀನುಗಾರಿಕೆ ಇಲಾಖೆಯ ವತಿಯಿಂದ ಮತ್ಸ್ಯವಾಹಿನಿ ಯೋಜನೆ ಅಡಿಯಲ್ಲಿ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ತ್ರೀಚಕ್ರ ವಾಹನಗಳನ್ನು ಬಾಡಿಗೆ ಆಧಾರದಲ್ಲಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಯೋಜನೆಯಡಿ ಆಯ್ಕೆಯಾಗುವ ಫಲಾನುಭವಿಗಳು ಮೀನುಗಾರಿಕೆ ಇಲಾಖೆಯ ನಿಯಮಾನುಸಾರ ಸಾಮಾನ್ಯ ವರ್ಗದವರಾಗಿದ್ದಲ್ಲಿ ೧ ಲಕ್ಷ ರೂ. ಭದ್ರತಾ ಠೇವಣಿ ಪಾವತಿಸಬೇಕಿದ್ದು, ವಾಹನದ ಬಳಕೆಗಾಗಿ ಪ್ರತಿ ತಿಂಗಳು ೩,೦೦೦ ರೂ. ಬಾಡಿಗೆ ಪಾವತಿಸಬೇಕಾಗುತ್ತದೆ. ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ ೧೨ರೊಳಗೆ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ವಿಜಯಪುರ ಮೊ.: ೯೮೪೫೯೨೭೧೧೦ ಹಾಗೂ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮುದ್ದೇಬಿಹಾಳ ಮೊ.: ೯೮೮೦೨೧೦೫೦೫ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಸ್ವಾತಂತ್ರ್ಯ ದಿನಾಚರಣೆ ಕೊಡುಗೆ: ಆಗಸ್ಟ್ ಪೂರ್ತಿ ಕೊಡುಗೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಗಸ್ಟ್ ತಿಂಗಳು ಪೂರ್ತಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಕಡಾ ೫೦ ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ.ಸಾರ್ವಜನಿಕರು ಹಾಗೂ ಸಾಹಿತ್ಯಾಸಕ್ತರು ಈ ಸುವರ್ಣಾವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕಾಗಿ ಪ್ರಾಧಿಕಾರವು ಕೋರಿದೆ.ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಜಿಲ್ಲಾ ಮಟ್ಟದಲ್ಲಿ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳು, ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕಾರ್ಯಾಚರಿಸುತ್ತಿರುವ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳು.ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ hಣಣಠಿs://ಞಠಿಠಿ.ಞಚಿಡಿಟಿಚಿಣಚಿಞಚಿ.gov.iಟಿಮೂಲಕವೂ ಶೇ.೫೦ ರಿಯಾಯಿತಿಯಲ್ಲಿ ಪುಸ್ತಕಗಳನ್ನು ಪಡೆಯಬಹುದು. ಕನ್ನಡ ಪುಸ್ತಕ ಪ್ರಾಧಿಕಾರವು ಇದುವರೆಗೆ ವೈವಿಧ್ಯಮಯ ಸಾಹಿತ್ಯ ಪ್ರಕಾರಗಳಲ್ಲಿ ಸುಮಾರು ೭೬೯ ಶೀರ್ಷಿಕೆಗಳನ್ನು ಪ್ರಕಟಿಸಿದೆ. ವ್ಯಕ್ತಿಚಿತ್ರಗಳು ಹಾಗೂ ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ ಮತ್ತು ಕೃಷಿ ವಿಷಯಗಳು ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ ಹಾಗೂ ಪರಿಸರ ಸಂಬಂಧಿ ಮೌಲ್ಯಯುತ ಕೃತಿಗಳು ಸೇರಿವೆ.ಅತ್ಯಂತ ಪ್ರಜ್ಞಾವಂತ ಲೇಖಕರಿಂದ ರಚಿತವಾದ ಈ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಹಾವಿನಾಳ ಸಕ್ಕರೆ ಕಾರ್ಖಾನೆಯ ವತಿಯಿಂದ 2025-26ನೇ ಹಂಗಾಮಿನಲ್ಲಿ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಟನೇಜ್ ಆಧಾರದ ಮೇಲೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಖಾನೆಯ ವ್ಯಾಪ್ತಿಯ ಒಳಗಿನ ಹಾಗೂ ಹೊರಗಿನ ಕಬ್ಬು ಬೆಳೆಗಾರ ರೈತರಿಗೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಅರ್ಧ ಕೆ.ಜಿ. ಸಕ್ಕರೆಯನ್ನು ಕಾರ್ಖಾನೆ ಆವರಣದಲ್ಲಿ ವಿತರಿಸಲಾಗುತ್ತಿದೆ.ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಖಾನೆಯ ಉಪಾಧ್ಯಕ್ಷ ಮೃತ್ಯುಂಜಯ ಶಿಂಧೆ, ರೈತರು ಕಾರ್ಖಾನೆಯ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಹೇಳಿದರು. 2025-26ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಕಬ್ಬಿನ ಬಿಲ್, ಕಟಾವು ಹಾಗೂ ಸಾಗಾಣಿಕೆ ವೆಚ್ಚ ಸೇರಿದಂತೆ ಎಲ್ಲಾ ಪಾವತಿಗಳನ್ನು ನಿಗದಿತ ಸಮಯಕ್ಕೆ ಮಾಡಲಾಗಿದೆ. ಮುಂದಿನ ಹಂಗಾಮಿನಲ್ಲಿಯೂ ಇದೇ ಪಾರದರ್ಶಕತೆ ಹಾಗೂ ಸಮಯಪಾಲನೆಯನ್ನು ಮುಂದುವರಿಸಲಾಗುವುದು ಎಂದು ಭರವಸೆ ನೀಡಿದರು.ಕಾರ್ಖಾನೆಯ ವ್ಯಾಪ್ತಿಯೊಳಗಿನ ಹಾಗೂ ಹೊರಗಿನ ಎಲ್ಲಾ ಕಬ್ಬು ಬೆಳೆಗಾರರು ತಮ್ಮ ಬೆಳೆದ ಸಂಪೂರ್ಣ ಕಬ್ಬನ್ನು…

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕರು ಹಿರಿಯ ರಾಜಕೀಯ ನಾಯಕ ಲಕ್ಷ್ಮಣ ಸಂಗಪ್ಪ ಸವದಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿಯಾಗಿ ಸಂಭ್ರಮಾಚರಣೆ ನಡೆಸಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಪಟ್ಟಣದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ಸೇರಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಕಾಂಗ್ರೆಸ್ ಪಕ್ಷದ ಧ್ವಜಗಳನ್ನು ಹಿಡಿದು ಜಯಘೋಷಗಳನ್ನು ಕೂಗಿ, ಸಚಿವರಾದ ಲಕ್ಷ್ಮಣ ಸವದಿ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಲಕ್ಷ್ಮಣ ಸವದಿ ಅವರಿಗೆ ಜಯವಾಗಲಿ ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ ಎಂಬ ಘೋಷಣೆಗಳು ಮೊಳಗಿದವು ಜಯ ಘೋಷಗಳ ಮಧ್ಯೆ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನ ಹಲವು ಹಿರಿಯ ಮುಖಂಡರು ಲಕ್ಷ್ಮಣ ಸವದಿ ಅವರು…

Read More

ಉದಯರಶ್ಮಿ ದಿನಪತ್ರಿಕೆ ಬಾಗಲಕೋಟೆ (ಜಮಖಂಡಿ): ಮುಧೋಳದ ನಿರಾಣಿ ಶುಗರ್ಸ್ ಲಿಮಿಟೆಡ್ (ಯುನಿಟ್-1) ವತಿಯಿಂದ 2025-26ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಕೆ.ಜಿ. ಸಕ್ಕರೆಗೆ ₹24 ದರ ನಿಗದಿಪಡಿಸಿ, ಪ್ರತಿ ಟನ್ ಕಬ್ಬಿಗೆ 500 ಗ್ರಾಂ ಸಕ್ಕರೆಯನ್ನು ವಿತರಿಸುವ ಯೋಜನೆಗೆ ಇಂದಿನಿಂದ ಚಾಲನೆ ನೀಡಲಾಗಿದೆ.ಚಿಕ್ಕಪಡಸಲಗಿ ಸರ್ಕಲ್ ವ್ಯಾಪ್ತಿಯ ಎಲ್ಲ ರೈತರು ತಮ್ಮ ಕಬ್ಬು ಪೂರೈಕೆಯ ದಾಖಲೆಗಳೊಂದಿಗೆ ನಿಗದಿತ ಸಕ್ಕರೆ ವಿತರಣಾ ಕೇಂದ್ರಕ್ಕೆ ಆಗಮಿಸಿ ಸಕ್ಕರೆಯನ್ನು ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಸಕ್ಕರೆ ವಿತರಣೆಯು ಆಗಸ್ಟ್ 5ರಿಂದ ಆಗಸ್ಟ್ 15, 2026ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 9.30ರಿಂದ ಸಂಜೆ 4.30ರವರೆಗೆ ವಿತರಣೆ ನಡೆಯಲಿದೆ.ಪ್ರತಿ ಟನ್ ಕಬ್ಬು ಪೂರೈಕೆಗೆ ರೈತರು 500 ಗ್ರಾಂ ಸಕ್ಕರೆಯನ್ನು ₹24 ಪ್ರತಿ ಕೆ.ಜಿ. ದರದಲ್ಲಿ ಪಡೆಯಬಹುದಾಗಿದೆ. ಸಕ್ಕರೆ ವಿತರಣೆ ವೇಳೆ ರೈತರು ಕಬ್ಬು ಪೂರೈಕೆಯ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ನಿಗದಿತ ಅವಧಿಯಲ್ಲಿ ಸಕ್ಕರೆ ಪಡೆಯದ ರೈತರಿಗೆ, ಉಳಿಕೆ ಸಕ್ಕರೆ ಲಭ್ಯವಿದ್ದಲ್ಲಿ ಸಂಸ್ಥೆಯ ಮುಂದಿನ ಸೂಚನೆಯಂತೆ ವಿತರಣೆ ಮಾಡಲಾಗುವುದು ಎಂದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ೨೦೨೬–೨೭ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ವ್ಯಾಲ್ಯೂ ಆಡೆಡ್ ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸುಗಳ ಪ್ರಥಮ ವರ್ಷದ ಪ್ರವೇಶಕ್ಕಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಯುಯುಸಿಎಂಎಸ್ (UUಅಒS) ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ ೧೭, ೨೦೨೬ರವರೆಗೆ ವಿಸ್ತರಿಸಲಾಗಿದೆ.ಅಭ್ಯರ್ಥಿಗಳು ಆಗಸ್ಟ್ ೧೭ರವರೆಗೆ ಯುಯುಸಿಎಂಎಸ್ ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಯಾವುದೇ ದಂಡ ಅನ್ವಯಿಸುವುದಿಲ್ಲ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅದರ ಮುದ್ರಿತ ಪ್ರತಿಯನ್ನು ಹಾಗೂ ಅಗತ್ಯ ದಾಖಲೆಗಳನ್ನು ಸಂಬಂಧಿತ ಸ್ನಾತಕೋತ್ತರ ವಿಭಾಗಗಳಿಗೆ ಆಗಸ್ಟ್ ೧೮ರೊಳಗೆ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳಿಗೆ ಆಗಸ್ಟ್ ೧೯-೨೧ರ ವರೆಗೆ ವಿಶ್ವವಿದ್ಯಾನಿಲಯದಲ್ಲಿ ಕೌನ್ಸೆಲಿಂಗ್ ನಡೆಯಲಿದೆ. ವಿದ್ಯಾರ್ಥಿನಿಯರ ಆಯ್ಕೆಯನ್ನು ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನಡೆಸಿ, ಕೌನ್ಸೆಲಿಂಗ್ ಮೂಲಕ ಪ್ರವೇಶ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವೆಬ್‌ಸೈಟ್ ತಿತಿತಿ.ಞsತಿu.ಚಿಛಿ.iಟಿ⁠ ಅಥವಾ ಸಂಬಂಧಿತ…

Read More

ರೈತರ ಬೆಳೆಸಾಲ ಮನ್ನಾ ಮಾಡಲು ಒತ್ತಾಯ | ಮುಖ್ಯಮಂತ್ರಿಗಳಿಗೆ ರೈತಸಂಘ ತಾಲೂಕಾಧ್ಯಕ್ಷ ಸಾತಲಿಂಗಯ್ಯಾ ಸಾಲಿಮಠ ಮನವಿ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಮುಂಗಾರು ಮತ್ತು ಹಿಂಗಾರು ಮಳೆಯ ಅಭಾವದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ತಿಕೋಟಾ ತಾಲ್ಲೂಕನ್ನು ಬರಪಿಡೀತ ಪ್ರದೇಶವೆಂದು ಘೋಷಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಗ್ರೇಡ್ 2 ತಹಶಿಲ್ದಾರ ಎಚ್.ಎನ್.ಬಡಿಗೇರ ಮುಖಾಂತರ ಮುಖ್ಯಮಂತ್ರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ತಾಲ್ಲೂಕಾಧ್ಯಕ್ಷ ಸಾತಲಿಂಗಯ್ಯ ಸಾಲಿಮಠ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಇನ್ನೂವರೆಗೆ ಭೂಮಿಯಲ್ಲಿ ಬಿತ್ತನೆ ಮಾಡಿರುವದಿಲ್ಲ. ಇನ್ನೂ ಕೆಲ ರೈತರು ಮಳೆ ಆಸೆ ಇಟ್ಟುಕೊಂಡು ಬಿತ್ತನೆ ಮಾಡಿದರೆ ಇದ್ದ ಬೆಳೆಗಳು ಒಣಗುತ್ತಿವೆ, ಮತ್ತೆ ಸಾಲದ ಸುಳಿಗೆ ಸಿಕ್ಕು ಸಂಕಷ್ಟ ಅನುಭವಿಸುವಂತಾಗಿದೆ. ಕೂಡಲೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ರೈತರ ನೆರವಿಗೆ ಬರಬೇಕು.ಸಮಸ್ತ ರೈತರು ಕಣ್ಣಿರು ಹಾಕುವ ಪರಿಸ್ಥಿತಿ ನಿರ್ಮಾನವಾಗಿದ್ದು, ರೈತರ ಕಷ್ಟವನ್ನು ತಾವು ಅರ್ಥಮಾಡಿಕೊಂಡು ಬೆಳೆಸಾಲ ಮನ್ನಾ ಮಾಡಬೇಕು. ಬರ ಪರಿಹಾರ…

Read More