Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕ್ರೀಡೆಯಲ್ಲಿ ಸೋಲು-ಗೆಲವು ಮುಖ್ಯವಲ್ಲ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿದೆ. ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ (ಪದವಿ ಪೂರ್ವ)ಹಾಗೂ ಎಚ್.ಜಿ.ಪದವಿ ಪೂರ್ವ ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ೨೦೨೫-೨೬ ನೇ ಸಾಲಿನ ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲೂಕುಗಳ ಪದವಿ ಪೂರ್ವ ಕಾಲೇಜುಗಳ ತಾಲೂಕಾ ಮಟ್ಟದ ಮೇಲಾಟಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದ ಮೂಲ ಕ್ರೀಡೆ ಹಾಕಿ ಮರೆಮಾಚಿ ಹೊಗುತ್ತಿದೆ. ನಸಿಸಿ ಹೋಗುತ್ತಿರುವ ಕ್ರೀಡೆಗಳನ್ನು ದೈಹಿಕ ಶಿಕ್ಷಕರು ಶಾಲಾ ಕಾಲೇಜುಗಳಲ್ಲಿ ಹೆಚ್ಚು ಹೆಚ್ಚಾಗಿ ಮಕ್ಕಳಿಗೆ ಪ್ರೇರೆಪಿಸಿ ಭಾಗವಹಿಸುವಂತೆ ಮಾಡಬೇಕು. ಶಿಕ್ಷಣದಷ್ಟೇ ವಿವಿಧ ಕ್ರೀಡೆಗಳಿಗೆ ಪ್ರಾಮುಖ್ಯತೆ ನೀಡಬೇಕು. ಜಗತ್ತು ರಾಜಕಾರಣಿಗಳಿಂತ ಹೆಚ್ಚು ಶ್ರೇಷ್ಠ ಆಟಗಾರರ ಮೇಲೆಯೆ ಅಭಿಮಾನವಿದೆ. ಕ್ರೀಡೆಗಳು ನಮ್ಮ ಮಾನಸಿಕ ಮತ್ತು ದೈಹಿಕ ಸ್ಥಿತಿಯನ್ನು ವೃದ್ದಿ ಮಾಡುತ್ತದೆ ಎಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಭಾನುವಾರ ರಾತ್ರಿ ಸಂಭವಿಸಿದ ಚಂದ್ರಗ್ರಹಣದ ಮೂಲಕ ಹಲವರು ಕೆಂಪು ಚಂದ್ರನನ್ನು ಕಣ್ತುಂಬಿಕೊಂಡರು.ಪಟ್ಟಣದಲ್ಲಿ ಕೆಲವರು ರಾತ್ರಿ ೧೧ ಗಂಟೆಯಿಂದಲೇ ಎಚ್ಚರವಾಗಿದ್ದು ಬದಲಾಗುತ್ತಿರುವ ಚಂದ್ರನ ಬಣ್ಣವನ್ನು ಮೊಬೈಲ್‌ಗಳಲ್ಲಿ ಸೆರೆಹಿಡಿಯುವಲ್ಲಿ ನಿರತರಾಗಿದ್ದರು. ಅದರಲ್ಲೂ ೧೨ ರಿಂದ ೧೨.೩೦ ರ ನಡುವಿನ ಅವಧಿಯಲ್ಲಿ ಬಹುತೇಕ ಕೆಂಬಣ್ಣಕ್ಕೆ ತಿರುಗಿದ ಚಂದ್ರಮ ಅಕ್ಷರಶ ರಕ್ತಚಂದಿರನಂತೆ ಕಂಡು ಬಂದನು.ಚಂದ್ರಗ್ರಹಣದ ಅಂಗವಾಗಿ ಭಾನುವಾರ ಕೆಲವರು ಜೋತಿಷ್ಯದ ಅನುಗುಣವಾಗಿ ಮಧ್ಯಾನ್ಹವೇ ಊಟೋಪಚಾರ ಮುಗಿಸಿದರೆ ಇನ್ನೂ ಕೆಲವರು ಸಾಯಂಕಾಲ ಬೇಗನೇ ಊಟ ಮುಗಿಸಿದರು. ರಾತ್ರಿ ಚಂದ್ರಗ್ರಹಣ ಆರಂಭವಾಗುತ್ತಿದ್ದಂತೆಯೇ ವಿವಿಧ ರಾಶಿಫಲಗಳಿಗೆ ಅನುಗುಣವಾಗಿ ಪೂಜೆ ಸಹಿತ ವಿವಿಧ ಧಾರ್ಮಿಕ ಕ್ರಿಯೆಗಳಲ್ಲಿ ನಿರತರಾದರು.ಹಿಂದಿನ ದಿನಗಳಲ್ಲಿ ಹಗಲಿನ ಗ್ರಹಣದ ನಂತರ ಭಾವಿ, ಬೊರೆವೆಲ್‌ಗಳ ಮುಂದೆ ನಿಂತು ನೀರು ಸುರಿದುಕೊಂಡು ಮನೆ ಸೇರುತ್ತಿದ್ದ ಜನರು ಇಂದು ಮಧ್ಯರಾತ್ರಿ ಗ್ರಹಣವಿದ್ದ ಕಾರಣ ಜನರು ಸಹ ಹಿಂದಿನ ಪದ್ಧತಿ ಬದಲಾಗಿ ಬೆಳಿಗ್ಗೆ ಎದ್ದು ಸ್ನಾನ ಕರ್ಮಾಧಿ ಮುಗಿಸಿ ದೋಷಗಳಿಗೆ ಅನುಗುಣವಾಗಿ ಮನೆ ಹಾಗೂ ದೇವಸ್ಥಾನಗಳಲ್ಲಿ ವಿಶೇಷ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ದೇವರಹುಲಗಬಾಳ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿ ಶ್ರೀಮತಿ ಶೈಲಾ ಭೂಪಾಲಪ್ಪ ಗೊಂಗಡಿ ಅವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದರು.ಸೆ.೫ ರಂದು ವಿಜಯಪುರದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನೋತ್ಸವದ ಅಂಗವಾಗಿ, ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಇವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ವಿಜಯಪುರದಲ್ಲಿ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿದ ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳಖಾದಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಖಾದಿ ಬಟ್ಟೆ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಖಾದಿ ದೇಶಾಭಿಮಾನದ ಪ್ರತೀಕವಾಗಿದೆ. ಖಾದಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದೆ ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಮಸ್ಕಿ ಶಾಸಕ ಬಸನಗೌಡ ತುರವಿಹಾಳ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಇಂಡಿ ರಸ್ತೆಯ ಚಾಂದಿನಿ ಫಂಕ್ಷನ್ ಹಾಲ್‌ನಲ್ಲಿ ಸೆ.೮ ರಿಂದ ೧೭ರವರೆಗೆ ಆಯೋಜಿಸಿದ ಖಾದಿ ಉತ್ಸವ-೨೦೨೫ರ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯದಲ್ಲಿ ಖಾದಿ ಉತ್ಪಾದನೆಗೆ ಇತಿಹಾಸವಿದೆ. ಖಾದಿ ನಮ್ಮ ಸ್ವಾಭಿಮಾನ-ಸ್ವಾವಲಂಬನೆಯ ಸಂಕೇತವಾಗಿದೆ. ವಿಶಿಷ್ಟ ಸ್ಥಾನ…
ವಿಜಯಪುರ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚಿಗೆ ಸುರಿದ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಜಂಟಿ ಸಮೀಕ್ಷೆ ವರದಿಯನ್ನು ಪ್ರಕಟಿಸಿ, ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಅಂತಿಮ ವರದಿ ವಿಂಗಡಿಸಿ ಸಲ್ಲಿಸುವಂತೆ ಸಂಬಂಧಿಸಿದ ತಾಲೂಕಾ ತಹಶೀಲ್ದಾರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯ ೧೩ ತಾಲೂಕುಗಳಲ್ಲಿ ಹಾನಿಗೊಳಗಾದ ಬೆಳೆಗಳ ಜಂಟಿ ಸಮೀಕ್ಷೆ ನಡೆಸಿದ್ದು, ೨೧೬೮೩.೯ ಹೆಕ್ಟೇರ್ ಕೃಷಿ ಹಾಗೂ ೪೫೦ ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಸಮೀಕ್ಷಾ ವರದಿಯನ್ನು ಜಿಲ್ಲೆಯ ಸಂಬಂಧಿಸಿದ ಗ್ರಾಮ ಪಂಚಾಯತ್ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರ, ತಹಶೀಲ್ದಾರ ಕಾರ್ಯಾಲಯಗಳಲ್ಲಿ ಹಾನಿಗೊಳಗಾದ ರೈತರ ಬೆಳೆಗಳ ಪಟ್ಟಿಯನ್ನು ಪ್ರಚುರಪಡಿಸಿ ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ವರದಿಯನ್ನು ವಿಂಗಡಿಸಿ ಅಂತಿಮ ವರದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಹಾಗೂ ಶಿಕ್ಷಕರಿಗೆ ಸಿಗುವ ಸೌಲಭ್ಯಗಳು ಅನುದಾನಿತ ಪ್ರಾಥಮಿಕ ಶಾಲೆಯ ಶಿಕ್ಷಕರಿಗೂ ಸಿಗಬೇಕು, ಅದೇ ರೀತಿಯಲ್ಲಿ ನಿವೃತ್ತಿ ಹೊಂದಿ ಬರಿಗೈಯಲ್ಲಿ ಮನೆಗೆ ಬರುತ್ತಿರುವ ಶಿಕ್ಷಕರನ್ನ ಜೀವನ ತುಂಬಾ ಕಷ್ಟದಾಯಕವಾಗಿದ್ದು, ಸರಕಾರ ಪಿಂಚಣಿ ವ್ಯವಸ್ಥೆ ಜಾರಿಗೆ ತರಲು ಆಗ್ರಹಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್ ರಾಜಗೋಪಾಲ್ ಹೇಳಿದರು.ಭಾನುವಾರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಖಾಸಗಿ ಪಂಕ್ಚನ್ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಸಂಘದ ಸಂಯುಕ್ತಾಶ್ರಯದಲ್ಲಿ 2025 ನೇ ಸಾಲಿನ ಶಿಕ್ಷಕರ ದಿನೋತ್ಸವ ನಿಮಿತ್ತವಾಗಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಧಾನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಇದೆ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಅಖಿಲ ಕರ್ನಾಟಕ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರ ಸಂಘದ ಅಧ್ಯಕ್ಷ ಜಿ. ಹನುಮಂತಪ್ಪ ಮಾತನಾಡಿ, ಈಗಿರುವ ಸರಕಾರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ. ಸರ್ವಪಳ್ಳಿ ರಾಧಾಕೃಷ್ಣನ್ ರವರು ಒಬ್ಬ ಮಹಾ ಮೇಧಾವಿ, ತತ್ವಜ್ಞಾನಿ ಮತ್ತು ದಾರ್ಶನಿಕರಾಗಿ ಇಡೀ ಜಗತ್ತಿಗೆ ಆದರ್ಶ ಶಿಕ್ಷಕರಾಗಿದ್ದರು. ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿ ಜನಮೆಚ್ಚಿಗೆ ಪಡೆದ ಒಬ್ಬ ಶ್ರೇಷ್ಠ ಶಿಕ್ಷಕರಾಗಿದ್ದಾರೆ. ಜಗತ್ತಿನಲ್ಲಿ ಎಲ್ಲ ವೃತ್ತಿಗಳಲ್ಲಿ ಶಿಕ್ಷಕ ವೃತ್ತಿಯು ಅತಿ ಪವಿತ್ರವಾದುದು. ಶಿಕ್ಷಕ ವಿದ್ಯಾರ್ಥಿಗಳಲ್ಲಿರುವ ಅಂಧಕಾರವೆಂಬ ಅಜ್ಞಾನವನ್ನು ಜ್ಞಾನದ ಜ್ಯೋತಿಯನ್ನು ಬೆಳಗಿಸುವವನು ಎಂದು ವಿಜಯಪುರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಜ ಬಿರಾದಾರ ಅಭಿಪ್ರಾಯಪಟ್ಟರು.ಅವರು ನವಭಾಗದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮನಃಶಾಸ್ತç ವಿಭಾಗದ ವತಿಯಿಂದ ಆಯೋಜಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎ.ಐ.ಹಂಜಗಿ ಮಾತನಾಡಿ, ವಿದ್ಯಾರ್ಥಿಗಳ ಭಾವೀ ಭವಿಷ್ಯವನ್ನು ರೂಪಿಸಲು ಶಿಕ್ಷಕನಾದವನು ಸದಾ ಚಿಂತಿಸುತ್ತಾ, ವಿದ್ಯಾರ್ಥಿಗಳನ್ನು ನಾಳಿನ ಉತ್ತಮ ಸತ್ಪ್ರಜೆಗಳನ್ನಾಗಿ ನಿರ್ಮಿಸಿ ನವ ಭಾರತ ನಿರ್ಮಾಣಕ್ಕಾಗಿ ಶ್ರಮಿಸಬೇಕಾಗಿರುವದು ಅವಶ್ಯಕ. ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ನಡೆದು ಜೀವನದಲ್ಲಿ ಏನ್ನನ್ನಾದರೂ ಸಾಧಿಸುವ ಛಲವನ್ನು ಹೊಂದಿರಬೇಕು…
ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಪ್ರೊ.ಎಮ್ ಎಸ್ ಮದಭಾವಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೊದಲಿನ ಶಿಕ್ಷಣ ವ್ಯವಸ್ಥೆಗೂ ಇಂದಿನ ಶಿಕ್ಷಣ ವ್ಯವಸ್ಥೆಗೂ ಸಾಕಷ್ಟು ಬದಲಾವಣೆಗಳಾಗಿವೆ, ಶಿಕ್ಷಕರು ಕೇವಲ ಪಾಠಗಳನ್ನು ಬೋಧಿಸುವುದರಲ್ಲಿ ಸೀಮಿತವಾಗದೆ, ಹೃದಯವಂತಿಕೆಯೊಂದಿಗೆ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವ ಜವಾಬ್ದಾರಿಯನ್ನು ಹೊತ್ತಿರಬೇಕು ಎಂದು ವಿಜಯಪುರದ ವಚನಪಿತಾಮಹ ಡಾ. ಫ. ಗು ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯದರ್ಶಿ ಪ್ರೊ.ಎಮ್ ಎಸ್ ಮದಭಾವಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಡಾ. ಎಸ್. ರಾಧಾಕೃಷ್ಣನ್ ಅವರ ಶಿಕ್ಷಣ ತತ್ವಗಳು ಹಾಗೂ ಮೌಲ್ಯಗಳು ಇಂದಿಗೂ ದಿಕ್ಕು ತೋರುತ್ತಿವೆ. ಶಿಕ್ಷಕರು ಕೇವಲ ಪಾಠವನ್ನು ಕಲಿಸುವವರಲ್ಲ, ಅವರು ಸಮಾಜಕ್ಕೆ ಆದರ್ಶ ವ್ಯಕ್ತಿತ್ವವನ್ನು ನೀಡುವವರಾಗಿದ್ದಾರೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಐ.ಕ್ಯೂ.ಎ.ಸಿ ಡೈರಕ್ಟರ್ ಪ್ರೊ.ಪಿ.ಜಿ ತಡಸದ ಮಾತನಾಡಿ, ಇವತ್ತಿನ ತಂತ್ರಜ್ಞಾನ ಯುಗದಲ್ಲಿ, ಶಿಕ್ಷಕರು ಮುಂಬರುವ ಸವಾಲುಗಳನ್ನು ಎದುರಿಸಿ, ಹೊಸ ಹೊಸ ಬಗೆಯ ಬೋಧನಾ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಕರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ೨೦೨೫-೨೬ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನು ನಿಗಮದ ವೆಬ್‌ಸೈಟ್https://eitbt.karnataka.gov.in/en ಮೂಲಕ ಸಲ್ಲಿಸಬಹುದಾಗಿದ್ದು, ಅಗತ್ಯ ದಾಖಲಾತಿ, ಅರ್ಹತೆ ಸೇರಿದಂತೆ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಅಥವಾ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ೨೦೨೫-೨೬ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.೫೦೦೦ ಆರ್ಥಿಕ ನೆರವು ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.೨೦೨೪-೨೫ನೇ ಸಾಲಿನಲ್ಲಿ ನೇಕಾರ ಸಮ್ಮಾನ ಯೋಜನೆಯಡಿ ಹೊರಗುಳಿದ ಕೈಮಗ್ಗ-ವಿದ್ಯುತ್ ಮಗ್ಗ ನೇಕಾರರು ಮಾತ್ರ ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಯೋಜನೆಯಡಿ ಕೈಮಗ್ಗ-ವಿದ್ಯುತ್ ಮಗ್ಗ ವೈಯಕ್ತಿಕ ನೇಕಾರರು,ಕೆ.ಎಚ್.ಡಿಸಿ ನೇಕಾರರು, ಕೈಮಗ್ಗ-ವಿದ್ಯುತ್ ಮಗ್ಗ ನೇಕಾರ ಸಹಕಾರ ಸಂಘಗಳಲ್ಲಿ ಪ್ರಸ್ತುತ ನೇಕಾರಿಕೆ ಮಾಡುತ್ತಿರುವ ನೇಕಾರರು ದಿನಾಂಕ:೧೮-೦೯-೨೦೨೫ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಹರು,ಕೈಮಗ್ಗ ಮತ್ತು ಜವಳಿ ವ ಜಿಲ್ಲಾ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು, ಆಧಾರ ಕಾರ್ಡ್,ನೇಕಾರ ಸಮ್ಮಾನ ಐಡಿ,ಪೆಹಚಾನ ಕಾರ್ಡ್,ಆಧಾರ ಲಿಂಕ್ ಮಾಡಿದ ಬ್ಯಾಂಕ್ ಪಾಸ್ ಬುಕ್ ಪ್ರತಿ,ಕೈಮಗ್ಗ-ವಿದ್ಯುತ್ ಮಗ್ಗದಲ್ಲಿ ನೇಕಾರಿಕೆಯಲ್ಲಿ ತೊಡಗಿರುವ ಫೋಟೋ ಮತ್ತು ಪಾವತಿ ರಸೀದಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ,ಸಲ್ಲಿಸುವಂತೆಯೂ, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು,ಕೈಮಗ್ಗ ಮತ್ತು ಜವಳಿ ಇಲಾಖೆ,ಜಿಲ್ಲಾ ಪಂಚಾಯತ,ಶಿಖಾರಖಾಎನೆ,ಸ್ಟೇಶನ್‌ಬ್ಯಾಕ್ ರೋಡ್,ಡಿಐಸಿ ಆವರಣ,ವಿಜಯಪುರ…
