Author: editor.udayarashmi@gmail.com

ಕೇಂದ್ರ ಸಚಿವ ಸಂಪುಟದಿಂದ ಮಹತ್ವದ ನಿರ್ಧಾರ | ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಘೋಷಣೆ ನವದೆಹಲಿ: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು “ಪಾರದರ್ಶಕ ರೀತಿಯಲ್ಲಿ” ಸೇರಿಸಲಾಗುವುದು ಎಂದು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಬುಧವಾರ ಘೋಷಿಸಿದರು.ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.”ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ನಿರ್ಧರಿಸಿದೆ” ಎಂದು ಕೇಂದ್ರ ಸಚಿವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.ಜನಗಣತಿ ಕಾರ್ಯ ಏಪ್ರಿಲ್ 2020 ರಲ್ಲಿ ಪ್ರಾರಂಭವಾಗಬೇಕಿತ್ತು ಆದರೆ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. 10 ವರ್ಷಗಳ ವೇಳಾಪಟ್ಟಿಯ ಪ್ರಕಾರ ಈ ಕಾರ್ಯ ನಡೆದಿದ್ದರೆ, ವರದಿಯು 2021 ರಲ್ಲಿ ಪ್ರಕಟವಾಗುತ್ತಿತ್ತು.ಸಂಪುಟದ ದೊಡ್ಡ ನಿರ್ಧಾರವನ್ನು ಘೋಷಿಸುವಾಗ, ವೈಷ್ಣವ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಷ ಯಾವಾಗಲೂ ಜಾತಿ ಜನಗಣತಿಯನ್ನು ವಿರೋಧಿಸುತ್ತದೆ ಎಂದು ಹೇಳಿದರು. ಅವರು ಇಂಡಿ ಬ್ಲಾಕ್ ಪಕ್ಷಗಳ ಮೇಲೆ ವಾಗ್ದಾಳಿ ಮಾಡಿದರು. ಅವರು ರಾಜಕೀಯ ಲಾಭಕ್ಕಾಗಿ ಜಾತಿ ಆಧಾರಿತ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ಸಾಂಸ್ಕ್ರತಿಕನಾಯಕ  ಬಸವೇಶ್ವರರ ಜಯಂತಿಯನ್ನು  ಜನರು ಸಡಗರ, ಸಂಭ್ರಮದಿಂದ ಆಚರಿಸಿದರು.ಪಟ್ಟಣದ ಐತಿಹಾಸಿಕ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನದಲ್ಲಿ ಭಕ್ತರು ಬೆಳಿಗ್ಗೆ ರುದ್ರಾಭಿಷೇಕ, ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು. ಸಂಪ್ರದಾಯದಂತೆ ಬಸವೇಶ್ವರ ದೇವಸ್ಥಾನದಿಂದ ವಿರಕ್ತಮಠಕ್ಕೆ ತೆರಳಿ ಬಸವೇಶ್ವರರ ಮೂರ್ತಿಯ ಮೆರವಣಿಗೆಯೊಂದಿಗೆ ವಚನ ಪುಸ್ತಕ ಮಸ್ತಕದ ಮೇಲೆ ಹೊತ್ತ ಮಹಿಳೆಯರನ್ನು, ಸಿದ್ದಲಿಂಗ ಸ್ವಾಮೀಜಿಯವರನ್ನು ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನಕ್ಕೆ ಆಗಮಿಸಿದ ಶ್ರೀಗಳು ಬಸವ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಶಿವಭಜನೆಗೆ ಪೂಜೆ ಸಲ್ಲಿಸಿ ಮಂಗಳಾರತಿ ಜರುಗಿದ ನಂತರ ಶಿವಭಜನೆ ಮುಕ್ತಾಯಗೊಳಿಸಿದರು. ನಂತರ ದೇವಸ್ಥಾನದ ಆವರಣದಲ್ಲಿ ಶ್ರೀಗಳಿಂದ ಷಟ್ಸ್ಥಲ ಧ್ವಜಾರೋಹಣ ನೆರವೇರಿಸುವ ಮೂಲಕ ಬಸವ ಜಯಂತಿಗೆ ಚಾಲನೆ ನೀಡಿದರು.ನಂತರ ವಾದ್ಯಮೇಳ ಹಾಗೂ ತಲೆಯ ಮೇಲೆ ವಚನ ಪುಸ್ತಕ ಹೊತ್ತ ಮಹಿಳೆಯರೊಂದಿಗೆ ಬಸವೇಶ್ವರ ಮೂರ್ತಿಯ ಮೆರವಣಿಗೆಯೊಂದಿಗೆ ಭಕ್ತರು ಹಾಗೂ ಶ್ರೀಗಳು ಬಸವಜನ್ಮ ಸ್ಮಾರಕಕ್ಕೆ ಆಗಮಿಸಿದರು.ನಂತರ ಶ್ರೀಗಳ ಸಾನಿಧ್ಯದಲ್ಲಿ ಮಹಿಳೆಯರು ಜೋಗುಳ ಪದ ಹಾಡಿ ಬೆಳ್ಳಿಯ ಬಾಲ ಬಸವಣ್ಣನ ಮೂರ್ತಿಯನ್ನು ತೊಟ್ಟಿಲಲ್ಲಿ ಹಾಕಿ ತೂಗುವ ಮೂಲಕ ನಾಮಕರಣ ಮಾಡಿದರು. ಸಂಪ್ರದಾಯದಂತೆ ಸಂತಾನ…

Read More

ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿ ಸೇರಿದಂತೆ ವಿವಿಧ ಶರಣರ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಈಗಾಗಲೇ ಪ್ರತ್ಯೇಕ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದೆ. ಮುಂಬರುವ ದಿನಗಳಲ್ಲಿ ಪ್ರಾಧಿಕಾರದ ಕಚೇರಿ ಆರಂಭಿಸುವ ಮೂಲಕ ಪ್ರಾಧಿಕಾರದ ಕಾರ್ಯಗಳು ಆರಂಭವಾಗಲಿವೆ ಎಂದು ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಗುರು, ಸಾಂಸ್ಕ್ರತಿಕ ನಾಯಕ ಬಸವೇಶ್ವರರ ವಿಚಾರಧಾರೆ-ತತ್ವಗಳು ಜಗತ್ತಿಗೆ ಮುಟ್ಟಿಸುವ ಕಾರ್ಯದಲ್ಲಿ , ಪ್ರಚಾರಗೈಯಲು ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ. ಈ ವರ್ಷ ಬಸವೇಶ್ವರರ ಐಕ್ಯಸ್ಥಳ ಕೂಡಲಸಂಗಮದಲ್ಲಿ ರಾಜ್ಯಮಟ್ಟದ ಅದ್ದೂರಿ ಕಾರ್ಯಕ್ರಮ ಎರಡು ದಿನಗಳ ಕಾಲ ಹಮ್ಮಿಕೊಂಡಿದೆ. ಮುಂಬರುವ ದಿನಗಳಲ್ಲಿಯೂ ಬಸವೇಶ್ವರರು ಜನಿಸಿದ ಈ ನೆಲದಲ್ಲಿಯೂ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರುವುದಾಗಿ ಹೇಳಿದ ಅವರು,ಈಗಾಗಲೇ ನಾನು ಬಸವನಬಾಗೇವಾಡಿ…

Read More

ಕಾಂಗ್ರೆಸ್ ಸರ್ಕಾರದಿಂದ ಮಾದಿಗ ಸಮಾಜಕ್ಕೆ ಮೋಸ :ಬಾಸ್ಕರ್‌ಪ್ರಸಾದ್ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಉಪ ಚುನಾವಣೆ ಸಂದರ್ಭದಲ್ಲಿ ಒಳ ಮೀಸಲಾತಿ ನೀಡದೇ ಯಾವುದೇ ಹುದ್ದೆಗಳನ್ನು ತುಂಬಿಕೊಳ್ಳುವುದಿಲ್ಲ ಎಂದು ಮಾತು ಕೊಟ್ಟಿದ್ದ ಸಿದ್ದರಾಮಯ್ಯ, ಸರಕಾರ ಬಂದೊಡನೆ ಕೊಟ್ಟ ಮಾತನ್ನು ತಪ್ಪಿ ಮೀಸಲಾತಿಯಡಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡು ಮಾದಿಗ ಸಮಾಜಕ್ಕೆ ಮೋಸ ಮಾಡಿದೆ ಎಂದು ಒಳ ಮೀಸಲಾತಿ ಕ್ರಾಂತಿಕಾರಿ ರಥ ಯಾತ್ರೆ ರೂವಾರಿ ಹಾಗೂ ಹೋರಾಟಗಾರ ಬಿ.ಆರ್.ಬಾಸ್ಕರ್‌ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಳ ಮೀಸಲಾತಿ ಕ್ರಾಂತಿಕಾರಿ ರಥ ಯಾತ್ರೆ ರೂವಾರಿ ಹಾಗೂ ಹೋರಾಟಗಾರ ಮಾತನಾಡಿದ ಅವರು, ೪೦ವರ್ಷಗಳ ಹೋರಾಟಕ್ಕೆ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುವ ಭರವಸೆ ನೀಡಿ ಜನಗಣತಿಗೆ ಅದೇಶಿಸಿದೆ. ಆದರೆ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳು, ಬಡ್ತಿ ಮೀಸಲಾತಿ ಮತ್ತು ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ಮುಂದಾಗಿದ್ದು ಇದು ಮಾದಿಗ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರಿ ವಂಚಿಸುವ ತಂತ್ರಗಾರಿಕೆಯಾಗಿದೆ.ಏ.೦೫ರಂದು ಬಾಬು ಜಗಜೀವನರಾಮ ಅವರ…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದ ಆರಾದ್ಯದೇವ ಶ್ರೀ ಪ್ರಭುಲಿಂಗೇಶ್ವರರ ಹರಿವಾಣೋತ್ಸವ ಹಾಗೂ ರುದ್ರಾಭಿಷೇಕ ಮಹಾಮಂಗಲ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು.ಹರಿವಾಣೋತ್ಸವದ ನಿಮಿತ್ಯ ಕಳೆದ ಹನ್ನೊಂದು ದಿನಗಳಿಂದ ಪ್ರತಿದಿನ ಮುಂಜಾನೆ ೪ ಘಂಟೆಯಿಂದ ೭.೩೦ ಘಂಟೆಗಳವರೆಗೆ ನಡೆಯುತ್ತಿರುವ ರುದ್ರಾಭಿಷೇಕ, ಮಹಾಪೂಜೆಯ ಮಂಗಲೋತ್ಸವಕ್ಕೆ ಗ್ರಾಮದ ರೈತರು ಮಹಿಳೆಯರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನಂತರನಡೆದ ಪಲ್ಲಕ್ಕಿ ಉತ್ಸವದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಭಾವಚಿತ್ರವನ್ನು ಅಲಂಕ್ರತ ಪಲ್ಲಕ್ಕಿಯಲ್ಲಿಟ್ಟು, ಮಹಿಳೆಯರಿಂದ ಆರತಿ, ಕುಂಭಮೇಳ, ಸಕಲ ವಾದ್ಯ ವೃಂದಗಳೊಂದಿಗೆ ಬಸ್ ನಿಲ್ದಾನದ ಹತ್ತಿರವಿರುವ ಬಸವೇಶ್ವರ ವೃತ್ತದಿಂದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ವರೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತ ಬಸವಣ್ಣನವರಿಗೆ ಜಯಘೋಷ ಮಾಡಲಾಯಿತು.ನಂತರ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಹರಿವಾಣ ತುಂಬುವ ಕಾರ್ಯಕ್ರಮದಲ್ಲಿ ಗ್ರಾಮದ ರೈತರು ತಾವು ಬೆಳೆದ ಕಬ್ಬು, ಬಾಳೆ, ತೆಂಗು ಸೇರಿದಂತೆ ವಿವಿಧ ಹಣ್ಣು ಹಂಫಲಗಳ ರಾಶಿಗಳಿಂದ ಹರಿವಾಣ ತುಂಬಿಸಲಾಗುತ್ತದೆ ಕೆಳಗೆ ಬಿದ್ದ ಹರಿವಾನ ಯಾರಿಗೆ ದೊರೆಯುವುದೋ ಅವರ ಇಷ್ಠಾರ್ಥಗಳನ್ನು ಶ್ರೀ ಪ್ರಭುಲಿಂಗೇಶ್ವರ, ಬಸವಣ್ಣನವರು ನೆರವೇರಿಸುತ್ತಾರೆಂಬ ಪ್ರತೀತಿ ಇದೆ. ಇದರೊಂದಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅನುಭವ ಮಂಟಪವನ್ನು ಸ್ಥಾಪನೆ ಮಾಡುವ ಮೂಲಕ ಜಗತ್ತಿಗೆ ಮೊದಲ ಬಾರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪರಿಚಯಿಸಿದ ಶ್ರೇಯ ಬಸವಣ್ಣನವರಿಗೆ ಸಲ್ಲುತ್ತದೆ. ಅರಮನೆಯ ಮುಂದೆ ಮಹಾಮನೆಯನ್ನು ನಿರ್ಮಾಣ ಮಾಡುವ ಮೂಲಕ ಸಾಮಾಜಿಕ ಸಮಸ್ಯೆಗಳ ಕುರಿತು ಚರ್ಚಿಸಿ ವಚನಗಳ ಮೂಲಕ ಪರಿಹಾರವನ್ನು ಸೂಚಿಸುವ ಕಾರ್ಯವನ್ನು ಅಂದು ಶರಣ ಶರಣೆಯರು ಮಾಡಿದ್ದು ಇಂದು ಸರ್ಕಾರಕ್ಕೆ ಮಾದರಿಯಾಗಿದೆ ಎಂದು ಪ್ರಾಚಾರ್ಯ ಶ್ರೀಕಾಂತ ಕೆ.ಎಸ್ ಹೇಳಿದರು.ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವನ್ನು ಉದ್ಧೇಶಿಸಿ ಅವರು ಮಾತನಾಡಿದರು.ಕಾಲೇಜಿನ ಸರ್ವ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪಟ್ಟಣದ ರಾಜ್ಯ ಹೆದ್ದಾರಿ ಮೇಲಿರುವ ಬಸವೇಶ್ವರ ವೃತ್ತದಲ್ಲಿ, ಭಾರತ ರತ್ನ ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ, ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಮಾಲಹಳ್ಳಿ ಗ್ರಾಮದ ಬಸವೇಶ್ವರ ವೃತ್ತದಲ್ಲಿ, ಕಾಯಕ ಯೋಗಿ, ಕ್ರಾಂತಿ ಯೋಗಿ, ಯುಗಪುರುಷ, ವಚನ ಸಾಹಿತ್ಯದ ಮೂಲಕ ಸಮಸಮಾಜ ಕಟ್ಟಬಯಸಿದ ಜಗಜ್ಯೋತಿ, ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಶಾಲಾ ಕಾಲೇಜುಗಳು ಮತ್ತು ವಿವಿಧ ಸರ್ಕಾರಿ ಕಛೇರಿಗಳ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅತ್ಯಂತ ಅರ್ಥಪೂರ್ಣವಾಗಿ ಸಡಗರ ಸಂಭ್ರಮದಿಂದ ಆಚರಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವ ಜಯಂತಿ ನಿಮಿತ್ತ ವಿಶ್ವಗುರು ಬಸವಣ್ಣನವರು ಹುಟ್ಟೂರು ಬಸವನ ಬಾಗೇವಾಡಿಯಿಂದ ವಿಜಯಪುರ ಬಸವೇಶ್ವರ ವೃತ್ತದವರೆಗೆ ಬೆಂಗಳೂರಿನಲ್ಲಿ ನೆಲೆಸಿರುವ ವಿಜಯಪುರ ಮೂಲದ ಉದ್ಯಮಿ ಬಿ ಬಿ ಪಾಟೀಲ ನೇತೃತ್ವದಲ್ಲಿ ಬಸವಜ್ಯೋತಿ ಯಾತ್ರೆಗೆ ಮಂಗಳವಾರ ಮಧ್ಯರಾತ್ರಿ ಬಾಗೇವಾಡಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಬಸವೇಶ್ವರ ಜ್ಯೋತಿಯನ್ನು ಬಾಗೇವಾಡಿಯಿಂದ ಇಂಗಳೇಶ್ವರ, ಮಸಬಿನಾಳ ಮತ್ತು ಉಕುಮನಾಳ ಮಾರ್ಗವಾಗಿ ನಗರದ ಶಿವಗಿರಿವರೆಗೆ 42 ಕಿಮಿ ದೂರವನ್ನು ಬೆಂಗಳೂರಿನ ಜಗದೀಶ ದಮಾನಿಯಾ, ಸಂದೀಪ ಡಿಯೋ, ಮೋಹನ, ಪ್ರಸಾದ ಶೃಂಗೇರಿ ಮತ್ತು ಹುಬ್ಬಳ್ಳಿಯ ವಿವಿಟ್, ವಿಸಿಜಿ ಗ್ರೂಪ್ ನ ಪ್ರವೀಣ ಚೌರ್, ಶ್ರೀಕಾಂತ ಅಂಗಡಿ, ಸಂದೀಪ್ ಮಡಗೊಂಡ, ಸೋಮು ಮಠ, ವಿನಯ ಪಾಟೀಲ, ರಘು ಸಾಲೋಟಗಿ ಮತ್ತು ಕಲಬುರಗಿಯ ವೀರಣ್ಣ ಕೌಲಗಿ ಓಡುತ್ತ ಬಂದಿದ್ದಾರೆ. ಅಲ್ಲದೆ, ವಿಸಿಜಿ ಸದಸ್ಯರಾದ ಅಬಕಾರಿ ಇಲಾಖೆ ಅಧೀಕ್ಷಕ ಲಗಮಣ್ಣ ಸಲಗಾರೆ ಹಾಗು ಪುತ್ರ ಧನುಷ್ ಮತ್ತು ಅಬಕಾರಿ ಇಲಾಖೆ ಅಪ್ಪು ಭೈರಗೊಂಡ ಮತ್ತು ಅವರ ಪುತ್ರರಾದ ಅಮಿತ ಮತ್ತು…

Read More

ವಿಜಯಪುರದಲ್ಲಿ ನಡೆದ ಬಸವೇಶ್ವರ ಜಯಂತಿ ಆಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿಯೊಬ್ಬರು ದಯೆ ಗುಣ ಬೆಳೆಸಿಕೊಳ್ಳಬೇಕು ಎಂದು ಬಸವಣ್ಣನವರು ಬುದ್ಧ ಕರುಣೆಯ ಮಹತ್ವವನ್ನು ಸಾರಿದವರು. ಸಮಾಜದ ಅಂಕುಡೊಂಕುಗಳನ್ನು ತಿದ್ದಿದ, ಬಸವಣ್ಣನವರ ತತ್ವಾದರ್ಶಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಾಮಾಜಿಕ ಬದಲಾವಣೆ ತರಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಾತಿ ವ್ಯವಸ್ಥೆ ಹೊಡೆದೊಡಿಸಲು ಶರಣರು ವಚನಗಳ ಮೂಲಕ ಸಾರಿದ್ದಾರೆ. ೧೨ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವದ ತತ್ವಗಳನ್ನು ಜನಸಾಮಾನ್ಯರಿಗೆ ತಿಳಿಸಿ, ಸಮಸಮಾಜ ಕನಸು ಕಂಡ ಬಸವಣ್ಣನವರು, ಕಾಯಕವೇ ಕೈಲಾಸ ಎಂದು ಸಾರಿದರು. ಸಂಸ್ಕೃತಿ, ರೀತಿ-ನೀತಿಗಳ ಬಗ್ಗೆಯೂ ಅವರ ವಚನಗಳು ಬೆಳಕು ಚೆಲ್ಲುತ್ವವೆ. ಅವರ ಆದರ್ಶ ವಿಚಾರಗಳು, ವಚನಗಳ ಸಾರ ಅರಿತುಕೊಂಡು ನಾವು ಅಳವಡಿಸಿಕೊಳ್ಳಬೇಕು ಎಂದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿವಶರಣ ಬಸವಣ್ಣನವರು ೧೨ ನೇ ಶತಮಾನದಲ್ಲಿಯೇ ಜಾತಿರಹಿತ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದು ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ್ದಾರೆ ಎಂದು ಪ್ರಾಚಾರ್ಯೆ ಆರ್.ಎಂ.ಮಿರ್ದೆ ಹೇಳಿದರು.ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್‌ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದಲ್ಲಿಯೇ ಸಮಾನತೆಯ ಬೀಜವನ್ನು ಬಿತ್ತಿ ಹೆಮ್ಮರವಾಗಿ ಬೆಳೆಯುವಂತೆ ಮಾಡಿದ ಮಹಾನ್ ವ್ಯಕ್ತಿ ಬಸವಣ್ಣ. ವಚನ ಸಾಹಿತ್ಯದ ಮೂಲಕ ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಸತ್ಯ ಮತ್ತು ಕಾಯಕ ನಿಷ್ಠೆಯನ್ನು ಸಾರಿದರು. ಸಮಾನ ಮನಸ್ಕರನ್ನು ಒಂದುಗೂಡಿಸಿ ಮನುಕುಲವನ್ನು ಎಚ್ಚರಗೊಳ್ಳುವಂತೆ ಮಾಡಿದರು. ಅವರಿಂದ ಕೇವಲ ವಚನ ಸಾಹಿತ್ಯವಷ್ಠೆ ಅಲ್ಲ ಕನ್ನಡ ಸಾಹಿತ್ಯವೂ ಶ್ರೀಮಂತಗೊAಡಿದೆ ಎಂದರು.ಈ ವೇಳೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ದೊಡ್ಡಮನಿ ಮಾತನಾಡಿ ಹಿಂದೆ ಬಸವಣ್ಣ ಎಂದರೆ ಎಲ್ಲರೂ ಎತ್ತು ಎಂದು ಭಾವಿಸಿದ್ದರು. ಆದರೆ ಬಸವಣ್ಣ ಎಂದರೆ ಯಾರು ಎನ್ನುವುದನ್ನು ಪ.ಗು.ಹಳಕಟ್ಟಿ ಸಂಶೋಧನಾ ಕೇಂದ್ರ ವಚನ ಸಾಹಿತ್ಯವನ್ನು ಬೆಳಕಿಗೆ ತಂದಾಗಲೇ ಗೊತ್ತಾಗಿದ್ದು ಅವರೊಬ್ಬ…

Read More