Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ ಮತ್ತು ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸಲು ಶ್ರಮಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಹಾಗೂ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.೨೦೨೬-೨೭ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಈ ಕೆಳಗಿನ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ನೋಂದಾಯಿತ ಸಾಂಸ್ಕೃತಿಕ ಸಂಘ-ಸಂಸ್ಥೆಗಳಿಗೆ. ವಾದ್ಯ ಪರಿಕರ ನೀಡಲಾಗುವುದು. ಅರ್ಹ ಕಲಾವಿದರಿಗೆ ಧನಸಹಾಯ., ಚಿತ್ರಕಲೆ ಮತ್ತು ಶಿಲ್ಪ ಕಲಾಕೃತಿಗಳ ಪ್ರದರ್ಶನ ಆಯೋಜಿಸಲು ಸಹಾಯಧನ ನೀಡಲಾವುವುದು.ಅರ್ಜಿ ಸಲ್ಲಿಕೆಗೆ ಆ.೨೦ ಕೊನೆಯ ದಿನವಾಗಿದೆ.ಆನ್‌ಲೈನ್ ಮೂಲಕ Sevಚಿsiಟಿಜhu.ಏಚಿಡಿಟಿಚಿಣಚಿಞಚಿ.gov.iಟಿ ಪೋರ್ಟಲ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ಅಧಿಕೃತ ವೆಬ್‌ಸೈಟ್ ತಿತಿತಿ.ಏಚಿಟಿಟಿಚಿಜಚಿsiಡಿi.ಏಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ನೀಡಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ ೧೦:೦೦ ರಿಂದ ಸಂಜೆ ೬:೦೦ ರವರೆಗೆ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು: ಕೇಂದ್ರ ಕಚೇರಿ (ಬೆಂಗಳೂರು): ೦೮೦-೨೪೪೧೦೫೭೪ / ೦೮೦-೨೨೨೧೩೫೩೦ /೯೯೮೬೮೩೭೦೩೭ / ೦೮೦-೨೨೨೪೧೩೨೫ ವಿಜಯಪುರ ಜಿಲ್ಲಾ…

Read More

ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಬಿರುಗಾಳಿ | ಕ್ಷೇತ್ರದ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಜೀನಾಮೆ ನೀಡಲು ಸಜ್ಜು ಉದಯರಶ್ಮಿ ದಿನಪತ್ರಿಕೆ ಇಂಡಿ: ಮೂರು ಬಾರಿ ಇಂಡಿ ಮತಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಯಶವಂತರಾಯಗೌಡ ಪಾಟೀಲ್ ಅವರಿಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿರುವುದು ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಭಾರಿ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ.ಪಕ್ಷದ ಹೈಕಮಾಂಡ್ ನಿರ್ಧಾರದಿಂದ ತೀವ್ರ ಬೇಸರಗೊಂಡಿರುವ ಶಾಸಕ ಯಶವಂತರಾಯಗೌಡರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕ್ಷೇತ್ರದ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸರಣಿ ರಾಜೀನಾಮೆ ನೀಡಲು ಸಜ್ಜಾಗಿದ್ದಾರೆ.ಸ್ವಾತಂತ್ರ‍್ಯದ ನಂತರವೂ ಸಿಗದ ಪ್ರಾತಿನಿಧ್ಯ: ವಿಜಯಪುರ ಜಿಲ್ಲೆಯ ಪ್ರಮುಖ ಗಡಿಭಾಗದ ಕ್ಷೇತ್ರವಾದ ಇಂಡಿಗೆ ಸ್ವಾತಂತ್ರ‍್ಯ ಬಂದ ದಿನದಿಂದ ಇದುವರೆಗೂ ಒಂದೇ ಒಂದು ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದು ಇಲ್ಲಿನ ಜನರ ದಶಕಗಳ ಕಾಲದ ನೋವು. ಸತತವಾಗಿ ಪಕ್ಷವನ್ನು ಗೆಲ್ಲಿಸಿಕೊಂಡು ಬರುತ್ತಿದ್ದರೂ, ಇಂಡಿ ತಾಲೂಕನ್ನು ಸಚಿವ ಸಂಪುಟದಿಂದ ದೂರವಿಟ್ಟಿರುವುದು ಗಾಯದ ಮೇಲೆ ಉಪ್ಪು ಸವರಿದಂತಾಗಿದೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮಹಾರಾಷ್ಟ್ರ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಇಂಡಿ ತಾಲೂಕು ಆಡಳಿತವು ನದಿ ತೀರದ ಗ್ರಾಮಗಳಲ್ಲಿ ಘೋಷಿಸಿದೆ.ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಇಂಡಿ ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ ಅವರು ಸ್ವತಃ ಭೀಮಾ ನದಿ ಪಾತ್ರದ ಪ್ರವಾಹ ಪೀಡಿತ ಸೂಕ್ಷ್ಮ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ ಅವರು ತಾಲೂಕಿನ ಪ್ರಮುಖ ನದಿ ತೀರದ ಗ್ರಾಮಗಳಾದ ಬರಗುಡಿ, ಪಡನೂರ, ಶಿರಗೂರ, ಗುಬ್ಯಾಡ ಮತ್ತು ಅಗರಖೇಡ ಸೇರಿದಂತೆ ವಿವಿಧ ಪ್ರದೇಶಗಳಿಗೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದರು.ನದಿಯ ಒಳಹರಿವು ಹಾಗೂ ಗ್ರಾಮಗಳ ಸುರಕ್ಷತೆಯ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು ಎಲ್ಲರೂ ಅತ್ಯಂತ ಜಾಗರೂಕರಾಗಿರಬೇಕು ಎಂದು ವಿನಂತಿಸಿಕೊಂಡರು.ನೀರಿನ ಸೆಳೆತ ಹೆಚ್ಚಿರುವುದರಿಂದ ಸಾರ್ವಜನಿಕರು, ಯುವಕರು ಅಥವಾ ಮಹಿಳೆಯರು ಯಾವುದೇ ಕಾರಣಕ್ಕೂ ಈಜಲು, ಬಟ್ಟೆ ತೊಳೆಯಲು…

Read More

ಸ್ಟೇಟಸ್ ಕೋ ಆದೇಶದ ನಡುವೆಯೂ ರಸ್ತೆ ಕಾಮಗಾರಿ | ಕ್ರಮಕ್ಕೆ ಒತ್ತಾಯಿಸಿ ನ್ಯಾಯವಾದಿ ಅಮರಣ್ಣವರ ದೂರು ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಿವಿಲ್ ನ್ಯಾಯಾಲಯವು ದಾವಾ ಆಸ್ತಿಗೆ ಸಂಬಂಧಿಸಿದಂತೆ ಜು೨೮ ರಂದೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದ್ದರೂ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ ಕಾಮಗಾರಿ ಮಾಡುತ್ತಿರುವವರ ವಿರುದ್ಧ ಜಿಲ್ಲಾಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನ್ಯಾಯವಾದಿ ಎಸ್.ಆರ್.ಅಮರಣ್ಣವರ ದೂರಿದರು.ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಲೂಕಿನ ದೇವೂರು ಗ್ರಾಮ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆದಿದ್ದು, ಇಲ್ಲಿ ನನ್ನ ಕುಟುಂಬದ ಜಮೀನು ಇದೆ. ಸರ್ಕಾರದಿಂದ ಯಾವುದೇ ಪರಿಹಾರ ಹಣವಾಗಲೀ, ನೊಟೀಸಾಗಲಿ ಬಂದಿಲ್ಲ. ಈ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಮಧ್ಯಂತರ ತಡೆಯಾಜ್ಞೆ ಕೋರಲಾಗಿ ನ್ಯಾಯಾಲಯ ಸ್ಟೆಟಸ್ ಕೋ ಆದೇಶವನ್ನು ನೀಡಿದೆ. ಈ ಆದೇಶವನ್ನು ನಾನು ನೇರವಾಗಿ ಸಂಬಂಧಿಸಿದ ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ದಾಖಲೆ ಸಮೇತ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಗುತ್ತಿಗೆದಾರರು ನ್ಯಾಯಾಲಯದ ಆದೇಶವನ್ನು ಮೀರಿ ಕಾಮಗಾರಿ ಮಾಡುತ್ತಿದ್ದು ಇದರಿಂದ ನಮಗೆ ತೊಂದರೆ ಆಗುತ್ತಿದೆ.ಕಾಮಗಾರಿ…

Read More

ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಯಾವದೇ ಒಂದು ಸಹಕಾರಿ ಬ್ಯಾಂಕ್ ಬೆಳವಣಿಗೆಯತ್ತ ಸಾಗಬೇಕಾದರೆ ಅದು ಸಹಕಾರ ತತ್ವವನ್ನು ಅನುಸರಿಸುತ್ತಾ ಸಾಗಿದರೆ ಮಾತ್ರ ಬೆಳವಣಿಗೆ ಹೊಂದಲಿದೆ ಅದರೊಂದಿಗೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಅವರ ಸೇವೆಯೂ ಪ್ರಾಮಾಣಿಕವಾಗಿರುವದು ಮುಖ್ಯ ಕಾರಣವಾಗಿರುತ್ತೆಂದು ಗುಂಡಕನಾಳ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.ಸೋಮವಾರ ಸ್ಥಳೀಯ ಶ್ರೀ ತಾಳಿಕೋಟೆ ಸಹಕಾರಿ ಬ್ಯಾಂಕ್ ನಿ.ದ ೨೦೨೫/೨೬ ನೇ ಸಾಲಿನ ೬೭ ನೇ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ತಾಳಿಕೋಟೆಯ ಈ ಬ್ಯಾಂಕು ಕೋಟಿ ಲಾಭ ಗಳಿಸಿರುವದನ್ನು ನೋಡಿದರೆ ಲಾಭದಾಯಕ ಬ್ಯಾಂಕ್ ಎಂಬುದನ್ನು ಎತ್ತಿ ತೋರಿಸುತ್ತದೆ. ಸುಮಾರು ೩ ಶಾಖೆಗಳನ್ನು ಪ್ರಾರಂಭಿಸಿದ ಈ ಬ್ಯಾಂಕು ಗ್ರಾಹಕರಿಗೆ ಹಾಗೂ ಶೇರುದಾರರಿಗೆ ಅನುಕೂಲ ಕಲ್ಪಿಸಿರುವದು ಶ್ಲಾಘನೀಯ ಎಂದು ಶ್ರೀಗಳು ನುಡಿದರು.ಇನ್ನೋರ್ವ ಬಿಡಿಸಿಸಿ ಬ್ಯಾಂಕ್‌ನ ನಿರ್ಧೇಶಕ ಬಿ.ಎಸ್. ಪಾಟೀಲ(ಯಾಳಗಿ) ಅವರು ಸಹಕಾರಿ ತತ್ವದ ಕೆಲವು ನಿಯಮಗಳನ್ನು ತಿಳಿಹೇಳಿದರಲ್ಲದೇ ಈಗಾಗಲೇ ತಾಳಿಕೋಟೆಯ ಸಹಕಾರಿ ಬ್ಯಾಂಕ್ ವತಿಯಿಂದ ತೀರಿ ಹೋದಂತಹ ಶೇರುದಾರರಿಗೆ ಸದಸ್ಯರ ಕುಟುಂಬಕ್ಕೆ ೨೦೦೦ ರೂ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಕನ್ನಡಿಗರ ವೇದಿಕೆ ವತಿಯಿಂದ ಆ.೨ ರಂದು ನಡೆದ ಪೊಲೀಸ್ ಕಾನ್ಸ್ಟೇಬಲ್ (ಸಿಇಟಿ) ಪರೀಕ್ಷೆಯಲ್ಲಿನ ಪರೀಕ್ಷಾ ನಿರ್ವಹಣಾ ಲೋಪಗಳ ಕುರಿತು ತನಿಖೆ ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಆನಂದ ಅವರಿಗೆ ಮನವಿ ಸಲ್ಲಿಸಿದರುಈ ವೇಳೆ ಕರ್ನಾಟಕ ರಾಜ್ಯ ಕನ್ನಡಿಗರ ವೇದಿಕೆ ರಾಜ್ಯಾಧ್ಯಕ್ಷ ಲಕ್ಷ್ಮಣ ಕಂಬಾಗಿ ಮಾತನಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ರಾಜ್ಯಾದ್ಯಂತ ನಡೆಸಲಾದ ಪೊಲೀಸ್ ಕಾನ್ಸೆ ಬಲ್ (ಸಿಇಟಿ) ಪರೀಕ್ಷೆಯ ಸಂದರ್ಭದಲ್ಲಿ ವಿಜಯಪುರ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ಬಾರಿಗೆ ಪ್ರಶ್ನೆಪತ್ರಿಕೆಯ ಕ್ರಮ ಸಂಖ್ಯೆ ಮತ್ತು[ ಓಎಂಆರ್ ] ಉತ್ತರ ಪತ್ರಿಕೆಯ ಸಂಖ್ಯೆಯಲ್ಲಿ ವ್ಯತ್ಯಾಸವಿರುವ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಇಂತಹ ಪ್ರಮುಖ ಬದಲಾವಣೆಯ ಕುರಿತು ಅಭ್ಯರ್ಥಿಗಳಿಗೆ ಮುಂಚಿತವಾಗಿ ಸ್ಪಷ್ಟ ಮಾಹಿತಿ ನೀಡುವುದು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾದ ಮಾರ್ಗದರ್ಶನ ನೀಡುವುದು ಸಂಬಂಧಪಟ್ಟ ಅಧಿಕಾರಿಗಳ ಕರ್ತವ್ಯವಾಗಿತ್ತು.ಅದರ, ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನದ ಕೊರತೆಯಿಂದಾಗಿ ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಗೊಂದಲ ಹಾಗೂ ಆತಂಕಕ್ಕೆ…

Read More

ಅಗತ್ಯ ಪೂರ್ವಸಿದ್ಧತೆಗಳಿಗೆ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ. ಕೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಕಾಸಶೀಲ ಹಾಗೂ ಸೌಹಾರ್ದಶೀಲ ಕರ್ನಾಟಕ ನಿರ್ಮಾಣದ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್ ಗಳಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಮುಂದಾಗಿದ್ದು, ಜಿಲ್ಲೆಯ ಎಲ್ಲ ಅಧಿಕಾರಿಗಳು ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಭಾರತ್ ಜೋಡೋ ಯುವ ಸಂಘಗಳ ರಚನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳು ಹಾಗೂ ನಗರ ವಾರ್ಡ್ ಗಳಲ್ಲಿ ಯುವಕರನ್ನು ಸಂಘಟಿಸುವ ಮೂಲಕ ನಾಯಕತ್ವದ ಗುಣಗಳು, ಸಾಮಾಜಿಕ ಹೊಣೆಗಾರಿಕೆ ಹಾಗೂ ಜವಾಬ್ದಾರಿಯುತ ನಾಗರಿಕ ಪ್ರಜ್ಞೆಯನ್ನು ಬೆಳೆಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.ರಾಜ್ಯಾದ್ಯಂತ ಸುಮಾರು ೧೦ ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಿ,…

Read More

ತಿಕೋಟದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಗೊಂದಲಕ್ಕೆ ಖಂಡನೆ | ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ತಿಕೋಟದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಗೊಂದಲವನ್ನು ಖಂಡಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಗರದ ಗಾಂಧಿ ವೃತ್ತದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.ಈ ವೇಳೆ ಎಬಿವಿಪಿಯ ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷಾ ನಾಯಕ ಮಾತನಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅತ್ಯಂತ ಸೂಕ್ಮವಾಗಿ, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಿದ್ದೇವೆ ಎಂದು ಹೇಳುತ್ತಾರೆ. ಆದರೆ ತಿಕೋಟಾ ಪರೀಕ್ಷಾ ಕೇಂದ್ರದಲ್ಲಿ ಅರ್ಧ ಗಂಟೆಗೂ ಅಧಿಕ ಕಾಲ ತಡವಾಗಿ ಪ್ರಶ್ನೆ ಪತ್ರಿಕೆ ಕೊಟ್ಟಿರುದ್ದಕ್ಕೆ ಕಾರಣ ಏನು, ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಗಳು ಹೇಳಿದಂತೆ ಪ್ರಶ್ನೆ ಪತ್ರಿಕೆ ಗೊಂದಲವನ್ನು ಸರಿ ಪಡಿಸಲು ಸಮಯ ತಡವಾಗಿದೆ ಅದಕ್ಕೆ ನಾವು ಕೆಇಎ ಜೊತೆ ಮಾತನಾಡಿ ತಡವಾದ ಅಭ್ಯರ್ಥಿಗಳಿಗೆ ಸಮಯ ನೀಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ, ಅಂದರೆ ಗೊಂದಲವಾಗಿರುವುದು ಸತ್ಯದ ವಿಷಯ, ಈ ವಿಷಯವನ್ನು ಮುಚ್ಚಿ ಹಾಕಲು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಗ್ರಾಮಸ್ಥರು ಪ್ರತಿವರ್ಷ ಕಬಡ್ಡಿ ಪಂದ್ಯಾವಳಿ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಹಜರತ್ ಮತಾಬಷಹೀದ ಜಾತ್ರಾ ಮಹೋತ್ಸವದ ಅಂಗವಾಗಿ ಇತ್ತೀಚಿಗೆ ಜರುಗಿದ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.ಗ್ರಾಮದ ಸಮುದಾಯಗಳು ಅತ್ಯಂತ ಅನ್ಯೋನ್ಯತೆಯಿಂದ ಸೇರಿ ಮೂರು ದಿನಗಳ ಕಾಲ ಜಾತ್ರೆಯನ್ನು ಮಾಡುತ್ತಿರುವುದು ಸರ್ವರಿಗೂ ಮಾದರಿ ಎಂದರು.ಸ್ಥಳೀಯ ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಭೂ ನ್ಯಾಯ ಮಂಡಳಿಯ ಸದಸ್ಯ ಸಾಯಬಣ್ಣ ಸೊನ್ನಳ್ಳಿ, ಶರಣಗೌಡ ಪಾಟೀಲ, ಗುರುರಾಜ ಆಕಳವಾಡಿ, ಪ್ರೌಢಶಾಲಾ ಶಿಕ್ಷಕ ಎ.ಎಸ್.ವಾಲೀಕಾರ ಮಾತನಾಡಿದರು.ಪಾರಿತೋಷಕ ಪ್ರಾಯೋಜಕರಾದ ಬಸನಗೌಡ ಪಾಟೀಲ, ನಿಂಗನಗೌಡ ಪ್ರಭುಗೋಳ, ಮೈಬೂಬ ಮಕಾನದಾರ, ಡಿಸಿಸಿ ಬ್ಯಾಂಕಿನ ಮಾಜಿ ನಿರ್ದೇಶಕ ತಿಪ್ಪಣ್ಣ ಮೂಲಿಮನಿ, ಸುರೇಶ ಗುದ್ದಿ, ಎಸ್.ಬಿ.ಬಿರಾದಾರ, ಶರಣಪ್ಪ ತಳವಾರ, ಡಾ.ಬಿ.ಎಸ್.ನಾಯ್ಕೋಡಿ, ಕಲ್ಲಪ್ಪ ರೋಡಗಿ, ಮಲಕು ಸುರಗಿಹಳ್ಳಿ, ದಾವಲಸಾಬ ಗಂಗೂರ, ರಮೇಶ ಹಿರೇಮಠ, ಬಾಪುಗೌಡ ಪಾಟೀಲ, ನಾನಾಗೌಡ ಬಿರಾದಾರ, ಹಸನ ಇನಾಮದಾರ, ಜಾಕೀರ ಮುಜಾವರ, ಈರಣ್ಣ ನಾಯ್ಕೋಡಿ, ಮನೋಹರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ತಿಕೋಟಾ ಪರೀಕ್ಷಾ ಕೇಂದ್ರದಲ್ಲಿ ನಡೆದ ಪೋಲಿಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ, ಅತ್ಯಂತ ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ನಿರ್ವಹಿಸಿದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ದ್ರಾವಿಡ ವಿದ್ಯಾರ್ಥಿ ಪರಿಷತ್ ಮುಕ್ತಕಂಠದಿಂದ ಶ್ಲಾಘಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಸಂಘಟನೆಯ ನಿಯೋಗವು, ಯಶಸ್ವಿ ಪರೀಕ್ಷಾ ನಿರ್ವಹಣೆಗಾಗಿ ಖುದ್ದಾಗಿ ಸ್ಥಳದಲ್ಲಿದ್ದು ತತ್ತಕ್ಷಣದ ಕ್ರಮ ವಹಿಸಿದ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿಗಳಿಗೆ ಪುಸ್ತಕ ಹಾಗೂ ಧನ್ಯವಾದ ಪ್ರಶಂಸನೀಯ ಪತ್ರ ನೀಡಿ ಸನ್ಮಾನಿಸಲಾಯಿತು.ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳ ಹಿತರಕ್ಷಣೆಗೆ ಜಿಲ್ಲಾಡಳಿತ ಭದ್ರವಾಗಿ ನಿಂತಿರುವುದು ಶ್ಲಾಘನೀಯ.ಸಮಾಜಘಾತುಕ ಶಕ್ತಿಗಳು ಅಥವಾ ವದಂತಿ ಹರಡುವವರು ಎಷ್ಟೇ ಗೊಂದಲ ಸೃಷ್ಟಿಸಲು ಯತ್ನಿಸಿದರೂ ಜಿಲ್ಲಾಡಳಿತವು ಧೃತಿಗೆಡಬಾರದು ಎಂದು ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡರು ಹೇಳಿದರು. ಕಟ್ಟುನಿಟ್ಟಿನ ಭದ್ರತೆ ಮತ್ತು ನಿಯಮಾವಳಿಗಳಂತೆ ಪರೀಕ್ಷೆ ನಡೆಸಿ ಸತ್ಯಾಸತ್ಯತೆಯನ್ನು ಸಾರ್ವಜನಿಕರಿಗೆ ಸ್ಪಷ್ಟಪಡಿಸುವ ಮೂಲಕ ಜಿಲ್ಲಾಡಳಿತವು ವಿದ್ಯಾರ್ಥಿಗಳಲ್ಲಿ ಭರವಸೆ ಮೂಡಿಸಿದೆ. ವಿದ್ಯಾರ್ಥಿ ಸಮೂಹವು ಯಾವಾಗಲೂ ಪಾರದರ್ಶಕ ಆಡಳಿತದ ಪರವಾಗಿದ್ದು,…

Read More