Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಚಡಚಣ: ಝಳಕಿ ಗ್ರಾಮದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸನ್೨೦೨೫-೨೬ನೇ ಸಾಲಿನ ಸಂಸ್ಕೃತಿಕ ಕ್ರೀಡೆ, ರಾ. ಸೇ. ಯೋ, ರೇಡ್ ಕ್ರಾಸ್, ಸ್ಕೌಟ್ & ಗೈಡ್ಸ್ ಹಾಗೂ ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಬಿ.ಎ., ಬಿ.ಕಾಮ್., ಬಿ.ಎಸ್.ಸಿ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಉದ್ಘಾಟನೆಯನ್ನು ಶಾಸಕ ಯಶವಂತರಾಯಗೌಡ ಪಾಟೀಲ್ ಜ್ಯೋತಿಬೆಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ವಿದ್ಯಾರ್ಥಿಗಳಿಗೆ ಬೇಕಾಗುವ ಶಿಕ್ಷಣ ಕೊಡೊದು ಶಿಕ್ಷಕರ ಕರ್ತವ್ಯ, ಅದನ್ನ ಉಪಯೋಗ ಪಡಿಸಿಕೊಂಡು ಜೀವನದಲ್ಲಿ ಪ್ರಗತಿ ಸಾಧಿಸೋದು ವಿದ್ಯಾರ್ಥಿಗಳ ಆದ್ಯಕರ್ತವ್ಯ ಎಂದರು, ನಮ್ಮ ಹಿರಿಯರು ಶಾಲಾ, ಕಾಲೇಜುಗಳಿಗೆ ದೇವಸ್ಥಾನ ಎಂದು ಶಿಕ್ಷಕರಿಗೆ ದೇವರು ಎಂದು ವಿದ್ಯಾರ್ಥಿಗಳಿಗೆ ಪೂಜಾರಿ ಸ್ಥಾನ ಕೊಟ್ಟಿರೋದು ಸುಮ್ಮನೆ ಅಲ್ಲ, ಶಾಲೆ ಮಠ ಮಾನ್ಯಗಳಿಗಿಂತ ದೊಡ್ಡದು, ಅದಕ್ಕಾಗಿ ಇವತ್ತು ಜಿಲ್ಲೆಯಲ್ಲಿ ಇರುವಂತಹ ಉನ್ನತ ಮಟ್ಟದ ಶಾಲಾ ಕಾಲೇಜುಗಳು ನಮ್ಮ ಇಂಡಿ ತಾಲೂಕಿನಲ್ಲಿ ಇರೋದು ನಮ್ಮ ಪುಣ್ಯ ಇದಕ್ಕೆಲ್ಲ ಕಾರಣ ನಮ್ಮ ಸರ್ಕಾರದ…
ಸಿಟಿ ಸರ್ವೇ ವ್ಯಾಪ್ತಿಯಲ್ಲಿ ಬರದಿದ್ದರೂ ಪ.ಪಂ.ನಿಂದ ಶೇ.40 ಉತಾರೆ ಹಂಚಿಕೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಇತ್ತೀಚಿಗೆ ಪಟ್ಟಣದ ಹೊರವಲಯದಲ್ಲಿ ನಿರ್ಮಾಣವಾಗಿರುವ ಡೈಮಂಡ ಪಾರ್ಕ ಸಂಪೂರ್ಣ ಕಾನೂನ ಬಾಹೀರವಾಗಿ ನಿರ್ಮಿಸಲಾಗಿದೆ ಎಂದು ಸೋಮಶೇಖರ ಚನ್ನಪ್ಪ ಪಟ್ಟಣಶೆಟ್ಟಿ ಆರೋಪಿಸಿದ್ದಾರೆ.ಪಟ್ಟಣವು ಗ್ರಾ.ಪಂ.ನಿಂದ ಪ.ಪಂ.ಗೆ ಮೇಲ್ದಜೆಗೇರಿ ಸುಮಾರು 9 ವರ್ಷ ಗತಿಸಿವೆ. ಆದರೆ, ಗ್ರಾ.ಪಂ.ನಿಂದ ಪ.ಪಂ.ಗೆ ಮೇಲ್ದಜೆಗೇರುವ ಸಮಯದಲ್ಲಿ ಹೊರಡಿಸಿದ ರಾಜ್ಯಪತ್ರದಲ್ಲಿ ನಮೂದಿಸಿದ ಸರ್ವೇ ನಂಬರಗಳ ಪೈಕಿ ಸಧ್ಯ ನಿರ್ಮಿಸಲಾಗಿರುವ ಡೈಮಂಡ ಪಾರ್ಕನ ಸ.ನಂ. 244/2, 245/1, 245/2, 246/* ಗಳು ಈ ಜಮೀನವು ಸಿಟಿ ಸರ್ವೇ ವ್ಯಾಪ್ತಿಯಲ್ಲಿ ಬರುವುದಿಲ್ಲ. ಆದರೂ ಈ ಸ.ನಂ.ಗಳನ್ನು ಭೂಪರಿವರ್ತನೆ ಮಾಡಿ, ಸುಮಾರು 40 ಎಕರೆ 38 ಗುಂಟೆ ಜಾಗೆಯಲ್ಲಿ ವಿವಿಧ ಅಳತೆಯ 759 ಪ್ಲಾಟುಗಳನ್ನು ಪೈಕಿ ಶೇ.40 ಪ್ಲಾಟುಗಳ ಉತಾರೆಯನ್ನು ಪ.ಪಂ.ಯಿಂದ ಪೂರೈಸಲಾಗಿದೆ ಎಂದು ಆರೋಪಿಸಿದ ಅವರು, ಈ ಪಾರ್ಕ ಎಲ್ಲ ಕಾನೂನುಗಳನ್ನು ಗಾಳಿಗೆ ತೂರಿ ಪಾರ್ಕನ್ನು ನಿರ್ಮಾಣ ಮಾಡಿದ್ದರೂ ಕೂಡ ಪ.ಪಂ.ನವರು ಇದನ್ನೆಲ್ಲ ಗಮನಿಸದೆ ಹೇಗೆ ಉತಾರೆಗಳನ್ನು ಪೂರೈಸಿದ್ದಾರೆ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಈಗಿನ ಜೀವನ ಕಾದ ಹೆಂಚಿನ ಮೇಲೆ ನಿಂತಂತಿದೆ. ಪ್ರತಿದಿನ ಒತ್ತಡ ಆತಂಕ ಇದ್ದೇ ಇರುತ್ತದೆ. ಹೀಗಾಗಿ ನಾವೆಲ್ಲ ಬೇರೆ ಬೇರೆ ಮಾನಸಿಕ ಕಾಯಿಲೆಗಳಿಗೆ ಈಡಾಗುವುದು ಸಾಮಾನ್ಯ ಎನ್ನುವಂತಾಗಿದೆ. ಇಂದು ಲಕ್ಷಾಂತರ ಜನರು ಖಿನ್ನತೆ ಮತ್ತು ಆತಂಕದಿಂದ ಬಳಲುತ್ತಿದ್ದಾರೆ. ಅದರ ಕಾರಣಗಳು ಹಲವು ಆಗಿರಬಹುದು. ಪ್ರೀತಿಪಾತ್ರರ ಹಠಾತ್ ಕಳೆದುಕೊಳ್ಳುವಿಕೆ. ಜೀವನಶೈಲಿಯ ಬದಲಾವಣೆಗಳು ದುಃಖ, ಮಾನಸಿಕ, ದೈಹಿಕ ಅಥವಾ ಲೈಂಗಿಕ ಕಿರುಕುಳ, ಆನುವಂಶಿಕ ಸಂಬಂಧದ ಸಮಸ್ಯೆಗಳು, ಒತ್ತಡ ಅನಿಯಮಿತ ಜೀವನ ವಿಧಾನಗಳು ಪ್ರಮುಖ ಕಾರಣಗಳಾಗಿವೆ. ಖಿನ್ನತೆಯು ಪ್ರಪಂಚದಾದ್ಯಂತ ಒಂದು ಸಾಮಾನ್ಯ ಕಾಯಿಲೆಯಾಗಿದ್ದು, ಸರಿಸುಮಾರು ೨೮೦ ಮಿಲಿಯನ್ ಜನರು ಖಿನ್ನತೆಯನ್ನು ಹೊಂದಿದ್ದಾರೆ ಎಂದರೆ ನಂಬಲೇಬೇಕು.ಖಿನ್ನತೆ ಎಂದರೆ..?ಖಿನ್ನತೆಯು ಸಾಮಾನ್ಯ ಮನಸ್ಥಿತಿಯ ಏರಿಳಿತಗಳಿಗಿಂತ ಭಿನ್ನವಾಗಿದೆ. ಖಿನ್ನತೆಯು ವೈದ್ಯಕೀಯ ಸ್ಥಿತಿಯಾಗಿದೆ. ಇದು ಸೋಮಾರಿತನ. ಸಾಮಾನ್ಯ ದುಃಖ ಅಥವಾ ನಿರುತ್ಸಾಹಕ್ಕೆ ತಾತ್ಕಾಲಿಕ ಪ್ರತಿಕ್ರಿಯೆಯಲ್ಲ. ಇದು ಗಂಭೀರ ಆರೋಗ್ಯ ಸ್ಥಿತಿಯಾಗಬಹುದು. ಇದು ಬಾಧಿತ ವ್ಯಕ್ತಿಯನ್ನು ಬಹಳವಾಗಿ ನರಳುವಂತೆ ಮಾಡುತ್ತದೆ. ವ್ಯಸನ ಹೆಚ್ಚಿನ ಸಮಯದವರೆಗೆ…
ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದ ವಿಷಯದಲ್ಲಿ ಬಿಜೆಪಿಯ ನಡವಳಿಕೆ “ಬೂಟಾಟಿಕೆ” | ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಮೈಸೂರು: ಬಿಜೆಪಿಯ “ಧರ್ಮಸ್ಥಳ ಚಲೋ” ರ್‍ಯಾಲಿ “ರಾಜಕೀಯ ಲಾಭಕ್ಕಾಗಿ” ಎಂದು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದರಿಂದ ವಿರೋಧ ಪಕ್ಷಕ್ಕೆ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಸೋಮವಾರ ಹೇಳಿದ್ದಾರೆ.ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದ ವಿಷಯದಲ್ಲಿ ಬಿಜೆಪಿಯ ನಡವಳಿಕೆ “ಬೂಟಾಟಿಕೆ” ಎಂದು ಕರೆದ ಮುಖ್ಯಮಂತ್ರಿ, ಅವರು ಮಾಡುತ್ತಿರುವ “ಬೂಟಾಟಿಕೆ”ಯಿಂದ ಹಿಂದೂಗಳು ತಮ್ಮೊಂದಿಗೆ ಬರುತ್ತಾರೆ ಎಂದು ಭಾವಿಸಿದ್ದಾರೆ. ಆದರೆ ಅದು ತಪ್ಪು ಎಂದು ತಿರುಗೇಟು ನೀಡಿದರು.ಧರ್ಮಸ್ಥಳದ ವಿರುದ್ಧ ಪಿತೂರಿ ಮತ್ತು ಅಪಪ್ರಚಾರ ಖಂಡಿಸಿ ಬಿಜೆಪಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು…
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಎಲ್.ಎನ್. ಮುಕುಂದರಾಜ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮನುಷ್ಯ ಜಾತಿ ತಾನೊಂದೇ ವಲಂ ಎಂದು ಹೇಳಿ ಜಾತ್ಯತೀತ ತತ್ವವನ್ನು ಸಾರಿದ ಪಂಪ ಮತ್ತು ಕುಲ ಕುಲವೆಂದು ಹೊಡೆದಾಡದಿರಿ ಎಂದು ಸಾರಿದ ಕನಕದಾಸರ ಕೀರ್ತನೆಗಳು ಕನ್ನಡ ಸಾಹಿತ್ಯದ ಉನ್ನತ ಪರಂಪರೆಯ ಕುರುಹುಗಳು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಎಲ್.ಎನ್. ಮುಕುಂದರಾಜ ಅವರು ಹೇಳಿದರು.ನಗರದ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ಮತ್ತು ಸ್ನಾತಕೋತ್ತರ ಕನ್ನಡ ಅಧ್ಯಯನ ವಿಭಾಗಗಳ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ‘ಕನ್ನಡ ಸಾಹಿತ್ಯ ಪರಂಪರೆ – ಅವಲೋಕನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಭಾರತದ ಯಾವುದೇ ಭಾಷೆಗೆ ಬರದಷ್ಟು ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಭಾಷೆಗೆ ಬಂದಿವೆ. ಇದಕ್ಕೆ ಮುಕುಟಪ್ರಾಯವೆಂಬಂತೆ ಇತ್ತೀಚೆಗೆ ಭಾನು ಮುಸ್ತಾಕ್ ಅವರ ‘ಹೃದಯದ ಹಣತೆ’ ಕೃತಿಗೆ ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಬಂದಿರುವುದು ಕನ್ನಡ ಸಾಹಿತ್ಯ ಪರಂಪರೆಯ ಶ್ರೀಮಂತಿಕೆಯ ದ್ಯೋತಕವಾಗಿದೆ ಎಂದು ವಿಶ್ಲೇಷಿಸಿದರು.ಪತ್ರಕರ್ತ ಡಾ.ಗಣೇಶ್ ಅಮೀನಗಡ ಮಾತನಾಡಿ, ಹೆಣ್ಣು ಮಕ್ಕಳು ಇನ್‌ಸ್ಟಾಗ್ರಾಂ ಪ್ರೀತಿಗೆ ಮರುಳಾಗದೆ ಎಚ್ಚರಿಕೆಯಿಂದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿ ವರ್ಷದಂತೆ ಸೆ.೩೦ರಿಂದ ಅಕ್ಟೋಬರ್ ೦೪ರವರೆಗೆ ರಾಜ್ಯದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳು ಭೇಟಿ ನೀಡಲು ಸÀಮಾಜ ಕಲ್ಯಾಣ ಇಲಾಖೆ ವತಿಯಿಂದ ಬಸ್ಸು ಮತ್ತು ರೈಲಿನ ಮೂಲಕ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ರಾಜ್ಯದಿಂದ ನಾಗಪುರಕ್ಕೆ ಭೇಟಿ ನೀಡಲಿರುವ ಅನುಯಾಯಿಗಳು ಸಮಾಜ ಕಲ್ಯಾಣ ಇಲಾಖೆಯ https://swd.karnataka.gov.inವೆಬ್‌ಸೈಟ್ ಮೂಲಕ ಸೆ.೯ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ವಿಜಯಪುರ ಜಿಲ್ಲೆಯ ಅನುಯಾಯಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಮನವಿ ಮಾಡಿಕೊಂಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ ೨೦೨೫-೨೬ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್ ಪಾಸ್ ಬುಕ್, ಭಾವಚಿತ್ರವಿರುವ ಅಗತ್ಯ ದಾಖಲೆಗಳನ್ನು ದಿನಾಂಕ : ೩೦-೦೯-೨೦೨೫ರೊಳಗಾಗಿ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಸ್ಟೇಶನ್ ಬ್ಯಾಕ್‌ರೋಡ, ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಇದೇ ಸೆಪ್ಟಂಬರ್ ೮ ರಿಂದ ೧೭ರವರೆಗೆ ನಗರದ ಇಂಡಿ ರಸ್ತೆಯಲ್ಲಿರುವ ಚಾಂದನಿ ಫಂಕ್ಷನ್ ಹಾಲ್‌ನಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.ಸೆ.೮ರಂದು ಬೆಳಿಗ್ಗೆ ೧೧ ಗಂಟೆಗೆ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟನೆ ನೆರವೇರಿಸಲಿದ್ದಾರೆ. ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಮಳಿಗೆ ಉದ್ಘಾಟನೆ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಬಸನಗೌಡ ತುರವಿಹಾಳ ಅವರು ಪ್ರಾತ್ಯಕ್ಷಿಕೆ ಉದ್ಘಾಟನೆ ಮಾಡಲಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೀನುಗಾರಿಕೆ ಇಲಾಖೆಯಿಂದ ೨೦೨೫-೨೬ನೇ ಸಾಲಿನ ರಾಜ್ಯ ವಲಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನ ಪಡೆಯಲು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.೫೦ರಷ್ಟು ಅಥವಾ ಗರಿಷ್ಠ ೩ ಲಕ್ಷ ರೂಪಾಯಿ ಆರ್ಥಿ ನೆರವು ನೀಡಲಾಗುವುದು. ಅರ್ಜಿಯನ್ನು ಸೆಪ್ಟಂಬರ್ ೧೫ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ, ಬಬಲೇಶ್ವರ, ತಿಕೋಟಾ, ದೇವರಹಿಪ್ಪರಗಿ, ಸಿಂದಗಿ ಆಲಮೇಲ, ಇಂಡಿ ಹಾಗೂ ಚಡಚಣ ತಾಲೂಕಿನ ಮೀನುಗಾರರು ವಿಜಯಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊ: ೯೮೪೫೯೨೭೧೧೦ ಹಾಗೂ ಮುದ್ದೇಬಿಹಾಳ, ತಾಳಿಕೋಟೆ, ನಿಡಗುಂದಿ, ಕೊಲ್ಹಾರ, ಬ.ಬಾಗೇವಾಡಿ ತಾಲೂಕಿನ ಮೀನುಗಾರರು, ಮುದ್ದೇಬಿಹಾಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊ: ೯೮೮೦೨೧೦೫೦೫ ಸಂಖ್ಯೆಎ ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಡಾ.ಆನಂದ.ಕೆ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೬ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ‍್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮುಂತಾದ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ., ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ವಿಜೇತರಿಗೆ ಪ್ರಥಮ ೩ ಸಾವಿರ ರೂ. ದ್ವಿತೀಯ ೨ ಸಾವಿರ ರೂ. ಮತ್ತು ತೃತೀಯ ೧ ಸಾವಿರ ರೂ.ಬಹುಮಾನ ನೀಡಲಾಗುವುದು.ಪ್ರೌಢ ಶಾಲಾ ವಿಭಾಗದಲ್ಲಿ: ಸ್ವಚ್ಚತೆಯ ಪಾಠ-ಗಾಂಧೀಜಿಯವರ ಸಂದೇಶ, ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ ಹಾಗೂ ಗಾಂಧೀಜಿಯವರ ಸ್ವಾತಂತ್ರ‍್ಯದ ಕನಸು-ನನ್ನ ಕಲ್ಪನೆ. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು…
