Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಶಿಕ್ಷಣ ಮತ್ತು ಜ್ಞಾನ ಮಾತ್ರ ನಮ್ಮನ್ನು ಬದಲಾಯಿಸಲು ಸಾಧ್ಯ ಎಂದು ಹೇಳಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರು ಹೇಳಿ ಇಡೀ ಶೋಷಿತ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಿದರು ಎಂದು ಖ್ಯಾತ ವಾಗ್ಮಿ ಹಾಗೂ ಶಿಕ್ಷಕ ಬಸವರಾಜ ಹಂಚಲಿ ಹೇಳಿದರು .ತಾಲೂಕಿನ ಹಂಗರಗಿ ಗ್ರಾಮದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ 134 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, 12ನೇ ಶತಮಾನದ ಬಸವಾದಿ ಶರಣರು ಬಸವಣ್ಣನವರ ನೇತೃತ್ವದಲ್ಲಿ ನಡೆಸಿದ ಸಮಾಜ ಪರಿವರ್ತನೆ ಕ್ರಾಂತಿ ನಮಗೆಲ್ಲರಿಗೂ ಸ್ಪೂರ್ತಿಯಾಗಿದೆ. ಅದೇ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಶೋಷಣೆ ವಿರುದ್ಧ ನಿರಂತರವಾಗಿ ಹೋರಾಡುತ್ತಾ ಮೌನ ಕಾಂತಿಯನ್ನು ಮಾಡಿದರು ಎಂದು ಹೇಳಿದರು.ಕಾರ್ಮಿಕರಿಗಾಗಿ ಮಹಿಳೆಯರಿಗಾಗಿ ಕಾರ್ಯನಿರ್ವಹಿಸಿದರು. ಅಪಾರ ಜ್ಞಾನವನ್ನು ಹೊಂದಿದ್ದ ಅವರು ಇಡೀ ಜಗತ್ತಿನಲ್ಲಿ ಅಪರೂಪವಾದ ಸಂವಿಧಾನವನ್ನು ನಮಗೆ ನೀಡಿದರು ಎಂದು ಹೇಳಿದರು.ಡಾ. ಯುವರಾಜ ಮಾದನಶೆಟ್ಟಿ ಮಾತನಾಡಿ, ಅಂಬೇಡ್ಕರ್ ಅವರು ಯಾವುದೇ ಜನಾಂಗಕ್ಕೆ ಸೀಮಿತವಾದವರಲ್ಲ. ಅವರು…
ಲಿಂ.ಗುರು ಮಹಾಂತೇಶ್ವರ ಸ್ವಾಮೀಜಿ ಪುಣ್ಯಸ್ಮರಣೆಯ ಅಮೃತ ಮಹೋತ್ಸವ | ಗುರು ಮಹಾಂತೇಶ್ವರ ಪುರಾಣ ಮಹಾಮಂಗಲ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಇಂದು ವಿದ್ಯಾಭ್ಯಾಸ ಕಡಿಮೆಯಾದರೂ ಪರವಾಗಿಲ್ಲ ಸಂಸ್ಕಾರ ನೀಡುವದು ಬಹಳ ಮುಖ್ಯವಾಗಿದೆ ಎಂದು ಕೆರೂರು ಚರಂತಿಮಠದ ಡಾ.ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠದ ಲಿಂ.ಗುರು ಮಹಾಂತೇಶ್ವರ ಸ್ವಾಮೀಜಿಯವರ ಪುಣ್ಯಸ್ಮರಣೆಯ ಅಮೃತ ಮಹೋತ್ಸವದಂಗವಾಗಿ ಹಮ್ಮಿಕೊಂಡಿದ್ದ ಗುರು ಮಹಾಂತೇಶ್ವರ ಪುರಾಣ ಮಹಾಮಂಗಲ ಕಾರ್ಯಕ್ರಮದಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ 75 ವಿದ್ಯಾರ್ಥಿಗಳಿಗೆ ಗುರುರಕ್ಷೆ ಮತ್ತು ಧರ್ಮ ಜಾಗೃತಿ ಸಮಾರಂಭದ ಸಮ್ಮುಖ ವಹಿಸಿ ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿರುವದು ವಿಷಾದಕರ ಸಂಗತಿ. ಅವರು ಮೊಬೈಲ್ ದಾಸರಾಗಿ ಕಾಲಹರಣ ಮಾಡುತ್ತಿರುವದು ಕಂಡುಬರುತ್ತಿದೆ. ಪಾಲಕರು ಮಕ್ಕಳಿಗೆ ಕಲಿಸಬೇಡಿ. ಅವರು ಕಲಿಯುವಂತೆ ಮಾಡಬೇಕು. ಅವರು ಇಚ್ಛೆ ಪಟ್ಟು ಅಧ್ಯಯನ ಮಾಡಿದಾಗ ಮಾತ್ರ ಅವರು ವಿದ್ಯಾವಂತರಾಗಲು ಸಾಧ್ಯ.ತಂದೆ- ತಾಯಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜೊತೆಗೆ ಉತ್ತಮ ವಿದ್ಯೆ ಸಿಗುವಂತೆ ಮಾಡಬೇಕೆಂದರು.ತಂದೆ-ತಾಯಿ ಜೀವಂತ ದೇವರು. ಅವರ ಸೇವೆ ಮಾಡಿದಾಗ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಪಟ್ಟಣದ ಯಾಸೀನ್ ಅತ್ತಾರ ರನ್ನು ಆಯ್ಕೆಮಾಡಿ ಜಿಲ್ಲಾಧ್ಯಕ್ಷ ಲಾಲಸಾಬ ಕೊರಬು ಆದೇಶಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜಾನುವಾರುಗಳು ರೈತರ ಬದುಕಿಗೆ ಅನಿವಾರ್ಯ ಎಂಬುದನ್ನು ಅರಿತು ಸರಕಾರ ಮಾರಕ ಕಾಲು ಮತ್ತು ಬಾಯಿ ಬೇನೆ ರೋಗದ ನಿಯಂತ್ರಣಕ್ಕೆ ಮುಂದಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಪಶು ವೈದ್ಯಕೀಯ ಇಲಾಖೆಯ ಆವರಣದಲ್ಲಿ ಸಿಂದಗಿ ಮತ್ತು ಆಲಮೇಲ ತಾಲೂಕಿನ ಎಲ್ಲ ಜಾನುವಾರುಗಳಿಗೆ ಹಾಕಲಾಗುವ ೭ನೆಯ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಏ.೨೬ ರಿಂದ ಜೂ.೦೯ರವರೆ ಈ ಲಸಿಕೆ ನೀಡಲಾಗುತ್ತದೆ. ಎಲ್ಲಾ ರೈತರು ತಮ್ಮ ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು. ತಾಲೂಕಿನಲ್ಲಿ ಲಸಿಕೆದಾರರು ಎಲ್ಲಾ ಮನೆಗಳಿಗೆ ಭೇಟಿ ನೀಡಿ ಉಚಿತವಾಗಿ ಲಸಿಕೆ ಹಾಕಲಿದ್ದಾರೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.ಈ ವೇಳೆ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ, ತಾಲೂಕಾ ಮುಖ್ಯ ಪಶು ವೈದ್ಯಾಧಿಕಾರಿ ಡಾ.ರಾಮು ರಾಠೋಡ, ಪಶುವೈದ್ಯ ಡಾ.ಮಾರುತಿ ತಡಲಗಿ, ಡಾ.ಶರಣಗೌಡ ಬಿರಾದಾರ, ಪಶು ಪರೀಕ್ಷಕ ಸಂಘದ ಜಿಲ್ಲಾಧ್ಯಕ್ಷ ಪ್ರಭು ಬಿರಾದಾರ, ಜಾನುವಾರು ಅಭಿವೃದ್ಧಿ ಅಧಿಕಾರಿ ಎಚ್.ಎಸ್. ಸೀತಿಮನಿ, ಶ್ರೀನಿವಾಸ ಜೋಶಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಭೌತಿಕ ಸಂಪತ್ತಿಗಿಂತ ವಿದ್ಯಾ ಸಂಪತ್ತು ಬಹು ದೊಡ್ಡ ಆಸ್ತಿ. ಹಾಗಾಗಿ ಬದುಕಿನಲ್ಲಿ ವಿದ್ಯೆ ಸಂಪಾದನೆಗೆ ಹೆಚ್ಚಿನ ಮಹತ್ವ ಕೊಡಬೇಕು ಎಂದು ಮಾಜಿ ವಿಪ ಸದಸ್ಯ ಅರುಣ ಶಹಾಪುರ ಹೇಳಿದರು. ಇತ್ತೀಚಗೆ ಪ್ರಕಟಗೊಂಡ ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಮುದ್ದೇಬಿಹಾಳ ತಾಲೂಕು ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಮತ್ತು ಸಿಂದಗಿಯ ಡಾ.ಮಹೇಶ ಮಡಿವಾಳರ ೪೮೨ನೇ ರ‍್ಯಾಂಕ್ ಪಡೆದುಕೊಂಡ ದಿಸೆಯಲ್ಲಿ ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿ ಮಾತನಾಡಿದ ಅವರು, ಇಂದಿನ ಯುವ ಜನಾಂಗ ಸಾಧನೆಯೆಡೆಗೆ ಮುಖ ಮಾಡುತ್ತಿಲ್ಲ. ತಂದೆ-ತಾಯಿಘಲು ಮಕ್ಕಳ ಅಧ್ಯಯನಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡುತ್ತಿದ್ದಾರೆ. ಆದರೆ ಮಕ್ಕಳು ಪಾಲಕರ ಸಂಕಷ್ಟಗಳನ್ನು ನೋಡುತ್ತಿಲ್ಲ. ಆದರೆ ಡಾ.ಮಹೇಶ ಅವರು ಪ್ರಾಥಮಿಕ, ಪ್ರೌಢ, ಪಪೂ, ಉನ್ನತ ಶಿಕ್ಷಣ ಸರ್ಕಾರಿ ಸಂಸ್ಥೆಗಳಲ್ಲಿ ಪೂರ್ಣಗೊಳಿಸಿ ಈ ಸಾಧನೆ ಮಾಡಿದ್ದಾರೆ. ತಾಯಿ ಯಮುನಾಬಾಯಿ ಮಡಿವಾಳರ ಅವರ ಪರಿಶ್ರಮದ ಫಲ, ಮಹೇಶ ಅವರ ಕಠಿಣ ಪ್ರಯತ್ನ ಈ ಯಶಸ್ಸಿಗೆ ಕಾರಣ ಎಂದರು.ಈ ವೇಳೆ ಶ್ರೀ ಗಣೇಶ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ್ ಪದವಿ ಪೂರ್ವ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ ದಿ.ನಾಗೇಶ ವಿಠ್ಠಲರಾವ್ ಕುಲಕರ್ಣಿ ಅವರ ಸ್ಮರಣಾರ್ಥ ತಾಯಿ ಮಂಡೋದರಿ ವಿಠ್ಠಲರಾವ್ ಕುಲಕರ್ಣಿ ಮತ್ತು ಸಹೋದರ ಬಿಂದುರಾವ್ ವಿಠ್ಠಲ್ ಕುಲಕರ್ಣಿ ಹಾಗೂ ತೃಪ್ತಿ ಕುಲಕರ್ಣಿ ಇವರುಗಳು ದಿ.ನಾಗೇಶ ಕುಲಕರ್ಣಿ ಅವರ ಹೆಸರಿನ ಮೇಲೆ ಕ್ರೀಡಾ ಚಟುವಟಿಕೆಗಳಿಗಾಗಿ ೧ಲಕ್ಷ ರೂ. ಚೆಕ್ಕನ್ನು ಸಂಸ್ಥೆಯ ಚೇರ್ಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾರಂಗಮಠ ಸಿಂದಗಿ ಪೂಜ್ಯರಿಗೆ ಹಸ್ತಾಂತರಿಸಿದರು.ಈ ವೇಳೆ ಸಂಗಮೇಶ ಜೋಶಿ, ಉಪನ್ಯಾಸಕ ಸಿದ್ದಲಿಂಗ ಕಿಣಗಿ ಇದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರತಿ ವರ್ಷದಂತೆ ಈ ವರ್ಷವೂ ಸಿಂದಗಿ ನಗರದಲ್ಲಿ ಬಸವ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆರಚಣೆ ಮಾಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಬಸವ ಮಂಟಪದಲ್ಲಿ ಬಸವ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಏ.೩೦ರಂದು ಬೆಳಿಗ್ಗೆ ೧೦ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ಸಾನಿಧ್ಯದಲ್ಲಿ ಧ್ವಜಾರೋಹಣ ನಡೆಯಲಿದೆ. ಬಳಿಕ ಬಸವೇಶ್ವರ ವೃತ್ತದಿಂದ ಮೆರವಣಿಗೆ ಪ್ರಾರಂಭವಾಗಿ ಸ್ವಾಮಿ ವಿವೇಕಾನಂದರ ವೃತ್ತ, ಟಿಪ್ಪು ಸುಲ್ತಾನ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಅಂಬಿಗೇರ ಚೌಡಯ್ಯ ವೃತ್ತದ ಮಾರ್ಗವಾಗಿ ಬಸವ ಮಂಟಪ ತಲುಪಲಿದೆ. ಬಳಿಕ ವೇದಿಕೆ ಕಾರ್ಯಕ್ರಮ ಬಸವ ಮಂಟಪದಲ್ಲಿ ಸಾಯಂಕಾಲ ನಡೆಯಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ನೀರು ಮತ್ತು ಉಪಹಾರದ ವ್ಯವಸ್ಥೆ ಮಾಡಿಸಲಾಗುತ್ತದೆ. ತಾಲೂಕಿನ ಎಲ್ಲ ಜನತೆ ಸೇರಿಕೊಂಡ ಬಸವ ಜಯಂತಿಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಣೆ ಮಾಡೋಣ. ಎಲ್ಲ ಸಮಾಜ ಬಾಂಧವರು ಬಸವ ಜಯಂತಿಯಲ್ಲಿ ಭಾಗವಹಿಸಬೇಕು. ಮೆರವಣಿಯು ಸಕಲ ವಾದ್ಯ ವೈಭವಗಳೊಂದಿಗೆ ಹಾಗೂ ವಿವಿಧ ಕಲಾ-ತಂಡಗಳೊಂದಿಗೆ ಭವ್ಯ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗ್ರಾಮೀಣ ಭಾಗದ ಜನರಿಗೆ ನಿತ್ಯ ಸಂಚರಿಸಲು ಗ್ರಾಮೀಣ ರಸ್ತೆಗಳ ಸುಧಾರಣೆ ಅವಶ್ಯಕವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ೨೦೨೪-೨೫ ನೇ ಸಾಲಿನ ೫೦೫೪-ಅಪೆಂಡಿಕ್ಸ -ಇ ಯೋಜನೆಯಡಿಯಲ್ಲಿ ಕಲಕೇರಿ ಮುಖ್ಯ ರಸ್ತೆಯಿಂದ ಗುಬ್ಬೇವಾಡ ಗ್ರಾಮದವರಿಗೆ ೭೫ಲಕ್ಷ ರೂ.ಮೊತ್ತದ ಡಾಂಬರೀಕರಣ ರಸ್ತೆಯ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ರಸ್ತೆ ಸುಧಾರಣೆಗೆ ತಾಲೂಕಿನಲ್ಲಿ ಅನೇಕ ರಸ್ತೆಗಳು ಹದಗೆಟ್ಟಿರುವ ಬಗ್ಗೆ ಗಮನಕ್ಕಿದ್ದು ವಿವಿಧ ಯೋಜನೆಗಳಡಿ ಅನುದಾನ ತರುವ ಮೂಲಕ ಹಂತ-ಹಂತವಾಗಿ ರಸ್ತೆ ಸುಧಾರಣೆಗೆ ಆದ್ಯತೆ ನೀಡುವುದಾಗಿ ಹೇಳಿದರಲ್ಲದೇ ಸರಕಾರದಿಂದ ಅನುದಾನ ತಂದು ಗ್ರಾಮೀಣ ಅಭಿವೃದ್ಧಿಗೆ ಶ್ರಮಿಸುವದಾಗಿ ಹೇಳಿದರು.ಇದೇ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರ ಪ್ರತಿನಿಧಿ ನಿತ್ಯಾನಂದ ಕಟ್ಟಿಮನಿ, ಮಾಜಿ ಜಿಪಂ ಉಪಾಧ್ಯಕ್ಷ ಮಲ್ಲಣ್ಣ ಸಾಲಿ, ಜಿಲ್ಲಾ ಕೆಡಿಪಿ ಸದಸ್ಯ ಶಿವು ಕೋಟರಗಸ್ತಿ, ತಾಲೂಕು ಕೆಡಿಪಿ ಸದಸ್ಯ ನಿಂಗು ಬುಳ್ಳಾ, ರಮೇಶ ಗುಬ್ಬೇವಾಡ, ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ರವಿರಾಜ ದೇವರಮನಿ, ಸಿದ್ದಲಿಂಗ ಗುಡ್ಡಾಪುರ,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ೧೫ನೇ ಹಣಕಾಸು ಯೋಜನೆಯಡಿ ವಾರ್ಡಿನ ಸಿ.ಸಿ ರಸ್ತೆ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಹೇಳಿದರು.ಪಟ್ಟಣದ ಹೊಸನಗರದ ೧೩ನೇ ವಾಡಿನಲ್ಲಿ ೩.೫ಲಕ್ಷ ರೂ.ಗಳ ವೆಚ್ಚದ ೭೫ ಮೀ.ಉದ್ದ ಹಾಗೂ ೩.೫ ಅಗಲದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಹಾಗೂ ಪಟ್ಟಣ ಪಂಚಾಯಿತಿ ನೀಡಿದ ಅನುದಾನಗಳಿಂದ ವಾರ್ಡಿನಲ್ಲಿ ಈಗಾಗಲೇ ೬ ರಿಂದ೭ ರಸ್ತೆಗಳು, ೪ ಬೋರೆವೆಲ್‌ಗಳ ನಿರ್ಮಾಣ ಹಾಗೂ ವಿದ್ಯುತ್ ಕಂಬಗಳ ಅಳವಡಿಕೆ ಮಾಡಲಾಗಿದೆ.ಇಂದು ಕಾಂಗ್ರೆಸ್ ಸರ್ಕಾರದ ಮಲತಾಯಿಧೋರಣೆಯಿಂದ ಕ್ಷೇತ್ರದ ಶಾಸಕರಿಗೆ ಹೆಚ್ಚಿನ ಅನುದಾನ ದೊರೆಯುತ್ತಿಲ್ಲ. ಇದರಿಂದ ಪಟ್ಟಣದ ಅಭಿವೃದ್ಧಿಗೆ ನಿರೀಕ್ಷಿಸಿದಷ್ಟು ಅನುದಾನ ದೊರೆಯುತ್ತಿಲ್ಲ. ನಾವು ಸಹ ಶಾಸಕರಿಗೆ ಯಾವುದೇ ಒತ್ತಡ ಹಾಕುತ್ತಿಲ್ಲ. ಅದಾಗ್ಯೂ ಪಟ್ಟಣದ ಅಭಿವೃದ್ಧಿಗೆ ಬದ್ಧರಾಗಿ ನಾವೆಲ್ಲ ಸದಸ್ಯರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುತ್ತೇವೆ ಎಂದರು.ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಶಾಂತಯ್ಯ ಜಡಿಮಠ ಸಹಿತ ಬಸಪ್ಪ ದೇವಣಗಾಂವ, ಸಲಬಯ್ಯ ಸದಯ್ಯನಮಠ ಹಾಗೂ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಇಂಡಿ: ಹುಬ್ಬಳ್ಳಿ ರೇಲ್ವೆ ವಿಭಾಗೀಯ ಮಹಾ ಪ್ರಬಂಧಕ ಮುಖಲ್ ಸರನ್ ಮಾಥುರ ಜನರಲ್ ಮ್ಯಾನೇಜರ ಅವರು ಇಂದು ವಿಜಯಪುರ ಇಂಡಿ ಮತ್ತು ಪಡನೂರ ತಡವಾಲ ಭೀಮಾ ಸೇತುವೆಯನ್ನು ವಿಕ್ಷೀಸಿದರು.ವಿವಿಧ ಕಾರ್ಯಾಚರಣೆ ಮತ್ತು ಸುರಕ್ಷತಾ ನಿಯತಾಂಕಗಳನ್ನು ಪರಿಶೀಲಿಸಿ ಮಾರ್ಗಮಧ್ಯೆ ಭೀಮಾ ಸೇತುವೆಯನ್ನು ವಿಕ್ಷಿಸಿದರು.ಹುಬ್ಬಳ್ಳಿಯ ರೇಲ್ವೆ ವ್ಯವಸ್ಥಾಪಕಿ ಬೇಲಾ ಮೀನಾ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.ಇದೇ ವೇಳೆ ಸಾರ್ವಜನಿಕರು ಮತ್ತು ರೈಲು ಅಭಿವೃದ್ದಿ ಹೋರಾಟಗಾರ ವೆಂಕಟೇಶ ಭೈರಾಮಡಗಿ ಇಂಡಿ ತಾಲೂಕಿನ ರೇಲ್ವೆ ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಯನ್ನು ನಿವಾರಣೆ ಮಾಡಿಕೊಡಲು ಮನವಿ ಮಾಡಿದರು. ಮತ್ತು ವಂದೇ ಮಾತರಂ ರೈಲು ಸೋಲಾಪುರದಿಂದ ವಿಜಯಪುರ ವರೆಗೆ ವಿಸ್ತರಿಸಲು ಕೇಳಿಕೊಂಡರು.
