Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಸದಾಶಿವನಗರದಲ್ಲಿ ಮುಂಬರುವ ಒಂದು ವರ್ಷದಲ್ಲಿಯೇ ಸರ್ವ ಧರ್ಮಗಳ ಬಡ ಮಕ್ಕಳಿಗಾಗಿ ಉಚಿತ ಪ್ರಸಾದ ನಿಲಯ ತಲೆ ಎತ್ತಲಿದೆ ಎಂದು ಇಂಡಿ ತಾಲೂಕಿನ ಶಿರಶ್ಯಾಡ ಗ್ರಾಮದ ಮುರುಘೇಂದ್ರ ಶ್ರೀಗಳು ಭರವಸೆ ನೀಡಿದರು.ಮಂಗಳವಾರ ಸಾಯಂಕಾಲ ೯೦೦ ವರ್ಷಗಳ ಹಿಂದಿನ ಶಿರಶ್ಯಾಡ ಗ್ರಾಮದ ಲಿಂ, ಮುರುಘೇಂದ್ರ ಶ್ರೀಗಳ ಭಾವಚಿತ್ರದ ಮೆರವಣಿಗೆ ಹಾಗೂ ಉಚಿತ ಪ್ರಸಾದ ನಿಲಯ ಕಟ್ಟಡದ ಭೂಮಿ ಪೂಜೆ ಹಾಗೂ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ, ತುಲಾಭಾರ ಸ್ವೀಕರಿಸಿ ಅವರು ಮಾತನಾಡಿದರು.ಪಟ್ಟಣದ ಸದಾಶಿವನಗರದಲ್ಲಿ ೯ ವರ್ಷಗಳÀ ಹಿಂದೆ ಇಂಡಿ ಪುರಸಭೆ ೧೦೦*೧೦೦ ಅಡಿ ಅಳತೆಯ ಜಾಗ ಉಚಿತ ಪ್ರಸಾದ ನಿಲಯದ ಕಟ್ಟಡಕ್ಕಾಗಿಯೇ ಮಂಜೂರಿ ಮಾಡಿದೆ. ಇದೀಗ ಸರಕಾರ ಈ ಕಟ್ಟಡಕ್ಕೆ ೫೦ ಲಕ್ಷ ಅನುದಾನ ನೀಡಿದೆ. ಅದನ್ನು ಬಳಸಿಕೊಂಡು ಒಟ್ಟು ಸುಮಾರು ೪ ಕೋಟಿ ರೂ, ಗಳ ವೆಚ್ಚದಲ್ಲಿ ಸುಂದರವಾದ ಮತ್ತು ಎಲ್ಲಾ ವ್ಯವಸ್ಥೆಗಳೊಂದಿಗೆ ಸರ್ವಧರ್ಮಗಳ ಬಡ ೧೦೦ ವಿದ್ಯಾರ್ಥಿಗಳಿಗೆ ಉಚಿತ ವಸತಿ ಮತ್ತು ಪ್ರಸಾದದ ವ್ಯವಸ್ಥೆ ಮಾಡಲಾಗುವದು ಎಂದು…
ಉದಯರಶ್ಮಿ ದಿನಪತ್ರಿಕೆ ಇಂಡಿ: ಪರೀಕ್ಷಾ ಕೇಂದ್ರಗಳಲ್ಲಿ ಗಾಳಿ, ಬೆಳಕು, ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಆಶಾ ಕಾರ್ಯಕರ್ತರು, ಆಸನ ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆಯಾಗಿ ಪರೀಕ್ಷೆಯನ್ನು ಪಾರದರ್ಶಕ, ಪ್ರಾಮಾಣಿಕವಾಗಿ ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ತಿಳಿಸಿದರು.ಗುಧವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೨೧ ರಿಂದ ಏಪ್ರಿಲ್ ೪ರ ವರೆಗೆ ನಡೆಯಲಿದ್ದು, ತಾಲೂಕಿನ ೧೭ ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ನಡೆಸಲು ಎಲ್ಲಾ ರೀತಿಯ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ.‘ಈ ಬಾರಿ ೪೯೭೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ೨೫೯೪ ಬಾಲಕರು, ೨೩೮೨ ಬಾಲಕಿಯರು ಹಾಗೂ ೨೨೨ ಪುನರಾವರ್ತಿತ ವಿದ್ಯಾರ್ಥಿಗಳು ಇದ್ದಾರೆ’ ಎಂದರು.೧೭ ಪರೀಕ್ಷಾ ಕೇಂದ್ರಗಳಿಗೂ ಸಿ.ಸಿ.ಟಿ.ವಿ ಕ್ಯಾಮೆರಾ ಹಾಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ೧೭ ಪರೀಕ್ಷಾ ಕೇಂದ್ರದಲ್ಲಿ ಸಮರ್ಪಕ ಪೀಠೋಪಕರಣದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರುಹೆಚ್ಚುವರಿ ಬಸ್ ವ್ಯವಸ್ಥೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ನಾಗಬೇನಾಳ ಗ್ರಾಮದ ಯಮನವ್ವ ಮಾದರ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಿನ ಜಾವ ೪:೩೦ ರ ಸುಮಾರಿಗೆ ತಮ್ಮ ಮನೆಯಿಂದ ಯಾರಿಗೂ ಹೇಳದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾಳೆ ಎಂದು ಯಮನವ್ವಳ ಸಹೋದರ ಮಲ್ಲಿಕಾರ್ಜುನ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ನಾಗೂರ ಗ್ರಾಮದ ಆರಾಧ್ಯದೈವ ಯಮನೂರೇಶ್ವರ ಜಾತ್ರೆಯು (ಉರುಸ್) ಬುಧವಾರ ಸಡಗರ, ಸಂಭ್ರಮದಿಂದ ಜರುಗಿತು.ಯೋಗಿ ಚಕ್ರವರ್ತಿ ಚಾಂಗದೇವರ ಪುಣ್ಯದಿನ, ಜಾತ್ರಾಮಹೋತ್ಸವದಂಗವಾಗಿ ಬೆಳಗ್ಗೆ ಚಾಂಗದೇವರಿಗೆ ಅಭಿಷೇಕ, ವಿಶೇಷ ಪೂಜೆ ನೆರವೇರಿತು. ಬೆಳಗ್ಗೆಯಿಂದಲೇ ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಿಂದ ಕೆಲ ಜನರು ಕಾಲ್ನಡಿಗೆಯಿಂದ ನಾಗೂರ ಗ್ರಾಮಕ್ಕೆ ಆಗಮಿಸಿ ಯಮನೂರೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಧನ್ಯತಾ ಭಾವ ಅನುಭವಿಸಿದರು.ಭಕ್ತರು ದೇವರಿಗೆ ಸಕ್ಕರೆ, ಲೋಬಾನ ಕೊಡುವ ಮೂಲಕ ತಮ್ಮ ಹರಕೆ ತೀರಿಸಿದರು. ಕೆಲ ಭಕ್ತರು ದೀಡ್ ನಮಸ್ಕಾರ ಹಾಕಿದರು. ವಿವಿಧ ಗ್ರಾಮಗಳಿಂದ ಅಪಾರ ಸಂಖ್ಯೆಯ ಜನಸ್ತೋಮ ಜಾತ್ರಾಮಹೋತ್ಸವದಲ್ಲಿ ಕಂಡುಬಂದಿತ್ತು. ಯಮನೂರೇಶ್ವರ ಭಜನಾ ಮಂಡಳಿಯಿಂದ ಭಜನಾ ಪದಗಳು ಜರುಗಿದವು. ಜಾತ್ರೆಗೆ ಬಂದಿರುವ ವಿವಿಧ ಮನರಂಜನಾ ಆಟಗಳಲ್ಲಿ ಜನರು ಭಾಗವಹಿಸಿ ಸಂಭ್ರಮಿಸಿದರು. ಪಾಲಕರು ತಮ್ಮ ಮಕ್ಕಳಿಗೆ ಆಟಿಕೆ ಸಾಮಾನುಗಳನ್ನು ಖರೀದಿಸಿದರು. ಬೆಂಡು, ಬತ್ತಾಸ್ ಸೇರಿದಂತೆ ವಿವಿಧ ಸಾಮಾನುಗಳನ್ನು ಜನತೆ ಖರೀದಿಸಿದರು.ಜಾತ್ರಾಮಹೋತ್ಸವದಂಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ಟಗರಿನ ಕಾಳಗವನ್ನು ವೀಕ್ಷಿಸಿಲು…
ರಂಗಪಂಚಮಿ ರಂಗಿನಾಟಕ್ಕೆ ತೆರೆ: ಮರುಕಳಿಸಿದ ಬಣ್ಣದ ವೈಭವ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಬಹುವರ್ಷದಿಂದ ಕಳೆಗುಂದಿದ್ದ ಹೋಳಿ ಹಬ್ಬದ ರಂಗಪಂಚಮಿ ಹಬ್ಬದ ಆಚರಣೆ ಬಸವೇಶ್ವರ ಸೇವಾ ಸಮಿತಿಯ ನೇತೃತ್ವದಲ್ಲಿ ಅದ್ದೂರಿಯಾಗಿ ಜರಗುವ ಮೂಲಕ ಬಣ್ಣದಾಟಕ್ಕೆ ತೆರೆ ಬಿದ್ದಿತ್ತು. ರಂಗಪಂಚಮಿಯಲ್ಲಿ ಮಕ್ಕಳು, ಯುವಕರು, ಹಿರಿಯರು ಪಾಲ್ಗೊಳ್ಳುವ ಮೂಲಕ ರಂಗಪಂಚಮಿಯ ಬಣ್ಣದಾಟದ ರಂಗ ಹೆಚ್ಚಿಸಿದರು. ರಂಗಪಂಚಮಿಯ ಶಾಂತಿಯುತವಾಗಿ ಜರುಗಿತು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಂಗಪಂಚಮಿ ಆಚರಣೆಯಂಗವಾಗಿ ಹತ್ತು ಗಂಟೆಗೆ ಸಿದ್ದಲಿಂಗ ಸ್ವಾಮೀಜಿ, ಶಿವಪ್ರಕಾಶ ಶಿವಾಚಾರ್ಯ ಸಾನಿಧ್ಯದಲ್ಲಿ ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಬಸವರಾಜ ಹಾರಿವಾಳ ಸೇರಿದಂತೆ ಅನೇಕ ಮುಖಂಡರು ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಗ್ಯಾಸ್‌ದಿಂದ ಬಣ್ಣವನ್ನು ಸಿಂಪಡಿಸುವ ಮೂಲಕ ಅದ್ದೂರಿ ರಂಗಪಂಚಮಿಗೆ ಚಾಲನೆ ನೀಡಿದರು.ನಂತರ ರಂಗಪಂಚಮಿಯ ಬಣ್ಣದೋಕುಳಿಯ ಮೆರವಣಿಗೆ ಆರಂಭಗೊಂಡಿತ್ತು. ಮೆರವಣಿಗೆಯಲ್ಲಿ ಟ್ರ್ಯಾಕ್ಟರ್‌ದಲ್ಲಿಟ್ಟಿದ್ದ ಬ್ಯಾರಲ್‌ಗಳಲ್ಲಿದ್ದ ಬಣ್ಣವನ್ನು ಮೆರವಣಿಗೆಯುದ್ದಕ್ಕೂ ನೆರೆದ ಜನರ ಮೇಲೆ ಬಣ್ಣ ಎರಚುವದು ಕಂಡುಬಂದಿತ್ತು. ಬಹುದಿನಗಳ ನಂತರ ಆರಂಭಗೊಂಡ ರಂಗಪಂಚಮಿಯ ಹಬ್ಬದಲ್ಲಿ ಪಟ್ಟಣದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಿಂದಗಿ ಶ್ರೀ ಗಜಾನನ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ವಿವೇಕಾನಂದ ಕುಲಕರ್ಣಿ ಹಾಗೂ ಉಪಾಧ್ಯಕ್ಷರಾಗಿ ಸಂಜೀವ್ ಪೋತದಾರ ಎಲ್ಲ ಸದಸ್ಯರ ಒಪ್ಪಿಗೆ ಮೇರೆಗೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಚುನಾವಣಾ ಅಧಿಕಾರಿ ಎಂ ಎಸ್ ರಾಠೋಡ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವಧೂತ ಜೋಶಿ ತಿಳಸಿದ್ದಾರೆ.ಇದೇ ಸಂದರ್ಭದಲ್ಲಿ ಬಿ.ಜಿ.ಕುಲಕರ್ಣಿ, ಗಿರೀಶ್ ಕುಲಕರ್ಣಿ, ಎ.ಕೆ.ಕುಲಕರ್ಣಿ, ಚಿಂತಾಮಣಿ ಕುಲಕರ್ಣಿ, ಎಂ.ಎ.ಸಿಂದಗೇರಿ, ಆರ್.ಡಿ.ಕುಲಕರ್ಣಿ, ದಯಾನಂದ ಪತ್ತಾರ, ಶರದ ನಾಡಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಂಸ್ಕೃತಿಕ ಸಿರಿ ಉದ್ಘಾಟನೆ ಉದಯರಶ್ಮಿ ದಿನಾಚರಣೆ ಸಿಂದಗಿ: ತಾಯಿ, ಅಕ್ಕ, ತಂಗಿ ಹೀಗೆ ಹಲವು ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸುವ ಮಹಿಳೆಗೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ. ಆಕೆಯ ತ್ಯಾಗ ಮತ್ತು ಹೋರಾಟದ ಮನೋಭಾವ ಎಲ್ಲರಿಗೂ ಮಾದರಿಯಾದುದು ಎಂದು ಸಾರಂಗಮಠದ ನಿಯೋಜಿತ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಂಸ್ಕೃತಿಕ ಸಿರಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಆಧುನಿಕ ಯುಗದಲ್ಲಿ ಮಹಿಳೆಯರು ಸ್ವಾವಲಂಭಿ ಮತ್ತು ಸ್ವಾಭಿಮಾನಿ ಬದುಕು ಸಾಗಿಸಬೇಕಾದರೆ ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಸಮಾಜದಲ್ಲಿ ಹೆಣ್ಣಿನ ಸ್ಥಾನಮಾನ ದೊಡ್ಡದು. ಎಲ್ಲಾ ಸ್ತರಗಳಲ್ಲೂ ಕೆಲಸ ಮಾಡುತ್ತಿರುವ ಮಹಿಳೆ ಅಬಲೆಯಾಗಿ ಉಳಿದಿಲ್ಲ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವುದನ್ನು ನಾವು ಪ್ರೇರಣೆಯಾಗಿಟ್ಟುಕೊಂಡು ನಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ:ಏ.೦೪ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ನ್ನು ನಕಲು ಮುಕ್ತ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ತಿಳಸಿದ್ದಾರೆ.ಸಿಂದಗಿ, ಆಲಮೇಲ, ದೇ.ಹಿಪ್ಪರಗಿ ಹಾಗೂ ತಾಳಿಕೋಟಿ ತಾಲೂಕು ಸೇರಿದಂತೆ ಒಟ್ಟು ೨೫ ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಬಾಲಕರು ೪೦೯೮ ಹಾಗೂ ೩೬೪೯ ಬಾಲಕಿಯರು ಸೇರಿ ೭೭೪೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು ಸಿಸಿಟಿವಿ/ವೆಬ್ ಕಾಸ್ಟಿಂಗ್ ಅಡಿಯಲ್ಲಿ ಕಟ್ಟುನಿಟ್ಟಾಗಿ ನಡೆಸಲಾಗುತ್ತಿದ್ದು, ತಹಶೀಲ್ದಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರ ೮ ತ್ರಿಸದಸ್ಯ ತಾಲೂಕು ಮಟ್ಟದ ಸಂಚಾರಿ ಜಾಗೃತ ದಳದ ತಂಡಗಳನ್ನು ರಚಿಸಲಾಗಿದೆ.ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ೨೫ಸ್ಥಾನಿಕ ಜಾಗೃತ ದಳ ಸದಸ್ಯರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ಮದ್ಯಾಹ್ನ ಬಿಸಿಊಟ ಸೇರಿ ಇತರ ಸೌಲಭ್ಯಗಳಿರುವಂತೆ ನೋಡಿಕೊಳ್ಳಬೇಕು. ಮತ್ತು ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಮೊಬೈಲ್ ವಶಪಡಿಸಿಕೊಳ್ಳಲು ಪ್ರತಿ ಕೇಂದ್ರಕ್ಕೆ ಒಬ್ಬರಂತೆ ೨೫…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮಾ.೧೯ರಂದು ಸರ್ಕಾರಿ ಐಟಿಐ ಕಾಲೇಜು, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಸೆಲ್ಕೋ ಸೋಲಾರ್ ಪ್ರೈವೇಟ್ ಲಿಮಿಟೆಡ್ ಇವರ ಸಹಯೋಗದಲ್ಲಿ, ಸೌರ ತಂತ್ರಜ್ಞಾನ ಅನುಷ್ಠಾನ ಮತ್ತು ಆವಿಷ್ಕಾರ ಕುರಿತು ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ರಮೇಶ ದೇಸಾಯಿ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧಿಕಾರಿ ರವಿ, ಬಾಗಲಕೋಟೆಯ ಭಾರತೀಯ ವಿಕಾಸ ಟ್ರಸ್ಟ್ನ ಶಿವಕುಮಾರ ಕೆ, ವಿಜಯಪುರ ಸೆಲ್ಕೋ ಸೋಲಾರ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕರಾದ ಮಲ್ಲೇಶ ಕುಂಬಾರ, ಸರ್ಕಾರಿ ಐಟಿಐ ಕಾಲೇಜಿನ ತರಬೇತಿ ಅಧಿಕಾರಿಗಳಾದ ರವಿ ಖೇಡಗಿ, ಡಿ.ಜಿ ಅಳ್ಳಿಕಟ್ಟಿ, ಸುವರ್ಣಾ ಕತ್ನಳ್ಳಿ, ಸಿ.ಎ ಪಾಟೀಲ, ರೇಶ್ಮಾ ಪಿಸೆ ಹಾಗೂ ಐಟಿಐ ಕಾಲೇಜು ವಿದ್ಯಾರ್ಥಿಗಳು ಬಾಗವಹಿಸಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬುಧವಾರ ನಗರದ ಅಂಬೇಡ್ಕರ್ ಭವನ, ಡಾ. ಬಿ.ಅರ್ ಅಂಬೇಡ್ಕರ ಕ್ರೀಡಾಂಗಣ, ನಗರದ ಜಿಲ್ಲಾ ಪಂಚಾಯತಿಯ ಹತ್ತಿರವಿರುವ ಈಜುಕೊಳ ಹಾಗೂ ಒಳಾಗಂಣ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಗರದ ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಂಬೇಡ್ಕರ್ ಭವನದ ದುರಸ್ತಿ ಹಾಗೂ ನವೀಕರಣ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಅಗತ್ಯ ದುರಸ್ತಿ ಕಾಮಗಾರಿ ಹಾಗೂ ಮುಖ್ಯ ರಸ್ತೆಯಿಂದ ಭವನಕ್ಕೆ ಕಲ್ಪಿಸುವ ರಸ್ತೆ ಅಗಲೀಕರಣ ಕುರಿತಾದ ಕಾಮಗಾರಿಯ ಅಂದಾಜು ಪತ್ರಿಕೆಯನ್ನು ಸಿದ್ದಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಡಾ. ಬಿ.ಆರ್ ಅಂಬೇಡ್ಕರ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಅವರು, ಅಭ್ಯಾಸಕ್ಕೆ ಆಗಮಿಸುವ ಕ್ರೀಡಾಪಟುಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು.ಸ್ವಚ್ಚತೆಗೆ ಆಧ್ಯತೆ ನೀಡಬೇಕು. ಕ್ರೀಡಾಂಗಣವನ್ನು ಆಕರ್ಷಿಣೀಯವಾಗಿಸುವ ನಿಟ್ಟಿನಲ್ಲಿ ಬಣ್ಣ ಹಾಗೂ ಗೋಡೆ ಚಿತ್ರ ಬಿಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತಿ ಹತ್ತಿರವಿರುವ ಈಜುಕೊಳಕ್ಕೆ…
