Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ ಜಿಲ್ಲೆಯ ಪಹಲ್ಗಾಮ್‌ನ ಬೈರಸನ್ ವ್ಯಾಲಿಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ಧಾಳಿಯು ಅತ್ಯಂತ ಹೇಯ, ಅಮಾನವೀಯ ಕ್ರತ್ಯವಾಗಿದ್ದು ಇದನ್ನು ಕಠೀಣ ಶಬ್ದಗಳ ಮೂಲಕ ಖಂಡಿಸುವುದಾಗಿ ಶಾಸಕ ಸಿದ್ದು ಸವದಿ ಹೇಳಿದ್ದಾರೆ.ಹೆಸರು, ಧರ್ಮವನ್ನು ಖಚಿತಪಡಿಸಿಕೊಂಡು ಹಿಂದುಗಳನ್ನೇ ಗುರಿಯಾಗಿಸಿ ನಡೆಸಿರುವುದು ಅತ್ಯಂತ ಕ್ರೂರವಾಗಿದ್ದು ಇದಕ್ಕೆ ತಕ್ಕ ಶಿಕ್ಷೆಯನ್ನು ಉಗ್ರರು ಅನುಭವಿಸಲೇ ಬೇಕಾಗುತ್ತದೆ. ಶಾಂತವಾಗಿ ಅಭಿವೃದ್ದಿ ಪಥದತ್ತ ಹೊರಟಿದ್ದ ಕಾಶ್ಮೀರ ಪ್ರವಾಸಿಗರ ಹೆಚ್ಚಳದಿಂದ ಅಲ್ಲಿನ ಜನಜೀವನ ಸುಧಾರಣೆಯತ್ತ ದಾಪುಗಾಲಿಟ್ಟಿತ್ತು, ಇದನ್ನು ಸಹಿಸದ ಉಗ್ರರು ಮತ್ತೊಮ್ಮೆ ನೀಚ ಕೃತ್ಯ ಎಸಗಿದ್ದು ಇದನ್ನು ಪ್ರತಿಯೊಬ್ಬರು ಪಕ್ಷ, ಜಾತಿ, ಧರ್ಮ ಬದಿಗಿಟ್ಟು ಖಂಡಿಸಬೇಕು, ಉಗ್ರರಿಗೆ ಅತ್ಯಂತ ಕಠೀಣ ಶಿಕ್ಷಯಾಗಬೇಕು. ಅವರನ್ನು ಹುಡುಕಿ, ಹುಡುಕಿ ಹೊಡೆಯುವ ಕಾರ್ಯ ಕೇಂದ್ರದ ನರೇಂದ್ರ ಮೋದಿ ಸರಕಾರ ಮಾಡುತ್ತದೆ ಎಂಬ ಭರವಸೆ ಇದೆ ಎಂದರು.
ಬೆದರಿಕೆ ನಿರ್ಲಕ್ಷಿಸಿದ ಭದ್ರತಾ ಪಡೆಗಳು | ಗುಪ್ತಚರ ಸಂಸ್ಥೆಗಳ ಮೂಲಗಳ ಮಾಹಿತಿ | ಪಿಓಕೆ ಕಮಾಂಡರ್ಗಳಿಂದ ಉಗ್ರರಿಗೆ ನಿರ್ದೇಶನ ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ. ಅದರಲ್ಲೂ ಮೃತಪಟ್ಟವರು ಹೆಚ್ಚಿನವರು ವಿವಿಧ ರಾಜ್ಯಗಳ ಪ್ರವಾಸಿಗರು. ಇದು ಗಂಭೀರ ಗುಪ್ತಚರ ಮತ್ತು ಭದ್ರತಾ ವೈಫಲ್ಯ ಎಂದು ಗುಪ್ತಚರ ಸಂಸ್ಥೆಗಳ ಮೂಲಗಳು ತಿಳಿಸಿವೆ.ಗುಪ್ತಚರ ಸಂಸ್ಥೆಯ ಮೂಲವೊಂದರ ಪ್ರಕಾರ, ಘಟನೆಗೆ ಕೆಲವು ದಿನಗಳ ಮುನ್ನ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿರುವ ಭಯೋತ್ಪಾದಕನೊಬ್ಬ ದಾಳಿಯ ಬಗ್ಗೆ ಸುಳಿವು ನೀಡುವ ಸೂಚನೆ ನೀಡಿದ್ದನು. ಆದರೆ ಗುಪ್ತಚರ ಸಂಸ್ಥೆಗಳು ಮತ್ತು ಭದ್ರತಾ ಪಡೆಗಳು ಅದರ ಮೇಲೆ ಕ್ರಮ ಕೈಗೊಳ್ಳಲು ವಿಫಲವಾದವು. ಇದು ಭೀಕರ ದುರಂತಕ್ಕೆ ಕಾರಣವಾಯಿತು ಎನ್ನಲಾಗುತ್ತಿದೆ.ಪಿಒಕೆ ಮತ್ತು ಪಾಕಿಸ್ತಾನದಲ್ಲಿ ನೆಲೆಗೊಂಡಿರುವ ಅಂತರರಾಷ್ಟ್ರೀಯ ಕಮಾಂಡರ್ಗಳು ಘಟನೆ ವೇಳೆ ಉಗ್ರರಿಗೆ ನಿರ್ದೇಶನಗಳನ್ನು ನೀಡುತ್ತಿದ್ದರು ಎಂದು ವರದಿಯಾಗಿದೆ. ದಾಳಿಯಲ್ಲಿ ಭಾಗಿಯಾಗಿರುವ ಉಗ್ರಗಾಮಿಗಳು ಶಸ್ತ್ರಾಸ್ತ್ರಗಳನ್ನು ಬಳಸುವಲ್ಲಿ ಉತ್ತಮ ತರಬೇತಿ ಪಡೆದಿದ್ದರು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠದ ಗುರು ಮಹಾಂತೇಶ್ವರ ಸ್ವಾಮೀಜಿಯವರ ಪುಣ್ಯಸ್ಮರಣೆಯ ಅಮೃತ ಮಹೋತ್ಸವದಂಗವಾಗಿ ಹಮ್ಮಿಕೊಂಡಿರುವ ಪುರಾಣ ಕಾರ್ಯಕ್ರಮದಲ್ಲಿ ಸೋಮವಾರ ಸಂಜೆ ಜರುಗಿದ ಗುರುರಕ್ಷೆ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿಯ ೭೫ ಪೌರಕಾರ್ಮಿಕರನ್ನು ಶ್ರೀಮಠದಿಂದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಅಪ್ಪುಗೌಡ ಪಾಟೀಲ, ಮಡಿವಾಳಯ್ಯ ಶಾಸೀಜಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಐ. ರೇವೂರಕರ ಇತರರು ಇದ್ದರು.
ಪಹಲ್ಗಾಮ ಘಟನೆ ಖಂಡಿಸಿ ಬಸವನಬಾಗೇವಾಡಿಯಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯಿಂದ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜಮ್ಮು-ಕಾಶ್ಮೀರದ ಪಹಲ್ಗಾಮದಲ್ಲಿ ನಿನ್ನೆ ನಡೆದ ಭಯೋತ್ಪಾದಕರ ದಾಳಿಗೆ ಕೂಡಲೇ ಪ್ರತೀಕಾರವನ್ನು ತೆಗೆದುಕೊಳ್ಳಬೇಕಾದರೆ ಕಾಶ್ಮೀರ ಕಣಿವೆಯಲ್ಲಿ ಅಡಗಿ ಕುಳಿತಿರುವ ಉಗ್ರಗಾಮಿಗಳನ್ನು ನಿರ್ದಾಕ್ಷ್ಯಿಣವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ರಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮ್ಮು ಕಾಶ್ಮೀರದ ಪಹಲ್ಗಾಮದಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯು ಬುಧವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರವಾಸಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ಜಿಹಾದಿಗಳು ಅಮಾಯಕರನ್ನು ಹತ್ಯೆ ಮಾಡಿದ್ದಾರೆ. ಈ ಜಿಹಾದಿ ಶಕ್ತಿಗಳ ಹೆಡೆಮುರಿಕಟ್ಟುವ ಕೆಲಸವನ್ನು ಕೇಂದ್ರ ಸರ್ಕಾರ ಕೂಡಲೇ ಮಾಡಬೇಕು. ಭಯೋತ್ಪಾದಕರನ್ನು ಬೆನ್ನಟ್ಟಿ ಭಾರತೀಯ ಸೇನೆ ಗುಂಡಿಕ್ಕಿ ಕೊಲ್ಲಬೇಕು. ಕಾಶ್ಮೀರವನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಬೇಕು. ಈ ದಾಳಿ ಹಿಂದೆ ಇರುವ ಪಾಕಿಸ್ತಾನದ ಭಯೋತ್ಪಾದನಾ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಲು ಕೇಂದ್ರ ಸರ್ಕಾರ ಕೂಡಲೇ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಏ.೨೪ ರಿಂದ ಮೇ.೦೮ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-೨ ಅನ್ನು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕೇಂದ್ರಗಳ ೨೦೦ ಮೀ.ವ್ಯಾಪ್ತಿಯಲ್ಲಿನ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಬೆಳಿಗ್ಗೆ ೮ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ತೆರೆಯದಂತೆ ಆದೇಶಿಸಿದೆ.ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ,ಆಂಗ್ಲ ಮಾಧ್ಯಮ ಸರ್ಕಾರಿ ಮುಸ್ಲಿಂ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೨೦೨೫-೨೬ನೇ ಸಾಲಿನ ೬ನೇ ತರಗತಿ ಪ್ರವೇಶ ಪರೀಕ್ಷೆಯು ವಿಜಯಪುರ, ಮುದ್ದೇಬಿಹಾಳ, ಸಿಂದಗಿ, ಇಂಡಿ ಹಾಗೂ ಚಡಚಣ ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ ೨೭ರ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೦೧ ಗಂಟೆಯವರೆಗೆ ನಡೆಯಲಿವೆ. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು https://domgok.in/Admission/StudentHallticketವೆಬ್‌ಸೈಟ್ ಮೂಲಕ ಎಸ್‌ಎಟಿಎಸ್ ಐಡಿ ನಮೂದಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ https:// dom.karnataka.gov.in ಹಾಗೂ ವ್ಯಾಟ್ಸ್ಅಪ್ ಸಂಖ್ಯೆ ೮೨೭೭೭೯೯೯೯೦, ಜಿಲ್ಲೆಯ ಸಂಬAಧಿಸಿದ ವಸತಿ ಶಾಲೆಗಳನ್ನು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂ.೦೮೩೫೨೨೯೫೫೨೩ ಹಾಗೂ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಚಿಕ್ಕಪಡಸಲಗಿಯಲ್ಲಿ ಧರ್ಮ ಜಾಗೃತಿ ಸಭೆ | ಅದೃಶ್ಯ ಕಾಡಸಿದ್ಧೇಶ್ವರ ಶ್ರೀ ಸಲಹೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಧರ್ಮ ರಕ್ಷಣೆಗೆ ನಾವು ಎಂಥ ತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎನ್ನುವ ಮನಸ್ಥಿತಿ ಬೆಳೆಸಿಕೊಂಡಾಗ ಮಾತ್ರ ಧರ್ಮ ಉಳಿಯಲು ಸಾಧ್ಯ ಎಂದು ಕೊಲ್ಲಾಪುರ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳು ಹೇಳಿದರು.ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಮಾರುತಿ ದೇವರ ಓಕುಳಿ ಮಹೋತ್ಸವ ನಿಮಿತ್ತ ಗ್ರಾಮದ ಹನುಮಾನ ಮಂದಿರದ ಆವರಣದಲ್ಲಿ ಜೈ ಹನುಮಾನ ಯುವ ಮಿತ್ರ ಮಂಡಳಿ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಧರ್ಮ ಜಾಗೃತಿ ಹಾಗೂ ಭಾರತೀಯ ಸಂಸ್ಕೃತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.ದೇಶಕ್ಕಾಗಿ, ಸನಾತನ ಹಿಂದೂ ಧರ್ಮದ ಉಳಿವಿಗಾಗಿ ಛತ್ರಪತಿ ಶಿವಾಜಿ, ಸಂಭಾಜಿಯಂಥ ಅನೇಕ ಮಹಾರಾಜರು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಅಂಥವರ ತ್ಯಾಗ, ಬಲಿದಾನಗಳಿಂದಲೇ ಇಂದಿಗೂ ಭಾರತೀಯ ಸಂಸ್ಕೃತಿ ಉಳಿದಿದೆ. ನಾವು ಸುರಕ್ಷಿತವಾಗಿ ಬದುಕು ನಡೆಸುತ್ತಿದ್ದೇವೆ. ಅವರು ಉಳಿಸಿಕೊಟ್ಟ ಸನಾತನ ಧರ್ಮ, ಸಂಸ್ಕೃತಿಯನ್ನು ಉಳಿಸಲು ನಾವೂ ಬದ್ಧರಾಗಬೇಕು ಎಂದರು.ಮರೇಗುದ್ದಿಯ ಡಾ.ನಿರುಪಾದೇಶ್ವರ ಶ್ರೀಗಳು ಮಾತನಾಡಿ, ಕಾಶ್ಮೀರದ ಮಂಗಳವಾರ ಧರ್ಮದ…
ಮಹಾರಾಷ್ಟ್ರದತ್ತ ಮುಖ ಮಾಡುತ್ತಿರುವ ರೈತರು | ಸಾವಳಗಿ ಭಾಗದಲ್ಲಿ ಶೀತಲ ಘಟಕ ಆರಂಭಿಸಬೇಕೆಂಬುದು ರೈತರ ಒತ್ತಾಯ ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ಒಣದ್ರಾಕ್ಷಿ ಸಂಗ್ರಹಣೆಗೆ ಶೀತಲ ಘಟಕಗಳ (ಕೋಲ್ಡ್ ಸ್ಟೋರೇಜ್) ಕೊರತೆ ಇರುವುದರಿಂದ ಬಹುತೇಕ ರೈತರು ಮಹಾರಾಷ್ಟ್ರದತ್ತ ಮುಖ ಮಾಡುತ್ತಿದ್ದಾರೆ. ಈ ಭಾಗದಲ್ಲಿ ವ್ಯಾಪಕ ದ್ರಾಕ್ಷಿ ಬೆಳೆ ಬೆಳೆಯುತ್ತಿದ್ದು, ವಿಜಯಪುರ ಹೊರತುಪಡಿಸಿದರೆ ಸುತ್ತಮುತ್ತ ಯಾವುದೇ ಬೃಹತ್ ಶೀತಲ ಘಟಕ ಇಲ್ಲದಿರುವುದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ.ಹವಾಮಾನ ವೈಪರೀತ್ಯ, ಅಕಾಲಿಕ ಮಳೆ ಮಧ್ಯೆ ಒಣ ದ್ರಾಕ್ಷಿ ಸಿದ್ಧಪಡಿಸುವುದು ರೈತರಿಗೆ ಸವಾಲಿನ ಕೆಲಸ. ಒಣ ದ್ರಾಕ್ಷಿ ಶೇಖರಿಸಿಡಲು ಶೀತಲ ಘಟಕಗಳ ಕೊರತೆ ಇರುವುದರಿಂದ ಸರ್ಕಾರ ಜಮಖಂಡಿ ತಾಲ್ಲೂಕಿನ ಸಾವಳಗಿ ಭಾಗದಲ್ಲಿ ಒಂದು ಶೀತಲ ಘಟಕ ಆರಂಭಿಸಬೇಕು ಎಂಬುದು ರೈತರ ಒತ್ತಾಯವಾಗಿದೆ.ಜಮಖಂಡಿ ತಾಲ್ಲೂಕಿನಲ್ಲಿ ಒಟ್ಟು 6,300 ಹೆಕ್ಟೇರ್ ದ್ರಾಕ್ಷಿ ಬೆಳೆಯುವ ರೈತರಿದ್ದಾರೆ, ಅದರಲ್ಲಿ ಶೇ 90ರಷ್ಟು ರೈತರು ಒಣ ದ್ರಾಕ್ಷಿ ತಯಾರಿಸುತ್ತಾರೆ, ಅಂದಾಜು 40 ಸಾವಿರ ಟನ್ ಜಮಖಂಡಿಯಲ್ಲಿ ತಯಾರಾಗುತ್ತದೆ. ಸುತ್ತಮುತ್ತಲಿನಲ್ಲಿ ಖಾಸಗಿಯವರು ಮಾಡಿರುವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪುಸ್ತಕಗಳು ಸಂಸ್ಕೃತಿಯ ಜೀವಂತ ವಾಹಕ. ಅವು ಮನುಕುಲದ ಬೆಳವಣಿಗೆಗೆ ಸಹಕಾರಿಯಾಗಿವೆ. ಅವು ಮಾನವನಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ಜತೆಗೆವ್ಯಕ್ತಿಯ ಆರೋಗ್ಯಕರ ವಿಕಸನಕ್ಕೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಬುಧವಾರದಂದು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ‘ವಿಶ್ವ ಪುಸ್ತಕ ದಿನ’ ದ ನಿಮಿತ್ತ ಹಮ್ಮಿಕೊಂಡ ‘ಪುಸ್ತಕ ಬಾಳಿನ ಬೆಳಕು’-ಚಿಂತನ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.ಪುಸ್ತಕಗಳು ವಿದ್ಯಾವಂತ ಸಮಾಜದ ಅವಿಭಾಜ್ಯ ಅಂಗವಾಗಿದ್ದು, ಪುಸ್ತಕಗಳ ಓದಿನಿಂದ ಜೀವನೋತ್ಸಾಹ, ಕ್ರಿಯಾಶೀಲತೆ, ಅಂತಸ್ಸತ್ವಗಳು ಹೆಚ್ಚುತ್ತವೆ. ಇಂದಿನ ಮಕ್ಕಳಲ್ಲಿ ನಾವು ಪುಸ್ತಕ ಓದುವ ಸಂಸ್ಕೃತಿಯ ಬೆಳವಣಿಗೆಗೆ ಅಗತ್ಯ ಪರಿಸರವನ್ನು ರೂಪಿಸಬೇಕು ಎಂದು ಹೇಳಿದರು.ಶಿಕ್ಷಕ ಸಚೀನ ಅವಟಿ ಮಾತನಾಡಿ, ಪುಸ್ತಕ ಓದುವುದರಿಂದ ನಮ್ಮ ಮಾನಸಿಕ ಶಕ್ತಿ ಮತ್ತು ಜ್ಞಾನ ಸುಧಾರಿಸುತ್ತದೆ. ಪುಸ್ತಕ ಓದಿನಿಂದ ಶಬ್ದಕೋಶ, ಏಕಾಗ್ರತೆ ಮತ್ತು ಆಲೋಚನಾ ಕೌಶಲ್ಯ ವೃದ್ಧಿಯಾಗಿ ಮಕ್ಕಳಆತ್ಮವಿಶ್ವಾಸ ಸುಧಾರಿಸುತ್ತದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಮಾತನಾಡಿ, ‘ಪುಸ್ತಕ’ ಎಂದರೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಚರಿಸಲ್ಪಡುವ ಅಂಬೇಡ್ಕರ್ ಜಯಂತಿ ಅಂಗವಾಗಿ ೨೦೨೪-೨೫ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ೧೦೦ ಕ್ಕೆ ೧೦೦ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿ.ಯು.ಸಿ ಕನ್ನಡ ಮಾಧ್ಯಮದಲ್ಲಿ ಶೇ೯೫% ಕ್ಕಿಂತ ಹೆಚ್ಚು ಅಂಕ ಗಳಿಸಿದ ತಾಲೂಕಿನ ವಿದ್ಯಾರ್ಥಿಗಳಿಗೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದ್ದು, ಸಾಧನೆ ಮಾಡಿದ ವಿದ್ಯಾರ್ಥಿಗಳು ಎ೨೮ ರ ಒಳಗಾಗಿ ಪರಿಷತ್ತಿನ ಗೌರವ ಕಾರ್ಯದರ್ಶಿ ಸಿದ್ದನಗೌಡ ಬಿಜ್ಜೂರ(೯೭೪೧೬೧೮೨೩೦), ಸಂಘಟನಾ ಕಾರ್ಯದರ್ಶಿ ಹುಸೇನ ಮುಲ್ಲಾ(೯೭೩೧೭೭೨೬೭೭), ಸದಸ್ಯ ಶ್ರೀಶೈಲ ಕತ್ತಿ(೯೬೧೧೨೪೯೩೯೮) ಇವರ ಬಳಿ ವಿವರಗಳನ್ನು ನೀಡುವಂತೆ ಪರಿಷತ್ತಿನ ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಪ್ರಕಟಣೆ ನೀಡಿದ್ದಾರೆ.
