Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾನೂನು ಎಲ್ಲರಿಗೂ ಸಮಾನವಾದದ್ದು, ಸಂವಿಧಾನ ರಚನೆ ಎಲ್ಲರ ಜವಾಬ್ದಾರಿ ದೇಶದ ಸಾರ್ವಭೌಮತ್ವವನ್ನು ಕಾಪಾಡುವುದು ನಮ್ಮ ಕರ್ತವ್ಯ. ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳನ್ನು ಪಾಲಿಸುವುದರಿಂದ ದೇಶದಲ್ಲಿ ಶಾಂತಿ ನೆಲಸಲಿದೆ ಎಂದು ಉಪನ್ಯಾಸಕಿ ವಿದ್ಯಾ ಕಲ್ಯಾಣಶೆಟ್ಟಿ ಹೇಳಿದರು.ನಗರದ ಅಖಿಲ ಭಾರತ ವೀರಶೈವ ಲಿಂಗಾಯತ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಜಿಲ್ಲಾ ಘಟಕದವರ ವತಿಯಿಂದ ಹಮ್ಮಿಕೊಂಡಿದ್ದ ಶಿವಾನುಭವಗೋಷ್ಠಿಯಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರರ ಬದುಕು ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಅವರು ದೇಶದ ಏಳ್ಗೆಗಾಗಿ ಸಮಾಜದಲ್ಲಿ ಸಮಾನತೆಯ ಹಕ್ಕು, ಸ್ವಾತಂತ್ರö್ಯ, ಅಭಿವ್ಯಕ್ತಿ ಮತ್ತು ಗೌರವಯುತವಾಗಿ ಜೀವನ ನಡೆಸಲು ಸಂವಿಧಾನ ಒದಗಿಸಿಕೊಟ್ಟಿದ್ದು ಅದರ ಆಶಯದಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ವವ್ಯವಾಗಿದೆ. ನಮ್ಮ ಸಾಂಸ್ಕೃತಿ, ಧರ್ಮ ಇತಿಹಾಸವನ್ನು ನಮ್ಮ ಜೀವನಕ್ಕೆ ಅಳವಡಿಸಿಕೊಂಡು ನಡೆಯಬೇಕು ಎಂದು ಕರೆ ನೀಡಿದರು.ಜಿಲ್ಲಾಧ್ಯಕ್ಷ ವಿ.ಸಿ. ನಾಗಠಾಣ ಮಾತನಾಡಿ ಸಮಾಜದ ಪರಿಸರ ಅಂದಿನ ವಿಚಾರ ಮನೋಸ್ಮೃತಿಯ ಸಂಸ್ಕಾರ ಬದುಕಿನ ದೌರ್ಜನ್ಯಗಳಿಂದ ಅನುಭವಿಸಿ ದಲಿತ ನಾಯಕನಾಗಿ ಸರ್ವರ ಕಲ್ಯಾಣಕ್ಕಾಗಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಇತ್ತೀಚೆಗೆ ಕಲಕೇರಿಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಡಾ ಬಾಬಾಸಾಹೇಬ ಅಂಬೇಡ್ಕರರ 134ನೇ ಜಯಂತೋತ್ಸವ ಮತ್ತು ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಲಮೇಲದ ವೈದ್ಯ ಸಾಹಿತಿ ಡಾ ಸಮೀರ ಹಾದಿಮನಿ ಅವರನ್ನು ಸಂಕೀರ್ಣ ಕ್ಷೇತ್ರದಲ್ಲಿ ಖ್ಯಾತ ನೇತ್ರ ತಜ್ಞ ಡಾ ಪ್ರಭುಗೌಡ ಪಾಟೀಲ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು.ಶ್ರೀ ಮಡಿವಾಳೇಶ್ವರ ಶಿವಾಚಾರ್ಯರು , ಭಂತೆ ಅಮರಜ್ಯೋತಿ ಸಾನಿಧ್ಯ ವಹಿಸಿದ್ದರು. ವಿದ್ವಾಂಸ ಡಾ ಎಚ್ ಟಿ ಪೋತೆ , ಪ್ರೋ ಸುಜಾತಾ ಚಲವಾದಿ, ದಲಿತ ಮುಖಂಡ ವೈ ಸಿ ಮಯೂರ, ಶ್ರೀನಾಥ್ ಪೂಜಾರಿ, ಡಿಎಸ್ಎಸ್ ಸಂಚಾಲಕ ಸೋಮಶೇಖರ್ ಬಡಿಗೇರ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Read More

ಪ್ರಗತಿಪರ ಚಿಂತಕಿ ಮತ್ತು ಖ್ಯಾತ ಲೇಖಕಿ ಡಾ.ಎಚ್.ಎಸ್.ಅನುಪಮಾ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಬದಲಾವಣೆ ಆಗಬೇಕಾದರೆ ಅದು ಕಾನೂನಿನ ಮೂಲಕವೇ ಸಾಧ್ಯ ಎಂದು ಉತ್ತರ ಕನ್ನಡ ಜಿಲ್ಲೆಯ ಪ್ರಗತಿಪರ ಚಿಂತಕಿ ಮತ್ತು ಖ್ಯಾತ ಲೇಖಕಿ ಡಾ.ಎಚ್.ಎಸ್.ಅನುಪಮಾ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ವಿಭಾಗದಲ್ಲಿ (ಎನ್.ಇ.ಪಿ) ಆಯೋಜಿಸಿದ್ದ, ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತ್ಯೋತ್ಸವ ಅಂಗವಾಗಿ ‘ಡಾ.ಬಿ.ಆರ್.ಅಂಬೇಡ್ಕರ ಮತ್ತು ಮಹಿಳೆ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಒಂದು ಸಮಾಜದ ಸೌಖ್ಯ ಮತ್ತು ಪ್ರಗತಿಗೆ ಮಹಿಳೆಯರ ಸಬಲೀಕರಣ ಅತೀ ಅಗತ್ಯವಾದದ್ದು. ಮಹಿಳೆಯರಿಗೆ ಸಮರ್ಪಕ ಶಿಕ್ಷಣ, ಉತ್ತಮ ಆರೋಗ್ಯ ಸೇವೆ, ಆರ್ಥಿಕ ಸ್ವಾವಲಂಬನೆ ಮತ್ತು ತೀರ್ಮಾನಾತ್ಮಕ ಹಕ್ಕುಗಳನ್ನು ನೀಡಿದಾಗ ಮಾತ್ರ ಸಮಾನತೆಯ ಪರಿಕಲ್ಪನೆಗೆ ನಿಜವಾದ ಅರ್ಥ ದೊರೆಯುತ್ತದೆ. ಮಹಿಳೆಯರ ಸಬಲೀಕರಣದಿಂದ ಅವರು ತಮ್ಮ ಕುಟುಂಬ ಅಲ್ಲದೆ ಸಮುದಾಯದ ಬೆಳವಣಿಗೆಗೂ ಪ್ರಮುಖ ಶಕ್ತಿಯಾಗಿ ಪರಿಣಮಿಸುತ್ತಾರೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನಾತಕ ವಿಭಾಗದ ಸಂಯೋಜಕಿ ಡಾ. ಜಿ.ಸೌಭಾಗ್ಯ ಮಾತನಾಡಿ, ಇಡೀ ಮಹಿಳಾ ಸಮುದಾಯಕ್ಕೆ…

Read More

ರಸ್ತೆ ಕಾಮಗಾರಿಗೆ ಭೂಮಿಪೂಜೆ | ಶಾಸಕ ಅಶೋಕ ಮನಗೂಳಿ ಭರವಸೆ ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಸಿಸಿ ರಸ್ತೆ,, ಡಾಂಬರೀಕರಣ, ಮಠ ಮಂದಿರಗಳ ಜೀರ್ಣೋದ್ಧಾರ, ಸೇರಿದಂತೆ ಹತ್ತು ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವುದರ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡುತಿದ್ದೇನೆ ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.ಸಮೀಪದ ಗಬಸಾವಳಗಿ ಗ್ರಾಮದ ರಾಷ್ಟ್ರಿಯ ಹೆದ್ದಾರಿಯಿಂದ ಭಂಟನೂರ ಮಾರ್ಗವಾಗಿ ಗೊರವಗುಂಡಗಿ ಗ್ರಾಮದ ವರೆಗೆ ೨೦೨೪-೨೫ನೇ ಸಾಲಿನ ೫೦೫೪-ಅಪೆಂಡೆಕ್ಸ್ -ಇ ಯೋಜನೆಯಡಿಯಲ್ಲಿ ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ನಮ್ಮ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಮಾಜದ ಕಟ್ಟ ಕಡೆಯ ಕುಟುಂಬದವರ ಕಷ್ಟಕ್ಕೆ ಮಿಡಿದಿದೆ ಈ ಉಚಿತ ಯೋಜನೆಗಳ ಜೊತೆಗೆನೆ ಸಿಂದಗಿ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಕಷ್ಟು ಅನುದಾನವನ್ನು ಕೂಡಾ ನೀಡಿದ್ದಾರೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಕ್ಕೂ ಹೆಚ್ಚಿನ ಆದ್ಯತೆ ನೀಡಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸುತ್ತೇನೆ ಸರಕಾರ ಅನುಷ್ಠಾನಗೊಳಿಸಿದ ಕಾಮಗಾರಿಗಳನ್ನು…

Read More

ಬಿಜೆಪಿ ನಿಯೋಗದಿಂದ ಸ್ಪೀಕರ್ ಭೇಟಿ | ೧೮ ಶಾಸಕರ ಅಮಾನತು | ವಿರೋಧ ಪಕ್ಷದ ನಾಯಕ(ಎಲ್‌ಒಪಿ) ಆರ್.ಅಶೋಕ್ ಮನವಿ ಬೆಂಗಳೂರು: ರಾಜ್ಯ ಬಿಜೆಪಿ ನಿಯೋಗವು ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿದ್ದು, 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದೆ.ಮಾರ್ಚ್ 21 ರಂದು, ಒಂದು ಪ್ರಮುಖ ಬೆಳವಣಿಗೆಯೊಂದರಲ್ಲಿ, ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಹರಿದ ಪ್ರತಿಗಳನ್ನು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ.ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಒಳಗೊಂಡ ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸಿ, ಕಲಾಪಕ್ಕೆ ಅಡ್ಡಿಪಡಿಸಿದ ನಂತರ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿದೆ.ಸ್ಪೀಕರ್ ಗೆ ಮನವಿ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ(ಎಲ್‌ಒಪಿ) ಆರ್. ಅಶೋಕ್ ಅವರು, “ನಾವು ಸ್ಪೀಕರ್…

Read More

ಜನಮನ ಗೆದ್ದ ಹಾಲೋಕುಳಿ ಯುವಕರು ಭಾಗಿ | ಶಿಳ್ಳೆ, ಕೇಕೆಗಳ ಸುರಿಮಳೆ | ಸಾವಿರಾರು ಜನರಿಂದ ವೀಕ್ಷಣೆ ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿ ಜಮಖಂಡಿ: ಅಲ್ಲಿ ಸಾವಿರಾರು ಜನರು ಜಮಾಯಿಸಿದ್ದರು. ಕೆಲವರು 52 ಅಡಿ ಎತ್ತರ ಕಂಬವನ್ನು ಎರಲು ಸಿದ್ಧರಾಗಿ ನಿಂತಿದ್ದರು. ಮೈನವಿರೇಳಿಸುವ ಈ ಸಾಹಸದಲ್ಲಿ ಕೆಲವರು ಕಂಬ ಏರಲು ಹೋಗಿ ಬೀಳುತ್ತಿದ್ದರೆ, ಮತ್ತೆ ಕೆಲವರು ಎದ್ದು ಗುರಿ ಮುಟ್ಟಲು ಹರಸಾಹಸ ನಡೆಸುತ್ತಿದ್ದರು. ಕೊನೆಗೆ ಒಬ್ಬ ಗುರಿತಲುಪುತಿದ್ದಂತೆ ಚಪ್ಪಾಳೆˌ ಸಿಳ್ಳೆˌ ಕೇಕೆಗಳ ಸುರಿಮಳೆಯಾಯಿತು.ಇದು ಗ್ರಾಮ ಆರಾಧ್ಯ ದೈವ ಮಾರುತೇಶ್ವರ ಜಾತ್ರೆ ನಿಮಿತ್ತ ಸೋಮವಾರ ನಡೆದ ಹಾಲೋಕುಳಿಯ ಝಲಕ್, ಜಾತ್ರೆ ನಿಮಿತ್ತ ಮೂರು ದಿನ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಹಾಲೋಕುಳಿ ವಿಶೇಷವಾಗಿ ಗಮನ ಸೆಳೆಯಿತು.ಏನಿದು ವಿಶೇಷ: ದೇವಸ್ಥಾನದ ಎದುರು 52 ಅಡಿ ಎತ್ತರದ ಕಂಬವನ್ನು ನೆಟ್ಟು ಅದರ ಮೇಲೆ ವ್ಯಕ್ತಿಯನ್ನು ಕೂಡಿಸಲಾಗಿತ್ತು. ಈ ಕಂಬಕ್ಕೆ ಜಾರುವ ಪದಾರ್ಥ ಲೇಪಿಸಲಾಗಿತ್ತು. ಸ್ಪರ್ಧೆಗೆ ಬಂದ ಯುವಕರು ಈ ಕಂಬ ಹತ್ತಿ ಮೇಲೆ ಕುಳಿತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಮನಗೂಳಿ ರಸ್ತೆಯಲ್ಲಿರುವ ಜಿಲ್ಲಾ ಬಾಲ ಭವನದಲ್ಲಿ ೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗಾಗಿ ೨೦೨೫-೨೬ನೇ ಸಾಲಿನ ಬೇಸಿಗೆ ತರಬೇತಿ ಶಿಬಿರ ಏರ್ಪಡಿಸಲಾಗಿದೆ.ದಿನಾಂಕ: ೨೩-೦೪-೨೦೨೫ ರಿಂದ ೦೭-೦೫-೨೦೨೫ರವರಗೆ ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೧.೩೦ ರವರೆಗೆ ನಡೆಯುವ ಈ ಶಿಬಿರದಲ್ಲಿ ಮಕ್ಕಳಿಗೆ ಚಿತ್ರಕಲೆ, ನೃತ್ಯ, ಸಂಗೀತ, ಕರಾಟೆ ಹಾಗೂ ಕರಕುಶಲ ಕಲೆ ಕುರಿತಾಗಿ ತರಬೇತಿ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೭೭೬೦೪೦೨೨೩೯ಗ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಇದೇ ಏಪ್ರಿಲ್ ೨೪ ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಇದೇ ಏಪ್ರಿಲ್ ೨೪ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲು ನಿರ್ಣಯಿಸಲಾಗಿದ್ದು, ಜನ್ಮದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.ಅಂದು ಡಾ.ರಾಜ್ ಕುಮಾರ್ ಅವರ ಚಲನಚಿತ್ರಗಳ ಗೀತಗಾಯನ ನಡೆಯಲಿದ್ದು, ಡಾ.ರಾಜ್ ಕುಮಾರ್ ಅಭಿಮಾನಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಸಭೆ ಮೂಲಕ ಮನವಿ ಮಾಡಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕ್ರೀಡಾಧಿಕಾರಿ ರಾಜಶೇಖರ್…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಭಾರತೀಯ ವಕೀಲರ ಪರಿಷತ್ತಿನ ಸಹ ಅಧ್ಯಕ್ಷ ಮತ್ತು ರಾಜ್ಯದ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಸದಾಶಿವರೆಡ್ಡಿ ಅವರ ಮೇಲೆ ಅಪರಿಚಿತರು ದಾಳಿ ಮಾಡಿ ಭೀಕರ ಹಲ್ಲೆ ಮಾಡಿರುವದನ್ನು ಇಲ್ಲಿನ ವಕೀಲರ ಸಂಘವು ಬಲವಾಗಿ ಖಂಡಿಸಿತು.ಪಟ್ಟಣದ ನ್ಯಾಯಾಲಯದ ಕಲಾಪಗಳಲ್ಲಿ ಎಲ್ಲ ನ್ಯಾಯವಾದಿಗಳು ಕೈಗೆ ಕೆಂಪು ಪಟ್ಟಿ ಕಟ್ಟಿ ಮೌನ ಪ್ರತಿಭಟನೆ ಮಾಡಿದರು.ಈ ಕುರಿತು ವಕೀಲರ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಪತ್ರಿಕೆಯೊಂದಿಗೆ ಮಾತನಾಡಿ, ಈ ಘಟನೆ ಅಮಾನವೀಯ. ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಯಲ್ಲಿದ್ದರೂ ಇಂತಹ ಘಟನೆಗಳು ನಡೆಯುತ್ತಿರೋದು ವಕೀಲರ ಸಮುದಾಯಕ್ಕೆ ಆತಂಕವನ್ನುಂಟು ಮಾಡಿದೆ. ಈ ಘಟನೆಯಲ್ಲಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಾಗಬೇಕು ಎಂದರು.ಸಂಘದ ವತಿಯಿಂದ ಕೈಗೆ ಕೆಂಪು ಪಟ್ಟಿ ಧರಿಸಿಯೇ ತಹಸೀಲ್ದಾರ ಕಚೇರಿಯವರೆಗೆ ಕಾಲ್ನಡಿಗೆಯ ಮೂಲಕ ಸಾಗಿ ತಹಸೀಲ್ದಾರ ಬಲರಾಮ ಕಟ್ಟಿಮನಿ ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಮತ್ತು ಗೃಹ ಮಂತ್ರಿಗಳಿಗೆ ಘಟನೆಯ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರ ಸಲ್ಲಿಸಿದರು.ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚೆಗೆ ಸಿ.ಇ.ಟಿ ಪರೀಕ್ಷೆಯಲ್ಲಿ ಶಿವಮೊಗ್ಗ ಮತ್ತು ಬೀದರನಲ್ಲಿ ವಿಪ್ರ ಸಮಾಜದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ ಪರೀಕ್ಷೆಗೆ ಹಾಜರಾಗುವಂತೆ ಮಾಡಿದ ಕುಕೃತ್ಯವನ್ನು ಖಂಡಿಸಿ ಬ್ರಾಹ್ಮಣ ಸಮಾಜ ಹಾಗೂ ವಿವಿಧ ಸಮಾಜದ ಹಲವು ಸಂಘಟನೆಗಳು ಜಿಲ್ಲಾ ವಕೀಲರ ಸಂಘದ ಸಹಯೋಗದೊಂದಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಭಾವಸಾರ ಕ್ಷತ್ರೀಯ ಸಮಾಜದ ಅಧ್ಯಕ್ಷ ರಾಜೇಶ ದೇವಗಿರಿ ಮಾತನಾಡಿ, ನಮ್ಮ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತ ಕೆಲಸವನ್ನು ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಡಿದ್ದು, ಈ ಹೇಯಕೃತ್ಯ ಎಂದು ಆರೋಪಿಸಿ ತಪ್ಪಿತಸ್ಥತ್ತರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನೂವರೆಗೂ ಈ ವಿಷಯಕ್ಕೆ ಸಂಬಂಧಪಟ್ಟಂತೆ ಏನೂ ಪ್ರತಿಕ್ರಿಯೆ ನೀಡಿಲ್ಲ. ಇದನ್ನು ನೋಡಿದರೆ ಅವರ ಬೆಂಬಲ ಈ ರೀತಿ ವರ್ತಿಸಿದ ತಪ್ಪಿತಸ್ಥರನ್ನು ಬಚಾವು ಮಾಡುತ್ತಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣುತ್ತದೆ. ಸರ್ಕಾರವು ಈ ಸಮಸ್ಯೆಯನ್ನು ಶೀಘ್ರ ಪರಿಹರಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ…

Read More