Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಶಾಸಕ ಬಸನಗೌಡ ಪಾಟೀಲ ಯತ್ನಾಳ ಹತ್ಯೆ ವಿಚಾರಕ್ಕೆ ಸಂಬಂಧಿಸಿದ ಆಡಿಯೊ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಹತ್ಯೆಗೆ ಸಂಬಂಧಿಸಿದಂತೆ, ಮುಸ್ಲಿಂ ಮುಖಂಡರು ನಡೆಸಿದ ಸಭೆಯಲ್ಲಿ ನಿರ್ಧರಿಸಿದ್ದ ವಿಷಯಗಳನ್ನು ತಿಳಿಸಲು, ಅದೇ ಸಭೆಯಲ್ಲಿದ್ದ ವ್ಯಕ್ತಿಯೇ ಆಡಿಯೋ ಮಾಡಿ ಹಂಚಿಕೊಂಡಿರುವ ಆತಂಕಕಾರಿ ವಿಷಯದಿಂದ ಇಡೀ ಹಿಂದೂ ಸಮುದಾಯವೇ ಆತಂಕದಲ್ಲಿದ್ದು, ಈ ಗಂಭೀರ ಪ್ರಕರಣವನ್ನು ಎನ್.ಐ.ಎ ತನಿಖೆ ವಹಿಸಿ, ಸತ್ಯಾಸತ್ಯತೆ ಬಯಲಿಗೆಳೆಯಬೇಕು ಎಂದು ಬಿಜೆಪಿ ನಗರ ಮಂಡಲ ಮಾಜಿ ಅಧ್ಯಕ್ಷ ಶಂಕರ ಹೂಗಾರ, ಮಹಾನಗರ ಪಾಲಿಕೆ ಸದಸ್ಯರಾದ ಕಿರಣ ಪಾಟೀಲ, ರಾಜಶೇಖರ ಕುರಿಯವರ, ಪ್ರೇಮಾನಂದ ಬಿರಾದಾರ, ದಾದಾಸಾಹೇಬ ಬಾಗಾಯತ, ಸಂತೋಷ ಪಾಟೀಲ ತಿಳಿಸಿದ್ದಾರೆ.ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಸ್ಲಿಂ ಸಮುದಾಯದವರು ಈಚೆಗೆ ನಗರದಲ್ಲಿ ಮುಸ್ಲಿಂ ಮುತೈದಾ ಕೌನ್ಸಿಲ್ ವತಿಯಿಂದ (ಎಂ.ಎಂ.ಸಿ) ಸಭೆ ನಡೆಸಿ, ಏಪ್ರಿಲ್ ೧೫ ರಂದು ವಿಜಯಪುರ ನಗರದಲ್ಲಿ ಬಂದ್ ನಡೆಸಲು ನಿರ್ಧರಿಸಿ, ಅಂದು ೧ ಲಕ್ಷ ಜನರು ಸೇರಿ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ರ‍್ಯಾಲಿ ಮೂಲಕ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ (ಬ್ಯಾಡಗಿ) ಅವರು, ಏ.೧೫-೧೬ರಂದು ವಿಜಯಪುರ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಏಪ್ರಿಲ್ ೧೫ರಂದು ರಾತ್ರಿ ೭ ಗಂಟೆಗೆ ವಿಜಯಪುರಕ್ಕೆ ಆಗಮಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಏಪ್ರಿಲ್ ೧೬ರಂದು ಬೆಳಿಗ್ಗೆ ೮-೩೦ಕ್ಕೆ ಇಂಡಿ ತಾಲೂಕಿನ ಬಬಲಾದಿ ಗ್ರಾಮಕ್ಕೆ ಭೇಟಿ ನೀಡಿ ಶಕ್ತಿ ಯೋಜನೆಯಡಿ ಹೋಳಿಗೆ ತಯಾರಿಸಿ ಸ್ವಾವಲಂಬಿಗಳಾಗಿರುವ ಬಬಲಾದಿ ಗ್ರಾಮದ ಒಡಲ ಧ್ವನಿ ಮಹಿಳಾ ಸಂಘದ ಸದಸ್ಯರೊಂದಿಗೆ ಚರ್ಚೆ-ಸಂವಾದ ನಡೆಸಲಿದ್ದಾರೆ. ಬೆಳಿಗ್ಗೆ ೧೦-೩೦ಕ್ಕೆ ಚಡಚಣ ತಾಲೂಕಿನ ಶಿರಾಡೋಣ ಗ್ರಾಮಕ್ಕೆ ತೆರಳಿ ಗೃಹ ಲಕ್ಷ್ಮಿ ಯೋಜನೆ ಹಣ ಸಂಗ್ರಹಣೆ ಮೂಲಕ ಮನೆ ನಿರ್ಮಾಣ ಮಾಡಿಕೊಂಡ ಫಲಾನುಭವಿಗಳ ಮನೆ ವೀಕ್ಷಣೆ, ಗ್ಯಾರಂಟಿ ಯೋಜನೆಗಳ ಕುರಿತು ಶಿರಾಡೋಣ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಚರ್ಚೆ-ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ ೧ ಗಂಟೆಗೆ ಶಿರಾಡೋಣದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ ೧೪ರಂದು ನಗರದ ಬಿ.ಆರ್.ಅಂಬೇಡ್ಕರ್ ವೃತ್ತದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೮ ಗಂಟೆಗೆ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ, ಬೆಳಿಗ್ಗೆ ೮:೩೦ಕ್ಕೆ ಡಾ. ಬಿ.ಆರ್ ಅಂಬೇಡ್ಕರ ಅವರ ಭಾವಚಿತ್ರ ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ನಗರದ ಜಲನಗರದ ಬುದ್ಧವಿಹಾರದಿಂದ ಆರಂಭಗೊಂಡು, ಬಾಗಲಕೋಟೆ ಕ್ರಾಸ್, ಕೆ.ಸಿ.ಮಾರ್ಕೆಟ್,ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮೂಲಕ ಡಾ. ಬಿ.ಆರ್ ಅಂಬೇಡ್ಕರ್ ಭವನದವರೆಗೆ ಜರುಗಲಿದೆ. ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆಯ ಉದ್ಘಾಟನಾ ಕಾರ್ಯಕ್ರಮ ನಗರದ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದ ಆವರಣದಲ್ಲಿ ಅಂದು ಬೆಳಿಗ್ಗೆ ೧೦ಕ್ಕೆ ನಡೆಯಲಿದೆ ಹಾಗೂ ಜಯಂತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ ೧೦:೩೦ ಗಂಟೆಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ನವಬಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಬಿಎ, ಬಿಎಸ್‌ಸಿ, ಬಿಕಾಂ, ಬಿಬಿಎ ಮತ್ತು ಬಿಸಿಎ ಹಾಗೂ ಸಂಜೆ ಕಾಲೇಜಿನ ಬಿಕಾಂ ಮತ್ತು ಬಿಸಿಎ ಪದವಿ ಪ್ರಥಮ ವರ್ಷದ ಪ್ರವೇಶಾವಕಾಶ ಆರಂಭಿಸಲಾಗಿದೆ.ಜಿಲ್ಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರವೇಶ ಪಡೆದುಕೊಳ್ಳಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: ೯೪೮೦೧೯೯೧೯೪, ೮೪೯೬೦೧೨೪೨೮ ಸಂಖ್ಯೆಗೆ ಸಂಪರ್ಕಿಸುವಂತೆ ಕಾಲೇಜ್ ಪ್ರಾಂಶುಪಾಲ ಡಾ.ಎ.ಆಯ್.ಹಂಜಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಚಿವರಿಂದ ಅಭಿವೃದ್ದಿ ಕಾರ್ಯಗಳ ಕುರಿತು ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ನಗರದ ಆನಂದ ಮಹಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶನಿವಾರ ಬೆಳಿಗ್ಗೆ ಐತಿಹಾಸಿಕ ಆನಂದ ಮಹಲ್‌ಗೆ ಭೇಟಿ ನೀಡಿ ಕಟ್ಟಡವನ್ನು ಸಮಗ್ರವಾಗಿ ವೀಕ್ಷಣೆ ಮಾಡಿದ ಅವರು, ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಉಪಯೋಗ ಮಾಡಿಕೊಳ್ಳುವುದರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಅಮೀನ ಹುಲ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಬಾಗಲಕೋಟೆ ಜಿಲ್ಲೆಯಲ್ಲಿ 742 ನ್ಯಾಯಬೆಲೆ ಅಂಗಡಿಗಳಲ್ಲಿ ಪಿಒಎಸ್ ವ್ಯವಸ್ಥೆ ಅಳವಡಿಸಲಾಗಿದೆ. ಇಲ್ಲಿಯವರೆಗೆ 23,026 ಪಡಿತರ ಚೀಟಿ ಸದಸ್ಯರು ಇನ್ನು ಇ-ಕೆವೈಸಿ ಮಾಡಿಸಿಕೊಂಡಿಲ್ಲ. ಕೂಡಲೇ ಇ-ಕೆವೈಸಿ (ಬಯೋಮೆಟ್ರಿಕ್) ಮಾಡಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೆಶಕರಾದ ಶ್ರೀಶೈಲ ಭೀ ಕಂಕಣವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಮಖಂಡಿˌ ಬಾದಾಮಿˌ ಬಾಗಲಕೋಟೆˌ ಬೀಳಗಿˌ ಹುನಗುಂದ, ಮುಧೋಳ, ಇಳಕಲ್, ಗುಳೇದಗುಡ್ಡ ಮತ್ತು ರಬಕವಿ-ಬನಹಟ್ಟಿ ತಾಲ್ಲೂಕುಗಳಲ್ಲಿ 23,026 ಸದಸ್ಯರು ಬಾಕಿ ಇದ್ದಾರೆ. ಏ.30ರೊಳಗೆ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಈ ಸೇವೆಗೆ ಯಾವುದೇ ಶುಲ್ಕವಿಲ್ಲ. ಇ-ಕೆವೈಸಿ ಪ್ರಕ್ರಿಯೆ ಕೈಗೆತ್ತಿಕೊಳ್ಳದಿದ್ದಲ್ಲಿ, ಪಡಿತರ ಚೀಟಿಯಿಂದ ಹೆಸರು ತೆಗೆದುಹಾಕುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಚಿಂತನೆ- ರೇಣುಕಾ ಬಾಗಲಕೋಟಿಸೋಲಾಪುರ ಉದಯರಶ್ಮಿ ದಿನಪತ್ರಿಕೆ ಶರಣ ಹಡಪದ ಅಪ್ಪಣ್ಣನವರ ವಿವರಣೆ 12ನೇ ಶತಮಾನದಲ್ಲಿ ಅಪ್ಪ ಬಸವಣ್ಣನವರ ಜೊತೆ ಒಡನಾಡಿಯಾಗಿದ್ದರು ಆಪ್ತ ಕಾರ್ಯದರ್ಶಿಗಳಾಗಿದ್ದರು.ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸವಿನಾಳ ಗ್ರಾಮದ ಚೆನ್ನವೀರಪ್ಪ ದೇವಕ್ಕಮ್ಮನವರ ಮಗ ಇವರುಇವರ ಪತ್ನಿ ಲಿಂಗಮ್ಮ ಇವರ ಅಂಕಿತನಾಮ ಬಸವ ಪ್ರೀಯ ಕೂಡಲ ಚನ್ನ ಬಸವಣ್ಣ, ಇವರು 250 ಹೆಚ್ಚು ವಚನಗಳನ್ನು ರಚಿಸಿದ್ದಾರೆ.ಅಪ್ಪಣ್ಣ ಪ್ರಿಯ ಚೆನ್ನಬಸವಣ್ಣ ಎಂಬ ಅಂಕಿತನಾಮದಲ್ಲಿ ಇವರ ಧರ್ಮಪತ್ನಿ ಶರಣೆ ಲಿಂಗಮ್ಮನವರು 114 ವಚನಗಳನ್ನು ರಚಿಸಿದ್ದಾರೆ.ಸಮರಸದ ಸಂಸಾರ ನಡೆಸಿದವರು ಶರಣ ದಂಪತಿಗಳು.ವಚನ ವಿಶ್ಲೇಷಣೆಅಯ್ಯಾ ಆರೂ ಇಲ್ಲದ ಅರಣ್ಯದಲ್ಲಿನಾನಾಡಿಯಿಟ್ಟು ನಡೆವುತಿರ್ದೆ ನಯ್ಯಾಮುಂದೆ ಬರೆ ಬರೆ ಮಹಾ ಸರೋವರವ ಕಂಡೆಸರೋವರದೊಳಗೊಂದು ಹಿರಿಯ ಮೃಗವ ಕಂಡೆಆ ಮೃಗಕ್ಕೆ ಕೊಂಬುಂಟು ತಲೆ ಯಿಲ್ಲಬಾಯುoಟು ಕಣ್ಣಿಲ್ಲ ಕೈಯುಂಟು ಹಸ್ತವಿಲ್ಲಕಾಲುಂಟು ಹೆಜ್ಜೆಯಿಲ್ಲ ಒಡ ಲುoಟು ಪ್ರಾಣವಿಲ್ಲಇದ ಕಂಡು ನಾ ಹೆದರಿ ಹವ್ವನೆ ಹಾರಿ ಬೆದರಿ ಬಿದ್ದೆನಯ್ಯಾಆಗೆನ್ನ ಹೆತ್ತ ತಾಯಿ ಬಂದು ಎತ್ತಿ ಕುಳ್ಳಿರಿಸಿಚಿತ್ತ ಮೂಲಾಗ್ನಿಯ ಒತ್ತಿ ಉರುಹಿದರೆಇವೆಲ್ಲವು ಸುಟ್ಟು ಬಟ್ಟ ಬಯಲಾದವುಆ ಬಟ್ಟ…
ಲೇಖನ- ಡಾ ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲಿಮಂಗಲ ಪಾಂಡೆ ಆಗ್ರರು. (ದಿ. ೮ ಎಪ್ರಿಲ್ ೧೮೫೭ ) ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮ ಎಂದೇ ಪ್ರಖ್ಯಾತರು. ಈಸ್ಟ್ ಇಂಡಿಯಾ ಕಂಪನಿ ಯ ಬ್ರಿಟಿಷರ ಸೈನ್ಯದಲ್ಲಿ ಸಿಪಾಯಿಯಾಗಿದ್ದರು. ೧೮೫೭ ರಲ್ಲಿ ಬ್ರಿಟಿಷರ ಮೇಲೆ ಮಾಡಿದ ಆಕ್ರಮಣವು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ರೂಪವನ್ನು ಪಡೆಯಿತು. ಅವರು ವ್ಯಾಪಕವಾಗಿ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರರು ಎಂದು ಕರೆಯಲಾಗುತ್ತದೆ. ಭಾರತ ಸರ್ಕಾರ ವಿಶಿಷ್ಠ ಸ್ವಾತಂತ್ರ್ಯ ಹೋರಾಟಗಾರ ಎಂದು ಸ್ಮರಣೆಗಾಗಿ ಭಾರತೀಯ ಅಂಚೆ ಚೀಟಿಯ ಜಾರಿ ಮಾಡಿದೆ. ಮೀರಿದ ಅವರ ಜೀವನ ಮತ್ತು ಕ್ರಿಯೆಗಳನ್ನು ಬೆಳ್ಳಿ ತೆರೆಗೆ ಮಾರ್ಪಡಿಸಲಾಗಿದೆಮಂಗಲ ಪಾಂಡೆ – ಪ್ರಥಮ ಸ್ವಾತಂತ್ರ್ಯ ಹೋರಾಟಗಾರಆರಂಭಿಕ ವರ್ಷಗಳಲ್ಲಿ ಮಂಗಲ್ ಪಾಂಡೆ ಒಂದು ಭೂಮಿಹಾರ್ ಬ್ರಾಹ್ಮಣ ಕುಟುಂಬಕ್ಕೆ ಭಾರತದ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ, ನಾಗವ ಹಳ್ಳಿಯಲ್ಲಿ ಜುಲೈ ೧೮೨೭ ರಂದು ಜನಿಸಿದರು. ಅವರ ತಂದೆ, ದಿವಾಕರ್ ಪಾಂಡೆ, ವೃತ್ತಿಯ ಮೂಲಕ ರೈತ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ “ನ್ಯಾಯ ಕ್ರಾಂತಿ” ಸಂಘವು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಆಗ್ರಹಿಸಿದರು. ಶುಕ್ರವಾರ ಪಟ್ಟಣದ ಉಪ ತಹಸಿಲ್ದಾರರ ಮುಖಾಂತರ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಬಂದೇನವಾಜ್. ಕೆ. ನಾಶಿ, ಕೇಂದ್ರ ಬಿಜೆಪಿ ಸರ್ಕಾರವು ವಕ್ಸ್ ತಿದ್ದುಪಡೆ ಕಾಯ್ದೆ ಯನ್ನು ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಪಾಸ್ ಮಾಡಿ ಸಂವಿಧಾನಕ್ಕೆ ದ್ರೋಹ ಬಗೆದು ಐತಿಹಾಸಿಕ ಅನ್ಯಾಯವನ್ನು ಮಾಡಿದೆ, ಭಾರತ ದೇಶ ಸ್ವತಂತ್ರ ದಿಂದ ಇಲ್ಲಿಯ ವರೆಗೆ ಇಂತಹ ಕರಾಳ ದಿನವನ್ನು ಕಂಡಿರಲಿಲ್ಲ ಸಂವಿಧಾನದ ಅನುಚ್ಛೇಧ 25 ರಿಂದ 28 ರನ್ವಯ ಧಾರ್ಮಿಕ ಸ್ವಾತಂತ್ರವನ್ನು ಕೊಟ್ಟಿದೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಸ್ಪಷ್ಟವಾಗಿರುವ ಸಂವಿಧಾನವನ್ನು ಉಲ್ಲಂಘಿಸಿ ಮುಸಲ್ಮಾನರನ್ನು ಹತ್ತಿಕ್ಕುವ ಏಕೈಕ ದುರುದ್ದೇಶದಿಂದ ಈ ಕಾನೂನನ್ನು ಪಾಸು ಮಾಡುವ ಮೂಲಕ ಮುಸಲ್ಮಾನರ ಧಾರ್ಮಿಕ ಆಸ್ತಿಗಳನ್ನು ಕೊಳ್ಳೆ ಹೊಡೆಯುವ ದುಷ್ಟ ಸಂಚು ರೂಪಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು. ಇದು ಸಂಪೂರ್ಣ ಸಂವಿಧಾನ ವಿರೋಧಿ ಯಾಗಿದ್ದು ಇದನ್ನು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಇಂಗಳೇಶ್ವರ ರಸ್ತೆಯಲ್ಲಿರುವ ನಾಗಾವಿ ಯಲ್ಲಮ್ಮದೇವಿ ಜಾತ್ರಾಮಹೋತ್ಸವ ಶುಕ್ರವಾರ ಸಂಭ್ರಮ, ಸಡಗರದಿಂದ ಜರುಗಿತು. ಜಾತ್ರೆಯಂಗವಾಗಿ ಪಲ್ಲಕ್ಕಿ ಉತ್ಸವದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ತಾಯಿಜೋಗಮ್ಮರ ಕುಣಿತ, ವಿವಿಧ ವಾದ್ಯ ಮೇಳದೊಂದಿಗೆ ಸಂಭ್ರಮದಿಂದ ಜರುಗಿತು.ನಾಗಾವಿ ಯಲ್ಲಮ್ಮ ದೇವಸ್ಥಾನದಿಂದ ಐದು ಕಳಸ ಹಾಗೂ ಪಲ್ಲಕ್ಕಿ ಉತ್ಸವವು ಪಟ್ಟಣದ ಬಸವೇಶ್ವರ ವೃತ್ತ, ಅಗಸಿ, ಮಹಾರಾಜರ ಮಠದ ಮಾರ್ಗ, ಬಸವಜನ್ಮ ಸ್ಮಾರಕ ಮಾರ್ಗ, ವಿಜಯಪುರ ಮಾರ್ಗವಾಗಿ ಪುನಃ ಬಸವೇಶ್ವರ ವೃತ್ತಕ್ಕೆ ಬಂದು ಬಸವೇಶ್ವರ ದೇವಸ್ಥಾನದ ಬಸವತೀರ್ಥ ಭಾವಿಗೆ ಆಗಮಿಸಿದ ನಂತರ ಗಂಗಾಸ್ಥಳ ಮಾಡಿಕೊಂಡ ನಂತರ ಡೊಳ್ಳು, ಚೌಡಕಿ ಸೇರಿದಂತೆ ಸುಮಂಗಲೆಯರ ಆರತಿಯೊಂದಿಗೆ ಬಸವೇಶ್ವರ ವೃತ್ತದ ಮಾರ್ಗವಾಗಿ ಇಂಗಳೇಶ್ವರ ರಸ್ತೆಯಲ್ಲಿರುವ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಕಳಸಗಳು, ನಾಗಾವಿ ಯಲ್ಲಮ್ಮದೇವಿ ಪಲ್ಲಕ್ಕಿ ಉತ್ಸವ ತಲುಪಿತು. ಕಳಸಗಳಿಗೆ ಪೂಜೆ ನೆರವೇರಿಸಿದ ನಂತರ ದೇವಸ್ಥಾನಕ್ಕೆ ಕಳಸಗಳನ್ನು ಏರಿಸಲಾಯಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಜರುಗಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ,…
