Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಸಿಂದಗಿ ಪಟ್ಟಣದಲ್ಲಿ ನಿಗಮದ ಸಿಬ್ಬಂದಿಗಳ ನೂತನ ವಸತಿ ಗೃಹಗಳ ಉದ್ಘಾಟನೆ ಹಾಗೂ ಬಸ್ ನಿಲ್ದಾಣಕ್ಕೆ ಪೂಜ್ಯ ಶ್ರೀ ಚನ್ನವೀರ ಸ್ವಾಮಿ ಬಸ್ ನಿಲ್ದಾಣ ಸಿಂದಗಿ ನಾಮಕರಣ ಸಮಾರಂಭ ಏಪ್ರಿಲ್ ೮ ರಂದು ಸಿಂದಗಿಯಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಮಧ್ಯಾಹ್ನ ೧ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಸಾರಿಗೆ, ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉಪಸ್ಥಿತರಿರಲಿದ್ದಾರೆ.ಕಾರ್ಯಕ್ರಮದಲ್ಲಿ ಸಿಂದಗಿ ಶಾಸಕರಾದ ಅಶೋಕ ಮನಗೂಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ ಎನ್., ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದ ರಮೇಶ ಜಿಗಜಿಣಗಿ,…
ಉದ್ಯೋಗ ಮೇಳ ೨೦೨೫ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದ ರಮೇಶ ಜಿಗಜಿಣಗಿ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿಯೇ ಹಿಂದುಳಿದ ಪ್ರದೇಶವಾದ ಚಡಚಣ ಭಾಗದ ನಿರುದ್ಯೋಗಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿ ಉದ್ಯೋಗಾವಕಾಶ ಕಲ್ಪಿಸುವಂತೆ ಸಂಸದರಾದ ರಮೇಶ ಜಿಗಜಿಣಗಿ ಹೇಳಿದರು.ಸೋಮವಾರ ಚಡಚಣ ಗ್ರಾಮದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ ೨೦೨೫ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ಜಿಲ್ಲೆಯಲ್ಲಿಯೇ ಅತೀ ಹಿಂದುಳಿದ ತಾಲೂಕಾಗಿದ್ದು ಇಲ್ಲಿ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಪ್ರಥಮ ಆಧ್ಯತೆ ನೀಡಿ ಹೆಚ್ಚಿನ ಸಂಖ್ಯೆ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವಂತೆ ಅವರು ಉದ್ಯೋಗದಾತರಿಗೆ ಮನವಿ ಮಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಾಗಠಾಣ ಮತ ಕ್ಷೇತ್ರದ ಶಾಸಕರಾದ ವಿಠ್ಠಲ ದೋಂಡಿಬಾ ಕಟಕದೊಂಡ ಮಾತನಾಡಿ, ಉದ್ಯೋಗದಾತರು ತಮ್ಮ ಮನೆ ಬಾಗಿಲಿಗೆ ಉದ್ಯೋಗಗಳನ್ನು ನೀಡಲು ಇಲ್ಲಿ ಆಗಮಿಸಿದ್ದಾರೆ ವಿದ್ಯಾರ್ಥಿಗಳು ತಮ್ಮ…
ಪುರಾಣ ಮಹಾಮಂಗಲೋತ್ಸವ | ಗ್ರಾಮದ ೫೦ ಕ್ಕೂ ಹೆಚ್ಚು ಸರಕಾರಿ ನೌಕರರಿಗೆ ಸನ್ಮಾನ | ಗಮನ ಸೆಳೆದ ನಾಟಕ ಪ್ರದರ್ಶನ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸಮಾಜದಲ್ಲಿ ಇಂದು ಅವಿನಾಭಾವ ಸಂಬಂಧದ ಕೊರತೆ ಎದ್ದು ಕಾಣುತ್ತಿದೆ, ಜನರಲ್ಲಿ ಪ್ರೀತಿ ವಿಶ್ವಾಸ ಕೊರತೆ ಕಾಣಿಸುತ್ತಿದೆ. ಯುವ ಜನಾಂಗ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುತ್ತಾ ಉತ್ತಮ ವ್ಯಕ್ತಿತ್ವ ರೂಪಿಸಲು ಕಾರಣರಾದ ತಂದೆ, ತಾಯಿ, ಗುರುಹಿರಿಯರನ್ನು ಗೌರವಿಸುವಂತಾಗಬೇಕು ಎಂದು ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ ಲಿಂಗದಳ್ಳಿ ಹೇಳಿದರು.ರವಿವಾರ ಸಂಜೆ ಕಲಕೇರಿ ಸಮೀಪದ ಬೆಕಿನಾಳ-ವಣಕ್ಯಾಳದ ಮಾತೆ ಮಹೇಶ್ವರಿ ದೇವಸ್ಥಾನದಲ್ಲಿ ಹಮ್ಮಿಕೊಂಡ ಸದ್ಗುರು ಶ್ರೀ ಸಿದ್ದಾರೂಢ ಮಹಾಸ್ವಾಮಿಗಳವರ ಪುರಾಣದ ಮಹಾಮಂಗಲೋತ್ಸವ ಹಾಗೂ ಧರ್ಮ ಸಭೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಾನವ ಜನ್ಮದಲ್ಲಿ ಮಾನವೀಯತೆ ದೊಡ್ಡದು ಎಂಬುದನ್ನು ಸನಾತನ ಸಂಸ್ಕೃತಿ ಪ್ರತಿನಿದಿಸುತ್ತದೆ. ಧರ್ಮ ಸಂಸ್ಕೃತಿಗೆ ಪೂರಕವಾದ ಶಿಕ್ಷಣದ ಅವಶ್ಯಕತೆ ಇದ್ದು ಮುಖ್ಯವಾಗಿ ಜೀವನದಲ್ಲಿ ಸೋತು ಗೆದ್ದಾಗ ಮಾತ್ರ ಜೀವನದ ಮೌಲ್ಯಗಳನ್ನು ಅರಿಯಲು ಸಾಧ್ಯವಿದೆ. ಮಾತಾ ಪಿತರು ಮಕ್ಕಳಿಗೆ ಶಿಕ್ಷಣದ…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ತಾಲೂಕಾ ಆಡಳಿತದ ವ್ಯವಸ್ಥೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮತಿ (ಪ್ರೋ.ಬಿ.ಕೃಫ್ಣಪ್ಪ ಬಣ) ವಲಯ ಶಾಖೆ ಕಲಕೇರಿ ಹಾಗೂ ವಿವಿಧ ಸಂಘಟನೆಗಳ ಪ್ರಗತಿಪರ ಹೋರಾಟಗಾರರು, ರೈತಪರ ಹೋರಾಟಗಾರರ ನೇತೃತ್ವದಲ್ಲಿ ತಾಳಿಕೋಟಿ ತಾಲೂಕಿನ ಕಲಕೇರಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ನಾಗರಿಕರ ಅನಕೂಲಕ್ಕಾಗಿ ವಿವಿಧ ಬೇಡಿಕೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರತಿಭಟನಾ ರ‍್ಯಾಲಿ ಮಾಡಲಾಯಿತು.ಕಲಕೇರಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಪೊಲೀಸ್ ಠಾಣೆಯ ಮಾರ್ಗವಾಗಿ ಬಸ್ ನಿಲ್ದಾಣದಲ್ಲಿ ಸಭೆ ಸೇರಿದ ಪ್ರತಿಭಟನಾಕಾರರು ಸದರಿ ನ್ಯಾಯಯುತವಾದ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡು ಉಪ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಿಗೆ ಸಮಸ್ಯೆಗಳು ಹೆಚ್ಚಾದವು ಹೊರತಾಗಿ ಕಡಿಮೆ ಆಗಲಿಲ್ಲ. ಈಗ ಆಡಳಿತ ನಡೆಸುತ್ತಿರುವ ತಾಲೂಕ ಆಡಳಿತ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಕಡೆ ಗಮನಹರಿಸಿ ಸದರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ…
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ತವ್ಯದ ಜೊತೆ ಕುಟುಂಬ ನಿರ್ವಹಣೆಗೂ ಪ್ರಾಧಾನ್ಯತೆ ಕೊಡಿ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ‌್ ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲಿಕರಣ ಹಾಗೂ ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದೊಂದಿಗೆ ಸೋಮವಾರ ನಡೆದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಒತ್ತಡದ ಮಧ್ಯೆ ಕರ್ತವ್ಯ ನಿರ್ವಹಣೆ ಮಾಡುವದರಿಂದ ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ತೇಜನ ನೀಡುತ್ತವೆ. ಈ ಒತ್ತಡದ ಮಧ್ಯೆಯೂ ಕುಟುಂಬಕ್ಕೂ ಸಮಯವನ್ನು ಮೀಸಲಿಡಬೇಕು. ನೌಕರರ ಎಲ್ಲ ಸಮಸ್ಯೆಗಳಿಗೆ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ನಿರಂತರವಾಗಿ ನನ್ನ ಗಮನಕ್ಕೆ ತರುತ್ತಿದ್ದು, ನಾನು ಸಹ ಸ್ಪಂದಿಸುತ್ತಿದ್ದೇನೆ ಎಂದರು.ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಮಾತನಾಡಿ, ಜಿಲ್ಲಾಡಳಿತದಿಂದ ಎಲ್ಲ ಇಲಾಖೆಗಳ ಕ್ರೀಡಾಕೂಟಗಳಿಗೆ ಉತ್ತೇಜನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸನಾತನ ಧರ್ಮದಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನವಿದೆ. ಗುರುವಿನ ನಡೆ, ನುಡಿ, ಆಚಾರ, ವಿಚಾರ ಬಹಳ ದೊಡ್ಡದು. ತ್ರಿವಿಧ ದಾಸೋಹದ ಮೂಲಕ ನಾಡಿನ ಜ್ಞಾನದೀಪವಾಗಿ ಬೆಳಗಿದ ಪುಣ್ಯ ಸಂತರು ನಡೆದಾಡಿದ ದೇವರು ಡಾ. ಶ್ರೀ ಶಿವಕುಮಾರ ಸ್ವಾಮಿಗಳು ಎಂದು ಡಾ. ವಿ.ಡಿ. ಐಹೊಳ್ಳಿ ಹೇಳಿದರು.ನಗರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಶಿವಾನುಭವ ಗೋಷ್ಠಿಯಲ್ಲಿ ಪೂಜ್ಯ ಡಾ. ಶಿವಕುಮಾರ ಸ್ವಾಮಿಗಳ ಬದುಕು ಕುರಿತು ಮಾತನಾಡಿದ ಅವರು ಪೂಜ್ಯರು ಜೀವನದ ಯಾವುದೇ ಹಂತದಲ್ಲಿದ್ದರೂ ತಮ್ಮ ಸತ್ಯ, ನಿಷ್ಠೆ, ಶ್ರದ್ದೆಯನ್ನು ಬಿಟ್ಟವರಲ್ಲ ಅವರು ಹೆಜ್ಜೆ ಇಟ್ಟ ಪ್ರತಿ ಜಾಗವನ್ನು ಪಾವನ ಮಾಡಿದ ಪುಣ್ಯ ಪುರುಷ ನಿಜವಾದ ಸಂತರು. ಡಾ. ಶಿವಕುಮಾರ ಮಹಾಶಿವಯೋಗಿಗಳು ನಾವು ಅವರ ವಿಚಾರಗಳನ್ನು ಮೆಲಕು ಹಾಕಿ ಗುರುವಿನ ತೇಜಸ್ಸನ್ನು ನಮ್ಮ ಬದುಕಿಗೆ ಅರ್ಪಿಸಿಕೊಳ್ಳಬೇಕಾಗಿದೆ ಎಂದರು.ನಿರ್ದೇಶಕ ಎಂ.ಎಂ. ಅವರಾದಿ ಮಾತನಾಡಿ, ಬಸವಣ್ಣನವರ ತತ್ವಾದರ್ಶಗಳನ್ನು ಕಾಯಾ,ವಾಚಾ,ಮನಸಾ ಪಾಲಿಸಿದವರು ಪೂಜ್ಯ ಸಿದ್ಧಗಂಗಾ…
ಮಾತೋಶ್ರೀ ಗೌರಮ್ಮ ಅಪ್ಪಾಸಾಹೇಬ ಬಬಲೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಕ್ಸಲೆಂಟ್ ಕಾಲೇಜ್ ಆಪ್ ನರ್ಸಿಂಗ್ ಮಹಾವಿದ್ಯಾಲಯದ ವಿದ್ಯಾರ್ಥಿಗಳ ದೀಪದಾನ ಸಮಾರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನರ್ಸ್ ವೃತ್ತಿಯು ಅತ್ಯಂತ ಶ್ರೇಷ್ಠವಾದ ವೃತ್ತಿಯಾಗಿದ್ದು, ನರ್ಸಗಳು ರೋಗಿಗಳ ಪಾಲಿನ ನಿಜವಾದ ಆಪದ್ಬಾಂಧವರಾಗಿದ್ದಾರೆ, ವಿದ್ಯಾರ್ಥಿಗಳು ಈ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವುದರ ಮೂಲಕ, ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೀರಿ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ್ ಮಾಸ್ತಿಹೊಳಿ ಹೇಳಿದರು.ಅವರು ವಿಜಯಪುರ ನಗರದಲ್ಲಿ ಹಮ್ಮಿಕೊಂಡಿದ್ದ ಮಾತೋಶ್ರೀ ಗೌರಮ್ಮ ಅಪ್ಪಾಸಾಹೇಬ ಬಬಲೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಕ್ಸಲೆಂಟ್ ಕಾಲೇಜ್ ಆಪ್ ನರ್ಸಿಂಗ್ ಮಹಾವಿದ್ಯಾಲಯದ ವಿದ್ಯಾರ್ಥಿಗಳ ದೀಪದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರು ಹಾಗೂ ಆಕ್ಸ್ಫರ್ಡ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಮಾತನಾಡಿ ” ರೋಗಿಗಳಲ್ಲಿ ಭಗವಂತನನ್ನು ಕಂಡು ನಿಮ್ಮ ವೃತ್ತಿಯ ಪಾವಿತ್ರ್ಯವನ್ನು ಹೆಚ್ಚಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಲ್ಲಿ ವಿನಂತಿಸಿಕೊಂಡ ಅವರು ನಿಮ್ಮ ಜೀವನದಲ್ಲಿ ಪರೋಪಕಾರ ಮಾಡುವುದರಿಂದ ಸಿಗುವ ಆತ್ಮ ತೃಪ್ತಿ ಯಾವುದರಲ್ಲಿಯೂ ಸಿಗುವುದಿಲ್ಲ. ಹಾಗಾಗಿ…
ಕೋಟ್ಯಾಳದಲ್ಲಿ ದುಡಿಯೋಣ ಬಾ ಅಭಿಯಾನ | ಸಹಾಯಕ ನಿರ್ದೇಶಕ ಬಸವರಾಜ ಸಂಕಗೊಂಡ ಸಲಹೆ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಕೋಟ್ಯಾಳ ಗ್ರಾಮ ಪಂಚಾಯತಿಯಲ್ಲಿ ಮನರೇಗಾ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ 100 ದಿನಗಳ ಉದ್ಯೋಗ ಒದಗಿಸುವ ಸಲುವಾಗಿ ಮಾಹಿತಿ, ಶಿಕ್ಷಣ & ಸಂವಹನ ಕಾರ್ಯಕ್ರಮದಡಿ ಹಮ್ಮಿಕೊಂಡ “ದುಡಿಯೋಣ ಬಾ” ಅಭಿಯಾನಕ್ಕೆ ಚಾಲನೆ ನೀಡಿ ತಿಕೋಟಾ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರಾದ ಬಸವರಾಜ ಸಂಕಗೊಂಡ ಮಾತನಾಡಿದರು.“ಈ ಬೇಸಿಗೆ ಅವಧಿಯಲ್ಲಿ ನರೇಗಾ ಕೂಲಿಕಾರರಿಗೆ ನಿರಂತರವಾಗಿ 100 ದಿನಗಳ ಉದ್ಯೋಗ ಒದಗಿಸುವುದು ಆ ಮೂಲಕ ಗ್ರಾಮೀಣ ಆಸ್ತಿಗಳ ರಚನೆ ಮಾಡುವುದು, ಜಲ ಸಂರಕ್ಷಣೆ ಮಾಡಿ ಅಂತರ್ಜಲ ಮಟ್ಟ ವೃದ್ಧಿಸುವುದು, ಅರಣ್ಯೀಕರಣ ಕಾಮಗಾರಿಗಳು, ಶಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಯಶಸ್ವಿಯಾಗಿ ನಿರ್ಮಾಣ ಮಾಡುವುದು ಈ ದುಡಿಯೋಣ ಬಾ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಈ ಅಭಿಯಾನದ ಅಂಗವಾಗಿ ಎಲ್ಲ ಗ್ರಾಮ ಪಂಚಾಯತಿಯಲ್ಲಿ ಮನೆ-ಮನೆ ಭೇಟಿ, ಸ್ವ-ಸಹಾಯ ಸಂಘದ ಸಭೆ, ಮಹಿಳಾ ವಿಶೇಷ ಗ್ರಾಮ ಸಭೆ, ವಾರ್ಡ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭಾನುವಾರ ನಗರದಲ್ಲಿರುವ ಐತಿಹಾಸಿಕ ತಾಜ್ ಬಾವಡಿ, ಅಂಚೆ ಕಚೇರಿಯ ಆವರಣದಲ್ಲಿನ ಬಾವಿ, ಇಬ್ರಾಹಿಂಪುರದ ಬಾವಿ, ಕೆಕೆಆರ್‌ಟಿಸಿ ಆವರಣದಲ್ಲಿರುವ ಹಾಗೂ ಚಂದಾ ಬಾವಡಿ ಹಾಗೂ ಉಪ್ಪಲಿಬುರಜ್ ಮಾರ್ಕೆಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಗರದಲ್ಲಿರುವ ಐತಿಹಾಸಿಕ ಬಾವಿಗಳನ್ನು ಸ್ವಚ್ಛಗೊಳಿಸಿ ಆ ನೀರನ್ನು ನಗರದ ಸಾರ್ವಜನಿಕರಿಗೆ ದೈನಂದಿನ ಬಳಕೆಗೆ ಉಪಯೋಗಿಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ನಗರದಲ್ಲಿರುವ ಐತಿಹಾಸಿಕ ಬಾವಡಿಗಳನ್ನು ಪುನರುಜ್ಜೀವನಗೊಳಿಸಿ, ಸ್ವಚ್ಛತೆ ಕೈಗೊಂಡು ಪಂಪ್ ಮೋಟರ್ ಅಳವಡಿಸಿ, ಪೈಪಲೈನ್ ಮೂಲಕ ಕಿರು ನೀರು ಸರಬರಾಜು ಮಾಡುವ ಕಾಮಗಾರಿ ಕೈಗೊಂಡು ನಗರದ ಸಾರ್ವಜನಿಕರಿಗೆ ದಿನಬಳಕೆಗೆ ನೀರು ಉಪಯೋಗಿಸಿಕೊಳ್ಳಲು ಅನುಕೂಲ ಮಾಡಿ ಕೊಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.ನಗರದಲ್ಲಿರುವ ಎಲ್ಲಾ ಬಾವಿಗಳನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ದಿನಬಳಕೆಯ ಉಪಯೋಗಕ್ಕೆ ಪಾಲಿಕೆ ವತಿಯಿಂದ ಕ್ರಮಕ್ಕಾಗಿ ಹಾಗೂ ಬಾವಿಯಲ್ಲಿರುವ ಹೂಳನ್ನು ತೆರವುಗೊಳಿಸಿ, ಸ್ವಚ್ಛಗೊಳಿಸಬೇಕು. ನೀರನ್ನು ಕುಡಿಯಲು ಹೊರತುಪಡಿಸಿ, ದಿನಬಳಕೆಗೆ ಉಪಯೋಗಿಸಲು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ವಿದ್ಯಾನಗರ ಶ್ರೀಚನ್ನವೀರ ಸ್ವಾಮೀಜಿ ಉದ್ಯಾನವನದ ಹತ್ತಿರವಿರುವ ಮಾಜಿ ವಿಪ ಸದಸ್ಯ ಅರುಣ ಶಹಾಪುರ ಅವರ ಮನೆಯ ಮೇಲೆ ಬಿಜೆಪಿ ಸಂಸ್ಥಾಪನ ದಿನವನ್ನು ಬಿಜೆಪಿ ಧ್ವಜ ಹಾರಿಸುವುದರ ಮೂಲಕ ಆಚರಣೆ ಮಾಡಲಾಯಿತು.ಈ ವೇಳೆ ಮಾಜಿ ವಿಪ ಸದಸ್ಯ ಅರುಣ ಶಹಾಪುರ ಸಿಂದಗಿ ನಗರದ ಘಟಕದ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಪಡಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗುರು ತಳವಾರ, ಸಿದ್ದರಾಮ ಆನಗೊಂಡ ಇದ್ದರು.
