Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಚಿವ ಜಮಿರ್ ಅಹ್ಮದಖಾನ್ ಅವರ ಹುಟ್ಟು ಹಬ್ಬವನ್ನು ಸಾಮಾಜಿಕ ಸೇವೆಯ ಮೂಲಕ ಆಚರಣೆ ಮಾಡಲಾಗುತ್ತಿದೆ ಎಂದು ಕನ್ನಡಪಡ ಹೋರಾಟಗಾರ ಸದ್ದಾಂ ಆಲಗೂರ ಹೇಳಿದರು.ಸಿಂದಗಿ ತಾಲೂಕಿನ ಗೊಲಗೇರಿ ಗ್ರಾಮದ ಪರಮಾನಂದ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಸಚಿವ ಜಮೀರ್ ಅಹಮ್ಮದ್‌ಖಾನ್ ಅವರ ಹುಟ್ಟು ಹಬ್ಬದ ನಿಮಿತ್ತ ಅವರ ಅಭಿಮಾನಿ ಬಳಗದ ವತಿಯಿಂದ ವಿಕಲಚೇತನ ಮಕ್ಕಳಿಗೆ ನೋಟ್‌ಬುಕ್ ಪೆನ್ನುಗಳನ್ನು ವಿತರಿಸಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗಬೇಕು.ಅವರ ಅಭಿಮಾನಿ ಬಳಗವು ಇಂತಹ ಸಮಾಜಮುಖಿ ಕಾರ್ಯಗಳಿಗೆ ಸದಾ ಸಿದ್ಧ ಎಂದರು.ಈ ವೇಳೆ ಪತ್ರಕರ್ತ ಇಸ್ಮಾಯಿಲ್ ಶೇಖ್ ಪ್ರಾಸ್ತಾವಿಕ ಮಾತನಾಡಿದರು.ಮುಖಂಡ ಮಡಿವಾಳ ನಾಯ್ಕೋಡಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಪೈಗಂಬರ್ ಬುಕ್ಕದ್, ರಹೀಮ್ ಬೆನಕನಹಳ್ಳಿ, ಶ್ರೀಶೈಲ ಹಿಪ್ಪರಗಿ, ರಫೀಕ್ ಮುಲ್ಲಾ, ಅಪ್ಪು ದೇಸಾಯಿ, ರಸೀಧ್ ಕುಮಸಗಿ, ರಜಾಕ್ ಪಟೇಲ್, ಇಸ್ಮಾಯಿಲ್ ಹಳ್ಳಿಮನಿ,ದತ್ತಾತ್ರೇಯ ಕಲಕೇರಿ, ಸಲಿಂ ಅಸಂತಾಪುರ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಎಚ್.ಜಿ.ಕಾಲೇಜ ಸಭಾಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿರುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಕರೆಪ್ಪ ಬೆಳ್ಳಿ ಉದ್ಘಾಟಿಸಿದರು.ಸಿಂದಗಿ: ರಾಷ್ಟ್ರದ ಭವಿಷ್ಯ ರೂಪಿಸಬೇಕಾಗಿರುವ ಯುವ ಸಮೂಹ ವ್ಯಸನಿಗಳ ಸಹವಾಸ ಹಾಗೂ ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಎಂದು ತಹಶೀಲ್ದಾರ ಕರೆಪ್ಪ ಬೆಳ್ಳಿ ಹೇಳಿದರು.ಸಿಂದಗಿ ಪಟ್ಟಣದ ಎಚ್‌ಜಿ ಕಾಲೇಜ ಸಭಾಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿರುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದುರ್ವ್ಯಸನ ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು. ಇಂದಿನ ಯುವ ಪೀಳಿಗೆ ಮಾದಕ ಪದಾರ್ಥಗಳ ಗೀಳು ಅಂಟಿಸಿಕೊಂಡು ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಮಾದಕ ವ್ಯಸನದ ಸುಳಿಗೆ ಸಿಲುಕಿದರೆ ಹೊರಬರಲು ಸಾಧ್ಯವಿಲ್ಲ. ವ್ಯಸನಿಗಳಿಂದ ಆತನ ಕುಟುಂಬ ಹಾಗೂ ಸಮಾಜ ಕೂಡ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.ಈ ವೇಳೆ…
ಮಾದಿಗ ಸಂಘಟನೆಗಳ ಒಕ್ಕೂಟದಿಂದ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ | ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸಿದರು.ಶುಕ್ರವಾರ ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು. ಒಕ್ಕೂಟದ ನೂರಾರು ಮುಖಂಡರು, ಯುವಕರು ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಬೇಡಿಕೆ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಿದರು.ನೇತೃತ್ವ ವಹಿಸಿದ್ದ ಯುವ ಮುಖಂಡ ಉಮೇಶ ಕಾರಜೋಳ ಮಾತನಾಡಿ, ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಸಹ ಅನುಮತಿ ನೀಡಿದೆ, ಆದರೆ ರಾಜ್ಯದಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಾತ್ರ ಇದಕ್ಕೆ ಬೆಲೆ ನೀಡುತ್ತಿಲ್ಲ, ಆ ಮೂಲಕ ಒಳಮೀಸಲಾತಿ ಕಲ್ಪಿಸದೇ ಮಾದಿಗ ಸಮುದಾಯಕ್ಕೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದೆ, ಒಳಮೀಸಲಾತಿ ಎನ್ನುವುದು ಸಂವಿಧಾನ ಕರುಣಿಸಿರುವ ಹಕ್ಕು, ಶೋಷಿತ…
ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವ್ಯಸನ ಮುಕ್ತ ಹಾಗೂ ಆರೋಗ್ಯಯುತ ಸುಂದರ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಈ ಕಾರ್ಯಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಹೇಳಿದರು.ನಗರದ ಕಂದಗಲ್ ಶ್ರೀ ಹಣುಮಂತ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ನಮ್ಮ ಆರೋಗ್ಯವೂ ಒಳಗೊಂಡಂತೆ ಸಮಾಜದ ಆರೋಗ್ಯಕ್ಕೆ ಹಾನಿಕಾರಕವಾದ ಯಾವುದೇ ತರಹದ ವ್ಯಸನಕ್ಕೆ ಒಳಗಾಗದೇ, ಉತ್ತಮ ಹವ್ಯಾಸ ರೂಢಿಸಿಕೊಂಡು, ಸದೃಢ ಸಮಾಜ ನಿರ್ಮಾಣ ಮಾಡಿ ಅದನ್ನು ಗಟ್ಟಿಗೊಳಿಸುವ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಆದೇಶದ ಮೇರೆಗೆ ಶಿಕ್ಷಕರನ್ನು ಬಿ.ಎಲ್.ಒ. ಕರ್ತವ್ಯದಿಂದ ಮುಕ್ತಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಚಡಚಣ ತಹಶೀಲ್ದಾರ ಸಂಜಯ ಇಂಗಳೆ ಅವರಿಗೆ ಮನವಿ ಸಲ್ಲಿಸಿದರು.ಚಡಚಣ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಮಜ್ಜಗಿ ಹಾಗೂ ಪ್ರಧಾನ ಕಾರ್ಯದರ್ಶಿ ವಿಠ್ಠಲ ಕಾಂಬಳೆ ಮಾತನಾಡಿ, ಕಂದಾಯ ಇಲಾಖೆ ನೀಡುವ ಚುನಾವಣೆ ಮತ್ತು ಇತರೆ ಕಾರ್ಯಗಳನ್ನು ಶಿಕ್ಷಕರು ಚಾಚು ತಪ್ಪದೇ ಮಾಡುತ್ತಿದ್ದಾರೆ. ಆದರೆ ಈಗ ಶಿಕ್ಷಕರಿಗೆ ಶಿಕ್ಷಣ ಇಲಾಖೆಯ ಕೆಲಸದ ಒತ್ತಡ ಹೆಚ್ಚಾಗಿದೆ. ಶಾಲೆಗಳು ಆರಂಭಗೊಂಡಿದ್ದು ಶಿಕ್ಷಕರು ಇದರಲ್ಲಿ ಪರಿಣಾಮಕಾರಿಯಾಗಿ ತೊಡಗಿಕೊಳ್ಳಬೇಕಿದೆ. ಇತರೆ ಇಲಾಖೆಯ ಕೆಲಸಗಳಿಂದ ಬೋಧನೆಗೆ ಸಮಯವೇ ಸಿಗುತ್ತಿಲ್ಲ. ಇದು ಮಕ್ಕಳ ಪಾಠದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಕಾರಣ ಶಿಕ್ಷಕರನ್ನು ಈ ಕೆಲಸದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ ಎಸ್ ಸೋನಗಿ ಹಾಗೂ…
ಉದಯರಶ್ಮಿ ದಿನಪತ್ರಿಕೆ ಚಡಚಣ: ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಿದೆ ಎಂದು ದೈಹೀಕ ನೀರ್ದೆಶಕರಾದ ಪ್ರೋ.ಎಸ್.ಎಸ.ಅವಟಿ ವ್ಯಸನ ಮುಕ್ತ ದಿನಾಚರಣೆ ನಿಮಿತ್ತವಾಗಿ ವ್ಯಸನ ಮುಕ್ತ ಸಮಾಜ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಆರಂಭದಲ್ಲಿ ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ತೊಡಗುವ ಮದ್ಯ ಅಥವಾ ಕಡಿಮೆ ಬೆಲೆಗೆ ಸಿಗುವ ಪಾನ್ ವಸ್ತುಗಳ ಸೇವನೆ ಕೊನೆಗೆ ಮಾರಕ ಗಾಂಜಾ, ಅಫೀಮು, ಕೊಕೇನ್ ಹಾಗೂ ಅನೇಕ ಮಾದಕ ವಸ್ತುಗಳ ದಾಸರನ್ನಾಗಿಸುತ್ತದೆ ಅದು ಮಿದುಳಿನಲ್ಲಿ ಬದಲಾವಣೆ ತಂದು ಇನ್ನಷ್ಟು ಸೇವಿಸುವಂತೆ ಪ್ರೇರೇಪಿಸಿ ಕೊನೆಗೆ ವ್ಯಸನಿಗಳನ್ನಾಗಿಸುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ.ಎಸ್.ಬಿ.ರಾಠೋಡ ಮಾತನಾಡಿದರು.ಈ ಸಂದರ್ಭದಲ್ಲಿ ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ.ಎಸ.ಎಸ.ದೇಸಾಯಿ, ಯುತ್ ರೆಡ್ ಕ್ರಾಸ್ ಸಮಿತಿಯ ಸಂಯೋಜಕರಾದ ಪ್ರೋ. ಎಂ.ಕೆ.ಬಿರಾದಾರ, ವಿದ್ಯಾರ್ಥಿ ಕಲ್ಯಾಣ ಸಮಿತಿಯ ಸಂಯೋಜಕರಾದ ಡಾ.ಮಯೂರ ಕುದರಿ, ಎನ್.ಸಿ.ಸಿ ಅಧಿಕಾರಿ ಡಾ.ಎಮ್.ಎಸ್.ಮಾಗಣಗೇರಿ, ಎನ್.ಎಸ್.ಎಸ್…
ಚುನಾವಣಾ ಅಕ್ರಮ ಆರೋಪ | ಆ.5 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ | ಬೆಂಗಳೂರಿನಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಪಕ್ಷದ ಈ ನಡೆಯನ್ನು ಬಿಜೆಪಿ ಟೀಕಿಸಿದೆ.ಬಿಜೆಪಿ ಸಂಸದ ಪಿಸಿ.ಮೋಹನ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿನ ಹೀನಾಯ ಸೋಲನ್ನು ಮರೆಮಾಚಲು ಹತಾಶ ಯತ್ನ ನಡೆಸತ್ತಿದ್ದಾರೆಂದು ಟೀಕಿಸಿದ್ದಾರೆ.ವಂಶಪಾರಂಪರ್ಯದ ಪರವಲ್ಲದೆ, ಮಹದೇವಪುರ ಮತ್ತು ರಾಜಾಜಿನಗರದ ಜನರು ಅಭಿವೃದ್ಧಿಗೆ ಮತ ಹಾಕಿದ್ದಾರೆ. ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರ ಬಳಿ ಶೇ.100ರಷ್ಟು ಪುರಾವೆ ಇರುವುದೇ ಆದರೆ, ಬೆಂಗಳೂರಿನಲ್ಲಿ ಬೀದಿ ನಾಟಕ ಮಾಡುವ ಬದಲು ನ್ಯಾಯಾಲಯಕ್ಕೆ ಸಲ್ಲಿಸಲಿ ಎಂದು ಸವಾಲು ಹಾಕಿದ್ದಾರೆ.ಜನರ ನಂಬಿಕೆಯನ್ನು ಕಳೆದುಕೊಂಡ ನಂತರ ಸುಳ್ಳುಗಳನ್ನು ಹರಡುವುದು ಪ್ರಜಾಪ್ರಭುತ್ವವಲ್ಲ. ಈ ಪ್ರತಿಭಟನೆ ಹತಾಶ ಪ್ರಯತ್ನವಾಗಿದೆ. ಮಹಾದೇವಪುರ ಮತ್ತು ರಾಜಾಜಿನಗರದ ಜನಾದೇಶವನ್ನು ಯಾವುದೇ ನಕಲಿ ನಿರೂಪಣೆಯು…
ಲೇಖನ- ಡಾ.ಶಶಿಕಾಂತ ಪಟ್ಟಣ ರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಮಹಾತ್ಮಾ ಗೌತುಮ ಬುದ್ಧ ಭಾರತವು ಕಂಡ ಮೊಟ್ಟ ಮೊದಲಿನ ವೈಚಾರಿಕ ಕಾರಣಿ ಪುರುಷ. ಈ ದೇಶದಲ್ಲಿ ವರ್ಗ ವರ್ಣ ಅಂಡಾಕಾರದ ವಿರುದ್ಧ ಸಿಡಿದೆದ್ದ ಸಮತೆಯ ಸೇನಾನಿ ಬುದ್ಧ.ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.ಬುದ್ಧರ ಸಂದೇಶಗಳುಸಂಶೋಧನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು – ಇದುವೇ ಬೌದ್ಧ ಧರ್ಮ. ಅವನು ಬೋಧಿಸಿದ್ದು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ. ಇದನ್ನೆ ಅವನು ಪಾಳಿ ಭಾಷೆಯಲ್ಲಿ “ಧಮ್ಮ” ಎಂದು ಕರೆದನು. ತಾನು ಬೋಧಿಸುತ್ತಿರುವುದರಲ್ಲಿ ಹೊಸದೇನೂ ಇಲ್ಲವೆಂದೂ ಹಾಗೂ ಈ ಸತ್ಯವನ್ನು ಕಂಡುಕೊಂಡವರಲ್ಲಿ…
ಲೇಖನ- ರೇವಣಸಿದ್ದ ಬಗಲಿವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಬೆಂಗಳೂರು ಗ್ರಾಮಾಂತರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ 01 ಅಗಸ್ಟ್ 1930 ರಲ್ಲಿ ಜನಿಸಿದ ಡಾ. ಮಹಾಂತ ಶಿವಯೋಗಿಗಳು. ತಮ್ಮ 10 ನೇ ವಯಸ್ಸಿನಲ್ಲೇ ಸನ್ಯಾಸಿ ಜೀವನವನ್ನು ಸ್ವೀಕರಿಸಿ, ಸವದಿಯ ವಿರಕ್ತ ಮಠದ ಚಿಕ್ಕ ಸ್ವಾಮಿಜಿಗಳಾದರು.ಇವರು ಕಾಶಿಯಲ್ಲಿ ಸಂಸ್ಕೃತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತ, ಆಧ್ಯಾತ್ಮಿಕ ಪ್ರವಚನ ಹೀಗೆ ನಾನಾ ವಿಷಯಗಳಲ್ಲಿ ಪರಿಣಿತಿಯನ್ನು ಪಡೆದಿದ್ದರು.ವ್ಯಸನ ಮುಕ್ತ ಸಮಾಜಕ್ಕೆ ಶ್ರೀಗಳ ಕೊಡುಗೆ1970 ರಲ್ಲಿ ಇಳಕಲ್ (ಚಿತ್ತರಗಿ) ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19 ನೇ ಪೀಠಾಧಿಕಾರಿಯಾದ ಡಾ. ಮಹಾಂತ ಶಿವಯೋಗಿ ಅಜ್ಜನವರು, ಬಳಿಕ ಉತ್ತರ ಕರ್ನಾಟಕದಿಂದ ‘ವ್ಯಸನ ಮುಕ್ತ’ಕ್ಕಾಗಿ ದೃಢ ಸಂಕಲ್ಪ ತೊಟ್ಟು, 1975ಕ್ಕೆ ಆರಂಭಿಸಿದ ‘ಮಹಾಂತ ಜೋಳಿಗೆ ಕಾರ್ಯಕ್ರಮ’ದಡಿ ದೇಶಾದ್ಯಂತ ಅಷ್ಟೇ ಅಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ಸಂಚರಿಸಿದ ಶ್ರೀಗಳು 42 ವರ್ಷಗಳ ಕಾಲ ಮಾದಕ ಸೇವನೆ ಹಾಗೂ ದುಷ್ಚಟಗಳಿಂದ ಆರೋಗ್ಯದ…
ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಶರಣ ಮಾಸದ ಎಂಟನೆಯ ದಿನದ ಅನುಭಾವ ಮಾಲಿಕೆಯಲ್ಲಿ ಡಾ. ರಾಜಶೇಖರ ಬಿರಾದಾರ ಅವರು “ಅರಿವಿನ ಬೆಳಕು ಅಲ್ಲಮ” ವಿಷಯ ಕುರಿತು ಹೇಳುತ್ತಾ ಕವಿ ಕುವೆಂಪು ಅವರ ಕವಿತೆಯ ಆಶಯದಂತೆ ಮತವೆಂಬ ಮೋಹದ ಜಾಲಕ್ಕೆ ಸಿಲುಕದೆ ಅವುಗಳ ಹೊಟ್ಟನ್ನು ತೂರಿ ಯಾವ ಸಂಕುಚಿತ ತತ್ವಗಳಿಗೂಅಂಟಿಕೊಳ್ಳದೆ,ನಿರ್ದಿಗಂತವಾಗಿ ಬೆಳೆದು ಎಲ್ಲಿಯೂ ನಿಲ್ಲದೆ, ನಿಜ ಜಂಗಮರಾಗಿ ಈ ಅನಂತ ಆಗಸದಲಿ ಬಯಲನೇ ಬಿತ್ತಿ ಬೆಳೆದು ಬಯಲಾದ ಅರಿವಿನ ನಿಜಬೆಳಕು ಅಲ್ಲಮಪ್ರಭುಗಳುಎಂದು ಅರಿವಿನ ಬೆಳಕಿನ ಪ್ರಭೆ ಯನ್ನು ಅತ್ಯಂತ ಪ್ರಬುದ್ಧವಾಗಿ ಹಂಚಿಕೊಂಡರುಅಲ್ಲಮ ಎಂದರೆ ಜ್ಞಾನ, ಅನುಭಾವ, ಅಲೆಮಾರಿ, ನಿಜ ಜಂಗಮ, ನ್ಯಾಯ ನಿಷ್ಠುರಿ, ಬಯಲು, ಶೂನ್ಯ, ಎಂದು ಹೇಳುತ್ತಾ, ಬಸವಾದಿ ಶರಣರನ್ನು ಬೆಳಗಿದ ಬಗೆ ಮತ್ತು ಆಧುನಿಕ ಜಗದ ಕತ್ತಲೆಯ ಅರಿವಿನ ಬೆಳಕು ಎನ್ನುವ ಬಹುರೂಪಿ ಅಲ್ಲಮಪ್ರಭುಗಳ ಅರಿವಿನ ಬೆಳಕಿನ ಎರಡು ಧಾರೆಗಳನ್ನು ಅವರು ಹಲವಾರು ವಚನಗಳ ಅರ್ಥಗಳ ಜೊತೆಗೆ ನಮ್ಮ ಮುಂದಿಡುವ ಪ್ರಯತ್ನ ಮಾಡಿದರು.ಸೊನ್ನಲಿಗೆಗೆ…
