Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಡಾ ಬಾಬು ಜಗಜೀವನರಾಮ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಜಗಜೀವನರಾಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ಸ್ವಾತಂತ್ರ‍್ಯ ಹೋರಾಟಗಾರ, ಧೀಮಂತ ನಾಯಕ, ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಮಾಡಲಾಯಿತು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ರಾಜ್ಯ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ್, ಈರಣ್ಣ ರಾವೂರ, ಸಾಬು ಮಾಶಾಳ, ಉಮೇಶ್ ಕೊಳಕೂರ, ಮಹೇಂದ್ರ ನಾಯಕ್, ಚಿದಾನಂದ ಚಲವಾದಿ, ಮಲ್ಲಿಕಾರ್ಜುನ್ ಜೋಗೂರ, ರವಿ ವಗ್ಗೆ, ಸಪ್ನ ಕಣ್ಮುಚ್ಚಿನಾಳ, ಶಿಲ್ಪ ಕುದ್ರುಗೊಂಡ, ಸಂಜೆಯ ಪಾಟೀಲ್ ಕನ್ಮಡಿ, ವಿಜಯ ಜೋಶಿ, ಕೃಷ್ಣ ಗೋನಾಳಕರ್, ಬಸವರಾಜ್ ಬೈಚಬಾಳ, ಬಸ್ಸು ಹೂಗಾರ್ ಭರತ್ ಕೋಳಿ, ರಾಜೇಶ್ ತೌಸೆ ವರಿಸ್ ಕುಲಕರ್ಣಿ, ಗುರು ತಳವಾರ ಸೇರಿದಂತೆ ಹಲವರು ಇದ್ದರು.
ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ಮಡಿವಾಳ ಮಾಚಿದೇವರ ರಥೋತ್ಸವ ಹಾಗೂ ಪಲ್ಲಕ್ಕಿ ಮಹೋತ್ಸವ ಸಾವಿರಾರು ಭಕ್ತವೃಂದದೊಂದಿಗೆ ವಿಜೃಂಭಣೆಯಿಂದ ಜರುಗಿತು.ಪಟ್ಟಣದಲ್ಲಿ ಮಾಚಿದೇವರ ರಥೋತ್ಸವದ ಅಂಗವಾಗಿ ಶನಿವಾರ ಗದ್ದುಗೆಮಠದಲ್ಲಿ ಸಾಂಪ್ರದಾಯಿಕವಾಗಿ ನಡೆದು ಬಂದ ಪೂಜಾ ವಿಧಿವಿಧಾನಗಳು ಮಡಿವಾಳೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೆಳಿಗ್ಗೆ ಹೋಮ ಹವನದೊಂದಿಗೆ ಆರಂಭಗೊಂಡವು. ನಂತರ ಆರಾ ಎಂದೇ ಕರೆಯಲಾಗುವ ಪ್ರಕೃತಿಗೆ ಆಹಾರ ನೀಡುವುದು ಜರುಗಿತು. ಆನಂತರ ಮಾಚಿದೇವರನ್ನು ಹೊತ್ತ ಪಲ್ಲಕ್ಕಿ ಗದ್ದುಗೆಮಠದಿಂದ ಹೊರಟು ಮೇನ್ ಬಜಾರಿನಲ್ಲಿರುವ ತೇರಿನವರೆಗೆ ಸಾಗಿ ೫ ಸುತ್ತು ಪ್ರದಕ್ಷಿಣೆ ಹಾಕಿ ನೈವೇದ್ಯ(ಬಡ್ಯಾಣ) ಅರ್ಪಿಸಲಾಯಿತು. ತದನಂತರ ಬೆಳಿಗ್ಗೆಯಿಂದಲೇ ಬೃಹತ್ ಹೂವಿನ ಹಾರ, ತಳಿರು ತೋರಣಗಳಿಂದ ಶೃಂಗಾರಗೊಂಡ ರಥ(ತೇರ) ನೆರೆದ ಸಾವಿರಾರು ಜನ ಭಕ್ತರು ಜಯಕಾರ ಉದ್ಘೋಶಗಳಿಂದ ಚಾಲನೆ ನೀಡಲಾಯಿತು.ಯುವಭಕ್ತ ಸಮೂಹ ಉತ್ಸಾಹದಿಂದ ರಥವನ್ನು ಸರಾಗವಾಗಿ ಮಾನೆದೊಡ್ಡಿ ಹತ್ತಿರದವರೆಗೆ ಎಳೆದು ತಮ್ಮ ಭಕ್ತಿ, ಭಾವ ತೋರಿದರು. ಈ ಸಮಯದಲ್ಲಿ ಮಹಿಳೆಯರು, ಮಕ್ಕಳು, ಯುವಕರು ತಾವು ತಂದ ಉತ್ತತ್ತಿ, ಬಾಳೆಹಣ್ಣುಗಳನ್ನು ರಥೋತ್ಸವ ಸಾಗುವಾಗ ಅದರ ಮೇಲೆ ಎರೆಚಿ ಸಂತಸಪಟ್ಟರು. ನಂತರ ಮಾಚಿದೇವರನ್ನು…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲೂಕು ಆಡಳಿತದಿಂದ ಡಾ.ಬಾಬು ಜಗಜೀವನರಾವ್ ಜಯಂತಿ ಉದ್ದೇಶಿಸಿ ಮಾಜಿ ಕೆಎಂಎಫ್ ನಿರ್ದೇಶಕ ಗುರು ಚಲವಾದಿ ಮಾತನಾಡಿದರು. ನಮ್ಮ ಸಮಾಜ ಇಂದು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಏಕೆಂದರೆ ನಮ್ಮ ನಾಯಕರು ಕೇವಲ ಹೋರಾಟ ಮಾಡುತ್ತಾ ಸಾಗಿದ್ದಾರೆ, ಹೋರಾಟ ಬೇಕು ಆದರೆ ಸಮಾಜದ ಪ್ರತಿಯೊಬ್ಬರು ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಣ ಅತಿಮುಖ್ಯವಾಗಿರಬೇಕು ಎಂದು ಹೇಳಿದರು.ತಹಶೀಲ್ದಾರ ಎಸ್.ಎಸ್. ನಾಯಕಲಮಠ ಮಾತನಾಡಿ ದಲಿತ, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ, ದೇಶಕ್ಕೆ ನೀಡಿದ ಕೊಡುಗೆಯನ್ನು ನಾವು ಇಂದು ನೆನೆಯಬೇಕು ಎಂದು ತಿಳಿಸಿದರು.ಪ್ರಾಸ್ತಾವಿಕವಾಗಿ ಮನು ಪತ್ತಾರ ಮಾತನಾಡಿ, ನಮ್ಮ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಜನರನ್ನು ಮೇಲೆತ್ತಲು ಈ ಎರಡು ಜ್ಯೋತಿಗಳು ಡಾ.ಬಾಬು ಜಗಜೀವನರಾವ್ ಮತ್ತು ಡಾ ಬಿ.ಆರ್. ಅಂಬೇಡ್ಕರ ಕಾರಣ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದೀನ, ಶಿಕ್ಷಣ ಸಂಯೋಜಕ ವಿ.ಎಚ್. ಪುರೋಹಿತ, ತಾಲೂಕು ಡಿಎಸ್ಎಸ್ ಅಧ್ಯಕ್ಷ ದಶರಥ ಈಟಿ, ಅಮೀನಪ್ಪ ತೆಗ್ಗಿ, ವಿಠ್ಠಲ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಎನ್‌ಟಿಪಿಸಿ ಕೂಡಗಿಯಲ್ಲಿ ಕೌಶಲ್ಯ ಅಭಿವೃದ್ಧಿ ಯೋಜನೆ ಮೂಲಕ ಯೋಜನೆಯಿಂದ ಬಾಧಿತ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಹಾಗೂ ಯುವಕರಿಗೆ ತರಬೇತಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಇತ್ತೀಚೆಗೆ ನಡೆಯಿತು.ಎನ್ ಟಿಪಿಸಿ ಕೂಡಗಿಯಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸಹಯೋಗದಲ್ಲಿ ಈ ಯೋಜನೆ ಯಿಂದ ಬಾಧಿತ ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಿ ಉಚಿತವಾಗಿ 500 ಹೊಲಿಗೆ ಯಂತ್ರಗಳನ್ನು ನೀಡಿ ಗೌರವಿಸಲಾಯಿತು.ಯುವ ಸಬಲೀಕರಣ ಉದ್ದೇಶ ದಿಂದ ಸುಮಾರು 40 ಯುವಕರಿಗೆ “ಮೂಲ ಎಲೆಕ್ಟ್ರಿಷಿಯನ್ ತರಬೇತಿಗಾಗಿ ಕೌಶಲ್ಯ ನವೀಕರಣ ಕೋರ್ಸ್” ಅನ್ನು ಪೂರ್ಣಗೊಳಿಸಿದ 40 ಯುವಕರಿಗೆ ವಿದ್ಯುತ್ ಉಪಕರಣದ ಕಿಟ್‌ಗಳು ಮತ್ತು ಪ್ರಮಾಣಪತ್ರಗಳನ್ನು ವಿತರಿಸಿದರು.ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಬಿದ್ಯಾನಂದ ಝಾ, ಮಿಥಾಲಿ ಮಹಿಳಾ ಸಮಿತಿ ಅಧ್ಯಕ್ಷೆ ಅಂಜು ಝಾ, ಮಾನವ ಸಂಪನ್ಮೂಲ ಮುಖ್ಯಸ್ಥ ಎಸ್ ಮೂರ್ತಿ, ಪೂಜಾ ಪಾಂಡೆ, ಮಿಥಾಲಿ ಲೇಡೀಸ್ ಕ್ಲಬ್ ಸದಸ್ಯರು ಮತ್ತು ಇತರ ಎನ್‌ಟಿಪಿಸಿ ಅಧಿಕಾರಿಗಳು ಇದ್ದರು.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಶ್ರೀ ದಿಗಂಬರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಕಡಕೋಳ ಮಡಿವಾಳೇಶ್ವರ ಪುರಾಣದಲ್ಲಿ ಸುಮಂಗಲೆಯರಿಂದ ತೋಟ್ಟಿಲು ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಪಟ್ಟಣದ ದಿಗಂಬರೇಶ್ವರ ಸಂಸ್ಥಾನ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಕಡಕೋಳ ಮಡಿವಾಳೇಶ್ವರ ಪುರಾಣ ಕಾರ್ಯಕ್ರಮದಲ್ಲಿ ತೊಟ್ಟಿಲು ಹಾಕುವ ಕಾರ್ಯ ನೂರಾರು ಸುಮಂಗಲೆಯರು ಆರತಿ ಮಾಡಿ ದಿಗಂಬರೇಶ್ವರ ಮತ್ತು ಮಡಿವಾಳೇಶ್ವರ ತೊಟ್ಟಿಲು ಹಾಕಿ ಹೆಸರಿಟ್ಟು ಸಾಂಪ್ರದಾಯಿಕ ಹಾಡುಗಳನ್ನು ಹಾಡಿ ಕಾರ್ಯಕ್ರಮ ನಡೆಸಿ ಕೊಟ್ಟರು.ಅಥರ್ಗಾದ ಮುರುಘೇಂದ್ರ ಮಹಾಸ್ವಾಮಿಗಳು ಮಾತನಾಡಿ ಹೆಣ್ಣು ಮಕ್ಕಳು ಸಂಸಾರದಲ್ಲಿ ಗಂಡನಿಗೆ, ಅತ್ತೆ ಮಾವರನ್ನು ಮಕ್ಕಳಂತೆ ನೋಡಿಕೊಳ್ಳಿ ದೇವರು ಎಲ್ಲಿ ಇಲ್ಲಾ ಈ ನಿನ್ನ ಕುಟುಂಬದವರಲ್ಲಿ ಇದ್ದಾನೆ ಎಂದು ಹೇಳಿದರು.ಸಾನಿಧ್ಯವನ್ನು ದಿಗಂಬರೇಶ್ವರ ಸಂಸ್ಥಾನ ಮಠದ ಶ್ರೀ ಕಲ್ಲಿನಾಥ ದೇವರು ವಹಿಸಿದ್ದರು.ಜೇರಟಗಿ ಶಿವಯ್ಯ ಸ್ವಾಮಿ, ಮೋರಟಗಿ ರಮೇಶ ವಿಭೂತಿ,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ ಕೆ ಬಗಲಿ, ಮತ್ತು ಊರಿನ ಹಿರಿಯರು ಪಾಲ್ಗೊಂಡಿದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಳೆದ ತಿಂಗಳು ಸಿಂದಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ನಕಲಿ ಪತ್ರಕರ್ತರು, ನಮಗೆ ಕಿರುಕುಳ ಅವಾಚ್ಯ ಶಬ್ದಗಳಿಂದ ಬಯುತ್ತಿದ್ದಾರೆ ಎಂದು ಹೇಳಿ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿರುತ್ತಾರೆ. ಆದರೆ ಅವರು ಮಾಡಿರುವ ಪ್ರಕರಣ ಸತ್ಯಕ್ಕೆ ದೂರವಾದದ್ದು ಎಂದು ಪತ್ರಕರ್ತ ನಿಂಗರಾಜ ಅತನೂರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಲವಾರು ವರ್ಷಗಳಿಂದ ನಾನು ಪತ್ರಿಕಾ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆ ಇದೆ. ನೀವು ಯಾಕೆ ಇತ್ತ ಕಡೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ನಮ್ಮ ಬಳಿ ಹೇಳಿಕೊಂಡಾಗ ನಾವುಗಳು ನೇರವಾಗಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಜೊತೆಗೆ ಮಾತನಾಡಬಾರದು ಎಂಬ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಮಾಹಿತಿ ಕೇಳಿದ್ದೇವೆ. ಸುಮಾರು ದಿನಗಳಾದ ಬಳಿಕ ಮಾಹಿತಿ ನೀಡಲಿಲ್ಲ. ಅಲ್ಲಿನ ಸಿಬ್ಬಂದಿಗಳ ಜೊತೆಗೆ ಅಸಭ್ಯವಾಗಿ ವರ್ತನೆ ಮಾಡಿದ್ದೇವೆ ಎಂದು ಅವರು ದೂರು ದಾಖಲಿಸಿದ್ದಾರೆ. ಅದು ಸತ್ಯಕ್ಕೆ ದೂರವಾಗಿದ್ದು, ಸಮಾಜದ ಒರೆಕೋರೆಗಳನ್ನು ತಿದ್ದುವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಜಿಲ್ಲೆಯ ಚಡಚಣದಲ್ಲಿ ಇದೇ ಏ.೭ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ ಹೇಳಿದರು.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಚಡಚಣದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಎಸ್. ಎಸ್. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇದೇ ಏಪ್ರಿಲ್ ೭ರಂದು ಬೆಳಿಗ್ಗೆ, ೯.೩೦ ರಿಂದ ಸಾಯಂಕಾಲ ೪.೦೦ ಘಂಟೆಯವರೆಗೆ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ, ಈ ಮೇಳದಲ್ಲಿ ೪೦ ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಇಲ್ಲಿಯವರೆಗೆ ಪ್ರತಿಷ್ಠಿತ ೩೮ ಕಂಪನಿಗಳು ನೋಂದಣಿ ಮಾಡಿಕೊಂಡಿವೆ ಎಂದು ಅವರತು ಹೇಳಿದರು.ಎಸ್.ಎಸ್.ಎಲ್.ಸಿ/ಪಿಯುಸಿ/ಐಟಿಐ/ಡಿಪ್ಲೊಮಾ/ವದವಿ/ ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಪದವೀಧರರಿಗೆ ಉದ್ಯೋಗ ಮೇಳದಲ್ಲಿ ಅವಕಾಶವಿದ್ದು, ನೋಂದಣಿಯು ಉಚಿತವಾಗಿರುತ್ತದೆ. ಇಲ್ಲಿಯವರೆಗೆ ೧೮೮೧ ಅಭ್ಯರ್ಥಿಗಳು…
ಡಾ.ಬಾಬು ಜಗಜೀವನರಾಂ ೧೧೮ನೇ ಜಯಂತಿ ಕಾರ್ಯಕ್ರಮ | ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ಉದಯರಶ್ಮಿ ದಿನಪತ್ರಿಕೆವಿಜಯಪುರ: ದೇಶದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ಜಾತಿ ವ್ಯವಸ್ಥೆಯನ್ನು ಹೊಗಲಾಡಿಸಲು ಕನಸು ಕಂಡು ಸಮಸಮಾಜ ನಿರ್ಮಾಣಕ್ಕೆ ಹಲವು ಕಷ್ಟ ನೊವುಗಳನ್ನು ಅನುಭವಿಸಿದ ಮಹಾನ ಚಿಂತಕರಾಗಿದ್ದರು ಎಂದು ಕರ್ನಾಟಕ ಬಾಲ ವಿಕಾಸ ಅಕ್ಯಾಡೆಮಿ ಅಧ್ಯಕ್ಷರಾದ ಸಂಗಮೇಶ ಅಪ್ಪಾಸಿ ಬಬಲೇಶ್ವರ ಹೇಳಿದರು.ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಬಂಜಾರ ವತ್ತದ ಹತ್ತಿರವಿರುವ ಡಾ. ಬಾಬು ಜಗಜೀವನ ರಾಮ ಭವನದಲ್ಲಿ ಹಮ್ಮಿಕೊಂಡ ಡಾ. ಬಾಬು ಜಗಜೀವನ ರಾಮ್ ಅವರ ೧೧೮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಡಾ. ಬಾಬಾಸಾಹೇಬ ಅಂಬೇಡ್ಕರ ಹಾಗೂ ಡಾ. ಬಾಬು ಜಗಜೀವನ ರಾಂ ಶೋಷಿತ ವರ್ಗ, ಹಿಂದುಳಿದ ವರ್ಗಗಳ ಬದುಕು ಹಸನಾಗಿಸಿ, ಸಮ ಸಮಾಜವನ್ನು ನಿರ್ಮಿಸಲು ಕಂಡ ಕನಸನ್ನು ನನಸಾಗಿಸಲು, ನಮ್ಮ ಮನಸ್ಥಿತಿಗಳನ್ನು ಬದಲಾಯಿಸಿಕೊಳ್ಳುವ ಅವಶ್ಯಕತೆ ಇದೆ. ಅಂದಾಗ ಸಮಾಜಗಳಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ತಾಲ್ಲೂಕಿನ ಬುರಣಾಪೂರ ಗ್ರಾಮ ವ್ಯಾಪ್ತಿಯಲ್ಲಿ ನೀರು ಜಲಸಂಗ್ರಹಣಾ ತೊಟ್ಟಿ ನಿರ್ಮಿಸಲು ಬುರಣಾಪೂರ ಗ್ರಾಮದ ರಿಸನಂ . ೫೩// ರಲ್ಲಿ ೧೦ ಗುಂಟೆ ಜಮೀನವನ್ನು ಮಂಜೂರಿಸಲು ಉದ್ದೇಶಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಇದಲ್ಲಿ ಈ ಅದಿಸೂಚನೆಯ ಮೂವತ್ತು ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ನಿಡಗುಂದಿ ತಾಲ್ಲೂಕಿನ ಹೆಬ್ಬಾಳ ಗ್ರಾಮ ವ್ಯಾಪ್ತಿವಿಜಯಪುರ: ನಿಡಗುಂದಿ ತಾಲ್ಲೂಕಿನ ಹೆಬ್ಬಾಳ ಗ್ರಾಮ ವ್ಯಾಪ್ತಿಯಲ್ಲಿ ನಿಡಗುಂದಿ ಪಟ್ಟಣ ಪಂಚಾಯತನ ಮುಖ್ಯಾಧಿಕಾರಿಗಳಿಗೆ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕ ಸ್ಥಾಪಿಸಲು ಹೆಬ್ಬಾಳ ಗ್ರಾಮದ ರಿಸನಂ ೩೨೪ರಲ್ಲಿ ೦೯ ಎಕರೆ ಜಮೀನವನ್ನು ಮಂಜೂರಿಸಲು ಉದ್ದೇಶಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಇದಲ್ಲಿ ಈ ಅದಿಸೂಚನೆಯ ಮೂವತ್ತು ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಪರೀಕ್ಷಾ ಕೇಂದ್ರಗಳಲ್ಲಿ ಮೇ ೧೦ ರಿಂದ ಮೇ ೧೨ರ ವರೆಗೆ ೨೦೨೪ನೇ ಸಾಲಿನ ದ್ವಿತೀಯ ಅಧಿವೇಶನದ ಪರೀಕ್ಷೆಗಳು ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ದಿನದಂದು ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಹಾಗೂ ಅಭ್ಯರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ವಾಚ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕುಲೇಟರ್ ಮುಂತಾದ ಎಲೆಕ್ಟಾçನಿಕ ವಸ್ತುಗಳನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.
