Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇವರ ದಾಸಿಮಯ್ಯನ ವಚನಗಳು ವ್ಯಕ್ತಿಯ ಆತ್ಮ ಶುದ್ಧಿಗೊಳಿಸುತ್ತವೆ ಎಂದು ಮಹಿಳಾ ವಿವಿಯ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ, ಎಂ ನಾಗರಾಜ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ವಿಭಾಗದಲ್ಲಿ (ಎನ್‌ಇಪಿ) ಬುಧವಾರ ಆಯೋಜಿಸಿದ್ದ ದೇವರ ದಾಸಿಮಯ್ಯ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದೇವರ ದಾಸಿಮಯ್ಯ ಅವರ ವಚನಗಳು ಸಮಾಜದಲ್ಲಿ ಮಹತ್ವದ ಪರಿವರ್ತನೆಗಳನ್ನು ಉಂಟುಮಾಡುವ ಶಕ್ತಿ ಹೊಂದಿವೆ. ಅವರ ವಚನಗಳಲ್ಲಿ ಶ್ರಮಪೂಜೆ, ಭಕ್ತಿ, ಮಾನವೀಯತೆ ಮತ್ತು ಸಮಾನತೆಯ ಆದರ್ಶಗಳು ಸ್ಪಷ್ಟವಾಗಿ ಪ್ರತಿಫಲಿಸುತ್ತವೆ. ಅವರ ವಚನಗಳು ಕೇವಲ ಭಕ್ತಿಯ ಸಾರವಲ್ಲ, ಅದು ಬದುಕಿನ ನೈತಿಕ ಮೌಲ್ಯಗಳಿಗೂ ದಾರಿದೀಪವಾಗಿದೆ. ಹೊಸ ತಲೆಮಾರಿಗೆ ದಾಸಿಮಯ್ಯನ ವಚನಗಳು ಸೌಹಾರ್ದತೆ, ಸತ್ಕಾರ್ಯ ಮತ್ತು ಮಾನವೀಯತೆಯ ಆಧಾರಶಿಲೆಯಾಗಿ ಕಾರ್ಯನಿರ್ವಹಿಸುತ್ತವೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಯುಜಿ ಸ್ನಾತಕ ವಿಭಾಗದ ವಿಶೇಷಾಧಿಕಾರಿ ಪ್ರೊ. ಸಕ್ಪಾಲ ಹೂವಣ್ಣ ಮಾತನಾಡಿ, ದೇವರ ದಾಸಿಮಯ್ಯ ಅವರ ವಚನಗಳು ಇಂದಿಗೂ ಸಮಾಜದ ಸುಧಾರಣೆಗೆ ಪ್ರೇರಣೆಯಾಗಿದ್ದು, ಅವು ಬದುಕಿಗೆ ಮಾರ್ಗದರ್ಶಕ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಉಕ್ಕಲಿ ರಸ್ತೆಯಲ್ಲಿರುವ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಶುಕ್ರವಾರ ಸಂಜೆ ಸಕ್ಕರೆ,ಕೃಷಿ ಮಾರುಕಟ್ಟೆ, ಜವಳಿ ಸಚಿವ ಶಿವಾನಂದ ಪಾಟೀಲ ವೀಕ್ಷಿಸಿದರು.ರೂ.೫.೫ ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕೆರೆ ಅಭಿವೃದ್ಧಿ ಕಾಮಗಾರಿ ಮಾಡುವ ಜೊತೆಗೆ ಇಲ್ಲಿ ಜನರಿಗೆ ಉದ್ಯಾನವನ, ವಾಕಿಂಗ್ ಟ್ರ್ಯಾಕ್, ಮಕ್ಕಳ ಆಟಿಕೆ ಅಳವಡಿಕೆ ಸೇರಿದಂತೆ ಸುಂದರವಾದ ಪ್ರವಾಸಿ ತಾಣವನ್ನಾಗಿ ಮಾಡಲು ಬೇಕಾದ ಅಗತ್ಯ ಕಾಮಗಾರಿಯನ್ನು ಗುತ್ತಿಗೆದಾರರು ನಿಗದಿತ ಕಾಲಾವಧಿಯಲ್ಲಿ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಸಚಿವ ಶಿವಾನಂದ ಪಾಟೀಲರು ಸೂಚಿಸಿದರು.ನಂತರ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ರೂ. ೧.೩೦ ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಆಟದ ಮೈದಾನದ ಕಾಮಗಾರಿಯನ್ನು ವೀಕ್ಷಿಸಿದರು. ಆಟದ ಮೈದಾನದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸುತ್ತಮುತ್ತ ಸಸಿಗಳನ್ನು ನೆಡಬೇಕು. ಕಾಮಗಾರಿಯನ್ನು ಗುತ್ತಿಗೆದಾರರು ಗುಣಮಟ್ಟದಿಂದ ಮಾಡುವಂತೆ ಹೇಳಿದರು.ಈ ಸಂದರ್ಭದಲ್ಲಿ ಪಟ್ಟಣದ ಪಂಚಾಯಿತಿ ಮುಖ್ಯಾಧಿಕಾರಿ ಶಬ್ಬೀರ ರೇವೂರಕರ, ಪಟ್ಟಣ ಪಂಚಾಯಿತಿ ಅಭಿಯಂತರ ಸೋಮು ತುಪ್ಪದ, ಸಣ್ಣ ನೀರಾವರಿ ಇಲಾಖೆಯ ಎಇ ಸುಣದಾಳ, ಪಟ್ಟಣ ಪಂಚಾಯಿತಿ ಸದಸ್ಯ ಶಂಕರ ಶಿವಮತ,…

Read More

ಪಾರದರ್ಶಕ ತನಿಖೆಗೆ ಬಿಜೆಪಿ ಆಗ್ರಹ | ಶಾಸಕ ಪೊನ್ನಣ್ಣ ಬಂಧನಕ್ಕೆ ಒತ್ತಾಯ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ಶಾಸಕ ಪೊನ್ನಣ್ಣ ಬಂಧನಕ್ಕೆ ಆಗ್ರಹಿಸಿದೆ.ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಅಭಿವೃದ್ಧಿಯ ಬಗ್ಗೆ ಪ್ರಶ್ನಿಸಿದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದೆ ಕೊಲೆಗಡುಕ ಕಾಂಗ್ರೆಸ್ ಸರ್ಕಾರ. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ, ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರ ಮೇಲೆ ಇಲ್ಲಸಲ್ಲದ ಕೇಸು ಹಾಕಿ, ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದೆ.ಅಲ್ಲದೆ, ವಿನಯ್‌ ಸೋಮಯ್ಯ ಅವರ ಕೊಲೆಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ, ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪೋಸ್ಟ್…

Read More

ಬಿಎಲ್ಡಿಇ ಸಂಸ್ಥೆ ಪ್ರ.ಕಾರ್ಯದರ್ಶಿ ಮತ್ತು ಎಂಎಲ್ಸಿ ಸುನೀಲಗೌಡ ಪಾಟೀಲರಿಂದ ಎರಡು ಮಹತ್ವದ ಒಡಂಬಡಿಕೆಗಳಿಗೆ ಸಹಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆ ಮತ್ತು ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಯುವ ಹಾಗೂ ಹೊಸ ಉದ್ಯಮಿಗಳಿಗೆ ಅನುಕೂಲವಾಗಲು ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್ ಇನಕ್ಯೂಬೇಶನ್ ಕೇಂದ್ರವು ಹುಬ್ಬಳ್ಳಿಯ ಇನ್ನೋವಾಸ್ಕೇಪ್ ಎಲ್.ಎಲ್.ಪಿ ಮತ್ತು ವಿಜಯಪುರ ನಗರದ ಇನ್ನೋವೇಟಮ್ ಜೊತೆ ಪ್ರತ್ಯೇಕ ಒಡಂಬಡಿಕೆ ಮಾಡಿಕೊಂಡಿದೆ.ಶುಕ್ರವಾರ ಬಿ.ಎಲ್.ಡಿ.ಇ ಸಂಸ್ಥೆಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ಎರಡು ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಿದರು.ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ ಶಾಸಕ ಸುನೀಲಗೌಡ, ಬಿ.ಎಲ್.ಡಿ.ಇ ಸಂಸ್ಥೆ ಯಾವಾಗಲೂ ವಿಜಯಪುರ ಮತ್ತು ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಯುವಕರ ಅಭ್ಯುದಯಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಭಾಗದ ವಿದ್ಯಾರ್ಥಿಗಳು ಮತ್ತು ಪ್ರತಿಭಾವಂತ ಯುವಕರು ಕೌಶಲ್ಯಯುತ ಶಿಕ್ಷಣ ಮತ್ತು ತರಬೇತಿಗಾಗಿ ಮಹಾನಗರಗಳಿಗೆ ತೆರಳಲು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸುಕ್ಷೇತ್ರ ಶ್ರೀಶೈಲ ಜಾತ್ರಾ ಮಹೋತ್ಸವದ ಅಂಗವಾಗಿ ಈಚೆಗೆ ಶ್ರೀಶೈಲದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಸವರಾಜ ಎನ್ ಬಿರಾದಾರ ಅವರು ಬರೆದ ನಂದಿ ಕೂಗು ಪುಸ್ತಕವನ್ನು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿ ಬಿಡುಗಡೆ ಮಾಡಿದರು.ನಂತರ ಮಾತನಾಡಿದ ಅವರು, ನಶಿಸುತ್ತಿರುವ ಜೋಡೆತ್ತಿನ ಕೃಷಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ನಂದಿ ಕೂಗು ಪುಸ್ತಕವನ್ನು ಬರೆದು ನಂದಿ ಕೂಗು ಅಭಿಯಾನ ಪ್ರಾರಂಭಿಸಿರುವುದು ಶ್ಲಾಘನೀಯ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಜೋಡೆತ್ತಿನ ಕೃಷಿ ಪುನಶ್ಚೇತನ ಕೆಲಸಕ್ಕೆ ಶ್ರೀಶೈಲಪೀಠವು ಸಂಪೂರ್ಣವಾಗಿ ಬೆಂಬಲವಾಗಿ ನಿಲ್ಲುವುದು ಎಂದರು.ಕರಬಂಟನಾಳದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಪ್ರೇರಣೆಯಿಂದ ಪ್ರಾರಂಭವಾದ ಜೋಡೆತ್ತಿನ ಕೃಷಿ ಪುನಶ್ಚೇತನ ಕಾರ್ಯದಲ್ಲಿ ಪ್ರತಿಯೊಬ್ಬರು ಭಾಗಿಯಾಗಬೇಕಾದ ಅವಶ್ಯಕತೆಯಿದೆ. ಜೋಡೆತ್ತಿನ ಕೃಷಿ ಉಳಿಸಿದರೆ ಮಾತ್ರ ಮಣ್ಣು, ನೀರು ಹಾಗೂ ಭಾರತೀಯ ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯವಿದೆ ಎಂದರು.ನಂದಿ ಕೂಗು ಪುಸ್ತಕದ ಲೇಖಕ ಬಸವರಾಜ ಬಿರಾದಾರ ಅವರು ಉಪನ್ಯಾಸ ನೀಡಿ ಮಾತನಾಡಿ, ಕಂಬಿ ಮಲ್ಲಯ್ಯನ ಪೂಜಾ ಸಂಸ್ಕೃತಿಯು ಗ್ರಾಮಗಳಲ್ಲಿರುವ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಔಷಧ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬುಧವಾರ-ಗುರುವಾರ ಎರಡು ದಿನಗಳ ಕಾಲ ಬೆಂಗಳೂರಿನ ಮೈಕ್ರೋ ಲ್ಯಾಬ್ಸ್ ಲಿಮಿಟಡ್ ಕೈಗಾರಿಕಾ ವಲಯಕ್ಕೆ ಭೇಟಿ ನೀಡಿ ಕ್ಷೇತ್ರಕಾರ್ಯ ಕೈಗೊಂಡರು.ಕ್ಷೇತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಔಷಧಿಗಳ ತಯಾರಿ, ಗುಣಮಟ್ಟ ಪರೀಕ್ಷೆ, ಸಂಸ್ಕರಣೆ, ಬಾಳಿಕೆ ಹಾಗೂ ಗುಣಮಟ್ಟದ ಭರವಸೆಯ ತಯಾರಿಕೆಯ ಕುರಿತು ಉಪಯುಕ್ತ ಮಾಹಿತಿ ಪಡೆದುಕೊಂಡರು. ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಿ.ಸಿ.ಸಿಂಪಿ ಅವರು ಔಷಧ ಕ್ಷೇತ್ರದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಸಾಧನೆ ಮಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕಾದರೆ ತಮ್ಮ ಅಧ್ಯಯನದೊಂದಿಗೆ ಕ್ಷೇತ್ರಕಾರ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳನ್ನು ಕ್ಷೇತ್ರಕಾರ್ಯಕ್ಕೆ ಕರೆದುಕೊಂಡು ಹೋಗಲಾಗಿತ್ತು ಎಂದು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಪ್ರೊ.ಮಹಾಂತೇಶ ಕವಟೇಕರ, ಪ್ರೊ.ಲಕ್ಷ್ಮಣ ಬಿರಾದಾರ, ಡಾ.ರೇಣುಕಾ ಕಬಾಡೆ ಇತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕು ಸರ್ಕಾರಿ ನೌಕರರ ಸಂಘವು ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ಸಮಯದಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಗೌರವ ಧನ ನೀಡುವಂತೆ ಆಗ್ರಹಿಸಿ ತಹಸೀಲ್ದಾರ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿತು.ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಮಾತನಾಡಿದ ಅವರು, ಎಸ್ಎಸ್ಎಲ್ಸಿ ಪರೀಕ್ಷೆಯ ಸಮಯದ್ಲಿ ಸ್ಥಾನಿಕ ಜಾಗೃತದಳ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಹಾಯಕ ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು,ಪೊಲೀಸ್, ಡಿ ದರ್ಜೆ ಸಹಾಯಕರು ಸೇರಿದಂತೆ ಇತರರಿಗೆ ಗೌರವ ಧನ ನೀಡಲಾಗುತ್ತದೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸಹ ಪರೀಕ್ಷೆ ಅವಧಿ ಮುಕ್ತಾಯವಾಗುವವರೆಗೂ ಪರೀಕ್ಷಾ ಕೇಂದ್ರದಲ್ಲಿ ಇರುತ್ತಾರೆ. ಇವರು ಕೋವಿಡ್ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೇ ಕಾರ್ಯನಿರ್ವಹಿಸಿದ್ದಾರೆ. ಇವರಿಗೂ ಇತರೇ ಇಲಾಖೆಯವರಿಗೆ ನೀಡುವಂತೆ ಇವರಿಗೂ ಗೌರವಧನ ನೀಡುವಂತೆ ಆಗ್ರಹಿಸಿದರು. ಮನವಿಯನ್ನು ಶಿರಸ್ತೇದಾರ ಎ.ಎಚ್. ಬಳೂರಗಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಅಶೋಕ ಚನ್ನಪ್ಪ, ಸಂತೋಷ ಕುಂಟೋಜಿ, ಮನೋಜಕುಮಾರ ಪಾಟೀಲ, ಸಿದ್ದು ಉಕ್ಕಲಿ, ಎಸ್.ಡಿ.ದೊಡಮನಿ, ಆರ್.ಪಿ.ಮಠ, ಎ.ಟಿ.ಪಾಟೀಲ, ಎಸ್.ಎಂ.ಇಬ್ರಾಹಿಂಪುರ, ಶರಣಮ್ಮ ನಾಗರಾಳ, ಸುಧಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರ ವತಿಯಿಂದ ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ ಗ್ರಾಮದಲ್ಲಿ ನಿರ್ಮಿಸಲಾದ ೨x೧೦ ಎಂವಿಎ.೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕನಮಡಿ ಗ್ರಾಮದಲ್ಲಿ ಏ.೫ರಂದು ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ಬೃಹತ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಇಂಧನ ಖಾತೆ ಸಚಿವರಾದ ಕೆ.ಜೆ.ಜಾರ್ಜ್, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯ ಸಭಾ ಸದಸ್ಯೆ ಡಾ.ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

Read More

ಸದುಪಯೋಗಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಹಾಗೂ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಎಸ್. ಎಸ್. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಚಡಚಣ ಇವರ ಸಹಯೋಗದಲ್ಲಿ ದಿನಾಂಕ: ೦೭-೦೪-೨೦೨೫ ರಂದು ಬೆಳಿಗ್ಗೆ ೯.೩೦ ರಿಂದ ಸಾಯಂಕಾಲ ೪.೦೦ ಘಂಟೆಯವರೆಗೆ ಜಿಲ್ಲೆಯ ಚಡಚಣದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಎಸ್. ಎಸ್. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಉದ್ಯೋಗ ಮೇಳದಲ್ಲಿ ೪೦ ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಈವರೆಗೆ ಪ್ರತಿಷ್ಠಿತ ೩೦ ಕಂಪನಿಯವರು ನೋಂದಣಿ ಮಾಡಿಕೊಂಡಿರುತ್ತಾರೆ.ಈ ಮೇಳದಲ್ಲಿ ಎಸ್.ಎಸ್.ಎಲ್.ಸಿ/ಪಿಯುಸಿ/ಐಟಿಐ/ ಡಿಪ್ಲೊಮಾ/ಪದವಿ/ ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಪದವೀಧರರಿಗೆ (ಃಂ/B.Sಛಿ.B.ಇಜ) ಅವಕಾಶವಿರುತ್ತದೆ.ನೋಂದಣಿ ಉಚಿತವಾಗಿದ್ದು, ೧೭೨೬ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಆಸಕ್ತ ಅಭ್ಯರ್ಥಿಗಳು ಕ್ಯೂ ಆರ್ ಕೋಡ್ ಮೂಲಕವೂ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳು…

Read More

ಕಿಡಿಕಾರಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಎಂಬುವವರು ಕಾಂಗ್ರೆಸನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿ ಕರ್ನಾಟಕ ಘಟಕವು ವಿನಯ್ ಅವರಿಗೆ ಯಾವುದೇ ಕಾನೂನು ನೆರವು ನೀಡದೆ, ಈಗ ಟ್ವಿಟರ್ ದಲ್ಲಿ ಆರ್ಭಟಿಸುತ್ತಿರುವುದು ಇವರ ಆದ್ಯತೆಗಳನ್ನು ತೋರಿಸುತ್ತದೆ. ಆಡಳಿತಾರೂಢ ಪಕ್ಷದ ಇಬ್ಬರು ಹಾಲಿ ಶಾಸಕರ ಪಾತ್ರವಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ.ಹಿಂದುತ್ವವಾದಿಗಳನ್ನು ಹಾಗೂ ಬಲಪಂಕ್ತೀಯರನ್ನು ಗುರಿಯಾಗಿಸಿಕೊಂಡು, ಅವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅವರ ಕುಟುಂಬವನ್ನು, ಸ್ನೇಹಿತರನ್ನು ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಕುಟಿಲ ರಾಜಕಾರಣವನ್ನು ತೋರಿಸುತ್ತದೆ. ಹಿಂದುತ್ವದ ಪರ ಮಾತನಾಡಿದವರನ್ನು ಮೂಲೆಗುಂಪು ಮಾಡಿ ಅವರನ್ನು ಮಾನಸಿಕವಾಗಿ ಜರ್ಜರಿತರನ್ನಾಗಿ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡುವವರನ್ನು ಸುಮ್ಮನೆ ಬಿಡಬಾರದು.ವಿನಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೆಯೇ ಅವರ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಪೊಲೀಸರು…

Read More