Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ ಮಾಳಿವಿಜಯಪುರ: ಹರಕೆ ಹೊತ್ತವರು ತಂಡ ತಂಡವಾಗಿ ಹಗಲು-ರಾತ್ರಿ ಎನ್ನದೇ ಮಲ್ಲಮ್ಮ-ಮಲ್ಲಿಕಾರ್ಜುನನ ಸ್ಮರಣೆ ಮಾಡುತ್ತಾ ಸಾಗುವಾಗ ದಾರಿ ಸವೆಯುವುದು ಗೊತ್ತಾಗುವುದಿಲ್ಲ. ಆತನೇ ನಮ್ಮನ್ನು ಕರೆಸಿಕೊಳ್ಳುತ್ತಾನೆ ಎಂಬುದು ಯಾತ್ರಿಗಳ ಅಭಿಮತ.ಯುವಕರು, ಹಿರಿಯರು, ವೃದ್ಧರು, ಮಹಿಳೆಯರು ಹೀಗೆ ಸಾವಿರಾರು ಸಂಖ್ಯೆಯಲ್ಲಿ ಯಾತ್ರಿಗಳು ಪಾದಯಾತ್ರೆಯಲ್ಲಿ ಕಾಣಸಿಗುತ್ತಾರೆ. ಇಂಥವರ ಮಧ್ಯದಲ್ಲಿ ವಿಜಯಪುರ ನಗರದ ಎಂ.ಬಿ.ಪಾಟೀಲ ಬಡಾವಣೆಯ ಸ್ಮಿತಾ ಹಾಗೂ ಸಿದ್ಧಾರ್ಥ ದಂಪತಿಗಳ ಎರಡು ವರ್ಷದ ಮಗು ಕಾರ್ತಿಕೇಯ ಪಾಟೀಲನು ಕೈಯಲ್ಲಿ ಬೆತ್ತವನ್ನು ಹಿಡಿದು ಪುಟ್ಟ ಪುಟ್ಟ ಹೆಜ್ಜೆ ಹಾಕುತ್ತ ಆಂಧ್ರಪ್ರದೇಶದ ವೆಂಕಟಪುರದಿಂದ ಶ್ರೀಶೈಲಂ ವರೆಗೆ ಕಾಲ್ನಡಿಗೆಯಲ್ಲಿಯೇ ಭಕ್ತರೊಂದಿಗೆ ಹೆಜ್ಜೆ ಹಾಕಿದ್ದು ಭಕ್ತರನ್ನು ನಿಬ್ಬೆರಗಾಗುವಂತೆ ಮಾಡಿತು.ಸಿದ್ದಪುರಂ ಬಳಿ ಕಡಿಬಾಗಿಲಿನ ವೀರಭದ್ರೇಶ್ವರ ದರ್ಶನ ಪಡೆದು, ಗಿರಿ ಬೆಟ್ಟ ಏರಿ, ಅಂಬಲಿಹಳ್ಳ, ಗಂಗನಹಳ್ಳಿ ನಂತರ ಡೊಂಕ ಮಲ್ಲಯ್ಯನ ಬಾವಿ ನೀರು ಕುಡಿದು, ಭೀಮನಕೊಳ್ಳವನ್ನು ದಾಟಿ, ಕೈಲಾಸ ಬಾಗಿಲಿಗೆ ನಮಸ್ಕಾರವನ್ನು ಮಾಡಿ ಅಟಕೇಶ್ವರ ಸಮೀಪಕ್ಕೆ ಹೊದಾಗ ಸಿಗುವುದೇ ಶ್ರೀಶೈಲ ಮಲ್ಲಯ್ಯನ ದರ್ಶನವನ್ನು ಯುಗಾದಿ ಪಾಡ್ಯದ ದಿನ ಶ್ರೀಶೈಲ ಮಲ್ಲಿಕಾರ್ಜುನನ…
ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಒಂದು ಹನಿ ಪೋಲಿಯೋ ನಿಮ್ಮ ಮಗುವಿನ ಅರೋಗ್ಯ ಕಾಪಾಡುತ್ತದೆ ಮಕ್ಕಳ ಅರೋಗ್ಯ ರಕ್ಷಣೆಗಾಗಿ ತಪ್ಪದೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ತಾಲೂಕ ಆರೋಗ್ಯ ಅಧಿಕಾರಿ ಆರಿಫ್ ಮಾಗಿ ಮನವಿ ಮಾಡಿದರು.ಗ್ರಾಮದ ಸಮುದಾಯ ಅರೋಗ್ಯ ಕೇಂದ್ರದ ಪೋಲಿಯೋ ಲಸಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.ಪೋಲಿಯೋ ಮಲೇರಿಯಾ, ಕಾಲರಾ, ಕುಷ್ಟರೊಗ, ಆನೇಕಾಲು ರೋಗ, ಸೇರಿದಂತೆ ನಿಮ್ಮ ಅರೋಗ್ಯ ಕಾಪಾಡಲು ಸರಕಾರ ಹತ್ತು ಹಲವಾರು ಉಚಿತ ಯೋಜನೆಗಳು ನೀಡುತ್ತಿದೆ ತಾವೆಲ್ಲರೂ ಇದರ ಸದುಪಯೋಗ ಪಡೆದು ತಮ್ಮ ಅಕ್ಕಪಕ್ಕದ ಜನರಿಗೂ ಕೂಡಾ ತಿಳಿಸಬೇಕು ಮನುಷ್ಯ್ ಎಷ್ಟು ವರ್ಷ ಬದುಕುತ್ತಾನೆ ಎನ್ನುವುದು ಮುಖ್ಯವಲ್ಲ ಎಷ್ಟು ವರ್ಷ ಅರೋಗ್ಯದಿಂದ ಬದುಕುತ್ತಾನೆ ಎನ್ನುವುದು ಮುಖ್ಯ ಹೀಗಾಗಿ ಸಮುದಾಯ ಅರೋಗ್ಯ ಕೇಂದ್ರದ ಸಿಬ್ಬಂದಿಗೂ ಹಾಗೂ ಆಶಾ ಅಂಗನವಾಡಿ ಕಾರ್ಯಕರ್ತರಿಗೆ ಗ್ರಾಮಸ್ಥರು ಸಹಕಾರ ನೀಡಿ ಉಚಿತ ಸೇವಗಳ ಲಾಭ ಪಡೆದುಕೊಳ್ಳಬೇಕು ಎಂದರು.ಲಸಿಕೆ ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ, ಗಿರೀಶ್ ಪಾಟೀಲ್, ನೇತ್ರಾಧಿಕಾರಿ ಸ್ವೇತಾ ಕೋರಿ, ಚನ್ನಬಸು ದೇಗಿಲ್, ಮಾಶಾಳ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ನಿರುದ್ಯೋಗಿ ಯುವಕ/ ಯುವತಿಯರಿಗೆ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಬೆಂಗಳೂರು ರವರ ಪ್ರಾದೇಶಿಕ ಕೇಂದ್ರಗಳ ಸಹಯೋಗದೊಂದಿಗೆ ಆಯೋಜಿಸಿರುವ ೨೦೨೪-೨೫ನೇ ಸಾಲಿನ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಸೆಲ್ಫ್ ಎಂಪ್ಲೊಯಡ್ ಟ್ರೆನಿಂಗ್, ಅಸಿಸ್ಟೆಂಟ್ ಬ್ಯೂಟಿ ಥೆರಪಿಸ್ಟ್ ಹಾಗೂ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪ್ರೆಟರ್ ಗಳ ೨ ತಿಂಗಳ ತರಬೇತಿ, ಪ್ಯಾಷನ್ ಡಿಸೈನರ್ ನ ೧ ತಿಂಗಳ ತರಬೇತಿ ಆಗಿದ್ದ್ದು, ಆಸಕ್ತ ಜಿಲ್ಲೆಯ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆ, ವಿಜಯಪುರದ ಉಪನಿರ್ದೇಶಕರ ಕಚೇರಿ ಹಾಗೂ ವಿಜಯಪುರ, ಇಂಡಿ, ಬಸವನ ಬಾಗೇವಾಡಿ, ಸಿಂದಗಿ, ಮುದ್ದೇಬಿಹಾಳ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ಇಂಡಿ ತಾಲೂಕಿನ ಮಿನಿ ವಿಧಾನ ಸೌಧದ ತಹಶೀಲ್ದಾರ ಕಚೇರಿಯಲ್ಲಿ ಏ.೦೯ರ ಬೆಳಿಗ್ಗೆ ೧೦ರಿಂದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಲೋಕಾಯುಕ್ತ ಪೊಲೀಸ್ ಅಧೀಕ್ಷಕರು (ಮೊ:೯೩೬೪೦೬೨೫೨೮), ಪೊಲೀಸ್ ಉಪಾಧೀಕ್ಷಕರ (ಮೊ:೯೩೬೪೦೬೨೫೫೭), ಪೊಲೀಸ್ ಇನ್‌ಸ್ಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್‌ಸ್ಪೆಕ್ಟರ್-೨ (ಮೊ:೯೩೬೪೦೬೨೬೩೯) ಇವರು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಹಾಗೂ ಸರಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಕಚೇರಿ ದೂರವಾಣಿ: ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಯಾಣಿಕರ ಅಹವಾಲು ಕುಂದುಕೊರತೆಗಳನ್ನು ಆಲಿಸಲು ಏ.೦೭ರಂದು ಮಧ್ಯಾಹ್ನ ೩-೩೦ರಿಂದ ೪-೩೦ರವರೆಗೆ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೂರವಾಣಿ ಸಂಖ್ಯೆ : ೬೩೬೬೪೨೩೮೮೭ಗೆ ಸಾರ್ವಜನಿಕರು ಕರೆ ಮಾಡಿ ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಫೋನ್‌ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವಕೀಲ ಎಂ.ಡಿ.ಕುಂಬಾರ ಬುಧವಾರ ಜಿಲ್ಲಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಪಕ್ಷ ಕೊಟ್ಟ ಹಲವಾರು ಜವಾಬ್ದಾರಿಗಳನ್ನು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆ. ಸದ್ಯದ ಕಲುಷಿತ ರಾಜಕೀಯ ಪರಿಸ್ಥಿತಿಯಲ್ಲಿ ಬಹುದೊಡ್ಡ ನಾಯಕ ಬಸನಗೌಡ ಪಾಟೀಲ ಯತ್ನಾಳ ರವರನ್ನು ಉಚ್ಛಾಟನೆ ಮಾಡಿರುವ ನಿರ್ಧಾರ ಖಂಡಿಸಿ ಭಾರವಾದ ಮನಸ್ಸಿನಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪವಾಡ ಬಸವೇಶ್ವರ ಆಶ್ರಮದಲ್ಲಿ ಶ್ರೀ ಬಸಪ್ಪ ಶರಣರ (ಮೌನ ಯೋಗಿ) ೨೮ನೇ ಆರಾಧನಾ ಮಹೋತ್ಸವ ಎ.೪ ಮತ್ತು ೫ ನಡೆಯಲಿದೆ.ಎ೪ ರಂದು ತಾಲೂಕಿನ ಬಸರಕೋಡ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ರಾತ್ರಿ ಅಖಂಡ ಭಜನೆ ನಡೆಯಲಿದೆ. ಎ೫ ರಂದು ಬೆಳಿಗ್ಗೆ ೧೦.೩೦ಕ್ಕೆ ಪುಣ್ಯ ಸ್ಮರಣೋತ್ಸವದ ಪ್ರಯುಕ್ತ ಶರಣರ ಗದ್ದುಗೆಗೆ ಅಭಿಷೇಕ, ಪೂಜೆ, ಭಜನಾ ಸಮಾಪ್ತಿ, ಮಹಾನೈವೇದ್ಯ, ಮಂಗಳಾರತಿ, ಹಾಗೂ ಮಧ್ಯಾಹ್ನ ೧ ಕ್ಕೆ ಮಹಾ ಪ್ರಸಾದ ಇರುತ್ತದೆ. ಈ ಕಾರ್ಯಕ್ರಮಗಳು ಚನ್ನಮ್ಮಲ್ಲಪ್ಪ ಶರಣರ ದಿವ್ಯ ನೇತೃತ್ವದಲ್ಲಿ ವಿವಿಧ ಮಠಾಧೀಶರ, ಸಂತರ ಸಮ್ಮುಖದಲ್ಲಿ ನಡೆಯಲಿದೆ. ಕಾರಣ ಸದ್ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿ ಶ್ರೀ ಗುರುದೇವರ ಕೃಪೆಗೆ ಪಾತ್ರರಾಗಬೇಕಾಗಿ ಪವಾಡ ಬಸವೇಶ್ವರ ಆಶ್ರಮದವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನೀರಾವರಿ ಯೋಜನೆಗೆ ಸರ್ಕಾರದ ಆದ್ಯತೆ | ನಮ್ಮ ನೀರು ನಮ್ಮ ಹಕ್ಕು ಹೋರಾಟ | ಜಮಖಂಡಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ ಸ್ಪಷ್ಠನೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ”ಯುಕೆಪಿ 3ನೇ ಹಂತದ ಗೆಜೆಟ್ ಪ್ರಕಟಣೆಗಾಗಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಾಗುತ್ತದೆ” ಎಂದು ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಭರವಸೆ ನೀಡಿದರು.ನಗರದಲ್ಲಿ ಬುಧವಾರ ದಿ.ಜಮಖಂಡಿ ಅರ್ಬನ್ ಕೋ ಅಪರೇಟಿವ್ ಬ್ಯಾಂಕ್ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.’ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಯಿಂದ ನದಿಯ ನೀರು ಸಮುದ್ರ ಸೇರುವುದನ್ನು ತಪ್ಪಿಸಬೇಕಿದೆ. ಕೃಷ್ಣಾ ನ್ಯಾಯಾಧೀಕರಣದ ಗೆಜೆಟ್ ಪ್ರಕಟಗೊಂಡರೆ ಆಲಮಟ್ಟಿ ಡ್ಯಾಂನಲ್ಲಿ 524 ಮೀ.ವರೆಗೆ ನೀರು ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗಿದ್ದೇವೆ. ಯುಕೆಪಿ ಮೂರನೇ ಹಂತದಲ್ಲಿ ಒಪ್ಪಿತ ಪರಿಹಾರ ವಿತರಿಸಿ ಏಕ ಕಾಲಕ್ಕೆ ಭೂಸ್ವಾಧೀನ ಕೈಗೊಂಡು ರೈತರ ಬದುಕು ಹಸನುಗೊಳಿಸುವ ಯತ್ನ ನಡೆದಿದೆ” ಎಂದರು.”ಮಾಜಿ ಸಚಿವ ಸಿದ್ದು ನ್ಯಾಮಗೌಡ, ಮಾಜಿ ಶಾಸಕ ರಾಮಣ್ಣ ಕಲೂತಿ ಜಮಖಂಡಿ ಅಭಿವೃದ್ಧಿ ಮಾಡಿದ್ದಾರೆ. ನಾನು ಸಹಕಾರಿ ಸಚಿವನಿದ್ದಾಗ ಸಕ್ಕರೆ ಕಾರ್ಖಾನೆಗಳಿಗೆ ಸಾಲ ಒದಗಿಸಿದೆ. ನಾನು…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕೃಷ್ಣಾ ತೀರದ ಐತಿಹಾಸಿಕ ಸುಪ್ರಸಿದ್ಧ ಹಿಂದೂ ಮುಸ್ಲಿಂ ಭಾವೈಕ್ಯತೆಯುಳ್ಳ ಪರಮಜಾಗೃತ ಸ್ಥಾನವು ಆದ ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ತುಬಚಿ ಸುಕ್ಷೇತ್ರದಲ್ಲಿ ಶುಕ್ರವಾರ ಎಪ್ರಿಲ್ 4 ರಿಂದ ರವಿವಾರ ಏಪ್ರಿಲ್ 13ರವರೆಗೆ ಜಾತ್ರಾ ಮಹೋತ್ಸವದ ನಿಮಿತ್ಯ ವಿಶೇಷ ಕಾರ್ಯಕ್ರಮಗಳು ಶ್ರೀ ಮಠದ ಪೂಜ್ಯರಾದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳ ನೇತೃತ್ವದಲ್ಲಿ ಶ್ರೀಮಠದಲ್ಲಿ ಜರುಗುವುದು .ಕಾರ್ಯಕ್ರಮ ವಿವರಏಪ್ರಿಲ್ 4ರಿಂದ ದಿನಾಲು ಸಂಜೆ 7 ಗಂಟೆಗೆ ಪ್ರವಚನ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಜರಗುವುದು. ಏಪ್ರಿಲ್ 8ರಂದು ಮುಂಜಾನೆ 9 ಗಂಟೆಗೆ ಶ್ರೀ ಶಿವಲಿಂಗೇಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಜರುಗುವುದು. ಏಪ್ರಿಲ್ 11ರಂದು ಪೂಜ್ಯಶ್ರೀ ಲಿಂ. ಶಿವಲಿಂಗೇಶ್ವರ ಮಹಾಸ್ವಾಮಿಗಳ 20ನೆಯ ಪುಣ್ಯ ಸ್ಮರಣೋತ್ಸವ ಹಾಗೂ ಭಜನಾ ಮೇಳ ಜರುಗುವುದು. ಏಪ್ರಿಲ್ 12ರಂದು ಮುಂಜಾನೆ 9 ಗಂಟೆಗೆ ಕರಡಿಮೇಳ ಉದ್ಘಾಟನಾ ಕಾರ್ಯಕ್ರಮ, ಏಪ್ರಿಲ್ 12ರಂದು ಸಂಜೆ 7 ಗಂಟೆಗೆ ಶ್ರೀ ಶಿವಲಿಂಗೇಶ್ವರ ಶಿವಯೋಗಿಗಳ ರಥೋತ್ಸವ ಜರಗುವುದು,…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ತಹಸೀಲ್ದಾರ ಕಚೇರಿಗೆ ಬುಧವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ದಿಢೀರನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಹಾಗೂ ಕಂದಾಯ ಇಲಾಖೆಗಳಲ್ಲಿ ನಡೆಯುತ್ತಿರುವ ವಿವಿಧ ಕೆಲಸ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುತ್ತಿರುವ ಬಗ್ಗೆ ಮತ್ತು ಸಾರ್ವಜನಿಕರಿಗೆ ಏನಾದರೂ ತೊಂದರೆಗಳಾಗುತ್ತಿವೆಯಾ ಎಂಬ ಬಗ್ಗೆ ಪರಿಶೀಲಿಸಲು ಭೇಟಿ ನೀಡಿದ್ದೇವೆ. ಜೊತೆಗೆ ಪುರಸಭೆ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್, ಮೆಗಾ ಮಾರುಕಟ್ಟೆ, ಎಸ್‌ಡಿಪಿ, ಎಫ್‌ಎಸ್‌ಡಿಪಿ, ಕಸ ವಿಲೇವಾರಿ ಘಟಕಗಳನ್ನು ವೀಕ್ಷಣೆ ಮಾಡಿದ್ದೇವೆ. ಇಲ್ಲಿನ ಮೆಘಾ ಮಾರುಕಟ್ಟೆ ಟೆಂಡರ್ ಪ್ರಕ್ರೀಯೆಯಲ್ಲಿದ್ದು ಒಂದೆರಡು ವಾರಗಳಲ್ಲಿ ಭೂಮಿ ಪೂಜೆ ಮಾಡಿ ಕೆಲಸ ಪ್ರಾರಂಭಿಸಲಾಗುವದು, ಇಂದಿರಾ ಕ್ಯಾಂಟೀನ ಕಾಮಗಾರಿ ಪೂರ್ಣಗೊಂಡಿದ್ದು, ಸಾಮಗ್ರಿಗಳು ಮತ್ತು ಕೆಲಸದ ಸಿಬ್ಬಂದಿಗಳನ್ನು ಕೂಡ ನಿಯೋಜಿಸಲಾಗಿದೆ. ಇನ್ನೊಂದು ವಾರದಲ್ಲಿ ಎಲ್ಲ ಕೆಲಸಗಳು ಪೂರ್ಣಗೊಳ್ಳಲಿದ್ದು ಇದೇ ತಿಂಗಳಿನಲ್ಲಿ ಪ್ರಾರಂಭಗೊಳ್ಳಲಿದೆ ಎಂದರು.ಈ ವೇಳೆ ತಹಸೀಲ್ದಾರ ಬಲರಾಮ ಕಟ್ಟಿಮನಿ, ಎಎಲ್‌ಡಿಆರ್ ಶಿವಾನಂದ ಸಜ್ಜನ, ಶಿರಸ್ತೇದಾರ ಎಂ.ಎಂ.ಬಾಗೇವಾಡಿ, ಕಂದಾಯ ನಿರೀಕ್ಷಕರುಗಳಾದ ವೆಂಕಟೇಶ ಅಂಬಿಗೇರ, ಮಹಾಂತೇಶ…
