Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳು ದೇಶಭಕ್ತಿಯ ಜೊತೆಗೆ ಪಾಲಕರಿಗೆ ಸದಾ ಗೌರವ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಎನ್‌ಎಸ್‌ಎಸ್ ಸಲಹಾ ಸಮಿತಿಯ ಸದಸ್ಯ ಡಾ.ಜಾವಿದ್ ಜಮಾದಾರ ಹೇಳಿದರು.ನಗರದ ಕರ್ನಾಟಕ ರಾಜ್ಯ ಸರ್ಕಾರ ಎನ್‌ಎಸ್‌ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಗುರುವಾರ ಆಯೋಸಿದ್ದ ‘ರಾಷ್ಟ್ರೀಯ ಭಾವೈಕ್ಯತಾ ಶಿಬಿರ-೨೦೨೫’ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ದೇಶಭಕ್ತಿಯ ಮನೋಭಾವನೆ ಬೆಳೆಸಿಕೊಳ್ಳಬೇಕು. ನಮಗಾಗಿ ನಿತ್ಯ ಜೀವನವನ್ನೇ ತ್ಯಾಗ ಮಾಡುವ ಪಾಲಕರ ಋಣವನ್ನು ಯಾವತ್ತೂ ತೀರಿಸಲು ಸಾಧ್ಯವಿಲ್ಲ. ಪಾಲಕರಿಗೆ ನಾವು ಸದಾ ಗೌರವ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಭಾವನಾತ್ಮಕವಾಗಿ ಕರೆ ನೀಡಿದರು. ಅಲ್ಲದೇ, ವಿದ್ಯಾರ್ಥಿಗಳು ಸಂಸ್ಕೃತಿ, ಆಚಾರ-ವಿಚಾರಗಳನ್ನು ಅರಿಯಬೇಕು. ಜನರೊಂದಿಗೆ ಒಡನಾಟ ಬೆಳೆಸಿಬೇಕು. ಎನ್.ಎಸ್.ಎಸ್ ಚಟುವಟಿಕೆಗಳ ಮೂಲಕ ಪಬ್ಲಿಕ್ ನೆಟ್ವರ್ಕಿಂಗ್ ಮಾಡಿಕೊಳ್ಳಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಹೊರಡಿಸಿರುವ ಆದೇಶವನ್ನು ಜಿಲ್ಲಾ ಬಿಜೆಪಿ ಕೋರ ಕಮಿಟಿ ಅನುಮೋದಿಸಿದೆ.ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಪಕ್ಷದ ಜಿಲ್ಲಾಧ್ಯಕ್ಷ ಗುರಲಿಂಗಪ್ಫ ಅಂಗಡಿ ಅಧ್ಯಕ್ಷತೆಯಲ್ಲಿ ನಡೆದ ಕೋರಕಮಿಟಿ ಸಭೆಯಲ್ಲಿ ಶಾಸಕ ಯತ್ನಾಳರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಕುರಿತು ಸುದೀರ್ಘ ಸಮಾಲೋಚನೆ ನಡೆಸಿ ಅಂತಿಮವಾಗಿ ಕೇಂದ್ರ ಶಿಸ್ತು ಸಮಿತಿಯ ವರಿಷ್ಠರು ಕೈಗೊಂಡ ನಿರ್ಣಯವನ್ನು ಅನುಮೋದಿಸಲಾಯಿತು.ಸಭೆಯ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಗುರಲಿಂಗಪ್ಫ ಅಂಗಡಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಕೇಂದ್ರ ಶಿಸ್ತು ಸಮಿತಿಯ ಆದೇಶ ಪತ್ರದ ಸಾರಾಂಶವನ್ನು ಓದಿ ಹೇಳಿದರು.ಇದು ರಾಷ್ಟ್ರಮಟ್ಟದಲ್ಲಿ ಆಗಿರುವ ನಿರ್ಣಯ. ಇದು ರಾಷ್ಟ್ರಮಟ್ಟದಲ್ಲಿ ಆಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯ ವರಿಷ್ಠರು ಶಾಸಕ ಯತ್ನಾಳ ಅವರಿಗೆ ಶೋಕಾಸ್ ನೋಟೀಸ್ ನೀಡಿ, ಅವರಿಂದ ಉತ್ತರ ಪಡೆದುಕೊಂಡು ಎಲ್ಲ ಮುಂದಿನ ಸಾಧಕ ಬಾಧಕಗಳ ಬಗ್ಗೆ ಪರಾಮರ್ಶೆ ಮಾಡಿಯೇ…
ಬೆಂಗಳೂರಿನಲ್ಲಿ ಬಿಜೆಪಿ ಭಿನ್ನಮತೀಯ ನಾಯಕರ ಸಭೆ | ಬಿಜೆಪಿಯಲ್ಲಿ ಬದಲಾವಣೆಗಳಿಗಾಗಿ ಹೋರಾಟ ಮುಂದುವರಿಕೆಗೆ ನಿರ್ಧಾರ ಬೆಂಗಳೂರು: ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗಿಟ್ಟಿದ್ದನ್ನು ಮರುಪರಿಶೀಲಿಸುವಂತೆ ಬಿಜೆಪಿ ಭಿನ್ನಮತೀಯ ನಾಯಕರು ಸಭೆ ಸೇರಿ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ಪಕ್ಷದಿಂದ ದೂರವಾಗುವ ಯಾವುದೇ ಯೋಜನೆ ಇಲ್ಲ. ತಮ್ಮ ಕಡೆಯಿಂದ ಯಾವುದೇ ತಪ್ಪುಗಳನ್ನು ಸರಿಪಡಿಸಲು ಸಿದ್ಧರಿದ್ದೇವೆ. ಆದರೆ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ಬದಲಾಯಿಸುವುದು ಸೇರಿದಂತೆ ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆಗಳಿಗಾಗಿ ಹೋರಾಡುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.ಮಾಜಿ ಕೇಂದ್ರ ಸಚಿವ ಜಿ ಎಂ ಸಿದ್ದೇಶ್ವರ ಅವರ ಬೆಂಗಳೂರಿನ ನಿವಾಸದಲ್ಲಿ ಯತ್ನಾಳ್ ಜೊತೆಗೆ, ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಬಿ ಪಿ ಹರೀಶ್, ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘನೆ ಮಾಡಿದ್ದಕ್ಕಾಗಿ ಬಿಜೆಪಿ ಬುಧವಾರ ಮಾಜಿ ಕೇಂದ್ರ ಸಚಿವ ಯತ್ನಾಳ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಪ್ರಯೋಜನಕಾರಿಯಾಗುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆ ವತಿಯಿಂದ ಲಚ್ಯಾಣ ಗ್ರಾಮದಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲರು ಚಾಲನೆ ನೀಡಿದರು.ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಗ್ರಾ.ಪಂ ಲಚ್ಯಾಣ ಮತ್ತು ಧರ್ಮಸ್ಥಳ ಕ್ಷೇಮಾಭಿವೃದ್ದಿ ಸಂಸ್ಥೆ ಸಹಯೋಗದಲ್ಲಿ಼ ಶುದ್ಧ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಶಾಸಕ ಯಶವಂತರಾಯಗೌಡ ಪಾಟೀಲರು ಧರ್ಮಸ್ಥಳ ಕ್ಷೇಮಾಭಿವೃದ್ದಿ ಸಂಸ್ಥೆ ತಾಲೂಕಿನಲ್ಲಿ ಜನೋಪಯೋಗಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಂಡಿರುವದು ಶ್ಲಾಘನೀಯ. ಶುದ್ಧ ನೀರಿನ ಘಟಕದ ಮೂಲಕ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ ಎಂದರು.ಮನುಕುಲ ಸೇವೆಯಲ್ಲಿ ಕಳೆದಿರುವ ಸಂಸ್ಥೆ ರಾಜ್ಯದ್ಯಾದಂತ ಲಕ್ಷಾಂತರ ಜನರಿಗೆ ಯೋಜನೆಗಳೊಂದಿಗೆ ಮಾನವ ಸೇವೆಗೆ ಮುಂದಾಗಿದೆ. ಗ್ರಾಮಸ್ಥರಿಗೆ ಅಗತ್ಯ ಶುದ್ಧ ಕುಡಿಯುವ ನೀರಿನ ಘಟಕದ ಮೂಲಕ ಧರ್ಮಸ್ಥಳ ಸಂಸ್ಥೆ ತನ್ನ ಕಾರ್ಯಯೋಜನೆಯನ್ನು ಮತ್ತಷ್ಟು ಅರ್ಥಪೂರ್ಣ ವಾಗಿಸಿಕೊಂಡಿದೆ ಎಂದರು.ತಾಲೂಕಿನ ಯೋಜನಾಧಿಕಾರಿ ನಟರಾಜ ಎಲ್.ಎಂ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ತಾಲೂಕಿನಾದಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಲ್ಲೂ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ತೆಲಗಿ ರಸ್ತೆಯಲ್ಲಿರುವ ಜಾಮೀಯಾ ಮಸೀದಿ ಮುಂಭಾಗ ಮುಸ್ಲಿಂ ಬಾಂಧವರು ಶುಕ್ರವಾರದ ಪ್ರಾರ್ಥನೆ ಮುಗಿಸಿಕೊಂಡು ಹೊರಬಂದ ನಂತರ ತೋಳಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಶುಕ್ರವಾರ ವಕ್ಫ್ (ತಿದ್ದುಪಡಿ) ಮಸೂದೆ-೨೦೨೪ ಕಾಯ್ದೆಯನ್ನು ಕೇಂದ್ರ ಸರ್ಕಾರ ರದ್ದುಪಡಿಸುವಂತೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ ಮಾಡಿದರು.ಈ ಸಂದರ್ಭದಲ್ಲಿ ಜಮಾತೇ ಇಸ್ಲಾಮೀ ಹಿಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಮೊಹಮ್ಮದಯುಸುಫ್ ಕಣಿ ಮಾತನಾಡಿ, ಕೇಂದ್ರ ಸರ್ಕಾರವು ಮಂಡಿಸುವ ವಕ್ಫ್ (ತಿದ್ದುಪಡಿ) ಮಸೂದೆ-೨೦೨೪ ಕಾಯ್ದೆಯು ವಕ್ ಆಸ್ತಿಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ವಿರೋಧವಾಗಿದೆ. ಈ ಕಾಯ್ದೆಯು ಯಾವುದೇ ಕಾರಣಕ್ಕೂ ಮಂಡನೆಯಾಗದೆ ಜಾರಿ ಬರಬಾರದು. ಇದನ್ನು ಕೇಂದ್ರ ಸರ್ಕಾರ ರದ್ದುಪಡಿಸಬೇಕು. ಈ ಕಾಯ್ದೆ ವಿರೋಧಿಸಿ ಇಂದು ರಾಷ್ಟ್ರವ್ಯಾಪಿಯಲ್ಲಿ ನಮ್ಮ ಬಾಂಧವರು ರಂಜಾನ ಹಬ್ಬದ ಕೊನೆಯ ಶುಕ್ರವಾರದ ಪ್ರಾರ್ಥನೆ ನಂತರ ತೋಳಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೂಡಲೇ ಕೇಂದ್ರ ಸರ್ಕಾರವು ಈ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿರುವುದನ್ನು ಖಂಡಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ವಿವಿಧ ಹಿಂದು ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.ಭಾಜಪ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯಂದ್ರ ಹಾಗೂ ಬಿ ಎಸ್ ಯಡಿಯೂರಪ್ಪ ಅವರಿಗೆ ಧಿಕ್ಕಾರ ಯತ್ನಾಳರ ಉಚ್ಛಾಟನೆ ಆದೇಶವನ್ನು ಮರಳಿ ಪಡೆಯಬೇಕು ಎಂದು ಘೋಷಣೆ ಕೂಗಿದ ಮುಖಂಡರು ನಂತರ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಟೈರಗೆ ಬೆಂಕಿ ಹಚ್ಚಿಕೆಲ ಹೊತ್ತು ರಸ್ತೆ ಸಂಚಾರ ಬಂದ್ ಮಾಡಿದರು.ಈ ಸಂಧರ್ಭದಲ್ಲಿ ಪಂಚಮಸಾಲಿ ಸಮಾಜದ ಅಧ್ಯಕ್ಷ ಬಸವರಾಜ ಗೊಳಸಂಗಿ ಮಾತನಾಡಿ, ಬಿ. ಎಸ್ .ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರನ ಪಿತ್ತೂರಿಯಿಂದಾಗಿ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ ಗಂಭೀರ ಆರೋಪ…
ಅಂಜುಮನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಎಂ.ಪಾಟೀಲ ಗಣಿಹಾರ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಮುಸ್ಲಿಂ ಸಮುದಾಯದ ಸರ್ವೇ ನಂಬರ್ ೧೦೨೭, ೧೦೨೯, ೮೩೪ ಮೂರು ಖಬರಸ್ತಾನಗಳಿದ್ದು, ಅವುಗಳು ಅಂಜುಮನ ಒಡೆತನದ ಆಸ್ತಿಗಳಾಗಿವೆ ಹೊರತು ವಕ್ಫ್ ಆಸ್ತಿಗಳಲ್ಲ. ಜನರಲ್ಲಿ ತಪ್ಪು ಭಾವನೆ ತುಂಬಿ ವಕ್ಫ್ ಅಧಿಕಾರಿಗಳು ಹಾಗೂ ಸ್ವಯಂ ಘೋಷಿತ ಖಬರಸ್ತಾನ ಕಮಿಟಿಯು ತಾರಾತುರಿಯಲ್ಲಿ ಜಾಗೆಯನ್ನು ಖಾಲಿ ಮಾಡಿಸಿ ಬಡಜನರ ಹೊಟ್ಟೆ ಮೇಲೆ ಬರೆ ಎಳೆಯುವ ಕೆಲಸ ಮಾಡಿದ್ದಾರೆ. ಅದಕ್ಕೆ ಅವರ ವಿರುದ್ಧ ಅಂಜುಮನ್ ಸಂಸ್ಥೆಯು ಇದೆ ೧೫ರಂದು ಹೈಕೊರ್ಟ್ನಿಂದ ತಡೆಯಾಜ್ಞೆ ತಂದಿದೆ ಎಂದು ಅಂಜುಮನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಎಂ.ಪಾಟೀಲ ಗಣಿಹಾರ ಹೇಳಿದರು.ಪಟ್ಟಣದ ಅಂಜುಮನ ಶಿಕ್ಷಣ ಸಂಸ್ಥೆಯಲ್ಲಿ ವಕ್ಫ ಆಸ್ತಿಗಳ ಕುರಿತು ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.೧೯೩೭-೩೮ರಲ್ಲಿ ಸ್ಥಾಪನೆಯಾದ ಅಂಜುಮನ ಶಿಕ್ಷಣ ಸಂಸ್ಥೆಯ ಸ್ವಂತ ಈ ಮೂರು ಆಸ್ತಿಗಳ ನಿರ್ವಹಣೆ ಮಾಡುತ್ತಿತ್ತು. ಅದನ್ನು ಇನ್ನಷ್ಚು ಅಭಿವೃದ್ಧಿ ಪಡಿಸಲು ವಕ್ಫಗೆ ಸಂರಕ್ಷಣೆ ಮಾಡಲು ಈ ಎಲ್ಲ ಆಸ್ತಿಗಳನ್ನು ನೀಡಿದ್ದು ಅವುಗಳು ಬೋರ್ಡ್…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಾಜಿ ಕೇಂದ್ರ ಸಚಿವ,ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆಯನ್ನು ಹೈಕಮಾಂಡ್ ಮರು ಪರಿಶೀಲನೆ ಮಾಡಿ, ರದ್ದು ಮಾಡಬೇಕೆಂದು ಜ್ಞಾನ ಭಾರತಿ ವಿದ್ಯಾ ಮಂದಿರದ ಕಾರ್ಯದರ್ಶಿ ಸತೀಶ ಹಿರೇಮಠ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉತ್ತರ ಕರ್ನಾಟಕದ ಅಭಿವೃದ್ದಿ ಚಿಂತಕ, ಶಿಕ್ಷಣ ಪ್ರೇಮಿ, ಭ್ರಷ್ಟಾಚಾರ ಮತ್ತು ವಂಶವಾರು ರಾಜಕಾರಣವನ್ನು ವಿರೋಧಿಸಿ ಸರ್ವ ಸಮಾಜದ ಹಿತ ಬಯಸಿದ ಹಿರಿಯ ರಾಜಕಾರಣಿ ಇಂದಿನ ಯುವ ಪೀಳಿಗೆಗೆ ಸ್ಪೂರ್ತಿಯಾದ ಯತ್ನಾಳರ ಉಚ್ಚಾಟನೆ ಖಂಡನೀಯ. ಪಕ್ಷದ ವರಿಷ್ಠರು ಕೂಡಲೇ ಇದನ್ನು ಪರಿಶೀಲಿಸಿ ರದ್ದುಗೊಳಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದವರಿಗೆ ಸತತವಾಗಿ ಉದ್ಯೋಗ ಕಲ್ಪಿಸುವ ಅಂಗವಾಗಿ ಜಿಲ್ಲಾ ಪಂಚಾಯತಿ ವತಿಯಿಂದ ದುಡಿಯೋಣ ಬಾ ಅಭಿಯಾನ ಆಯೋಜಿಸಲಾಗಿದೆ. ಮಾರ್ಚ್ ೧೫ ರಿಂದ ಜಿಲ್ಲೆಯ ೧೩ ತಾಲೂಕಿನಲ್ಲಿ ದುಡಿಯೋಣ ಬಾ ಅಭಿಯಾನ ಯಶಸ್ವಿಯಾಗಿ ಆರಂಭವಾಗಿದ್ದು, ಜೂನ್ ಮಾಹೆಯ ಅಂತ್ಯದವರೆಗೆ ಈ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ.ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ ೧೦೦ ದಿನಗಳ ಉದ್ಯೋಗ ಪಡೆಯಲು ಅವಕಾಶವಿದೆ. ಬೇಸಿಗೆ ಅವಧಿಯಲ್ಲಿ ೧೦೦ ದಿನ ಕೆಲಸ ನಿರ್ವಹಿಸಿದ್ದಲ್ಲಿ ರೂ.೩೭,೦೦೦/- ಪಾವತಿಯಾಗುತ್ತದೆ. ಅಲ್ಲದೇ ಯೋಜನೆಯಡಿ ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೂಲಿ ನೀಡಲಾಗುತ್ತಿದೆ. ನರೇಗಾ ಯೋಜನೆಯಡಿ ಕೂಲಿ ದರವನ್ನು ಏಪ್ರಿಲ್ ೧ ರಿಂದ ರೂ. ೩೪೯ ರಿಂದ ರೂ.೩೭೦ಕ್ಕೆ ಹೆಚ್ಚಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ ಎಂದು ಅವರು ಹೇಳಿದರು.ಅಭಿಯಾನದ ಉದ್ದೇಶ: ಮಹಾತ್ಮ ಗಾಂಧಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ, ಪಂಚಮಸಾಲಿ ಸಮಾಜದ ಮೀಸಲಾತಿಗೆ, ಹಿಂದೂ ಪರ ನಿಲುವುಗಳಿಗೆ ಯತ್ನಾಳ ಅವರು ಯಾವಾಗಲೂ ಮುಂದೆ ಬಂದಿದ್ದಾರೆ. ಎಲ್ಲ ಜಾತಿ ಸಮಾಜದವರೊಂದಿಗೆ ನಿಂತಿದ್ದಾರೆ. ಈಗ ಎಲ್ಲರೂ ಅವರ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ ಹೇಳಿದ್ದಾರೆ.ಸಿಂದಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ೨ಎ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಗೌರವಾಧ್ಯಕ್ಷ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಶುಕ್ರವಾರ ಅಖಿಲ ಭಾರತ ಪಂಚಮಸಾಲಿ ಸಮಾಜ ತಾಲೂಕು ಘಟಕ ಸಿಂದಗಿ ವತಿಯಿಂದ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಪಕ್ಷದಲ್ಲಿರುವ ಕೆಲವರ ಹೊಂದಾಣಿಕೆ ರಾಜಕಾರಣ, ಭ್ರಷ್ಟಾಚಾರ, ಕುಟುಂಬ ರಾಜಕಾರಣ, ವಿರೋಧಿಸಿದ್ದಕ್ಕೆ ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿದ ಯತ್ನಾಳರನ್ನು ಬಿಜೆಪಿ ಪಕ್ಷದ ಕೇಂದ್ರ ವರಿಷ್ಠರು ೬ವರ್ಷಗಳ ಕಾಲ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವುದು ಖೇದಕರ ಸಂಗತಿ. ಪಂಚಮಸಾಲಿ ಸಮಾಜದ ೨ಎ ಮೀಸಲಾತಿಗಾಗಿ ವಿಧಾನ ಸೌಧದ ಒಳಗೂ ಮತ್ತು ಹೊರಗೂ ಸಮಾಜದ ಪರವಾಗಿ ಧ್ವನಿ ಎತ್ತದ ಏಕೈಕ…
