Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಗುರುವಾರ ವಿಜಯಪುರ ನಗರದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪರಿಶೀಲನೆ ನಡೆಸಿದರು.ಆಧುನಿಕ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿ ಗಣಕೀಕರಣ ಕಾರ್ಯ ಪರಿಶೀಲಿಸಿದ ಅವರು, ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕೃತಗೊಳಿಸುವುದರಿಂದ ರೈತರಿಗೆ-ಸಾರ್ವಜನಿಕರಿಗೆ ಆನ್‌ಲೈನ್ ಮೂಲಕ ದಾಖಲೆಗಳು ಸುಲಭವಾಗಿ ದೊರೆಯಲಿರುವುದರಿಂದ ಸಮಯ ಹಾಗೂ ಹಣದ ಉಳಿತಾಯವಾಗಿ, ಸಾರ್ವಜನಿಕರ ಕಚೇರಿ ಅಲೆದಾಟವು ತಪ್ಪಿದಂತಾಗುತ್ತದೆ. ಇದರಿಂದ ಅತ್ಯಂತ ಅನುಕೂಲವಾಗಲಿದ್ದು, ಈ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ ಅವರು, ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿದರು.ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಚುನಾವಣಾ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿರುವ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ನಿಲ್ದಾಣದಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಉಪ-ವಿಭಾಗ ಲೋಕೋಪಯೋಗಿ ಇಲಾಖೆ ವತಿಯಿಂದ ೨೦೨೪-೨೫ನೆಯ ಸಾಲಿನ ಅಪೆಂಡಿಕ್ಸ್-ಇ ಯೋಜನೆ ಅಡಿಯಲ್ಲಿ ಸಿಂದಗಿ ತಾಲೂಕಿನ ಮನ್ನಾಪುರ-ಹಂಚಿನಾಳ ರಸ್ತೆ ವ್ಹಾಯಾ ರಾಷ್ಟ್ರೀಯ ಹೆದ್ದಾರಿ-೨೧೮ಕ್ಕೆ ಕೂಡುವ ರಸ್ತೆ ಜಿಲ್ಲಾ ಮುಖ್ಯ ರಸ್ತೆಯ ೫.೭ಕಿಮೀ-೬.೨೦ಕಿಮೀ ವರೆಗೆ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ (ಬ್ಯಾಲಿಹಾಳ ಗ್ರಾಮ ಪರಿಮಿತಿ) ರೂ.೫೦ಲಕ್ಷ ಮೊತ್ತದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಭೂಮಿ ಪೂಜೆ ನೆರವೇರಿಸಿದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಬಸವೇಶ್ವರ ದೇವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ತ ಕಲಬುರಗಿ ಶ್ರೀ ಶರಣ ಬಸವೇಶ್ವರ ಮಹಾಪುರಾಣವನ್ನು ಜು.೨೫ ರಿಂದ ಆ.೨೮ರವರೆಗೆ ಆಯೋಜನೆ ಮಾಡಲಾಗಿದ್ದು, ಖಾಕಂಡಕಿಯ ಪಂಡಿತ ಶಿವಾನಂದ ಶಾಸ್ತಿçಗಳು ಪ್ರವಚನ ನೀಡಲಿದ್ದಾರೆ. ಸಂಗೀತ ಸೇವೆಯನ್ನು ರಾಜಶೇಖರ ಹುಲ್ಲೂರು, ತಬಲಾ ವಾದಕರಾಗಿ ಮಾಹಾಂತೇಶ ಹುಲ್ಲೂರು, ನಂದಿ ಸೇವೆಯನ್ನು ವೀರಭದ್ರಪ್ಪ ಕ. ಮಂಗಲಗಿ ವಹಿಸಿಕೊಳ್ಳಲಿದ್ದಾರೆ. ಹಾಗಾಗಿ ಸಮಸ್ತ ಗುಬ್ಬೇವಾಡ ಗ್ರಾಮಸ್ಥರು, ಭಕ್ತಾದಿಗಳು ಮತ್ತು ಸಾರ್ವಜನಿಕರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಸವೇಶ್ವರರ ಕೃಪೆಗೆ ಪಾತ್ರರಾಗಬೇಕೆಂದು ಬಸವೇಶ್ವರ ಯುವಕ ಸಂಘ, ದೇವಸ್ಥಾನದ ಕಮಿಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಾಧ್ಯಾಪಕರಾದವರು ಕಿವಿಗೆ ಪಾಠ ಬೋಧನೆ ಮಾಡಲ್ಲ. ಬದಲಿಗೆ ಮನಸ್ಸಿಗೆ ತಗಲುವ ಹಾಗೆ ಪಾಠ ಬೋಧನೆ ಮಾಡುತ್ತಾರೆ. ವಿದ್ಯೆ ಕಲಿಸಿದ ಗುರುಗಳು ಜೀವಂತ ದೇವರುಗಳಿದ್ದಾಗೆ ಎಂದು ಜಿ.ಪಿ.ಪೋರವಾಲ ಪದವಿ ಕಾಲೇಜಿನ ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಹೇಳಿದರು.ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಪೀಪಲ್ಸ್ ಎಜ್ಯುಕೇಶನ್ ಸೊಸೈಟಿಯ ಪಿ.ಇ.ಎಸ್.ಗಂಗಾಧರ ಎನ್.ಬಿರಾದಾರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಮಹಾವಿದ್ಯಾಲಯ ಪಠ್ಯಪೂರಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಮನಸ್ಸಿನ ಮೇಲೆ ಹತೋಟಿಯನ್ನುಟ್ಟುಕೊಂಡರೆ ಜೀವನ ಯಶಸ್ವಿಯಾಗುತ್ತದೆ. ವಿದ್ಯಾರ್ಥಿಗಳು ಅತೀ ಹೆಚ್ಚು ಮೋಬೈಲ್‌ನ್ನು ಬಳಕೆ ಮಾಡದೇ ದಿನದಲ್ಲಿ ೪ಗಂಟೆಗಳ ಕಾಲ ಓದಿನಲ್ಲಿ ತೊಡಗಿಸಿಕೊಳ್ಳಬೇಕು. ಅಂದಾಗ ಮಾತ್ರ ನೀವು ಉತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮಬಹುದು. ಜೀವನದಲ್ಲಿ ಬದುಕಲಿಕ್ಕೆ ಸಾವಿರಾರು ದಾರಿಗಳಿವೆ. ವಿದ್ಯಾರ್ಥಿಗಳು ದಾರಿ ಬಿಟ್ಟರೆ ಅವರನ್ನು ಸರಿದಾರಿಗೆ ತರುವುದು ಉಪನ್ಯಾಸಕರ ಕರ್ತವ್ಯವಾಗಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿ ಪ್ರಾಧ್ಯಾಪಕ, ಪತ್ರಕರ್ತ ಮಹಾಂತೇಶ ನೂಲಾನವರ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರ ಮೈಗೂಡಿಸಿಕೊಳ್ಳುವುದು ಬಹು…
ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಆವರಣದಲ್ಲಿ ಹಮ್ಮಿಕೊಂಡ ಪಠ್ಯಪೂರಕ ಚಟುವಟಿಕೆಗಳ, ಶಾಲಾ ಸಂಘಗಳ ಉದ್ಘಾಟನೆ ಹಾಗೂ ಶಾಲಾ ಸಂಸತ್ತು ಪದಾಧಿಕಾರಿಗಳ ಪ್ರತಿಜ್ಞಾವಿಧಿ ಸಮಾರಂಭ | ಶಿಕ್ಷಣ ಸಂಯೋಜಕ ಬಸನಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಈ ಶಾಲಾ ಸಂಸತ್ತಿನ ಚಟುವಟಿಕೆಗಳನ್ನು ಗಮನಿಸಿದಾಗ ನಿಜಕ್ಕೂ ನಾನು ಸಂಸತ್ತಿನಲ್ಲಿಯೇ ಇದ್ದೇನೆ ಎಂಬ ಭಾವ ಮೂಡಿತು. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎನ್ನುವ ದಿಸೆಯಲ್ಲಿ ಈ ಸಂಸ್ಥೆ ಮಕ್ಕಳಲ್ಲಿ ಸಂಸತ್ತಿನ ಜ್ಞಾನ ಮೂಡಿಸುತ್ತಿರುವುದು ಸಂತಸ ಎಂದು ಶಿಕ್ಷಣ ಸಂಯೋಜಕ ಬಸನಗೌಡ ಪಾಟೀಲ ಹೇಳಿದರು.ಸಿಂದಗಿ ಪಟ್ಟಣದ ಹೊರವಲಯದ ರಾಂಪುರ ರಸ್ತೆಯಲ್ಲಿರುವ ಶ್ರೀ ಸಮರ್ಥ ವಿದ್ಯಾವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡ ೨೦೨೫-೨೬ನೆಯ ಸಾಲಿನ ಪಠ್ಯಪೂರಕ ಚಟುವಟಿಕೆಗಳ, ಶಾಲಾ ಸಂಘಗಳ ಉದ್ಘಾಟನೆ ಹಾಗೂ ಶಾಲಾ ಸಂಸತ್ತು ಪದಾಧಿಕಾರಿಗಳ ಪ್ರತಿಜ್ಞಾವಿಧಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾಭ್ಯಾಸದ ಕಡೆಗೆ ಮಕ್ಕಳು ಹೆಚ್ಚಿನ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿದ್ಯುತ್ ವಿತರಣಾ ಲಿಂಕ್ ಲೈನ್ ಕಾಮಗಾರಿ ಕಾರಣ ದಿ:೨೬ ರಂದು(ಶನಿವಾರ) ೧೧೦/೧೧ ಕೆ.ವ್ಹಿ ದೇವರಹಿಪ್ಪರಗಿ ಸ್ಟೇಷನ್‌ನಿಂದ ಹೋಗುವ ದೇವರಹಿಪ್ಪರಗಿ ಎನ್.ಜೆ.ವಾಯ್, ಇಂಗಳಗಿ ಎನ್.ಜೆ.ವಾಯ್, ಕನ್ನೋಳ್ಳಿ ಎನ್.ಜೆ.ವಾಯ್, ಇಂಗಳಗಿ ಐ.ಪಿ, ಪಡಗಾನೂರ ಐ.ಪಿ, ಹರನಾಳ ಹೊಸ ಹಾಗೂ ಹಳೆಯ ಐಪಿ, ಫೀಡರ್‌ಗಳ ಮೇಲೆ ಬೆಳಿಗ್ಗೆ ೯.೦೦ ಗಂಟೆಯಿAದ ಸಾಯಂಕಾಲ ೬.೦೦ ಗಂಟೆಯವರೆಗೆ ವಿದ್ಯುತ್ ಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಕಾರಣ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ಹೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರ ದೇವರಹಿಪ್ಪರಗಿ ಇವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜಕೀಯ ದುರುದ್ದೇಶದಿಂದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ದಾಖಲಿಸಿದ್ದ ಅರ್ಜಿಯನ್ನು ಕರ್ನಾಟಕ ಸರ್ವೋಚ್ಛ ನ್ಯಾಯಾಲಯವು ಇದೇ ಜು.18 ಶುಕ್ರವಾರ ದಂದು ವಜಾಗೊಳಿಸಿದೆ.2023ರ ವಿಧಾನಸಭಾ ಚುನಾವಣೆಯಲ್ಲಿ ನಗರ ಶಾಸಕರ ವಿರುದ್ಧ ಸೋಲು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಖಾಜಾಸಾಬ್ ಮುಶ್ರೀಪ್, ಹತಾಶನಾಗಿ 2023 ರ ಜೂನ್ 23 ರಂದು ದೂರು ನೀಡಿದ್ದರು. ಇದನ್ನು 2023ರ ಜುಲೈ 12 ರಂದು ಮಾನ್ಯ ಹೈಕೋರ್ಟ ಅರ್ಜಿ ವಜಾಗೊಳಿಸಿದಲ್ಲದೆ, ರೂ.1 ಲಕ್ಷ ದಂಡ ಹಾಕಿ ಛಿಮಾರಿ ಹಾಕಿತ್ತು. ಹೈಕೋರ್ಟ ತೀರ್ಪು ಪ್ರಶ್ನಿಸಿ ಮತ್ತೆ ಮಾನ್ಯ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸಹ ನ್ಯಾಯಾಲಯವು ವಜಾಗೊಳಿಸಿದೆ. ಇದರಿಂದ ಸುಳ್ಳು ಆರೋಪ ಮಾಡಿ ವಿನಾಕಾರಣ ನ್ಯಾಯಾಲಯದ ಸಮಯ ವ್ಯರ್ಥ ಮಾಡಿರುವ ಇವರಿಗೆ ಮುಖಭಂಗವಾದಂತಾಗಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಇತ್ತೀಚಿಗೆ ಜರುಗಿದ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ತಾಲ್ಲೂಕಿನ ಪ್ರಗತಿಪರ ಸಾವಯವ ಕೃಷಿಕ ಹಾಗೂ ನಿವೃತ್ತ ಶಿಕ್ಷಕ ಎಮ್.ಎಸ್.ಅರ್ಜುಣಗಿ ಇವರಿಗೆ ಜೋಡಿರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ವಿವಿಧ ಸಹಕಾರ ಸಂಘ, ಸಂಸ್ಥೆಗಳ ನಿರ್ದೇಶಕರು ಹಾಗೂ ಸಿಬ್ಬಂದಿ ಸಹಕಾರ ಭಾರತಿಯ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವಿವಿಧ ಪದಾಧಿಕಾರಿಗಳ ಹುದ್ದೆಗೆ ನೇಮಗೊಂಡಿದ್ದಾರೆ.ಪಟ್ಟಣದ ರಾವುತರಾಯ ಮಲ್ಲಯ್ಯ ದೇವಸ್ಥಾನ ಕಮೀಟಿ ಅಧ್ಯಕ್ಷ ವಿನೋದಗೌಡ ಪಾಟೀಲ ಸಹಕಾರ ಭಾರತಿ ದೇವರಹಿಪ್ಪರಗಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ, ಸಮೃದ್ಧಿ ಸಹಕಾರ ಸಂಘದ ನಿರ್ದೇಶಕ ಕೆ.ಎಸ್.ಕೋರಿ ತಾಲ್ಲೂಕು ಘಟಕದ ಸಂಘಟನಾ ಕಾರ್ಯದರ್ಶಿಯಾಗಿ, ಹಾಗೂ ಕಲ್ಮೇಶ್ವರ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಯಲ್ಲಾಲಿಂಗ ವಡ್ಡೋಡಗಿ ಇವರು ತಾಲ್ಲೂಕು ಘಟಕದ ಪ್ರಧಾನಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಸಿದ್ದು ಆನಂದಿ ಜಿಲ್ಲಾ ಘಟಕದ ಸದಸ್ಯ ಸ್ಥಾನಕ್ಕೆ ನೇಮಕಗೊಂಡಿದ್ದಾರೆ ಎಂದು ಸಹಕಾರ ಭಾರತಿ ವಿಜಯಪುರ ಜಿಲ್ಲಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ವಿಜಯಪುರ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಬೆಂಗಳೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಜುಲೈ ೩೦ರ ಬೆಳಿಗ್ಗೆ ೯ಗಂಟೆಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಹೊಸದಾಗಿ ಸ್ಥಾಪಿಸಬಹುದಾದ ಉದ್ಯಮದ ಮಾಹಿತಿ, ಕೈಗಾರಿಕೆ ಇಲಾಖೆ ಮತ್ತು ಬ್ಯಾಂಕಿನಿಂದ ಸಿಗಬಹುದಾದ ಸಹಾಯ ಸೌಲಭ್ಯಗಳ ಮಾಹಿತಿ ಹಾಗೂ ಯಶಸ್ವಿ ಉದ್ಯಮಿದಾರರು ಈ ಶಿಬಿರದಲ್ಲಿ ತಮ್ಮ ಅನುಭವವನ್ನು ಹಂಚಿಕೆಕೊಳ್ಳಲಿದ್ದು, ೨೦ ರಿಂದ ೪೫ ವರ್ಷದೊಳಗಿನ ಆಸಕ್ತರು ತಮ್ಮ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ.೮೮೮೪೧೮೪೪೩೯ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
