Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯನ್ನು ೩೭೧ಜೆ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಪದಾಧಿಕಾರಿಗಳು ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೆನೆಯ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ವಿಜಯಪುರ ಜಿಲ್ಲೆಗೆ ಆದ ಐತಿಹಾಸಿಕ ಅನ್ಯಾಯ ಸರಿಪಡಿಸಲು ೩೭೧ಜೆ ಮೀಸಲಾತಿ ಒದಗಿಸುವುದಾಗಿ ಪಕ್ಷದವರು ಹಾಗೂ ಪಕ್ಷೇತರ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ವಿಜಯಪುರ ಜಿಲ್ಲೆಯನ್ನು ೩೭೧ಜೆ ಮೀಸಲಾತಿಗೆ ಸೇರಿಸಬೇಕು. ವಿಜಯಪುರ ಜಿಲ್ಲೆಯು ಅತಿ ಹಿಂದುಳಿದ ಪ್ರದೇಶವಾಗಿದೆ. ಮೀಸಲಾತಿ ವಿರೋಧಿಸಿದ ಪಕ್ಷ ಮತ್ತು ಮುಖಂಡರು ಯುವ ಜನರ ಮತ ಪಡೆಯುವಗೋಸ್ಕರ ೩೭೧ ಜೆ ಕಲ್ಯಾಣ ಕರ್ನಾಟಕ ಮೀಸಲಾತಿಯನ್ನು ಒದಗಿಸುವುದಾಗಿ ಭರವಸೆ ನೀಡಿದ್ದರು. ಚುನಾವಣೆ ಮುಗಿದ ನಂತರ ಯಾವೊಬ್ಬ ಜನಪ್ರತಿನಿಧಿಗಳು ವಿಜಯಪುರ ಜಿಲ್ಲೆಗೆ ನ್ಯಾಯಯುತವಾಗಿ ಸಿಗಬೇಕಾಗಿರುವ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿ ಒದಗಿಸುವ ಪಯತ್ನ ಮಾಡದೇ ಇರವುದು ದುರಂತದ ಸಂಗತಿ. ಪದೇ ಪದೇ ಸುಳ್ಳು ಭರವಸೆಗಳನ್ನು ರಾಜಕಾರಣಿಗಳು ನೀಡಿ ಜನರಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಭಾರತೀಯ ಧ್ವಜವು ಅಪಾರ ಮೌಲ್ಯ ಮತ್ತು ಮಹತ್ವವನ್ನು ಹೊಂದಿದೆ. ಇದು ನಮ್ಮ ಹೆಮ್ಮೆ, ಏಕತೆ ಮತ್ತು ದೇಶಭಕ್ತಿ ಭಾವವನ್ನು ಒಳಗೊಂಡಿದೆ. ಧ್ವಜವು ಭಾರತದ ಶ್ರೀಮಂತ ಪರಂಪರೆ ಮತ್ತು ಸ್ವಾತಂತ್ರ್ಯಕ್ಕಾಗಿ ಅದರ ಹೋರಾಟ, ಸತ್ಯ, ಶಾಂತಿ, ತ್ಯಾಗ, ಬಲಿದಾನ ಮತ್ತು ಅಹಿಂಸೆಯ ಸಂಕೇತವಾಗಿ ಕಾರ್ಯನಿರ್ವಹಿಸುತ್ತದೆ. ಧ್ವಜವು ಪ್ರತಿನಿಧಿಸುವ ಶಾಂತಿ, ವೈವಿಧ್ಯತೆ ಮತ್ತು ಪ್ರಗತಿಯ ಮೌಲ್ಯಗಳನ್ನು ಎತ್ತಿಹಿಡಿಯುತ್ತದೆ ಎಂದು ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಪ್ರಾಯಪಟ್ಟರು.ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ದಿನಾಂಕ: ೨೨-೦೭-೨೦೨೫ ರಂದು ಆಯೋಜಿಸಿದ್ದ ರಾಷ್ಟ್ರೀಯ ಧ್ವಜ ದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ರಾಷ್ಟ್ರೀಯ ಧ್ವಜ ದಿನವನ್ನು ಪ್ರತಿಯೊಂದು ಶಾಲೆ-ಕಾಲೇಜುಗಳಲ್ಲಿ ಆಚರಿಸುವ ಮೂಲಕ ವಿದ್ಯಾರ್ಥಿಗಳು, ಸಾರ್ವಜನಿಕರು, ಯುವಕರಿಗೆ ರಾಷ್ಟ್ರಧ್ವಜದ ಇತಿಹಾಸ, ಮಹತ್ವ ಮತ್ತು ಸಾಂಕೇತಿಕತೆಯ ಬಗ್ಗೆ ಅರಿವು ಮೂಡಿಸುವುದು, ರಾಷ್ಟ್ರ ಧ್ವಜ ಮತ್ತು ಅದು ಪ್ರತಿನಿಧಿಸುವ ಸ್ವಾತಂತ್ರ್ಯ, ಸಾರ್ವಭೌಮತ್ವ ಮತ್ತು ಏಕತೆಗೆ ದೇಶಭಕ್ತಿ, ಗೌರವ ಮತ್ತು ಹೆಮ್ಮೆಯ ಭಾವವನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್‌ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆಯ ಮೇರೆಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಅಖಿಲ ಭಾರತೀಯ ವಿದ್ಯಾರ್ಥಿ ಪತಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು.ಒಂದು ದೇಶ ಹಾಗೂ ರಾಜ್ಯ ಅಭಿವೃದ್ಧಿಯಾಗಬೇಕೆಂದರೆ ಅಲ್ಲಿನ ಶಿಕ್ಷಣ ವ್ಯವಸ್ಥೆಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಒದಗಿಸುವುದು ಸರ್ಕಾರಗಳ ಆದ್ಯ ಕರ್ತವ್ಯ, ಗ್ರಾಮೀಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಆದರೆ ಅವುಗಳ ಸಮರ್ಪಕ ಅನುಷ್ಠಾನವಾಗದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ.ಹಾಸ್ಟೆಲ್‌ಗಳ ಸಮಸ್ಯೆಗಳನ್ನು ಸರಿಪಡಿಸಿ: ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ ೧,೨೫೮ ಹಾಸ್ಟೆಲ್ ಗಳಿದ್ದು ೧,೬೮,೮೩೩ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವಾಸವಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ…

Read More

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ – ೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಅಕ್ಷರಗಳನ್ನು ಸುಂದರವಾಗಿ ಬರೆಯುವ ಪೆನ್ಸಿಲ್ ವಿಭಿನ್ನ ವಿಚಾರಗಳನ್ನು ದಾಖಲಿಸಿ ಇಡಬಲ್ಲದು. ಅದ್ಭುತವಾದ ಕಥೆಗಳು, ಕವನಗಳು, ಒಳ್ಳೆಯ ಮತ್ತು ಕೆಟ್ಟ ವಿಚಾರಗಳನ್ನು ಬರೆಯುವ ಮೂಲಕ ಮತ್ತು ಬರೆದ ಅಕ್ಷರಗಳಿಂದ ವ್ಯಕ್ತಿ ವ್ಯಕ್ತಿಗಳಲ್ಲಿ ಪ್ರೀತಿ ಹುಟ್ಟಿಸುವ ಅಥವಾ ದ್ವೇಷವನ್ನು ಬಿತ್ತುವ ಗುಣ ಪೆನ್ಸಿಲ್‌ಗೆ ಇದೆ. ಆದರೆ, ಪೆನ್ಸಿಲಿಗೆ ಬರೆಯುವ ಕೈಗಳ ಸಹಕಾರ ಇಲ್ಲದಿದ್ದರೆ ಕೇವಲ ಪೆನ್ಸಿಲ್ ಒಂದೇ ಏನನ್ನೂ ಬರೆಯಲು ಯಾ ಮಾಡಲು ಸಾಧ್ಯವಿಲ್ಲ. ಅಕ್ಷರಗಳನ್ನು ಬರೆಯುವ ಪೆನ್ಸಿಲ್ ಬಳಸುತ್ತಾ ಹೋದಂತೆ ಅದರ ಮೊನಚನ್ನು ಮತ್ತು ಬರೆಯುವ ಗುಣವನ್ನು ಕಳೆದುಕೊಳ್ಳುತ್ತದೆ. ಆಗ ಪೆನ್ಸಿಲ್‌ನ ತುದಿಯನ್ನು ಕೆತ್ತಿ ಮತ್ತೊಮ್ಮೆ ಮೊನಚು ಮಾಡಿದಾಗ ಮತ್ತೆ ತೀಕ್ಷ್ಣವಾಗಿ ಬರೆಯಲು ಪ್ರಾರಂಭಿಸುತ್ತದೆ. ಮನುಷ್ಯನ ಬದುಕಿನಲ್ಲಿ ಎದುರಾಗುವ ಕಷ್ಟಗಳು ಪೆನ್ಸಿಲನ್ನು ಕೆತ್ತುವಂತಹ ಕೆಲಸಕ್ಕೆ ಸಮಾನವಾದದ್ದು. ಮೊನಚು ಮಾಡುವಾಗ ನೋವಾಗುವುದು ಸಹಜ. ಆದರೆ ಆ ಮೊನಚು ಮಾಡುವ (ಕೆತ್ತುವ) ಕಷ್ಟವು ಕಳೆದ ಮರುಕ್ಷಣ…

Read More

ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ‘ಈ ಹಾಳಾದ್ ಮೊಬೈಲ್ ಬಂದು ಮಕ್ಕಳೆಲ್ಲ ಹಾಳು’ ಹೌದಾ.. ಹಾಳಾದ್ರಾ?..ಮಕ್ಕಳಾ?.. ಹಾಗಾದ್ರೆ ನೀವು…!? ಮುಟ್ಟೋದೇ ಇಲ್ವಾ.!? ಮೊಬೈಲ್ ನಿಂದ ಏನು ಪ್ರಯೋಜನವೇ ಆಗಿಲ್ವಾ.!? ಒಮ್ಮೆ ಯೋಚಿಸಿಇಷ್ಟೆಲ್ಲ ಬುದ್ದಿವಂತಿಕೆ ಇರುವ ದೊಡ್ಡವರಿಗೇನೆ ಮೊಬೈಲ್ ಬಿಟ್ಟು ಇರ್ಲಿಕ್ಕೆ ಆಗ್ತಾ ಇಲ್ಲ, ಇನ್ನ ಮಕ್ಕಳು? ಸಮಸ್ಯೆ ಎಲ್ಲಿಲ್ಲ ಹೇಳಿ? ಎಲ್ಲ ಕಡೆ ಇದೆ ದೊಡ್ಡವರು -ಚಿಕ್ಕವರು, ಬಡವರು – ಶ್ರೀಮಂತರು ಎಲ್ಲ ಕಡೆ. ಅದನ್ನ ನಾವು ತೆಗೆದುಕೊಳ್ಳುವ ರೀತಿಯಲ್ಲಿ..ಮೊಬೈಲ್ ಇದ್ದರೆ ಒಳ್ಳೆಯದಾಯಿತು ಎಲ್ಲಾ ಕೆಲಸಗಳು ಕೈ ಅಳತೆಯಲ್ಲಿಯೇ ಆಗುತ್ತಿವೆ ಎಂದುಕೊಳ್ಳಬಹುದು. ಮೊಬೈಲ್ ಇಲ್ಲ ಎಂದರೆ.. “ಒಳ್ಳೆಯದಾಯಿತು” ಎನ್ನಲು ಅದೀತೆ.?? ಹಾಗೆಂದುಕೊಳ್ಳೋಣ, ಮೊಬೈಲ್ ಹುಚ್ಚು ಕಡಿಮೆ ಮಾಡಿಕೊಳ್ಳೋಣ, ಮೊಬೈಲ್ ಸ್ಟ್ರಾಂಗಾ ನನ್ನ ಮನಸ್ಸು ಸ್ಟ್ರಾಂಗಾ ನೋಡೋಣ ಎಂದು ವಾಟ್ಸಾಪ್ ಅನ್ಇನ್ಸ್ಟಾಲ್ ಮಾಡಿದೆ. ಗೆಳತಿ ಬಂದವರೇ “ಅಯ್ಯೋ ದೇವಾ.. ನೀವು ಇನ್ನ ಅದನ್ನ ಮಾಡಿಲ್ವಾ ಮೊನ್ನೆನೇ ಗ್ರೂಪ್ ನಲ್ಲಿ ಮೆಸೇಜ್ ಹಾಕಿದ್ದಾರಲ್ಲ..?!” ಅಂದ್ರು. “ಹೌದಾ..” ಎಂದು ಎದ್ದು ಬಿದ್ದು ಇನ್ಸ್ಟಾಲ್…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಹದಿ ಹರೆಯದ ವಯಸ್ಸಿನಲ್ಲಿ ನಡೆದಾಡೋ ನೆಲ ಕಾಣೊಲ್ಲ ಅಂತಾರೆ. ಅಂಥ ವಯಸ್ಸಿನಲ್ಲಿ ಹಿರಿಯರ ಮಾತು ಕಿವಿಗೆ ಬೀಳುವುದೂ ಅಷ್ಟಕ್ಕಷ್ಟೆ. ಓದಿನಲ್ಲಿ ಗಮನವಿಲ್ಲದ್ದಕ್ಕೆ ಪಿಯುಸಿ ಅರ್ಧಂಬರ್ಧ. ಗೋತಾ ಹೊಡೆದ ವಿಷಯ ಕಟ್ಟಿ ಪಾಸಾಗೋಕೆ ಮನಸ್ಸಿಲ್ಲ. ಕೆಲಸಕ್ಕೆ ಅಂತ ಅಲ್ಲಿ ಇಲ್ಲಿ ಅಲೆದರೆ ಅನುಭವವೂ ಇಲ್ಲ, ಕೆಲಸಕ್ಕೆ ಅಗತ್ಯವಿರುವ ಶಿಕ್ಷಣವೂ ಇಲ್ಲ ಅಂತ ಯಾರೂ ಕೆಲಸ ಕೊಡುವುದಿಲ್ಲ. ಒಂದು ವೇಳೆ ಸಣ್ಣ ಪುಟ್ಟ ಕೆಲಸ ಸಿಕ್ಕರೂ ಅವು ಮನಸ್ಸಿಗೆ ಹಿಡಿಸಲ್ಲ. ಕಲಿತಿದ್ದೇ ಕಡಿಮೆ ಅಂದ ಮೇಲೆ ಒಳ್ಳೆಯ ಸಂಬಳವನ್ನು ನಿರೀಕ್ಷಿಸುವ ಹಾಗಿಲ್ಲ. ಹೋಗಲಿ ಏನಾದರೂ ವ್ಯಾಪಾರ ಮಾಡೋಣ ಅಂದರೆ ಮೂರು ಹೊತ್ತಿನ ಊಟಕ್ಕೆ ಲಾಟರಿ ಹೊಡೆಯುವ ಸ್ಥಿತಿಯಲ್ಲಿ ಅದು ಸಾಧ್ಯವಿರದ ಮಾತು. ಆರಕ್ಕೇರದ ಮೂರಕ್ಕಿಳಿಯದ ಆರ್ಥಿಕ ಸ್ಥಿತಿಯಲ್ಲಿ ಬಂಡವಾಳ ಹೊಂದಿಸುವುದು ಕಷ್ಟ. ಹೀಗೆ ದಿಕ್ಕು ತಪ್ಪಿದ ಮನೋ ಸ್ಥಿತಿಯಲ್ಲಿ ಏನು ಮಾಡಬೇಕೆಂದು ತೋಚದೇ ದುಡ್ಡಿನ ಹಿಂದೆ ಅಲೆಯುತ್ತ ಇಸ್ಪಿಟ್ ಕ್ರಿಕೆಟ್ ಬೆಟ್ಟಿಂಗ್‌ನಂಥ ದಂದೆಯಲ್ಲಿ ಸಿಲುಕಿಕೊಂಡು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊAಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ನಲ್ಲಿ ಬಾಕಿ ಉಳಿದಿರುವ ೨೦೨೫-೨೬ನೇ ಸಾಲಿನ ಪ್ರಥಮ ವರ್ಷದ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ಪದವಿ ಸೀಟುಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಸದರಿ ಪದವಿಯೂ ೪ ವರ್ಷದಾಗಿದ್ದು, ೮ ಸೆಮಿಸ್ಟರ್‌ಗಳನ್ನು ಒಳಗೊಂಡಿರುತ್ತದೆ. ೩ ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ, ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಹಾಗೂ ಛಾಯಚಿತ್ರ ಪತ್ರಿಕೋದ್ಯಮ ವಿಭಾಗದ ವಿಷಯಗಳಿರುತ್ತವೆ. ಅರ್ಜಿ ಸಲ್ಲಿಸಲು ದಿನಾಂಕ:೩೦-೦೭-೨೦೨೫ ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:೦೮೨೧-೨೪೩೮೯೩೧,https://uucms.karnataka.gov.in ಹಾಗೂ https://www.cavamysore.karnataka.gov.in ವೆಬ್‌ಸೈಟ್‌ನ್ನು ಸಂಪರ್ಕಿಸಬಹುದಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಮಿಕರ ರಾಜ್ಯ ವಿಮಾ ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ SPREE ೨೦೨೫- ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣೀಯನ್ನು ಉತ್ತೇಜಿಸುವ ಯೋಜನೆ-೨೦೨೫ ಎಂಬ ನವೀಕೃತ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಡಿಸೆಂಬರ್ ೩೧ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಕಾರ್ಮಿಕರ ರಾಜ್ಯ ವಿಮಾ ನಿಗಮದ ಜಿಲ್ಲಾ ಶಾಖಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅಂಗಡಿಗಳು, ಹೋಟೆಲ್ ಮತ್ತು ರೆಸ್ಟೋರೆಂಟ್ಗಳು, ಸಿನೆಮಾ ಹಾಲ್, ರಸ್ತೆ ಸಾರಿಗೆ ಘಟಕಗಳು, ವಾರ್ತಾಪತ್ರಿಕಾ ಘಟಕಗಳು, ಖಾಸಗಿ ವೈದ್ಯಕೀಯ ಸಂಸ್ಥೆಗಳು. ವಿದ್ಯಾ ಸಂಸ್ಥೆಗಳು ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಗಳಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಕಾರ್ಮಿಕರು ಹಾಗೂ ತಾತ್ಕಾಲಿಕ, ಸಾಂಧರ್ಭಿಕ ಗುತ್ತಿಗೆ ಕಾರ್ಮಿಕರನ್ನು ಒಳಗೊಂಡAತೆ ಕಾರ್ಯನಿರತ ಅರ್ಹ ಉದ್ಯೋಗಸ್ಥರು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ.ಒಂದು ಬಾರಿ ನೋಂದಾಯಿಸಿಕೊAಡರೆ, ನೋಂದಣಿಯಾದ ದಿನಾಂಕದಿAದ ಉದ್ಯೋಗಿಗಳು ಹಾಗೂ ಅವರ ಕುಟುಂಬದ ಸದಸ್ಯರುಗಳಿಗೆ ವೈದ್ಯಕೀಯ ಸೌಲಭ್ಯಗಳಾದ ಅನಾರೋಗ್ಯ, ಪ್ರಸವ (ಹೆರಿಗೆ), ಅಪಘಾತ ಹಾಗೂ ಉದ್ಯೋಗದ ಸಂದರ್ಭದಲ್ಲಿ ಉದ್ಯೋಗಿಗಳು ಮರಣ ಹೊಂದಿದ್ದರೆ, ನಗದು ಸೌಲಭ್ಯ ಸೇರಿದ್ದಂತೆ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಸಿಬಿಎಸ್ಇ ಶಾಲಾ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದಲ್ಲಿ ಶ್ರಾವಣ ಮಾಸದಂಗವಾಗಿ ಹಾಗೂ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ, ಬಸವೇಶ್ವರ ಜಾತ್ರಾ ಉತ್ಸವ ಸಮಿತಿ ಹಾಗೂ ಬಸವೇಶ್ವರ ಸೇವಾ ಸಮಿತಿಯ ಸಹಯೋಗದಲ್ಲಿ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿಯವರಿಂದ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ಬಸವ ಸಂಸ್ಕ್ರತಿ ಪ್ರವಚನದ ಉದ್ಘಾಟನೆ ಕಾರ್ಯಕ್ರಮ ಜು. ೨೫ ರಂದು ಸಂಜೆ ೬ ಗಂಟೆಗೆ ನಡೆಯಲಿದೆ ಎಂದು ಬಸವೇಶ್ವರ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ರವಿ ರಾಠೋಡ ಹೇಳಿದರು.ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮವನ್ನು ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಕಾರ್ಯಕ್ರಮದ ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಪ್ರವಚನಕಾರ ಪ್ರಭು ಚನ್ನಬಸವ ಸ್ವಾಮೀಜಿ ವಹಿಸುವರು. ನೇತೃತ್ವವನ್ನು ಶಿವಾನಂದ ಈರಕಾರ ಮುತ್ಯಾ ವಹಿಸುವರು. ಅಧ್ಯಕ್ಷತೆಯನ್ನು ಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ವಹಿಸುವರು. ಮುಖ್ಯ ಅತಿಥಿಗಳಾಗಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ…

Read More

ವಿಜಯಪುರ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಆಶ್ರಮ ರಸ್ತೆಯಲ್ಲಿರುವ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆ’ಗೆ ಇಂದು ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಮಕ್ಕಳ ಕಲಿಕಾ ಪರಿಸ್ಥಿತಿಗಳ ಬಗ್ಗೆ ವಿಚಾರಿಸಿದರು.ತರಗತಿ ಕೊಠಡಿ, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.ವಿದ್ಯಾರ್ಥಿಗಳು ಅಭಿಪ್ರಾಯ, ಅಗತ್ಯವಿರುವ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊಂಡಾಗ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಪ್ರೇರಣಾದಾಯಕ ಮಾತು ಹೇಳಿ ಹುರಿದುಂಬಿಸಿದರು.ಶಾಲೆಯ ಅಧ್ಯಕ್ಷ ಶಿವಾನಂದ ರೇಶ್ಮಿ ಹಾಗೂ ಮುಖ್ಯೋಪಾಧ್ಯಾಯರು ಡಾ. ಸುಜಾತಾ ಬಿರಾದಾರ ಅವರು, ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಮಕ್ಕಳಿಗೆ ಎದುರಾಗುತ್ತಿರುವ ತೊಂದರೆಗಳನ್ನು ಸಚಿವರ ಗಮನಕ್ಕೆ ತಂದರು. ವಿಶೇಷವಾಗಿ ಆಟದ ಮೈದಾನ,…

Read More