Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಖಡಗೇಕರ ಅವರ ದಕ್ಷ ಹಾಗೂ ಪ್ರಾಮಾಣಿಕ ಸೇವೆಗೆ “ವಿಜಯಪುರ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ” ಲಭಿಸಿದೆ.ಈ ಸಂದರ್ಭದಲ್ಲಿ ಚಡಚಣ ಸರಕಾರಿ ಸಂಘದ ಅಧ್ಯಕ್ಷ ಬಸವರಾಜ. ಮಜ್ಜಗಿ, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿಠ್ಠಲ ಕಾಂಬಳೆ, ಚಡಚಣ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ ಎಸ್ ಸೋನಗಿ, ಪ್ರಧಾನ ಕಾರ್ಯದರ್ಶಿ ಬಸವಂತ ಉಮರಾಣಿ, ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷ ಎಸ್ ಎಸ್ ಪಾಟೀಲ ಅವರು ಚಡಚಣ ತಾಲೂಕಿನ ಸಮಸ್ತ ನೌಕರರ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.
ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್, ಲೈಟಿಂಗ್, ಧ್ವನಿವರ್ಧಕ & ಡೆಕೋರೇಶನ್ ಮಾಲೀಕರ ಸಂಘದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ ಪಾಟೀಲ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಾಮೀಯಾನಾ, ಪೆಂಡಾಲ್, ಲೈಟಿಂಗ್, ಡೆಕೋರೇಶನ್ ಮಾಲೀಕರು ಸಮಾಜದಲ್ಲಿ ನಿರುದ್ಯೋಗ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಸರ್ಕಾರದ ಮೇಲೆ ಭಾರ ಕಡಿಮೆ ಆಗಿದೆ ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಹೇಳಿದರು.ನಗರದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಿಂಭಾಗದ ಆಲಕುಂಟೆ ಪ್ರದೇಶದಲ್ಲಿ ಹಮ್ಮಿಕೊಂಡಿರುವ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಸಂಘ ಹಮ್ಮಿಕೊಂಡಿದ್ದ ವಿಜಯಪುರ ಉತ್ಸವದ ವಸ್ತು ಪ್ರದರ್ಶನದಲ್ಲಿ ಅದೃಷ್ಟದ ಬಹುಮಾನ ವಿತರಿಸಿ ಮಾತನಾಡಿದರು.ದೇಶದಲ್ಲಿರುವ ಜನಸಂಖ್ಯೆಯಲ್ಲಿ ಸರ್ಕಾರವೇ ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ. ದೇಶದಲ್ಲಿ ಶೇ.93 ಕ್ಕಿಂತ ಅಧಿಕ ಜನರಿಗೆ ಉದ್ಯೋಗವಿಲ್ಲ. ಆದರೆ ಪೆಂಡಾಲ್, ಶಾಮೀಯಾನಾ ಮಾಲೀಕರು ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ 2 ಲಕ್ಷ ಜನರಿಗೆ ಉದ್ಯೋಗ ನೀಡಿದ್ದಾರೆ. ಇದು ಸರ್ಕಾರದ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನ ತಾಂಬಾ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಾರ್ಯ ಶ್ಲಾಘನೀಯ ಎಂದು ಪ್ರಶಾಂತ ಭೈರಾಮಡಗಿ ಹೇಳಿದರು.ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಂದೆ ದಿ. ಎಮ್.ಡಿ. ಭೈರಾಮಡಗಿ ಶಿಕ್ಷಕರ ಸ್ಮರಣಾರ್ಥ ಧ್ವಜಾರೋಹಣ ಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ನಮ್ಮ ತಂದೆಯವರು ಮಕ್ಕಳಗೆ ಆಸ್ತಿ ಮಾಡುವುದಕ್ಕಿಂತ, ಮಕ್ಕಳನ್ನೇ ಆಸ್ತಿಯನ್ನಾಗಿ ತಿಳಿದು, ನಮ್ಮ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ನಮ್ಮ ತಂದೆಯವರು ಕೂಡ ಒಬ್ಬ ಶಿಕ್ಷಕರು ಅವರ ಸ್ಮರಣಾರ್ಥ ಪ್ರಜ್ವಲ್ ಮತ್ತು ಪ್ರಶಾಂತ ಭೈರಾಮಡಗಿ ಬಂಧುಗಳಿಂದ ಧ್ವಜಾರೋಹಣದ ಕಟ್ಟೆ ನಿರ್ಮಾಣಕ್ಕೆ ೫೦ ರಿಂದ ೬೦ ಸಾವಿರ ರೂಪಾಯಿಯಲ್ಲಿ ಒಂದು ಸುಂದರವಾದ ಕಟ್ಟೆಯನ್ನು ನಿರ್ಮಾಣ ಗೊಳಿಸುತ್ತಿದ್ದೇವೆ. ಸರ್ಕಾರದೊಂದಿಗೆ ಸಮುದಾಯವೂ ಸಹಕಾರ ನೀಡಿದರೆ ಸರ್ಕಾರಿ ಶಾಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ. ಸರ್ಕಾರಿ ಶಾಲೆ ಹೆಮ್ಮರವಾಗಿ ಬೆಳೆಯಲ್ಲು ಶಿಕ್ಷಕರು, ಎಸ್.ಡಿ.ಎಮ್.ಸಿ ಅಧ್ಯಕ್ಷರು ಮತ್ತು ಗ್ರಾಮಸ್ಥರ ಶ್ರಮ ಕಾರಣವಾಗಿರುತ್ತದೆ. ವಿದ್ಯಾರ್ಥಿಗಳು ದೇವರಿಗೆ ಸಮಾನ, ಶಿಕ್ಷಕ ವೃತ್ತಿ ಪವಿತ್ರವಾದದ್ದು, ವಿದ್ಯಾರ್ಥಿಗಳನ್ನು…
ಕಲಕೇರಿಯ ಆದರ್ಶ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿಶೇಷ ಉಪನ್ಯಾಸ ನೀಡಿದ ಪ್ರೊ.ಜಗದೀಶ ಸಾತಿಹಾಳ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಶಿಕ್ಷಣ ಕೇವಲ ಅಂಕಗಳನ್ನು ಪಡೆಯಲಿಕ್ಕಲ್ಲ ಮಕ್ಕಳಲ್ಲಿ ಬದಕುವ ಶೈಲಿ, ಸಂಸ್ಕಾರ ಕಲಿಸಿ ಕನಸುಗಳನ್ನು ಬಿತ್ತುವುದಾಗಿದ್ದು, ೧೬ ವರ್ಷದೊಳಗಿನ ಮಕ್ಕಳಿಗೆ ಫೋನ್ ಉಪಯೋಗ ಸುರಕ್ಷಿತವಲ್ಲ ಎಂದು ವಿಜಯಪುರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಸಂಗನಬಸವ ಪಿಯು ಮತ್ತು ಎಸ್.ಸಿ ಉಪ್ಪಿನ ಪದವಿ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕರಾದ ಪ್ರೊ. ಜಗದೀಶ ಸಾತಿಹಾಳ ಹೇಳಿದರು.ಕಲಕೇರಿಯ ಆದರ್ಶ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ ಮಕ್ಕಳ ಪರಿಪೂರ್ಣ ಭವಿಷ್ಯಕ್ಕಾಗಿ ಪಾಲಕರ ಕರ್ತವ್ಯ ಮತ್ತು ಫೋನ್ ಉಪಯೋಗದಿಂದ ಆಗುವ ಅನಾನುಕೂಲತೆಗಳು ಕುರಿತ ವಿಶೇಷ ಉಪನ್ಯಾಸ ಮತ್ತು ಪಾಲಕರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಪಾಲಕರು ದುಡ್ಡ ಕೊಟ್ಟು ಸ್ಕೂಲ್‌ಗೆ ಸೇರಿಸಿದ್ರೆ ಜವಾಬ್ದಾರಿ ಮುಗಿಯಲಿಲ್ಲ, ತಾವೆಸ್ಟೇ ಕೆಲಸದಲ್ಲಿ ಬ್ಯುಸಿ ಇದ್ದರೂ ಮಕ್ಕಳಿಗೆ ಸಮಯ ಕೊಟ್ಟು ಬೆಂಬಲಿಸಿ, ಅವರನ್ನು ಬೇರೆ ಮಕ್ಕಳ ಜೊತೆ ಹೋಲಿಸ್ಬೇಡಿ, ಪ್ರತಿ ಮಗುವಿನ ಸಾಮರ್ಥ್ಯ ವಿಭಿನ್ನವಾಗಿರುತ್ತೆ. ಅಂಕಳಿಂದ ಮಕ್ಕಳನ್ನು ಅಳೆಯಬೇಡಿ ಅವರಲ್ಲಿರುವ ವಿಶೇಷವಾದ ಕೌಶಲ್ಯಕ್ಕೆ…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನ ಕಾರ್ಯಕ್ರಮದಲ್ಲಿ ಸಾಧನೆಗೈದ ವಿಜಯ ಕರ್ನಾಟಕ ವರದಿಗಾರರಾದ ಶಿವಾನಂದ ಸಜ್ಜನ, ಕನ್ನಡಪ್ರಭ ವರದಿಗಾರರಾದ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಕುಬಕಡ್ಡಿ, ಸುವರ್ಣ ನ್ಯೂಸ್ ಕ್ಯಾಮರಾಮೆನ್ ಅಪ್ಪು ಚಿನಗುಂಡಿ ಸೇರಿದಂತೆ ಜಿಲ್ಲೆಯ ಒಟ್ಟು ೧೮ ಪತ್ರಕರ್ತರಿಗೆ ೨೦೨೫ನೇ ಸಾಲಿನ ಜಿಲ್ಲಾ ವಾರ್ಷಿಕ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಸಚಿವದ್ವಯರಾದ ಎಂ.ಬಿ.ಪಾಟೀಲ ಮತ್ತು ಶಿವಾನಂದ ಪಾಟೀಲ ಅವರು ಸೇರಿದಂತೆ ಕಾನಿಪದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ, ಪ್ರಧಾನ ಕಾರ್ಯದರ್ಶಿ ಜಿ.ಲೋಕೇಶ, ಭವಾನಿಸಿಂಗ್ ರಾಠೋಡ, ಎಸ್ಪಿ ಲಕ್ಷö್ಮಣ ನಿಂಬರಗಿ, ಡಿವೈಎಸ್ಪಿ ಬಸವರಾಜ ಯಲಿಗಾರ ಮತ್ತು ಕಾನಿಪ ಜಿಲ್ಲಾಧ್ಯಕ್ಷರಾದ ಪ್ರಕಾಶ ಬೆಣ್ಣೂರ, ಕಾನಿಪ ಜಿಲ್ಲಾ ಉಪಾಧ್ಯಕ್ಷರಾದ ಇಂದುಶೇಖರ ಮಣೂರ ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಕಾನಿಪ ಪದಾಧಿಕಾರಿಗಳು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ನೀಡಿ ಗೌರವಿಸಿದರು ಮತ್ತು ಇದೇ ವೇಳೆ ಪತ್ರಕರ್ತರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಕಳೆದರೆಡು ದಿನಗಳಿಂದ ಮಳೆ ಜೋರಾಗಿ ಆಗಾಗ ಬರುತ್ತಿದೆ. ಮಳೆ ನೀರು ಮತ್ತು ಚರಂಡಿ ನೀರು ಹರಿದು ಬರುತ್ತಿರುವ ಸ್ಥಳಗಳಲ್ಲಿ ವಾಸಿಸುವವರ ಮನೆಗಳಿಗೆ ನೀರು ನುಗ್ಗಿ ಹಾನಿಯಾಗುವ ಸಂಭವವಿರುತ್ತದೆ. ಕಳೆದ ಜೂನ್ ತಿಂಗಳಲ್ಲಿ ಇದೇ ರೀತಿಯಲ್ಲಿ ಪಟ್ಟಣದಲ್ಲಿ ಜೋರಾಗಿ ಸುರಿದ ಮಳೆಯಿಂದಾಗಿ ಪಟ್ಟಣದ ಲಕ್ಷ್ಮೀ ನಗರದ ಹೊಲ-ಗದ್ದೆಗಳಿಗೆ ಹೊಂದಿಕೊಂಡಿರುವ ಜಾಗೆಯಲ್ಲಿ ಅನಧಿಕೃತ ಮನೆ, ಚಪ್ಪರ ಹಾಕಿಕೊಂಡು ವಾಸಿಸುತ್ತಿರುವ ಜನರ ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿ ಉಂಟು ಮಾಡಿತ್ತು. ಮತ್ತೆ ಇದೀಗ ಮಳೆ ಜೋರಾಗಿ ಸುರಿಯುವ ಮುನ್ಸೂಚನೆ ಇರುವದರಿಂದಾಗಿ ನೀರು ಜೋರಾಗಿ ಹರಿದು ಬರುವ ಸ್ಥಳಗಳಲ್ಲಿ ಅನಧಿಕೃತವಾಗಿ ಮನೆ ಇಲ್ಲವೇ ಚಪ್ಪರ ಹಾಕಿಕೊಂಡು ವಾಸಿಸುವವರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು. ಒಂದು ವೇಳೆ ಅವರು ಸ್ಥಳಾಂತರಗೊಳ್ಳದೇ ಹೋದರೆ ಮುಂದೆ ಆಗುವ ಅನಾಹುತಗಳಿಗೆ ಪುರಸಭೆ ಜವಾಬ್ದಾರವಾಗುವುದಿಲ್ಲ. ಇಂತಹ ಸ್ಥಳಗಳಲ್ಲಿ ಅನಧಿಕೃತವಾಗಿ ವಾಸಿಸುವ ಕುಟುಂಬಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರವಾಗಬೇಕೆಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ರಾಜ್ಯದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ವಿವಿಧ ಬಸವಪರ ಸಂಘಟನೆಗಳು ಸೆ.೧ ರಂದು ಬಸವ ಸಂಸ್ಕ್ರತಿ ಅಭಿಯಾನದಂಗವಾಗಿ ಬಸವೇಶ್ವರ ಜನಿಸಿದ ಬಸವನಬಾಗೇವಾಡಿಯಿಂದ ಬಸವ ರಥ ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿವೆ. ಈ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಹಿಳೆಯರ ಸಂಘಟನೆಗಳು ಸಹ ಭಾಗಿಯಾಗುವ ಮೂಲಕ ಅಭಿಯಾನದ ಯಾತ್ರೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ವಿರಕ್ತಮಠದಲ್ಲಿ ಈಚೆಗೆ ಬಸವ ಸಂಸ್ಕ್ರತಿ ಅಭಿಯಾನದಂಗವಾಗಿ ಬಸವನಬಾಗೇವಾಡಿಯಲ್ಲಿ ಸೆ. ೧ ರಂದು ಹಮ್ಮಿಕೊಂಡಿರುವ ಬಸವ ರಥಯಾತ್ರೆ ಚಾಲನೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಈಚೆಗೆ ಕರೆಯಲಾಗಿದ್ದ ಮಹಿಳಾ ಸಂಘಟನೆಗಳ ಪದಾಧಿಕಾರಿಗಳ ಹಾಗೂ ಸದಸ್ಯರ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಸೆ.೧ ರಂದು ನಡೆಯುವ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಭಾಗಗಳಿಂದ ಅನೇಕ ಮಠಾಧೀಶರರು, ವಿದ್ವಾಂಸರು ಆಗಮಿಸುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಸೇರಿದಂತೆ ಶರಣರಿಗೆ ಸಂಬಂಧಪಟ್ಟಂತೆ ವಿಚಾರಗೋಷ್ಠಿ, ವಚನ ಸಂಗೀತ ಕಾರ್ಯಕ್ರಮ ಹಾಗೂ ಸಾಣೇಹಳ್ಳಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಮಕ್ಕಳ ಸಾಹಿತ್ಯವು ಮಕ್ಕಳಲ್ಲಿರುವ ಪ್ರತಿಭೆಯನ್ನು ಕೌಶಲ್ಯವನ್ನು ಗುರುತಿಸುವಂತಹ ಕೆಲಸ ಹಾಗೂ ಮಕ್ಕಳಲ್ಲಿ ಆದರ್ಶ ಗುಣಗಳನ್ನು ಬೆಳೆಸಿಕೊಳ್ಳಲು ವೇದಿಕೆಯು ಕೆಲಸ ಮಾಡುತ್ತದೆ ಎಂದು ತಾಲೂಕಾ ಮಕ್ಕಳ ಸಾಹಿತ್ಯ ಸಂಗಮ ವೇದಿಕೆಯ ಅಧ್ಯಕ್ಷ, ಉಪನ್ಯಾಸಕ ಸದಾನಂದ ಎಸ್ ಈರನಕೇರಿ ಹೇಳಿದರು.ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿರುವ ಶ್ರೀಮತಿ ಶಾಲಿನಿ ಮಾಣಿಕ್ ಚಂದ್ ದೋಶಿ ಮಹಿಳಾ ಪದವಿ ಪೂರ್ವ ಕಾಲೇಜು ಹಾಗೂ ತಾಲೂಕಾ ಮಕ್ಕಳ ಸಾಹಿತ್ಯ ಸಂಗಮ ವೇದಿಕೆ ಸಹಯೋಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ವಚನ ಕಂಠಪಾಠ ಸ್ಪರ್ಧೆ ಏರ್ಪಡಿಸಲಾಗಿತ್ತು.ಮಕ್ಕಳ ಸಾಹಿತ್ಯ ಬೆಳೆದು ಬಂದ ಬಗ್ಗೆ ವಿವರಿಸುತ್ತಾ , ವಚನ ಕಂಠ ಪಾಠ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ನೆನಪಿನ ಶಕ್ತಿಯನ್ನು ದ್ವಿಗುಣಗೊಳಿಸುವ ಕೆಲಸವನ್ನು ಹಾಗೂ ಮಕ್ಕಳಲ್ಲಿ ಸಾಹಿತ್ಯದ ಆಸಕ್ತಿಯನ್ನು ಹೆಚ್ಚಿಸುವ ಕೆಲಸ ಮಕ್ಕಳ ಸಾಹಿತ್ಯ ವೇದಿಕೆಯು ಮಾಡುತ್ತದೆ ಎಂದರು.ಮುಖ್ಯ ಅತಿಥಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಎಸ್ ಬಿ ಹಡಪದ್ ಉಪನ್ಯಾಸಕರು ಮಾತನಾಡುತ್ತಾ, ಸಾಹಿತ್ಯದಲ್ಲಿಯೇ ವಿಭಿನ್ನವಾದ ಸಾಹಿತ್ಯ ವಚನ ಸಾಹಿತ್ಯ. ಬಸವಾದಿ ಶರಣರ…
ಸಿಂದಗಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ದಲಿತ ಮುಖಂಡರಿಂದ ಮನವಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಯಾವುದೇ ಆಸ್ತಿ ಅಡವಾಗಿ ನೀಡದಿದ್ದರೂ ಆಸ್ತಿ ಮೇಲೆ ಬೋಜಾ ದಾಖಲಿಸಿದ ಸಿಂದಗಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಮುಖಂಡರು ಶನಿವಾರ ತಾಲೂಕು ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಿ ಗ್ರೇಡ್-೨ ತಹಶೀಲ್ದಾರ್ ಇಂದಿರಾಬಾಯಿ ಬಳಗಾನೂರ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಈ ವೇಳೆ ದಸಂಸ ಜಿಲ್ಲಾ ಸಂಚಾಲಕ ವೈ.ಸಿ. ಮಯೂರ, ಸಂತೋಷ ಮಣಗೀರಿ ಮಾತನಾಡಿ, ಸಿಂದಗಿ ಪಟ್ಟಣದ ನಿವಾಸಿ ಪ್ರವೀಣ ಹಾಲಹಳ್ಳಿ ಅವರಿಗೆ ಸೇರಿದ ಸಿಂದಗಿ ಸ.ನಂ. ೯೯೩/೪ರ ೨೦ ಗುಂಟೆ, ೯೯೩/೫ರ ೧೧ ಗುಂಟೆ ಆಸ್ತಿಯ ಮೇಲೆ ಸಿಂದಗಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ರೂ.೧.೮೪ಕೋಟಿ ಬೋಜಾವನ್ನು ಬಾಗಲಕೋಟೆಯ ಬಸವೇಶ್ವರ ಸಹಕಾರಿ ಬ್ಯಾಂಕಿನ ಹೆಸರಿನಲ್ಲಿ ದಾಖಲಿಸಿದ್ದಾರೆ ಎಂದು ಆರೋಪಿಸಿದರು.ಕೂಡಲೇ ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು.…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲೆ ಆರಂಭವಾಯಿತೆಂದರೆ ಪ್ರತೀ ಶಾಲೆಗಳಲ್ಲಿ ಶಾಲಾ ಸಂಸತ್ ಚುನಾವಣೆಗೆ ತಯಾರಿ ನಡೆಯುತ್ತದೆ. ಆಯಾ ವರ್ಷದ ವಿದ್ಯಾರ್ಥಿ ನಾಯಕನ ಆಯ್ಕೆ ಪ್ರಕ್ರಿಯೆ ಚುನಾವಣೆಯ ಮೂಲಕ ಸಾಗುತ್ತದೆ ಎಂದು ಶ್ರೀ ಪದ್ಮರಾಜ ಪಬ್ಲಿಕ್ ಶಾಲೆಯ ಪ್ರಾಚಾರ್ಯ ದಾನಯ್ಯ ನಂದಿಕೋಲ ಹೇಳಿದರು.ಸಿಂದಗಿ ಪಟ್ಟಣದ ಶ್ರೀ ಪದ್ಮರಾಜ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿಗಾಗಿ ಚುನಾವಣಾ ಪ್ರಕ್ರಿಯೆಯನ್ನು ನೆರವೇರಿಸಿ ಮಾತನಾಡಿದ ಅವರು, ಮಕ್ಕಳಿಗೆ ಚುನಾವಣೆಯ ಅರಿವು ಮೂಡಿಸುವ ಪ್ರಯುಕ್ತ ಶಾಲಾ ಸಂಸತ್ ಚುನಾವಣೆ ಚುನಾವಣಾ ಆಯೋಗ ನಡೆಸುವ ನೈಜ ಚುನಾವಣಾ ಮಾದರಿಯಲ್ಲಿ ನಡೆಸಬೇಕು. ಇದರಿಂದ ಮಕ್ಕಳಲ್ಲಿ ಚುನಾವಣೆಯ ಪರಿಕಲ್ಪನೆ ಮತ್ತು ಮತದಾನದ ಅರಿವು ಮೂಡುತ್ತದೆ ಎಂದರು.ಈ ವೇಳೆ ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ನಿಂತು ಚುನಾವಣಾ ಪ್ರಕ್ರಿಯೆಯಲ್ಲಿ ಮತ ಚಲಾಯಿಸಿದರು.ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಆಸಿಫ್ ಕೊಂಕಣಿ, ಶಿವಪುತ್ರ ಭಾಸಗಿ, ಶ್ರೀಧರ ಮಲ್ಲೇದ, ಅಭಿಷೇಕ ಬಿರಾದಾರ, ಸುರೇಶ ಸುಣಗಾರ, ರಾಣಿ ಜೋಗೂರ, ಅರುಣ ಕವಲಗಿ, ಅಕ್ಷತಾ ಕಿಣಗಿ, ಕಲಾವತಿ…
