Author: editor.udayarashmi@gmail.com

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ, ಲಾಯಿಟ್, ಮಾಯಿಕ್, ಫ್ಲಾವರ್ ಡೆಕೋರೇಶನ್ ಕೆಟರರ್ಸ್ ಮತ್ತು ಸಪ್ಲಾಯರ್ಸ್ ಮಾಲಿಕರ ಸಂಘ ಆಯೋಜಿಸಿದ್ದ ವಿಜಯಪುರ ಉತ್ಸವ- 2025 ಮತ್ತು 4ನೇ ಮಹಾ ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.ಶಾಮಿಯಾನ ಸಂಘದವರನ್ನು ಬೆಳೆಸಲು ಮತ್ತು ಅವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರಕಾರದ ಯೋಜನೆಗಳನ್ನು ಅವರಿಗೆ ತಲುಪಿಸಲಾಗುವುದು. ‌ವಿಜಯಪುರ ಜಿಲ್ಲೆಯಲ್ಲಿ…

Read More

ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಅವರಿಂದ ಸ್ಥಾಪಿತಗೊಂಡ ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಏಜ್ಯುಕೇಶನಲ್ ಅಸೋಸಿಯೇಶನ್ 115 ವರ್ಷಗಳ ದೀರ್ಘ ಪ್ರಯಾಣದಲ್ಲಿ ಸಾರ್ಥಕ ಸೇವೆಯೊಂದಿಗೆ ಗುಣಾತ್ಮಕ ಶಿಕ್ಷಣ ನೀಡುವತ್ತ ಸಂಸ್ಥೆ ಮುಂಚೂಣಿಯಲ್ಲಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷ, ಸಚಿವ ಎಂ.ಬಿ.ಪಾಟೀಲ ಹೇಳಿದರು.ಜು.18 ರಂದು ಏರ್ಪಡಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ದಾಸೋಹಿ ಪೂಜ್ಯ ಬಂಥನಾಳ ಸಂಗಬಸವ ಮಹಾಶಿವಯೋಗಿಗಳು, ಮುತ್ಸದ್ದಿ ನಾಯಕರಾದ ಬಿ.ಎಂ.ಪಾಟೀಲರ ದೂರದೃಷ್ಟಿಯ ಫಲ ಈ ಭಾಗದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯುವ ಮೂಲ ಉದ್ದೇಶ ಸಫಲಗೊಂಡಿದೆ ಎಂದರು.ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ 4500 ವಿವಿಧ ಸಿಬ್ಬಂದಿ ಸಹಯೋಗದಲ್ಲಿ ವಿವಿಧ ವೈದ್ಯಕೀಯ ಶಿಕ್ಷಣ, ವಿವಿಧ ತಾಂತ್ರಿಕ ಶಿಕ್ಷಣ, ಕಲೆ ವಿಜ್ಞಾನ, ವಾಣಿಜ್ಯ, ವ್ಯವಹಾರ ಸೇರಿದಂತೆ ವಿವಿಧ ಕಾಲೇಜುಗಳ 36000 ವಿದ್ಯಾರ್ಥಿಗಳಿಗೆ ಇಡೀ ಕರ್ನಾಟಕದಲ್ಲಿಯೇ ಅತ್ಯುತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದರು.ಬಿ.ಎಲ್.ಡಿ.ಇ ಅಲೆನ್ ಕರಿಯರ್ ಅಕಾಡೆಮಿಯಲ್ಲಿ 2025-26 ನೇ ಸಾಲಿನಿಂದ NEET, JEE, K-CET ತರಬೇತಿಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರೈತರು ಹಾಗೂ ವಿದ್ಯುತ್ ಗ್ರಾಹಕರರೊಂದಿಗೆ ಜುಲೈ ೧೯ರ ಮಧ್ಯಾಹ್ನ ೩:೩೦ಕ್ಕೆ ಸಂವಾದ ಸಭೆಯನ್ನು ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗ ಕಚೇರಿಯಲ್ಲಿ ನಡೆಸಲಾಗುವುದು.ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಂವಾದ ಸಭೆಯಲ್ಲಿ ಭಾಗವಹಿಸಿ,ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘವಿಜಯಪುರ ಜಿಲ್ಲಾ ಘಟಕ ವತಿಯಿಂದ 2025ನೇ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಕೊಲ್ಹಾರ ತಾಲೂಕು ಕನ್ನಡಪ್ರಭ ಪತ್ರಿಕೆಯ ವರದಿಗಾರ ಮಲ್ಲಿಕಾರ್ಜುನ ಕುಬಕಡ್ಡಿ ಆಯ್ಕೆಯಾಗಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಕೊಲ್ಹಾರ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಅರುಣ ಬ ಔರಸಂಗ ತಿಳಿಸಿದ್ದಾರೆ.ಜು.19 ಶನಿವಾರ ಬೆಳಿಗ್ಗೆ 10 ಗಂಟೆಗೆ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಜವಳಿ, ಸಕ್ಕರೆ, ಕಬ್ಬು ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಸಂಸದ ರಮೇಶ ಜಿಗಜಿಣಗಿ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವ್ಹಿ. ಪ್ರಭಾಕರ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕಾನಿಪ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ,…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಶುಚಿಗೊಳಿಸುವ ಕಾರ್ಮಿಕರಿಗೆ ಮತ್ತು ನಾಗರಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ಥಳೀಯ ಪಟ್ಟಣ ಪಂಚಾಯಿತಿ ವತಿಯಿಂದ ‘ನಮಸ್ತೆ ದಿನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರೇಶ ಹಟ್ಟಿ ಮಾತನಾಡಿ, ದೇಶ ವ್ಯಾಪ್ತಿಯಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದೊಂದಿಗೆ ಜಂಟಿಯಾಗಿ ನಮಸ್ತೆ ಯೋಜನೆಯನ್ನು ಪ್ರಾರಂಭಿಸಿದ್ದು, ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರ (SSWs) ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುವುದು ಮತ್ತು ನೈರ್ಮಲ್ಯ ಶುಚಿಗೊಳಿಸುವ ಕೆಲಸದಲ್ಲಿ ಸಾವುಗಳಾಗುವುದನ್ನು ತಡೆಗಟ್ಟುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಸರ್ಕಾರಿ ಡಿಪ್ಲೋಮಾ ಕಾಲೇಜಿನ ಪ್ರಾಚಾರ್ಯ ಎಂ.ಬಿ ಗರಸಂಗಿ ಪೌರಕಾರ್ಮಿಕರಿಗೆ ಒಳಚರಂಡಿ, ಚರಂಡಿ, ರಸ್ತೆಗಳು ಇತರಕಡೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಭದ್ರತಾ ಕ್ರಮಗಳ ಬಗ್ಗೆ ಮತ್ತು ಕಾರ್ಮಿಕರು ಧರಿಸಬೇಕಾದ ಉಡುಪುಗಳ ಕುರಿತು ಅರಿವು ಮೂಡಿಸಿದರು.ಈ ಸಂದರ್ಭದಲ್ಲಿ ಪ.ಪಂ ಸದಸ್ಯರು, ಸಿಬ್ಬಂದಿಗಳು ಹಾಗೂ ಪೌರಾಕಾರ್ಮಿಕರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: 2025 ನೇ ವರ್ಷದ “ಶರಣ ಅಂಬಿಗ ಕುಮಾರ ಚೌಡಯ್ಯ ಗಣಾಚಾರ ಪ್ರಶಸ್ತಿ’ ಗೆ ಶರಣೆ ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದ ಆಯ್ಕೆಯಾಗಿದ್ದಾರೆ.ಬಸವ ಕೇಂದ್ರ-ಅಕ್ಕನ ಬಳಗ- ತರುಣ ಸಂಘ ಶರಣ ಸಂಸ್ಕೃತಿ ಮಹೋತ್ಸವ ಸಮಿತಿ, ಚಿತ್ತರಗಿ ಶ್ರೀ ವಿಜಯಮಹಾಂತೇಶ್ವರ ಸಂಸ್ಥಾನಮಠಇಳಕಲ್ಲ ಇವರ ಸಹಯೋಗದೊಂದಿಗೆ,ಶ್ರೀ ಅಂಬಿಗಚೌಡಯ್ಯ ಪ್ರತಿಷ್ಠಾನ, ಗದಗ-ಬೆಟಗೇರಿ ಇವರು ಆಯೋಜಿಸಿರುವ ನಿಜಶರಣ ಅಂಬಿಗ ಚೌಡಯ್ಯ ಜಯಂತ್ಯುತ್ಸವ ಆಚರಣೆ ಗಣಾಚಾರದ ಶರಣ ಅಂಬಿಗಕುಮಾರ ಚೌಡಯ್ಯನವರ ಶರಣೋತ್ಸವ ಆಚರಣೆ ಹಾಗೂ ಶ್ರೀ ಅಂಬಿಗ ಚೌಡಯ್ಯ ಮತ್ತು ಶ್ರೀ ಅಂಬಿಗ ಕುಮಾರ ಚೌಡಯ್ಯ ಶರಣರ ಗಣಾಚಾರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಆಯ್ಕೆಯಾಗಿದ್ದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕಿ ಸಾಹಿತಿ, ಪಾರ್ವತಿ ಸೊನ್ನದ ಅವರು ಬಸವ ಜನ್ಮ ಭೂಮಿಯಾಗಿರುವ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನವರಾಗಿದ್ದಾರೆ. ಅವರು ಎಂ.ಎ., ಟಿ.ಸಿ.ಎಚ್. ಶಿಕ್ಷಣ ಓದಿರುವ ಇವರು ಇಂಡಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭೈರೂಣಗಿ ತಾಲೂಕ ಇಂಡಿಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಶರಣೆ…

Read More

ಜಿಲ್ಲಾ ಉಸ್ತುವಾರಿ ಸಚಿವರಿಂದ ಗೃಹ ಆರೋಗ್ಯ ಯೋಜನೆ ಕೈಪಿಡಿ ಬಿಡುಗಡೆ ಮಾಡಿದ ಸಚಿವ ಎಂ.ಬಿ.ಪಾಟೀಲ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಆರೋಗ್ಯ ಯೋಜನೆಯ ಕೈಪಿಡಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಶುಕ್ರವಾರ ಸಚಿವರ ಗೃಹ ಕಚೇರಿಯಲ್ಲಿ ಬಿಡುಗಡೆ ಮಾಡಿದರು.ಜಿಲ್ಲೆಯಾದ್ಯಂತ ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಬಲಪಡಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಈ ಕಾರ್ಯಕ್ರಮದಡಿಯಲ್ಲಿ ೩೦ ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ೧೪ ಅಸಾಂಕ್ರಾಮಿಕ ರೋಗಗಳಾದ ಅಧಿಕ ರಕ್ತದೊತ್ತಡ, ಮಧುಮೇಹ, ಬಾಯಿ ಕ್ಯಾನ್ಸರ್, ಡಯಾಬೆಟಿಕ್ ಫೂಟ್ ಮತ್ತು ಡಯಾಬೆಟಿಕ್ ರೆಟಿನೋಪತಿ, ಮಾನಸಿಕ ಆರೋಗ್ಯ ಮತ್ತು ನರ ವೈಜ್ಞಾನಿಕ ಕಾಯಿಲೆಗಳು, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ದೀರ್ಘ ಕಾಲಿನ ಮೂತ್ರಪಿಂಡ ಕಾಯಿಲೆ, ದೀರ್ಘ ಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ, ಪಿತ್ತ ಜನಕಾಂಗದ ಕಾಯಿಲೆ ಮತ್ತು ರಕ್ತಹೀನತೆಯ ಕಾಯಿಲೆಗಳ ಕುರಿತು ತಿಳುವಳಿಕೆ ನೀಡಿ…

Read More

ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ.೫ ಉಪ ಚುನಾವಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನ ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ-೦೫ರ ಉಪ ಚುನಾವಣೆಗೆ ಸಂಬಂಧಿಸಿದಂತೆ ಮತದಾರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ನಿಡಗುಂದಿ ತಹಶೀಲ್ದಾರ ಕಾರ್ಯಾಲಯ, ಪಟ್ಟಣ ಪಂಚಾಯತ್ ಕಾರ್ಯಾಲಯ ಹಾಗೂ ಸಂಬಂಧಿಸಿದ ಮತಗಟ್ಟೆಗಳಲ್ಲಿ ಸಾರ್ವಜನಿಕರು ಹಾಗೂ ಮತದಾರರ ವೀಕ್ಷಣೆಗೆ ಕರಡು ಪ್ರತಿಯನ್ನು ಇರಿಸಲಾಗಿದೆ. ಪ್ರಕಟಿಸಲಾದ ಕರಡು ಮತದಾರ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ ೨೪ರೊಳಗೆ ನಿಡಗುಂದಿ ತಹಶೀಲ್ದಾರರಿಗೆ ಸಲ್ಲಿಸಬೇಕು. ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಅಂತಿಮ ಮತದಾರ ಪಟ್ಟಿಯನ್ನು ೨೦೨೫ರ ಜುಲೈ ೨೫ರಂದು ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಿಂದ ಜಮಖಂಡಿಗೆ ತೆರಳುವ ವಸತಿ ಬಸ್ ಬಿಡುವ ವೇಳೆಯನ್ನು ಬದಲಾಯಿಸಬೇಕೆಂದು ಇಲ್ಲಿನ ವಿದ್ಯಾರ್ಥಿಗಳು, ಪಾಲಕರು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.ಗ್ರಾಮದ ವಿದ್ಯಾರ್ಥಿಗಳಿಗಾಗಿಯೇ ವಿಶೇಷವಾಗಿ ಬಿಡಲಾಗುವ ಈ ಬಸ್ ಗ್ರಾಮದಿಂದ ಪ್ರತಿದಿನ ಬೆಳಿಗ್ಗೆ ೭ ಘಂಟೆಗೆ ಇಲ್ಲಿನ ಬಸ್ ನಿಲ್ದಾಣದಿಂದ ಹೊರಡುತಿತ್ತು ಆದರೆ ಪ್ರಸಕ್ತ ಶೈಕ್ಷಣಿಕ ಅವಧಿಯಿಂದ ಈ ಬಸ್ಸಿನ ವೇಳಾಪಟ್ಟಿಯನ್ನು ೬ ಘಂ. ೩೦ ನಿಮಿಷಕ್ಕೇ ಬದಲಾಯಿಸಿರುವುದರಿಂದ ಹೊಲ ಗದ್ದೆಗಳಿಂದ ಬರುವ ಬಹುತೇಕ ವಿದ್ಯಾರ್ಥಿಗಳಿಗೆ ಬಸ್ ಸೇವೆ ಲಭ್ಯವಾಗುತ್ತಿಲ್ಲ, ಪ್ರತಿದಿನ ಅರ್ಧಘಂಟೆ ಮುಂಚಿತವಾಗಿ ಹೊರಡುತ್ತಿರುವುದರಿಂದ ಹೊಲ ಗದ್ದೆಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಬಸ್ ಹೋದನಂತರ ಸುಮಾರು ಒಂದು ಘಂಟೆಗಳಕಾಲ ಈ ಮಾರ್ಗದಲ್ಲಿ ಬೇರೆ ಬಸ್‌ಗಳಿಲ್ಲ ಅಲ್ಲದೇ ನಂತರ ಬರುವ ಬಸ್‌ಗಳು ಅನ್ಯ ರಾಜ್ಯಕ್ಕೆ ಹೋಗುವುದರಿಂದ ವಿದ್ಯಾರ್ಥಿನಿಯರು ಪ್ರತಿದಿನ ಬಸ್ ಟಿಕೇಟ ಪಡೆದು ಪ್ರಯಾಣಿಸುವಂತಾಗಿದೆ ಇದರಿಂದ ಬಡ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಅಲ್ಲದೇ ಪ್ರತಿದಿನ ಕಾಲೇಜಿನಲ್ಲಿ ಬೆಳಗಿನ ತರಗತಿಗಳಿಗೆ ಗೈರು ಹಾಜರಾಗುತ್ತಿರುವುರಿಂದ ಶೈಕ್ಷಣಿಕ ಹಿನ್ನಡೆಯಾಗುತ್ತಿದೆ ಸಂಬಂದಿಸಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಪರಶುರಾಮ ಶಿವಶರಣ ಭಾಜನರಾಗಿದ್ದಾರೆ. ಪರಶುರಾಮ ಶಿವಶರಣ ಅವರು ರಾಜ್ಯ ಮಟ್ಟದ ಕನ್ನಡ ದಿನ ಪತ್ರಿಕೆ ಹೊಸ ದಿಗಂತದ ವಿಜಯಪುರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ತಾವು ತೊಡಗಿಸಿಕೊಂಡು, ನಿರ್ಭಿತಿಯಾಗಿ ಜನಮುಖಿ, ಸಮಾಜಮುಖಿ ವರದಿಗಳನ್ನು ಮಾಡುತ್ತ ಖ್ಯಾತಿ ಪಡೆದವರು.ಪರಶುರಾಮ ಶಿವಶರಣ ಅವರು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವುದರ ಜೊತೆಗೆ ಸಾಹಿತಿಗಳು ಆಗಿದ್ದಾರೆ. ಈಗಾಗಲೇ ಹಲವು ಕೃತಿಗಳನ್ನು ಹೊರ ತಂದಿದ್ದು, ಜೀವಪೀಠ, ನೀಲಿ ಮಿಂಚು ಕವನ ಸಂಕಲನ, ರಾಣಿ ಬಗೀಚ್ ಕಥಾ ಸಂಕಲನ ಹಾಗೂ ವಾರ ನೋಟ ಅಂಕಣ ಸಂಕಲನಗಳನ್ನು ಹೊರ ತಂದಿದ್ದಾರೆ. ಇವರ ಕೃತಿಗಳು ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿವೆ. ಅದರಂತೆ ಶಿವಶರಣ ಅವರ ವಿರಚಿತ ಜೀವ ಪೀಠ ಕೃತಿಗೆ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ಅರಳು ಪ್ರತಿಭೆ ಪ್ರಶಸ್ತಿ ದೊರೆತಿದೆ.ವಿವಿಧ ಸಂಘ, ಸಂಸ್ಥೆಗಳು ಕೊಡಮಾಡುವ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಜು. ೧೯ ರಂದು ನಗರದ ಕಂದಗಲ್…

Read More