Subscribe to Updates
Get the latest creative news from FooBar about art, design and business.
Author: editor.udayarashmi@gmail.com
ತಿಕೋಟಾ ತಾಲೂಕಿನ ಬಾಬಾನಗರ ಬಳಿ ನಿರ್ಮಾಣ | ಸುಮಾರು 400 ಎಕರೆ ಪ್ರದೇಶದಲ್ಲಿ ರೂ.557 ಕೋ. ವೆಚ್ಚ | ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20 ಕಿ. ಮೀ ವ್ಹಾಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಹಾಗೂ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ. ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ ಅಂದಾಜು ರೂ.495 ಲಕ್ಷ ವೆಚ್ಚದಲ್ಲಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ರಾಷ್ಟ್ರೀಯ ಸ್ವಯಂಸೇವಕ ಸಂಘದವತಿಯಿಂದ ಪಟ್ಟಣದ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಜು. ೨೦ ರವಿವಾರದಂದು ಗುರುಪೂಜಾ ಉತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.ಅಂದು ಸಾಯಂಕಾಲ ೬:೦೦ಕ್ಕೆ ಆರಂಭಗೊಳ್ಳಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ನಿವೃತ್ತ ಶಿಕ್ಷಕ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಗಂಗಾಧರಯ್ಯ ಮಠ ಅವರು ವಹಿಸಲಿದ್ದು, ವಕ್ತಾರರಾಗಿ ಉತ್ತರ ಕರ್ನಾಟಕ ಸಹಪ್ರಾಂತ ಪ್ರಚಾರಕರಾದ ಶ್ರೀನಿವಾಸ ಜೀ ಆಗಮಿಸಲಿದ್ದಾರೆಂದು ತಾಲೂಕಾ ಕಾರ್ಯವಾಹ ಸಂಜೀವ ಜಾಲಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ದಲಿತರ ಭೂಮಿ, ವಸತಿ ಹಕ್ಕು ಸಹಿತ ಇತರೆ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಪ್ರತಿಭಟನಾ ಧರಣಿ ಕೈಗೊಂಡು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಆವರಣಕ್ಕೆ ಶುಕ್ರವಾರ ಆಗಮಿಸಿದ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಭೂಮಿ ಮಂಜೂರಾತಿಗೆ ಆಗ್ರಹಿಸಿ ೨ ಗಂಟೆಗಳ ಕಾಲ ಪ್ರತಿಭಟನಾ ಧರಣಿ ಕೈಗೊಂಡರು.ಈ ಸಂದರ್ಭದಲ್ಲಿ ತಾಲ್ಲೂಕು ಪ್ರಧಾನ ಸಂಚಾಲಕ ಸಾಯಬಣ್ಣ ದಳಪತಿ ಮಾತನಾಡಿ, ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಸರ್ಕಾರಗಳು ಕೈಗಾರಿಕೆಗಳ ಸ್ಥಾಪನೆಯ ನೆಪದಲ್ಲಿ ವಿದೇಶಿ ಬಂಡವಾಳಗಾರರಿಗಾಗಿ ಸ್ವಾಧೀನ ಪಡಿಸಿಕೊಳ್ಳುತ್ತಿವೆ. ಇದು ದಲಿತರನ್ನು ಭೂಮಿಯಿಂದ ಕೇವಲ ಹೊರದಬ್ಬುವ ಕುಂತಂತ್ರವಾಗಿದೆ.ಪರಿಶಿಷ್ಟ ಜಾತಿ, ವರ್ಗ, ಭೂರಹಿತ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು. ಹಾಗೂ ವಜಾಗೊಳಿಸಿರುವ ಸಾಗುವಳಿ ಅರ್ಜಿಗಳನ್ನು ಮರುಪರಿಶೀಲಿಸಬೇಕು. ಎಸ್‌ಸಿಎಸ್‌ಪಿ-ಟಿಎಸ್‌ಪಿ ನಿರ್ವಹಣೆಗೆ ಪ್ರತ್ಯೇಕ ನಿರ್ದೇಶನಾಲಯ ಅಥವಾ ಏಕಗವಾಕ್ಷಿ ಯೋಜನೆ ವ್ಯವಸ್ಥೆ ಜಾರಿಗೊಳಿಸಬೇಕು. ಸಮಾಜ ಕಲ್ಯಾಣ ಇಲಾಖೆಯಡಿಯ ವಿದ್ಯಾರ್ಥಿ ನಿಲಯಗಳನ್ನು ಉನ್ನತಿಕರಣಗೊಳಿಸಿ, ನಿಗದಿತ ಅವಧಿಯೊಳಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗಾಗಿ) ಬಾಲಕ-ಬಾಲಕೀಯರ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ಆಗಸ್ಟ್ ೧೪ರ ಒಳಗಾಗಿ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೪ ಮತ್ತು ೮೦೫೦೭೭೦೦೦೫ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ, ಗ್ರಾಮ ಒನ್ hಣಣಠಿs://gಡಿಚಿmಚಿoಟಿe.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಬೆಂಗಳೂರು ಒನ್ hಣಣಠಿs://ಞಟಚಿಠಿಠಿ.ಞಚಿಡಿಟಿಚಿಣಚಿಞಚಿoಟಿe.gov.iಟಿ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವನ್ನು ಹಾಗೂ ನಿಗಮದ ದೂರವಾಣಿ ಸಂಖ್ಯೆ: ೦೮೩೫೨-೨೫೮೧೨೮ ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ ೨೦೨೫-೨೬ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಅರ್ಜಿಯೊಂದಿಗೆ ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್ ಪಾಸ್ ಬುಕ್, ಭಾವಚಿತ್ರದಂತಹ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ ೩೦ರೊಳಗೆ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಸ್ಟೇಶನ್ ಬ್ಯಾಕ್ ರೋಡ, ವಿಜಯಪುರ ಇವರನ್ನು ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ ಪತ್ರಕರ್ತರಿಗೆ ಆರು ವಿಷಯಗಳ ಕುರಿತ ಫೆಲೋಷಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ.ಅಕಾಡೆಮಿಯ ಸಾಮಾನ್ಯ ಆಯವ್ಯಯದಡಿ ಎರಡು, ಮಹಿಳಾ ಆಯವ್ಯಯದಡಿ ಎರಡು ಹಾಗೂ ಪರಿಶಿಷ್ಟ ಜಾತಿ ಉಪಯೋಜನೆಯಡಿ ಒಂದು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಒಂದು ಫೆಲೋಷಿಪ್ ನೀಡಲಾಗುವುದು. ಫೆಲೋಷಿಪ್ ಅವಧಿ ೬ ತಿಂಗಳು.ಕನಿಷ್ಠ ಐದು ವರ್ಷ ಸೇವಾನುಭವ ಹೊಂದಿರುವ, ಕನಿಷ್ಠ ೩೦ ವರ್ಷದಿಂದ ೫೦ ವರ್ಷ ವಯೋಮಿತಿಯ ಪತ್ರಕರ್ತರು ಫೆಲೋಷಿಪ್‌ಗೆ ಅರ್ಜಿ ಸಲ್ಲಿಸಬಹುದು. ಪತ್ರಕರ್ತರು ಪದವೀಧರರಾಗಿರಬೇಕು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಈ ಕುರಿತು ಸಂಪಾದಕರ ದೃಢೀಕರಣ ಪತ್ರ ಸಲ್ಲಿಸಬೇಕು.ಫೆಲೋಷಿಪ್‌ನ ವಿಷಯಗಳು ಈ ಕೆಳಗಿನಂತಿವೆ೧. ಬಾಲ್ಯವಿವಾಹ, PಔಅSಔ, ಮರ್ಯಾದೆಗೇಡು ಹತ್ಯೆ- ಮಾಧ್ಯಮ ದೃಷ್ಟಿಕೋನ೨. ಕೃಷಿ ಸಂವಹನ- ಒಂದು ಅಧ್ಯಯನ೩. ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ೪. ಬುಡಕಟ್ಟು ಕಾಯ್ದೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ- ಮಾಧ್ಯಮ ನೋಟ೫. Role…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ಹಮ್ಮಿಕೊಳ್ಳಲಾದ ಯುವ ಕವಿಗೋಷ್ಠಿಗೆ ವಿಜಯಪುರ ಜಿಲ್ಲೆ, ಸಿಂದಗಿ ತಾಲೂಕಿನ ಯುವಕವಿ ಸಾಯಬಣ್ಣ ಮಲ್ಲಪ್ಪ ಮಾದರ ಆಯ್ಕೆಯಾಗಿದ್ದಾರೆ.ದಿನಾಂಕ ೨೧-೦೭-೨೦೨೫ ರಂದು ಸೋಮವಾರ ಬೆಳಗ್ಗೆ ೧೦. ೩೦ ಗಂಟೆಗೆ ಕನ್ನಡ ಭವನ ಬೆಳಗಾವಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಬಡವರು, ಕೂಲಿಕಾರ್ಮಿಕರು, ಆರ್ಥಿಕ ದುರ್ಬಲರ ಹಸಿವು ನೀಗಿಸುವ ಸದುದ್ದೇಶದಿಂದ ಇಂದಿರಾ ಕ್ಯಾಂಟೀನ್ ತೆರೆಯಲಾಗಿದೆ ಎಂದು ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.ಪಟ್ಟಣದ ಬಸ್ ನಿಲ್ದಾಣದಲ್ಲಿ ಸುಮಾರು 82 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ ಶುಕ್ರವಾರ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದು ಬಹು ಜನರಿಗೆ ವರದಾನವಾಗಲಿದೆ, ನವಕರ್ನಾಟಕ ನಿರ್ಮಾಣಕ್ಕಾಗಿ ಪಂಚ ಗ್ಯಾರಂಟಿಗಳನನ್ನು ಅನುಷ್ಠಾನಕ್ಕೆ ತರುವ ಮೂಲಕ ಅಭಿವೃದ್ಧಿಗೂ ಆದ್ಯತೆ ನೀಡಲಾಗುವುದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಪ್ರಮುಖರಾದ ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೊಲೀಸ್ ಪಾಟೀಲ, ಬಾಬುಗೌಡ ಮಾಲಿ ಪಾಟೀಲ್, ವಾಮನರಾವ್ ದೇಶಪಾಂಡೆ, ಬಾಪುಗೌಡ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿಗೌಡ ಮಾಲಿ ಪಾಟೀಲ್, ಶಹಾಪುರ ಬ್ಲಾಕ್ ಅಧ್ಯಕ್ಷ ಶಿವಮಹಾಂತ ಸಾಹು ಚಂದಲಾಪುರ, ಕೆಂಭಾವಿ ಬ್ಲಾಕ್ ಅಧ್ಯಕ್ಷ ಬಸನಗೌಡ ಹೊಸ್ಮನಿ ಯಾಳಗಿ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರತಿಯೊಬ್ಬ ವ್ಯಕ್ತಿಯು ತನ್ನ ಬದುಕಿನಲ್ಲಿ ಪಾಲಕರ ಹಾರೈಕೆ, ಸ್ನೇಹಿತರೊಂದಿಗೆ ಆಟ ಪಾಠ, ವಿದ್ಯೆ, ಉದ್ಯೋಗ, ಸಾಂಗತ್ಯ ಮಕ್ಕಳು ಎಂದು ತನ್ನ ಬದುಕಿನಲ್ಲಿ ಹಲವಾರು ಮಜಲುಗಳನ್ನು ಕಾಣುತ್ತಾನೆ. ಎಷ್ಟೋ ಬಾರಿ ಔದ್ಯೋಗಿಕವಾಗಿ ಆರ್ಥಿಕವಾಗಿ, ಉನ್ನತ ಸ್ಥಾನಕ್ಕೆ ಹೋದಾಗ ಆತ ಕೆಲ ಸಂಗತಿಗಳನ್ನು ಮರೆತುಬಿಡುತ್ತಾನೆ. ಎಲ್ಲವೂ ತಾನೇ ತನ್ನಿಂದ ಎಂಬ ಅಹಂಭಾವ ಆತನಲ್ಲಿ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಆತ ನೆನಪಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳು ಹೀಗಿವೆ.ತನ್ನನ್ನು ಬೆಳೆಸಿದ್ದು ತನ್ನ ಪಾಲಕರು. ತನ್ನೆಲ್ಲ ಬೇಕು ಬೇಡಗಳನ್ನು ಅವಶ್ಯಕತೆಗಳನ್ನು ಪೂರೈಸಿದ್ದು ಪಾಲಕರು. ಹಗಲು ರಾತ್ರಿ ತಾವು ಎಚ್ಚರವಿದ್ದು ಮಕ್ಕಳನ್ನು ಬೆಳೆಸಿದವರು ತನ್ನ ಪಾಲಕರು. ತಮ್ಮ ಕಷ್ಟಗಳನ್ನು ತಮಗೆ ಮಾತ್ರ ಇಟ್ಟುಕೊಂಡು ಮಕ್ಕಳಿಗೆ ಸುಖವನ್ನು ಧಾರೆ ಎರೆದವರು. ಮಕ್ಕಳ ಇಚ್ಚಿಸಿದ ಎಲ್ಲವನ್ನು ತಂದುಕೊಟ್ಟವರು ಅವರ ಪಾಲಕರು. ಮನುಷ್ಯನ ಮೂಲಭೂತ ಅವಶ್ಯಕತೆಗಳಾದ ಆಹಾರ, ಬಟ್ಟೆ, ಸೂರು ಮತ್ತು ವಿದ್ಯೆ ದಯಪಾಲಿಸಿ ತನ್ನ ಕಾಲ ಮೇಲೆ ತಾನು ನಿಲ್ಲುವಂತೆ ಬೆಳೆಸಿದವರು ಅವರೇ…
