Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅಜ್ಞಾನವೆಂಬ ಕತ್ತಲೆಯನ್ನು ಹೊಡೆದೊಡಿಸುವ ಜ್ಞಾನದ ಬೆಳಕನ್ನು ಹೊತ್ತಿಸುವ ಗುರುವಿನ ಮಾರ್ಗದರ್ಶನದಲ್ಲಿ ನಡೆದಾಗಲೇ ಬದುಕಿನಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ನಿವೃತ್ತ ಮುಖ್ಯಗುರು ಎಸ್.ಎಸ್.ಯಂಕಂಚಿ ಹೇಳಿದರು.ಸಿಂದಗಿ ಪಟ್ಟಣದ ಜ್ಯೋತಿ ನಗರದ ಲಕ್ಷ್ಮಿ ಕಲ್ಯಾಣ ಮಂಟಪ ಸಿಂದಗಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಆರ್ಯಭಟ ಪ್ರಭಾತ ಪ್ರಾಢ ಶಾಖೆ ವತಿಯಿಂದ ಗುರುಪೂರ್ಣಿಮಾ ನಿಮಿತ್ತ ಹಮ್ಮಿಕೊಂಡ ಗುರು ಉತ್ಸವ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಗುರು ಪೂರ್ಣಿಮಾ ಕೇವಲ ಧಾರ್ಮಿಕ ಮಹತ್ವವನ್ನು ಹೊಂದಿರುವ ದಿನವಲ್ಲ. ಬದಲಾಗಿ ಪ್ರತಿಯೊಬ್ಬ ವ್ಯಕ್ತಿಯ ಬದುಕಿಗೆ ಮಾರ್ಗದರ್ಶನ ಮಾಡಿದ ಗುರುವನ್ನು ಗೌರವಿಸುವ ದಿನವಾಗಿದೆ. ಇಂದಿನ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಮತ್ತು ಶಿಸ್ತು ಬಹಳ ಅತ್ಯವಶಕ. ರಾಷ್ಟಿçÃಯ ಸ್ವಯಖಸೇವಕ ಸಂಘವು ಮಕ್ಕಳಲ್ಲಿ ಈ ಮೌಲ್ಯಗಳನ್ನು ಬೆಳಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ನಮ್ಮ ಲೌಕಿಕ ಸಾಧನೆ, ಅಲೌಕಿಕ ಸಿದ್ದಿಗೂ ಕಾರಣವಾಗಿರುವ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುವ ಹಬ್ಬವನ್ನಾಗಿ ನಮ್ಮ ಸಂಸ್ಕೃತಿಯಲ್ಲಿ ಗುರುಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತಿದೆ ಎಂದರು.ಈ ವೇಳೆ ತಾಲೂಕು…

Read More

ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚಿಸಿದರು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ೨೦೦೫, ನಿಯಮ ೨೦೦೬ ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಒಳಗೊಂಡಂತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕೊಳಗಾಗಿರುವ ಮಹಿಳೆಯರಿಗೆ ಕೌನ್ಸೆಲಿಂಗ್ ಹಾಗೂ ಅಗತ್ಯ ಕಾನೂನು ನೆರವು ಒದಗಿಸುವಂತೆ ಅವರು ಸೂಚನೆ ನೀಡಿದರು.ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಬಂಧಿಸಿದ ಇಲಾಖೆಗಳು ನಿರಂತರ ಸಭೆ, ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಏರ್ಪಡಿಸುವ ಮೂಲಕ ಸೂಕ್ತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ವಾರಸುದಾರರ ಖಾತೆ ಬದಲಾವಣೆ ಮಾಡಲು ಪೌತಿ-ವಾರಸಾ ಖಾತೆ ಆಂದೋಲನವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ಮಾಲೀಕತ್ವವು ಮೃತರ ವಾರಸುದಾರರ ಹೆಸರಿಗೆ ಬದಲಾವಣೆಯಾಗದಿದ್ದಲ್ಲಿ, ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಪೌತಿ-ವಾರಸಾ ಸ್ವರೂಪದ ಮ್ಯುಟೇಷನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಿ ಪೌತಿ-ವಾರಸಾ ಖಾತೆ ಆಂದೋಲನ ನಡೆಸಲಾಗುತ್ತಿದೆ. ಅಂತಹ ವಾರಸುದಾರರಿಗೆ ಸರ್ಕಾರದಿಂದ ಸಿಗಬಹುದಾದ ಹಲವಾರು ಪ್ರಯೋಜನಗಳಿಂದ ಹಾಗೂ ಜಮೀನು ಅಭಿವೃದ್ಧಿಗೆ ಸಂಬಂಧಿಸಿದ ಸಾಲ ಸೌಲಭ್ಯ, ಬೆಳೆ ಹಾನಿ ಪರಿಹಾರ, ಬೆಳೆ ವಿಮೆಯಂತಹ ಅನೇಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮೃತರ ವಾರಸುದಾರರ ಮನೆ ಬಾಗಿಲಿಗೆ ಆಗಮಿಸಿ, ಇ-ಪೌತಿ-ವಾರಸಾ ಖಾತೆಯನ್ನು ದಾಖಲಿಸಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ವಾರಸುದಾರರು ಅಗತ್ಯ ದಾಖಲೆಗಳಾದ ವಂಶ ವೃಕ್ಷ ಮತ್ತು ಮಹಜರ್ ಅಥವಾ ಪಂಚನಾಮಾ, ಎಲ್ಲ ವಾರಸುದಾರರ ಆಧಾರ್ ಕಾರ್ಡ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು.…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ವಿದ್ಯಾರ್ಥಿಗಳು ಗುಣಾತ್ಮಕ ಶಿಕ್ಷಣ ಪಡೆಯಲು ಯಾವುದೇ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಪ್ರತಿ ವಿದ್ಯಾರ್ಥಿಗಳಿಗೂ ಅಗತ್ಯ ನೋಟ್ ಬುಕ್, ಪೆನ್ ಗಳನ್ನು ವಿತರಿಸಲಾಗುತ್ತಿದೆ ಎಂದು ಚಂದ್ರಗಿರಿ ಚಂದ್ರಮ್ಮ ದೇವಸ್ಥಾನದ ಧರ್ಮಾಧಿಕಾರಿ ಚಂದ್ರಕಾಂತ ಸಿರಿಯಪ್ಪ ದೇಸಾಯಿ ಹೇಳಿದರು.ಅವರು ತಮ್ಮ ಸ್ವಂತ ಖರ್ಚಿನಲ್ಲಿ ಇಲ್ಲಿಯ ಸರ್ಕಾರಿ ಪ್ರಾಥಮಿಕ ಶಾಲೆಯ ೬೫ ವಿದ್ಯಾರ್ಥಿಗಳಿಗೆ ತಲಾ ಎರಡು ನೋಟ್ ಬುಕ್ ೨ ಪೆನ್ ಹಾಗೂ ಮಂಜಪ್ಪ ಹರ್ಡೇಕರ ಪ್ರೌಢಶಾಲೆಯ ೩೦೦ ವಿದ್ಯಾರ್ಥಿಗಳಿಗೆ ತಲಾ ಐದು ನೋಟ್ ಬುಕ್ ಹಾಗೂ ಎರಡು ಪೆನ್ ಗಳನ್ನು ಗುರುವಾರ ವಿತರಿಸಿ ಮಾತನಾಡಿದ ಅವರು, ಈ ಶಾಲೆಯಲ್ಲಿ ಕಲಿತಕ್ಕಂತ ಮಕ್ಕಳಿಗೆ ಅಜೀವ ಪರ್ಯಂತ ಪ್ರತಿವರ್ಷ ಸಹ ಪೆನ್ನು ಪುಸ್ತಕವನ್ನು ನೀಡುವೆ. ಸ್ವ ಸಂತೋಷದಿಂದ ಆತ್ಮ ತೃಪ್ತಿಗಾಗಿ ಈ ಸಮಾಜ ಋಣವನ್ನು ತೀರಿಸಲು ಪ್ರಯತ್ನಿಸುತ್ತಿರುವೆ. ಕಳೆದ ಮೂರು ವರ್ಷಗಳಿಂದ ಈ ನೋಟ್ ಬುಕ್ ವಿತರಿಸುತ್ತಿದ್ದು, ಆರ್ಥಿಕವಾಗಿ ಹಿಂದುಳಿದ ನೈಜ ಪ್ರತಿಭಾವಂತ ಮಗುವಿನ ಶಿಕ್ಷಣಕ್ಕೂ ಆರ್ಥಿಕ ಸಹಾಯ ಮಾಡುವುದಾಗಿಯೂ ಅವರು ತಿಳಿಸಿದರು.ಹಿರಿಯ ಶಿಕ್ಷಕ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪರಿಸರ ಸಂರಕ್ಷಿಸುವ ಕೆಲಸದಲ್ಲಿ ನಾವೆಲ್ಲರೂ ಕೈಜೋಡಿಸಬೇಕು. ನಮ್ಮ ಪರಿಸರ ಪ್ರೀತಿಯ ಕೆಲಸ ಮುಂದಿನ ಜನಾಂಗದವರಿಗೆ ಸ್ಪೂರ್ತಿಯಾಗಬೇಕು. ನಾವು ನೆಟ್ಟ ಗಿಡಗಳು ದೊಡ್ಡದಾದಾಗ ಅವುಗಳಿಂದ ಸಿಗುವ ಖುಷಿ ದೊಡ್ಡದು ಎಂದು ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು.ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಅರಣ್ಯ ಇಲಾಖೆ, ಪುರಸಭೆ, ಹಸಿರು ತೋರಣ ಗೆಳೆಯರ ಬಳಗದ ಸಹಯೋಗದೊಂದಿಗೆ ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಮಾತನಾಡಿ, ಪರಿಸರ ಸಂರಕ್ಷಣೆ ವಿಷಯದಲ್ಲಿ ನಾಗರಿಕರಿಗೆ ಎಲ್ಲ ರೀತಿಯ ನೆರವು ನೀಡುತ್ತೇವೆ. ಮುದ್ದೇಬಿಹಾಳ ಪಟ್ಟಣದ ಸೌಂದರ್ಯ ವರ್ಧನೆಗೆ ಜೆಸಿಬಿ, ನೀರು, ಅಲ್ಲಲ್ಲಿ ಸಾರ್ವಜನಿಕ ಆಸನಗಳ ಜೋಡಣೆಗೆ ಆದ್ಯತೆ ನೀಡುತ್ತೇವೆ. “ಅಮೃತ ಮಿತ್ರ” ಯೋಜನೆಯ ಅಡಿಯಲ್ಲಿ ಇನ್ನೂ ಹತ್ತು ಉದ್ಯಾನವನಗಳನ್ನು ತಲಾ ಹತ್ತು ಲಕ್ಷ ರೂ ಅನುದಾನದಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದರು.ಪುರಸಭೆ ಉಪಾಧ್ಯಕ್ಷೆ ಪ್ರೀತಿ ಶರಣು ದೇಗಿನಾಳ ಮಾತನಾಡಿ, ಮುದ್ದೇಬಿಹಾಳ ಪಟ್ಟಣದಲ್ಲಿ ಮೊದಲು ಗಿಡಗಳು ಕಾಣುತ್ತಿರಲಿಲ್ಲ. ಈಗ ಹಸಿರು ತೋರಣ ಬಳಗದಿಂದಾಗಿ ಗಿಡಗಳು ಬೆಳೆದು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ದಸ್ತು ಬರಹಗಾರರ (ಬಾಂಡ್ ರೈಟರ‍್ಸ್) ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹಾಗೂ ದಸ್ತುಬರಹಗಾರ ಎಚ್.ಆರ್.ಬಾಗವಾನ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಪಟ್ಟಣದ ದಸ್ತು ಬರಹಗಾರರ ಮಳಿಗೆಗಳ ಆವರಣದಲ್ಲಿ ನಡೆದ ಆಯ್ಕೆ ಪ್ರಕ್ರೀಯೆಯಲ್ಲಿ ಬಾಗವಾನ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಉಪಾಧ್ಯಕ್ಷರನ್ನಾಗಿ ರಾಜೇಂದ್ರಕುಮಾರ ಪಾವಲೆ, ಪ್ರಧಾನ ಕಾರ್ಯದರ್ಶಿಯನ್ನಾಗಿ ಡಿ.ಎಚ್.ತೊಗರಿ, ಖಜಾಂಚಿಯಾಗಿ ಎಂ.ಎಂ.ಕಟಗಿ, ಜಿಲ್ಲಾ ಪ್ರತಿನಿಧಿಯಾಗಿ ಎಚ್.ಎಸ್.ನಾಯ್ಕೋಡಿ ಇವರುಗಳನ್ನು ಆಯ್ಕೆ ಮಾಡಲಾಯಿತು.ಈ ವೇಳೆ ಸಂಘದ ರಾಜ್ಯ ಸಮಿತಿ ಸದಸ್ಯ ಜಿ.ಎಸ್.ಜೋಳದ, ಸದಸ್ಯರಾದ ಎಸ್.ಬಿ.ಕಡಿ, ಡಿ.ಎಸ್.ಹಿರೇಮಠ, ಆರ್.ಎ.ನಾಡಗೌಡ, ಎಸ್.ಎಸ್.ಹಳ್ಳೂರ, ಎಂ.ಎ.ಮುಲ್ಲಾ ಇದ್ದರು.ಇದೇ ವೇಳೆ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಇಂದು ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಬದುಕನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯುವಂತಹ ಕೌಶಲ್ಯಾಧಾರಿತ ಉದ್ಯೋಗಗಳು ಸೃಷ್ಟಿಯಾಗಿವೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಂಡು ತಮ್ಮ ಬದುಕಿನಲ್ಲಿ ಉದ್ಯೋಗ ಮಾಡುವ ಮೂಲಕ ತಮ್ಮ ಬದುಕನ್ನು ಉತ್ತಮವಾಗಿ ಕಳೆಯಬೇಕು ಎಂದು ಬಿಎಲ್ಇಡಿ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕ ಡಾ.ವೈ.ಬಿ.ನಾಯಕ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೌಶಲ್ಯಾಭಿವೃದ್ಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಪದವಿ ಎಂಬುವದು ನಿರುದ್ಯೋಗ ಸೃಷ್ಟಿ ಮಾಡುವ ಹಂತ ಎಂದು ಬಹುತೇಕರು ನಂಬಿದ್ದಾರೆ. ಪದವಿ ಒಂದೇ ನಮ್ಮ ಬದುಕಿಗೆ ಆಸರೆಯಾಗಿ ನಿಲ್ಲುವಂತದ್ದು ಅಲ್ಲ. ಕಲಿಕೆಯ ಜೊತೆ ಜೊತೆಗೆ ಗಳಿಕೆಯನ್ನು ಮಾಡಿಕೊಳ್ಳುವುದು ಜಾಣರ ಲಕ್ಷಣವಾಗಿದೆ ಎಂದರು.ಇಂದು ಮಹಿಳೆಯರು ಮನೆಯಲ್ಲಿಯೇ ಕುಳಿತುಕೊಂಡು ಹೊಲಿಗೆ, ವಸ್ತ್ರ ವಿನ್ಯಾಸ ಮೆಹಂದಿ, ಕಂಪ್ಯೂಟರ್, ಪ್ಯಾಶನ್ ಡಿಸೈನ್ ಮುಂತಾದ ಉತ್ತಮ ಹಣ ಗಳಿಕೆಯ ಚಿಕ್ಕ ಚಿಕ್ಕ ಉದ್ಯೋಗಗಳನ್ನು ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ. ವ್ಯವಹಾರಿಕ ಜ್ಞಾನವಿದ್ದ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕಲಿಕೆಯ ಹಂಬಲ ಹೊಂದಿರುವ ಬಡ ವಿದ್ಯಾರ್ಥಿಗಳಾದ ತಾಲೂಕಿನ ಸವಳಹಳ್ಳ ತಾಂಡಾದ ಅಂಕಿತಾ ರಾಠೋಡ, ಸಾಹೀಲ ಚವ್ಹಾಣ, ಚೇತನಕುಮಾರ ರಜಪೂತ ಅವರ ಪದವಿ ವ್ಯಾಸಂಗ ಶುಲ್ಕವನ್ನು ತುಂಬುವ ಮೂಲಕ ಸ್ಥಳೀಯ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ವಿನುತ ಕಲ್ಲೂರ (ವಿವೇಕ ಬ್ರಿಗೇಡ್) ಸಚೀನ ಕಲ್ಲೂರ ಅವರು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಆರ್ಥಿಕವಾಗಿ ಸಹಾಯ ಮಾಡಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಅವರಿಗೆ ಗುರುವಾರ ಮೂವರು ವಿದ್ಯಾಥಿಗಳ ಪದವಿ ಶುಲ್ಕವನ್ನು ನೀಡಿದರು. ಮೂವರು ವಿದ್ಯಾರ್ಥಿಗಳ ಪದವಿ ಶುಲ್ಕವನ್ನು ಸ್ವೀಕರಿಸಿದ ಪ್ರಾಚಾರ್ಯರು ಬಡ ವಿದ್ಯಾರ್ಥಿಗಳ ಕಲಿಕೆಗೆ ಧನಸಹಾಯ ಮಾಡಿದ ಮಹನೀಯರ ಕಾರ್ಯ ಶ್ಲಾಘನೀಯವಾಗಿದೆ ಎಂದರು.ಧನ ಸಹಾಯ ಪಡೆದ ವಿದ್ಯಾರ್ಥಿಗಳು ನಾವು ನಿರಂತರ ಅಧ್ಯಯನ ಮಾಡುವ ಮೂಲಕ ಮಹಾವಿದ್ಯಾಲಯಕ್ಕೆ, ಧನಸಹಾಯ ಮಾಡಿದ ಮಹನೀಯರಿಗೆ ಚ್ಯುತಿ ಬಾರದಂತೆ ಉತ್ತಮ ಸಾಧನೆ ಮಾಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಪೃಥ್ವಿರಾಜ ನಾಯ್ಕೋಡಿ, ಶಿವಾನಂದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ರೀಡೆಗಳು ಬದುಕಿನ ಅವಿಭಾಜ್ಯ ಅಂಗವಾಗಲಿ ಎಂದು ಸಮಾಜ ಸೇವಕ ಫಯಾಜ ಕಲಾದಗಿ ಹೇಳಿದರು.ನಗರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಲಯನ್ಸ್ ಪುಟ್ಬಾಲ್ ಕ್ಲಬ್ ವತಿಯಿಂದ ಹಮ್ಮಿಕೊಂಡ ೨೧ ವರ್ಷ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಪಂದ್ಯಾವಳಿ ಡಾ.ಬಿ.ಆರ್. ಅಂಬೇಡ್ಕರ್ ಪುಟ್ಬಾಲ್ ಪಂದ್ಯಾಳಿ ೨೦೨೫ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಇಂದಿನ ಯುವಕರು ದುಷ್ಟಟಕ್ಕೆ ಬಲಿಯಾಗುತ್ತಿದ್ದಾರೆ. ತಮ್ಮ ಅಮೂಲ್ಯವಾದ ಆರೋಗ್ಯವನ್ನು ಕಾಪಾಡಿಕೊಳ್ಳದೇ ವ್ಯಸನೀಗಳಾಗುತ್ತಿರುವುದು ವಿಷಾದನೀಯ. ಯುವಕರು ಸದೃಢವಾದ ದೇಹವನ್ನು ಹೊಂದಲು ಕ್ರೀಡೆಗಳಲ್ಲಿ ತೊಡಗಿಕೊಳ್ಳಬೇಕು. ಕ್ರೀಡೆಯು ಬದುಕಿನ ಅವಿಭಾಜ್ಯ ಅಂಗವಾಗಬೇಕು ಎಂದು ಕರೆ ನೀಡಿದರು. ರಾಜ್ಯ ಮತ್ತು ದೇಶದ ಕೀರ್ತಿ ಪತಾಕೆಯನ್ನು ಜಗತ್ತಿನಾದ್ಯಂತ ಹರಿಡಿಸುವ ಕೆಲಸದಲ್ಲಿ ಪ್ರತಿಯೊಬ್ಬರು ತೊಡಗಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ್ ದೈವಾಡಿ ಮಾತನಾಡಿದರು.೨೧ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಲಯನ್ಸ್ ಫುಟ್ಬಾಲ್ ತಂಡ ಪ್ರಥಮ ಸ್ಥಾನ ಪಡೆದರು, ರಿತೇಶ್ ಫುಟ್ಬಾಲ್ ತಂಡ ವಿಜಯಪುರ…

Read More

ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು, ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೆಹರೂ- ಕುಟುಂಬ ನೋಡಿಕೊಂಡು ಬಂದಿದೆ. ಇಂತಹ ಕಾಂಗ್ರೆಸ್ ಪಕ್ಷದಿಂದ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಕೊಡಲು ಸಾಧ್ಯವೇ? ಬಿಹಾರ ರಾಜ್ಯದ ಚುನಾವಣೆ ಸಮೀಪಿಸುತ್ತಿರುವ ಕಾರಣದಿಂದಾಗಿ ಎಐಸಿಸಿಯ ಒಬಿಸಿ ಸಮಿತಿಯು ಸಿದ್ದರಾಮಯ್ಯನವರ ಮೂಲಕ ಹಿಂದುಳಿದ ವರ್ಗಗಳ ಕುರಿತು ಮೊಸಳೆಕಣ್ಣೀರು ಹಾಕುತ್ತಿದೆ ಎಂದು ವ್ಯಂಗ್ಯವಾಡಿದರು.ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಒಬಿಸಿ ಸಮಿತಿಯ ಸಭೆಯಲ್ಲಿ ಹಿಂದುಳಿದವರು ದಲಿತರು ಅಲ್ಪಸಂಖ್ಯಾತರ ಅಭಿವೃದ್ಧಿಯಾಗಿಲ್ಲ ಎಂದರೆ ದೇಶದ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಸಭೆಯಲ್ಲಿ ಹೇಳಿದ್ದಾರೆ. ಬಿಜೆಪಿ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ, ಎಂದೂ…

Read More