Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ದಿನಾಂಕ: ೧೮-೦೭-೨೦೨೫ ರಂದು ಬೆಳಿಗ್ಗೆ ೧೧-೦೦ಗಂಟೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ಗೋಲ್ ಗುಂಬಜ್ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ೫,೦೦೦ ರೂ.ಗಳ ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇರಿಸಬೇಕು. ಕನಿಷ್ಠ ೧೦ನೇ ತರಗತಿ ಉತ್ತೀರ್ಣರಾಗಿರುವ ನುರಿತ, ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಆಯಾ ಇಲಾಖೆಗೆ ಸಂಬಂಧಿಸಿದಂತೆ ಸೂಕ್ತ ಕಮಿಷನ್ ನೀಡಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿ ಅಥವಾ ಅಂಜೆ ವಿಮಾ ಅಭಿವೃದ್ಧಿ ಅಧಿಕಾರಿ ಮೊಬೈಲ್:…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಪಡೆಯಲು ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನು https://swdservice.karnataka.gov.in/PrizeMoneyClientAPP/ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ-ತಾಲೂಕಾ ಮಟ್ಟದ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗಾಯಗಳು, ದೋಷಗಳು, ಶಸ್ತ್ರಚಿಕಿತ್ಸೆಯಿಂದಾಗುವ ಕಲೆಗಳನ್ನು ಸರಿಪಡಿಸಲು ಮತ್ತು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಹೇಳಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಶ್ಪತ್ರೆಯಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಈ ಹಿಂದೆ ಮನುಷ್ಯನ‌ ಮುಖಚರ್ಯೆ, ಅಂಗವೀಕಲತೆ ಸೇರಿದಂತೆ ನಾನಾ ವಿಕಲತೆಗಳನ್ನು ಸರಿಪಡಿಸುವುದು ಕಷ್ಟಸಾಧ್ಯವಾಗಿತ್ತು. ಆದರೆ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ದಿಯಿಂದಾಗಿ ಪ್ಲಾಸ್ಟಿಕ್ ಸರ್ಜರಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯಾಗಿದೆ. ಅಪಘಾತ, ಸುಟ್ಟಗಾಯ, ಶೀಳುತುಟಿ, ಜನ್ಮದೋಷ, ಅಂಗವೈಕಲ್ಯ, ಹೆಚ್ಚವರಿ ಬೆರಳುಗಳನ್ನು ಸರಿಪಡಿಸುವುದು. ದೇಹ ಮತ್ತು ಮುಖದ ಆಕಾರವನ್ನು ಬದಲಿಸುವುದು, ಸುಕ್ಕುಗಳನ್ನು ಕಡಿಮೆ ಮಾಡಿ ಚರ್ಮದ ಕಾಂತಿ ಹೆಚ್ಚಿಸುವುದು ಈಗ ಸರಳವಾಗಿದೆ. ವಿಕಾರ ರೂಪವನ್ನು ಸುಂದರವಾಗಿ ಮಾರ್ಪಡಿಸಬಹುದಾಗಿದೆ. ಅಲ್ಲದೆ ಪ್ಲಾಸ್ಟಿಕ್ ಸರ್ಜರಿ ಈಗ ಅತೀ ವೇಗವಾಗಿ ಮುನ್ನುಗ್ಗುತ್ತಿದೆ ಎಂದು ಅವರು ಹೇಳಿದರು.ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಮತ್ತು ಅಂಜುಮನ್-ಇ-ಇಸ್ಲಾಂ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ವಿಜಯಪುರ ಇವರುಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಭೂಕರ್ ಪ್ರಶಸ್ತಿ ಪಡೆದ ಡಾ.ಬಾನು ಮುಷ್ಕಾಕ್ ಅವರ ಬರಹಗಳ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಜು.೧೭ ರಂದು ಬೆಳಿಗ್ಗೆ ೧೧-೦೦ ಗಂಟೆಗೆ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಾಹಿತಿ ಹಾಗೂ ಡಿವಾಯ್‌ಎಸ್ಪಿ ಬಸವರಾಜ ಯಲಿಗಾರ ಉದ್ಘಾಟಿಸುವರು.ಸಂಸ್ಥೆಯ ಅಧ್ಯಕ್ಷರಾದ ಅಲ್-ಹಜ್ ಜನಾಬ ಸಜ್ಜಾದೆ ಪೀರಾ ಮುಶ್ರೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.ವಿಷಯ ನಿರೂಪಕರಾಗಿ ಸಾಹಿತಿಗಳಾದ ಡಾ. ಮುರ್ತುಜಾಬೇಗಂ ಕೊಡಗಲಿ, ಡಾ.ಶಿವಾನಂದ ಕೆಲೂರ ಆಗಮಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಡಾ. ಸಿದ್ಧರಾಮ ಹೊನಕಲ್, ಮಹಾದೇವ ಬಸರಕೋಡ ಉಪಸ್ಥಿತರಿರುವರೆಂದು ಅಕಾಡೆಮಿಯ ಸದಸ್ಯ ಸಂಚಾಲಕ ಶಂಕರ ಬೈಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಕೃತಿಯ ಸಂಪನ್ಮೂಲಗಳು ಸೀಮಿತವಾಗಿವೆ. ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವುದು ಅಭಿವೃದ್ಧಿಯಲ್ಲಿ ಹಿನ್ನೆಡೆಯಾಗುತ್ತಿದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣ ಅಗತ್ಯವಾಗಿದೆ. ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ನೂರಾನಿ ಮುಗಲಾಯಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಆರೋಗ್ಯ ಕೇಂದ್ರದ ಸಭಾಭವನದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನಸಂಖ್ಯೆ ನಿಯಂತ್ರಿಸುವ ಉದ್ದೇಶದಿಂದ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಂತಾನ ನಿಯಂತ್ರಣಕ್ಕೆ ಮಾತ್ರಗಳು ಮತ್ತು ಚುಚ್ಚುಮದ್ದುಗಳು ಬಂದಿವೆ. ಅವುಗಳ ಕುರಿತು ಅರಿತುಕೊಂಡು ಜನಸಂಖ್ಯೆ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.ಈ ವೇಳೆ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಎ.ಎ.ಮಾಗಿ ಮಾತನಾಡಿ, ಕಲ್ಯಾಣ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ತಾತ್ಕಾಲಿಕ ಹಾಗೂ ಶಾಶ್ವತ ವಿಧಾನಗಳನ್ನು ಒದಗಿಸಬೇಕು. ಇದರಿಂದ ಜನಸಂಖ್ಯೆಯಲ್ಲಿ ಸ್ಥಿರತೆ ಕಾಪಾಡಬಹುದು. ಆದ್ದರಿಂದ ಇಲಾಖೆಯ ಸಿಬ್ಬಂದಿಯವರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ‘ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಮಿಲಿಟರಿ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಮಿಲಿಟರಿ ಪಿಂಚಣಿ ರಹಿತಿ ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ ೧ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಓಸಿ- ಪ್ರೊಪೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶಿಷ್ಯ ವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ದಿನಾಂಕ: ೩೦-೧೧-೨೦೨೫ರೊಳಗಾಗಿ ಉಪ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನರಲ್ ಕೆ ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:೩೦-೧೧-೨೦೨೫ರೊಳಗಾಗಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನರಲ್ ಕೆ ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:೩೦-೧೧-೨೦೨೫ರೊಳಗಾಗಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ,ಪದವಿ ಹಾಗೂ ವೃತ್ತಿಪರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ, ಪದವಿ ಹಾಗೂ ವೃತ್ತಿಪರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಶುಲ್ಕ ರಹಿತ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:೩೦-೦೯-೨೦೨೫ರೊಳಗಾಗಿ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

೧೯೯೩-೯೪ನೇ ಸಾಲಿನ ವಿದ್ಯಾರ್ಥಿಗಳಿಂದ ಗುರು ವಂದನೆ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮನುಷ್ಯ ಜೀವನ ಬಹಳ ಶ್ರೇಷ್ಠವಾದುದ್ದು, ನಮ್ಮ ಬದುಕಿಗೆ ಶ್ರೇಷ್ಠತೆ ಸಿಗಬೇಕಾದರೆ ಹೆತ್ತವರು ಮತ್ತು ವಿದ್ಯೆ ಕಲಿಸಿದ ಗುರುಗಳಿಂದ. ಹೀಗಾಗಿ ಹೆತ್ತವರು ಮತ್ತು ಬದುಕಿಗೆ ಬೆಳಕಾದ ಗುರುಗಳ ಸ್ಮರಣೆ ಮಾಡುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.ಅಫಜಲಪುರ ಪಟ್ಟಣದ ಮಳೇಂದ್ರ ಕಲ್ಯಾಣ ಮಂಟಪದಲ್ಲಿ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ೧೯೯೩-೯೪ನೇ ಸಾಲಿನ ವಿದ್ಯಾರ್ಥಿಗಳಿಂದ ನಡೆದ ಗುರುವಂದನೆ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಉದ್ಘಾಟಿಸಿ ಮಾತನಾಡಿದ ಅವರು, ಮಹಾಂತೇಶ್ವರ ಶಿಕ್ಷಣ ಸಂಸ್ಥೆ ಒಂದು ಸಂಸ್ಥಾನವಿದ್ದಂತೆ, ಅಲ್ಲಿ ಕಲಿತವರು ಇಂದು ರಾಜ್ಯದ ತುಂಬ ವಿವಿಧ ಹುದ್ದೆಗಳಲ್ಲಿದ್ದಾರೆ, ಉದ್ಯಮಿಗಳಾಗಿದ್ದಾರೆ, ಸಮಾಜಕ್ಕೆ ಮಾರ್ಗದರ್ಶಕರಾಗಿದ್ದಾರೆ, ರಾಜಕಾರಣಿಗಳಾಗಿದ್ದಾರೆ. ಅಂತಹ ವಿದ್ಯಾ ಸಂಸ್ಥೆಯಲ್ಲಿ ಕಲಿತವರು ತಮಗೆ ಕಲಿಸಿದ ಗುರುಗಳನ್ನು ಸ್ಮರಿಸಿ ಗುರುವಂದನೆ ಕಾರ್ಯಕ್ರಮ ಆಯೋಜಿಸಿದ್ದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದರು.ಮಳೇಂದ್ರ ಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿ ಮಾತನಾಡಿ, ೩೩ ವರ್ಷಗಳ ಬಳಿಕ ಹಳೆಯ ವಿದ್ಯಾರ್ಥಿಗಳು…

Read More