Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ರಾಷ್ಟ್ರೀಕೃತ ಬ್ಯಾಂಕಿನ ದರೋಡೆ ಪ್ರಕರಣ, ಕೆಲವೇ ದಿನಗಳಲ್ಲಿ ಪತ್ತೆ ಹಚ್ಚಿ, ಅಪರಾಧಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದ ವಿಜಯಪುರ ಪೊಲೀಸ್ ಇಲಾಖೆಗೆ ಸಾವಿರ, ಸಾವಿರ ಸೆಲೂಟ್! ಎಂದು ಅಮ್ಮ ಫೌಂಢೇಶನ್ ಸಂಚಾಲಕರಾದ ಕಬೂಲ್ ಕೊಕಟನೂರ ಶ್ಲಾಘಿಸಿದ್ದಾರೆ.ಕರ್ನಾಟಕ ಪೊಲೀಸ್ ಇಲಾಖೆಗೆ ಸವಾಲಾಗಿದ್ದ ದರೋಡೆ ಪ್ರಕರಣ ಭೇದಿಸುವಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸರ್ ಅವರ ಬುದ್ದಿಮತ್ತೆ, ಅವಿರತ ಶ್ರಮ, ಚಾಣಾಕ್ಷತೆ, ಸಿಬ್ಬಂಧಿಗಳ ಜೊತೆ ಸೇವಾ ಕಾರ್ಯ, ಇಡೀ ಪ್ರಕರಣ ಸುಖಾಂತ್ಯಗೊಳಿಸುವಲ್ಲಿ ಸಹಕಾರಿಯಾಯಿತು. ಪೊಲೀಸ್ ಇಲಾಖೆಯ ನಿದ್ದೆಗೆಡಿಸಿದ್ದ ಇಡೀ ಪ್ರಕರಣವನ್ನು ಎಂಟು ತನಿಖಾ ತಂಡಗಳನ್ನು ರಚಿಸುವುದರೊಂದಿಗೆ ಅತ್ಯಂತ ಕರಾರುವಕ್ಕಾಗಿ ನಿಭಾಯಿಸಿ ಸರ್ವರಿಂದಲೂ ಸೈ ಎನಿಸಿಕೊಂಡಿರುವುದು ಶ್ಲಾಘನೀಯವಾಗಿದೆ. ಜಗ ಮೆಚ್ಚುವ ಕಾರ್ಯಗೈದ ಎಸ್‌ಪಿ ಅವರ ಸರಳ ಸ್ವಭಾವ, ಮೃದು ಮಾತು, ನಗು ಮೊಗ, ದಕ್ಷ ಕ್ರೀಯಾಶೀಲತೆ, ವೃತ್ತಿ ಗಾಂಭೀರ್ಯ ಅವರ ಕಾರ್ಯಕ್ಷಮತೆಗೆ ಹಿಡಿದ ಕೈಗನ್ನಡಿಯಾಗಿದೆ. ಪೊಲೀಸ್ ಇಲಾಖೆಯ ರೋಲ್ ಮಾಡೆಲ್ ಆಗಿರುವ ಎಸ್‌ಪಿ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ದೇಹವನ್ನು ನಾಶ ಮಾಡುವ ಆಹಾರ, ಮನಸ್ಸನ್ನು ಕೆಡಿಸುವ ಆಲೋಚನೆ, ಮನಸ್ಥಿತಿಯನ್ನೇ ನಾಶ ಮಾಡುವ ಜನರಿಂದ ವಿದ್ಯಾರ್ಥಿಗಳು ದೂರವಿರಬೇಕು ಎಂದು ವಿಜಯಪುರದ ಬಾಲಕರ ಪದವಿಪೂರ್ವ ಕಾಲೇಜಿನ ಪ್ರೊ; ಎಸ್.ಜಿ. ಕುಂಬಾರ ಹೇಳಿದರು.ಕೂಡಗಿ ಸರಕಾರಿ ಕಾಲೇಜಿನಲ್ಲಿ ಏರ್ಪಡಿಸಿದ 2025- 26 ನೇ ಸಾಲಿನ ಶೈಕ್ಷಣಿಕ ವರ್ಷದ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳ, ಭಾರತ ಸೇವಾದಳ ರೋವ್ಹರ್ ರೆಂಜರ್ ಘಟಕ, ಮತದಾರರ ಸಾಕ್ಷರತಾ ಸಂಘ, ಕಾಲೇಜು ಸಂಸತ್ತು ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.ಪ್ರಾಸ್ಥಾವಿಕ ಮಾತುಗಳನ್ನಾಡಿದ ಪ್ರೊ; ಬಸವರಾಜ ಜಾಲವಾದಿ ಅವಕಾಶಗಳು ಮುಷ್ಠಿಯಲ್ಲಿಯ ನೀರಿದ್ದಂತೆ ಅದು ಸದಾ ಕಾಲ ಇರುವುದಿಲ್ಲ ಇದ್ದಾಗ ವಿದ್ಯಾರ್ಥಿಗಳು ಅದನ್ನು ಪಡೆದುಕೊಳ್ಳುವತ್ತ ಗಮನ ಹರಿಸಬೇಕು ವ್ಯಕ್ತಿತ್ವ ಬೆಳೆಸಿಕೊಳ್ಳಲು ಪಠ್ಯದಂತೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಲು ಇಂಥ ಕಾರ್ಯಕ್ರಮಗಳು ಅವಶ್ಯಕ ಎಂದು ನುಡಿದರು.ಅಧ್ಯಕ್ಷೀಯ ನುಡಿಗಳನ್ನು ಪ್ರಾಚಾರ್ಯ ಕೆ.ಜಿ. ಲಮಾಣಿ, ಪ್ರೊ;ಶಾಂತಾಬಾಯಿ ಕಾಮನಕೇರಿ, ಪ್ರೊ;ವ್ಹಿ.ಜಿ. ಕಿವುಡಜಾಡರ್ ಮಾತನಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಶಾಂತಾಬಾಯಿ ಕಾಮನಕೇರಿ ಇವರನ್ನು ಸನ್ಮಾನಿಸಲಾಯಿತು.ವೇದಿಕೆ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ…

Read More

ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಗಳ ಶಂಕುಸ್ಥಾಪನೆ & ಉದ್ಘಾಟನೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.4157 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, 401 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ ಮಾಡಿದ್ದೇನೆ. ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ. ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರದ ಸಾಧನೆ ಮತ್ತು ಬಿಜೆಪಿ…

Read More

ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಗಳ ಶಂಕುಸ್ಥಾಪನೆ & ಉದ್ಘಾಟನೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.4157 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, 401 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ ಮಾಡಿದ್ದೇನೆ. ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ. ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರದ ಸಾಧನೆ ಮತ್ತು ಬಿಜೆಪಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ರಾಜ್ಯದಲ್ಲಿ ಜಾತ್ಯಾತೀತ ಜನತಾದಳವನ್ನು ತಳಮಟ್ಟದಿಂದ ಬಲಪಡಿಸಿ ಮತ್ತೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಜನರೊಂದಿಗೆ ಜನತಾದಳ ಅಭಿಯಾನವನ್ನು ಆರಂಭಿಸಿರುವ ಪಕ್ಷದ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ಸೇರಿದಂತೆ ಪಕ್ಷದ ರಾಜ್ಯ,ಜಿಲ್ಲಾ ಮುಖಂಡರು ಸೇರಿದಂತೆ ಅನೇಕರು ಜು. ೧೫ ರಂದು ಹೂವಿನಹಿಪ್ಪರಗಿಯ ಎಂ.ಜಿ.ಕೋರಿ ಮತ್ತು ಡಾ.ಬಿ.ಜಿ.ಬ್ಯಾಕೋಡ ಪಪೂ ವಿದ್ಯಾಲಯದ ಆವರಣದಲ್ಲಿ ಮಧ್ಯಾನ್ಹ ೩ ಗಂಟೆಗೆ ಹಮ್ಮಿಕೊಂಡಿರುವ ಜನರೊಂದಿಗೆ ಜನತಾದಳ ಹಾಗೂ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಹೇಳಿದರು.ತಾಲೂಕಿನ ಕುದರಿಸಾಲವಾಡಗಿಯ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸುವರು. ಇವರೊಂದಿಗೆ ಮಾಜಿ ಸಚಿವರಾದ ಆಲಗೊಂಡ ಹನಮಂತಪ್ಪ, ವೆಂಕಟರಾವ ನಾಡಗೌಡ, ವೆಂಕಟ್ಟಪ್ಪ ನಾಯಕ, ದೇವದುರ್ಗ ಶಾಸಕಿ ಕರೆಮ್ಮ ನಾಯಕ, ಮುಖಂಡರಾದ ಅಪ್ಪುಗೌಡ ಪಾಟೀಲ, ಹನಮಂತಪ್ಪ ಮಾವಿನಮರದ, ಬಿ.ಡಿ.ಪಾಟೀಲ, ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಸೇರಿದಂತೆ ಅನೇಕರು ಆಗಮಿಸುತ್ತಾರೆ. ಮುಂಬರುವ ದಿನಗಳಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಸವ ಭವನದಲ್ಲಿ ಜು. ೧೬ ರಂದು ಮಧ್ಯಾನ್ಹ ೩ ಗಂಟೆಗೆ ಹಮ್ಮಿಕೊಂಡಿರುವ ಜನರಿಂದ ಜನರಿಗಾಗಿ ಜನರಿಗೋಸ್ಕರ ಜೆಡಿಎಸ್ ಪಕ್ಷ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷದ ಯುವ ಮೋರ್ಚಾದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ಆಗಮಿಸುತ್ತಾರೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ, ಜೆಡಿಎಸ್ ಪಕ್ಷದ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟನೆ ಮಾಡುವ ದೃಷ್ಟಿಕೋನವಿಟ್ಟುಕೊಂಡು ರಾಜ್ಯಾದ್ಯಂತ ಜನರಿಂದ ಜನರಿಗಾಗಿ ಜನರಿಗೋಸ್ಕರ ಜೆಡಿಎಸ್ ಪಕ್ಷವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ಪ್ರಥಮ ಬಾರಿಗೆ ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಗೆ ನಿಖಿಲ್ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ. ತಾಲೂಕಿನ ಮನಗೂಳಿ ಪಟ್ಟಣದಿಂದ ಬೃಹತ್ ಸೈಕಲ್ ಮೋಟಾರ್ ರ್ಯಾಲಿಯೊಂದಿಗೆ ನಿಖಿಲ್ಕುಮಾರಸ್ವಾಮಿ ಬಸವನಬಾಗೇವಾಡಿ ಪಟ್ಟಣಕ್ಕೆ ಸ್ವಾಗತಿಸಿಕೊಳ್ಳಲಾಗುವದು. ಸೈಕಲ್ ಮೋಟಾರ್ ರ್ಯಾಲಿ ಡಾ.ಬಿ.ಆರ್.ಅಂಬೇಡ್ಕರ ವೃತ್ತದವರೆಗೂ ತೆರಳಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ನಿಖಿಲ್ಕುಮಾರಸ್ವಾಮಿ ಮಾಲಾರ್ಪಣೆ ಮಾಡುವರು. ನಂತರ ಬಾಬುಸುಹಾನಿ ದರ್ಗಾಕ್ಕೆ ಭೇಟಿ ನೀಡಿ ಮಾಲಾರ್ಪಣೆ, ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರಕಾರದಲ್ಲಿ ಹಣವಿಲ್ಲವೆಂದು ಟೀಕೆ ಟಿಪ್ಪಣಿ ಮಾಡುವವರಿಗೆ ೫೦೦ಕೋಟಿ ಮಹಿಳೆಯರ ಉಚಿತವಾಗಿ ಪ್ರಯಾಣಿಸಿರುವುದೇ ಸಾಕ್ಷಿಯಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಸರಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ ೫೦೦ಕೋಟಿ ಗಡಿಯನ್ನು ದಾಟಿರುವ ಹಿನ್ನೆಲೆಯಲ್ಲಿ ಶಾಸಕ ಅಶೋಕ ಮನಗೂಳಿ ಮಹಿಳೆಯರಿಗೆ ಸಿಹಿ ಹಂಚಿ ಸಂಭ್ರಮಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ೧೩ಕೋಟಿಗೂ ಅಧಿಕ ಮಹಿಳೆಯರು ಇಲ್ಲಿಯವರೆಗೂ ಪ್ರಯಾಣ ಮಾಡಿದ್ದಾರೆ. ಹಣವಿಲ್ಲ, ಅಭಿವೃದ್ಧಿ ಕುಂಠಿತಗೊಂಡಿದೆ ಎನ್ನುವವರಿಗೆ ಇದು ಉತ್ತರ. ನುಡಿದಂತೆ ನಡೆದ ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರತಿಕ್ಷಣವೂ, ಪ್ರತಿದಿನವೂ ಬಡವರ, ಹಿಂದುಳಿದವರ, ನಿರ್ಗತಿಕರ ಬಗ್ಗೆ ಸದಾ ಕಾಳಜಿ ಉಳ್ಳಂತಹ ಸರ್ಕಾರ ನಮ್ಮದಾಗಿದೆ ಎಂದರು.ಈ ವೇಳೆ ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಶ್ರೀಶೈಲ ಕವಲಗಿ, ಬ್ಲಾಕ್ ಕಾಂಗ್ರೆಸ್ ಸಮಿತಿ ತಾಲೂಕಾಧ್ಯಕ್ಷ ಸುರೇಶ ಪೂಜಾರಿ, ಸದಸ್ಯರಾದ ಮೋಷನ ಬೀಳಗಿ, ಪರಶುರಾಮ ಉಪ್ಪಾರ, ಶಿವಾನಂದ ಹಡಪದ, ರಜತ ತಾಂಬೆ, ಸುನಂದಾ ಯಂಪುರೆ, ಅಂಬರೀಶ ಚೌಗಲೆ, ಜಿಲ್ಲಾ ಕೆಡಿಪಿ ಸದಸ್ಯ…

Read More

ಸಿಂದಗಿಯಲ್ಲಿ ವಿದ್ಯಾಚೇತನ ಪ್ರಕಾಶನದಿಂದ ರಾಜ್ಯ ಮಟ್ಟದ ಬಾಲ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಪ್ರಧಾನ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ರಚಿತವಾದ ಸಾಹಿತ್ಯವೇ ನಿಜವಾದ ಮಕ್ಕಳ ಸಾಹಿತ್ಯ. ಈ ನಿಟ್ಟಿನಲ್ಲಿ ಸಿಂದಗಿ ತಾಲೂಕು ಮಕ್ಕಳ ಸಾಹಿತ್ಯ ಕೃಷಿಯಲ್ಲಿ ಸಾಕಷ್ಟು ಕೆಲಸ ಮಾಡಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಾರಂಗಮಠದ ಆವರಣದಲ್ಲಿ ರವಿವಾರ ಹಮ್ಮಿಕೊಂಡ ವಿದ್ಯಾಚೇತನ ಪ್ರಕಾಶನ ಸಿಂದಗಿ ಅವರು ಕೊಡಮಾಡುವ ರಾಜ್ಯ ಮಟ್ಟದ ಬಾಲ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮಕ್ಕಳ ಸಾಹಿತಿ ಹ.ಮ. ಪೂಜಾರ ಅವರು ತಮ್ಮ ೮೫ನೇ ಇಳಿ ವಯಸ್ಸಿನಲ್ಲಿಯೂ ತಮ್ಮ ಪಿಂಚಣಿ ಹಣದಲ್ಲಿ ರಾಜ್ಯ ಮಟ್ಟದ ಬಾಲ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಪ್ರಧಾನ ಮಾಡುವ ಮೂಲಕ ಮಕ್ಕಳ ಸಾಹಿತ್ಯ ಪುರಸ್ಕಾರಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು.ಹ.ಮ. ಪೂಜಾರ ಅವರ ಆಶೆಯಂತೆ ಇದೇ ಡಿಶೆಂಬರ ಒಳಗಾಗಿ ಪಟ್ಟಣದಲ್ಲಿ ಬಾಲಭವನ ನಿರ್ಮಾಣ ಕಾಮಗಾರಿಗೆ…

Read More

ಹಿರಿಹೊಳಿ ತಟದಲ್ಲಿ ಜಿಲ್ಲಾ ಮಟ್ಟದ ಹೆಜ್ಜೆಮೇಳ ಸಂಬ್ರಮ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ. ಜಾನಪದ ಅನುಭವ ಜನ್ಯವಾದುದು. ಮಾತೃ ವಾತ್ಸಲ್ಯ ಮತ್ತು ವಿಶ್ವಭ್ರಾತೃತ್ವದಲ್ಲಿ ಬೆಳೆದು ನಿಂತಿದೆ. ಸಾರ್ವಕಾಲಿಕ ಮೌಲ್ಯಗಳನ್ನು ಜಗತ್ತಿಗೆ ಬಿತ್ತರಿಸಿದ ಭಾರತದ ಜಾನಪದ ಹಳ್ಳಿಗಳಲ್ಲಿ ಇಂದಿಗೂ ಜೀವಂತವಾಗಿದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಅಭಿಪ್ರಾಯಪಟ್ಟರು.ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಘಟಕ ಮತ್ತು ಕೊಲ್ಹಾರ ತಾಲೂಕು ಘಟಕ ಹಾಗೂ ಬಳೂತಿಯ ಭಾವಿ ಬಸವೇಶ್ವರ ಹೆಜ್ಜೆ ಮೇಳದ ಸಹಯೋಗದಲ್ಲಿ ಕೊಲ್ಹಾರ ತಾಲೂಕಿನ ಬಳೂತಿಯ ಬೀಬೀ ಫಾತಿಮಾಳ ಹತ್ತು ದಿನದ ಜಾರತ ಉತ್ಸವ ಪ್ರಯುಕ್ತ ಹಮ್ಮಿಕೊಂಡ ” ಜಿಲ್ಲಾ ಮಟ್ಟದ ರಿವಾಯತ ಮತ್ತು ಹೆಜ್ಜೆಮೇಳ ಉತ್ಸವ ” ಉದ್ಘಾಟಿಸಿ ಮಾತನಾಡುತ್ತ, ಬದಲಾದ ಕಾಲಮಾನದಲ್ಲಿ ಭಾರತದ ಜಾನಪದ ಸಂಸ್ಕೃತಿ ಮೂಲ ರೂಪ ಕಳೆದುಕೊಳ್ಳುತ್ತಿದೆ.ಜಾನಪದ ಸಂಸ್ಕೃತಿ ಅಳಿದರೆ ದೇಶದ ಮೌಲ್ಯ ಕಡಿಮೆಯಾಗುತ್ತಿದೆ. ಬಳೂತಿ ಗ್ರಾಮದಲ್ಲಿ ಭಾವೈಕ್ಯ ಬೆಸೆಯುವ ಈ ರಿವಾಯತ ಉತ್ಸವ ನಾಡಿಗೆ ಮಾದರಿಯಾಗಿದೆ ಎಂದರು. ಮುಂದೊಂದು ದಿನ ಬಳೂತಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯ, ಕ್ರೀಡಾ ನಿರ್ದೇಶನಾಲಯ ಹಾಗೂ ವಸತಿ ನಿಲಯಗಳ ಸಹಯೋಗದಲ್ಲಿ ‘ವಾರ್ಷಿಕ ದಿನಾಚರಣೆ-೨೦೨೫’ ಕಾರ್ಯಕ್ರಮವನ್ನು ಇದೇ ದಿ. ೧೬ ರಂದು ಬೆಳಗ್ಗೆ ೧೦:೩೦ ಗಂಟೆಗೆ ವಿವಿಯ ನೂತನ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಹಿರಿಯ ಐ.ಎ.ಎಸ್ ಅಧಿಕಾರಿ ಮತ್ತು ಮಹಿಳಾ ವಿವಿಯ ಸಂಸ್ಥಾಪಕ ಮಾಜಿ ವಿಶೇಷಾಧಿಕಾರಿ ಡಾ.ಎಸ್.ಎಂ.ಜಾಮದಾರ, ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಡಾ.ಶುಭಾ ಮರವಂತೆ ಹಾಗೂ ಉಪ ಪೊಲೀಸ್ ವರಿಷ್ಠಾಧಿಕಾರಿ ಬಸವರಾಜ ಎಫ್. ಯಲಿಗಾರ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಸಿಂಡಿಕೇಟ್ ಸದಸ್ಯೆ ಡಾ.ರಿಹಾನಾ ಜಬೀನ್, ಸಿಂಡಿಕೇಟ್ ಸದಸ್ಯರು, ವಿದ್ಯಾ ವಿಷಯಕ ಪರಿಷತ್ ಸದಸ್ಯರು, ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರು, ಸಂಯೋಜಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿರಲಿದ್ದಾರೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More