Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಗಿ ಹೇಳಿದರು.ನಗರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಲಯನ್ಸ್ ಪುಟ್ಬಾಲ್ ಕ್ಲಬ್ ವತಿಯಿಂದ ಹಮ್ಮಿಕೊಂಡ 21 ವರ್ಷ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಪಂದ್ಯಾವಳಿ ಡಾ.ಬಿ.ಆರ್. ಅಂಬೇಡ್ಕರ್ ಪುಟ್ಬಾಲ್ ಪಂದ್ಯಾಳಿ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ದಿನ ನಿತ್ಯದ ಜಂಜಾಟದಲ್ಲಿ ನಾವು ಮಾನಸಿಕ ದೈಹಿಕವಾಗಿ ಕುಗ್ಗುತ್ತಿದ್ದೇವೆ. ಅವುಗಳನ್ನು ನಿವಾಸಿಕೊಳ್ಳಲು ನಾವು ಪ್ರತಿಯೊಬ್ಬರು ಕ್ರೀಡೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿಕೊಂಡರೆ ಮಾನಸಿಕ, ದೈಹಿಕವಾಗಿ ನಿರಾಳರಾಗುತ್ತೇವೆ. ಅದರಂತೆ ಸದೃಢವಾದ ಆರೋಗ್ಯ ಹೊಂದಲು ಕ್ರೀಡೆಗಳು ಬಹಳಷ್ಟು ಉಪಕಾರಿಯಾಗಿವೆ ಎಂದರು.ಈ ಸಂದರ್ಭದಲ್ಲಿ ಸಮಾಜ ಸೇವಕ ಫಯಾಜ ಕಲಾದಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುಕವರು ಮೊಬೈಲ್, ಗೆಜೆಟ್, ಕಂಪ್ಯೂಟರ್, ಲ್ಯಾಪಟಾಪ್‌ಗಳಿಗೆ ಅಂಟುಕೊಂಡಿದ್ದಾರೆ. ಅವುಗಳಿಂದ ಹೊರ ಬರಬೇಕು. ಮೊಬೈಲ್ ನಲ್ಲಿರುವ ಆ್ಯಪ್‌ಗಳ ಜಾಲಕ್ಕೆ ಸಿಲುಕಿಕೊಂಡು ಬದುಕನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ.…
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ಬೆಳಗುಂಪಿ ಪರಿವಾರದಿಂದ ಲಕ್ಷ್ಮಿ ಮೂರ್ತಿ ಸ್ಥಾಪನೆ ಹಾಗೂ ಅಗ್ರೋ ಕಾಮಗಾರಿಗೆ ಬಡದಾಳ ಮಠದ ಡಾ. ಚನ್ನಮಲ್ಲ ಶಿವಯೋಗಿಗಳು, ಚಿನ್ಮಯಗಿರಿಯ ವೀರ ಮಹಾಂತ ಶಿವಾಚಾರ್ಯರು ಗುದ್ದಲಿ ಪೂಜೆ ನೇರವೇರಿಸಿದರು.ಈ ಸಂದರ್ಭದಲ್ಲಿ ಜಗನ್ನಾಥ ಬೆಳಗುಂಪಿ, ರೇಹಮಾನ್ ಪಟೇಲ್, ಶಾಂತಪ್ಪ ಸಾಹು, ಶಂಕರ ರೂಮಾಗೊಳ, ಶಿವು ಬೆಳಗುಂಪಿ, ಶರಣಬಸು ಮೇತ್ರಿ, ಯಶ್ವಂತ ಪಟ್ಟೇದಾರ, ಕಲ್ಲಪ್ಪ ಪಟ್ಟೇದಾರ, ಲಕ್ಷ್ಮಣಗೌಡ ಪಾಟೀಲ್, ಕುಪೇಂದ್ರ ಪೂಜಾರಿ, ನಾಗರಾಜ ಮೇಳಕುಂದಿ, ಮರಳಸಿದ್ದ ಒಳಕಟ್ಟಿ, ಅನೀಲ, ಶರಣು ಗುಜ್ಜಾ ಇದ್ದರು.
ಹಿರೇಪಡಸಲಗಿ ಶಾಲೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಬೇಟಿ- ಶೈಕ್ಷಣಿಕ ಚಟುವಟಿಕೆ ಪರಿಶೀಲನೆ | ಬದ್ದತೆಯಿಂದ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಲು ಸಲಹೆ ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಇಂದಿನ ಯುವಜನತೆಯಲ್ಲಿ ಕಲಿಕಾಸಕ್ತಿ ಕ್ಷೀಣಿಸುತ್ತಿದೆ.ಮೊಬೈಲ್ ಹಾವಳಿಯ ಸೆಳೆತದಲ್ಲಿ ಸಿಲುಕಿರುವ ಬಹುತೇಕ ಮಕ್ಕಳಿಂದ ಅದ್ಯಯನ ಪ್ರವೃತ್ತಿಗೆ ಇಂದು ನಿರಾಶಾದಾಯಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಜಾಲತಾಣದ ಅನಿಯಂತ್ರಿತ ಬಳಕೆ ವ್ಯಾಮೋಹದಿಂದ ಶೈಕ್ಷಣಿಕ ವ್ಯವಸ್ಥೆಗೆ ಮಾರಕವಾಗುತ್ತಲ್ಲಿದೆ. ಇದರಿಂದ ಶಾಲಾ ಮಕ್ಕಳನ್ನು ಉಳಿಸಿ ಓದು,ಪಠ್ಯಾಸಕ್ತಿ ಕಡೆಗೆ ಕೊಂಡೊಯ್ದು ಬೆಳೆಸಬೇಕಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕ ಸಮೂಹ ಕಾಳಜಿಯಿಂದ ಈ ವಿಷಕಾರಿ ವಾತಾವರಣದಲ್ಲಿ ದಾರಿ ತಪ್ಪುತ್ತಿರುವ ಭವಿಷ್ಯತ್ತಿನ ಪ್ರಜೆಗಳ ಮನವೊಲಿಸಿ ಶಿಕ್ಷಣದ ಅಭಿರುಚಿ ಒಲವು ಮೂಡಿಸಲು ಮುಂದಾಗಬೇಕಾಗಿರುವುದು ತೀರಾ ಅಗತ್ಯವಾಗಿದೆ ಎಂದು ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಅಭಿಪ್ರಾಯಿಸಿದರು.ಸಮೀಪದ ಹಿರೇಪಡಸಲಗಿ ಸರಕಾರಿ ಪ್ರೌಢಶಾಲೆಗೆ ಅನಿರೀಕ್ಷಿತ ಬೇಟಿ ನೀಡಿದ ಅವರು ಶಾಲಾ ಶೈಕ್ಷಣಿಕ ವಾತಾವರಣ ಹಾಗೂ ಎಸ್ಸೆಸ್ಸೆಲ್ಸಿ ಮಕ್ಕಳ ಅಭ್ಯಾಸದ ಗುಣಮಟ್ಟ ಪರಿಶೀಲಿಸಿದರು.ಈ ವೇಳೆ ನಡೆಸಿದ ಶಿಕ್ಷಕ ಸಭೆಯಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಎಸ್ಸೆಸ್ಸೆಲ್ಸಿ ಮಕ್ಕಳ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣೆ ಕಾಯ್ದೆಯನ್ನು ರೂಪಿಸಿ(ರಕ್ಷಣೆ ಹಾಗೂ ದೌರ್ಜನ್ಯ ತಡೆ) ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕುರಿಗಾಹಿಗಳು ಹಾಗೂ ಮುಖಂಡರು ನಗರದ ದೇಸಾಯಿ ವೃತ್ತದಿಂದ ಕುರಿಗಳ ಜೊತೆಗೆ ತಾಲ್ಲೂಕು ಆಡಳಿತ ಸೌಧದವರೆಗೆ ಪ್ರತಿಭಟಣೆ ಮೂಲಕ ಹೋಗಿ ತಹಶೀಲ್ದಾರ ಸದಾಶಿವ ಮಕ್ಕೋಜಿ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.ಮುಖಂಡ ಅರ್ಜುನ ದಳವಾಯಿ ಮಾತನಾಡಿ, ಕುರಿಗಾರರ ಮೇಲೆ ನಿರಂತವಾಗಿ ನಡೆಯುತ್ತಿರುವ ದೌರ್ಜನ್ಯಗಳು, ಹಲ್ಲೆ, ಜೀವ ಬೇದರಿಕೆ, ಕೊಲೆ, ಅತ್ಯಾಚಾರ, ಕುರಿ ಕಳ್ಳತನ, ಅರಣ್ಯಾಧಿಕಾರಿಗಳ ಲಂಚದ ಬೇಡಿಕೆ ಅಧಿಕ ಪ್ರಮಾಣದಲ್ಲಿ ನಡೆಯುತ್ತಿವೆ. ಸರ್ಕಾರವು ಎಲ್ಲ ವರ್ಗದ ಮಹಿಳೆಯರ ಪರ, ಮಕ್ಕಳ ಪರ, ಶೋಷಿತ ಸಮುದಾಯಗಳ ಪರ ಹಾಗೂ ವಿವಿಧ ವೃತ್ತಿಪರರ ಹಿತರಕ್ಷಣೆಗೆ ವಿಶೇಷ ಕಾಯ್ದೆಗಳನ್ನು ಜಾರಿ ಮಾಡಿ ಅವರ ರಕ್ಷಣೆ ಮಾಡಬೇಕು ಎಂದರು.ಹೂವಪ್ಪ ಉಷಾಕರ ಮಾತನಾಡಿ, ಗುಡ್ಡುಗಾಡು ಪ್ರದೇಶಗಳಲ್ಲಿ ಕುರಿ ಮೇಯಿಸಲು ಹೋದಾಗ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಹಾಗೂ ಸಿಬ್ಬಂದಿಗಳಿಂದ ನಿರಂತರ ಕಿರುಕುಳ, ದೌರ್ಜನ್ಯಗಳು ನಡೆಯುತ್ತಿವೆ, ಕುರಿಗಾರಿಕೆ ಮೂಲಕ…
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಕಟಬು ಕಟಬರ ಸಮಾಜ ಆಗ್ರಹ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಕಟಬು ಕಟಬರ ಜನಾಂಗದ ಕು.ಅರುಣಾ ಶಿಳ್ಳಿಕ್ಯಾತರ(೧೪ವರ್ಷದ) ಜುಲೈ ೦೯ರಂದು ಬೆಂಗಳೂರಿನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಈ ಕೊಲೆಯನ್ನು ಖಂಡಿಸಿ ಚಡಚಣ ತಹಶೀಲ್ದಾರ ಸಂಜಯ ಇಂಗಳೆ ಅವರಿಗೆ ಮನವಿ ಕೊಡುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಕಟಬು ಕಟಬರ ಸಮಾಜದ ವಿಜಯಪುರ ಜಿಲ್ಲೆಯ ಉಪಾಧ್ಯಕ್ಷ ಮಹೇಶ್ ಶಿಂಧೆ ಮಾತನಾಡಿ, ಕು.ಅರುಣಾ ಶ್ರೀಕ್ಯಾತರ್ ತಂದೆ ನಾಗಪ್ಪ ಶಿಳ್ಳಿಕ್ಯಾತರ ಹೊಟ್ಟೆಯ ಉಪಜೀವನಕ್ಕಾಗಿ ಬೆಂಗಳೂರು ಪಟ್ಟಣಕ್ಕೆ ಕೂಲಿ ಕೆಲಸಕ್ಕೆ ಹೋದವರು. ಕೂಲಿ ಕೆಲಸ ಮಾಡಲು ತಂದೆ-ತಾಯಿಯು ಹೊರಗಡೆ ಹೋದಾಗ ದುಷ್ಕರ್ಮಿಗಳು ೧೪ ವರ್ಷದ ಅರುಣಾ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದು ಪರಾರಿಯಾಗಿರುವ ಕೃತ್ಯ ಖಂಡನೀಯ ಎಂದು ಹೇಳಿದರು.ಕಟಬು ಕಟಬರ್ ಚಡಚಣ ತಾಲೂಕ ಅಧ್ಯಕ್ಷ ದತ್ತು ಶಿಂಧೆ ಮಾತನಾಡಿ, ನಿರ್ದಾಕ್ಷಿಣ್ಯವಾಗಿ ದಯತೋರದೆ ಇಂತಹ ಕೃತ್ಯವೆಸಗಿದವರು ಯಾರೆ ಇರಲಿ ಅಂತಹ ವ್ಯಕ್ತಿಗಳಿಗೆ ಗಲ್ಲು…
ಉದಯರಶ್ಮಿ ದಿನಪತ್ರಿಕೆ ಚಡಚಣ: ಸಾಧನೆ ಮಾಡಬೇಕೆಂದಾಗ ಅನೇಕ ಸಮಸ್ಯೆಗಳು ಎದುರಾಗುತ್ತವೆ ಆದರೆ ನಾವು ಅವುಗಳನ್ನು ಮೀರಿ ಬೆಳೆದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಇಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರವಿ ಅರಳಿ ಹೇಳಿದರು.ಚಡಚಣದ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗ, ಎನ್‌ಎಸ್‌ಎಸ್,ರೋವರ ಮತ್ತು ರೇಂಜರ, ರೆಡ್ ಕ್ರಾಸ್ ಘಟಕಗಳ ಉಧ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಜೀವನದಲ್ಲಿ ಹೆಜ್ಜೆ ಹೆಜ್ಜೆಗೂ ಸಮಸ್ಯೆಗಳು ಬರುತ್ತವೆ. ಸಾಧನೆ ಮಾಡುವವನಿಗೆ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಶಕ್ತಿ ಇರಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಎಸ್.ಎಸ್.ಚೋರಗಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷ ಸಂಗಮೇಶ ಅವಜಿ, ಗೌರವ ಕಾರ್ಯದರ್ಶಿ ವಿ.ಎಸ್.ಗಿಡವೀರ, ಅಶೋಕ ಕುಲಕರ್ಣಿ ಆಗಮಿಸಿದ್ದರು.ಪ್ರಾಚಾರ್ಯ ಮನೋಜ ಕಟಗೇರಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಶಶಿಧರ ಕುಸೂರ, ಎನ್.ಎಸ್.ಎಸ್. ಘಟಕದ ಮುಖ್ಯಸ್ಥ ಶ್ರೀಶೈಲ ಕಾಮಗೊಂಡ, ರೆಡ್…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ನಾಡಿನ ಬಹುದೊಡ್ಡ ಪರಂಪರೆಯನ್ನು ಎತ್ತಿ ಹಿಡಿಯುವ ಮೂಲಕ ಬಯಸಿ ಬಂದ ಭಕ್ತರ ಭವಬಂಧನ ಕಳೆದು ಸುಜ್ಞಾನದಡೆಗೆ ಕೊಂಡೊಯ್ಯುವ ಕೆಲಸ ಮಠ ಮಾನ್ಯಗಳು ಮಾಡುತ್ತಿವೆ ಎಂದು ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು.ಪಟ್ಟಣದ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನ ಹಾಗೂ ಹಿರೇಮಠ ಸಂಸ್ಥಾನದಲ್ಲಿ ಆಶ್ರಯದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ “ಗುರುಪೂರ್ಣಿಮೆ” ಮತ್ತು ಶಿವಾನುಭವ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಸಿಕ ಸತ್ಸಂಗದ ಜೊತೆ ಜೊತೆಗೆ ಸಾಹಿತ್ಯ, ಸಂಗೀತ, ಕಲೆ, ಸಾಂಸ್ಕೃತಿಕ, ಕಾರ್ಯಕ್ರಮಗಳನ್ನು ಆಯೋಜಿಸುವ ದೃಢ ಸಂಕಲ್ಪದೊಂದಿಗೆ ಆರಂಭಗೊಂಡ ಶಿವಾನುಭವ ಗೋಷ್ಠಿ ಹತ್ತು ವರ್ಷ ಪೂರೈಸುತ್ತಿರುವುದು ಹೆಮ್ಮೆಯ ವಿಷಯ ಎಂದವರು, ಸದ್ಭಕ್ತರ ಬಾಳಲಿ ಜ್ಞಾನ ದೀವಿಗೆ ಹೊತ್ತಿಸಲು ಹೊಸ ಭಾಷ್ಯ ಬರೆದ ಚನ್ನಬಸವ ಶಿವಾಚಾರ್ಯರ ಕಾರ್ಯ ಅಭಿನಂದನೀಯ ಎಂದರು.ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಚನ್ನಬಸವ ಶಿವಾಚಾರ್ಯರು, ಶಿವಾನುಭವ ಗೋಷ್ಠಿ ಸಾಹಿತ್ಯ ಸಂಗೀತ ಕಾರ್ಯಕ್ರಮ ಮುನ್ನಡೆಸುತ್ತಿರುವ ಮಹಾನ್ ಕಾರ್ಯಕ್ಕೆ ಸದ್ಭಕ್ತರ ಸಹಕಾರವಿದ್ದು, ಶಿವಾನುಭವ…
ಯಡ್ರಾಮಿಯಲ್ಲಿ ಲಿಂ.ಸಿದ್ಧರಾಮ ಮಹಾಸ್ವಾಮಿಗಳ 4ನೇ ಪುಣ್ಯಾರಾಧನೆ ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ಪಟ್ಟಣದ ಶ್ರೀ ಮುರಘೇಂದ್ರ ಶಿವಯೋಗಿ ವಿರಕ್ತಮಠದ ಲಿಂ.ಪೂಜ್ಯ ಸಿದ್ಧರಾಮ ಮಹಾಸ್ವಾಮಿಗಳ 4ನೇ ಪುಣ್ಯಾರಾಧನೆ ಕಾರ್ಯಕ್ರಮ ರವಿವಾರ ಜು.13ರಂದು ಜರುಗಲಿದೆ ಎಂದು ಶ್ರೀಮಠದ ಸದ್ಭಕ್ತ ಮಂಡಳಿ ತಿಳಿಸಿದೆ.ಮಠದ ಪ್ರಸ್ತುತ ಪೀಠಾಧಿಪತಿ ಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮಿಗಳ ನೇತೃತ್ವದಲ್ಲಿ ರವಿವಾರ ಬೆಳಿಗ್ಗೆ ಲಿಂ. ಸಿದ್ಧರಾಮ ಮಹಾಸ್ವಾಮಿಗಳ ಕತೃ ಗದ್ದುಗೆಗೆ ಮಹಾ ರುದ್ರಾಭಿಷೇಕ , ಬಿಲ್ವಾರ್ಚನೆ ಪೂಜಾ ಕಾರ್ಯಕ್ರಮ ನೆರವೇರಲಿದೆ. 10 ಗಂಟೆಗೆ ಉಚಿತ ಆರೋಗ್ಯ, ನೇತ್ರ ತಪಾಸಣೆ, ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ಮಧುಮೇಹ, ರಕ್ತದೊತ್ತಡ ಹಾಗೂ ರಕ್ತದಾನ ಶಿಬಿರ ಶ್ರೀಮಠದ ಆವರಣದಲ್ಲಿ ನಡೆಯಲಿದೆ.ಶ್ರೀ ಮುರಘೇಂದ್ರ ಶಿವಯೋಗಿ ಫೌಂಡೇಶನ್ ಹಾಗೂ ಜೇವರ್ಗಿ, ಯಡ್ರಾಮಿ ತಾಲೂಕು ಆರೋಗ್ಯ ಸಮುದಾಯ ಕೇಂದ್ರ, ತಾಲೂಕು ಖಾಸಗಿ ವೈದ್ಯರ ಸಂಘ, ಕಲಬುರಗಿ ಬಿಲ್ವ ಆಸ್ಪತ್ರೆ, ತಾಲೂಕು ಮೆಡಿಕಲ್ ಅಸೋಸಿಯೇಶನ್, ಅನುಗ್ರಹ ಕಣ್ಣಿನ ಆಸ್ಪತ್ರೆ, ತಾಲೂಕು ವಿವಿಧ ಸಂಘಟನೆಗಳು ಹಾಗೂ ಸಗರಾದ್ರಿ ಸಾಂಸ್ಕೃತಿಕ ಸಂಗಮ ಟ್ರಸ್ಟ್ ಸಹಯೋಗದಲ್ಲಿ ಆರೋಗ್ಯ…
ಕಲಬುರಗಿ ಎಪಿಎಂಸಿ ಕೃಷಿ ಉತ್ಪನ್ನೇತರ ಅಂಗಡಿ ತೆರವಿಗೆ ಸಚಿವರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟಿನ ಹೊರತಾದ ಅಂಗಡಿಗಳ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನಿಯೋಗ ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.ಶುಕ್ರವಾರ ಸಚಿವರ ತವರು ಕ್ಷೇತ್ರದ ಬಸವನಬಾಗೇವಾಡಿ ಪಟ್ಟಣದಲ್ಲಿ ಸಂಘಟನೆಯ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ನೇತೃತ್ವದ ನಿಯೋಗದಲ್ಲಿ ಬಂದು ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟು ರಹಿತ ಅಂಗಡಿಗಳೇ ಹೆಚ್ಚಾಗಿವೆ. ಹೀಗಾಗಿ ಕೂಡಲೇ ಕೃಷಿ ಉತ್ಪನ್ನ ವಹಿವಾಟೇತರ ಅಂಗಡಿಗಳನ್ನು ಕೂಡಲೇ ತೆರವು ಮಾಡಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಿತು.ಸದರಿ ಸಮಸ್ಯೆ ಮುಂದಿಟ್ಟುಕೊಂಡು ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಹೋರಾಟ ಮಾಡಿದ್ದೇವೆ. ಇದೀಗ ಕಳೆದ 46 ದಿನಗಳಿಂದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಇಲ್ಲಿನ ಜಲನಗರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಕಳೆದ ೪ ದಿನಗಳಿಂದ ಮಹಾನಗರ ಪಾಲಿಕೆ ಪೌರ ಕಾರ್ಮಿಕರು ನಡೆಸುತ್ತಿರುವ ಮುಷ್ಕರಕ್ಕೆ ಜಿಲ್ಲಾ ಬಿಜೆಪಿ ಘಟಕದಿಂದ ಬೆಂಬಲ ಸೂಚಿಸಿದರು.ಈ ವೇಳೆ ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮಾತನಾಡಿ, ಬಿಜೆಪಿ ಸರ್ಕಾರವಿದ್ದಾಗ ೭ನೇ ವೇತನ ಆಯೋಗ ರಚಿಸಿತ್ತು. ಆದರೆ ೨ ವರ್ಷವಾದರೂ ರಾಜ್ಯ ಸರ್ಕಾರ ಜಾರಿ ಮಾಡಿಲ್ಲ. ಕಳೆದ ೪ ದಿನಗಳಿಂದ ಕೆಲಸ ಬಿಟ್ಟು ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಎದುರು ಧರಣಿ ನಡೆಸುತ್ತಿರುವ ಪೌರ ಕಾರ್ಮಿಕರ ಕಷ್ಟ ಕೇಳಲು ಜಿಲ್ಲೆಯ ಯಾವೊಬ್ಬ ಶಾಸಕರು ಬಂದಿಲ್ಲ. ಆದ್ದರಿಂದ ನಾಳೆಯಿಂದ ಅವರ ಮನೆಯ ಎದುರಿಗೆ ನಿಮ್ಮ ಕಸ ಹಾಕಿ ಆಗ ಅವರಿಗೆ ಬುದ್ದಿ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಂದ್ರ ನಾಯಕ ಮಾತನಾಡಿ, ಪೌರ ಕಾರ್ಮಿಕರ ೬ ಬೇಡಿಕೆಗಳು ಭಿಕ್ಷೆ ಅಲ್ಲ, ಅದು ನಿಮ್ಮ ಹಕ್ಕು. ಅದರಲ್ಲಿ ಹೊಸ…
