Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಾಂಗ್ರೆಸ್ ಶಾಸಕ ರಾಜು ಕಾಗೆ, ಬಿಜೆಪಿ ಶಾಸಕ ಬಸವರಾಜ ಮತ್ತಿಮೋಡ್ ಗೆ ಅವಮಾನ |ಪ್ರಕರಣ ಹಕ್ಕುಬಾಧ್ಯತಾ ಸಮಿತಿಗೆ ವರ್ಗಾಯಿಸಿದ ಸ್ಪೀಕರ್ ಯು.ಟಿ.ಖಾದರ್ ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜು ಕಾಗೆ ಹಾಗೂ ಬಿಜೆಪಿ ಶಾಸಕ ಬಸವರಾಜ ಮತ್ತಿಮೋಡ್ ಅವರಿಗೆ ಹಿರಿಯ ಅಧಿಕಾರಿಗಳಿಂದ ಅಪಮಾನವಾಗಿರುವ ವಿಚಾರವನ್ನು ಹಕ್ಕುಬಾಧ್ಯತಾ ಸಮಿತಿಗೆ ವರ್ಗಾಯಿಸುವುದಾಗಿ ವಿಧಾನಸಭೆ ಸ್ಪೀಕರ್ ಯು. ಟಿ ಖಾದರ್ ಅವರು ಮಂಗಳವಾರ ತಿಳಿಸಿದ್ದಾರೆ.ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ವಿರುದ್ಧ ರಾಜು ಕಾಗೆ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣವರ್ ವಿರುದ್ಧ ಮತ್ತಿಮೋಡ್ ಅವರು ಸಲ್ಲಿಸಿದ್ದ ಹಕ್ಕುಚ್ಯುತಿ ನೋಟಿಸ್ ಅನ್ನು ಉಲ್ಲೇಖಿಸಿದ ಖಾದರ್, ಶಾಸಕರ ಘನತೆಯನ್ನು ಎತ್ತಿಹಿಡಿಯುವ ಅಗತ್ಯವನ್ನು ಒತ್ತಿ ಹೇಳಿದರು.”ಕಾಗೆ ಮತ್ತು ಮತ್ತಿಮೋಡ್ ಅವರಿಗೆ ಏನಾಯಿತು ಎಂಬುದನ್ನು ಅವರು ವಿವರವಾಗಿ ವಿವರಿಸಿದ್ದಾರೆ ಮತ್ತು ಅದನ್ನು ಲಿಖಿತವಾಗಿಯೂ ನೀಡಿದ್ದಾರೆ. ಕಟಾರಿಯಾ ತಮ್ಮನ್ನು ಅವಮಾನಿಸಿದ್ದಾರೆ ಎಂದು ಕಾಗೆ ಆರೋಪಿಸಿದ್ದಾರೆ. ಅಲ್ಲದೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ತಮ್ಮನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಮತ್ತಿಮೋಡ್ ಅವರು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟ ವಿಕಲಚೇತನ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಸವ ಜನ್ಮ ಸ್ಥಳ ಬಸವನಬಾಗೇವಾಡಿಯಿಂದ ರಾಜ್ಯದ ವಿಧಾನಸೌಧದವರೆಗೂ ವಿಕಲಚೇತನರ ಬೈಕ್ ರ್‍ಯಾಲಿ ಮೂಲಕ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಚಳುವಳಿ ಮಂಗಳವಾರ ಆರಂಭಗೊಂಡಿತು.ಬೈಕ್ ರ್‍ಯಾಲಿ ಆರಂಭಿಸುವ ಮುನ್ನ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ದೇವರಿಗೆ ವಿಕಲಚೇತನರು ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುವಂತೆ ಘೋಷಣೆ ಕೂಗಿದರು.ನಂತರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಬೈಕ್ ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಕಲಚೇತನರಿಗೆ ಸರ್ಕಾರ ಎಲ್ಲ ರಂಗಗಳಲ್ಲಿ ಅವಕಾಶ ನೀಡುವಂತಾಗಬೇಕು. ಇದರಿಂದಾಗಿ ಅವರು ಜೀವನ ಸುಗಮವಾಗಿ ಸಾಗಿಸಲು ಸಾಧ್ಯ. ವಿಕಲಚೇತನರ ಬೇಡಿಕೆಗಳು ನ್ಯಾಯಯುತವಾಗಿವೆ. ಇವರ ಬೇಡಿಕೆಗಳನ್ನು ಈಡೇರಿಸಲು ಇಂತಹ ಬಿರು ಬಿಸಿಲಿನಲ್ಲಿಯೂ ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಿಂದ ರಾಜ್ಯದ ರಾಜಧಾನಿ ಬೆಂಗಳೂರುವರೆಗೂ ಬೈಕ್ ಮೂಲಕ ತೆರಳುತ್ತಿದ್ದಾರೆ. ಇವರು ಹೋಗುವ ಮಾರ್ಗದಲ್ಲಿ ನಮ್ಮ ಕರವೇ ಕಾರ್ಯಕರ್ತರು ಸಹಾಯ-ಸಹಕಾರ ನೀಡುವಂತೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಬರುವ ಏಪ್ರಿಲ್ ೫ರಂದು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಹಾಗೂ ಏಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತ್ಯೋತ್ಸವ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ ೧೮ ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಬರುವ ಏಪ್ರಿಲ್ ೫ರಂದು ಡಾ. ಬಾಬು ಜಗಜೀವನರಾಂ ಅವರ ೧೧೮ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಹತ್ತಿರ ಇರುವ ಡಾ. ಬಾಬು ಜಗಜೀವನರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬೆಳಿಗ್ಗೆ ೯ ಗಂಟೆಗೆ ವಿವಿಧ ಕಲಾತಂಡಗಳೊಂದಿಗೆ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ಜರುಗಲಿದೆ. ನಗರದ ವಿವಿಧ ವೃತ್ತಗಳಿಂದ ಸಾಗಿ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಯಂತಿ ಅಂಗವಾಗಿ ಸಭಾ ಕಾರ್ಯಕ್ರಮ ಆಯೋಜಿಸಲಾಗುವುದು. ಜಯಂತಿ ಕಾರ್ಯಕ್ರಮ ಅಂಗವಾಗಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಮತಕ್ಷೇತ್ರದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ಸಭಾ ಭವನ ದುರಸ್ತಿಗಾಗಿ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯಿಂದ ರೂ.35 ಲಕ್ಷ ಮಂಜೂರಿಸಲಾಗಿದೆ.ಸದರಿ ಅನುದಾನದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮಾರ್ಗದಲ್ಲಿರುವ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.4 ರಿಮ್ಯಾಮಡ್ ಹೋಮ್ ಆವರಣದಲ್ಲಿ ಮೂರು ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರೂ.25 ಲಕ್ಷ ಹಾಗೂ ಶಾಲೆ ಆವರಣದಲ್ಲಿರುವ ಸಭಾ ಭವನ ದುರಸ್ತಿ ಕಾಮಗಾರಿಗೆ ರೂ.10 ಲಕ್ಷ ಅನುದಾನ ಮಂಜೂರಾಗಿದೆ ಎಂದು ನಗರ ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮತ್ತು ಗ್ರಾಮ ಲೆಕ್ಕಧಿಕಾರಿಗಳ ಸಭೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಚರ್ಚಿಸಲಾಯಿತು.ಕಸಾಪ ತಾಲ್ಲೂಕು ಅಧ್ಯಕ್ಷ ಎಸ್ ಜಿ ಲಕ್ಕುಂಡಿಮಠ ಮಾತನಾಡಿ, ಸಾಹಿತ್ಯ ಸಮ್ಮೇಳನ ರಾಜ್ಯಕ್ಕೆ ಮಾದರಿಯಾಗಬೇಕಾಗಿದೆ ಎಂದು ತಿಳಿಸಿದ ಅವರು ಅಧಿಕಾರಿಗಳು ತಮ್ಮ ತನು ಮನ ಧನದಿಂದ ಸಹಕರಿಸಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ ಎಂದರು.ತಿಕೋಟಾ ತಹಶೀಲ್ದಾರ್ ಮತ್ತು ಸಚಿವ ಎಂ ಬಿ ಪಾಟೀಲ ಆಪ್ತ ಸಹಾಯಕ ಭೋಸಲೆ ಭಾಗವಹಿಸಿದ್ದರು.ಬಾಬುರಾವ್ ಮಹಾರಾಜರು, ಸುರೇಶಗೌಡ ಚಾವರ ಮತ್ತು ತಾಲೂಕಿನ ಎಲ್ಲ ಅಧಿಕಾರಿಗಳು ಪಾಲ್ಗೊಂಡಿದ್ದರು.
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ನಿಷ್ಕಲ್ಮಶ ಮನಸ್ಸಿನಿಂದ ಗ್ರಾಮೀಣ ಮಟ್ಟದ ಶಾಲೆಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ತನ್ನದೇ ಆದ ಪ್ರಮುಖ ಪಾತ್ರ ವಹಿಸುತ್ತಿರುವ ಮುಂಬೈನ ಶೇಠ ತಪಿದಾಸ ತುಳಸಿದಾಸ್ ವೃಜದಾಸ ಚಾರಿಟೇಬಲ್ ಟ್ರಸ್ಟಿಗೆ ನಾವೆಲ್ಲರೂ ಧನ್ಯವಾದಗಳನ್ನು ಸಲ್ಲಿಸಬೇಕಾಗಿದೆ ಎಂದು ಕೋ-ಆರ್ಡಿನೇಟರ್ ವಿ.ಎಂ. ಸಿಂದಗಿ ಹೇಳಿದರು.ತಾಲ್ಲೂಕಿನ ಅರಕೇರಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಪ್ರೊಜೆಕ್ಟರ್ ಮೂಲಕ ಕಾರ್ಯನಿರ್ವಹಿಸುವ ಡಿಜಿಟಲ್ ಬೋರ್ಡ್ ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯು ಮಕ್ಕಳ ಮಾನಸಿಕ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳು ತಂತ್ರಜ್ಞಾನವನ್ನು ಹೆಚ್ಚಿನ ಮಟ್ಟದಲ್ಲಿ ಬಳಸಿಕೊಂಡು ದೃಕ್ ಶ್ರವಣೋಪಕರಣವಾಗಿ ಈ ಬೋರ್ಡನ್ನು ಶಿಕ್ಷಕರು ಬಳಸಬೇಕು. ಮಕ್ಕಳು ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕು. ಪರೀಕ್ಷೆಗೆ ಮಕ್ಕಳು ಸಿದ್ಧರಾಗಬೇಕು. ಉನ್ನತವಾದ ಗುರಿಯನ್ನು ಮಕ್ಕಳು ಹೊಂದಬೇಕು. ಅದಕ್ಕಾಗಿ ಸಮಯವನ್ನು ವ್ಯರ್ಥ ಮಾಡಿಕೊಳ್ಳಬಾರದು. ಜ್ಞಾನಾತ್ಮಕ ವಿಷಯಗಳಾದ ಗಣಿತ ವಿಜ್ಞಾನ ಸಮಾಜ ವಿಜ್ಞಾನಗಳನ್ನು ಭಾಷಾ ವಿಷಯಗಳ ಆಧಾರದ ಮೇಲೆ ಗಟ್ಟಿಯಾಗಿ ಕಟ್ಟಿಕೊಳ್ಳಬೇಕು ಎಂದರು.ಸಮಯ, ವಯಸ್ಸು, ಮರಳಿ ಬರಲಾರದು. ಆದ್ದರಿಂದ ಸಮಾಜ ಸೇವೆಯನ್ನು ಮಾಡಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಮಾ.೧೯ ಬುಧವಾರ ಬೆಳಿಗ್ಗೆ ೯:೩೦ಗಂಟೆಗೆ ಮಹಾವಿದ್ಯಾಲಯದ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಂಸ್ಕೃತಿಕ ಸಿರಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಎಸ್.ಎಂ.ಪೂಜಾರಿ ತಿಳಸಿದ್ದಾರೆ.ಕಾರ್ಯಕ್ರಮವನ್ನು ಸಾರಂಗಮಠದ ನಿಯೋಜಿತ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಉದ್ಘಾಟಿಸಲಿದ್ದಾರೆ. ಪಾವನ ಸಾನಿಧ್ಯವನ್ನು ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರ್.ಡಿ.ಪಾಟೀಲ ಪಪೂ ಕಾಲೇಜಿನ ಉಪನ್ಯಾಸಕರಾದ ವಿಜಯಲಕ್ಷ್ಮಿ ಹಿರೇಮಠ ಆಗಮಿಸಲಿದ್ದಾರೆ. ಅತಿಥಿ ಸ್ಥಾನವನ್ನು ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ.ಬಿ.ಜಿ.ಮಠ ವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಸ್.ಎಂ.ಪೂಜಾರಿ ವಹಿಸಿಕೊಳ್ಳುವರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಯು.ಸಿ.ಪೂಜೇರಿ, ಕಾರ್ಯದರ್ಶಿ ಅಕ್ಷತಾ ಕತ್ನಳ್ಳಿ ಇರಲಿದ್ದಾರೆ ಎಂದು ಪತ್ರಿಕಾ ವಿಭಾಗ ಪ್ರತಿನಿಧಿ, ಪ್ರಾಧ್ಯಾಪಕ ಮಹಾಂತೇಶ ನೂಲಾನವರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಸಿಂದಗಿ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಹಾಗೂ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ ಕಾರ್ಯ ವೈಖರಿಗೆ ಸದಸ್ಯರ ಅಸಮಾಧಾನ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪುರಸಭೆಗೆ ಸಂಬಂಧಿಸಿದ ಯಾವುದೇ ಕಾರ್ಯ ಕಲಾಪಗಳಿಗೆ ನಮ್ಮ ಅಭಿಪ್ರಾಯ ಕೇಳುತ್ತಿಲ್ಲ. ಹಲವಾರು ಬಾರಿ ಪುರಸಭೆಯ ಹಣ ಪೋಲಾಗುತ್ತಿದೆ ಎಂದು ಪತ್ರಿಕೆಯಲ್ಲಿ ಹೇಳಿಕೆ ನೀಡಿದ್ದು, ಪ್ರಸ್ತುತ ತಮ್ಮ ಕುಟುಂಬ ಮತ್ತು ಸ್ವ-ಆಸ್ತಿಯ ಗಣಕಿಕೃತ ಉತಾರಿ ಮಾಡಿಕೊಳ್ಳುವಾಗ ಪುರಸಭೆ ಖಾತೆಗೆ ಜಮಾವಣೆ ಮಾಡಬೇಕಾದ ತೆರಿಗೆ ಹಣ ಪಾವತಿ ಮಾಡಿರುವುದಿಲ್ಲ. ಜೊತೆಗೆ ನಕಲಿ ಚಲನ್ ಸೃಷ್ಟಿಸಿ ಪುರಸಭೆಗೆ ತೆರಿಗೆ ಹಣವೇ ಸಂದಾಯ ಮಾಡಿರುವುದಿಲ್ಲ. ಇದಕ್ಕೇನು ಉತ್ತರ ನೀಡುತ್ತಾರೆ ನೋಡಬೇಕಾಗಿದೆ ಎಂದು ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಶಾಂತವೀರ ಮನಗೂಳಿ ಹೇಳಿದರು.ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಟ್ಟಣದ ಪುರಸಭೆ ಅಧ್ಯಕ್ಷ ಶಾಂತವೀರ ಸಿದ್ದಪ್ಪ ಬಿರಾದಾರ ಹಾಗೂ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ ಅವರ ಕಾರ್ಯ ವೈಖರಿಗೆ ಅಸಮಾಧಾನಗೊಂಡು ಪುರಸಭೆಯ ೧೬ಜನ ಸದಸ್ಯರು ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿ ಮಂಡಿಸುವ…
ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ ಮಾಳಿಚಡಚಣ: ಮಹಿಳೆಯರಿಗೆ ಬಸ್ ಪ್ರಯಾಣ ದರವನ್ನು ಉಚಿತ ಮಾಡಿದ ‘ಶಕ್ತಿ’ ಯೋಜನೆಯಿಂದ ಬಸ್ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇದಕ್ಕೆ ಅನುಗುಣವಾಗಿ ದೊಡ್ಡ ಮೊತ್ತದ ಲಾಭವನ್ನೂ ಸರ್ಕಾರ ಗಳಿಸಿದೆ. ಹಾಗಿದ್ದರೂ ಬಸ್ ಪ್ರಯಾಣದಲ್ಲಿ ಮಾತ್ರ ಏರಿಕೆಯಾಗಿಲ್ಲ. ಇದು ಯೋಜನೆಯ ಶಕ್ತಿಯನ್ನೇ ಕುಂದಿಸುತ್ತಿದೆ.ದೇವಾಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ, ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಕನಸಿಗೆ ‘ಶಕ್ತಿ’ ಬಂದಿದೆ. ಕುಟುಂಬ ಸಮೇತ ಜನರು ಪ್ರಯಾಣ ಮಾಡುತ್ತಿದ್ದಾರೆ. ಜೊತೆಗೆ, ಮದುವೆ-ಮುಂಜಿ ಸೇರಿದಂತೆ ಕೌಟುಂಬಿಕ ಕಾರ್ಯಕ್ರಮಗಳಿಗೆ ಜನರು ಬಸ್ ಮೂಲಕವೇ ಪ್ರಯಾಣ ಮಾಡುತ್ತಿದ್ದಾರೆ.ಒಂದೆರಡು ಕಿಲೋಮೀಟರ್ ದೂರಕ್ಕೆ ನಡೆದುಕೊಂಡೇ ಸಾಗುತ್ತಿದ್ದ ಮಹಿಳಾ ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿ ಮಹಿಳೆಯರು ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ಗಾರ್ಮೆಂಟ್ ಸಹಿತ ವಿವಿಧೆಡೆ ಕೆಲಸ ಮಾಡುವ ಮಹಿಳೆಯರು ದ್ವಿಚಕ್ರ ವಾಹನಗಳನ್ನು ಬಿಟ್ಟು ಬಸ್‌ಗಳಲ್ಲಿ ಸಂಚರಿಸುವ ಮೂಲಕ ಇಂಧನಕ್ಕೆ ಆಗುತ್ತಿದ್ದ ಖರ್ಚನ್ನು ಕಡಿಮೆ ಮಾಡಿಕೊಂಡಿದ್ದಾರೆ.ಹೆಚ್ಚಿದ ಪ್ರಯಾಣಿಕರ ಸಂಖ್ಯೆಗೆ ತಕ್ಕಷ್ಟು ಬಸ್‌ಗಳನ್ನು ಓಡಿಸದೇ ಇರುವುದರಿಂದ ನಿತ್ಯ ಜಿಲ್ಲಾ, ತಾಲ್ಲೂಕು ಕೇಂದ್ರಗಳಿಂದ ಗ್ರಾಮಗಳಿಗೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಹೋಳಿ ಹಬ್ಬದ ಐದನೇ ದಿವಸಕ್ಕೆ ಪಟ್ಟಣದಲ್ಲಿ ಬಣ್ಣದಾಟ ಆಡುವ ವಾಡಿಕೆಯಂತೆ ಮಂಗಳವಾರದಂದು ಮುಂಜಾನೆ ಎಂಟು ಗಂಟೆಯಿಂದಲೇ ವಿವಿಧ ಓಣಿಗಳಲ್ಲಿ ಚಿಣ್ಣರು, ಯುವಕರು, ಮಹಿಳೆಯರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು. ಮಹಿಳೆಯರು ವಿವಿಧ ಬಣ್ಣಗಳಲ್ಲಿ ಮಿಂದು ಸಂತಸಪಟ್ಟರು.ಹಲಗೆ ಮೇಳ: ವಿವಿಧ ಓಣಿಯ ಯುವಕರು ಮುಖಕ್ಕೆ ವಿವಿಧ ಬಣ್ಣ ಬಳಿದುಕೊಂಡು ಹಲಗೆ ಬಾರಿಸುತ್ತ ಓಣಿ ಓಣಿಗಳಲ್ಲಿ ಸಂಚರಿಸುತ್ತ ವಿವಿಧ ನೃತ್ಯಗಳನ್ನು ಪ್ರದರ್ಶಿಸುತ್ತ ಮೆರವಣಿಗೆ ಮಾಡಿ ನೋಡುಗರ ಕಣ್ಮನ ತಣಿಸಿದರು. ಸೋಗು ಅಣಕು ಶವಯಾತ್ರೆಬಣ್ಣ ತುಂಬಿದ ಬ್ಯಾರೆಲ್‌ಗಳು ಅಲ್ಲಲ್ಲಿ ಕಾಣಿಸಿಕೊಂಡು ಹೋಗು ಬರುವವರಿಗೆ ಬಣ್ಣ ಎರಚುತ್ತಿದ್ದರು.ಮಹಿಳೆಯರು ಮಿಗಿಲು: ಬಣ್ಣದಾಟದಲ್ಲಿ ಪುರುಷರಿಗಿಂತ ಮಹಿಳೆಯರು, ಬಾಲಕಿಯರು ಹೆಚ್ಚಾಗಿ ಕಾಣಿಸಿಕೊಂಡು ಪ್ರೀತಿಯಿಂದ ಪರಸ್ಪರ ಬಣ್ಣ ಹಚ್ಚಿ ಖುಷಿಪಟ್ಟರು. ತಮ್ಮ ಬಂಧುಗಳಲ್ಲಿ ಸ್ನೇಹಿತೆಯರೊಂದಿಗೆ ಬಣ್ಣದಾಟವಾಡಿ ಸಂಭ್ರಮಿಸಿದರು. ಅತಿ ಹೆಚ್ಚು ನಾಕಿ ಮಂದಿ, ಕುಲಕರ್ಣಿಯವರ ಓಣಿ, ಮಾರುಕಟ್ಟೆ ಇವುಗಳಲ್ಲಿ ಅತಿ ಹೆಚ್ಚು ಬಣ್ಣದಾಟ ಜರುಗಿದವು.
