Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ಲಂ ಮುಕ್ತ ನಗರ ಮಾಡುವುದು ನಮ್ಮ ಗುರಿಯಾಗಿದೆ. ಹೀಗಾಗಿ ಸ್ಲಂ ಪ್ರದೇಶದಲ್ಲಿ ಹೊಸ ಮನೆಗಳನ್ನು ನಿರ್ಮಿಸಿ, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದರು.ನಗರ ಮತಕ್ಷೇತ್ರದ ಇಬ್ರಾಹಿಂಪುರ ಭಜಂತ್ರಿ ಓಣಿ ಕೊಳಗೇರಿ ಪ್ರದೇಶದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಭಾನುವಾರ ‌ಮನೆಗಳ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಹೊಸ ಮನೆ ಪಡೆಯಲು ಫಲಾನುಭವಿಗಳು ರೂ.1 ಲಕ್ಷ ತುಂಬಿದರೆ, ಸರ್ಕಾರ ಪ್ರತಿ ಫಲಾನುಭವಿಗೆ ರೂ.6 ಲಕ್ಷ ನೀಡುತ್ತದೆ. ಒಟ್ಟು ರೂ.7 ಲಕ್ಷ ಗಳಲ್ಲಿ ಸುಸಜ್ಜಿತ ಸ್ವಂತ ಮನೆ ನಿಮ್ಮದಾಗಲಿದೆ ಎಂದರು.ಸರ್ಕಾರದಿಂದ ಘೋಷಣೆಯಾಗಿರುವ ಇಬ್ರಾಹಿಂಪುರ ಸ್ಲಂ ಪ್ರದೇಶದಲ್ಲಿ ಈಗಾಗಲೇ ಸ್ಲಂ ಬೋರ್ಡ್ ನಡೆಸಿದ ಸರ್ವೇ ಪ್ರಕಾರ 167 ಮನೆಗಳಿದ್ದು, ಈಗ 74 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಉಳಿದವರು ಸ್ಲಂ ಬೋರ್ಡ್ ಗೆ ಸರ್ಕಾರ ನಿಗದಿಪಡಿಸಿದ ಶುಲ್ಕ ಪಾವತಿಸಿ, ಅಗತ್ಯ ದಾಖಲೆಗಳನ್ನು ಒದಗಿಸಿದರೆ ಅವರಿಗೂ ಹಕ್ಕು ಪತ್ರ ನೀಡಲಾಗುವುದು ಎಂದು ಭರವಸೆ ನೀಡಿದರು.ನಗರಕ್ಕೆ ಎರಡ್ಮೂರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರುವ ಮಾರ್ಚ 21 ರಿಂದ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಯು ನಕಲು ಮುಕ್ತವಾಗಿ ನಡೆಯುವಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಹೊರ ಬರದಂತೆ ಎಚ್ಚರ ವಹಿಸಬೇಕು ಎಂದು ತಹಶಿಲ್ದಾರ ಪ್ರಶಾಂತ ಚನಗೊಂಡ ಹೇಳಿದರು.ನಗರದ ಜಿಪಂ ಸಮೀಪ ಅಗಸ್ತ್ಯ ಪೌಂಡೇಶನ ಸಭಾಭವನದಲ್ಲಿ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ವಿಜಯಪುರ ವತಿಯಿಂದ ಮುಖ್ಯ ಅಧೀಕ್ಷರ, ಉಪಮುಖ್ಯ ಅಧೀಕ್ಷರ, ಕಸ್ಟೋಡಿಯನ್, ಮೊಬೈಲ್ ಸ್ವಾಧಿನಾಧಿಕಾರಗಳು, ಸ್ಥಾನಿಕ ಜಾಗೃತದಳ‌‌ ಹಾಗೂ ಮಾರ್ಗಾಧಿಕಾರಿಗಳಿಗೆ ಸೋಮವಾರ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಕೊಠಡಿ ಮೇಲ್ವಿಚಾರಣೆ ಕುರಿತು ಮೇಲ್ವಿಚಾರಕರಿಗೆ ಸೂಕ್ತ ತರಬೇತಿ ನೀಡುವದು. ಅಭ್ಯರ್ಥಿಯ ಪ್ರವೇಶ ಪತ್ರದಲ್ಲಿ ನಮೂದಿಸಿರುವ ವರ್ಷನ್ ಪ್ರಶ್ನೆ ಪತ್ರಿಕೆಯನ್ನು ಅಭ್ಯರ್ಥಿಗಳಿಗೆ ನೀಡುವುದು ಕಡ್ಡಾಯವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುವಾಗ ಏಕಾಗ್ರತೆಯಿಂದ ಹಾಗೂ ಸಮಾಧಾನ ಚಿತ್ತದಿಂದಿರುವುದು ಮುಖ್ಯವಾಗಿರುತ್ತದೆ. ಯಾವುದೇ ಸದ್ದು ಗದ್ದಲಗಳಿಗೆ ಅವಕಾಶವನ್ನು ಕೊಡದಂತೆ ನೋಡಿಕೊಳ್ಳುವುದು ಅನ್ಯ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದ ಸುತ್ತ ಪ್ರವೇಶಿಸದಂತೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಜಾನಪದ ಅಕಾಡೆಮಿ-ಬೆಂಗಳೂರ ಇವರು ಕೊಡಮಾಡುವ 2023 ನೇ ಸಾಲಿನ ಜಾನಪದ ವಾರ್ಷಿಕ ಗೌರವ ಪ್ರಶಸ್ತಿಯನ್ನು ಸಿಂದಗಿ ತಾಲೂಕಿನ ಬೋರಗಿ ಗ್ರಾಮದ ತತ್ವಪದ ಹಾಡುಗಾರ್ತಿ ಇಮಾಂಬಿ ದೊಡಮನಿ ಇವರಿಗೆ ಬೀದರನ ಚನ್ನಬಸವ ಪಟ್ಟದ್ದೆವರು ರಂಗ ಮಂದಿರದಲ್ಲಿ ನಡೆದ ಜಾನಪದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೀಡಿ ಗೌರವಿಸಲಾಯಿತು.ಈ ಪ್ರಶಸ್ತಿ 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಕಳೆದ ಮೂರ್ನಾಲು ದಶಕಗಳಿಂದ ಜಾನಪದ, ತತ್ವದ, ಭಜನಾ ಪದ, ಸೋಬಾನ ಹಾಡು ಹಾಡುತ್ತ ಬರುತ್ತಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ದೊರೆತಿರುವುದಕ್ಕೆ ಬೋರಗಿ ಶ್ರೀಮಠದ ಮಹಾಲಿಂಗೇಶ್ವರ ಸ್ವಾಮಿಗಳು, ರಾಂಪೂರ ಶ್ರೀ ಮಠದ ನಿತ್ಯಾನಂದ ಮಹಾರಾಜರು, ಸಿಂದಗಿ ಕಸಾಪ ಬಳಗ ಸೇರಿದಂತೆ ಅನೇಕ ಗಣ್ಯರು, ಸಾಹಿತಿಗಳು ಅಭಿನಂದಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮಹಿಳೆಯರು ಬೆಳಗ್ಗೆ ಎದ್ದ ಕ್ಷಣದಿಂದ ಮಲಗುವವರೆಗೆ ಒತ್ತಡದಲ್ಲೇ ಆ ದಿನವನ್ನು ಕಳೆಯುತ್ತಿದ್ದೆವೆ. ಮನೆ-ಮಕ್ಕಳ ಜವಾಬ್ದಾರಿ, ಟ್ರಾವೆಲ್‌ ಮಾಡುವಾಗ ಟ್ರಾಫಿಕ್‌ ಸಮಸ್ಯೆ, ಆಫೀಸ್‌ಗೆ ಬಂದರೆ ಗೋಲ್‌, ಟಾರ್ಗೆಟ್‌ ಹೀಗೆ ಇಡೀ ದಿನ ಒಂದೆಲ್ಲಾ ಒಂದು ರೀತಿಯ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದೇವೆ.‌ ಆ ಕಾರಣದಿಂದಾಗಿ ಮಾನಸಿಕ ಅನಾರೋಗ್ಯಕ್ಕೆ ತುತ್ತಾಗಿ ಅನೇಕ ರೂಗಗಳಿಂದ ಬಳಲುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಆದ್ದರಿಂದ ಮಹಿಳೆಯರು ಪ್ರತಿ ನಿತ್ಯ ಧ್ಯಾನ ಮತ್ತು ಯೋಗದಲ್ಲಿ ಪಾಲ್ಗೊಂಡು ಆರೋಗ್ಯದತ್ತ ಗಮನ ಹರಿಸಲು ರಾಜಯೋಗಿ ಬಿ ಕೆ ಯಮುನಾ ಅಕ್ಕನವರು ಹೇಳಿದರು.ಭಾನುವಾರ ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ತಳವಾರ ಮಹಿಳಾ ಸಮಾಜವತಿಯಿಂದ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಕರಾಗಿ ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸೇವಾ ಕೇಂದ್ರ ಇಂಡಿಯ ರಾಜಯೋಗಿನಿ ಬಿಕೆ ಯಮುನಾ ಅಕ್ಕನವರು ಉದ್ಘಾಟಿಸಿ ಮಾತನಾಡಿದರು.ಲಿಂಗ ತಾರತಮ್ಯದಿಂದ ಮುಕ್ತವಾದ ಉತ್ತಮ ಸಮಾಜವನ್ನು ನಿರ್ಮಿಸಲು ಮತ್ತು ಲಿಂಗ ಸಮಾನತೆಯ ಸಂದೇಶವನ್ನು ನೀಡಲು ಪ್ರತಿ ವರ್ಷ ಮಾರ್ಚ್ 8 ರಂದು ಅಂತರರಾಷ್ಟ್ರೀಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪುರಸ್ಕೃತ ಯೋಜನೆಗಳು ಜಾರಿಯಲ್ಲಿದ್ದು, ಈ ಯೋಜನೆಗಳ ಲಾಭ ನಿಗದಿತ ಅವಧಿಯಲ್ಲಿ ಗ್ರಾಮೀಣ ಜನರಿಗೆ ತಲುಪಿಸುವ ಮೂಲಕ ಪ್ರಗತಿ ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚಿಸಿದರು.ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಯೋಜನೆಗಳ ಪ್ರಗತಿಗೆ ಸ್ಥಳೀಯ ಮಟ್ಟದ ಅಧಿಕಾರಿ, ಸಿಬ್ಬಂದಿಗಳ ಪಾತ್ರ ಬಹುಮುಖ್ಯವಾಗಿರುತ್ತದೆ. ಎಲ್ಲ ಅಧಿಕಾರಿ-ಸಿಬ್ಬಂದಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ನಿಗದಿತ ಸಮಯದಲ್ಲಿ ಇಲಾಖೆಯ ಎಲ್ಲ ಯೋಜನೆಗಳ ಪ್ರಗತಿ ಸಾಧಿಸುವಂತೆ ಅವರು ಹೇಳಿದರು.ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆ ಮತ್ತು ಮಹಿಳಾ ಗ್ರಾಮ ಸಭೆ ದಿನಾಂಕಗಳನ್ನು ಪ್ರತಿ ಗ್ರಾ.ಪಂ. ಗಳಲ್ಲಿ ಕಡ್ಡಾಯವಾಗಿ ನಿಗದಿಪಡಿಸಬೇಕು. ಜೊತೆಗೆ ಬಾಕಿ ಉಳಿದ ಗ್ರಾಮ ಸಭೆಗಳ ದಿನಾಂಕಗಳನ್ನು ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ೧೩೧ ಪರೀಕ್ಷಾ ಕೇಂದ್ರಗಳಲ್ಲಿ ಮಾ.೨೧ರಿಂದ ಏಪ್ರಿಲ್ ೦೪ರವರೆಗೆ ಎಸ್.ಎಸ್.ಎಲ್.ಸಿ.ಪರೀಕ್ಷೆ-೧ರ ಪರೀಕ್ಷೆಗಳು ಜರುಗಲಿದ್ದು, ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ಕಲಂ ೧೬೩ರ ಪ್ರಕಾರ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶದಲ್ಲಿ ಬೆಳಿಗ್ಗೆ ೯ ಗಂಟೆಯಿಮದ ಪರೀಕ್ಷೆ ಮುಕ್ತಾಯವಾಗುವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ತರುವುದು, ಬಳಸುವುದನ್ನು ನಿಷೇಧಿಸಲಾಗಿದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್‌ನ್ನು ಮಾತ್ರ ಬಳಸಬಹುದಾಗಿದೆ. ಪರೀಕ್ಷಾ ಕೇಂದ್ರದ ೨೦೦ ಮೀಟರ್ ಪ್ರದೇಶದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ಮುಕ್ತಾಯವಾಗುವರೆಗೆ ತೆರೆಯದಂತೆ ಆದೇಶಿಸಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುದ್ದೇಬಿಹಾಳ ತಾಲೂಕಿನ ಗಡಿಸೋಮನಾಳ ಸರಕಾರಿ ಹಿರಿಯ ಪ್ರಾಥಮಿಕ (ಆಂಗ್ಲ) ಶಾಲೆಯ ಸಹ ಶಿಕ್ಷಕರಾದ ಎ.ಜಿ.ತಿಲಕ ಅವರು ಕರ್ತವ್ಯಲೋಪವೆಸಗಿರುವ ಹಿನ್ನಲೆಯಲ್ಲಿ ಶಿಸ್ತು ಪ್ರಾಧಿಕಾರಿಗಳಾದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಟಿ.ಎಸ್.ಕೋಲಾರ ಅವರು ಇವರ ವಿರುದ್ಧದ ಆರೋಪಗಳ ಇಲಾಖಾ ವಿಚಾರಣೆ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶ್ರೀಮಠ ಸಮಸ್ತ ಭಕ್ತವೃಂದದ ಆಸ್ತಿ. ಭಕ್ತರ ಅಭಿಪ್ರಾಯ, ಅಭಿಲಾಷೆಯಂತೆ ಕಾರ್ಯಕ್ರಮಗಳು ಜರುಗಿಸುವುದು ನಿಮ್ಮಗಳ ಜವಾಬ್ದಾರಿ ಎಂದು ಜಡಿಮಠದ ಜಡಿಸಿದ್ಧೇಶ್ವರ ಶ್ರೀಗಳು ಹೇಳಿದರು.ಪಟ್ಟಣದ ಜಡಿಮಠದ ಆವರಣದಲ್ಲಿ ಭಾನುವಾರ ಜರುಗಿದ ಪೂರ್ವಭಾವಿಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಮಠದ ಲೋಕಾರ್ಪಣೆ ಅಂಗವಾಗಿ ಮೇ ೨೨ ರಿಂದ ಜೂನ್ ೫ ರವರೆಗೆ ಪುರಾಣ ಕಾರ್ಯಕ್ರಮ ನಂತರ ಜಗದ್ಗುರುಗಳ ಅಡ್ಡಪಲ್ಲಕ್ಕಿ , ಪಟ್ಟಾಧಿಕಾರ ವರ್ಧಂತಿ ಮಹೋತ್ಸವ ಹಾಗೂ ರೇಣುಕಾಚಾರ್ಯರ ಪ್ರತಿಮೆ ಪ್ರತಿಷ್ಠಾಪನೆಯಂತಹ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಎಲ್ಲ ಕಾರ್ಯಕ್ರಮಗಳು ಭಕ್ತರ ಆಶಯದಂತೆ ಅಚ್ಚುಕಟ್ಟಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಆದ್ದರಿಂದ ಪಟ್ಟಣದ ಸಕಲ ಸದ್ಭಕ್ತರು ಸಹಕಾರದಿಂದ ಜವಾಬ್ದಾರಿ ನಿರ್ವಹಿಸುವಂತೆ ಸಲಹೆ ನೀಡಿದರು.ಸಾನಿಧ್ಯ ವಹಿಸಿದ ಸ್ಥಳೀಯ ಸದಯ್ಯನಮಠದ ವೀರಗಂಗಾಧರಶ್ರೀಗಳು ಆಶೀರ್ವಚನ ನೀಡಿ, ಭಕ್ತವೃಂದ ತನು,ಮನ, ಧನಗಳ ಮೂಲಕ ಉತ್ಸಾಹದಿಂದ ಕಾರ್ಯನಿರ್ವಹಿಸಿದ್ದೇ ಆದಲ್ಲಿ ಕಾರ್ಯಕ್ರಮ ಯಶಸ್ವಿ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಿದ್ಧೇಶ್ವರ ಶ್ರೀಗಳ ಆಶಯ, ಸಚಿವ ಎಂ.ಬಿ.ಪಾಟೀಲರ ಸಂಕಲ್ಪ, ಸರ್ಕಾರ-ಸಂಘ ಸಂಸ್ಥೆಗಳ ಸಹಭಾಗಿತ್ವ ಹಾಗೂ ಸಾರ್ವಜನಿಕರ ಪಾಲ್ಗೊಳ್ಳವಿಕೆ ವಿಜಯಪುರ ಜಿಲ್ಲೆಯನ್ನು ಇನ್ನೂ ಹಸಿರಾಗಿಸಲು ಪ್ರತಿ ತಿಂಗಳು ಹಸಿರು ಚಟುವಟಿಕೆಗಳನ್ನು ಏರ್ಪಡಿಸುವ ಮೂಲಕ ಕೋಟಿ ವೃಕ್ಷ ಅಭಿಯಾನವನ್ನು ನಿರಂತರವಾಗಿ ಮುನ್ನಡೆಸಲಾಗುವುದು ಎಂದು ಕೈಗಾರಿಕೆ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಹೇಳಿದರು.ನಗರದಲ್ಲಿ ವೃಕ್ಷೋಥಾನ್ ಹೆರಿಟೇಜ್ ರನ್-2025 ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೇವಲ ಜೂನ್ ತಿಂಗಳಲ್ಲಿ ಸಸಿಗಳನ್ನು ನೆಟ್ಟು, ವನ ಮಹೋತ್ಸವ ಮಾಡುವುದು ಹಾಗೂ ಡಿಸೆಂಬರ್ ತಿಂಗಳಲ್ಲಿ ವೃಕ್ಷೋಥಾನ್ ಹೆರಿಟೇಜ್ ರನ್ ಕಾರ್ಯಕ್ರಮಗಳಿಗೆ ಸೀಮಿತವಾಗದೆ ವರ್ಷಪೂರ್ತಿ ಹಸಿರು ಕಾರ್ಯಕ್ರಮಗಳು ವಿಜಯಪುರದಲ್ಲಿ ನಡೆಯಬೇಕು ಎಂದು ಸಚಿವ ಎಂ.ಬಿ.ಪಾಟೀಲರು ಸೂಚಿಸಿದ್ದು, ಆ ನಿಟ್ಟಿನಲ್ಲಿ ಸಂಘ-ಸಂಸ್ಥೆಗಳು, ಸಾರ್ವಜನಿಕರು ಪ್ರತಿ ತಿಂಗಳು ಹಸಿರು ಪೂರಕ ಕಾರ್ಯಕ್ರಮಗಳನ್ನು ಅಲ್ಲಲ್ಲಿ ನಡೆಸಬೇಕು ಎಂದರು.ಬರುವ ಡಿಸೆಂಬರ್ ನಲ್ಲಿ ನಡೆಯುವ ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಯಾವುದೇ ಲೋಪವಾಗದಂತೆ ಸಮರ್ಪಕವಾಗಿ ನಡೆಸಲು ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸಲಾಗಿದೆ. ವೃಕ್ಷಥಾನ್ ರನ್ ವಿಜಯಪುರದೊಂದಿಗೆ ಭಾವನಾತ್ಮಕ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಿಂದಗಿ ಗ್ರಾಮ ಪಂಚಾಯಿತಿ ಬೆಕಿನಾಳ ಜಲಪುರ್ ಕೆರೆ ಸಮಿತಿ ಇವರ ಸಹಭಾಗಿತ್ವದಲ್ಲಿ ಜಲಪುರ ಕೆರೆಯನ್ನ ಧರ್ಮಸ್ಥಳ ಕ್ಷೇತ್ರದ 11,40,000 ರೂ ಗಳಲ್ಲಿ ಅಭಿವೃದ್ಧಿ ಪಡಿಸಿದ್ದು ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದಎಸ್ ಎಸ್ ಪಾಟೀಲ್ ಅಸ್ಕಿ ಇವರು ನಾಮಫಲಕ ಅನಾವರಣ ಮಾಡಿದರು.ಕಾರ್ಯಕ್ರಮದಲ್ಲಿ ಟೋಪಯ್ಯ ಮುತ್ಯ ಮಾಲಿಂಗೇಶ್ವರ ಮಠ ಜಲಪುರ ಇವರ ದಿವ್ಯ ಸಾನಿಧ್ಯದಲ್ಲಿ ದೀಪ ಬೆಳಗಿಸಿ ವೇದಿಕೆ ಕಾರ್ಯಕ್ರಮ ಪ್ರಾರಂಭಿಸಲಾಯಿತು.ಸಭೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕರು ಸಂತೋಷ್ ಕುಮಾರ್ ಸರ್ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಳೆದ 43 ವರ್ಷದಿಂದ ಕರ್ನಾಟಕ ರಾಜ್ಯದ್ಯಂತ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳ ಕುರಿತು ಮಾಹಿತಿ ನೀಡಿ ಕೆರೆ ಹಸ್ತಾಂತರದ ಪ್ರಮಾಣ ಪತ್ರವನ್ನು ವಿತರಣೆ ಮಾಡಿದರು ಕಾರ್ಯಕ್ರಮದಲ್ಲಿ ಕೆರೆ ಸಮಿತಿಯ ಅಧ್ಯಕ್ಷ ಸಿದ್ದನಗೌಡ ಬಿರಾದಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ರವೀಂದ್ರ ಸುಧಾಕರ್ ಯೋಜನಾಧಿಕಾರಿ ಕೃಷ್ಣಮೂರ್ತಿ ಸರ್ ಕೆರೆ ಇಂಜಿನಿಯರ್ ನಿಂಗರೆಡ್ಡಿ ಸಮಿತಿಯ ಸದಸ್ಯರು ಗ್ರಾಮಸ್ಥರು…

Read More