Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಜೀವನದಲ್ಲಿ ಹತ್ತನೇ ತರಗತಿ ಫಲಿತಾಂಶ ಅತಿ ಅಮೂಲ್ಯವಾದದ್ದು ಎಂದು ವಿಜಯಪುರ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ ಹೇಳಿದರು.ನಗರದ ಟಕ್ಕೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳ ಫಲಿತಾಂಶ ಸುಧಾರಣೆ ಸಲುವಾಗಿ ಶನಿವಾರ ನಡೆದ ಫೋನ್ ಇನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜುಮನಾಳ ಸರ್ಕಾರಿ ಪ್ರೌಢ ಶಾಲೆಯ ಪೃಥ್ವಿ ಬಿರಾದಾರ ಮಗುವಿನ ಮೊದಲ ಫೋನ್ ಕರೆ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.ಈ ಪರೀಕ್ಷೆ ನಿಮ್ಮ ಜೀವನದಲ್ಲಿ ಅತಿ ಅಮೂಲ್ಯವಾದದ್ದು, ನೀವು ಚೆನ್ನಾಗಿ ಅಧ್ಯಯನ ಮಾಡಿ ಉತ್ತಮ ರೀತಿಯಲ್ಲಿ ಪರೀಕ್ಷೆಗೆ ಸಿದ್ಧರಾಗಿ ನೀವು ಚೆನ್ನಾಗಿ ಅಧ್ಯಯನ ಮಾಡಿ ಉತ್ತಮ ರೀತಿಯಲ್ಲಿ ಪರೀಕ್ಷೆಗೆ ಸಿದ್ಧರಾಗಿ ಪರೀಕ್ಷೆಯಲ್ಲಿ ಜಲ ಜಯಶಾಲಿಗಳಾಗಿ ಬನ್ನಿ ಎಂದು ಹಾರೈಸಿದರು.ಆರಂಭ ದಿನವಾದ ಇಂದು ಒಟ್ಟು 142 ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕನ್ನಡದ ವಿಷಯದಲ್ಲಿ ಬರುವಂತಹ ಹಳೆಗನ್ನಡ ಹೊಸಗನ್ನಡ ವ್ಯಾಕರಣ ಅಂಶಗಳನ್ನು ನೆನಪಿನ ಬಗ್ಗೆ ಅನ್ನ ವಿವರಿಸಿದರು. ಅದೇ ರೀತಿ ಗಣಿತ ವಿಷಯದಲ್ಲಿ ಕೂಡ ಸೂತ್ರಗಳು…
ಜಿಲ್ಲಾ ಪಂಚಾಯತಿ ಆವರಣ ಹಸಿರುಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಪಂ ಸಿಇಓ ರಿಷಿ ಆನಂದ ನಿರ್ಧಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿಯೊಂದು ಹಂತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಅರಣ್ಯೀಕರಣ ಹಾಗೂ ಹಸಿರುಕರಣಕ್ಕೆ ಹೆಚ್ಚು ಒತ್ತು ನೀಡಿದ್ದರ ಪರಿಣಾಮ ಪ್ರಸ್ತುತ ವರ್ಷದಲ್ಲಿ ಉತ್ತಮ “ವಾಯು ಗುಣಮಟ್ಟದ ಸೂಚ್ಯಂಕ”ದಲ್ಲಿ ದೇಶದಲ್ಲಿಯೇ ವಿಜಯಪುರ ಜಿಲ್ಲೆ ೩ನೇ ಸ್ಥಾನ ಪಡೆದಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು.ನಗರದ ಜಿಲ್ಲಾ ಪಂಚಾಯತಿಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ “ಜಿಲ್ಲಾ ಪಂಚಾಯತಿ ಆವರಣ ಹಸಿರುಕರಣ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಚ್ಛತೆ ಹಾಗೂ ಹಸಿರುಕರಣಕ್ಕೆ ಇನ್ನೂ ಹೆಚ್ಚಿನ ಮಟ್ಟದ ಆದ್ಯತೆ ನೀಡಲಾಗುತ್ತಿದ್ದು, ಜಿಲ್ಲಾ ಪಂಚಾಯತಿಯಲ್ಲಿಯೂ ಸಹ ಹಸಿರೀಕರಣ ಹಾಗೂ ಸ್ವಚ್ಛತೆಯ ವಿನೂತನ ಪರಿಕಲ್ಪನೆ ಕೈಗೆತ್ತಿಕೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಜಿಲ್ಲಾ ಪಂಚಾಯತಿಯ ಒಳ ಮತ್ತು ಹೊರ ಆವರಣಗಳಲ್ಲಿ ನಿರಂತರವಾಗಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ “ಸ್ವಚ್ಛ ಶನಿವಾರ” ಪರಿಕಲ್ಪನೆಯನ್ನು ಆರಂಭಿಸಲಾಗಿದೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೇಲ್ಕಾಣಿಸಿದ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮಹಾನಗರಪಾಲಿಕೆ ಕಾಯ್ದೆ ೧೯೭೬ರ ಶೆಡ್ಯೂಲ್ ಘಿ ನಂತೆ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಉದ್ದಿಮೆದಾರರು ತಮ್ಮ ಉದ್ದಿಮೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿರುತ್ತದೆ.ಅದರಂತೆ ವಿಜಯಪುರ ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ಒಂದು ವರ್ಷ ಆಥವಾ ಐದು ವರ್ಷದ ಅವಧಿ ವರೆಗೆ ಉದ್ದಿಮೆ ಪರವಾನಿಗೆಯನ್ನು ಪಡೆಯಬಹುದಾಗಿರುತ್ತದೆ. ಅರ್ಜಿದಾರರು ನೇರವಾಗಿ ನಿಗಧಿತ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮಹಾನಗರ ಪಾಲಿಕೆ ಕಛೇರಿಗೆ ಸಲ್ಲಿಸಬಹುದಾಗಿದೆ. ಈಗಾಗಲೇ ಪರವಾನಗಿ ಪಡೆದ ಉದ್ದಿಮೆದಾರರು ತಮ್ಮ ಉದ್ದಿಮೆಯನ್ನು ೨೦೨೪-೨೫ನೇ ಸಾಲಿಗೆ ನವೀಕರಣಗೊಳಿಸಲು ತಿಳಿಸಲಾಗಿದೆ.ಉದ್ದಿಮೆ ಪರವಾನಿಗೆಯನ್ನು ಪಡೆಯದ/ನವೀಕರಣ ಗೊಳಿಸದ ಉದ್ದಿಮೆದಾರರ ವಿರುದ್ಧ ಕರ್ನಾಟಕ ಮಹಾನಗರಪಾಲಿಕೆ ಕಾಯ್ದೆ-೧೯೭೬ರ ಕಲಂ ೩೫೩ರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಉತ್ತರ ಪ್ರದೇಶದ ಪ್ರಯಾಗರಾಜದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಕಕರಸಾ ನಿಗಮ ವಿಜಯಪುರ ವಿಭಾಗದಿಂದ ಕರಾರು ಒಪ್ಪಂದದ ಮೇರೆಗೆ ನಾನ್ ಎಸಿ ಸ್ಲೀಪರ ಹಾಗೂ ವೇಗದೂತ ಬಸ್ಸುಗಳನ್ನು ಬಿಡಲಾಗುವುದು. ಪ್ರಯಾಣಿಕರು ಇದರ ಸದುಪಯೋಗ ಪಡೆಸಿಕೊಳ್ಳುವಂತೆ ವಿನಂತಿಸಲಾಗಿದೆ.ಪ್ರಯಾಣಿಕರು ಕೆಳಗೆ ನಮೂದಿಸಿದ ಕರಾರು ಒಪ್ಪಂದದ ಸಾರಿಗೆ ನಿಗಮದ ಅಧಿಕಾರಿಗಳನ್ನು ಸಂಪರ್ಕಿಸಬಹುದು.ವಿಜಯಪುರ ೧ನೇ ಘಟಕದ ವ್ಯವಸ್ಥಾಪಕರ ಮೊ.ಸಂ ೭೭೬೦೯೯೨೨೬೩, ೨ನೇ ಘಟಕದ ೭೭೬೦೯೯೨೨೬೪, ಇಂಡಿ- ೭೭೬೦೯೯೨೨೬೫, ಸಿಂದಗಿ- ೭೭೬೦೯೯೨೨೬೬, ಮುದ್ದೇಬಿಹಾಳ- ೭೭೬೦೯೯೨೨೬೭, ತಾಳಿಕೋಟ- ೭೭೬೦೯೯೨೨೬೮, ಬ.ಬಾಗೇವಾಡಿ- ೭೭೬೦೯೯೨೨೬೯, ವಿಜಯಪುರ ಕೇಂದ್ರ ಬಸ್ ನಿಲ್ದಾಣಾಧಿಕಾರಿ ಮೋ ಸಂ -೭೭೬೦೯೯೨೨೫೮ ಹೆಚ್ಚಿನ ಮಾಹಿತಿಗಾಗಿ ವಿಭಾಗೀಯ ಸಾರಿಗೆ ಅಧಿಕಾರಿ ಮೊ.ಸಂ-೭೭೬೦೯೯೨೨೫೨ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ ಗ್ರಾಮದ ಸರ್ಕಾರಿ ಸನಮ.೨೩// ರಲ್ಲಿ ಒಟ್ಟು ೨೮ಎ-೨೬ಗು ಬಾಕಿ ಉಳಿದ ಕ್ಷೇತ್ರ: ೧೮ಎ-೦೧ ಗು ಪೈಕಿ ೨-೦೦ ಎಕರೆ ಸರಕಾರಿ ಜಮೀನನ್ನು ಡಾ. ಬಿ.ಆರ್. ಅಂಬೇಡ್ಕರ ಭವನ ನಿರ್ಮಾಣಕ್ಕಾಗಿ ಜಮೀನನ್ನು ಮಂಜೂರು ಮಾಡಿಸುವ ಕುರಿತು ಗಾಯರಾಣ ಜಮೀನು ಮಂಜೂರಿಸುವ ಕುರಿತು ಅದಿಸೂಚಿಯಲ್ಲಿ ತಿಳಿಸಿರುವಂತೆ ಸಾರ್ವಜನಿಕರ ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆ ಹೊರಡಿಸಿದ ೩೦ ದಿನಗಳೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಲಿಖಿತವಾಗಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂ ಸೈಟನಲ್ಲಿ ಒಟ್ಟು ೨ ಪರೀಕ್ಷಾ ಕೇಂದ್ರಗಳಲ್ಲಿ ಫೆಬ್ರವರಿ ೮ರಂದು ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗಳು ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ದಿನದಂದು ಬೆಳಿಗ್ಗೆ ೮ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಿದೆ ಹಾಗೂ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.
ವಿಜಯಪುರದಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಅಭಿಯಾನ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ತ ಗುಣಾರಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪದವಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಜ.೩೦ರಂದು ಹಮ್ಮಿಕೊಂಡ “ಸ್ವರ್ಶ ಕುಷ್ಠರೋಗ ಅರಿವು ಅಭಿಯಾನ ಕಾರ್ಯಕ್ರಮದ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ತ ಗುಣಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಉಪ ನಿರ್ದೇಶಕಿ ಡಾ. ಚನ್ನಮ್ಮ ಕಟ್ಟಿ ಜಂಟಿಯಾಗಿ ಚಾಲನೆ ನೀಡಿದರು.ಕುಟುಂಬ ಕಲ್ಯಾಣದ ಉಪ ನಿರ್ದೇಶಕರಾದ ಡಾ. ಚನ್ನಮ್ಮ ಕಟ್ಟಿ ಕುಷ್ಠರೋಗ ಯಾವುದೇ ಪಾಪ ಅಥವಾ ಶಾಪದಿಂದ ಬರುವದಿಲ್ಲ. ಇದು ಸಹ ಒಂದು ಸಮಾನ್ಯ ಕಾಯಿಲೆಯಂತೆ ಎಲ್ಲರಿಗೂ ಬರಬಹುದು. ಮೈಕೋಬ್ಯಾಕ್ಟಿರಿಯಂ ಲೆಪ್ರೇ ಎನ್ನುವ ರೋಗಾಣುವಿನಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಕುಷ್ಠರೋಗದಿಂದ ಬಳಲುತ್ತಿರುವ ವ್ಯಕ್ತಿಗಳು…
ಮಡಿವಾಳ ಮಾಚಿದೇವ ಜಯಂತಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಾಳ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನ ವ್ಯಕ್ತಿಗಳ ಸಿದ್ದಾಂತ ಹಾಗೂ ತತ್ವಗಳನ್ನು ಯುವ ಪೀಳಿಗೆ ಕೇವಲ ಜಯಂತಿ ದಿನದಂದೇ ನೆನೆಯದೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಾಳ ಹೇಳಿದರು.ಶನಿವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಸತ್ಯದ ಮಾರ್ಗ ತೋರಿಸಲು ಮಡಿವಾಳ ಮಾಚಿದೇವರು ತಮ್ಮ ವಚನಗಳ ಮೂಲಕ ಕ್ರಾಂತಿ ನಡೆಸಿದರು ಎಂದು ತಿಳಿಸಿದರು.ಅರಸ ಮೇಲಲ್ಲ ಅಗಸ ಕೀಳಲ್ಲ ಎಲ್ಲರೂ ಸರಿಸಮಾನವಾಗಿ ಜೀವನ ಸಾಗಿಸಬೇಕೆಂಬ ಸಂದೇಶವನ್ನು ಮಡಿವಾಳ ಮಾಚಿದೇವರು ೧೨ನೇ ಶತಮಾನದಲ್ಲಿಯೇ ಸಾರಿದರು ಎಂದು ಹೇಳಿದರು.ಬಸವಣ್ಣರ ವಚನಗಳನ್ನು ಕಾಪಾಡಿ ಬೆಳಕಿಗೆ ತಂದ ಮಹಾನ್ ಶರಣರು ಮಡಿವಾಳ ಮಾಚಿದೇವರು. ಅವರ ಆದರ್ಶ, ತತ್ವಗಳು ಇಂದಿನ ಯುವಪೀಳಿಗೆಗಳಿಗೆ ಪ್ರಸ್ತುತವಾಗಿವೆ ಎಂದು ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್‌ಗೆ ಬಿಜೆಪಿ ಮುಖಂಡರು ಹೃದಯಪೂರ್ವಕವಾಗಿ ಸ್ವಾಗತಿಸಿದ್ದಾರೆ.ಸಂಸದ ರಮೇಶ ಜಿಗಜಿಣಗಿ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿ, ಕೇಂದ್ರ ಬಜೆಟ್ ಅತ್ಯುತ್ತಮವಾಗಿದೆ, ಯಾವ ವಲಯದಲ್ಲಿಯೂ ನಿರಾಸೆ ಇಲ್ಲ, ಕೃಷಿ, ಕೈಗಾರಿಕೆ, ಶಿಕ್ಷಣ, ಮಹಿಳಾ ಸಬಲೀಕರಣ ಎಲ್ಲದರಲ್ಲಿಯೂ ನಂಬರ್ ೧ ಆಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಸಕಾಲಕ್ಕೆ ಆರ್ಥಿಕ ನೆರವು ಒದಗಿಸುವುದು ದಿಟ್ಟ ಹೆಜ್ಜೆಯಾಗಿದೆ. ಶೈಕ್ಷಣಿಕ ಸಾಲದ ಮೇಲಿನ ತೆರಿಗೆ ಇಳಿಕೆ ಹೀಗೆ ಅನೇಕ ಕ್ರಮಗಳಿಂದ ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ.ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಪ್ರತಿಕ್ರಿಯೆ ನೀಡಿ, ಜನಸಾಮಾನ್ಯರಿಗೆ ಅನುಕೂಲಕರವಾದ ಬಜೆಟ್ ಆಗಿದೆ. ೧೨ ಲಕ್ಷ ರೂ.ಗಳವರೆಗಿನ ಆದಾಯಕ್ಕೆ ಶೂನ್ಯ ತೆರಿಗೆ ವಿಧಿಸುವ ನಿರ್ಧಾರ ಕೈಗೊಂಡಿರುವುದು ಪ್ರತಿಯೊಬ್ಬ ಮಧ್ಯಮ ವರ್ಗದ ಪ್ರಜೆಗೆ ದೊಡ್ಡ ಉಡುಗೊರೆ ದೊರಕಿದಂತಾಗಿದೆ, ಕೃಷಿಕ, ಕಾರ್ಮಿಕ ಹೀಗೆ ಎಲ್ಲ ವರ್ಗಗಳ ಹಿತರಕ್ಷಣೆ ಬಜೆಟ್‌ನಲ್ಲಿ ಅಡಕವಾಗಿದೆ ಎಂದು ಅವರು ಹೇಳಿದ್ದಾರೆ. ಮಾಜಿ…
ರಾಜ್ಯಕ್ಕೆ ನಿರಾಶೆ ಮೂಡಿಸಿದ ಕೇಂದ್ರ ಬಜೆಟ್ | ರಾಜಕೀಯ ಕಾರಣಕ್ಕೆ ಬಿಹಾರ, ಆಂಧ್ರ ಪ್ರದೇಶಕ್ಕೆ ಹೆಚ್ಚು ಅನುದಾನ | ದೂರದೃಷ್ಟಿ ಇಲ್ಲದ ಬಜೆಟ್ | ಸಿಎಂ ಸಿದ್ದರಾಮಯ್ಯ ಆಕ್ರೋಶ ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.ಶನಿವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ನರೇಂದ್ರ ಮೋದಿ ಸರ್ಕಾರ ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರೆಸಿದೆ. ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಮತ್ತು ದೂರದೃಷ್ಟಿ ಇಲ್ಲದ ಬಜೆಟ್ ಎಂದು ಹೇಳಿದರು.ಬಜೆಟ್ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ಅನೇಕ ಬೇಡಿಕೆಗಳನ್ನು ಇಟ್ಟಿತ್ತು. ನಮ್ಮ ಬೇಡಿಕೆಗಳು ಬೇಡಿಕೆಗಳಾಗಿಯೇ ಉಳಿದಿವೆ. ಒಂದೇ ಒಂದು ಬೇಡಿಕೆಯೂ ಈಡೇರಿಲ್ಲ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.ಬಜೆಟ್ ಗಾತ್ರವೂ ಕಡಿಮೆ ಆಗಿದೆ. ಕಳೆದ ಬಾರಿಗಿಂತ 1.04 ಲಕ್ಷ ಕೋಟಿ ಕಡಿಮೆ ಆಗಿದೆ. ತೆರಿಗೆ ಅವರು ಅಂದುಕೊಂಡಷ್ಟು ಸಂಗ್ರಹಿಸಿಲ್ಲ. ಕೇಂದ್ರ…
