Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಕ್ಯಾನ್ಸರ್ ಕುರಿತು ಮುಂದುವರೆದ ವೈದ್ಯಕೀಯ ಶಿಕ್ಷಣ ರಾಜ್ಯ ಮಟ್ಟದ ಉಪನ್ಯಾಸ ಕಾರ್ಯಕ್ರಮ ಫೆಬ್ರವರಿ 2 ರಂದು ರವಿವಾರ ನಗರದಲ್ಲಿ ನಡೆಯಲಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬೆಳಿಗ್ಗೆ 9.30ಕ್ಕೆ ಈ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬೆಳಿಗ್ಗೆ 10.30ಕ್ಕೆ ಉದ್ಘಾಟನೆ ನಡೆಯಲಿದ್ದು, ಸಿಕಂದರಾಬಾದಿನ ರೆನೊವಾ ಸೌಮ್ಯ ಕಾಂಪ್ರಿಹೆನ್ಸಿವ್ ಕ್ಯಾನ್ಸರ್ ಸೆಂಟರ್ ನ ಮೆಡಿಕಲ್ ಆಂಕಾಲಜಿ ವಿಭಾಗದ ನಿರ್ದೇಶಕ ಮತ್ತು ಮುಖ್ಯಸ್ಥ ಡಾ. ಪಿ. ಎಸ್. ದತ್ತಾತ್ರೆಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ಶಾಸ್ತ್ರ ವಿಭಾಗದ ಪ್ರೊ. ಆರ್. ಸಿ. ಬಿದರಿ, ಆಶಾ ಎಂ. ಪಾಟೀಲ ಉಪಸ್ಥಿತರಿರಲಿದ್ದಾರೆ.ಡಾ. ಸಿ. ಆರ್.…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯಾದ್ಯಂತ ಮೈಕ್ರೋ ಪೈನಾನ್ಸ್ಗಳು ನೀಡುತ್ತಿರುವ ಕಿರುಕುಳ ಕುರಿತು ಆರೋಪಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೊಂದು ದೂರು ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.ತಾಲೂಕಿನ ಮಾಡಬಾಳ ಗ್ರಾಮದ ನಿಂಬೆವ್ವ ದ್ಯಾವಪ್ಪ ದಿವಟಗಿ ಒಂದು ವರ್ಷದಿಂದ ಮೈಕ್ರೋ ಪೈನಾನ್ಸ್ಗಳಲ್ಲಿ ವ್ಯಯಕ್ತಿಕವಾಗಿ ಹಾಗೂ ಸಂಬಂಧಿಕರ ಹೆಸರಿನ ಮೇಲೆ ಸಾಲ ಪಡೆದಿರುವುದಾಗಿ ಖಚಿತ ಪಡಿಸಿದ್ದಾರೆ. ಆದರೆ ಸಾಲದ ಕಂತು ತುಂಬಲು ಹಾಗೂ ಸಾಲ ಮುಟ್ಟಿಸಲು ಇನ್ನೂ ಸ್ವಲ್ಪ ಸಮಯವಕಾಶ ನೀಡಿ ಎಂದು ಮೈಕ್ರೋ ಪೈನಾನ್ಸಿನ ಸಿಬ್ಬಂದಿಗಳಿಗೆ ಹಲವು ಬಾರಿ ಕೇಳಿಕೊಂಡಿದ್ದೇನೆ. ಆದರೆ ತಮ್ಮ ಮನಸ್ಸಿಗೆ ಬಂದಂತೆ ರಾತ್ರಿ ಹಗಲೆನ್ನದೇ ಅವಾಚ್ಯ ಶಬ್ದಗಳಿಂದ ಮಾನಸಿಕ ಕಿರುಕುಳ ನೀಡುತ್ತಿರುವುದು ಮಾತ್ರ ನಿಲ್ಲಿಸಿಲ್ಲ ಎಂದು ಆರೋಪಿಸಿ ೫ ಮೈಕ್ರೋ ಪೈನಾನ್ಸ್ಗಳ ಮೇಲೆ ಜ.೨೪ರಂದು ದೂರು ದಾಖಲಿಸಿದ್ದಾರೆ. ಆದರೆ ಪ್ರಕರಣ ಮಾತ್ರ ತಡವಾಗಿ ಬೆಳಕಿಗೆ ಬಂದಿದೆ.ಸಿಂದಗಿ ಶಾಖೆಗಳಾದ ಬಿ.ಎಸ್.ಎಸ್.ಮೈಕ್ರೋ ಪೈನಾನ್ಸ್, ನವಚೇತನ(ಈ.ಎಸ್.ಎ.ಎಪ್), ಪ್ರಗತಿ ಪೈನಾನ್ಸ್, ಭಾರತ ಪೈನಾನ್ಸ್ ಮತ್ತು ಪೈವ್ ಸ್ಟಾರ್ ಹೋಮ ಲೋನ ಬ್ಯಾಂಕಿನ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೭ನೆಯ ವೇತನ ಆಯೋಗದ ಲೆಕ್ಕಾಚಾರದ ಅನುಗುಣವಾಗಿ ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಸವಲತ್ತುಗಳನ್ನು ಒದಗಿಸಬೇಕು ಎಂದು ತಾಲೂಕು ಸಂಚಾಲಕ ಬಿ.ಎಸ್.ಬೂದಿಹಾಳ ಒತ್ತಾಯಿಸಿದರು.ಸಿಂದಗಿ ಪಟ್ಟಣದ ತಹಶೀಲ್ದಾರ್ ಕಛೇರಿ ಆವರಣದಲ್ಲಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಬೆಂಗಳೂರು, ತಾಲೂಕು ಘಟಕ ವತಿಯಿಂದ ಜು.೦೧,೨೦೨೨ ರಿಂದ ಜು.೩೧೨೦೨೪ರ ಅವಧಿಯಲ್ಲಿ ನಿವೃತ್ತರಾದ ನೌಕಕರಿಗೆ ಡಿಸಿಆರ್‌ಜಿ ಕಮ್ಯುಟೇಶನ್‌ಗಳಿಗೆ ರಜೆ ನಗದೀಕರಣ ಮೊತ್ತವನ್ನು ೭ನೆಯ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅಂಗೀರಕರಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿ ಮಾತನಾಡಿದ ಅವರು, ನಿವೃತ್ತ ನೌಕರರಿಗೆ ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ. ನಾವೇನೂ ಸಾಲ ಕೇಳ್ತಾ ಇಲ್ಲ. ಸುದೀರ್ಘ ವರ್ಷಗಳ ಕಾಲ ಕಾರ್ಯನಿರ್ವಹಿಸಿದಕ್ಕೆ ನ್ಯಾಯ ಕೊಡಬೇಕು. ನಿವೃತ್ತರಾದ ನಮಗೆ ಬೀದಿಗೆ ಇಳಿಯದಂತೆ ಮಾಡಬೇಡಿ ಎನ್ನುವುದು ಆಗ್ರಹವಾಗಿದೆ ಎಂದರು.ಈ ವೇಳೆ ನಿವೃತ್ತ ಶಿಕ್ಷಕ ಪ್ರಭುಲಿಂಗ ಲೋಣಿ ಮಾತನಾಡಿ, ಚಳಿಗಾಲ ಅಧಿವೇಶನದ ಸುವರ್ಣಸೌಧದ ಮುಂಭಾಗದಲ್ಲಿ ನಿವೃತ್ತ ನೌಕಕರು ಸಮಾವೇಶಗೊಂಡಾಗ ಸಚಿವ ಸತೀಶ ಜಾರಕಿಹೊಳಿ ಹಾಗೂ ಸರಕಾರದ ಕಾರ್ಯದರ್ಶಿ…
ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ರಿಂದ ಸನ್ಮಾನ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕ್ರೀಡೆಗಳು ಮಕ್ಕಳ ದೈಹಿಕ ಬೆಳವಣಿಗೆ ಜೊತೆಗೆ ಬುದ್ಧಿಮಟ್ಟವನ್ನು ಹೆಚ್ಚಿಸುತ್ತವೆ. ದೈಹಿಕವಾಗಿ, ಮಾನಸಿಕವಾಗಿ, ಆರೋಗ್ಯಕರ ಸ್ಥಿರವಾದ ದೇಹ ಇದ್ದಲ್ಲಿ ಮಕ್ಕಳು ಯಶಸ್ಸು ಕಾಣಲು ಸಾಧ್ಯ ಎಂದು ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಏಕಲವ್ಯ ಸ್ಕೆಟಿಂಗ್ ಅಕಾಡಮಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಸ್ಕೆಟಿಂಗ್ ಸ್ಪರ್ದೆಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.ಸಧ್ಯದ ಕಾಲಘಟ್ಟದಲ್ಲಿ ಬಹುತೇಕ ಪಾಲಕರು ತಮ್ಮ ಮಕ್ಕಳನ್ನು ಅಂಕಗಳ ಹಿಂದೆ ಓಡುವಂತೆ ಮಾಡಿದ್ದಾರೆ. ದೈಹಿಕ ಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಆಟವಾಡುವ ಮಕ್ಕಳನ್ನು ಗದರಿಸಿ ಪುಸ್ತಕ ನೀಡುತ್ತಿದ್ದಾರೆ. ಇದರಿಂದ ಮಕ್ಕಳಲ್ಲಿರುವ ಶಕ್ತಿ ಖರ್ಚಾಗುತ್ತಿಲ್ಲ. ಮಕ್ಕಳಲ್ಲಿರುವ ದೈಹಿಕ ಮತ್ತು ಮಾನಸಿಕ ಶಕ್ತಿ ಖರ್ಚಾದಾಗ ಮಾತ್ರ ಮನಸ್ಸು ಶಾಂತವಾಗುತ್ತದೆ. ಮನಸ್ಸು ಶಾಂತವಾದಾಗ ಮಕ್ಕಳಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಹಾಗಾಗಿ ಎಲ್ಲ ಪಾಲಕರು ತಮ್ಮ…
ಕೆ.ಆರ್.ಎಸ್.ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಬೇಸರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕ್ರೈಸ್ ವಸತಿ ನಿಲಯಗಳಲ್ಲಿ ಹಾಸ್ಟೇಲ್ & ವಸತಿ ಶಾಲಾ ಹೊರಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಅಹೋರಾತ್ರಿ ಧರಣಿಯನ್ನು ಕರ್ನಾಟಕ ರಾಜ್ಯ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಈ ಅಹೋರಾತ್ರಿ ಹೋರಾಟವು ೧೨ ನೇ ದಿನಕ್ಕೆ ಮುಂದುವರೆದಿದೆ.ಈ ಅಹೋರಾತ್ರಿ ಹೋರಾಟಕ್ಕೆ ಕೆ.ಆರ್.ಎಸ್.ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ಮಾತನಾಡಿ, ಹಲವಾರು ದಿನಗಳಿಂದ ಇವರ ಬೇಡಿಕೆಗಳನ್ನು ಈಡೇರಿಸದೇ ಇರುವದು ದುರದೃಷ್ಟಕರವಾಗಿದೆ. ಪ್ರತಿಸಲವೂ ವೇತನ ಬಟವಡೆ ಮಾಡುವಂತೆ ಧರಣಿ ಕುಳಿತುಕೊಂಡು ವೇತನ ಪಡೆಯುವದು ಸದರಿ ಹಾಸ್ಟೇಲ್ ನೌಕರರಿಗೆ ಬಿಡದೇ ಬಿಡದೇ ಇರುವ ಗಂಡನನ್ನು ಕಟ್ಟಿಕೊಂಡಂತೆ ಆಗಿದೆ. ಪ್ರತಿಸಲವೂ ವೇತನ ಪಡೆಯಲು ಧರಣಿ ಕುಳಿತುಕೊಳ್ಳುವದು, ಹಲಗೆ ಹಚ್ಚಿ ಹೋರಾಟ ಮಾಡುವದು, ಅಹೋರಾತ್ರಿ ಹೊರಾಟ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಇಲ್ಲಿಯ ಚಿಮ್ಮಲಗಿ ಭಾಗ ೧ ಎ ಗ್ರಾಮದ ಭಾವಸಾರ ಕ್ಷತ್ರಿಯ ಸಮಾಜದ ಅಂಬಾಭವಾನಿ ದೇವಿಯ ಜಾತ್ರೆ ಫೆ ೨ ಭಾನುವಾರ ಜರುಗಲಿದೆ.ಆ ದಿನ ಬೆಳಿಗ್ಗೆ ೬ ಕ್ಕೆ ಅಂಬಾಭವಾನಿ ದೇವಿಗೆ ವಿಶೇಷ ಆರತಿ ಪೂಜೆ ಜರುಗಲಿದೆ.ನಂತರ ಚಂದ್ರಮ್ಮ ದೇವಸ್ಥಾನದ ಕೃಷ್ಣಾ ನದಿಯಿಂದ ಅಂಬಾಭವಾನಿ ದೇವಸ್ಥಾನದವರೆಗೆ ೨೦೧ ಕುಂಭಗಳ ಮೆರವಣಿಗೆಯೊಂದಿಗೆ ಪಲ್ಲಕ್ಕಿ ಉತ್ಸವ ಜರುಗಲಿದೆ.ನಂತರ ದೇವರಿಗೆ ಅಭಿಷೇಕ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.ಮಧ್ಯಾಹ್ನ ೧ ಕ್ಕೆ ಸನ್ಮಾನ ಸಮಾರಂಭ ಜರುಗಲಿದ್ದು, ಚಿಮ್ಮಲಗಿಯ ಅರಳೆಲೆ ಕಟ್ಟಿಮನಿ ಹಿರೇಮಠದ ಶ್ರೀ ಸಿದ್ಧರೇಣುಕ ಸ್ವಾಮೀಜಿ, ಸಚಿವ ಶಿವಾನಂದ ಪಾಟೀಲ, ವಿಜಯಪುರ ದ ಮಾಜಿ ಉಪಮೇಯರ್ ರಾಜೇಶ ದೇವಗಿರಿ ಆಗಮಿಸಲಿದ್ದಾರೆ. ನಂತರ ಅನ್ನ ಸಂತರ್ಪಣೆ ನಡೆಯಲಿದೆ.ಸಂಜೆ ೭ ಕ್ಕೆ ಫಂಡರಪುರದ ಪ್ರಭಾಕರ ಬೋಧಲೆ ಮಹಾರಾಜರ ಪ್ರವಚನ ಕಾರ್ಯಕ್ರಮ ಜರುಗಲಿದೆ ಎಂದು ದೇವಸ್ಥಾನ ಸಮಿತಿಯ ಪ್ರಕಟಣೆ ತಿಳಿಸಿದೆ.
ಕಾಲುವೆಗೆ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಪರಿಹಾರ ನೀಡಲು ರೈತಸಂಘ ಆಗ್ರಹ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕಾಲುವೆಗಳ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡ ಜಮೀನುಗಳ ರೈತರಿಗೆ ಪರಿಹಾರ ಕೊಟ್ಟ ನಂತರ ಕಾಲುವೆ ನಿರ್ಮಾಣ ಕಾರ್ಯ ಪ್ರಾರಂಬಿಸಬೇಕು ಇಲ್ಲದಿದ್ದರೆ ಪರಿಹಾರ ಕೊಡದೆ ಪ್ರಾರಂಬಿಸಿದರೆ ಸಂಬಂಧಿಸಿದ ಕಛೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಬೆಕಾಗುತ್ತದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಇಲಾಖೆ ಅಧಿಕಾರಿಗಳಿಗಳಿಗೆ ಎಚ್ಚರಿಕೆ ನೀಡಿದರು.ಗುರುವಾರದಂದು ರಬಿನಾಳ ಗ್ರಾಮದ ರೈತರು ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಛೇರಿಗೆ ತೆರಳಿ ವಿಶೇಷ ಭೂಸ್ವಾಧೀನಾಧಿಕಾರಿ ಆದ ಶಿವಾನಂದ ಸಾಗರ ಇವರಿಗೆ ಮನವಿ ಸಲ್ಲಿಸಲಾಯಿತುಈ ಸಂದರ್ಭದಲ್ಲಿ ಅರವಿಂದ ಕುಲಕರ್ಣಿ ಮಾತನಾಡಿ, ರಬಿನಾಳ ಗ್ರಾಮ ಮತ್ತು ಇನ್ನುಳಿದ ಹಳ್ಳಿಗಳಲ್ಲಿ ಸ್ವಾಧೀನಪಡಿಸಿಕೊಂಡ ಕಸಂ ನಂ: ೬೧,೨೬೩,೧೩೮/೧,೧೩೮/೫,೧೩೮/೩,೧೩೮/೨,೧೨೪,೨೪೭,೨೫೫/೧ ,೧೬೫/೧ ,೧೩೪/೧,೨೪೬/೧/೨/೩/೪/೫,೧೩೮/೪ ಈ ಜಮೀನುಗಳನ್ನು ಕ್ರಷ್ಣಾ ಮೇಲ್ದಂಡೆ ಯೋಜನೆ ಮೂರನೇಯ ಹಂತದ ಮುಳವಾಡ ಏತ ನೀರಾವರಿ ಯೋಜನೆಯಡಿಯಲ್ಲಿ ಬರುವ ಬಸವನ ಬಾಗೇವಾಡಿ ವಿತರಣಾ ಕಾಲುವೆ ೧೫ ಲ್ಯಾಟರಲ್ ೧ ಹಾಗೂ ೨…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಹುತಾತ್ಮ ಯೋಧ ಯಾವಾಗಲೂ ಅಜರಾಮರ ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು.ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ ಹೋರಾಟಗಾರರು ಹಾಗೂ ಯೋಧರನ್ನು ಸ್ಮರಣೆ ಮಾಡುವ ದಿನವೇ ಹುತಾತ್ಮರ ದಿನ. ಅಲ್ಲದೆ ಗಾಂಧೀಜಿಯವರ ಸ್ಮೃತಿ ದಿವಸವೂ ಆಗಿದೆ. ನಮ್ಮ ದೇಶ ಸ್ವಾತಂತ್ರ‍್ಯ ಪಡೆಯಲು ಸಾಕಷ್ಟು ತ್ಯಾಗ ಬಲಿದಾನಗಳು ನಡೆದಿವೆ. ಭಾರತದ ಸ್ವಾತಂತ್ರ‍್ಯದ ಹೋರಾಟದ ಇತಿಹಾಸವನ್ನು ನಾವು ಅರಿತಿರಬೇಕು. ೧೮೫೭ರ ಪ್ರಥಮ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಹುತಾತ್ಮ ಮಂಗಲ ಪಾಂಡೆಯಿಂದ ಹಿಡಿದು ಸ್ವಾತಂತ್ರ‍್ಯ ಬರುವವರೆಗಿನ ಅವಧಿಯಲ್ಲಿ ಸಾಕಷ್ಟು ಜನ ದೇಶ ಭಕ್ತರು ಸ್ವಾತಂತ್ರ‍್ಯಕ್ಕಾಗಿಯೆ ಪ್ರಾಣಾರ್ಪಣೆ ಮಾಡಿದ್ದಾರೆ. ಬ್ರಿಟಿಷರ ಕೈಯಿಂದ ಭಾರತವನ್ನು ಸ್ವಾತಂತ್ರ‍್ಯಗೊಳಿಸಲು ಕೆಲ ಹೋರಾಟಗಾರರು ಕ್ರಾಂತಿಕಾರಿ ಮಾರ್ಗವನ್ನು ಅನುಸರಿಸಿದ್ದರು. ಆದರೆ ಮಹಾತ್ಮ ಗಾಂಧೀಜಿ ಅಹಿಂಸಾ ಮಾರ್ಗವನ್ನು ಅನುಸರಿಸಿ, ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ಬ್ರಿಟಿಷರಲ್ಲಿ ನಡುಕ ಹುಟ್ಟಿಸಿದ್ದರು. ಹೀಗೆ ಭಾರತಕ್ಕೆ ಸ್ವಾತಂತ್ರ‍್ಯ ದೊರಕಿಸಿಕೊಡುವಲ್ಲಿ ಗಾಂಧೀಜಿಯವರ ಪಾತ್ರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾರತದ ಮಣ್ಣಿನಲ್ಲಿ ಜನಿಸಿದ್ದರೂ ಸಹಿತ ಅವರ ತತ್ವ – ಸಿದ್ಧಾಂತಗಳಿಂದ ಪ್ರತಿಪಾದಿಸಿದ ಮೌಲ್ಯಗಳಿಂದ ಅವರು ಇಡೀ ವಿಶ್ವದ ನಾಯಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ, ಭೂಬಾಲನ್ ಹೇಳಿದರು.ನಗರದ ಮಹಾತ್ಮ ಗಾಂಧಿ ಭವನದಲ್ಲಿ (ಹುತಾತ್ಮರ ದಿನಾಚರಣೆ) ‘ಸರ್ವೋದಯ ದಿನ’ ದ ನಿಮಿತ್ಯ ಗುರುವಾರ ಜರುಗಿದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಬಾಪೂಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಅಮೆರಿಕೆಯ ಡಾಕ್ಟರ್ ಮಾರ್ಟಿನ್ ಲೂಥರ್ ಕಿಂಗ್ ಜ್ಯುನಿಯರ್, ಸೌತ್ ಆಫ್ರಿಕೆಯ ನೆಲ್ಸನ್ ಮಂಡೇಲಾ, ಬರ್ಮಾ ದೇಶದ ಆಂಗ್ ಸಾನ್ ಸೂಕಿ ಹೀಗೆ ಜಗತ್ತಿನ ನೂರಾರು ನಾಯಕರಿಗೆ ಸ್ಪೂರ್ತಿಯಾಗಿದ್ದಾರೆ ಎಂದರು.ಸೈನಿಕ ಶಾಲೆಯ ಪ್ರಾಂಶುಪಾಲರಾದ (ಗ್ರೂಪ್ ಕ್ಯಾಪ್ಟನ್) ಪ್ರತಿಭಾ ಬಿಸ್ಟ್ ಅವರು ಮಾತನಾಡಿ, ಕೆಟ್ಟದ್ದನ್ನು ನೋಡಬೇಡ, ಕೆಟ್ಟದ್ದನ್ನು ಕೇಳಬೇಡ, ಕೆಟ್ಟದ್ದನ್ನು ಮಾತಾಡಬೇಡ ಎನ್ನುವ ತತ್ವದ ಮಹಾತ್ಮ ಗಾಂಧೀಜಿಯವರ ಮೂರು ಮಂಗಗಳ ಕಥೆಗಳನ್ನು ಮಕ್ಕಳಿಗೆ ಹೇಳಿದರು.ಚರ್ಚಿಲ್, ಮೌಂಟ್ ಬ್ಯಾಟನ್, ವಿಲ್ಲಿಂಗ್ ಡನ್, ಸ್ಮಟ್ಸ್ ಹೀಗೆ ರಾಜಕೀಯ ಶತ್ರುಗಳು ಎದೆಯಲ್ಲೂ ಸ್ನೇಹದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀಜರ ಸಮಾಜ ಬೆಂಗಳೂರು, ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠ ಕಲ್ಬುರ್ಗಿ, ಸಹಯೋಗದಲ್ಲಿ ಫೆಬ್ರವರಿ 1 ಮತ್ತು 2 ರಂದು ರಾಜ್ಯ ಮಟ್ಟದ ಮೂರನೇ ಬೃಹತ್ ಸಮಾವೇಶವನ್ನು, ವಿಶ್ವಗುರು ಬಸವಣ್ಣನವರ ಐಕ್ಯ ಸ್ಥಳ ಕೂಡಲಸಂಗಮದ ಸಭಾಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ರಾಜ್ಯಾಧ್ಯಕ್ಷ ಡಾ. ಎಸ್ ಎಸ್ ಪಾಟೀಲ್ ಕಡೂರ ಹೇಳಿದರು.ವಿಜಯಪುರ ನಗರದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮೊದಲ ದಿನ ವಿಚಾರ ಸಂಕೀರಣ, ಗ್ರಂಥಗಳ ಲೋಕಾರ್ಪಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರ ಸನ್ಮಾನ ನಡೆಯಲಿದೆ. ವಿಶೇಷವಾಗಿ ಹಂಡೆಸಿರಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಸಮಾವೇಶದಲ್ಲಿ ದಿವ್ಯ ಸಾನಿಧ್ಯವನ್ನು ನಿಡುಮಾಮಿಡಿ ಜಗದ್ಗುರುಗಳಾದ ಶ್ರೀ ವೀರಭದ್ರ ಚನ್ನಮಲ್ಲ ದೇಸಿಕೇಂದ್ರ ಮಹಾಸ್ವಾಮಿಗಳು, ಕೊಟ್ಟೂರು ಸಂಸ್ಥಾನ ಮಠದ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ತೋಂಟದಾರ್ಯ ಸಂಸ್ಥಾನ ಮಠದ ಮ.ನಿ.ಪ್ರ. ಜಗದ್ಗುರು ಡಾಕ್ಟರ್ ಸಿದ್ದರಾಮಯ್ಯ ಸ್ವಾಮೀಜಿಗಳು ಸೇರಿದಂತೆ ವಿವಿಧ ಮಠಾಧೀಶರು ವಹಿಸಲಿದ್ದಾರೆ ಎಂದರು.ಬೃಹತ್ ಕೈಗಾರಿಕೆ ಸಚಿವರಾದ ಎಂಬಿ ಪಾಟೀಲ್ ಕಾರ್ಯಕ್ರಮ ಉದ್ಘಾಟನೆ ಮಾಡುವರು.…
