Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರದಲ್ಲಿ ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಸಂಪಾದಕರ ಸಂಘದ ರಾಜ್ಯ ಸಮಿತಿ ಸಭೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಸಂಪಾದಕರ ಸಂಘದ ರಾಜ್ಯ ಸಮಿತಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ವಿಜಯಪುರದಲ್ಲಿ ರಾಜ್ಯಾಧ್ಯಕ್ಷ ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಮಂಜುನಾಥ ಅವರು, ಸಂಘದ ಬೆಳವಣಿಗೆ, ಇದುವರೆಗೆ ಸಂಘ ನಡೆದು ಬಂದಿರುವ ಹಾದಿ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ವಿವರಿಸಿದರು.ರಾಜ್ಯದ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಪಾದಕರ ಹಿತಾಸಕ್ತಿಯನ್ನು ಕಾಪಾಡುವ ಆಶಾದಾಯಕ ಸಂಘವಾಗಿ ಸಂಘವು ಬೆಳೆದಿದ್ದು, ಎಲ್ಲ ಸಂಪಾದಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಸಂಘವನ್ನು ಇನ್ನಷ್ಟು ಬಲಪಡಿಸಬೇಕೆಂದು ಕರೆ ನೀಡಿದರು.ಪ್ರತಿಯೊಂದು ಜಿಲ್ಲೆಯಲ್ಲಿ ಶೀಘ್ರದಲ್ಲೇ ಜಿಲ್ಲಾ ಘಟಕಗಳನ್ನು ರಚಿಸಿ ಸಂಘಟನೆಯನ್ನು ತಳಮಟ್ಟದಿಂದ ಸದೃಢಗೊಳಿಸುವಂತೆ ಮನವಿ ಮಾಡಿದರು.ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಅವರು ಸಭೆಯ ಉದ್ದೇಶ ಹಾಗೂ ಸಂಘದ ಚಟುವಟಿಕೆಗಳ ಕುರಿತು ಮಾಹಿತಿ ನೀಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ…
ಜು.೨೮ ರಿಂದ ನ.೨೦ ರವರೆಗೆ ಕಾಲುವೆಗಳಿಗೆ ನೀರು | ೬೬ ದಿನ ನೀರು, ೫೦ ದಿನ ಬಂದ್ | ವಾರಾಬಂಧಿ ಪದ್ಧತಿ ಜಾರಿ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಮುಂಗಾರು ಹಂಗಾಮಿನ ನೀರಾವರಿಗಾಗಿ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಜು.೨೮ರಿಂದ ನ.೨೦ರವರೆಗೆ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.ನೀರಾವರಿ ಸಲಹಾ ಸಮಿತಿ (ಐಸಿಸಿ) ಪೂರ್ಣ ಪ್ರಮಾಣದಲ್ಲಿ ರಚನೆಯಾಗದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವರ ಅನುಮೋದನೆಯ ಮೇರೆಗೆ ಐಸಿಸಿ ಸದಸ್ಯ ಕಾರ್ಯದರ್ಶಿಯೂ ಆಗಿರುವ ಭೀಮರಾಯನಗುಡಿ ಕಾಲುವೆ ವಲಯದ ಮುಖ್ಯ ಎಂಜಿನಿಯರ್ ಅಭಿಮನ್ಯು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.ಆಲಮಟ್ಟಿಯಲ್ಲಿ ೯೭.೨೭ ಟಿಎಂಸಿ ಮತ್ತು ನಾರಾಯಣಪುರದಲ್ಲಿ ೧೯.೩೨ ಟಿಎಂಸಿ ಸೇರಿ ಒಟ್ಟು ೧೧೫.೫೯ ಟಿಎಂಸಿ ಅಡಿ ಬಳಕೆಯೋಗ್ಯ ನೀರು ಸಂಗ್ರಹವಿದೆ. ಆಲಮಟ್ಟಿಗೆ ೭೩,೪೬೧ ಕ್ಯೂಸೆಕ್ ಒಳಹರಿವು ಇದೆ. ನೀರು ಬಿಡುವ ವೇಳಾಪಟ್ಟಿ ಜು.೨೮ರಿಂದ ಆ.೧೦ರವರೆಗೆ ೧೪ ದಿನ ನೀರು ಹರಿಸಲಾಗುವುದು. ನಂತರ ೧೦ ದಿನ ಬಂದ್ ಮತ್ತು ೧೪ ದಿನ ನೀರು ಹರಿಸುವ ವಾರಾಬಂಧಿ ಪದ್ಧತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಕೋಟಾ ತಾಲೂಕಿನ ೧೧೦ಕೆ.ವಿ. ಟಕ್ಕಳಕಿ-ಕನಮಡಿ ಮಾರ್ಗದಿಂದ ಪ್ರಸ್ತಾವಿತ ೧೧೦ ಕೆ.ವಿ. ಘೋಣಸಗಿ ಉಪಕೇಂದ್ರದಲ್ಲಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುತ್ತಿದ್ದು,೧೧೦ ಕೆ.ವಿ. ಕನಮಡಿ ಉಪಕೇಂದ್ರದಿಂದ ಹೊರಹೋಗುವ ಎಲ್ಲಾ ೧೧ ಕೆ.ವಿ. ಫೀಡರ್‌ಗಳಲ್ಲಿಜು. ೨೯ರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಗ್ರಾಹಕರು ಹೆಸ್ಕಾಂದೊಂದಿಗೆ ಸಹಕರಿಸುವಂತೆ ಹೆಸ್ಕಾಂನ ವಿಭಾಗೀಯ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸ್ಟೇಟ್ ಬೋರ್ಡ್, ಸಿ.ಬಿ.ಎಸ್.ಇ, ಐ.ಸಿ.ಎಸ್.ಇ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಗಳಿಸಿದ ಕರ್ನಾಟಕ ಮೂಲದ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಅರ್ಜಿ ನಮೂನೆ ಪಡೆದುಕೊಂಡು, ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್೩೧ ರೊಳಗಾಗಿ ಮೂರು ಪ್ರತಿಗಳಲ್ಲಿ ಸಲ್ಲಿಸುವುದು.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ, ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಹಾಗೂ ಪುಸ್ತಕ ಅನುದಾನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಪುಸ್ತಕ ಅನುದಾನ (ಕಲ್ಯಾಣ ನಿಧಿಯಿಂದ): ೧ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ವ್ಯಾಸಂಗ ಮಾಡುತ್ತಿರುವ, ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ನೀಡಲಾಗುತ್ತದೆ.ಶಿಷ್ಯವೇತನ (ವಿಶೇಷ ನಿಧಿಯಿಂದ): ಪದವಿ, ಡಿಪ್ಲೋಮಾ, ಜಿ.ಒ.ಸಿ ಹಾಗೂ ವೃತ್ತಿಪರ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಮಂಜೂರು ಮಾಡಲಾಗುತ್ತದೆ.ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ನವೆಂಬರ್.೩೦ ರೊಳಗಾಗಿ ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ವಿಜಯಪುರ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಸಾಲಿಗೆ ಕರ್ನಾಟಕದ ಮೂಲ ನಿವಾಸಿಯಾಗಿರುವ ಮಿಲಿಟರಿ ಪಿಂಚಣಿದಾರರು ಹಾಗೂ ಮಾಜಿ ಸೈನಿಕರ (ಅಧಿಕಾರಿಗಳನ್ನು ಹೊರತುಪಡಿಸಿ) ಮಕ್ಕಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ೧ನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೊಮಾ ಹಾಗೂ ವೃತ್ತಿಪರ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.ಅರ್ಜಿ ನಮೂನೆಗಳನ್ನು ವಿಜಯಪುರ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದುಕೊಳ್ಳಬಹುದು.ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಕ್ಟೊಬರ್ ೩೧ ಕೊನೆಯ ದಿನವಾಗಿದೆ. ವೃತ್ತಿಪರ ಪದವಿ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ನವೆಂಬರ್ ೩೦.ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ವಿಜಯಪುರ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆ. ೧ ರಂದು ನಗರದ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಡೆಯಲಿರುವ ವ್ಯಸನಮುಕ್ತ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ…
ಗುರು ವಿರಕ್ತ ಮಠಗಳಲ್ಲಿ ಸ್ಥಾಪಿಸಿರುವ ಮೂರ್ತಿಗಳು | ನಂದಿ ಕೂಗು ಅಭಿಯಾನದ ರುವಾರಿ ಬಸವರಾಜ ಬಿರಾದಾರ ಅಭಿಮತ ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ಗುರು ವಿರಕ್ತ ಮಠಗಳು ನಂದಿ ಕೃಷಿಕರಿಂದ ಬೆಳೆಯುತ್ತಾ ಬಂದ ನಾಗರಿಕ ಸಮಾಜದಿಂದ ಜನ್ಮ ತಾಳಿವೆ ಎಂಬುದು ಇತಿಹಾಸದಿಂದ ಸ್ಪಷ್ಟವಾಗಿ ತಿಳಿಯುತ್ತದೆ. ನಂದಿ ಕೃಷಿಕರ ಭಾವೈಕ್ಯತೆಯ ಸಂಕೇತವಾಗಿ ಗುರು ವಿರಕ್ತ ಮಠಗಳಲ್ಲಿ ಸ್ಥಾಪಿಸಿರುವ ನಂದಿ ಮೂರ್ತಿಗಳು ನಾಗರಿಕತೆ ವಿಕಾಸವಾದ ಇತಿಹಾಸವನ್ನು ತಿಳಿಸುತ್ತದೆ ಎಂದು ನಂದಿ ಕೂಗು ಅಭಿಯಾನದ ರುವಾರಿ ಬಸವರಾಜ ಎನ್ ಬಿರಾದಾರ ತಿಳಿಸಿದರು.ಯಡ್ರಾಮಿಯ ಶ್ರೀ ಮುರುಘೆಂದ್ರ ಶಿವಯೋಗಿ ವಿರಕ್ತಮಠದಲ್ಲಿ ಲಿಂಗೈಕ್ಯ ಶ್ರೀ ಸಿದ್ಧರಾಮ ಮಹಾಸ್ವಾಮಿಗಳ 5ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮ ಉದ್ಧೇಶಿಸಿ ಅವರು ಮಾತನಾಡಿದರು. ನಂದಿ ಸಂಪತ್ತು ನಾಶವಾದಂತೆ ವಿಶ್ವ ಮಟ್ಟದಲ್ಲಿ ಮಣ್ಣು ಹಾಗೂ ಮಾನವರು ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಂಡು ವಿಶ್ವಕ್ಕೆ ಮಾರ್ಗದರ್ಶನ ನೀಡುವ ಶಕ್ತಿ ಬಸವ ನಾಡಿನ ಪೂಜ್ಯರಿಗಿದೆ. ಶ್ರೀ ಸಿದ್ಧೇಶ್ವರ ಶ್ರೀಗಳ ಪ್ರೇರಣೆಯಿಂದ ಬಿಜ್ಜರಗಿ ಗ್ರಾಮದಿಂದ ಪ್ನಂರಾರಂಭವಾದ ನಂದಿ ಕೂಗು ಅಭಿಯಾನ ಕಳೆದ 3…
ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ ಸಂಘರ್ಷಕ್ಕೆ ತೆರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತೂಕದಲ್ಲಿ ಮೋಸ, ಆಕ್ಷನ್ ನೆಪದಲ್ಲಿ ತೂರಾಟ ನಡೆಸಿ ಅನಾವಶ್ಯಕವಾಗಿ ರೈತರ ಉತ್ಪನ್ನ ಹಾಳಾಗುವುದನ್ನು ತಪ್ಪಿಸಲು ಹಾಗೂ ಪಾರದರ್ಶಕ ವಹಿವಾಟಿಗಾಗಿ ಆನ್ ಲೈನ್ ಟ್ರೇಡಿಂಗ್ ಮಾರುಕಟ್ಟೆಗೆ ಮೊದಲ ಆದ್ಯತೆ ನೀಡಬೇಕು. ಹೀಗಾಗಿ ಕಡ್ಡಾಯವಾಗಿ ವಾರದಲ್ಲಿ ಎರಡು ಭಾರಿ ಆನಲೈನ್ ಟ್ರೇಡಿಂಗ್ ಮಾರುಕಟ್ಟೆಯಲ್ಲೇ ಒಣ ದ್ರಾಕ್ಷಿ ವಹಿವಾಟು ನಡೆಸಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಎಪಿಎಂಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ವಿಜಯಪುರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಮಂಗಳವಾರ ಎಪಿಎಂಸಿ ಆಡಳಿತಾಧಿಕಾರಿ ಮತ್ತು ಕಾರ್ಯದರ್ಶಿಗಳ ಸಮ್ಮುಖದಲ್ಲಿ ನಡೆಸಿದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ದ್ರಾಕ್ಷಿ ಬೆಳೆಗಾರರ ಅನುಕೂಲಕ್ಕಾಗಿ ನಗರದಲ್ಲಿ ಆನ್ ಲೈನ್ ಮಾರುಕಟ್ಟೆ ವ್ಯವಸ್ಥೆ ಮಾಡಲಾಗಿದ್ದು, ಅದಕ್ಕೆ ಹೆಚ್ಚಿನ ಆದ್ಯತೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.ತಾತ್ಕಾಲಿಕವಾಗಿ ವಾರದಲ್ಲಿ ಒಮ್ಮೆ ಮಾತ್ರ ಆಫ್ ಲೈನ್ ಮೂಲಕ ವಹಿವಾಟು ನಡೆಯಲಿ. ಆದರೆ, ಕಡ್ಡಾಯವಾಗಿ ಆನಲೈನ್ ಟ್ರೇಡಿಂಗ್ ಮಾರುಕಟ್ಟೆ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನಲ್ಲಿ ಹರಿಯುವ ಭೀಮಾ ನದಿಗೆ ವೀರಭಟಕರ ಜಲಾಶಯದಿಂದ ೪೦ ಸಾವಿರ ಕ್ಯೂಸೆಕ್ ಮತ್ತು ಉಜನಿ ಜಲಾಶಯದಿಂದ ೨೫ ಕ್ಯೂಸೆಕ್ ಹೀಗೆ ಒಟ್ಟು ೬೫ ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ ಎಂದು ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದ್ದಾರೆ.ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟçದ ವೀರಭಟಕರ ಜಲಾಶಯ ಮತ್ತು ಭೀಮಾ ನದಿಯ ಪಾತ್ರದಲ್ಲಿ ಮಳೆಯು ಹೆಚ್ಚಾಗುತ್ತಿದ್ದು ಜಲಾಶಯ ಪೂರ್ತಿಯಾಗಿರುವ ಹಿನ್ನೆಲೆಯಲ್ಲಿ ನೀರನ್ನು ಹರಿಯ ಬಿಡಲಾಗಿದೆ. ನೀರಾ ನದಿಯ ವೀರಭಟಕರ ಜಲಾಶಯದಿಂದ ಮತ್ತು ಭೀಮಾ ನದಿಯ ಉಜನಿ ಜಲಾಶಯದಿಂದ ಮಳೆಯಿಂದ ಹೆಚ್ಚಾದ ನೀರನ್ನು ಮಹಾರಾಷ್ಟçದ ಪಂಡರಪೂರ ಹತ್ತಿರದ ಸಂಗಮದಲ್ಲಿ ಸೇರಿ ಅಲ್ಲಿಂದ ಪಂಡರಪೂರ ಮಾರ್ಗವಾಗಿ ಕರ್ನಾಟಕದಲ್ಲಿರುವ ನದಿ ಪಾತ್ರಕ್ಕೆ ನದಿಯ ಮೂಲಕ ಕರ್ನಾಟಕದಲ್ಲಿ ಹರಿಯುವ ಭೀಮಾ ನದಿಗೆ ಬಿಟ್ಟಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಕೋರಿದ್ದಾರೆ.ಬಹುತೇಕ ಇಂಡಿ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಭೀಮೆಯಲ್ಲಿ ನೀರು ಹರಿಯುತ್ತಿದೆ. ಎಂದು ಗುರುಸ್ವಾಮಿಯವರು ತಿಳಿಸಿದ್ದಾರೆ.ಈ ಮಧ್ಯೆ ತಹಸೀಲ್ದಾರ ನಾಂಗೇಂದ್ರ ಕೋಳಶೆಟ್ಟಿಯವರು ಮತ್ತು ತಾ.ಪಂ ಇಒ ಮಹಾದೇವಪ್ಪ…
