Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಟ್ಟುಕಿವುಡುತನದಿಂದ ಬಳಲುವ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ವರದಾನವಾಗಿದ್ದು, ಇದರಿಂದ ಬಡ ಮತ್ತು ಕೂಲಿಕಾರ್ಮಿಕರ ಮಕ್ಕಳಿಗೆ ಸಾಕಷ್ಟು ಅನುಕೂಲಾವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯ ಟ್ರಾಮಾ ಸೆಂಟರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುಟ್ಟುಕಿವುಡುತನದಿಂದ ಬಳಲುತ್ತಿದ್ದ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ನಡೆಸಿ ಕಿವಿ ಕೇಳಿಸುವಂತೆ ಮಾಡಲು ಸಾಫ್ಟವೇರ್ ಅಳವಡಿಸಲಾಗಿದೆ. ಈ ಧ್ವನಿ ಆಲಿಸುವ ತಂತ್ರಜ್ಞಾನದ ಸ್ವಿಚ್ ಆನ್(Switch on) ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗೆ ಸುಮಾರು ರೂ. 7.50 ಲಕ್ಷದಿಂದ ರೂ. 15 ಲಕ್ಷದ ವರೆಗೆ ವೆಚ್ಚ ತಗಲುತ್ತದೆ. ಆದರೆ, ಸರಕಾರದ ಯೋಜನೆಯಡಿ ಈ ಸೌಲಭ್ಯವನ್ನು ಪಡೆಯುವ ಅವಕಾಶವಿದ್ದು, ಇಂಥ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಲು ಬಿ.ಎಲ್.ಡಿ.ಈ ಆಸ್ಪತ್ರೆಯಲ್ಲಿ ಸಕಲ ಸೌಲಭ್ಯಗಳು ಲಭ್ಯವಿವೆ. ಇಲ್ಲಿನ ವೈದ್ಯರು ಇದೇ ಮೊದಲ ಬಾರಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ವಿಜಯಪುರ ಮತ್ತು ಸುತ್ತಮುತ್ತಲಿನ…
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: “ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳ ಸಬಲೀಕರಣ ಬಹು ಮುಖ್ಯ” ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ತ ಗುಣಾರಿ ಹೇಳಿದರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ಸಮಗ್ರ ಪ್ರಯತ್ನಗಳು ನಡೆದಿವೆ. ಈ ನಿಟ್ಟಿನಲ್ಲಿ “ಪಿ.ಸಿ. & ಪಿ.ಎನ್.ಡಿ.ಟಿ ಕಾಯ್ದೆ ೧೯೯೪” ಅನುಷ್ಠಾನವು ಮುಖ್ಯ ಅಂಶವಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಕೆ.ಡಿ. ಗುಂಡಬಾವಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಜಿಲ್ಲಾ ಮಲೇರಿಯ ನಿರ್ಮೂಲನಾ ಅಧಿಕಾರಿ ಡಾ.ಜಾನ್ ಕಟವಟೆ, ತಾಲೂಕು ಆರೋಗ್ಯಧಿಕಾರಿ ಡಾ. ಪರಸುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲಾಉರ, ಜಿಲ್ಲಾ ಪ್ಲೋರೋಸಿಸ್ ಸಂಯೋಜಕ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಶ್ರೀ ಅಂಬಾಭವಾನಿ ದೇವಸ್ಥಾನದ ಮೂರ್ತಿಯ ೩೨ ನೆಯ ವರ್ಷದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಮಹೋತ್ಸವ ನಿಮಿತ್ಯ ಸರ್ವ ಭಕ್ತಾದಿಗಳಿಂದ ವಾಧ್ಯ ವೈಭವದೊಂದಿಗೆ ಪಲ್ಲಕ್ಕಿ ಉತ್ಸವ ಮತ್ತು ಕುಂಭ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ನಡೆಯಿತು.ಮೆರವಣಿಗೆ ದೇವಸ್ಥಾನದಿಂದ ಪ್ರಾರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಮತ್ತೆ ದೇವಸ್ಥಾನ ತಲುಪಿತು.ದಾರಿಯುದ್ದಕ್ಕೂ ಭಕ್ತರು ಆಯಿ ರಾಧಾ ಗೆ ಉಧೋ ಉಧೋ ತುಳಜಾಪುರ ಆಯಿಗೆ ಉಧೋ ಉಧೋ, ಇಂಡಿ ಆಯಿಗೆ ಉಧೋ ಉಧೋ ಜೈ ಭವಾನಿ, ಜೈ ಶಿವಾಜಿ ಘೋಷಣೆಗಳು ನಡೆದವು.ಬೆಳಗ್ಗೆ ೬ ಗಂಟೆಯಿಂದ ೮ ಗಂಟೆಯ ವರೆಗೆ ಶ್ರೀ ದೇವಿಯ ಮಹಾಭೀಷೇಕ, ಪುಷ್ಪಾಂಜಲಿ, ಹಾಗೂ ಮಂಗಳಾರತಿ, ನಂತರ ಮೆರವಣೆಗೆ ನಡೆಯಿತು,ದೇವಸ್ಥಾನ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಸುರೇಶ ಕೋಳೆಕರ, ಹೀರಾಲಾಲ ಹಂಚಾಟೆ ಮಹಾವೀರ ಕೋಳೆಕರ, ಸುರೇಶ ಬಳಮಕರ, ಅರುಣ ಕೋಳೆಕರ ಇವರನ್ನು ಜೊತೆಗೆ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಡಾ|| ವಿಫುಲ್ ಕೋಳೆಕರ ಇವರನ್ನು ಸನ್ಮಾನಿಸಲಾಯಿತು.ದೇವಸ್ಥಾನ ಸಮಿತಿಯ ಅಧ್ಯಕ್ಷ ನಾಗನಾಥ ಹಂಚಾಟೆ, ಶಂಕರ ಕೋಳೆಕರ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ, ಮತ್ತು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ವಿಜಯಪುರ ಶಾಖೆ ಇವರ ಸಹಯೋಗದಲ್ಲಿ ‘ಸಮೃದ್ಧಿ ಸಂತೃಪ್ತಿ’ ಗ್ರಾಮೀಣ ಮಹಿಳೆಯರ ಸಬಲೀಕರಣದಲ್ಲಿ ಸೌರಶಕ್ತಿಯ ಪಾತ್ರ ಎಂಬ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಇದೇ ದಿ. ೨೮ ಮತ್ತು ೨೯ ರಂದು ಬೆಳಿಗ್ಗೆ ೯:೦೦ ಗಂಟೆಗೆ ಕನ್ನಡ ಅಧ್ಯಯನ ಸಭಾಭವನದಲ್ಲಿ ಆಯೋಜಿಸಲಾಗಿದೆ.ಕಾರ್ಯಾಗಾರವನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಿ.ಎಸ್.ರಾಠೋಡ ಹಾಗೂ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸಿ.ಬಿ.ಕುಂಬಾರ ಭಾಗವಹಿಸಿಲಿದ್ದಾರೆ ಎಂದು ಮಹಿಳಾ ವಿವಿಯ ಪ್ರೊ.ಲಕ್ಷ್ಮಿ ವೈ ಹಾಗೂ ಬೆಂಗಳೂರಿನ ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್‌ನ ಮುಖ್ಯ ವ್ಯವಸ್ಥಾಪಕಿ ಸಂಹಿತಾ ಮಜುಂದಾರ್ ಭಟ್ಟಾಚಾರ್ಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ವತಿಯಿಂದ ೨೦೨೪-೨೫ನೇ ಸಾಲಿನ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಜನೀಯರ್ & ಟೆಕ್ನಾಲಜಿ ವಿಷಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಸಾಲಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನಿಸಾಗಿದೆ.ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿ ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿರುವ ವಿದ್ಯಾರ್ಥಿಗಳು ಸಹ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.ಅರ್ಹ ವಿದ್ಯಾರ್ಥಿಗಳು ಜ.೩೧ರ ಒಳಗಾಗಿ ಅರ್ಜಿ ಸಲ್ಲಿಸಬಹುದು.ಅರ್ಜಿಗಳನ್ನು ಸಲ್ಲಿಸುವಾಗ ನಿಗಮದಿಂದ ಕಳೆದ ವರ್ಷ ಪಡೆದಿರುವ ಸಾಲದ ಮೊತ್ತದಲ್ಲಿ ಶೇ.೧೨ರಷ್ಟನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.ಹೆಚ್ಚನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಹಾಗೂ ದೂರವಾಣಿ ಸಂಖ್ಯೆ. ೦೮೩೫೨-೨೭೮೩೪೪ & ೮೨೭೭೯೪೪೨೦೯ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಮಮದಾಪುರ: ಗ್ರಾಮೀಣ ಕರ್ನಾಟಕದಲ್ಲಿ ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡುತ್ತಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಕಂಪನಿ ವಿಜಯಪುರದಲ್ಲಿ ತನ್ನ ಸಮಗ್ರ ಶೈಕ್ಷಣಿಕ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿತ್ತು.ಕೈಗಾರಿಕಾ ಸಚಿವ ಡಾ.ಎಂ.ಬಿ.ಪಾಟೀಲ್ ಅವರು ಮಾತನಾಡಿ, “ಸುಸ್ಥಿರ ಬೆಳವಣಿಗೆಗೆ ಮತ್ತು ಸಮಾಜದ ಏಳಿಗೆಗೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ. ವಿಜಯಪುರದಲ್ಲಿ ಶೈಕ್ಷಣಿಕ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಗೆ ಬದ್ಧತೆ ಮೆಚ್ಚುಗೆಗೆ ಅರ್ಹ. ಈ ಯೋಜನೆಯು ವಿದ್ಯಾರ್ಥಿಗಳ ತಕ್ಷಣದ ಅಗತ್ಯಗಳನ್ನು ಪೂರೈಸುತ್ತದೆ ಮತ್ತು ಅತ್ಯುತ್ತಮ ಭವಿಷ್ಯವನ್ನು ರೂಪಿಸಲು ಸೂಕ್ತ ಅಡಿಪಾಯವನ್ನು ಹಾಕಿಕೊಡಲಿದೆ. ಈ ಯೋಜನೆಯು ಸಾವಿರಾರು ಯುವ ಮನಸ್ಸುಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವುದನ್ನು ನೋಡಲು ನಾನು ಉತ್ಸುಕನಾಗಿದ್ದೇನೆ ಎಂದು ಹೇಳಿದರು.ಟಿಕೆಎಂನ ರಾಜ್ಯ ವ್ಯವಹಾರಗಳ ಮುಖ್ಯಸ್ಥರು, ಮುಖ್ಯ ಸಂವಹನ ಅಧಿಕಾರಿ, ಹಿರಿಯ ಉಪಾಧ್ಯಕ್ಷ ಸುದೀಪ್ ಎಸ್ ದಳವಿ, ಶಿಕ್ಷಣವು ಸಮಾಜದಲ್ಲಿ ಅರ್ಥಪೂರ್ಣ ಬದಲಾವಣೆ ಉಂಟು ಮಾಡುವ ಶಕ್ತಿಯನ್ನು ಹೊಂದಿದೆ ಎಂಬುದು ಟೊಯೋಟಾ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ವಿದ್ಯಾರ್ಥಿಗಳು ಶಾಲಾ, ಕಾಲೇಜು ಹಂತದಲ್ಲಿ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯ, ಸಂಗೀತದ ಆಸಕ್ತಿ ಮತ್ತು ಅಭಿರುಚಿ ಅಳವಡಿಸಿಕೊಳ್ಳಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ಹಿರಿಯ ಸಾಹಿತಿ ಸಿದ್ದರಾಮ ಹೊನ್ಕಲ್ ಹೇಳಿದರು.ಪಟ್ಟಣದ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ವಲಯ ಕನ್ನಡ ಸಾಹಿತ್ಯ ಪರಿಷತ್ತು, ಸಹೋದರಿ ನಿವೇದಿತಾ ಸಹಕಾರಿ ಸಂಘ (ನಿ) ಸಹಯೋಗದಲ್ಲಿ ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ರವಿವಾರ ಹಮ್ಮಿಕೊಂಡಿರುವ ವಿಶೇಷ ಉಪನ್ಯಾಸ ಹಾಗೂ ಕವಿಗೋಷ್ಠಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಿಶೇಷ ಉಪನ್ಯಾಸ ನೀಡಿದ ಡಾ. ಯಂಕನಗೌಡ ಎಸ್ ಪಾಟೀಲ್, ವಚನ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಗಿವೆ, ಅವು ಸಾರ್ವಕಾಲಿಕ ಸತ್ಯವಾದವುಗಳು, ಪರಸ್ಪರ ಪ್ರೀತಿ, ವಿಶ್ವಾಸ, ಸಹಕಾರ, ಸಹಬಾಳ್ವೆ, ಸಮನ್ವಯತೆ, ಸಹೋದರತ್ವ, ಶಾಂತಿ, ಪರಿಕಲ್ಪನೆಯೇ ಸೌಹಾರ್ದತೆ ಮತ್ತು ಸಮಾನತೆ ಎಂದವರು, ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪವೇ ಇಂದು ದೆಹಲಿಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯಾವುದೇ ಕಾರ್ಯವನ್ನು ನಿರ್ವಹಿಸಿದರು ಮೊದಲು ಅದರ ಮೂಲ ಆಶಯ ಏನಿದೆ ಎನ್ನುವುದನ್ನು ಅರಿತುಕೊಂಡು ಅದರ ಮೂಲ ಉದ್ಧೇಶಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುಭಾಷ ಸಂಕದ ಹೇಳಿದರು.೭೬ ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದ ಅವರು; ಕಾರ್ಯ ಯಾವುದೇ ಆಗಿರಲಿ ಅದರ ಮೂಲ ಉದ್ಧೇಶ ಬಹಳ ಮುಖ್ಯವಾಗಿರುತ್ತದೆ. ಅದನ್ನು ಅರಿತುಕೊಳ್ಳದೆ ಮಾಡುವ ಕಾರ್ಯ ಎಂದಿಗೂ ಯಶಸ್ವಿಯಾಗುವುದಕ್ಕೆ ಸಾಧ್ಯವಿಲ್ಲ. ಹಾಗೆಯೇ ನಮ್ಮ ದೇಶಕ್ಕಾಗಿ ನೀಡಿದ ಸಂವಿಧಾನದ ಮೂಲ ಉದ್ಧೇಶಕ್ಕೆ ಧಕ್ಕೆಯಾಗದ ರೀತಿಯಲ್ಲಿ ನಾವುಗಳು ಬದುಕು ನಿರ್ವಹಿಸಬೇಕು. ಕೇವಲ ಹಕ್ಕುಗಳನ್ನು ಅನುಭವಿಸಿದರೆ ಸಾಲದು ಅದರ ಜೊತೆಯಲ್ಲಿ ಮೂಲಭೂತ ಕರ್ತವ್ಯಗಳನ್ನು ನೆರವೇರಿಸಬೇಕು. ಆಗ ಮಾತ್ರ ಸಂವಿಧಾನಕ್ಕೆ ನಾವು ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.ಕಾರ್ಯಕ್ರಮದ ಅತಿಥಿ ಸ್ಥಾನವನ್ನು ಅಲಂಕರಿಸಿ, ಜನಸ್ನೇಹಿ ವಕೀಲ ಮಲ್ಲಿಕಾರ್ಜುನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ೭೬ ನೇ ಗಣರಾಜ್ಯೋತ್ಸವವನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.ನಗರದ ಪತ್ರಿಕಾ ಭವನ ಹಾಗೂ ಹಳೆಯ ತಹಸೀಲ್ದಾರ ಕಚೆರಿ ಬಳಿಯಿರುವ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಸಂಗಮೇಶ ಟಿ. ಚೂರಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಿ ಎಲ್ಲರಿಗೂ ಗಣರಾಜ್ಯೋತ್ಸವ ಶುಭಾಶಯ ಕೋರಿದರು.ಸಂಘದ ಖಜಾಂಚಿ ರಾಹುಲ ಆಪ್ಟೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಬಸವರಾಜ ಉಳ್ಳಾಗಡ್ಡಿ, ಸುನೀಲ ಗೋಡೆನ್ನವರ, ಗುರಪ್ಪ ಲೋಕುರಿ, ಸಲಹಾ ಸಮಿತಿ ಸದಸ್ಯರಾದ ದೇವೇಂದ್ರ ಹೆಳವರ, ಸೀತಾರಾಮ ಕುಲಕರ್ಣಿ, ಸಚೇಂದ್ರ ಲಂಬು, ಪತ್ರಕರ್ತರಾದ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಶಿವನಗೌಡ ಪಾಟೀಲ, ಮಲ್ಲಿಕಾರ್ಜುನ ಹೂಗಾರ, ಖಾಜಾ ಪಟೇಲ್, ಶರದ ಅರ್ಜುಣಗಿ, ಸರ್ವೇಶ ಕಟ್ಟಿ, ಸುನೀಲ ಭಜಂತ್ರಿ, ವಿಠ್ಠಲ ಲಂಗೋಟಿ, ನಾಗು ಚೋಳಕೆ ಮುಂತಾದವರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಗಣತಂತ್ರದ ಮೌಲ್ಯ ಎಲ್ಲರೂ ಅರಿಯಬೇಕು- ಮಲ್ಲು ದಾನಗೌಡಚಿಕ್ಕಪಡಸಲಗಿ : ನಮ್ಮೆಲ್ಲರಲ್ಲಿ ರಾಷ್ಟ್ರೀಯ ಪ್ರಜ್ಞೆ ಮೂಡಬೇಕು. ಏಕತೆ,ಐಕ್ಯತೆಯುಳ್ಳ ಸಾಮರಸ್ಯದ ಭಾವ ಮೈದೇಳಬೇಕು.ಸಾರ್ವಭೌಮ ಪ್ರಬುದ್ಧಕ್ಕಾಗಿ ದೇಶಭಕ್ತಿವೆಂಬ ದಿವ್ಯತೆ ಮಂತ್ರ ಉತ್ಸಾಹದಿಂದ ಹೃದಯಾಂತರದಲ್ಲಿ ಹೊಂಕರಿಸಬೇಕು ಎಂದು ಶಾಲಾ ಆಡಳಿತ ಮಂಡಳಿ ಸದಸ್ಯ ಮಲ್ಲು ದಾನಗೌಡ ಹೇಳಿದರು.ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಜರುಗಿದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಸಂವಿಧಾನ ಜಾರಿಗೆ ಬಂದು ಇಂದಿಗೆ ಏಪ್ಪತ್ತೈದು ವಸಂತಗಳು ಸಂದಿವೆ. ಯುವಜನತೆ ಸೇರಿದಂತೆ ನಾವೆಲ್ಲರೂ ಇಂದು ಸಂವಿಧಾನದ ಆಶಯಗಳಿಗೆ ತಕ್ಕಂತೆ ಪ್ರಾಮಾಣಿಕತೆಯಿಂದ ನಡೆದುಕೊಂಡು ಸಾರ್ಥಕತೆ ಮೆರೆಯಬೇಕಾಗಿದೆ ಎಂದರು.ಪ್ರಜಾಸತ್ತಾತ್ಮಕ ಗಣರಾಜ್ಯ ಹೊಂದಿರುವ ನಾವುಗಳು ನಮ್ಮ ಕಾಯಕ ತತ್ವಗಳು ನ್ಯಾಯ ಸಮ್ಮತವಾಗಿರಬೇಕು. ಭ್ರಾತೃತ್ವದ ಮನೋಭಾವದಿಂದ ಸಾಗಬೇಕು.ಸಕಾರಾತ್ಮಕ ಧೋರಣೆಯೊಂದಿಗೆ ಮೌಲ್ಯಯುತ ಭಾವನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದ ಅವರು, ಸರಕಾರದ ಹಲವಾರು ಸೌಲಭ್ಯಗಳನ್ನು ಇಲ್ಲಿನ ಶಾಲಾ ಮಕ್ಕಳಿಗೆ ಒದಗಿಸಿಕೊಡುವ ಪ್ರಯತ್ನ ತಾವು ಪ್ರಾಮಾಣಿಕವಾಗಿ ಮಾಡುವುದಾಗಿ ಭರವಸೆ ನೀಡಿದರು.ಸ್ಥಾನಿಕ ಶಾಲಾ…
