Author: editor.udayarashmi@gmail.com

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವಗುರು ಜಗಜ್ಯೋತಿ ಬಸವಣ್ಣವರ ಜಯಂತಿ ಆಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಇತಿಹಾಸ ವಿಭಾಗದ ಸಹಯೋಗದಲ್ಲಿ ವಿಶ್ವಗುರು ಬಸವ ಜಯಂತಿ ಆಚರಿಸಲಾಯಿತು.ಈ ವೇಳೆಯಲ್ಲಿ ಇತಿಹಾಸ ವಿಭಾಗದ ಮುಖಸ್ಥ ಪ್ರೊ.ಐ.ಎಸ್.ಹೂಗಾರ ಮಾತನಾಡಿ, ೧೨ ನೇ ಶತಮಾನದಲ್ಲಿ ಬಸವಣ್ಣವರು ತಮ್ಮ ವಚನಗಳ ಸಾಹಿತ್ಯದ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಮಾಡಿದ್ದಾರೆ. ಅಂದಿನ ಪ್ರಥಮ ಸಂಸತ್ತು ಅನುಭವ ಮಂಟಪವನ್ನು ಸ್ಥಾಪಿಸಿ ಜಾತಿ, ಲಿಂಗ, ಮತ್ತು ಮತ ಭೆೇದವನ್ನು ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ವಿಶ್ವ ಭಾತೃತ್ವ ಸಾರಿದವರು, ಬಸಣ್ಣನವರ ವಿಚಾರಧಾರೆಗಳನ್ನು ನಮ್ಮಲ್ಲಿ ಅಳಡಿಸಿಕೊಳ್ಳಬೇಕು ಎಂದು ಹೆಳಿದರು.ಈ ವೇಳೆ ಡಾ.ಉಷಾದೇವಿ ಹಿರೇಮಠ ಮಾತನಾಡಿ, ಬಸವ ನಾಡಿನಲ್ಲಿ ಬದುಕುತ್ತಿರುವ ನಾವು ಸೌಭಾಗ್ಯವಂತರು, ಬಸಣ್ಣನವರು ವಚನ ಸಾಹತ್ಯಕೆ ನೀಡಿದ ಕೊಡುಗೆ ಅಪಾರವಾದದ್ದು ಎಂದರು.ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ.ಅನೀಲ ಭಿ.ನಾಯಕ, ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ, ಡಾ.ಧರ್ಮಗುರು ಪ್ರಸಾದ್, ಪ್ರೊ.ಗುರುರಾಜ್…

Read More

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲರಿಂದ ಫಲಾನುಭವಿಗಳಿಗೆ ವಿತರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ಮತಕ್ಷೇತ್ರದ ನಾನಾ ಫಲಾನುಭವಿಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸೋಮವಾರ ಮೀನುಗಾರಿಕೆ ಉಚಿತ ಕಿಟ್ ಮತ್ತು ಲೈಫ್ ಜಾಕೇಟುಗಳನ್ನು ವಿತರಿಸಿದರು.ರಾಜ್ಯ ವಲಯ ಮತ್ತು ಜಿಲ್ಲಾ ಪಂಚಾಯಿತಿ ಯೋಜನೆಯಡಿ ಒಟ್ಟು 61 ಜನ ಫಲಾನುಭವಿಗಳು ಆಯ್ಕೆಯಾಗಿದ್ದು, ಅವರಲ್ಲಿ 11 ಫಲಾನುಭವಿಗಳಿಗೆ ಸಚಿವರು ಸಾಂಕೇತಿಕವಾಗಿ ಕಿಟ್ ಮತ್ತು ಲೈಫ್ ಜಾಕೇಟ್ ವಿತರಿಸಿದರು.ಈ ಯೋಜನೆಯಡಿ ಬಬಲೇಶ್ವರ ತಾಲೂಕಿನ ಕೃಷ್ಣಾ ನದಿಯಲ್ಲಿ ಮೀನುಗಾರಿಕೆ ನಡೆಸುವ ಜೈನಾಪುರ, ಬಬಲಾದ, ದೇವರಗೆಣ್ಣೂರು, ಬೆಳ್ಳುಬ್ಬಿ, ಕಣಬೂರು, ಸುತಗುಂಡಿ, ತಿಕೋಟಾ ತಾಲೂಕಿನ ಕೆರೆಯಲ್ಲಿ ಮೀನುಗಾರಿಕೆ ನಡೆಸುವ ಬರಟಗಿ, ಅರಕೇರಿ, ಮಖಣಾಪುರ ಗ್ರಾಮದ ಮೀನುಗಾರರಿಗೆ ಕಿಟ್ ವಿತರಿಸಲಾಯಿತು.ಈ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಎಂ. ಎಚ್. ಭಾಂಗಿ, ಸಹಾಯಕ ನಿರ್ದೇಶಕ ಶ್ರೀಶೈಲ ಎಸ್. ಗಂಗನಳ್ಳಿ, ಡೋಮನಾಳ ಮೀನುಗಾರಿಕೆ ಸಹಕಾರಿ ಸಂಘದ ಅಧ್ಯಕ್ಷ…

Read More

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣ ಮೇಲ್ದಂಡೆ ಯೋಜನೆ ಭೂ ಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗೆ ನೆರವಾಗಲು ಏಪ್ರಿಲ್ ನಿಂದ ಜುಲೈ 2026ರ ವರೆಗೆ ಲೋಕ ಅದಾಲತ್ ನಡೆಲಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು,ಜಿಲ್ಲಾ ಕಾನೂನು‌ ಸೇವಾ ಪ್ರಾಧಿಕಾರ ಈ ಲೋಕ ಅದಾಲತ ಆಯೋಜಿಸಿದೆ. ಭೂಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಿ ಮತ್ತು ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಿರುವ ರೈತರು ಈ ಲೋಕ ಅದಾಲತನಲ್ಲಿ ಪಾಲ್ಗೊಂಡು ಪರಸ್ಪರ ಒಪ್ಪಿಗೆ ಮೇರೆಗೆ ಪ್ರಕರಣವನ್ನು ತಕ್ಷಣ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಇದರಿಂದ ನ್ಯಾಯಕ್ಕಾಗಿ ಹಲವಾರು ತಿಂಗಳವರೆಗೆ ನ್ಯಾಯಾಲಯಗಳುಗೆ ಅಲೆದಾಡುವುದು, ವಿಚಾರಣೆಗೆ ಕಾಯುವುದು ತಪ್ಪಲಿದೆ. ಒಂದೇ ದಿನದಲ್ಲಿ ಪ್ರಕರಣ ಇತ್ಯರ್ಥವಾಗುವುದರಿಂದ ರೈತರ ಅಮೂಲ್ಯ ಸಮಯ ಉಳಿತಾಯವಾಗಲಿದೆ.ಲೋಕ ಅದಾಲತನಲ್ಲಿ ಪ್ರಕರಣ ಇತ್ಯರ್ಥ ಪ್ರಕ್ರಿಯೆ ಸರಳವಾಗಿದ್ದು, ತಕ್ಷಣ ಇತ್ಯರ್ಥವಾಗುವುದರಿಂದ…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ವೇತನ ಜಾಗೃತಿ ಅಭಿಯಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ, ಶೋಷಿತ ಸಮುದಾಯಗಳಿಗೆ ಶಿಕ್ಷಣ ನೀಡಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ವಿದ್ಯಾರ್ಥಿಗಳು ಅವುಗಳನ್ನು ಬಳಸಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಜೆ. ಇಂಡಿ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನಿ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಎಸ್ಸಿ, ಎಸ್ಟಿ, ಓಬಿಸಿ ಹಾಗೂ ಮೈನಾರಿಟಿ ಸೆಲ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿ ವೇತನ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಬಹಳಷ್ಟು ಕುಟುಂಬಗಳು ಮಕ್ಕಳ ಶಿಕ್ಷಣ ಕೊಡಿಸಲಾರದಷ್ಟು ಬಡತನ ಎದುರಿಸುತ್ತಿವೆ. ಸರ್ಕಾರ ಅಂತಹ ಮಕ್ಕಳ ಶೈಕ್ಷಣಿಕ ಬದುಕು ಉಜ್ವಲಗೊಳಿಸಲು ಶಿಷ್ಯ ವೇತನ ಜಾರಿಗೊಳಿಸಿದೆ. ಶಿಕ್ಷಣಕ್ಕೆ ಬಡತನ ಅಡ್ಡಿಯಾಗದು. ನಾವು ನಮ್ಮ ಗುರಿ ಮತ್ತು ಸಾಧನೆ ಕಡೆಗೆ ಗಮನ ಕೊಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರಲ್ಲದೆ, ನಮ್ಮಲ್ಲಿ…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪಾರಂಪರಿಕ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಪರಂಪರೆ ಐತಿಹಾಸಿಕ ಸ್ಮಾರಕಗಳ ಇತಿಹಾಸ, ವೈವಿಧ್ಯತೆಯನ್ನು ಕಾಪಾಡಿಕೊಳ್ಳುವದು ಅಲ್ಲದೆ ಪಾರಂಪರಿಕೆ ತಾಣಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಚಡಚಣ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಮುಖಸ್ಥರಾದ ಡಾ. ಮಯೂರ ಕುದರಿ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನಿ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಹೆರಿಟೇಜ್ ಕ್ಲಬ್ ಹಾಗೂ ಇತಿಹಾಸ ವಿಭಾಗದ ಸಹಯೋಗದಲ್ಲಿ ಏ.೧೮ ರಂದು ವಿಶ್ವ ಪಾರಂಪರಿಕ ದಿನಾಚರಣೆ ಅಂಗವಾಗಿ ‘ಕರ್ನಾಟಕದ ಪಾರಂಪರಿಕ ಸ್ಮಾರಕಗಳ ಮಹತ್ವ’ ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಪುರಾತತ್ವ ಇಲಾಖೆಯಡಿಯಲ್ಲಿನ ಹಲವಾರು ವಿಶ್ವ ಪಾರಂಪರಿಕ ತಾಣಗಳು ಇದ್ದು ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮದಾಗಿದೆ, ಪಾರಂಪರಿಕ ತಾಣಗಳು ಪೂರ್ವಜರ ವಿಚಾರಗಳನ್ನು ಪಸ್ತುತಪಡಿಸುತ್ತಿವೆ ಎಂದರು.ಈ ವೇಳೆಯಲ್ಲಿ ಇತಿಹಾಸ ವಿಭಾಗದ ಮುಖಸ್ಥರಾದ ಪ್ರೊ.ಐ.ಎಸ್.ಹೂಗಾರ ಸ್ವಾಗತಿಸಿದರು, ಹೆರಿಟೇಜ್…

Read More

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಸಿಬ್ಬಂದಿ ಲಂಚ ಸ್ವೀಕರಿಸುವಾಗ ಬಂಧನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಸಿಬ್ಬಂದಿಗಳು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.ಫಿರ್ಯಾದಿದಾರರು ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ, ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್‌ಗೆ ಸಂಬಂಧಿಸಿದ ಪೆಟ್ರೋಲ್ ಬಂಕ್ ತೆರೆಯಲು ಸ್ಥಳದ ನಕ್ಷೆ ಅನುಮೋದನೆ ನೀಡುವ ಸಂಬಂಧ, ದ್ವಿತೀಯ ದರ್ಜೆ ಸಹಾಯಕ ಅರವಿಂದ ಪವಾರ ಮತ್ತು ಕಂಪ್ಯೂಟರ್ ಆಪರೇಟರ್ ಅಯುಬ ತೊನಶ್ಯಾಳ ಅವರು ರೂ.15,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಇದನ್ನಾಧರಿಸಿ ಲೋಕಾಯುಕ್ತ ಪೊಲೀಸರು ಇಂದು ಮಧ್ಯಾಹ್ನ ಟ್ರ್ಯಾಪ್ ಕಾರ್ಯಾಚರಣೆ ನಡೆಸಿ, ಆರೋಪಿತರು ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಅವರನ್ನು ಬಲೆಗೆ ಬೀಳಿಸಿ ಬಂಧಿಸಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.ಈ ಕಾರ್ಯಾಚರಣೆಯನ್ನು ಕರ್ನಾಟಕ ಲೋಕಾಯುಕ್ತ ವಿಜಯಪುರ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳು ಮತ್ತು ಸಿಬ್ಬಂದಿಗಳ ತಂಡ ಯಶಸ್ವಿಯಾಗಿ ನಡೆಸಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾವು ಮಾಡಿದ ನಿಷ್ಠೆ, ಪ್ರಾಮಾಣಿಕತೆ, ನಿಸ್ವಾರ್ಥ ಸತ್ಕಾರ್ಯಗಳು ಆಪತ್ಕಾಲದಲ್ಲಿ ನಮ್ಮನ್ನು ಕಾಪಾಡುತ್ತವೆ ಎಂದು ಇಂಗ್ಲೆಂಡಿನ ಎಡಿನ್ಬರ್ಗ್ ವಿಶ್ವವಿದ್ಯಾಲಯದ ವೈದ್ಯೆ ಡಾ. ಗೀತಾ ಶೆಟ್ಟಿ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗದ ವತಿಯಿಂದ ಆಯೋಜಿಸಲಾದ ಕ್ಯಾನ್ಸರ್ ನೊಂದಿಗೆ ಹೋರಾಟ‌ ಕುರಿತು ಅವರು ಅತಿಥಿ ಉಪನ್ಯಾಸ ನೀಡಿದ ಅವರು ಭಾರತೀಯ ವೈದ್ಯಕೀಯ ಚಿಕಿತ್ಸೆ ವಿಶ್ವದಲ್ಲೇ ಶ್ರೇಷ್ಠವಾಗಿದೆ ಎಂದು ಅವರು ಹೇಳಿದರು.ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಪ್ರಾಸ್ತಾವಿಕವಾಗಿ‌ ಮಾತನಾಡಿ, ಡಾ. ಗೀತಾ ಶೆಟ್ಟಿ ಅವರು ತಾವು‌ ಓದಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಹಿಂದೆಯೂ ಮತ್ತು ಮುಂದೆಯೂ ಎಂದೆಂದಿಗೂ ನಮಗೆ ಮಾದರಿಯಾಗಿದ್ದಾರೆ” ಎಂದು ಹೇಳಿದರು.ಪ್ರಾಧ್ಯಾಪಕಿ ಡಾ.ವಿಜಯಾ.ಪಾಟೀಲ ಮಾತನಾಡಿ, ಡಾ. ಗೀತಾ ಶೆಟ್ಟಿ ಅವರು ಮಾದರಿ ವೈದ್ಯ ಮತ್ತು ಮಾದರಿ ರೋಗಿಯೂ ಆಗಿದ್ದಾರೆ. ಅವರ ಧೈರ್ಯ, ಇಚ್ಛಾಶಕ್ತಿ ಮತ್ತು ಸೇವಾ ಉತ್ಸುಕತೆಗಳು ಮೆಚ್ಚುವಂಥವು ಎಂದರು.ಬಿ.ಎಲ್.ಡಿ.ಇ ಮೆಡಿಕಲ್…

Read More

ಡಾ.ರಾಜ್ ಜನ್ಮ ದಿನಾಚರಣೆ ಅರ್ಥಪೂರ್ಣಗೊಳಿಸಲು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶೇಷ ನಟನೆ ಮೂಲಕ ಕನ್ನಡಿಗರ ಮನೆ-ಮಾತಾದ ನಟ ಸಾರ್ವಭೌಮ ಡಾ.ರಾಜಕುಮಾರ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ವಿಶಿಷ್ಟವಾಗಿ ಆಚರಿಸಲು ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮೇರುನಟ ಡಾ.ರಾಜ್‌ಕುಮಾರ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಏ.೨೪ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಕಂದಗಲ್ ಶ್ರೀ ಹನುತರಾಯ ರಂಗಮಂದಿರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಡಾ.ಔದ್ರಾಮ ಅವರು ತಿಳಿಸಿದರು.ಡಾ. ರಾಜ್ ಕುಮಾರ ಅವರು, ಕನ್ನಡದ ಮೇರು ನಟ, ನಟಸಾರ್ವಭೌಮರಾಗಿ ಈ ನಾಡು ಕಂಡ ನೆಚ್ಚಿನ ನಟರಾಗಿದ್ದಾರೆ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ೬ನೇ ತರಗತಿ ಪ್ರವೇಶ ಕಲ್ಪಿಸಲು ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹತಾ ಪರೀಕ್ಷೆಗೆ ಇಲಾಖಾ ವೆಬ್ ಸೈಟ್https://swd.karnataka.gov.in ರಲ್ಲಿ ಆನ್-ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಅರ್ಜಿ ಸಲ್ಲಿಸಲು ಮೇ ೪ ಕೊನೆಯ ದಿನವಾಗಿದೆ.ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದ್ದು, ತಹಶೀಲ್ದಾರರವರಿಂದ ಪಡೆದ ಆರ್.ಡಿ ಸಂಖ್ಯೆ ಹೊಂದಿರುವ ಚಾಲ್ತಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. ವಿದ್ಯಾರ್ಥಿಗಳು ಕುಟುಂಬದ ವಾರ್ಷಿಕ ಆದಾಯ ೨.೫೦ ಲಕ್ಷದೊಳಗಿರಬೇಕು. ವಿದ್ಯಾರ್ಥಿಯು ೨೦೨೫-೨೬ನೇ ಸಾಲಿನಲ್ಲಿ ೫ನೇ ತರಗತಿಯಲ್ಲಿ ತೇರ್ಗಡೆಯಾಗಿ ಶೇ.೬೦ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಾಮುಖ್ಯತೆ ನೀಡಲಾಗುವುದು. ಆಯ್ಕೆಯಾಗುವ ವಿದ್ಯಾರ್ಥಿಗಳಲ್ಲಿ ಬಾಲಕಿಯರಿಗೆ ಶೇ.೫೦ ರಷ್ಟು ಮೀಸಲಾತಿ ನೀಡಲಾಗುವುದು. ಬಡತನ ರೇಖೆಗಿಂತ ಕೆಳಗಿರುವ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಅತಿ ಹಿಂದುಳಿದ ವರ್ಗದವರಿಗೆ ಮೊದಲನೇ ಆದ್ಯತೆ ನೀಡಲಾಗುವುದು.ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿ…

Read More