Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸ್ತುತ ಇಂದಿನ ದಿನಗಳಲ್ಲಿ ಮಕ್ಕಳಿಗೆ ಆತ್ಮರಕ್ಷಣೆಯ ಅವಶಕ್ಯತೆಯಿದೆ. ಜೀವನ ಸಂಕೀರ್ಣಮಯವಾಗುತ್ತಿದ್ದು, ಅನೇಕ ಸಂದರ್ಭಗಳಲ್ಲಿ ಮಕ್ಕಳ ಮೇಲೆ ಹಲ್ಲೆ, ದೌರ್ಜನ್ಯ ಮತ್ತು ಮಾನಸಿಕ ಮತ್ತು ದೈಹಿಕ ಹಿಂಸೆಯಂತಹ ದುಷ್ಕೃತ್ಯಗಳು ನಡೆಯುತ್ತಿವೆ. ಆದ್ದರಿಂದ ಮಕ್ಕಳಲ್ಲಿ ಆತ್ಮಸ್ಥೆöÊರ್ಯ, ಆತ್ಮರಕ್ಷಣೆ ಮತ್ತು ಮಾನಸಿಕ ಆತ್ಮಬಲವನ್ನು ಹೆಚ್ಚಿಸುವದರೊಂದಿಗೆ ಸಾಮಾಜಿಕವಾಗಿ ಜಾಗರೂಕರನ್ನಾಗಿ ಮಾಡಲು ಕರಾಟೆ ತರಬೇತಿ ಅತಿ ಅವಶ್ಯಕವಾಗಿದೆ ಎಂದು ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು.ಅವರು ನಗರದ ಅಥಣಿ ರಸ್ತೆಯ ಅಲ್-ಅಮೀನ ಆಸ್ಪತ್ರೆಯ ಎದುರಿಗೆ ಎನ್.ಜಿ,ಓ ಕಾಲನಿಯ ಜೈ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಜು.೨೫ ರಂದು ವಾರಿಯರ್ಸ ವೇ ಮಾರ್ಷಲ್ ಆರ್ಟ್ಸ್ ಇವರು ಆಯೋಜಿಸಿದ ೩ ನೇಯ ಓಪನ್ ನ್ಯಾಶನಲ್ ಲೆವೆಲ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಮೋಘ ಸಾಧನೆಗೈದ ಮಕ್ಕಳಿಗೆ ಪ್ರಶಸ್ತಿ ಮತ್ತು ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳು ಶಾಲೆ, ಪಾಠ-ಪ್ರವಚನ, ಹೋಮ್ ವರ್ಕ, ಟ್ಯೂಷನ್ ಹೀಗೆ ಶಿಕ್ಷಣ ಕೇವಲ ಜ್ಞಾನಾರ್ಜನೆಗಾಗಿ ಎನ್ನುವಂತಾಗಿದೆ. ಮಕ್ಕಳು ಬೌದ್ಧಿಕ, ಮಾನಸಿಕ ಮತ್ತು…

Read More

ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ “ಸಂತನೆಂದರೆ ಯಾರು ದಿವ್ಯತೆಯ ಅರಿತವನು, ಸರಳತೆಯ ಸೂತ್ರದಲಿ ಸುಖವ ಕಂಡವನು, ಮಮತೆ ಬಂಧನ ಕಳಚಿ ಬಲು ದೂರ ನಿಂತವನು…” ಎಂಬ ಹಾಡನ್ನು ತಾವು ಕೇಳಿದಾಗ ಮನದಲ್ಲಿ ಭಕ್ತಿಯ ಭಾವ ಮೂಡಿ ಬಂದಿರಬಹುದು. ಆಷಾಢ ಮಾಸದ ಹುಣ್ಣಿಮೆಯಂದು ಜಗತ್ತಿನೆಲ್ಲೆಡೆ ಆಚರಿಸಲಾಗುವ ಈ ಗುರು ಪೂರ್ಣಿಮೆ ಕಾರ್ಯಕ್ರಮ ಮೂಲಕ ಶಿಷ್ಯರು ತಮ್ಮ ಗುರುಗಳಿಗೆ ಕೃತಜ್ಞತೆ ಮತ್ತು ಗೌರವ ಸಲ್ಲಿಸುತ್ತಾರೆ. ಗುರು-ಶಿಷ್ಯ ಪರಂಪರೆಯನ್ನು ಸ್ಮರಿಸುವ ಮತ್ತು ಮಾರ್ಗದರ್ಶನಕ್ಕಾಗಿ ಕೃತಜ್ಞತಾ ಭಾವ ವ್ಯಕ್ತಪಡಿಸುವ ಸುದಿನವೇ ಈ ಗುರು ಪೂರ್ಣಿಮೆ. ಗುರುವಿಗಿಂತ ಶ್ರೇಷ್ಠವಾದ ದೇವರಿಲ್ಲ. ಅಜ್ಞಾನವೆಂಬ ಅಂಧಕಾರದಿಂದ ಸುಜ್ಞಾನದೆಡೆಗೆ ಕೊಂಡೊಯ್ಯುವ ದಾರಿ ದೀಪವೇ ಗುರು. “ಗುರು ಬ್ರಹ್ಮ, ಗುರು ವಿಷ್ಣು, ಗುರುದೇವೋ ಮಹೇಶ್ವರ, ಗುರು ಸಾಕ್ಷಾತ್ ಪರಃಬ್ರಹ್ಮ, ತಸ್ಮೈಶ್ರೀ ಗುರುವೇ ನಮಃ” ಗುರುವಿನ ಮಹತ್ವವನ್ನು ಸಾರುವ ಈ ಶ್ಲೋಕದಂತೆ ನಮಗೆ ಗುರುವಿನ ಸ್ಥಾನವು ದೇವರಿಗೆ ಸಮನಾದದ್ದು ಎಂದು ಅರ್ಥೈಸುತ್ತದೆ. ಆಚಾರ್ಯ ದೇವೋ ಭವಃ ಎಂಬ ಸಂಸ್ಕೃತಿ ನಮ್ಮದು. ಜನ್ಮ…

Read More

ಜಿ.ಪಂ. ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಅರ್ಹ ಕುಟುಂಬಕ್ಕೂ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಗ್ರಾಮಾಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಅನುಷ್ಠಾನಗೊಳಿಸುವುದು ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಮುಖ ಉದ್ದೇಶವಾಗಿದ್ದು, ಗ್ರಾಮ ಪಂಚಾಯಿತಿಗಳು ಹೆಚ್ಚಿನ ಕಾಮಗಾರಿಗಳನ್ನು ಗುರುತಿಸಿ ಕೂಲಿಕಾರರಿಗೆ ನಿರಂತರ ಉದ್ಯೋಗ ಒದಗಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಅಧಿಕಾರಿಗಳಿಗೆ ಸೂಚಿಸಿದರು.ಬಸವನಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮ ಪಂಚಾಯಿತಿಗೆ ಸೋಮವಾರ ಭೇಟಿ ನೀಡಿದ ಅವರು, ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಅಮೃತ ಸರೋವರ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೂಲಿಕಾರರೊಂದಿಗೆ ನೇರವಾಗಿ ಸಂವಾದ ನಡೆಸಿದ ಬಳಿಕ ಅವರು ಮಾತನಾಡಿದರು. ಕಾಮಗಾರಿ ಸ್ಥಳದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ನೆರಳಿನ ವ್ಯವಸ್ಥೆ ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಪ್ರತಿದಿನ ೫೦೦ಕ್ಕೂ ಹೆಚ್ಚು ಕೂಲಿಕಾರರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯೊಂದಿಗೆ ಕಾಮಗಾರಿಗಳನ್ನು ಯೋಜಿತವಾಗಿ ಅನುಷ್ಠಾನಗೊಳಿಸುವಂತೆ ಗ್ರಾಮ ಪಂಚಾಯಿತಿ…

Read More

ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೩೩-ಸಿಂದಗಿ ವಿಧಾನಸಭಾ ಮತಕ್ಷೇತ್ರದ ಸಿಂದಗಿ ತಾಲೂಕಿನ ಕನ್ನೊಳಿ ಮತ್ತು ಕೊಕಟನೂರ ಗ್ರಾಮಗಳ ಭಾಗ ಸಂಖ್ಯೆ ೨೧೩ ರಿಂದ ೨೨೨ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕ್ಕರಣೆ-೨೦೨೬ರ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಸೇಶನ್ ಕಾರ್ಯವನ್ನು ನಿಗದಿತ ಅವಧಿಗೂ ಮುನ್ನವೇ ಶೇ.೧೦೦ರಷ್ಟು ಯಶಸ್ವಿಯಾಗಿ ಪೂರ್ಣಗೊಳಿಸಿದ ಮೇಲ್ವಿಚಾರಕರನ್ನು ಜಿಲ್ಲಾಧಿಕಾರಿಗಳಾದ ಡಾ. ಆನಂದ್ ಕೆ. ಅವರು ಸನ್ಮಾನಿಸಿ ಅಭಿನಂದಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೇಲ್ವಿಚಾರಕರಾದ ಎ.ಕೆ. ಬಿರಾದಾರ ಅವರನ್ನು ಸನ್ಮಾನಿಸಿ, ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಕನ್ನೊಳಿ ಮತ್ತು ಕೊಕಟನೂರ ಗ್ರಾಮಗಳ ಭಾಗ ಸಂಖ್ಯೆ ೨೧೩ ರಿಂದ ೨೨೨ರವರೆಗೆ ಗಣತಿ ನಮೂನೆಗಳ ವಿತರಣೆ, ಮನೆ-ಮನೆಗೆ ಭೇಟಿ, ಮಾಹಿತಿಯ ಸಂಗ್ರಹಣೆ ಹಾಗೂ ಡಿಜಿಟೈಸೇಶನ್ ಪ್ರಕ್ರಿಯೆಯನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಶೇ.೧೦೦ರಷ್ಟು ಪೂರ್ಣಗೊಳಿಸಿರುವುದು ಜಿಲ್ಲೆಯ ಇತರೆ ಭಾಗಗಳಿಗೆ…

Read More

ಬಿಎಲ್‌ಡಿಇ ಸಂಸ್ಥೆಯ ಸಂಸ್ಥಾಪಕರಿಗೆ ಗೌರವ ನಮನ | ಪ್ರೊ.ತೋಳನೂರ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಬಿ.ಎಲ್‌.ಡಿ.ಇ ಸಂಸ್ಥೆಯ ಸಂಸ್ಥಾಪಕರಾದ ಬಿ.ಎಂ. ಪಾಟೀಲ ಅವರ ಪುಣ್ಯಸ್ಮರಣೆಯನ್ನು ತಿಕೋಟಾದ ಬಿ.ಎಲ್‌.ಡಿ.ಇ ಸಂಸ್ಥೆಯ ನೂತನ ಕಲಾ ಮಹಾವಿದ್ಯಾಲಯದಲ್ಲಿ ಸೋಮವಾರ ಅತ್ಯಂತ ಗೌರವ ಮತ್ತು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಶ್ರೀ ಪಿ. ಎಸ್. ತೋಳನೂರ ಅವರು ಬಿ. ಎಂ. ಪಾಟೀಲ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.ನಂತರ ಅವರು ಮಾತನಾಡಿ,ಶಿಕ್ಷಣ ಮತ್ತು ಸಮಾಜಕ್ಕೆ ಬಿ.ಎಂ.ಪಾಟೀಲರು ನೀಡಿದ ಮಹತ್ತರ ಕೊಡುಗೆಗಳನ್ನು ಸ್ಮರಿಸಿದರು.ಪಾಟೀಲರು ದೂರದೃಷ್ಟಿಯ ಶಿಕ್ಷಣತಜ್ಞ, ದಾನಿ ಮತ್ತು ಸಂಸ್ಥೆಗಳ ನಿರ್ಮಾತೃವಾಗಿದ್ದರು ಎಂದು ಬಣ್ಣಿಸಿದರು.ತಲೆಮಾರುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಮತ್ತು ಅವರನ್ನು ಸಬಲೀಕರಣಗೊಳಿಸುವುದು ಅವರ ಜೀವನದ ಮುಖ್ಯ ಉದ್ದೇಶವಾಗಿತ್ತು ಎಂದರು. ಬಿಎಲ್‌ಡಿಇ ಸಂಸ್ಥೆಗಳ ಇಂದಿನ ಭವ್ಯ ಬೆಳವಣಿಗೆಗೆ ಪಾಟೀಲರ ದೂರದೃಷ್ಟಿ, ಸಮರ್ಪಣಾ ಭಾವ ಮತ್ತು ನಿಸ್ವಾರ್ಥ ಸೇವೆಗೆ ಹೆಮ್ಮರವಾಗಿ ಬೆಳೆದ ಈ ಸಂಸ್ಥೆ ಜೀವಂತ ಸಾಕ್ಷಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.ಇದಕ್ಕೂ ಮುನ್ನ, ಡಾ. ಪಾಟೀಲರ…

Read More

ಹೊಸ ಯೋಜನೆ ಘೋಷಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ | ಕರ್ನಾಟಕಕ್ಕೆ ಹರಿಯುವ ನೀರಿನ ಪ್ರಮಾಣದಲ್ಲಿ ಕೊರತೆ | ಗಡಿ ಭಾಗದ ಜನರಲ್ಲಿ ಆತಂಕ ಮುಂಬೈ: ಕೃಷ್ಣ ನದಿ ನೀರಿಗೆ ಕನ್ನ ಹಾಕಿರುವ ಮಹಾರಾಷ್ಟ್ರ ಸರ್ಕಾರ, ಕೊಲ್ಲಾಪುರ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ‘ರಾಧಾಕೃಷ್ಣ ನೀರಾವರಿ ಯೋಜನೆ’ಯಡಿ ಹೊಸ ಜಲಾಶಯ ನಿರ್ಮಿಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಘೋಷಿಸಿದ್ದಾರೆ. ಇದು ರಾಜ್ಯದ ಗಡಿ ಭಾಗದ ಜನರಲ್ಲಿ ಆತಂಕ ಮೂಡಿಸಿದೆ.ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿ ದೀರ್ಘಕಾಲದ ನೀರಿನ ಸಮಸ್ಯೆಯನ್ನು ಪರಿಹರಿಸಲು 3,200 ಕೋಟಿ ರೂ.ಗಳ ಪ್ರವಾಹ ನಿರ್ವಹಣೆ ಮಿಷನ್ ಅನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸೋಮವಾರ ಘೋಷಿಸಿದ್ದಾರೆ.ಈ ಉಪಕ್ರಮವು ಮಳೆನೀರಿನ ಸಂಗ್ರಹವನ್ನು ಹೆಚ್ಚಿಸುವುದು ಮತ್ತು ಕೃಷ್ಣ ಹಾಗೂ ಪಂಚಗಂಗಾ ನದಿಗಳ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.3,200 ಕೋಟಿ ವೆಚ್ಚದ ಈ ಮಿಷನ್ ಕೊಲ್ಲಾಪುರ, ಸಾಂಗ್ಲಿ ಮತ್ತು ಇಚಲಕರಂಜಿಯಲ್ಲಿ ಮಳೆನೀರಿನ ಸಂಗ್ರಹವನ್ನು ಹೆಚ್ಚಿಸುವ ಮೂಲಕ, ಕೃಷ್ಣಾ ಮತ್ತು ಪಂಚಗಂಗಾ ನದಿಗಳ…

Read More

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂಭ್ರಮದ ಯುವ ಸೌರಭ | ಜಿಲ್ಲಾಧಿಕಾರಿ ಡಾ. ಆನಂದ.ಕೆ ಸಲಹೆ ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ನಾಡಿನ ಪಾರಂಪರಿಕ ಕಲೆ, ಜಾನಪದ ಹಾಗೂ ರಂಗಭೂಮಿ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವಲ್ಲಿ ಯುವಜನತೆಯ ಪಾತ್ರ ಮಹತ್ತರವಾದದ್ದು. ‘ಯುವ ಸೌರಭ’ದಂತಹ ವೇದಿಕೆಗಳು ಗ್ರಾಮೀಣ ಹಾಗೂ ಉದಯೋನ್ಮುಖ ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ನೀಡಲಿವೆ ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಹೇಳಿದರು.​ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸ್ಥಳೀಯ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ಯುವ ಸೌರಭ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.​ಇಂದಿನ ಯುವಪೀಳಿಗೆಯು ದೇಶದ ಸಂಸ್ಕೃತಿ, ಕಲೆ ಮತ್ತು ಜಾನಪದ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವಲ್ಲಿ ಇಂತಹ ವೇದಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಯುವಕರು ವ್ಯಾಸಂಗದ ಜೊತೆಗೆ ಸಾಂಸ್ಕೃತಿಕ ರಂಗದಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದ ಜಿಲ್ಲಾಧಿಕಾರಿಗಳು, ಪ್ರಸ್ತುತ…

Read More

ಪೋಲಿಸ್ ಕಾನ್‌ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ | ಆ.೨ ರಂದು ಜಿಲ್ಲೆಯ ೬೧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ | ೨೪,೪೩೪ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ವೃಂದದ ನಾಗರಿಕ (ಸಿವಿಲ್) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಶಿಸ್ತು ಬದ್ದವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ವಿ.ಬಿ.ದರಬಾರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಒಟ್ಟು ೬೧ ಪರೀಕ್ಷಾ ಕೇಂದ್ರಗಳಲ್ಲಿಯೂ ಯಾವುದೇ ರೀತಿಯ ಲೋಪದೋಷಗಳಿಲ್ಲದೆ ಈ ಪರೀಕ್ಷೆಗಳು ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.ಆಗಸ್ಟ್ ೦೨,೨೦೨೬ ರಂದು ಬೆಳಿಗ್ಗೆ ೧೦:೩೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಈ ಲಿಖಿತ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಗೆ…

Read More

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಭಿಮತ ಉದಯರಶ್ಮಿ ದಿನಪತ್ರಿಕೆ​ಚಿಕ್ಕಬಳ್ಳಾಪುರ(ಮುದ್ದೇನಹಳ್ಳಿ)/ಬೆಂಗಳೂರು: ಕೃತಕ ಬುದ್ಧಿಮತ್ತೆ (ಂಡಿಣiಜಿiಛಿiಚಿಟ Iಟಿಣeಟಟigeಟಿಛಿe-ಂI) ರೂಪದ ಆಧುನಿಕ ತಂತ್ರಜ್ಞಾನವು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗದೆ, ಗ್ರಾಮೀಣ ಭಾಗದ ಪ್ರತಿಯೊಬ್ಬ ಪ್ರತಿಭಾವಂತ ಯುವಕ-ಯುವತಿಯರಿಗೂ ತಲುಪಿದಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಸಾಧ್ಯ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಐ.ಎ.ಎಸ್. ತಿಳಿಸಿದರು.​ಅವರು ಇಂದು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ‘ಸತ್ಯಸಾಯಿ ಗ್ರಾಮ’ದಲ್ಲಿ ಏರ್ಪಡಿಸಲಾಗಿದ್ದ ‘ರೂರಲ್ ಶೋರ್ಸ್ ಎಐ ಕೌಶಲ್ಯ ಮತ್ತು ಅನುಭವ ಕೇಂದ್ರ’ (ಖuಡಿಚಿಟShoಡಿes ಂI Sಞiಟಟiಟಿg ಚಿಟಿಜ ಇxಠಿeಡಿieಟಿಛಿe ಅeಟಿಣಡಿe) ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ, “ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿರುವ ಈ ಕಾಲಘಟ್ಟದಲ್ಲಿ ಎಐ ನಂತಹ ಆಧುನಿಕ ತಂತ್ರಜ್ಞಾನಕ್ಕೆ ಕರುಣೆ, ನೈತಿಕತೆ ಮತ್ತು ಸದ್ಗುಣಗಳ ಸ್ಪರ್ಶವಿರಬೇಕು. ತಂತ್ರಜ್ಞಾನವು ಮಾನವನ ಬುದ್ಧಿವಂತಿಕೆ ಮತ್ತು ಸದ್ಗುಣಗಳನ್ನು ಹೆಚ್ಚಿಸುವಂತಿರಬೇಕು. ಸತ್ಯಸಾಯಿ ಗ್ರಾಮದಂತಹ ಪವಿತ್ರ ಹಾಗೂ ಸೇವಾ ಮನೋಭಾವದ ವಾತಾವರಣದಲ್ಲಿ ಈ ಕೇಂದ್ರ ಪ್ರಾರಂಭವಾಗಿರುವುದು ಅತ್ಯಂತ ಸೂಕ್ತವಾಗಿದೆ,” ಎಂದು ಅಭಿಪ್ರಾಯಪಟ್ಟರು.ಗ್ರಾಮೀಣ…

Read More