Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆ ಹೆಚ್ಚಿಸುತ್ತದೆ ಎಂದು ಶಿಕ್ಷಣ ಸಂಯೋಜಕ ಬಿ.ಬಿ.ಪಾಟೀಲ ಎಂದು ಹೇಳಿದರು.ಸಿಂದಗಿ ಪಟ್ಟಣದ ಶ್ರೀ ಸಮರ್ಥ ವಿದ್ಯಾ ವಿಕಾಸ ಸಂಸ್ಥೆಯ ವಿದ್ಯಾನಿಕೇತನ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಆಹಾರ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ರಿಬ್ಬನ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.ವಿಜ್ಞಾನ ಮೇಳಗಳು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದಲ್ಲದೆ ಸೃಜನಶೀಲತೆ ಹೆಚ್ಚಿಸುತ್ತದೆ ಮತ್ತು ಸರ್ ಸಿ.ವಿ ರಾಮನ್ ಅವರು ಬೆಳಕಿನ ವಕ್ರೀಭವನದ ಕ್ರಿಯೆಯಲ್ಲಿ ನಡೆಸಿದ ಸಂಶೋಧನೆಯ ಫಲವಾಗಿ ನೋಬೆಲ್ ಪ್ರಶಸ್ತಿಗೆ ಭಾಜನರಾದರು. ಆ ಸವಿನೆನಪಿಗಾಗಿ ನಾವು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುತ್ತೇವೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸುವಲ್ಲಿ ವಿಜ್ಞಾನ ಪ್ರದರ್ಶನ ಸಹಕಾರಿಯಾಗಿದೆ ಎಂದರು.ಈ ವೇಳೆ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ ಮಾತನಾಡಿ, ವಿಜ್ಞಾನ ಪ್ರದರ್ಶನ ಮತ್ತು ಆಹಾರ ಮೇಳಗಳು ಒಟ್ಟಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ ೦೪ ಮತ್ತ ೦೫ ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸಿಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್‌ಮೆಂಟ್, ನವದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದೆ.ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ. ಮೊದಲನೆಯದಾಗಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು (ಡಿ.ಇ.ಓ) ಮತ್ತು ಚುನಾವಣಾ ನೋಂದಣ ಅಧಿಕಾರಿಗಳನ್ನು (ಇ.ಆರ್.ಓ) ನಾಮನಿರ್ದೇಶನ ಮಾಡಲು ಸೂಚನೆ ನೀಡಲಾಗಿದೆ.ಶಾಸನಬದ್ಧ ಅಧಿಕಾರಿಗಳಾಗಿ, ಎಲ್ಲಾ ರಾಜ್ಯ / ಕೇಂದ್ರಾಡಳಿತ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ನೋಂದಣಾ ಅಧಿಕಾರಿಗಳು (ಇ.ಆರ್.ಓ) ರಾಜ್ಯ, ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ಈ ಸಮ್ಮೇಳನವು ಅಗತ್ಯ ಮಾಹಿತಿಯನ್ನು ಒದಗಿಸಲಿದೆ. ಅಲ್ಲದೆ ಎರಡು ದಿನಗಳ ಈ ಸಮ್ಮೇಳನವು ಪರಸ್ಪರರ ಅನುಭವಗಳಿಂದ ಬುದ್ದಿಮತ್ತೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಇದೇ ಮಾ.೧ರಿಮದ ೨೦ರವರೆಗೆ ಜಿಲ್ಲೆಯ ೬೩ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಸುವ್ಯವಸ್ಥಿತ ಪರೀಕ್ಷೆಗಾಗಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ಕಲಂ ೧೬೩ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರು ಮೊಬೈಲ್ ಫೋನ್‌ನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ ಅಂಗಡಿಗಳು, ಕಂಪ್ಯೂಟರ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ತೆರೆಯದಂತೆ ನಿಷೇಧಿಸಿ ಆದೇಶಿಸಲಾಗಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.ಸಭೆಯಲ್ಲಿ ಡೇ-ನಲ್ಮ ಯೋಜನೆಯ ಎಲ್ಲ ಉಪಘಟಕಗಳ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಪಿಎಂ ಸ್ವನಿಧಿ, ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯಡಿ ೮ ಸಾಮಾಜಿಕ ಭದ್ರತಾ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಸೂಚನೆ ನೀಡಲಾಯಿತು.ಅಮೃತ ೨.೦ ಯೋಜನೆಯ ಅಮೃತ್ ಮಿತ್ರ ಕಾರ್ಯಕ್ರಮದಡಿ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದ್ದು, ಅರ್ಹತೆ ಪಡೆದ ಮಹಿಳಾ ಸ್ವಸಹಾಯ ಸಂಘಗಳಿಗೆ ಕಾಮಗಾರಿ ಆದೇಶ ನೀಡಲು ಕ್ರಮ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಳ ಮುಖ್ಯಾಧಿಕಾರಿಗಳಿಗೆ ಸೂಚಿಸಲಾಯಿತು.ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆಗೆ ಸೂಕ್ತ ಸ್ಥಳ ಗುರುತಿಸುವುದು, ಉದ್ಯೋಗಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಲು ಸೂಕ್ತ ಪ್ರಚಾರ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಲಾಯಿತು.ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ, ವಿಜಯಪುರ ಡಿಸ್ಟಿçಕ್ ಇಂಡಸ್ಟ್ರಿಯಲ್ ಓನರ್ ಅಸೋಸಿಯೇಶನ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ವಿಜಯಪುರ, ಇಂಡಿ & ಬಸವನಬಾಗೇವಾಡಿ ತಾಲೂಕಿನ ೭೦೨ ಜನವಸತಿಗಳ ಹಾಗೂ ೫ ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯ (ಆಃಔಖಿ Sಛಿheme-I) ಹಾಗೂ ಜಿಲ್ಲೆಯ ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕಿನ ೩೪೩ ಜನವಸತಿಗಳ ಹಾಗೂ ೬ ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯ (ಆಃಔಖಿ Sಛಿheme-II) ವ್ಯಾಪ್ತಿಯಡಿ ಬರುವ ಪೈಪಲೈನ್ ಅಳವಡಿಸುವ ಕಾಮಗಾರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಅತ್ಯಂತ ಅವಶ್ಯಕವಾಗಿರುವುದರಿಂದ ಪೈಪಲೈನ್ ಕಾಮಗಾರಿಯನ್ನು ಭೂಮಿಯ ಆಳದಲ್ಲಿ ಅಳವಡಿಸಲಾಗುವುದರಿಂದ ಭೂಸ್ವಾಧೀನ ಪ್ರಕ್ರೀಯೆ ಅವಶ್ಯಕತೆ ಇರುವುದಿಲ್ಲ. ಆದರೆ ಕೆಲವರು ತಕರಾರು ಮಾಡಿ ಕಾಮಗಾರಿಯನ್ನು ಸ್ಥಗಿತಗೊಳಿಸುತ್ತಿದ್ದರಿಂದ, ಈ ಯೋಜನೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಗ್ರಾಮೀಣ ಜನವಸತಿಗಳಿಗೆ ನೀರು ಪೂರೈಸುವ ಹಿತದೃಷ್ಟಿಯಿಂದ ಸಂಬಂಧಿಸಿದ ಅಧಿಕಾರಿಗಳು ಸಾರ್ವಜನಿಕರಿಂದ ಕಾಮಗಾರಿಗಳಿಗೆ ಅಡ್ಡಿಯಾಗದಂತೆ ನೋಡಿಕೊಂಡು ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿದೆ.ಈ ಯೋಜನೆಯು ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಹೊಂದಿದ್ದು, ಸ್ಥಳೀಯ ಸಮುದಾಯಗಳ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಲ್ಮೇಶ್ವರ ದೇವಸ್ಥಾನಕ್ಕೆ ಮಹಾಶಿವರಾತ್ರಿ ನಿಮಿತ್ಯವಾಗಿ ಶಿವಯೋಗದ ನಂತರ ಭಕ್ತರು ಆಗಮಿಸಿ ನೈವಿಧ್ಯ ಅರ್ಪಿಸಿ ಕಾಶೀಲಿಂಗನ ದರ್ಶನ ಪಡೆದರು.ಪಟ್ಟಣದ ಆರಾಧ್ಯ ದೇವನೇನಿಸಿದ ಕಲ್ಮೇಶ್ವರನ ದೇವಸ್ಥಾನಕ್ಕೆ ಬುಧವಾರ ಶಿವರಾತ್ರಿ ಅಂಗವಾಗಿ ನೂರಾರು ಭಕ್ತರು ಆಗಮಿಸಿ ಪೂಜೆ ಸಲ್ಲಿಸಿ, ನೈವಿಧ್ಯೆ ಅರ್ಪಿಸುವುದರ ಮೂಲಕ ಶಿವಯೋಗದ ಭಕ್ತಿಭಾವ ಮೆರೆದರು. ಬೆಳಿಗ್ಗೆಯಿಂದಲೇ ಉಪವಾಸ ವೃತಕೈಗೊಂಡಿದ್ದ ಭಕ್ತ ಸಮೂಹ ಸಾಯಂಕಾಲ ಸ್ನಾನ , ಪೂಜಾದಿ ಕರ್ಮಗಳನ್ನು ಮುಗಿಸಿ ದೇವಸ್ಥಾನಕ್ಕೆ ಆಗಮಿಸಿದರು. ನಂತರ ಪುಷ್ಪಗಳಿಂದ ಅಲಂಕೃತಗೊಂಡ ಶಿವಲಿಂಗ ದರ್ಶನ ಪಡೆದು ಪುನೀತರಾದರು. ಅದರಲ್ಲೂ ಮಹಿಳೆಯರು ಹಣ್ಣುಗಳಿಂದ ಕೂಡಿದ ನೈವಿಧ್ಯ ತಂದು ಅರ್ಪಿಸುವುದು ಸಾಮಾನ್ಯವಾಗಿತ್ತು. ಅರ್ಚಕರು ಕಲ್ಮೇಶ್ವರ(ಕಾಶೀಲಿಂಗ)ನಿಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಬಿಲ್ವಪತ್ರೆ, ಪುಷ್ಪ, ಹಾರಗಳಿಂದ ಅಲಂಕಾರಗೊಳಿಸಿ ಭಕ್ತ ಸಮೂಹದ ದರ್ಶನಕ್ಕೆ ಗರ್ಭಗುಡಿಗುಡಿಯಲ್ಲಿ ಅವಕಾಶ ಕಲ್ಪಿಸಿದ್ದರು.ಪಟ್ಟಣದ ಮಲ್ಲಯ್ಯನ ದೇವಸ್ಥಾನ, ಶಿವನಕಳ್ಳಿಯ ಶಿವನ ದೇವಾಲಯ, ಹೊಸನಗರದ ಪ್ರಳಯರುದ್ರ ಈರಣ್ಣ ದೇವಸ್ಥಾನ, ಇಂಡಿ ರಸ್ತೆಯ ರೇಣುಕಾಚಾರ್ಯ ಮಂದಿರದ ಶಿವಲಿಂಗಗಳಿಗೆ ಶಿವರಾತ್ರಿ ನಿಮಿತ್ಯ ವಿಶೇಷ ಪೂಜೆಗಳು ಜರುಗಿದವು. ಭಕ್ತರು ದರ್ಶನ ಪಡೆದು ಪುನೀತರಾದರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಮಲ್ಲಿಕಾರ್ಜುನಮಠ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ವಿದ್ಯುತ್ ಅವಘಡ ಉಂಟಾಗಿ ಸುಮಾರು ೧.೫೦ ಮೌಲ್ಯದ ಕಬ್ಬಿನ ಬೀಜ, ರೌದಿ, ಪೈಪ್‌ಗಳು ಬೆಂಕಿಗೆ ಆಹುತಿಯಾದ ಘಟನೆ ಮಂಗಳವಾರ ಜರುಗಿದೆ.ಪಟ್ಟಣದ ಪ್ರಭಾವತಿ ಮಲ್ಲಿಕಾರ್ಜುನಮಠ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಕಬ್ಬು ಹಾಗೂ ದ್ರಾಕ್ಷಿ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಕೆಲವು ದಿನಗಳ ಹಿಂದೆ ಕಬ್ಬನ್ನು ಕಟಾವು ಮಾಡಿ ಬೀಜಗಳನ್ನು ಹಾಗೂ ರೌದಿಯನ್ನು ಸಂಗ್ರಹಿಸಿ ಇಡಲಾಗಿತ್ತು. ಆದರೆ ಏಕಾಏಕಿ ವಿದ್ಯುತ್ ಶಾಟ್ ಸರ್ಕಿಟ್‌ನಿಂದ ಬೆಂಕಿ ತಗುಲಿದ ಪರಿಣಾಮ ಕಬ್ಬಿನ ಬೀಜ, ದ್ರಾಕ್ಷಿ ಬೆಳೆಗೆ ಅಗತ್ಯವಾದ ೩೦ ರೌದಿ ಬಂಡಲ್‌ಗಳು, ಪೈಪ್‌ಗಳು ಸುಟ್ಟು ಹಾನಿಗೀಡಾಗಿದೆ. ಜೊತೆಗೆ ದ್ರಾಕ್ಷಿ ಬೆಳೆಯ ಎರಡು ಸಾಲುಗಳು ಸಹ ಸಂಪೂರ್ಣ ಹಾಳಾಗಿವೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು ಆದರೂ ಬಹುತೇಕ ಸುಟ್ಟು ಕರಕಲಾಗಿದ್ದವು.ಜಿಲ್ಲೆಯಾದ್ಯಂತ ಹಲವಾರು ತಿಂಗಳಿನಿಂದ ವಿದ್ಯುತ್ ಅವಘಡದಿಂದ ಕಬ್ಬು ಬೆಳೆಯುವ ರೈತರು ತೊಂದರೆಗೆ ಇಡಾಗುತ್ತಿದ್ದಾರೆ. ಅದಕ್ಕಾಗಿ ಕಬ್ಬಿನ ಬೆಳೆಗಳ ಮೇಲಿನ ತಂತಿಗಳನ್ನೆಲ್ಲ ಬದಲಾಯಿಸಬೇಕು.…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಹಾಶಿವರಾತ್ರಿಯ ಉಪವಾಸ ಆಚರಣೆಯಿಂದ ನಕಾರಾತ್ಮಕ ಚಿಂತನೆ, ಶಕ್ತಿಗಳು ದೂರವಾಗುತ್ತವೆ ಎಂದು ಪ್ರವಚನಕಾರ ಅಮೃತಾನಂದಶ್ರೀಗಳು ಹೇಳಿದರು.ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದ ರಾಚೋಟೇಶ್ವರಮಠದ ಆವರಣದಲ್ಲಿ ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಆಧ್ಯಾತ್ಮೀಕ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿವರಾತ್ರಿಯ ಆಚರಣೆಯಿಂದ ಜೀವನಕ್ಕೆ ಹೊಸ ಚೈತನ್ಯ ಲಭಿಸುತ್ತದೆ. ಜೊತೆಗೆ ಪ್ರತಿಯೊಬ್ಬ ವ್ಯಕ್ತಿಗೆ ಆತ್ಮಾವಲೋಕನ ಮಾಡಿಕೊಳ್ಳಲು ಹಾಗೂ ಆಧ್ಯಾತ್ಮೀಕವಾಗಿ ವಿಕಸನಗೊಳ್ಳಲು ಸಹಕಾರಿಯಾಗುತ್ತದೆ ಎಂದರು.ಬೋರೆಗಾಂವ ಅಮೋಘಸಿದ್ಧಮಠದ ಬಸವರಾಜಶ್ರೀ, ಬೆಳ್ಳೇರಿ ಬಸವಾನಂದ ಸ್ವಾಮೀಜಿ, ಗೋರಚಿಂಚೋಳಿಯ ಸಿದ್ಧರಾಮೇಶ್ವರ ಶ್ರೀ, ನಾಗಠಾಣ ಗುರುದೇವಾಶ್ರಮದ ಪ್ರಜ್ಞಾನಂದಶ್ರೀ, ಹುಲಜಂತಿಯ ಮಾಳಿಂಗರಾಯರು, ಮುಳಸಾವಳಗಿಯ ನಿಂಗರಾಯರು, ಬಾಲಗಾಂವದ ಅಮೋಘಸಿದ್ಧರು, ಸ್ಥಳೀಯ ಶಿವಯ್ಯ ಸ್ವಾಮೀಜಿ, ಗೋವಿಂದರು, ಚಿಕ್ಕರೂಗಿಯ ಶ್ರೀಮಂತ ಪೂಜಾರಿ, ಯಂಭತ್ನಾಳದ ಭೀಮಾಶಂಕರರು ಆಶೀರ್ವಚನ ನೀಡಿ ಮಾತನಾಡಿದರು.ನಿವಾಳಖೇಡ ಗ್ರಾಮದ ಸಿದ್ಧಕೃಪಾ ಮಲ್ಲಿಕಾರ್ಜುನ ಮಹಾಂತಮಠದ ಬಸವಾನಂದಶ್ರೀಗಳು ಕಾರ್ಯಕ್ರಮ ನಿರ್ವಹಣೆ ಮಾಡಿದರು. ಮುಳಸಾವಳಗಿ ಶರಣಗೌಡ ಮಾಲಿಪಾಟೀಲ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಸಾಯಿಕುಮಾರ ಬಿಸನಾಳ, ವಿದ್ಯಾಧರ ಸಂಗೋಗಿ ಮಾತನಾಡಿದರು. ಪ್ರವಚನದ ನಂತರ ಶಿವರಾತ್ರಿ ಅಂಗವಾಗಿ ಹಣ್ಣು, ಖರ್ಜೂರದ ಮಹಾಪ್ರಸಾದ ಜರುಗಿತು.ಸುರೇಶಗೌಡ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾಶಿವರಾತ್ರಿಯ ಅಂಗವಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಬುಧವಾರ 770 ಅಮರ ಗಣಾಧೀಶ್ವರರ ಲಿಂಗದ ಗುಡಿ ಮತ್ತು ಶಿವಗಿರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.ಮೊದಲಿಗೆ ನಗರದಲ್ಲಿರುವ 770 ಅಮರ ಗಣಾಧೀಶ್ವರರ ಲಿಂಗದ ಗುಡಿಗೆ ತೆರಳಿದ ಅವರು ವಿಶೇಷ ಪೂಜೆ ಸಲ್ಲಿಸಿ, ನಾಡಿನಾದ್ಯಂತ ಉತ್ತಮ ಮಳೆ, ಬೆಳೆ, ಶಾಂತಿ, ಸಮೃದ್ಧಿ ನೆಲೆಸಲಿ. ರಾಜ್ಯದ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,12 ನೇ ಶತಮಾನದಲ್ಲಿ 770 ಅಮರಗಣಂಗಳರು (ಶರಣರರು) ಬಸವೇಶ್ವರ ಜೊತೆಗೂಡಿ ಸಾಮಾಜಿಕ ಮೌಢ್ಯಗಳನ್ನು ಹೋಗಲಾಡಿಸಿ, ಸಮಾನತೆಗಾಗಿ ಶ್ರಮಿಸಿದ್ದರು. ಅವರು ನೀಡಿದ ಕೊಡುಗೆಯ ಸ್ಮರಣಾರ್ಥ ಅವರ ಹೆಸರಿನಲ್ಲಿಯೇ ಬಂಥನಾಳ ಶ್ರೀ ಸಂಗನಬಸವ ಮಹಾಶಿವಯೋಗಿಗಳ ದಿವ್ಯ ಸಂಕಲ್ಪದಂತೆ 1954 ರಲ್ಲಿ ನಗರದಲ್ಲಿ 770 ಅಮರ ಗಣಾಧೀಶ್ವರರ (ಅಮರಗಣಂಗಳ) ಸ್ಮಾರಕ ಲಿಂಗಗಳ ಪ್ರತಿಷ್ಠಾಪನೆಯಾಗಿ 1960ರಲ್ಲಿ ದೇವಸ್ಥಾನ ಲೋಕಾರ್ಪಣೆಯಾಗಿತ್ತು. ಏಳು ದಶಕಗಳ ನಂತರ ಕಳೆದ ವರ್ಷ ರೂ. 1.51 ಕೋ.…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಮೂಲಕ ಮಾದರಿ ಶಾಲೆಯನ್ನಾಗಿಸುವಲ್ಲಿ ಶಿಕ್ಷಕರ ಜೊತೆ ಜೊತೆಗೆ ಸಮುದಾಯದ ಸಹಭಾಗಿತ್ವ ಸಹಕಾರ ಅತ್ಯಗತ್ಯ ಎಂದು ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೊಲೀಸ್ ಪಾಟೀಲ ಹೇಳಿದರು.ಪಟ್ಟಣದ ಸರಕಾರಿ ಉರ್ದು, ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ (ಎಫ್.ಎಲ್.ಎನ್) ಅಭಿಯಾನ ಮೇಳ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ವಿಶೇಷ ಸೌಲಭ್ಯ ನೀಡುತ್ತಿದೆ ಎಂದವರು, ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಪಾಲಕ ಪೋಷಕರು ಕೈಜೋಡಿಸಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್. ಡಿ. ಎಮ್. ಸಿ ಅಧ್ಯಕ್ಷ ನೂರುದ್ದೀನ್ ನಾಶಿ ಸರ್ಕಾರಿ ಶಾಲೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ ಸಮವಸ್ತ್ರ, ಬೂಟು, ಮಧ್ಯಾಹ್ನದ ಬಿಸಿಯೂಟ ಅನುಷ್ಠಾನಕ್ಕೆ ತಂದಿದ್ದು, ಪಾಲಕರು ಸರ್ಕಾರಿ ಶಾಲೆಗಳ ಉಳಿಸಿ ಬೆಳೆಸಲು ಮುಂದಾಗಬೇಕು ಎಂದರು.ಇದೇ ವೇಳೆ ಪುರಸಭೆ ಅಧ್ಯಕ್ಷ ರಹಿಮಾನ್…
