Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಇದೇ ಪ್ರಪ್ರಥಮ ಬಾರಿಗೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಹಾಗೂ ಜೋಳಿಗೆ ಸಾಂಸ್ಕೃತಿಕ ಪ್ರತಿಷ್ಠಾನ ಚಡಚಣ ಇವರ ಸಹಕಾರದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿರುವ ಜೋಳಿಗೆ ಸಾಂಸ್ಕೃತಿಕ ಪ್ರತಿಷ್ಠಾನ ವೇದಿಕೆಯಲ್ಲಿ ಜನಕಥಾಕೀರ್ತನ ಶಿಬಿರ ಮತ್ತು ಉತ್ಸವ -2025 ಇದೇ ಪೆಬ್ರುವರಿ 19 ರಿಂದ 23 ರವರೆಗೆ ಐದು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಾಡಿನಾದ್ಯಂತ ಹಲವಾರು ಸಾಹಿತಿಗಳು, ಕಲಾವಿದರು, ವಿವಿಧ ಅಕಾಡೆಮಿಯ ಅಧ್ಯಕ್ಷರು, ಸದಸ್ಯರು ಆಗಮಿಸಲಿದ್ದಾರೆ, ಆದ ಕಾರಣ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಕಾರ್ಯಕ್ರಮವನ್ನು ಯಸ್ಸಿಶ್ವಿಗೊಳಿಸಬೇಕೆಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು, ಸದಸ್ಯ ಸಂಚಾಲಕರಾದ ದೇವರಾಜು.ಡಿ (ಪದ ದೇವರಾಜ) ಅವರು ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಇದೇ ಪ್ರಪ್ರಥಮ ಬಾರಿಗೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಹಾಗೂ ಜೋಳಿಗೆ ಸಾಂಸ್ಕೃತಿಕ ಪ್ರತಿಷ್ಠಾನ ಚಡಚಣ ಇವರ ಸಹಕಾರದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿರುವ ಜೋಳಿಗೆ ಸಾಂಸ್ಕೃತಿಕ ಪ್ರತಿಷ್ಠಾನ ವೇದಿಕೆಯಲ್ಲಿ ಜನಕಥಾಕೀರ್ತನ ಶಿಬಿರ ಮತ್ತು ಉತ್ಸವ -2025 ಇದೇ ಪೆಬ್ರುವರಿ 19 ರಿಂದ 23 ರವರೆಗೆ ಐದು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಾಡಿನಾದ್ಯಂತ ಹಲವಾರು ಸಾಹಿತಿಗಳು, ಕಲಾವಿದರು, ವಿವಿಧ ಅಕಾಡೆಮಿಯ ಅಧ್ಯಕ್ಷರು, ಸದಸ್ಯರು ಆಗಮಿಸಲಿದ್ದಾರೆ, ಆದ ಕಾರಣ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಕಾರ್ಯಕ್ರಮವನ್ನು ಯಸ್ಸಿಶ್ವಿಗೊಳಿಸಬೇಕೆಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು, ಸದಸ್ಯ ಸಂಚಾಲಕರಾದ ದೇವರಾಜು.ಡಿ (ಪದ ದೇವರಾಜ) ಅವರು ತಿಳಿಸಿದ್ದಾರೆ.

Read More

ಡೊಳ್ಳು ಕುಣಿತ, ಕೋಲಾಟ ವಿವಿಧ ವಾದ್ಯ ವೈಭಗಳೊಂದಿಗೆ ಭವ್ಯ ಮೆರವಣಿಗೆ ಉದಯರಶ್ಮಿ ದಿನಪತ್ರಿಕೆ ಚಡಚಣ: ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಕುತೂಹಲ ಮೂಡಿಸಿ ಅವರಲ್ಲಿ ಪ್ರಶ್ನೆ ಮೂಡುವಂತೆ ಮಾಡುವುದು, ಸಂತಸದಾಯಕ ಕಲಿಕೆ ಪ್ರಕ್ರಿಯೆ, ಹಿಂಜರಿಕೆ ಹೋಗಲಾಡಿಸಿ ಆತ್ಮ ವಿಶ್ವಾಸ ಹೆಚ್ಚಿಸುವುದು, ವಿಭಿನ್ನ ವಾತಾವರಣ, ಗುಂಪಿನಲ್ಲಿ ಕಲಿಕೆ ಮೊದಲಾದ ಉದ್ದೇಶದಿಂದ ಕಲಿಕಾ ಹಬ್ಬ ಆಚರಣೆಗೆ ನಿರ್ಧರಿಸಲಾಗಿದೆ ಬಿಇಒ ಸುಜಾತಾ ಹುನ್ನೂರರವರು ಎಂದರು.ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚಡಚಣ ವಲಯ ಸಮೂಹ ಸಂಪನ್ಮೂಲ ಕೇಂದ್ರ ಚಡಚಣ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ಹಮ್ಮಿಕೊಂಡಿದ್ದ ‘ಕಲಿಕಾ ಹಬ್ಬ’ವನ್ನು ಸೋಮವಾರದಂದು ಉದ್ಘಾಟಿಸಿ ಮಾತನಾಡಿದ ಅವರು. ಕಲಿಕಾ ಹಬ್ಬ ಚಟುವಟಿಕೆ ಆಧಾರಿತವಾಗಿದ್ದು, ವಿದ್ಯಾರ್ಥಿಗಳು ಎಲ್ಲ ಚಟುವಟಿಕೆಗಳನ್ನು ಕಲಿಯಬೇಕು. ಆಟ ಆಡುವ ಮೂಲಕ ಪಾಠ ಕಲಿಯುವ ಕೆಲಸವಾಗಬೇಕು. ಸಮಯ ವ್ಯರ್ಥ ಮಾಡದೇ ಎಲ್ಲ ಮಕ್ಕಳು ಎರಡು ದಿನಗಳ ಕಾಲ ಕಲಿಕಾ ಹಬ್ಬದ ಚಟುವಟಿಕೆಗಳಾದ ಆಡು-ಹಾಡು, ಕಾಗದ-ಕತ್ತರಿ, ಊರು ತಿಳಿಯೋಣ, ಮಾಡು-ಹಾಡು ಎಂಬ ಗುಂಪುಗಳಲ್ಲಿ ಪೂರ್ಣವಾಗಿ ಭಾಗವಹಿಸಿ ಎಂದು…

Read More

ಸಿಂದಗಿಯಲ್ಲಿ ಸಹಕಾರ ಭವನ ಕಟ್ಟಡದ ಭೂಮಿ ಪೂಜೆ ನೆರವೇರಿಸಿದ ಸಚಿವ ಶಿವಾನಂದ ಪಾಟೀಲ ವಿಷಾದ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮೊದಲು ಸಹಕಾರಿ ಚಳುವಳಿಗೆ ನಾಂದಿ ಹಾಡಿದ್ದು ಕರ್ನಾಟಕ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ಇಂದು ಕರ್ನಾಟಕ ಸಹಕಾರಿ ರಂಗದಲ್ಲಿ ತನ್ನ ಅಸ್ಥಿತ್ವ ಕ್ಷೀಣಿಸುತ್ತಿರುವುದು ವಿಷಾದನೀಯ ಎಂದು ಸಚಿವ ಶಿವಾನಂದ ಪಾಟೀಲ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಬಂದಾಳ ರಸ್ತೆಯ ಅನ್ನಪೂರ್ಣೇಶ್ವರಿ ನಗರದಲ್ಲಿ ಸಿಂದಗಿ, ಆಲಮೇಲ, ದೇವರ ಹಿಪ್ಪರಗಿ ತಾಲೂಕಿನ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ, ಅರ್ಬನ್ ಬ್ಯಾಂಕು ಹಾಗೂ ಕ್ರೆಡಿಟ್, ಸೌಹಾರ್ದ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಸಹಕಾರ ಭವನ ಕಟ್ಟಡದ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.ಈ ನಾಡಿನಲ್ಲಿ ಅನೇಕ ಸಕ್ಕರೆ ಕಾರ್ಖಾನೆಗಳು ಸಹಕಾರಿ ಸಂಘದಿಂದ ಪ್ರಾರಂಭಗೊಂಡಿವೆ ಆದರೆ ದುರ್ದೈವ ಆ ಸಕ್ಕರೆ ಕಾರ್ಖಾನೆಗಳಲ್ಲಿರುವ ಅನೇಕರು ಅವುಗಳನ್ನು ಕ್ರಮೇಣ ಮುಚ್ಚಿ ತಮ್ಮದೆ ಆದ ಸ್ವಂತ ಕಾರ್ಖಾನೆಗಳನ್ನು ನಿರ್ಮಾಣ ಮಾಡಿದ್ದಾರೆ. ಸಹಕಾರಿ ರಂಗ ಇಲ್ಲದಿದ್ದರೆ ಯಾವ ಕ್ಷೇತ್ರವು ಅಭಿವೃದ್ದಿಯಾಗುತ್ತಿರಲಿಲ್ಲ. ಭಾರತದ ಕ್ಷೀರ ಕ್ರಾಂತಿ ಮಾಡಿದೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಕರ್ನಾಟಕ ಸರ್ಕಾರದ ವತಿಯಿಂದ ಇದೇ ಫೆ.೨೬, ೨೭ ಮತ್ತು ೨೮ರಂದು ಬೆಂಗಳೂರಿನ ಅಂತರರಾಷ್ಟ್ರೀಯ ಕನ್ವೆನಶನ್ ಸೆಂಟರ್‌ನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಹೊಟೆಲ್ ಉದ್ದಿಮೆದಾರರು, ಟ್ರಾವೆಲ್ ಏಜೆನ್ಸಿ, ಹೋಂ-ಸ್ಟೇ, ಕರಕುಶಲ ಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ ಹೋಲ್ಡರ್‌ಗಳಿಗೆ ವ್ಯಾಪಾರ-ವಹಿವಾಟು ಹೆಚ್ಚಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ಆಸಕ್ತ ಹೊಟೆಲ್ ಉದ್ದಿಮೆದಾರರು, ಟ್ರಾವೆಲ್ ಏಜೆನ್ಸಿ, ಹೋಂ-ಸ್ಟೇ, ಕರಕುಶಲ ಮಳಿಗೆದಾರರು, ಪ್ರವಾಸೋದ್ಯಮ ಸ್ಟೇಕ ಹೋಲ್ಡರ್‌ಗಳು ತಮ್ಮ ಉದ್ದಿಮೆಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳೊಂದಿಗೆ ವ್ಯವಹಾರ ಮಾಡಲು ಸುವರ್ಣಾವಕಾಶವಿದ್ದು, ಈ ಕಾರ್ಯಕ್ರಮದಲ್ಲಿ ವ್ಯಾಪಾರ ಮಳಿಗೆಗಳನ್ನು ಕಾಯ್ದಿರಿಸಲು ಆಸಕ್ತ ಹೊಂದಿರುವ ಜಿಲ್ಲೆಯ ಉದ್ದಿಮೆದಾರರು ಪ್ರವಾಸೋದ್ಯಮ ಇಲಾಖೆ ಸಮಾಲೋಚಕರಾದ ಅನಿಲಕುಮಾರ ರಾ.ಬಣಜಿಗೇರ ಮೊ: ೯೮೮೬೩೭೩೦೦೬ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ ಭಜಂತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿ ಫಸಲ್ ಭೀಮಾ ಯೋಜನೆಯಡಿ ರೈತರು ಸಲ್ಲಿಸಿದ್ದ ಅರ್ಜಿಗಳಲ್ಲಿ ಕೆಲವು ತಿರಸ್ಕೃತಗೊಂಡಿದ್ದು, ಈ ಕುರಿತು ರೈತ ಸಂಪರ್ಕ ಕೇಂದ್ರಗಳಲ್ಲಿ ಈಗಾಗಲೇ ಪ್ರಕಟಣೆ ನೀಡಲಾಗಿದೆ. ತಿರಸ್ಕೃತಗೊಂಡ ಅರ್ಜಿ ಬಗ್ಗೆ ರೈತರಲ್ಲಿ ಆಕ್ಷೇಪಣೆ ಇದ್ದಲ್ಲಿ ಮರು ದಾಖಲೀಕರಣಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಸಹಾಯಕ ನಿರ್ದೇಶಕರಾದ ಎಸ್.ಎ. ಇನಾಮದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಮುಸ್ಲಿಂ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೬ನೇ ತರಗತಿ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಶೇಕಡಾ ೭೫% ರಷ್ಟು ಹಾಗೂ ಇತರೆ ವರ್ಗದ ಶೇಕಡಾ ೨೫% ರಷ್ಟು ವಿದ್ಯಾರ್ಥಿಗಳಿಗೆ ಮೆರಿಟ್ ಅಥವಾ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಈ ವಸತಿ ಶಾಲೆಗಳಲ್ಲಿ ಶೇಕಡಾ ೫೦% ರಷ್ಟು ಹೆಣ್ಣು ಮಕ್ಕಳಿಗಾಗಿ ಮೀಸಲಿರುವುದು. ವಿದ್ಯಾರ್ಥಿಗಳ ಪೋಷಕರ ಆದಾಯ ೨.೫೦ ಮಿತಿ ಲಕ್ಷ ಮಿರಿರಬಾರದು. ಅರ್ಜಿ ಸಲ್ಲಿಸಲು ಮಾರ್ಚ ೧೦ ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಸೇವಾಸಿಂಧುಪೋರ್ಟಲ್ನಲ್ಲಿ ನೇರವಾಗಿ ವೆಬ್ಸೈಟ್ https://sevasindhuservices.karnataka.gov.in ಈ ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ…

Read More

ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ವ ಉದ್ಯೋಗ, ವೃತ್ತಿ ಕೌಶಲ್ಯತೆ, ಶಿಕ್ಷಣಕ್ಕೆ ಆದ್ಯತೆ ನೀಡಿ, ಸರ್ಕಾರ ಜಾರಿಗೊಳಿಸಿರುವ ವಿವಿಧ ಆರ್ಥಿಕ ಬೆಂಬಲ ನೀಡುವ ಯೋಜನೆಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗಕ್ಕೆ ದೊರಕಿಸಲು ಅಧಿಕಾರಿಗಳು ಇಚ್ಛಾಶಕ್ತಿ ಹಾಗೂ ಅಂತಕರಣದಿಂದ ಕಾರ್ಯನಿರ್ವಹಿಸಿ ಇಂತಹ ಸಮುದಾಯದವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈ ಸಮುದಾಯ ಆರ್ಥಿಕವಾಗಿ ಸದೃಢಗೊಳ್ಳುವುದರೊಂದಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಅಧಿಕಾರಿಗಳು ಯೋಜನೆಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳಿಗೆ ಸರ್ಕಾರ ನೀಡುವ ಆರ್ಥಿಕ ಬೆಂಬಲದ ಯೋಜನೆಗಳ ಬಗ್ಗೆ…

Read More

ಆರೋಪಿಯು ಅರಕೇರಿ ಎಲ್.ಟಿ ನಂ.೧ ಸತೀಶ ರಾಠೋಡ ಕೊಲೆ ಪ್ರಕರಣದಲ್ಲಿ ಭಾಗಿ | ಜಿಲ್ಲೆಯಲ್ಲಿ ಹಲವರಿಗೆ ಅಕ್ರಮ ಪಿಸ್ತೂಲ್‌ ಪೂರೈಕೆ | ಪೊಲೀಸರ ಕಾರ್ಯಕ್ಕೆ ಜಿಲ್ಲಾದ್ಯಂತ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದ ಕಂಟ್ರಿ ಪಿಸ್ತೂಲ್‌ ಗಳ ವಿಲೇವಾರಿಯ ಕಿಂಗ್ ಪಿನ್ ಸಾಗರ @ ಸುರೇಶ ರಾಠೋಡ ನನ್ನು ಫೆ.೧೩ ರಂದು ಬಂಧಿಸಿದ್ದ ಪೊಲೀಸರು ಇದೀಗ ಅಕ್ರಮ ಪಿಸ್ತೂಲ್ ಹೊಂದಿದ ೧೦ ಜನ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.ಈ ಕುರಿತು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಪ್ರಕರಣದ ಸಂಪೂರ್ಣ ವಿವರಗಳನ್ನು ಸುದ್ದಿಗಾರರ ಮುಂದೆ ಬಿಡಿಸಿಟ್ಟರು‌.ಆರೋಪಿ ಸಾಗರ @ ಸುರೇಶ ರಾಠೋಡ ಜಿಲ್ಲೆಯ ಹಂಚನಾಳ ಎಲ್‌ಟಿ ನಂ: 1 ನಿವಾಸಿಯಾಗಿದ್ದು ಜ.೨೮ ರಂದು ನಡೆದ ಅರಕೇರಿ ಎಲ್.ಟಿ ನಂ.೧ ರಲ್ಲಿ ನಡೆದ ಸತೀಶ ರಾಠೋಡ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಅವನು ನಾನಾ ಕಡೆಗೆ ಪೂರೈಕೆ ಮಾಡಿದ್ದ ೧೦ ಕಂಟ್ರಿ ಪಿಸ್ತೂಲ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಮಾ.10 ರಂದು ಬೆಳಿಗ್ಗೆ 10 ಗಂಟೆಗೆ ವಿಜಯಪುರ ನಗರದಲ್ಲಿರುವ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.ನಗರದ ಹೊಸ ಪತ್ರಿಕಾ ಭವನದಲ್ಲಿ ಸೋಮವಾರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅವರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷ ಪ್ರಕಾಶ ಬೆಣ್ಣೂರ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ, ಸಲಹಾ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಕೊಳ್ಳಲಾಯಿತು.ಅದೇ ದಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತರಾದ ಸುಶಿಲೇಂದ್ರ ನಾಯಕ, ಮಹೇಶ ಶಟಗಾರ, ಕೆಯುಡಬ್ಲುಜೆ ಪ್ರಶಸ್ತಿಗೆ ಭಾಜನರಾದ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಶಶಿಕಾಂತ ಮೆಂಡೇಗಾರ, ರಾಣಿ ಚನ್ನಮ್ಮ ವಿವಿ ಸಿಂಡಿಕೇಟ್ ಸದಸ್ಯರಾಗಿರುವ ರಫೀ ಭಂಡಾರಿ, ಕರ್ನಾಟಕ ಸರ್ಕಾರದ ಸುವರ್ಣ ಕರ್ನಾಟಕ ಪ್ರಶಸ್ತಿಗೆ ಭಾಜನರಾಗಿರುವ ರುದ್ರಪ್ಪ ಆಸಂಗಿ, ಸ್ಥಳೀಯ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಇರ್ಫಾನ್ ಶೇಖ್ ಇನ್ನಿತರರನ್ನು ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಲ್ಲದೆ ಸಭೆಯಲ್ಲಿ ಮೂರು ವರ್ಷ ಅವಧಿಯ ವರದಿ, ಸಮ್ಮೇಳನ ಸೇರಿ…

Read More