Author: editor.udayarashmi@gmail.com

ಫೆಬ್ರವರಿ ಮಾಹೆ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ನಗರ ವ್ಯಾಪ್ತಿಯ ಭೂತನಾಳ ಗ್ರಾಮದ ಹತ್ತಿರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಿರ್ಮಾಣವಾಗಿರುವ ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಫೆ.೧೭ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸೈಕ್ಲಿಂಗ್ ವೆಲೊಡ್ರೊಮ್ ಕಾಮಗಾರಿ ಸಂಪೂರ್ಣ ಪರಿಶೀಲನೆ ನಡೆಸಿದ ಅವರು, ಈ ಮಾಹೆಯ ಅಂತ್ಯಕ್ಕೆ ಪೂರ್ಣಗೊಳಿಸುವಂತೆಯೂ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿ ಶೇ.೯೫ರಷ್ಟು ಮುಕ್ತಾಯಗೊಂಡಿದ್ದು, ಅಲ್ಲಲ್ಲಿ ಟ್ರ್ಯಾಕ್ ಸಮತಟ್ಟುಗೊಳಿಸುವ ಹಾಗೂ ಕೆಲವು ಕಡೆ ಬಾಕಿ ಇರುವ ಪೇಂಟಿಗ್ ಕಾರ್ಯವನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಹಾಗೂ ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಅಧಿಕಾರಿಗಳಿಂದ ಪರಿಶೀಲನೆ ನಡೆಸುವ ಸೂಕ್ತ ಕ್ರಮಕ್ಕಾಗಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಸೂಚಿಸಿದರು.ಅರಣ್ಯ ಇಲಾಖೆಯ ಅಧೀನದಲ್ಲಿರುವ ಜಲ ಮೂಲ (ಬಾವಿ) ಗಳಿಂದ ಸೈಕ್ಲಿಂಗ್ ವೆಲೋಡ್ರೊಮಗೆ ಪೈಪ್‌ಲೈನ್ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸುವಂತೆಯೂ, ವೆಲೋಡ್ರೊಮ್ ಆವರಣದಲ್ಲಿ ಸಸಿಗಳನ್ನು ನೆಡಲು ಅಗತ್ಯ ಕ್ರಮಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಖಾಲಿ ಇರುವ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಸ್ಥಳೀಯ ಅಭ್ಯರ್ಥಿಗಳು ವಿದ್ಯಾರ್ಹತೆ ಹಾಗೂ ಅನುಭವಕ್ಕೆ ಸಂಬಂಧಿಸಿದಂತೆ ಎಲ್ಲ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: ೨೮-೦೨-೨೦೨೫ರ ಸಂಜೆ ೫ರ ಒಳಗಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾಶಿವರಾತ್ರಿ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಕಲ್ಪಿಸಲು ಫೆ.೧೯ ರಿಂದ ಫೆ.೨೬ರ ವರೆಗೆ ಶ್ರೀಶೈಲಗೆ ವಿಶೇಷ ಸಾರಿಗೆ ವ್ಯವಸ್ಥೆ ಕಾರ್ಯಾಚರಣೆ ಮಾಡುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಬಸವನ ಬಾಗೇವಾಡಿ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವದು. ಸದರಿ ಹೆಚ್ಚುವರಿ ವಾಹನಗಳಿಗೆ ಮುಂಗಡ ಟಿಕೇಟ್ ಬುಕ್ಕಿಂಗ ಸೌಕರ್ಯವನ್ನು ಕಲ್ಪಿಸಲಾಗಿದೆ.ಪ್ರಯಾಣಿಕರು ಸಾರಿಗೆ ಸೌಲಭ್ಯ ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಜಯಪುರ೧ನೇ ಘಟಕದ ವ್ಯವಸ್ಥಾಪಕ ಮೊಬೈಲ್ ಸಂಖ್ಯೆ: ೭೭೬೦೯೯೨೨೬೩, ವಿಜಯಪುರ-೨ನೇ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: ೭೭೬೦೯೯೨೨೬೪, ಕೇಂದ್ರ ಬಸ್ ನಿಲ್ದಾಣದ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೫೮, ನಗರ ಸಾರಿಗೆ -೩ನೇ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: ೭೭೬೦೯೧೪೦೦೮, ಇಂಡಿ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೬೫, ಸಿಂದಗಿಯ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೬೬, ಮುದ್ದೇಬಿಹಾಳ ಘಟಕದ ವ್ಯವಸ್ಥಾಪಕರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾಶಿವರಾತ್ರಿ ಪ್ರಯುಕ್ತ ಬಸಂತವನ ಶಿವಗಿರಿಯಲ್ಲಿ ಫೆ.೨೬ರಂದು ಉತ್ಸವ ಜರುಗಲಿದ್ದು, ಶಿವಗಿರಿಗೆ ತೆರಳುವ ಪ್ರಯಾಣಿಕರ ಅನಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.ಗಾಂಧಿಚೌಕ ನಗರ ಸಾರಿಗೆ ಬಸ್ ನಿಲ್ದಾಣ, ಸೆಟಲೈಟ್ ಬಸ್ ನಿಲ್ದಾಣ ಹಾಗೂ ಕೇಂದ್ರ ಬಸ್ ನಿಲ್ದಾಣಗಳಲ್ಲಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮ ಫೆಬ್ರವರಿ ೨೦ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೯:೩೦ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದವರೆಗೆ ಮೆರವಣಿಗೆ ಹಾಗೂ ಬೆಳಿಗ್ಗೆ ೧೦:೩೦ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜರುಗುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯಲ್ಲಿನ ವಿಶೇಷ ಪ್ರತಿನಿಧಿ-೨ ಹಾಗೂ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಇದೇ ಫೆಬ್ರವರಿ ೧೯ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೯:೩೦ಕ್ಕೆ ನಗರದ ಶಿವಾಜಿ ವೃತ್ತದಿಂದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದವರೆಗೆ ಮೆರವಣಿಗೆ ಹಾಗೂ ಬೆಳಿಗ್ಗೆ ೧೦:೩೦ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜರುಗುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಹಾಗೂ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೆ.ಪಿ.ಟಿ.ಸಿ.ಎಲ್ ವತಿಯಿಂದ ೧೧೦ ಕೆ.ವ್ಹಿ ಬೇ ಗಳ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ೧೧೦/೧೧ ಕೆ.ವ್ಹಿ ವಿವಿ ಕೇಂದ್ರ ಕೆಐಎಡಿಬಿ, ಭೂತನಾಳ, ಜುಮನಾಳ, ವಿಜಯಪುರ ಸಿಟಿ ಮತ್ತು ೩೩/೧೧ ಹೊನ್ನುಟಗಿ, ನಾಗಠಾಣ ಹಾಗೂ ೨೨೦/೧೧೦ ಸ್ವೀಕರಣಾ ಕೇಂದ್ರ ವಿಜಯಪುರದಿಂದ ಹೊರಹೋಗುವ ಎಲ್ಲಾ ೧೧ ಕೆ.ವ್ಹಿ ವಿದ್ಯುತ್ ಮಾರ್ಗಗಳಿಗೆ ದಿನಾಂಕ ೧೮-೦೨-೨೦೨೫ರ ಬೆಳಿಗ್ಗೆ ೦೯ರಿಂದ ಮಧ್ಯಾಹ್ನ ೨ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೊರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಕ್ಫ್ ಆಸ್ತಿ ರಿ.ಸ.ನಂ.೧೦೨೯ರ ೫ಎ ೧೯ಗುಂಟೆ ಜಮೀನಿನಲ್ಲಿ ಅನಧಿಕೃತವಾಗಿ ಶೆಡ್ಡ್ಗಳನ್ನು ನಿರ್ಮಾಣ ಮಾಡುತ್ತಿದ್ದು, ಅದನ್ನು ತೆರವುಗೊಳಿಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಖಬರಸ್ಥಾನ (ಸ್ಮಶಾನ) ಜಮೀನು ಖಬರಸ್ಥಾನಗೆ ಉಪಯೋಗವಾಗುವ ಹಾಗೆ ಮಾಡಬೇಕು ಎಂದು ಟಿಪ್ಪು ಕ್ರಾಂತಿ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಸ್ತಗೀರ ಮುಲ್ಲಾ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.ಸಿಂದಗಿ ಪಟ್ಟಣದ ವಕ್ಫ್ ಆಸ್ತಿ ರಿ.ಸ.ನಂ.೧೦೨೯ ಜಮೀನಿನಲ್ಲಿ ವಕ್ಫ್ ಆಸ್ತಿ ಸಂರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಂಡ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ವಕ್ಫ ಆಸ್ತಿಯಲ್ಲಿ ಅನಧಿಕೃತ ಶೆಡ್‌ಗಳು ನಿರ್ಮಾಣ ಮಾಡಬಾರದು. ಖಬರಸ್ಥಾನ ಆಸ್ತಿಯಾಗಿಯೇ ಉಳಿಯಬೇಕು. ಒಂದು ವೇಳೆ ಅನಿಧಿಕೃತ ಶೆಡ್ ನಿರ್ಮಿಸಿದರೆ ಮುಂಬರುವ ದಿನಮಾನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಹೋರಾಟದಲ್ಲಿ ಅಂಜುಮನ್ ಸಮಿತಿ ಅಧ್ಯಕ್ಷ ಅಬ್ದುಲ್‌ರಜಾಕ ದುದನಿ, ಸಮಾಜದ ಮುಖಂಡರಾದ ಯಾಕೂಬ್ ನಾಟೀಕಾರ, ಎಂ.ಎ.ಖತೀಬ, ಮೈಬೂಬಸಾಬ ನಾಟೀಕಾರ, ಮೈಬೂಬ ಹಸರಗುಂಡಗಿ, ಮೈಬೂಬ ವಾಲೀಕಾರ, ಸಲೀಮ ಜುಮನಾಳ, ರಹಿಮ್ ದುದನಿ, ದಲಿತ ಸೇನೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸುತ್ತಲೂ ಕಂಪೌಂಡ ನಿರ್ಮಿಸಲು ಕಾಲೇಜಿಗೆ ಶೀಘ್ರದಲ್ಲಯೇ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿಸುವೆ ಎಂದು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸರಕಾರಿ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಗೃಹ ಮಂಡಳಿಯ ೨೦೨೧-೨೨ನೆಯ ಸಾಲಿನ ಎಸ್.ಡಿ.ಪಿ ಯೋಜನೆಯಡಿಯಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.ಶಿಕ್ಷಣ ಕ್ಷೇತ್ರದಲ್ಲಿ ಸಿಂದಗಿ ನಗರ ಗಣನೀಯವಾಗಿ ಹೆಸರು ಮಾಡಿದೆ. ಜಿಲ್ಲೆಯಲ್ಲಿಯೇ ಸಿಂದಗಿ ಶಿಕ್ಷಣ ಕಾಶಿಯಾಗಿ ಬೆಳೆಯುತ್ತಿದೆ. ಶಿಕ್ಷಣಕ್ಕೆ ಹೆಚ್ಚಿನ ಪ್ರಾಧ್ಯಾನತೆಯನ್ನು ಮಕ್ಕಳ ಶ್ರೇಯೊಭಿವೃದ್ಧಿಗೆ ಸದಾ ಶ್ರಮಿಸುವೆ ಎಂದರು.ಈ ವೇಳೆ ಕಾಲೇಜು ಅಭಿವೃದ್ಧಿ ಸದಸ್ಯರಾದ ಸಿದ್ದನಗೌಡ ಪಾಟೀಲ, ಪ್ರಭುಲಿಂಗ ಲೋಣಿ, ಪ್ರತಿಭಾ ಚೆಳ್ಳಗಿ, ಪ್ರಕಾಶ ನಿಗಡಿ, ಬಸವರಾಜ ಅಂಬಲಗಿ, ಶಿವಾನಂದ ಗಣಿಹಾರ, ಜಿಲ್ಲಾ ಕೆಡಿಪಿ ಸದಸ್ಯ ನೂರ್‌ಅಹ್ಮದ ಅತ್ತಾರ, ಕೆ.ಎಚ್.ಬಿ ಅಭಿಯಂತರ ಸಾಧಿಕ್, ಗುತ್ತಿಗೆದಾರ ವೆಂಕಟೇಶ, ಪ್ರಾಚಾರ್ಯ ಎಸ್.ಎಎಸ್.ಹಳೆಮನಿ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ಕಾರ್ಯಕರ್ತರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾಗಿ ಶಕೀಲ್ ಬಾಗಮಾರೆ ರವರು ಜಿಲ್ಲಾಧ್ಯಕ್ಷರಾಗಿ ಶಕೀಲ್ ಬಾಗಮಾರೆ ರವರು ಪದಗ್ರಹಣ ಮಾಡಿದರು.ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಲೋಣಿ ರವರು ಕಾಂಗ್ರೆಸ್ ಧ್ವಜ ನೀಡಿದರು.ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯರಾದ ಅಬ್ದುಲ್ ಹಮೀದ ಮುಶ್ರೀಫ ಮಾತನಾಡಿ, ಕಾಂಗ್ರೆಸ್ ಪಕ್ಷ ಜನಪರ ಚಿಂತನೆಯ ಪಕ್ಷವಾಗಿದ್ದು. ಪಕ್ಷ ಸಂಘಟನೆ ಒಂದು ಸರಳ ಕೆಲಸವಲ್ಲ ಅದು ಒಂದು ಜವಾಬ್ದಾರಿಯ ಕೆಲಸ. ಈ ಜವಾಬ್ದಾರಿಯನ್ನು ನೂತನ ಅಧ್ಯಕ್ಷರು ಯುವಕರಾಗಿದ್ದು ಸಮರ್ಥವಾಗಿ ನಿಭಾಯಿಸುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿ ಶುಭ ಕೋರಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಲೋಣಿ ರವರು ಮಾತನಾಡಿ, ಶಕೀಲ ಬಾಗಮಾರೆವರು ಯುವಕರಾಗಿದ್ದು, ಪತ್ರಕರ್ತರಾಗಿದ್ದು ವಿಶೇಷವಾಗಿದೆ. ಇವರ ಮೇಲೆ ಕಾಂಗ್ರೆಸ್ ಪಕ್ಷ ಹೆಚ್ಚಿನ ಜವಾಬ್ದಾರಿಯನ್ನು ನೀಡಿ ಪಕ್ಷ ಸಂಘಟಣೆ ಮಾಡಲು ಅವಕಾಶ ನೀಡಿದೆ. ಇದನ್ನು ಜಿಲ್ಲೆಯ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಎಲ್ಲ ಕಾಂಗ್ರೆಸ್ ನಾಯಕರ ವಿಶ್ವಾಸವನ್ನು…

Read More